Breaking News

Yearly Archives: 2021

ಅರಬ್ಬಿ ಸಮುದ್ರದಲ್ಲಿ ದುರಂತಕ್ಕೀಡಾಗಿದ್ದ ಬೋಟ್ 9 ಜನರ ರಕ್ಷಣೆ

ಮಂಗಳೂರು: ತೌಕ್ತೆ ಚಂಡಮಾರುತದ ಅಬ್ಬರಕ್ಕೆ ಸಿಲುಕಿ ಅರಬ್ಬಿ ಸಮುದ್ರದಲ್ಲಿ ಅಲೆಗಳ ಹೊಡೆತಕ್ಕೆ ಸಿಲುಕಿ ಎನ್ ಎಂಪಿಟಿ ಟಗ್ ಬೋಟ್ ದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಬೋಟ್ ನಲ್ಲಿದ 9 ಜನರನ್ನು ರಕ್ಷಣೆ ಮಾಡಲಾಗಿದೆ. ಚಂಡಮಾರುತದಿಂದಾಗಿ ಅಲೆಗಳ ಅಬ್ಬರಕ್ಕೆ ಸಿಲುಕಿ ಟಗ್ ಬೋಟ್ ಶನಿವಾರ ಅರಬ್ಬಿ ಸಮುದ್ರದಲ್ಲಿ ಮಗುಚಿಬಿದ್ದಿತ್ತು. ಕಾಪುವಿನ ದೀಪಸ್ತಂಭದಿಂದ 13 ನಾಟಿಕಲ್ ಮೈಲಿ ದೂರದಲ್ಲಿ ಈ ದುರಂತ ಸಂಭವಿಸಿತ್ತು. ಇಬ್ಬರು ಈಜಿ ದಡ ಸೇರಿದ್ದರೆ ಬೋಟ್ ನಲ್ಲಿದ್ದ 9 ಜನರು …

Read More »

ಬಳ್ಳಾರಿ, ಉತ್ತರ ಕನ್ನಡ, ಹಾಸನ, ಬೆಳಗಾವಿ, ಮೈಸೂರುಜಿಲ್ಲಾಧಿಕಾರಿಗಳ ವಿರುದ್ಧ ಸಿಎಂ ಗರಂ

ಬೆಂಗಳೂರು; ಹಲವು ಜಿಲ್ಲೆಗಳಲ್ಲಿ ಲಾಕ್ ಡೌನ್ ನಿಯಮ ಸರಿಯಾಗಿ ಪಾಲಿಸುತ್ತಿಲ್ಲ, ಸೋಂಕು ನಿಯತ್ರಣಕ್ಕೆ ನಿರೀಕ್ಷೆಯಂತೆ ಕೆಲಸ ಮಾಡುತ್ತಿಲ್ಲ. ಜನರು ಸಾಯುತ್ತಿದ್ದರೂ ಜಿಲ್ಲಾಧಿಕಾರಿಗಳು, ಉಸ್ತುವಾರಿ ಸಚಿವರು ನಿರ್ಲಕ್ಷ್ಯ ಮಾಡುತ್ತಿರುವುದೇಕೆ ಎಂದು ಅಧಿಕಾರಿಗಳ ವಿರುದ್ಧ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಗರಂ ಆದ ಘಟನೆ ನಡೆದಿದೆ. ರಾಜ್ಯದಲ್ಲಿ ಲಾಕ್ ಡೌನ್ ವಿಸ್ತರಣೆ ಹಾಗೂ ಕೊರೊನಾ ಸ್ಥಿತಿಗತಿಗಳ ಬಗ್ಗೆ ಜಿಲ್ಲಾಧಿಕಾರಿಗಳ ಜೊತೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆಸಿದ ಸಿಎಂ, ಸೋಂಕು ನಿಯಂತ್ರಣಕ್ಕೆ ಸರ್ಕಾರ ಜಾರಿಮಾಡಿರುವ ಬಿಗಿ …

Read More »

ಉದ್ಯೋಗ ‘ಖಾತ್ರಿ’ ಕೂಲಿ ಹಣ ಪಡೆಯುವುದೇ ಪಜೀತಿ!

