ನವದೆಹಲಿ : ಕೋವಿಡ್ ಲಸಿಕೆಯ ನಂತರ ಕೇವಲ ಶೇಕಡಾ ೦.೦೬ ರಷ್ಟು ಜನರಿಗೆ ಮಾತ್ರ ಆಸ್ಪತ್ರೆಗೆ ದಾಖಲಾಗುವ ಅಗತ್ಯವಿದೆ ಮತ್ತು ಲಸಿಕೆ ಪಡೆದವರಲ್ಲಿ ಶೇಕಡಾ ೯೭.೩೮ ರಷ್ಟು ಜನರು ವೈರಸ್ ನಿಂದ ರಕ್ಷಿಸಲ್ಪಡುತ್ತಾರೆ ಎಂದು ಇಂದ್ರಪ್ರಸ್ಥ ಅಪೊಲೊ ಆಸ್ಪತ್ರೆಯ ಅಧ್ಯಯನವು ಬಹಿರಂಗಪಡಿಸಿದೆ. ಕೋವಿಡ್-19 ರ ‘ಬ್ರೇಕ್ ಥ್ರೂ ಇನ್ಫೆಕ್ಷನ್’ (ಲಸಿಕೆಯ ನಂತರ ಸೋಂಕುಗಳು) ಆವರ್ತನವನ್ನು ಮೌಲ್ಯಮಾಪನ ಮಾಡಲು ಆಸ್ಪತ್ರೆಯು ಅಧ್ಯಯನದ ಫಲಿತಾಂಶಗಳನ್ನು ಬಿಡುಗಡೆ ಮಾಡಿದೆ. ಕೋವಿಶೀಲ್ಡ್ ಲಸಿಕೆಯನ್ನು ಹಾಕುವ …
Read More »Yearly Archives: 2021
ಧಾರವಾಡ: ಕೋವಿಡ್-19 ರ ಎರಡನೇ ಅಲೆ : ಪಿ.ಎಚ್.ಸಿ ಗಳಲ್ಲಿ RAT ಟೆಸ್ಟ್ ಆರಂಭಿಸಲು ಕ್ರಮ
ಧಾರವಾಡ: ಕೋವಿಡ್-19 ರ ಎರಡನೇ ಅಲೆ ಆರಂಭವಾದಾಗ ಕೊರೊನಾ ಸೋಂಕು ನಗರ ಪ್ರದೇಶದಲ್ಲಿ ಹೆಚ್ಚಿಗೆ ಇದ್ದು, ಗ್ರಾಮೀಣ ಭಾಗದಲ್ಲಿ ಕಡಿಮೆ ಪ್ರಮಾಣದಲ್ಲಿತ್ತು. ಆದರೆ ಈಗ ದಿನದಿಂದ ದಿನಕ್ಕೆ ಗ್ರಾಮಗಳಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚಳವಾಗುತ್ತಿದೆ. ಆದ್ದರಿಂದ ತಕ್ಷಣವೇ ಕೋವಿಡ್ ಪ್ರಕರಣಗಳನ್ನು ಗುರುತಿಸಲು ಅನುಕೂಲವಾಗಲು ಜಿಲ್ಲೆಯ ಎಲ್ಲ 52 ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ RAT (RAPID ಆಯಂಟಿಜನ್ ಟೆಸ್ಟ್) ಟೆಸ್ಟ್ ಆರಂಭಿಸಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ನಿತೇಶ ಪಾಟೀಲ ತಿಳಿಸಿದ್ದಾರೆ. ಜಿಲ್ಲಾಧಿಕಾರಿಗಳ ಕಚೇರಿ …
Read More »ಬ್ಲಾಕ್ ಫಂಗಸ್’ ಕಾಯಿಲೆಗೆ ಉಚಿತವಾಗಿ ಚಿಕಿತ್ಸೆ ನೀಡಿ: ಸಿದ್ದರಾಮಯ್ಯ ಒತ್ತಾಯ
