Breaking News

Yearly Archives: 2021

ಗೃಹಸಚಿವ ಬಸವರಾಜ ಬೊಮ್ಮಾಯಿ ಮನೆ, ಇದೀಗ ಕೊವಿಡ್ ಕೇರ್ ಸೆಂಟರ್ ಆಗಿ ಪರಿವರ್ತನೆ

ಹಾವೇರಿ: ಗೃಹಸಚಿವ ಬಸವರಾಜ ಬೊಮ್ಮಾಯಿ ತಮ್ಮ ಮನೆಯನ್ನೇ ಕೊವಿಡ್ ಕೇರ್ ಸೆಂಟರ್ ಆಗಿ ಪರಿವರ್ತಿಸುವ ಮೂಲಕ ಹಾವೇರಿಯಲ್ಲಿ ಮೂಡುತ್ತಿರುವ ಕೊರೋನ ಸೋಂಕನ ಪ್ರಭಾವವನ್ನು ಕಡಿಮೆಗೊಳಿಸಲು ಮುಂದಾಗಿದ್ದಾರೆ. ಇದೇ ಮೊದಲ ಬಾರಿಗೆ ಸಚಿವರೊಬ್ಬರ ನಿವಾಸವನ್ನು ಕೋವಿಡ್ ಕೇರ್ ಕೇಂದ್ರ ಮಾಡಲಾಗಿದ್ದು, ಹಾವೇರಿ ಜಿಲ್ಲೆಯ ಶಿಗ್ಗಾಂವಿ ಪಟ್ಟಣದಲ್ಲಿರುವ ಬಸವರಾಜ ಬೊಮ್ಮಾಯಿ ನಿವಾಸದ ವರಾಂಡವನ್ನು ಕೊರೊನಾ ರೋಗಿಗಳ ಚಿಕಿತ್ಸೆಗಾಗಿ ಮಾರ್ಪಡಿಸಿ 50 ಬೆಡ್​ಗಳ ವ್ಯವಸ್ಥೆ ಮಾಡಲಾಗಿದೆ. ಆಕ್ಸಿಜನ್ ವ್ಯವಸ್ಥೆ ಕೂಡ ಅಲ್ಲಿ ಮಾಡಲಾಗಿದೆ. ಇದರಿಂದ …

Read More »

ಕೊರೋನಾ ನಿಯಮ ಉಲ್ಲಂಘನೆ; 448 ವಾಹನ ಜಪ್ತಿ, 3.26 ಕೋಟಿ ರೂ. ದಂಡ ಸಂಗ್ರಹ

ಬೆಂಗಳೂರು: ಕೊರೊನಾ ತಡೆಗಟ್ಟುವ ಹಿನ್ನೆಲೆಯಲ್ಲಿ ಲಾಕ್ ಡೌನ್ ಜಾರಿಯಲ್ಲಿದ್ದರೂ ಅನೇಕ ಮಂದಿ ನಿಯಮಗಳನ್ನು ಉಲ್ಲಂಘಿಸಿ ಎಲ್ಲೆಡೆ ಸಂಚರಿಸುತ್ತಿದ್ದಾರೆ. ನಿಯಮ ಮೀರಿ ರಸ್ತೆಗಳಿದಿದ್ದ ವಾಹನಗಳನ್ನು ನಗರ ಪೊಲೀಸರು ಗುರುವಾರ ಜಪ್ತಿ ಮಾಡಿದ್ದು, ಅಂತೆಯೇ 3.26 ಕೋಟಿ ರೂ. ದಂಡ ಸಂಗ್ರಹಣೆ ಮಾಡಿದ್ದಾರೆ. ಕಳೆದ 20 ಗಂಟೆಗಳಲ್ಲಿ ಕಾರ್ಯಾಚರಣೆ ನಡೆಸಿ 448 ವಾಹನಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಅದರಲ್ಲಿ 429 ದ್ವಿಚಕ್ರ ವಾಹನ, 11 ತ್ರಿಚಕ್ರ ವಾಹನ, 8 ನಾಲ್ಕು ಚಕ್ರದ ವಾಹನ ಸೇರಿ …