ಶಿವಮೊಗ್ಗ: ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆಯಡಿ ಕೆಲಸ ಮಾಡುತ್ತಿರುವ ಕಾರ್ಮಿಕರ ಪಾಡು ‘ಮಾಡುವುದು ಕೂಲಿ, ಬೇಡುವುದು ಕೂಲಿ’ ಎಂಬಂತಾಗಿದೆ. ಕೊರೊನಾ ಸಂಕಷ್ಟ ಕಾಲದಲ್ಲಿ ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆ ಸಾಕಷ್ಟು ಗ್ರಾಮೀಣ ಕುಟುಂಬಗಳಿಗೆ ಜೀವನಾಧಾರವೂ ಆಗಿದೆ. ಲಾಕ್‌ಡೌನ್‌ನಿಂದಾಗಿ ನಗರದಲ್ಲಿ ಕೆಲಸ ವಿಲ್ಲದೆ ಹಲವು ಜನರು ಉದ್ಯೋಗ ಖಾತ್ರಿ ಕಾಮಗಾರಿಗೆ ಹೋಗುತ್ತಿದ್ದಾರೆ. ಕುಟುಂಬ ನಿರ್ವಹಣೆಗೆ ಸಂಘ-ಸಂಸ್ಥೆಗಳಲ್ಲಿ ಸಾಲ ಪಡೆದು ಕಂತು ರೂಪದಲ್ಲಿ ಪಾವತಿ ಮಾಡುತ್ತಿರುವ ಅದೆಷ್ಟೋ …

Read More »

ಎಲ್ಲದಕ್ಕೂ ಕಾಂಗ್ರೆಸ್ ದೂರುವ ಬಿಜೆಪಿಯವರೇ ಈ 10 ಪ್ರಶ್ನೆಗಳಿಗೆ ಉತ್ತರಿಸಿ: ಈಶ್ವರ ಖಂಡ್ರೆ

ಬೀದರ್: ‘ಕೋತಿ ತಾನು ಮೊಸರನ್ನ ತಿಂದು ಮೇಕೆ ಬಾಯಿಗೆ ಒರೆಸಿದಂತೆ’ ಎಂಬ ಗಾದೆಯಂತೆ, ಕೋವಿಡ್ ನಿರ್ವಹಣೆಯಲ್ಲಿ ಸಂಪೂರ್ಣ ವಿಫಲವಾಗಿ ಸಾವಿರಾರು ಮುಗ್ಧ ಜನರ ಸಾವಿಗೆ ಕಾರಣವಾದ ಬಿಜೆಪಿ ಈಗ ಕಾಂಗ್ರೆಸ್ ಜನರ ತೆರಿಗೆ ಹಣವನ್ನು ವಿವೇಚನೆಯಿಂದ ವೆಚ್ಚ ಮಾಡಿದ್ದರೆ ಕೋವಿಡ್ ನಿಯಂತ್ರಿಸಬಹುದಾಗಿತ್ತು ಎಂದು ಆರೋಪಿಸುತ್ತಿರುವುದು ಅರ್ಥ ಹೀನ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬಿಜೆಪಿ ನೇತೃತ್ವದ ಕೇಂದ್ರ ಹಾಗೂ ರಾಜ್ಯ ಸರ್ಕಾಗಳ ಬೇಜವಾಬ್ದಾರಿತನ, ಹೊಣೆಗೇಡಿ, ತಿಳಿಗೇಡಿತನದ …

Read More »

ಪ್ರಧಾನಿ ಮೋದಿ ಪ್ರಚಾರದ ಆಸೆಗೆ ನಮ್ಮ ಲಸಿಕೆಯನ್ನು ವಿದೇಶಕ್ಕೆ ದಾನ ಮಾಡಿದ್ದಾರೆ: ದಿನೇಶ್ ಗುಂಡೂರಾವ್

ಬೆಂಗಳೂರು : ಪ್ರಧಾನಿ ನರೇಂದ್ರ ಮೋದಿ ಪ್ರಚಾರದ ಆಸೆಗೆ ನಮ್ಮ ಲಸಿಕೆಯನ್ನು ವಿದೇಶಕ್ಕೆ ದಾನ ಮಾಡಿದ್ದಾರೆ ಎಂದು ಕೆಪಿಸಿಸಿ ಮಾಜಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಟ್ವೀಟ್‌ ಮೂಲಕ ಅಕ್ರೋಶ ವ್ಯಕ್ತಪಡಿಸಿದ್ದಾರೆ. ವಿದೇಶಗಳಲ್ಲೂ ಕೊರೊನಾ ಲಸಿಕೆ ಸಿದ್ಧವಾಯಿತು. ಆದರೆ, ಆ ದೇಶಗಳು ಲಸಿಕೆಯನ್ನು ತಮ್ಮಲ್ಲೇ ಉಳಿಸಿಕೊಂಡವು. ಆದರೆ, ಈ ದೇಶದ ಪ್ರಧಾನಿಯವರು ಮಾಡಿದ್ದೇನು?. ಅತ್ತೆ ಒಡವೆಯನ್ನು ಅಳಿಯ ದಾನ ಕೊಟ್ಟಂತೆ ಪ್ರಚಾರಕ್ಕಾಗಿ ಲಸಿಕೆಯನ್ನು ವಿದೇಶಕ್ಕೆ ಕೊಟ್ಟರು. ಈಗ ದೇಶದ ಜನ ಲಸಿಕೆಗಾಗಿ …