ಬೆಂಗಳೂರು, ಮೇ 17: ಬ್ಲಾಕ್ ಫಂಗಸ್ ಕಾಯಿಲೆಯನ್ನು ಅಧಿಕೃತ ರೋಗಗಳ ಪಟ್ಟಿಯಲ್ಲಿ ಸೇರಿಸಿ ಸೂಕ್ತ ಅಧಿಸೂಚನೆ ಹೊರಡಿಸಿ ಉಚಿತವಾಗಿ ಚಿಕಿತ್ಸೆ ನೀಡಬೇಕು ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಸರ್ಕಾರವನ್ನು ಒತ್ತಾಯಿಸಿದ್ದಾರೆ. ಬ್ಲಾಕ್ ಫಂಗಸ್, ಕಪ್ಪು ಶಿಲೀಂದ್ರದ ಸಮಸ್ಯೆ ಅಥವಾ ವೈದ್ಯಕೀಯ ಪರಿಭಾಷೆಯಲ್ಲಿ ಮ್ಯೂಕರ್ ಮೈಕೋಸಿಸ್ ಎಂದು ಕರೆಯಲಾಗುವ ಈ ಕಾಯಿಲೆಯು ಕೋವಿಡ್ ರೋಗಕ್ಕೆ ತುತ್ತಾಗಿ ರೋಗ ನಿರೋಧಕ ಶಕ್ತಿ ಕಡಿಮೆಯಾಗಿರುವವರಲ್ಲಿ ಮಾರಣಾಂತಿಕವಾಗಿ ಪರಿಣಮಿಸುತ್ತಿದೆ. ಕೋವಿಡ್ ನಿಂದಾಗಿ ಸಾವು …
Read More »ಖಾಸಗಿ ಆಸ್ಪತ್ರೆ ನೋಡಲ್ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದ ಜಿಲ್ಲಾಧಿಕಾರಿ
ಮೈಸೂರು, : – ಖಾಸಗಿ ಆಸ್ಪತ್ರೆಗಳಲ್ಲಿ ಸರ್ಕಾರಿ ಕೋಟಾದ ಹಾಸಿಗೆಗಳಿಗೆ ಜಿಲ್ಲಾಡಳಿತ ನಿಯೋಜಿಸುವ ಸೋಂಕಿತರಿಗೆ ಹಾಸಿಗೆ ಕೊಡಿಸಲು ಸರಿಯಾಗಿ ಸಮನ್ವಯ ಮಾಡದಿದ್ದರೆ ಖಾಸಗಿ ಆಸ್ಪತ್ರೆಗಳಿಗೆ ನೇಮಿಸಿರುವ ನೋಡಲ್ ಅಧಿಕಾರಿಗಳು ಹಾಗೂ ಸಾಸ್ಟ್ (SAST)ಪ್ರತಿನಿಧಿಗಳ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಎಚ್ಚರಿಕೆ ನೀಡಿದರು.ಶನಿವಾರ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಈ ನೋಡಲ್ ಅಧಿಕಾರಿಗಳ ಸಭೆ ನಡೆಸಿದ ಅವರು ವಾರ್ ರೂಂನಿಂದ ಸೋಂಕಿತರಿಗೆ ನಿಗದಿಪಡಿಸಿದ ಆಸ್ಪತ್ರೆಯಲ್ಲಿ ಅದೇ ವ್ಯಕ್ತಿಗೆ ಹಾಸಿಗೆ ಕೊಡಿಸುವ ವರೆಗೂ …
Read More »ಕರೊನಾ ಮದ್ದು ನಾಳೆ ಬಿಡುಗಡೆ: ಕೆಲವು ಆಸ್ಪತ್ರೆಗಳಿಗೆ ಒಮ್ಮೆಗೆ 10 ಸಾವಿರ ಪ್ಯಾಕೆಟ್ ವಿತರಣೆ