Read More »

ಬ್ಲ್ಯಾಕ್‌ ಫಂಗಸ್‌ ಹಾವಳಿ ಉಲ್ಬಣ; 52 ಮಂದಿ ಬಲಿ

ಮುಂಬೈ: ಒಂದೆಡೆ ಮಹಾಮಾರಿ ಕೋವಿಡ್‌ ಸಾಂಕ್ರಾಮಿಕ ಅಟ್ಟಹಾಸ ತೀವ್ರವಾಗುತ್ತಿದೆ ಇನ್ನೊಂದೆಡೆ, ಬ್ಲ್ಯಾಕ್‌ ಫಂಗಸ್‌ ಹಾವಳಿ ಉಲ್ಬಣಗೊಳ್ಳುತ್ತಿದೆ. ಮಹಾರಾಷ್ಟ್ರದಲ್ಲಿ ಹೊಸ ರೋಗದ 52 ಮಂದಿ ಬಲಿಯಾಗಿದ್ದಾರೆ. ಹೆಚ್ಚು ಕಾಲ ಆಸ್ಪತ್ರೆಗಳಲ್ಲಿ ಉಳಿಯುವ ಕೋವಿಡ್‌ ಸೋಂಕಿತರು ಹಾಗೂ ಸೋಂಕಿನಿಂದ ಗುಣಮುಖರಾಗಿ ಮಲೀನ ಪರಿಸರದಲ್ಲಿ ವಾಸ ಮಾಡುವ ದುರ್ಬಲ ಕಾಯರಿಗೆ ಫಂಗಸ್‌ ರೋಗ ಬರುವ ಸಾಧ್ಯತೆ ಹೆಚ್ಚಾಗಿರುತ್ತದೆ ಎಂದು ಹೇಳಲಾಗಿದ್ದು, ಮಹಾರಾಷ್ಟ್ರದಲ್ಲಿ ಇಂತಹ ಪ್ರಕರಣಗಳು ಹೆಚ್ಚಾಗುತ್ತಿವೆ. ಅದರೊಂದಿಗೆ ಈ ರೋಗದಿಂದ 52 ಮಂದಿ ಮೃತಪಟ್ಟಿದ್ದಾರೆಂದು …

Read More »

ಲಾಕ್ ಡೌನ್ ಮಧ್ಯಯೇ ಹಸೆಮಣೆ ಏರಿದ ಚಂದನವನದ ಜೋಡಿ

ಬೆಂಗಳೂರು : ಲಾಕ್ ಡೌನ್ ಮಧ್ಯಯೇ ಸಿಂಪಲ್ ಆಗಿ ಹಸೆಮಣೆ ಏರಿದ ಚಂದನವನದ ಜೋಡಿ ಚಂದನ್ ಕುಮಾರ್ ಹಾಗೂ ಕವಿತಾ. ಚಂದನ್ ತಮ್ಮ ಇನ್ಮಾಗ್ರಾಮ್ ನಲ್ಲಿ ಫೋಟೋ ಹಂಚಿಕೊಂಡು ಮನೆ ಮದುವೆ , ಮದುವೆ ಮನೆ . ಗೋರಿಯಸ್ ಆಗಿಲ್ಲ , ಆದರೆ , ಸಂತಸದಿಂದ ತುಂಬಿದೆ ಎಂದು ಬರೆದುಕೊಂಡಿದ್ದಾರೆ . ‘ ಲಕ್ಷ್ಮೀ ಬಾರಮ್ಮ ‘ ಧಾರಾವಾಹಿಯ ಮೂಲಕ ಪರಿಚಿತವಾದ ಈ ಜೋಡಿ ಏ .1 ರಂದು ಎಂಗೇಜೆಂಟ್ …

Read More »