Read More »

‘ಜನರ ಜೀವ ಉಳಿಸುವುದು ಮುಖ್ಯ, ನಾವೂ ಸರಕಾರದ ಜತೆ ಕೈಜೋಡಿಸುತ್ತೇವೆ’: ಡಿ.ಕೆ ಶಿವಕುಮಾರ್

ಬೆಂಗಳೂರು: ‘ರಾಜ್ಯದ ಜನರಿಗೆ ಉಚಿತವಾಗಿ ಲಸಿಕೆ ನೀಡಲು ಕಾಂಗ್ರೆಸ್ ರೂಪಿಸಿರುವ ₹ 100 ಕೋಟಿ ಯೋಜನೆಗೆ ಸರ್ಕಾರ ಅನುಮತಿ ನೀಡಲಿ. ನಾವೂ ಸರ್ಕಾರದ ಜತೆ ಕೈಜೋಡಿಸುತ್ತೇವೆ’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಸೋಮವಾರ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ‘ಜನರ ಜೀವ ಉಳಿಸುವುದು ಮುಖ್ಯ. ಅದೇ ನಮ್ಮ ಮೊದಲ ಆದ್ಯತೆ. ಅಭಿವೃದ್ಧಿ ಕಾರ್ಯಗಳನ್ನು ನಂತರ ಮಾಡಿಕೊಳ್ಳೋಣ. ಈ ಕಾರಣಕ್ಕೆ ಕಾಂಗ್ರೆಸ್ ನಾಯಕರೆಲ್ಲರೂ ಸೇರಿ ಶಾಸಕರ …

Read More »

ಕೊರೊನಾ ಹೋರಾಟಕ್ಕೆ ಸೂಪರ್ ಸ್ಟಾರ್ ರಜನಿ ನೆರವು; ₹50 ಲಕ್ಷ ದೇಣಿಗೆ

ಚೆನ್ನೈ: ನಟ ರಜನಿಕಾಂತ್ ಸೋಮವಾರ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರನ್ನು ಭೇಟಿಯಾಗಿ, ಕೊರೊನಾವೈರಸ್ ವಿರುದ್ಧದ ಹೋರಾಟಕ್ಕಾಗಿ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ₹50 ಲಕ್ಷ ದೇಣಿಗೆಯನ್ನು ನೀಡಿದ್ದಾರೆ. ಇದೇ ಸಂದರ್ಭದಲ್ಲಿ ಕೋವಿಡ್ ಸೋಂಕು ಹರಡುವುದನ್ನು ತಡೆಗಟ್ಟುವ ನಿಟ್ಟಿನಲ್ಲಿ ತಮಿಳುನಾಡು ಸರ್ಕಾರವು ಹೊರಡಿಸಿರುವ ಮಾರ್ಗಸೂಚಿಗಳನ್ನು ಜನರು ಪಾಲಿಸಬೇಕೆಂದು ಮನವಿ ಮಾಡಿದ್ದಾರೆ. ಇತ್ತೀಚೆಗಷ್ಟೇ ರಜನಿ ಕೊರೊನಾ ಲಸಿಕೆಯ 2ನೇ ಡೋಸ್‌ ಹಾಕಿಸಿಕೊಂಡಿದ್ದರು. ಕೊರೊನಾ ನಿರ್ಮೂಲನೆಗಾಗಿ ನಾನು ತಮಿಳುನಾಡು ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ₹50 …

Read More »

ಕೊವಿಶೀಲ್ಡ್ ವ್ಯಾಕ್ಸಿನ್ ಸಾಗಾಟದ ಟಾಟಾ ಸುಮೋಗೆ ಲಾರಿ ಡಿಕ್ಕಿ

ಉಪ್ಪಿನಂಗಡಿ, ಮೇ 17 : ಕೊರೊನಾ ನಿಯಂತ್ರಿತ ಕೋವಿಶೀಲ್ಡ್ ವ್ಯಾಕ್ಸಿನ್ ಸಾಗಾಟದ ಟಾಟಾ ಸುಮೋ ವಾಹನಕ್ಕೆ ವಿರುದ್ಧ ದಿಕ್ಕಿನಿಂದ ಬರುತ್ತಿದ್ದ ಲಾರಿಯೊಂದು ಡಿಕ್ಕಿ ಹೊಡೆದ ಘಟನೆ ಪೆರಿಯ ಶಾಂತಿ ಬಳಿ ನಡೆದಿದೆ. ಸೋಮವಾರ ನೆಲ್ಯಾಡಿ ಸಮೀಪದ ಪೆರಿಯಶಾಂತಿಯ ಧರ್ಮಸ್ಥಳ ತಿರುವಿನಲ್ಲಿ ಕೊರೊನಾ ವೈರಸ್ ತಡೆಗೆ ಕೋವಿಶೀಲ್ಡ್ ವ್ಯಾಕ್ಸಿನ್ ಸಾಗಿಸುತ್ತಿದ್ದ ಸರ್ಕಾರದ ಟಾಟಾ ಸುಮೋ ಕಾರಿಗೆ ವಿರುದ್ಧ ದಿಕ್ಕಿನಿಂದ ಬಂದ ಲಾರಿಯೊಂದು ಡಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆದ ರಭಸಕ್ಕೆ ಟಾಟಾ ಸುಮೋ …

