ಬೆಳಗಾವಿ: ವಿಧಾನಪರಿಷತ್ ದ್ವಿಸದಸ್ಯ ಸ್ಥಾನಗಳಿಗೆ ಡಿ.10ರಂದು ನಡೆಯಲಿರುವ ಚುನಾವಣೆಯು, ಇಲ್ಲಿನ ಪ್ರಭಾವಿಗಳಾದ ಜಾರಕಿಹೊಳಿ ಸಹೋದರರ ನಡುವಿನ ಸವಾಲ್‌ನಿಂದಾಗಿ ಇಡೀ ರಾಜ್ಯದ ಗಮನಸೆಳೆದಿದೆ ಮತ್ತು ತೀವ್ರ ಕುತೂಹಲವನ್ನೂ ಹುಟ್ಟು ಹಾಕಿದೆ. ಬಿಜೆಪಿಯ ಮಹಾಂತೇಶ ಕವಟಗಿಮಠ ಸತತ 3ನೇ ಬಾರಿಗೆ ಆಯ್ಕೆ ಬಯಸಿದ್ದಾರೆ. ಕಾಂಗ್ರೆಸ್ ಕುಟುಂಬ ರಾಜಕಾರಣಕ್ಕೆ ಮಣೆ ಹಾಕಿದ್ದು, ಶಾಸಕಿ ಲಕ್ಷ್ಮಿ ಹೆಬ್ಬಾಳಕರ ಅವರ ತಮ್ಮ ಚನ್ನರಾಜ ಹಟ್ಟಿಹೊಳಿ ಅವರಿಗೆ ಟಿಕೆಟ್ ಕೊಟ್ಟಿದೆ. ಆಮ್ ಆದ್ಮಿ ಪಕ್ಷದಿಂದ ಶೇಖರ ಹೆಗಡೆ ಸ್ಪರ್ಧಿಸಿದ್ದಾರೆ. …
Read More »Yearly Archives: 2021
ರೋಬೋ ಪಾಪಣ್ಣನ ವರದಿಗೆ ಅಮಾಯಕ BMTC ನೌಕರರು ಸೇವೆಯಿಂದ ವಜಾ!
ಬೆಂಗಳೂರು, ಡಿ. 01: ವೇತನ ಪರಿಷ್ಕರಣೆ ಮಾಡುವಂತೆ ಕೋರಿ ಸಾರಿಗೆ ನೌಕರರು ನಡೆಸಿದ ಮುಷ್ಕರ ನೌಕರರನ್ನೇ ಸಾರಿಗೆ ಇಲಾಖೆ ಬೀದಿ ಪಾಲು ಮಾಡಿದೆ. ಬಿಡಿಗಾಸು ಹೆಚ್ಚಳ ಮಾಡಿಸಿಕೊಳ್ಳಲು ಹೋಗಿ ಕೆಲಸವೇ ಕಳೆದುಕೊಂಡಿದ್ದಾರೆ. ಹತ್ತು ದಿನದಲ್ಲಿ ನಿಮ್ಮ ಬೇಡಿಕೆ ಈಡೇರಿಸುತ್ತೇವೆ ಎಂದ ಸರ್ಕಾರ ಬರೋಬ್ಬರಿ 2500 ಸಾರಿಗೆ ನೌಕರರನ್ನು ಸೇವೆಯಿಂದ ವಜಾ ಮಾಡಿ ಸಿಟ್ಟು ತೀರಿಸಿಕೊಂಡಿದೆ. ವೇತನ ಹೆಚ್ಚಳಕ್ಕಾಗಿ ಹೋರಾಟ ಮಾಡಿದವರು ಎಂಟು ತಿಂಗಳಿನಿಂದ ಕೆಲಸವೇ ಇಲ್ಲದೇ ‘ಮರು ನೇಮಿಸಿಕೊಳ್ಳಿ ಸ್ವಾಮಿ” …
Read More »ಅಲ್ಪಸಂಖ್ಯಾತರ ವಿದ್ಯಾರ್ಥಿ ವೇತನ : ಅರ್ಜಿ ಸ್ವೀಕರಿಸುವ ಅವಧಿ ವಿಸ್ತರಣೆ
ಬೆಂಗಳೂರು: ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯು ಪ್ರಸಕ್ತ ಸಾಲಿನಲ್ಲಿ ಅಲ್ಪಸಂಖ್ಯಾತರ ವಿದ್ಯಾರ್ಥಿಗಳಿಗೆ ವಿದ್ಯಾಸಿರಿ ಯೋಜನೆಗಾಗಿ ಅರ್ಜಿ ಸ್ವೀಕರಿಸುವ ದಿನಾಂಕವನ್ನು ಡಿ. 31 ರವರೆಗೆ ವಿಸ್ತರಿಸಿದೆ. ಈ ಮೊದಲು ಅರ್ಜಿ ಸಲ್ಲಿಸಲು ನ.30 ವರೆಗೆ ಕೊನೆಯ ದಿನಾಂಕವಾಗಿತ್ತು. ವಿದ್ಯಾರ್ಥಿಗಳು ಅರ್ಜಿ ಸಲ್ಲಿಕೆಯ ದಿನಾಂಕವನ್ನು ವಿಸ್ತರಿಸಲು ಮನವಿ ಮಾಡಿಕೊಂಡ ಕಾರಣ ಈ ಯೋಜನೆಯಡಿ ಅರ್ಜಿ ಸಲ್ಲಿಸುವ ಅವಧಿಯನ್ನು ಡಿ.31 ರವರೆಗೆ ವಿಸ್ತರಿಸಲಾಗಿದೆ. ಅಲ್ಪಸಂಖ್ಯಾತರ ಸಮುದಾಯದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಸಿಖ್, ಬೌದ್ಧ, ಪಾರ್ಸಿ ಸಮುದಾಯದ …