ಹಿರಿಯ ಪತ್ರಕರ್ತ ಮಹಾದೇವ ಪ್ರಕಾಶ್ ಕೊರೊನಾಗೆ ಬಲಿ

ಹಿರಿಯ ಪತ್ರಕರ್ತ ಮಹಾದೇವ ಪ್ರಕಾಶ್ ಕೊರೊನಾಗೆ ಬಲಿ ಬೆಂಗಳೂರು : ಹಿರಿಯ ಪತ್ರಕರ್ತ, ಸಿಎಂ ಮಾಧ್ಯಮ ಸಲಹೆಗಾರರಾಗಿದ್ದ ಮಹಾದೇವ ಪ್ರಕಾಶ್ ಅವರು ಕೊರೊನಾಗೆ ಬಲಿಯಾಗಿದ್ದಾರೆ. ಅವರಿಗೆ 65 ವರ್ಷ ವಯಸ್ಸಾಗಿತ್ತು. 10 ದಿನಗಳ ಹಿಂದೆ ಮಹಾದೇವ ಪ್ರಕಾಶ್ ಅವರಿಗೆ ಕೊರೊನಾ ಸೋಂಕು ದೃಢಪಟ್ಟಿತ್ತು. ಅವರು ನಾರಾಯಣ ಹೃದಯಾಲಯ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಾಗಿದ್ದರು. ಮಹಾದೇವ ಪ್ರಕಾಶ್ ಇಂದು ಸಂಜೆ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. ಈ ಭಾನುವಾರ ಪತ್ರಿಕೆಯ ಸಂಪಾದಕರಾಗಿದ್ದ ಮಹಾದೇವ ಪ್ರಕಾಶ್ …

Read More »

ಕಾಲ್ ಸೆಂಟರ್ ನ ಮೂಲಕ ಆಸ್ಪತ್ರೆಗಳ ರಿಯಾಲಿಟಿ ಚೆಕ್- ಸಚಿವ ಅರವಿಂದ ಲಿಂಬಾವಳಿ

ಬೆಂಗಳೂರು :ಆಸ್ಪತ್ರೆಗಳ ವಾಸ್ತವ ಸ್ಥಿತಿಗತಿಗಳನ್ನು ತಿಳಿಯಲು ಕಾಲ್ ಸೆಂಟರ್ ಗಳ ಮೂಲಕ ಆಸ್ಪತ್ರೆಗಳ ರಿಯಾಲಿಟಿ ಚೆಕ್ ಕೂಡ ಮಾಡಲಾಗುತ್ತದೆ. ಇದರಿಂದ ಆಸ್ಪತ್ರೆಗಳಲ್ಲಿ ಬಿಡುಗಡೆಯಾಗುತ್ತಿರುವ ರೋಗಿಗಳು ಮತ್ತು ದಾಖಲಾಗುತ್ತಿರುವ ರೋಗಿಗಳ ನಿಖರ ಮಾಹಿತಿ, ಬೆಡ್ ಗಳ ಲಭ್ಯತೆ ಬಗ್ಗೆ ವಾಸ್ತವ ವರದಿಗಳು ದೊರಕಲು ಸಾಧ್ಯವಾಗುತ್ತದೆ ಎಂದು ಅರಣ್ಯ, ಕನ್ನಡ ಮತ್ತು ಸಂಸ್ಕೃತಿ ಹಾಗೂ ವಾರ್ ರೂಂ, ಕಾಲ್ ಸೆಂಟರ್ ನಿರ್ವಹಣೆ ಮತ್ತು ಸೋಂಕಿತರಿಗೆ ವೈದ್ಯಕೀಯ ಸಲಹೆ ವ್ಯವಸ್ಥೆಯ ಮೇಲ್ವಿಚಾರಣೆಯ ನೋಡಲ್ ಸಚಿವ …

Read More »