ನವದೆಹಲಿ: ಮದ್ದೇ ಇಲ್ಲದ ರೋಗ ಎನ್ನಲಾಗಿರುವ ಕರೊನಾಗೆ ದೇಶದ ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ ಮದ್ದು ಕಂಡು ಹಿಡಿದಿದ್ದು, ಅದು ನಾಳೆಯೇ ಲೋಕಾರ್ಪಣೆ ಆಗಲಿದೆ. ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ನಾಳೆ ರಾಷ್ಟ್ರ ರಾಜಧಾನಿಯಲ್ಲಿ ಈ ಔಷಧದ ಹತ್ತು ಸಾವಿರ ಪ್ಯಾಕೆಟ್ಗಳನ್ನು ಕೆಲವು ಆಸ್ಪತ್ರೆಗಳಿಗೆ ನೀಡಲಿದ್ದಾರೆ. ಒ2 ಡಿಜೆ ಎಂಬ ಹೆಸರಿನ ಈ ಔಷಧವು ದೇಹವನ್ನು ಸೇರಿಕೊಂಡ ವೈರಾಣುಗಳ ಬಲವನ್ನು ಕುಂದಿಸಿ, ಸೋಂಕು ಇತರ ಭಾಗಗಳಿಗೆ ಹರಡದಂತೆ …
Read More »ಅರೆಸ್ಟ್ ಮಿ ಟೂ” : ಕೇಂದ್ರ ಸರ್ಕಾರಕ್ಕೆ ನನ್ನನ್ನೂ ಬಂಧಿಸಿ ಎಂದು ಕೇಳಿಕೊಂಡ ಗಾಂಧಿ
ನವ ದೆಹಲಿ : ಕೋವಿಡ್ ಪರಿಸ್ಥಿತಿಯನ್ನು ಕೇಂದ್ರ ಸರ್ಕಾರ ಸರಿಯಾಗಿ ನೀಭಾಯಿಸಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಸರ್ಕಾರವನ್ನು ಟೀಕಿಸಿ ಹಾಕಿದ್ದ ಪೋಸ್ಟರ್ ಗಳಿಗೆ ಸಂಬಂಧಿಸಿದಂತೆ 17 ಮಂದಿಯನ್ನು ರಾಷ್ಟ್ರ ರಾಜಧಾನಿ ಪೊಲೀಸರು ಬಂಧಿಸಿದ್ದು ದೊಡ್ಡ ಮಟ್ಟದಲ್ಲಿ ಚರ್ಚೆಯಾಗುತ್ತಿರುವ ಹಿನ್ನೆಲೆಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕೂಡ ಆ ವಿರೋಧದ ಧ್ವನಿಗೆ ತಮ್ಮ ಧ್ವನಿ ಸೇರಿಸಿದ್ದಾರೆ. ಈ ಕುರಿತಾಗಿ ತಮ್ಮ ಅಧಿಕೃತ ಟ್ವೀಟರ್ ಖಾತೆಯಲ್ಲಿ ಬರೆದುಕೊಂಡಿರುವ ಗಾಂಧಿ …
Read More »‘ನನ್ನನ್ನೂ ಬಂಧಿಸಿ’: ದೆಹಲಿ ಮುಖಂಡರ ಜೊತೆಗೆ ಧ್ವನಿಗೂಡಿಸಿದ ರಾಜ್ಯ ಕಾಂಗ್ರೆಸ್ ನಾಯಕರು