Read More »ಅಕ್ರಮವಾಗಿ ಗೋವು ಸಾಗಾಟ: ಆರೋಪಿಗಳ ಬಂಧನ
ಉಡುಪಿ: ಭಜರಂಗದಳದ ಕಾರ್ಯಕರ್ತರ ಮೇಲೆ ವಾಹನ ನುಗ್ಗಿಸಿ, ಅಕ್ರಮವಾಗಿ ಗೋವುಗಳನ್ನು ಸಾಗಿಸುತ್ತಿದ್ದ ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಸಚಿವ ಕೆ.ಎಸ್.ಈಶ್ವರಪ್ಪ ತಿಳಿಸಿದರು. ತೀರ್ಥಹಳ್ಳಿ ತಾಲ್ಲೂಕಿನ ಬೆಜ್ಜವಳ್ಳಿ ಬಳಿ ಜಾನುವಾರು ಸಾಗಾಟ ತಡೆಯಲು ಯತ್ನಿಸಿ ಮಾರಣಾಂತಿಕ ದಾಳಿಗೊಳಗಾಗಿ ಮಣಿಪಾಲದ ಕೆಎಂಸಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸಹೋದರರಾದ ಚರಣ್ ಹಾಗೂ ಕಿರಣ್ ಅವರ ಯೋಗಕ್ಷೇಮ ವಿಚಾರಿಸಿ ಮಾತನಾಡಿದರು
Read More »ಹುಬ್ಬಳ್ಳಿಯಲ್ಲಿ ವಿದ್ಯಾರ್ಥಿಗಳಿಗೆ ಕೋವಿಡ್ ದೃಢ : ಶಾಲೆಗಳಿಗೆ ರಜೆ
ಹುಬ್ಬಳ್ಳಿ: ಇಲ್ಲಿನ ಆದರ್ಶ ನಗರದ ಜಿ.ವಿ. ಜೋಶಿ ರೋಟರಿ ಶಾಲೆಯ ಒಬ್ಬ ವಿದ್ಯಾರ್ಥಿಗೆ ಬುಧವಾರ ಕೋವಿಡ್ ದೃಢಪಟ್ಟಿದ್ದು, ಡಿ. 5ರ ವರೆಗೆ ಶಾಲೆಗೆ ರಜೆ ಘೋಷಿಸಲಾಗಿದೆ. ಇತ್ತೀಚೆಗೆ ಎಸ್‌ಡಿಎಂ ಕಾಲೇಜಿನ ಹಲವು ವಿದ್ಯಾರ್ಥಿಗಳಿಗೆ ಕೋವಿಡ್ ಆಗಿತ್ತು. ಜೋಶಿ ಶಾಲೆಯ ವಿದ್ಯಾರ್ಥಿ ಅಲ್ಲಿನವರೊಂದಿಗೆ ಪ್ರಾಥಮಿಕ ಸಂಪರ್ಕ ಹೊಂದಿದ್ದರು. ‘ಜೋಶಿ ಶಾಲೆಯ ಒಬ್ಬ ವಿದ್ಯಾರ್ಥಿಗೆ ಕೋವಿಡ್ ದೃಢವಾಗಿದ್ದು, ಕೊಠಡಿಗಳನ್ನು ಸ್ಯಾನಿಟೈಸ್ ಮಾಡಲಾಗಿದೆ. ಶಿಕ್ಷಕರು ಹಾಗೂ ಸಿಬ್ಬಂದಿ ಕೋವಿಡ್ ಲಸಿಕೆಯ ಎರಡೂ ಡೋಸ್ ಪಡೆದ …
Read More »ನಾಲ್ವರ ಆತ್ಮಹತ್ಯೆ ಪ್ರಕರಣದ: ಪತ್ರಕರ್ತ ಹಲ್ಲೇಗೆರೆ ಶಂಕರ್ ಹಾಗೂ ಆತನ ಇಬ್ಬರು ಅಳಿಯಂದಿರ ವಿರುದ್ಧ ನ್ಯಾಯಾಲಯಕ್ಕೆ ದೋಷಾರೋಪ