ಗೋವಾ ವೈದ್ಯಕೀಯ ಕಾಲೇಜಿನಲ್ಲಿ ಆಕ್ಸಿಜನ್ ಪೂರೈಕೆಯಲ್ಲಿ ವ್ಯತ್ಯಯ: 13 ರೋಗಿಗಳು ಸಾವು

ಪಣಜಿ: ಕಳೆದ ಕೆಲವು ದಿನಗಳಿಂದ ಗೋವಾದ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ (ಜಿಎಂಸಿಎಚ್) ಆಕ್ಸಿಜನ್ ಪೂರೈಕೆಯಲ್ಲಿ ವ್ಯತ್ಯಯವುಂಟಾಗಿ ಸಾವಿಗೀಡಾದವರ ಸಂಖ್ಯೆ 75ಕ್ಕೇರಿದೆ. ಸತತ 6 ರಾತ್ರಿ ಇಲ್ಲಿ ಆಕ್ಸಿಜನ್ ಪೂರೈಕೆಯಲ್ಲಿ ಏರಿಳಿತ ಕಂಡು ಬಂದಿದ್ದು, ಕಳೆದ ರಾತ್ರಿ 13 ರೋಗಿಗಳು ಮೃತಪಟ್ಟಿದ್ದಾರೆ. ರೋಗಿಗಳ ಸಂಬಂಧಿಕರು ಸೋಷಿಯಲ್ ಮೀಡಿಯಾದಲ್ಲಿ ಸಹಾಯ ಸಂದೇಶಗಳನ್ನು ಕಳುಹಿಸಲು ಪ್ರಾರಂಭಿಸಿದ್ದು, ಆರೋಗ್ಯ ಕಾರ್ಯದರ್ಶಿ ರವಿ ಧವನ್ ಸೇರಿದಂತೆ ಆರೋಗ್ಯ ಇಲಾಖೆಯ ಅಧಿಕಾರಿಗಳು ಸರಬರಾಜನ್ನು ಪುನಃಸ್ಥಾಪಿಸಲು ಆಸ್ಪತ್ರೆಗೆ ಧಾವಿಸಿದ್ದಾರೆ. …

Read More »

ಕೋವಿಡ್ ಉಲ್ಬಣಗೊಳ್ಳಲು ಕೇಂದ್ರ ಸರ್ಕಾರವೇ ಕಾರಣ: ಕೋಳಿವಾಡ

ರಾಣಿಬೆನ್ನೂರು: ಕೇಂದ್ರ ಸರ್ಕಾರದ ತಪ್ಪು ನಿರ್ಧಾರಗಳು ದೇಶದಲ್ಲಿ ಕೊರೋನಾ ಎರಡನೇ ಅಲೆ ವ್ಯಾಪಕವಾಗಿ ಹರಡಲು ಕಾರಣವಾಗಿದೆ ಎಂದು ಮಾಜಿ ಸ್ಪೀಕರ್‌ ಕೆ.ಬಿ. ಕೋಳಿವಾಡ ಆರೋಪಿಸಿದ್ದಾರೆ. ಸ್ಥಳೀಯ ಸುದ್ದಿಗಾರರ ಜತೆ ಗುರುವಾರ ಮಾತನಾಡಿದ ಅವರು, 2021ರ ಮಾರ್ಚ್‌ನಲ್ಲಿಯೇ ತಜ್ಞರು ಎರಡನೇ ಅಲೆಯ ಭೀಕರತೆ ಕುರಿತು ಸೂಚನೆ ನೀಡಿದ್ದರೂ ಕೇಂದ್ರ ಸರ್ಕಾರ ಅದನ್ನು ಕಡೆಗಣಿಸಿ ವಿದೇಶಗಳಿಗೆ ಲಸಿಕೆ ರಫ್ತು ಮಾಡಿತು. ಕುಂಭಮೇಳದಲ್ಲಿ ಲಕ್ಷಾಂತರ ಜನರು ಸೇರಲು ಅವಕಾಶ ಮಾಡಿಕೊಟ್ಟಿದ್ದು ದೊಡ್ಡ ತಪ್ಪು. ರಾಜ್ಯದಲ್ಲಿ …

Read More »

ಮೇ 16 ರಿಂದ 31 ವೇಳೆಗೆ ರಾಜ್ಯಗಳಿಗೆ ಕೇಂದ್ರದಿಂದ 192 ಲಕ್ಷ ಡೋಸ್ ಕೋವಿಡ್ ಲಸಿಕೆ ಪೂರೈಕೆ: ಆರೋಗ್ಯ ಇಲಾಖೆ

ನವದೆಹಲಿ: ಮೇ 16 ರಿಂದ 31 ವೇಳೆಗೆ ರಾಜ್ಯಗಳು, ಕೇಂದ್ರಾಡಳಿತ ಪ್ರದೇಶಗಳಿಗೆ ಕೇಂದ್ರ ಸರ್ಕಾರದಿಂದ 192 ಲಕ್ಷ ಡೋಸ್ ಕೋವಿಡ್ ಲಸಿಕೆ ರವಾನೆಯಾಗಲಿದೆ ಎಂದು ಕೇಂದ್ರ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ. ಈ ಕುರಿತಂತೆ ಮಾಹಿತಿ ನೀಡಿರುವ ಕೇಂದ್ರ ಆರೋಗ್ಯ ಇಲಾಖೆ ರಾಜ್ಯಗಳು, ಕೇಂದ್ರಾಡಳಿತ ಪ್ರದೇಶಗಳಿಗೆ ಮೇ 16 ರಿಂದ ಮೇ 31 ರವರೆಗೆ ಒಟ್ಟು 161.99 ಲಕ್ಷ ಡೋಸ್ ಕೋವಿಶೀಲ್ಡ್ ಮತ್ತು ಕೊವಾಕ್ಸಿನ್ ಕೋವಿಡ್-19 ಲಸಿಕೆಗಳನ್ನು ಉಚಿತವಾಗಿ ಸರಬರಾಜು …

Read More »

ಜುಲೈ ತಿಂಗಳಲ್ಲಿ ಎಲ್ಲರಿಗೂ ಲಸಿಕೆ ಲಭ್ಯ: ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ

ಹುಬ್ಬಳ್ಳಿ: ದೇಶದ ವಿವಿಧ ರಾಜ್ಯಗಳಲ್ಲಿ ಉಂಟಾಗಿರುವ ಕೊರೊನಾ ಲಸಿಕೆ ಅಭಾವದ ಕುರಿತಂತೆ ಮಾತನಾಡಿದ ಕೇಂದ್ರ ಸಚಿವ ಪ್ರಹ್ಲಾದ್​ ಜೋಷಿ ಇದಕ್ಕೆ ವಿರೋಧಿಗಳೇ ಕಾರಣ ಎಂದು ಆರೋಪಿಸಿದ್ದಾರೆ. ಹುಬ್ಬಳ್ಳಿಯಲ್ಲಿ ಮಾತನಾಡಿದ ಅವ್ರು ಭಾರತದಲ್ಲಿ ಲಸಿಕೆಗಳನ್ನ ತಯಾರು ಮಾಡಲಾಗುತ್ತಿತ್ತು. ಆದರೆ ಎಷ್ಟೋ ಮಂದಿ ಲಸಿಕೆಯ ಬಗ್ಗೆ ಇಲ್ಲಸಲ್ಲದ ಮಾತುಗಳನ್ನಾಡಿದರು. ನಕಾರಾತ್ಮಕ ಅಭಿಪ್ರಾಯ ಹೆಚ್ಚಾಗಿ ಬಂದಿದ್ದರಿಂದ ಕಂಪನಿಗಳು ಲಸಿಕೆ ಉತ್ಪಾದನೆಯನ್ನ ಕಡಿಮೆ ಮಾಡಿದವು. ಲಸಿಕೆ ಕುರಿತಾದ ತಪ್ಪು ತಿಳುವಳಿಕೆಯಿಂದಾಗಿ ಉತ್ಪಾದನೆ ಕುಂಠಿತವಾಯ್ತು ಎಂದು ಹೇಳಿದರು. …

Read More »