ಬೆಂಗಳೂರು: ಕೋವಿಡ್ ಲಸಿಕೆ ರಫ್ತು ಕ್ರಮವನ್ನು ಪ್ರಶ್ನಿಸಿ ಕೇಂದ್ರ ಸರ್ಕಾರದ ವಿರುದ್ಧ ಧ್ವನಿ ಎತ್ತಿದ್ದ ದೆಹಲಿಯ ಕಾಂಗ್ರೆಸ್ ಮುಖಂಡರ ಜೊತೆಗೆ ಇದೀಗ ರಾಜ್ಯ ಕಾಂಗ್ರೆಸ್ ನಾಯಕರೂ ಕೂಡ ಧ್ವನಿಗೂಡಿಸಿದ್ದಾರೆ. ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ವಿರುದ್ಧ ಭಿತ್ತಿಪತ್ರ ಹಾಕಿದ್ದಕ್ಕಾಗಿ ಕನಿಷ್ಠ 25 ಮಂದಿಯನ್ನು ದೆಹಲಿ ಪೊಲೀಸರು ಬಂಧಿಸಲಾಗಿದೆ. ಇದನ್ನು ಪ್ರಶ್ನಿಸಿ ಕಾಂಗ್ರೆಸ್ ಮುಖಂಡರು ಕೇಂದ್ರದ ಬಿಜೆಪಿ ನಾಯಕರ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಧ್ವನಿ ಎತ್ತಿದ್ದಾರೆ. ಇದರಂತೆ ಕಾಂಗ್ರೆಸ್ …
Read More »ನವದೆಹಲಿ: ಕೋವಿಡ್ ಲಸಿಕೆಯ ಅಭಾವಕ್ಕೆ ಸಂಬಂಧಿಸಿದಂತೆ ಪ್ರಧಾನಿ ಮೋದಿ ಅವರನ್ನು ಟೀಕಿಸಿ ದೆಹಲಿಯಲ್ಲಿ ಭಿತ್ತಿಪತ್ರಗಳನ್ನು ಅಂಟಿಸಿದ್ದು ನಮ್ಮ ಪಕ್ಷದ ಕಾರ್ಯಕರ್ತರು ಎಂದು ಎಎಪಿ ತಿಳಿಸಿದೆ. ದೇಶದಲ್ಲಿ ಲಸಿಕೆ ಅಭಾವಕ್ಕೆ ಸಂಬಂಧಿಸಿದಂತೆ ಪ್ರಧಾನಿ ಮೋದಿಯವರನ್ನು ಟೀಕಿಸಿ ದೆಹಲಿಯ ಹಲವು ಭಾಗಗಳಲ್ಲಿ ಭಿತ್ತಿಪತ್ರಗಳನ್ನು ಅಂಟಿಸಲಾಗಿತ್ತು. ಭಿತ್ತಿಪತ್ರಗಳನ್ನು ಅಂಟಿಸಿರುವ ಆರೋಪದಡಿ ದೆಹಲಿ ಪೊಲೀಸರು 25 ಜನರನ್ನು ಬಂಧಿಸಿದ್ದರು. ದೆಹಲಿ ಪೊಲೀಸರ ಕ್ರಮವನ್ನು ಖಂಡಿಸಿ ಕಾಂಗ್ರೆಸ್ ಆಕ್ರೋಶ ವ್ಯಕ್ತಪಡಿಸಿತ್ತು. ‘ಲಸಿಕೆಗಳನ್ನು ರಫ್ತು ಮಾಡಿದ ಕ್ರಮವನ್ನು ನಾವು ಸಹ ಪ್ರಶ್ನಿಸುತ್ತೇವೆ. ಧೈರ್ಯವಿದ್ದರೆ ನನ್ನನ್ನೂ ಬಂಧಿಸಿ’ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಟ್ವೀಟ್ ಮೂಲಕ ಸವಾಲು ಹಾಕಿದ್ದರು. ಪ್ರಕರಣದ ಬಗ್ಗೆ ಪ್ರತಿಕ್ರಿಯಿಸಿರುವ ಎಎಪಿ, ‘ಕೋವಿಡ್ ಲಸಿಕೆ ರಫ್ತು ಮಾಡಿದ್ದನ್ನು ಪ್ರಶ್ನಿಸಿ ಪ್ರಧಾನಿ ಮೋದಿ ವಿರುದ್ಧ ಪೊಸ್ಟರ್‌ಗಳನ್ನು ಅಂಟಿಸಿದ್ದು ನಮ್ಮ ಪಕ್ಷದ ಕಾರ್ಯಕರ್ತರು. ನಿಮ್ಮ ವಿರುದ್ಧ ಭಿತ್ತಿಪತ್ರಗಳನ್ನು ಅಂಟಿಸಿದ ಕಾರಣಕ್ಕೆ ಬಡ ಜನರಿಗೆ ಕಿರುಕುಳ ನೀಡಬೇಡಿ’ ಎಂದು ಎಎಪಿ ಹೇಳಿದೆ. ‘ಪೊಲೀಸರ ಕ್ರಮಕ್ಕೆ ಎಎಪಿ ಹೆದರುವುದಿಲ್ಲ. ಈ ರೀತಿಯ ಭಿತ್ತಿಪತ್ರಗಳನ್ನು ರಾಷ್ಟ್ರ ರಾಜಧಾನಿ ಸೇರಿದಂತೆ ದೇಶದಾದ್ಯಂತ ಅಂಟಿಸುತ್ತಿವೆ’ ಎಂದು ಎಎಪಿ ಮುಖಂಡ ದುರ್ಗೇಶ್ ಪಾಠಕ್ ತಿಳಿಸಿದ್ದಾರೆ. ಕೋವಿಡ್ ಲಸಿಕೆ ಅಭಿಯಾನಕ್ಕೆ ಸಂಬಂಧಿಸಿದಂತೆ ಪ್ರಧಾನಿ ಮೋದಿ ಅವರನ್ನು ಟೀಕಿಸಿ ಪೋಸ್ಟರ್‌ಗಳನ್ನು ಅಂಟಿಸಿದ್ದ ಆರೋಪದಡಿ ದೆಹಲಿ ಪೊಲೀಸರು 25 ಮಂದಿಯನ್ನು ಬಂಧಿಸಿದ್ದಾರೆ. ‘ಮೋದಿಜೀ ನಮ್ಮ ಮಕ್ಕಳ ಲಸಿಕೆಯನ್ನು ವಿದೇಶಗಳಿಗೆ ಏಕೆ ಕಳುಹಿಸಿದ್ದೀರಾ?’ ಎಂದು ಬರೆದಿರುವ ಪೋಸ್ಟರ್‌ಗಳನ್ನು ದೆಹಲಿಯ ಹಲವೆಡೆ ಅಂಟಿಸಲಾಗಿತ್ತು. Dailyhunt
ನವದೆಹಲಿ: ಕೋವಿಡ್ ಲಸಿಕೆಯ ಅಭಾವಕ್ಕೆ ಸಂಬಂಧಿಸಿದಂತೆ ಪ್ರಧಾನಿ ಮೋದಿ ಅವರನ್ನು ಟೀಕಿಸಿ ದೆಹಲಿಯಲ್ಲಿ ಭಿತ್ತಿಪತ್ರಗಳನ್ನು ಅಂಟಿಸಿದ್ದು ನಮ್ಮ ಪಕ್ಷದ ಕಾರ್ಯಕರ್ತರು ಎಂದು ಎಎಪಿ ತಿಳಿಸಿದೆ. ದೇಶದಲ್ಲಿ ಲಸಿಕೆ ಅಭಾವಕ್ಕೆ ಸಂಬಂಧಿಸಿದಂತೆ ಪ್ರಧಾನಿ ಮೋದಿಯವರನ್ನು ಟೀಕಿಸಿ ದೆಹಲಿಯ ಹಲವು ಭಾಗಗಳಲ್ಲಿ ಭಿತ್ತಿಪತ್ರಗಳನ್ನು ಅಂಟಿಸಲಾಗಿತ್ತು. ಭಿತ್ತಿಪತ್ರಗಳನ್ನು ಅಂಟಿಸಿರುವ ಆರೋಪದಡಿ ದೆಹಲಿ ಪೊಲೀಸರು 25 ಜನರನ್ನು ಬಂಧಿಸಿದ್ದರು. ದೆಹಲಿ ಪೊಲೀಸರ ಕ್ರಮವನ್ನು ಖಂಡಿಸಿ ಕಾಂಗ್ರೆಸ್ ಆಕ್ರೋಶ ವ್ಯಕ್ತಪಡಿಸಿತ್ತು. ‘ಲಸಿಕೆಗಳನ್ನು ರಫ್ತು ಮಾಡಿದ ಕ್ರಮವನ್ನು ನಾವು …