ಬೆಂಗಳೂರು: ಒಂದೇ ಕುಟುಂಬದ ನಾಲ್ವರ ಆತ್ಮಹತ್ಯೆ ಪ್ರಕರಣದ ತನಿಖೆ ಪೂರ್ಣಗೊಳಿಸಿರುವ ಬ್ಯಾಡರಹಳ್ಳಿ ಪೊಲೀಸರು, ಪತ್ರಕರ್ತ ಹಲ್ಲೇಗೆರೆ ಶಂಕರ್ ಹಾಗೂ ಆತನ ಇಬ್ಬರು ಅಳಿಯಂದಿರ ವಿರುದ್ಧ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದಾರೆ. ತಿಗಳರಪಾಳ್ಯದಲ್ಲಿ ವಾಸವಿದ್ದ ಭಾರತಿ (51), ಅವರ ಮಕ್ಕಳಾದ ಸಿಂಚನಾ (34), ಸಿಂಧುರಾಣಿ (33) ಹಾಗೂ ಮಧುಸಾಗರ್ (25) ಆತ್ಮಹತ್ಯೆ ಮಾಡಿಕೊಂಡಿದ್ದರು ಅವರ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪದಡಿ ಭಾರತಿ ಅವರ ಪತಿ ಶಂಕರ್ ಹಾಗೂ ಅಳಿಯಂದಿರನ್ನು ಬಂಧಿಸಲಾಗಿತ್ತು. ಮೂವರು ಸದ್ಯ …
Read More »ಬೆಳಗಾವಿಯಲ್ಲಿ ನಡೆಯಲಿದೆ ಚಳಿಗಾಲ ಅಧಿವೇಶನ
ಬೆಂಗಳೂರು: ಕೊರೊನಾ ಆತಂಕ ಕಡಿಮೆಯಾದ್ರೂ ರೂಪಾಂತರಿಯ ಆತಂಕ ಕಡಿಮೆಯಾಗ್ತಿಲ್ಲ. ಈಗ ಎಲ್ಲೆಲ್ಲೂ ಓಮಿಕ್ರಾನ್ ಭಯ ಶುರುವಾಗಿದೆ. ಇದು ಅಧಿವೇಶನಕ್ಕೂ ತಟ್ಟುತ್ತಾ ಎಂಬ ಅನುಮಾನ ಕಾಡುತ್ತಿದೆ. ಕೊವೀಡ್ ಬಿಗಿ ಕ್ರಮಗಳೊಂದಿಗೆ ಸದನ ನಡೆಸಲು ಸರ್ಕಾರ ನಿರ್ಧಾರ ಮಾಡಿದೆ. ನಿಗಧಿಯಂತೆ 13 ರಿಂದ 26ರವರೆಗೆ ಅಧಿವೇಶನ ನಡೆಸಲು ಸಿದ್ದತೆ ನಡೆಸಲಾಗಿದೆ. ಈ ಹಿನ್ನೆಲೆ ಇಂದು ಸಂಜೆ ಬೆಳಗಾವಿಗೆ ತೆರಳುತ್ತಿರುವ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಕೂಡ ತಿಳಿಸಿದ್ದಾರೆ. ಅಧಿವೇಶನದ ಹಿನ್ನೆಲೆ ಸ್ಪೀಕರ್ ನಾಳೆ …
Read More »ಚಳಿಗಾಲ ಅಧಿವೇಶನಕ್ಕೆ ನಡೆದಿರುವ ಪೂರ್ವ ಸಿದ್ಧತೆ
ಬೆಳಗಾವಿ: ಇದೇ 13ರಿಂದ ಇಲ್ಲಿನ ಸುವರ್ಣ ವಿಧಾನಸೌಧದಲ್ಲಿ ಆರಂಭಗೊಳ್ಳಲಿರುವ ವಿಧಾನಮಂಡಲ ಚಳಿಗಾಲ ಅಧಿವೇಶನಕ್ಕೆ ನಡೆದಿರುವ ಪೂರ್ವ ಸಿದ್ಧತೆಯನ್ನು ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ ಕಾರ್ಯದರ್ಶಿ ಪಿ.ಹೇಮಲತಾ ಬುಧವಾರ ಪರಿಶೀಲಿಸಿದರು. ವಿಧಾನಸಭೆ, ಸಭಾಧ್ಯಕ್ಷರ ಕೊಠಡಿ, ಬ್ಯಾಂಕ್ವೆಟ್ ಸಭಾಂಗಣ, ಶಾಸಕರು ಹಾಗೂ ವಿರೋಧ ಪಕ್ಷದ ಮೊಗಸಾಲೆ, ಸೆಂಟ್ರಲ್ ಹಾಲ್, ಊಟದ ವ್ಯವಸ್ಥೆ, ಭದ್ರತಾ ವ್ಯವಸ್ಥೆಯನ್ನು, ಕಾರ್ಯದರ್ಶಿಗಳ ಕ್ಯುಬಿಕಲ್‌ಗಳನ್ನು ಪರಿಶೀಲಿಸಿದರು. ಅಧಿಕಾರಿಗಳಿಂದ ಮಾಹಿತಿ ಪಡೆದರು.