Read More »

ಚಲಿಸುತ್ತಿದ್ದ ಬೈಕ್ ಮೇಲೆ ಉರುಳಿ ಬಿದ್ದ ಮರ : ಓರ್ವ ಸವಾರನಿಗೆ ಗಂಭೀರ ಗಾಯ

ಶಿವಮೊಗ್ಗ : ಚಲಿಸುತ್ತಿದ್ದ ಬೈಕ್ ಗಳ‌ ಮೇಲೆ ಮರ ಉರುಳಿ ಬಿದ್ದು, ಓರ್ವ ಸವಾರ ಗಂಭೀರ ಗಾಯಗೊಂಡು, ಮತ್ತೋರ್ವನಿಗೆ ಸಣ್ಣ-ಪುಟ್ಟ ಗಾಯಗಳಾಗಿರುವ ಘಟನೆ ಹೊಸನಗರದ ಕೊಡಚಾದ್ರಿ ಕಾಲೇಜು ಎದುರು ಸೋಮವಾರ ( ಮೇ.17) ನಡೆದಿದೆ. ಭಾರಿ ಗಾಳಿ-ಮಳೆಯಿಂದಾಗಿ ರಸ್ತೆ ಪಕ್ಕದಲ್ಲಿದ್ದ ಬೃಹತ್ ಮರ ರಸ್ತೆಯಲ್ಲಿ ಉರುಳಿ ಬಿದ್ದಿದೆ. ಪರಿಣಾಮ ಮಾವಿನಕೊಪ್ಪ ಬಡಾವಣೆಯ ಸಾಧಿಕ್ ಎಂಬುವರಿಗೆ ಗಂಭೀರ ಗಾಯವಾಗಿದೆ. ಈತ ಬೈಕ್ ನಲ್ಲಿ ತೆರಳುವಾಗ ಮರ ಬಿದ್ದಿದೆ. ಚಿಕಿತ್ಸೆಗಾಗಿ ಈತನನ್ನು ಮಣಿಪಾಲ …

Read More »

ಹಿರಿಯೂರು ರೈತ ಬೆಳೆದಿದ್ದ 60 ಚೀಲ ಈರುಳ್ಳಿ ಖರೀದಿಸಿದ ನಟ ಉಪೇಂದ್ರ

ಹಿರಿಯೂರು: ತಾಲ್ಲೂಕಿನ ಪಟ್ರೇಹಳ್ಳಿ ಗ್ರಾಮದ ಮಹೇಶ್ ಅವರು ಬೆಳೆದಿದ್ದ 60 ಚೀಲ ಈರುಳ್ಳಿಯನ್ನು ನಟ ಉಪೇಂದ್ರ ಖರೀದಿಸಿದ್ದಾರೆ. ಲಾಕ್ ಡೌನ್ ಬೆಳೆದ ಬೆಳೆ ವ್ಯಾಪಾರವಾಗದೇ ಸಂಕಷ್ಟದಲ್ಲಿರುವ ರೈತರಿಗೆ ನಟ ಉಪೇಂದ್ರ ಅವರು ” ನಮಗೆ ಅವಶ್ಯಕತೆ ಇರುವ ಬೆಳೆಯನ್ನು ನಿಮ್ಮ ಬಳಿ ಸೂಕ್ತ ಬೆಲೆಗೆ ಕೊಂಡು ಬೇಕಿರುವವರಿಗೆ ಹಂಚುತ್ತೇವೆ” ಎಂದು ತನ್ನ ಮೊಬೈಲ್ ನಂಬರ್ ನೊಂದಿಗೆ ಸಾಮಾಜಿಕ ಜಾಲತಾಣದಲ್ಲಿ ಕರೆ ನೀಡಿದ್ದರು. ಇದನ್ನು ಗಮನಿಸಿದ ಮಹೇಶ್ ಉಪೇಂದ್ರ ಅವರಿಗೆ ಕರೆ …

Read More »