Read More »ಬ್ಲ್ಯಾಕ್ ಫಂಗಸ್‍ನಿಂದ 30 ವರ್ಷದ ಯುವಕ ಜೀವನ್ಮರಣ ಹೋರಾಟ
ಬೆಳಗಾವಿ: ಗಡಿಜಿಲ್ಲೆ ಬೆಳಗಾವಿಯಲ್ಲಿ ಬ್ಲ್ಯಾಕ್ ಫಂಗಸ್ ಭೀತಿ ಎದುರಾಗಿದೆ. ಬ್ಲ್ಯಾಕ್ ಫಂಗಸ್‍ನಿಂದ 30 ವರ್ಷದ ಯುವಕನೊಬ್ಬ ಜೀವನ್ಮರಣ ಮಧ್ಯೆ ಹೋರಾಟ ನಡೆಸುತ್ತಿದ್ದಾರೆ. ಬೆಳಗಾವಿ ಜಿಲ್ಲೆ ರಾಯಬಾಗ ತಾಲೂಕಿನ ಖೇಮಲಾಪುರ ಗ್ರಾಮದ ಆನಂದ ಕುಲಾಲಿ ಜೀವನ್ಮರಣ ಮಧ್ಯೆ ಹೋರಾಡುತ್ತಿರುವ ಯುವಕ. ಅಥಣಿ ತಾಲೂಕು ಪಂಚಾಯ್ತಿಯಲ್ಲಿ ಕೆಲಸ ಮಾಡುತ್ತಿದ್ದ ಆನಂದ ಕುಲಾಲಿ ಮೇ 5ರಂದು ಕೋವಿಡ್ ಟೆಸ್ಟ್ ಮಾಡಿಸಿದ್ದು, ಮೇ 7ರಂದು ಕೊರೊನಾ ದೃಢವಾಗಿತ್ತು. ಕೋವಿಡ್ ದೃಢಪಡುತ್ತಿದ್ದಂತೆಯೇ ಉಸಿರಾಟ ಸಮಸ್ಯೆಯಿಂದ ಬಳಲುತ್ತಿದ್ದ ಯುಕನನ್ನು …
Read More »ರಾಜ್ಯದಲ್ಲಿ ಕೊರೊನಾ ಕಂಟ್ರೋಲ್‍ಗೆ ಬಂದಿಲ್ಲ. ಮೇ 24ರ ಬಳಿಕವೂ ಲಾಕ್ ಲಾಕ್..!
ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಕಂಟ್ರೋಲ್‍ಗೆ ಬಂದಿಲ್ಲ. ಕೇವಲ ಟೆಸ್ಟಿಂಗ್ ಕಡಿಮೆ ಮಾಡಿರೋ ಕಾರಣ ಕಡಿಮೆ ಸಂಖ್ಯೆ ಬರ್ತಿದೆ. ಆದರೆ ಸಕ್ರಿಯ ಕೇಸ್‍ಗಳ ಸಾಲಿನಲ್ಲಿ ಇಡೀ ದೇಶದಲ್ಲಿ ಕರ್ನಾಟಕವೇ ನಂಬರ್ 1. ಕರ್ನಾಟಕದಲ್ಲಿ ಭರ್ತಿ 6 ಲಕ್ಷ ಸಕ್ರಿಯ ಕೇಸ್‍ಗಳಿವೆ. ಪಾಸಿಟಿವಿಟಿ ರೇಟ್ 25ಕ್ಕಿಂತಲೂ ಹೆಚ್ಚಿದೆ. ಈ ನಿಟ್ಟಿನಲ್ಲಿ ಲಾಕ್‍ಡೌನ್‍ಗೆ ಸರ್ಕಾರದ ಸಚಿವರು, ತಜ್ಞರು ಕೂಡ ಒತ್ತಡ ಮುಂದುವರಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಸಿಎಂ ಯಡಿಯೂರಪ್ಪ ಇನ್ನೊಂದು ವಾರ ಅಂದರೆ ಮೇ 24ರ …
Read More »