Read More »ಶಾಸಕರ ನಡುವೆ ಮಾತಿನ ಚಕಮಕಿ ನಡೆದಿದೆ: ಶಾಸಕರ ಗಲಾಟೆ ಕುರಿತು ಶೆಟ್ಟರ್ ಪ್ರತಿಕ್ರಿಯೆ
ವಿಧಾನಪರಿಷತ್ ಚುನಾವಣೆ ಹಿನ್ನೆಲೆಯಲ್ಲಿ ಸಿಎಂ ಹಾಗೂ ಪಕ್ಷದ ನಾಯಕರ ಸಮ್ಮುಖದಲ್ಲಿ ಸಭೆ ನಡೆಸಿ ಚರ್ಚೆ ಮಾಡಿದ್ದೇವೆ. ಎಲ್ಲರೂ ಒಗ್ಗಟ್ಟಾಗಿ ಕೆಲಸ ಮಾಡಿ ಪಕ್ಷದ ಅಭ್ಯರ್ಥಿಯನ್ನ ಗೆಲ್ಲಿಸುತ್ತೇವೆ ಎಂದು ಮಾಜಿ ಸಚಿವ ಜಗದೀಶ್ ಶೆಟ್ಟರ್ ಹೇಳಿದರು. ಹುಬ್ಬಳ್ಳಿ ನಗರದಲ್ಲಿಂದು ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ರಾಣೆಬೆನ್ನೂರ ಶಾಸಕ ಅರುಣಕುಮಾರ ಹಾಗೂ ಎಂಎಲ್ ಸಿ ಆರ್ ಶಂಕರ್ ಮಧ್ಯೆ ಮಾತಿನ ಚಕಮಕಿ ನಡೆದಿದೆ. ಗಲಾಟೆ ಆಗಿಲ್ಲ. ಅವರಿಬ್ಬರು ಕ್ಷೇತ್ರದ ವಿಚಾರದಲ್ಲಿ ಚರ್ಚೆ …
Read More »ಡಿ.14ಕ್ಕೆ ಡಿಕೆಶಿಗೆ ಎಲ್ಲ ಉತ್ತರ ಕೊಡುತ್ತೇನೆ: ಅವತ್ತು ಬೇಕಾದ್ರೆ ವಾರ್ ಆಗಲಿ: ಡಿಕೆಶಿಗೆ ರಮೇಶ ಜಾರಕಿಹೊಳಿ ಓಪನ್ ಚಾಲೆಂಜ್..!
ನನ್ನ ವ್ಯಕ್ಯಿತ್ವ ಏನು, ಡಿಕೆಶಿ ವ್ಯಕ್ತಿತ್ವ ಏನು ಎಂದು ಹೇಳ್ತಿನಿ. ಬೇಕಾದರೆ ಓಪನ್ ವಾರ್ ಆಗಲಿ. ಫಲಿತಾಂಶದ ದಿನ ಎಲ್ಲದಕ್ಕೂ ತಕ್ಕ ಉತ್ತರ ಕೊಡುತ್ತೇನೆ ಎಂದು ಕನಕಪುರ ಬಂಡೆ ಡಿಕೆ ಶಿವಕುಮಾರ್‍ಗೆ ಮಾಜಿ ಸಚಿವ ರಮೇಶ ಜಾರಕಿಹೊಳಿ ಬಹಿರಂಗ ಸವಾಲು ಹಾಕಿದ್ದಾರೆ. ಎಂಎಲ್‍ಸಿ ಚುನಾವಣಾ ರಣಕಣದಲ್ಲಿ ಘಟಾನುಘಟಿ ನಾಯಕರ ಮಧ್ಯ ಮಾತಿನ ಸಮರ ಮುಂದುವರಿದಿದೆ. ಮೊನ್ನೆಯಷ್ಟೇ ರಮೇಶ ಜಾರಕಿಹೊಳಿ ವಿರುದ್ಧ ಬೆಳಗಾವಿಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಗುಡುಗಿದ್ದರು. ಇದೀಗ ಡಿಕೆಶಿ …
Read More »