ಬೆಳಗಾವಿ: ಲೋಕಸಭಾ ಉಪ ಚುನಾವಣೆಯ ಮತ ಎಣಿಕೆಯು ಭಾನುವಾರ (ಮೇ.02) ನಡೆಯಲಿದೆ. ಈ ಹಿನ್ನೆಲೆಯಲ್ಲಿ ಚುನಾವಣಾ ಆಯೋಗವು ಕೋವಿಡ್-19 ಮಾರ್ಗಸೂಚಿಗಳನ್ನು ಹಾಗೂ ಚುನಾವಣಾ ಆಯೋಗದ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ನಿರ್ದೇಶನ ನೀಡಿದೆ. ಅಭ್ಯರ್ಥಿ ಹಾಗೂ ಏಜೆಂಟರುಗಳಿಗೆ ಕೋವಿಡ್-19 ನೆಗೆಟಿವ್ ವರದಿ ಕಡ್ಡಾಯ : ಮತ ಎಣಿಕೆ ಕೇಂದ್ರ ಪ್ರವೇಶಿಸುವ ಅಭ್ಯರ್ಥಿಗಳು ಕೊರೋನಾ ನೆಗೆಟಿವ್ ವರದಿ ಅಥವಾ ಎರಡು ಡೋಸ್ ಲಸಿಕೆ ಪಡೆದಿರುವ ಬಗ್ಗೆ ದಾಖಲೆ ಸಲ್ಲಿಸಬೇಕು. ಏಜೆಂಟರು ಕೂಡ 48 …
Read More »Yearly Archives: 2021
ಮಾಸ್ಕ್ ಧರಿಸಿ ಪೇಟೆಗೆ ಬಂದ ನಾಯಿ!
ಮಂಗಳೂರು, ಏಪ್ರಿಲ್ 29; ಜನರು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು ಅಂತಾ ಸರ್ಕಾರ ಕಠಿಣ ನಿಯಮಗಳನ್ನು ಮಾಡಿದೆ. ಜನ ಮಾತ್ರ ಕೊರೊನಾ ಬಂದು ವರ್ಷ ಕಳೆದರೂ ಇನ್ನೂ ಮಾಸ್ಕ್ ಧರಿಸುತ್ತಿಲ್ಲ. ಮಾಸ್ಕ್ ಬಳಕೆಯ ಗಂಭೀರತೆಯೂ ಜನರಿಗೆ ಅರ್ಥವಾಗಿಲ್ಲ. ಹೀಗಾಗಿ ಪ್ರತಿದಿನ ಮಾಸ್ಕ್ ಧರಿಸದೇ ದಂಡವನ್ನು ಕಟ್ಟುತ್ತಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ಶ್ವಾನದ ಮಾಲಿಕರೊಬ್ಬರು ತನ್ನ ಪ್ರೀತಿಯ ಶ್ವಾನಕ್ಕೆ ಮಾಸ್ಕ್ ಹಾಕಿಸಿ ಕರೆದುಕೊಂಡು ಬಂದಿದ್ದರು. ಗುರುವಾರ ಅಗತ್ಯ ವಸ್ತುಗಳ ಖರೀದಿ ಸಮಯದಲ್ಲಿ …
Read More »ಬೆಂಗಳೂರಿನಿಂದ ಬಂದರೆ ಈ ಗ್ರಾಮದಲ್ಲಿ ಕೋವಿಡ್ ಟೆಸ್ಟ್ ಕಡ್ಡಾಯ
ಧಾರವಾಡ, ಏಪ್ರಿಲ್ 29; ಕೋವಿಡ್ 2ನೇ ಅಲೆ ವೇಗವಾಗಿ ಹಬ್ಬುತ್ತಿದೆ. ಕರ್ನಾಟಕ ಸರ್ಕಾರ ಲಾಕ್ ಡೌನ್ ಘೋಷಣೆ ಮಾಡಿದ ಬಳಿಕ ಬೆಂಗಳೂರು ನಗರ ಮತ್ತು ವಿವಿಧ ಜಿಲ್ಲೆಗಳ ಜನರು ತವರಿಗೆ ವಾಪಸ್ ಆಗುತ್ತಿದ್ದಾರೆ. ಬೆಂಗಳೂರು ಮತ್ತು ಹೊರ ಜಿಲ್ಲೆಗಳಿಂದ ಬರುವ ಜನರಿಂದ ಕೋವಿಡ್ ಸೋಂಕು ಹರಡಬಾರದು ಎಂದು ಧಾರವಾಡ ಜಿಲ್ಲೆಯ ಗ್ರಾಮವೊಂದು ಕಠಿಣ ನಿಯಮಗಳನ್ನು ಜಾರಿಗೊಳಿಸಿದೆ. ಧಾರವಾಡ ಸಮೀಪದ ಹೆಬ್ಬಳ್ಳಿ ಗ್ರಾಮದ ಜನರು ಸ್ವಯಂ ಆಗಿ ತೀರ್ಮಾನ ಕೈಗೊಂಡಿದ್ದಾರೆ. …
Read More »ಅಧ್ಯಕ್ಷ ಸ್ಥಾನಕ್ಕೆ ರಾಹುಲ್ ಬಜಾಜ್ ರಾಜೀನಾಮೆ, ನೀರಜ್ ಬಜಾಜ್ ನೂತನ ಅಧ್ಯಕ್ಷ
ನವದೆಹಲಿ:ರಾಹುಲ್ ಬಜಾಜ್ ಅವರು ಕಾರ್ಯನಿರ್ವಾಹಕ ನಿರ್ದೇಶಕ ಹಾಗೂ ಅಧ್ಯಕ್ಷ ಸ್ಥಾನದಿಂದ ಏಪ್ರಿಲ್ 30ರಂದು ಕೆಳಗಿಳಿಯಲಿದ್ದಾರೆ ಎಂದು ಬಜಾಜ್ ಆಟೋ ಗುರುವಾರ(ಏಪ್ರಿಲ್ 29) ಘೋಷಿಸಿದೆ. ರಾಹುಲ್ (82ವರ್ಷ) ಅವರು ಕಂಪನಿಯ ಕಾರ್ಯನಿರ್ವಾಹಕ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ಇನ್ನು ಮುಂದೆ ಅವರು ಐದು ವರ್ಷಗಳ ಕಾಲ ಕಂಪನಿಯ ವಿಶ್ರಾಂತ ಅಧ್ಯಕ್ಷರಾಗಲಿದ್ದಾರೆ ಎಂದು ಬಜಾಜ್ ತಿಳಿಸಿದೆ. ಅಲ್ಲದೇ ನೀರಜ್ ಬಜಾಜ್ ಅವರು ಮೇ 1ರಂದು ಕಂಪನಿಯ ಕಾರ್ಯನಿರ್ವಾಹಕ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಲಿದ್ದಾರೆ ಎಂದು ಹೇಳಿದೆ. …
Read More »ಧಾರವಾಡ: ಜಿಲ್ಲೆಯ ಜನರಿಗೆ ತಪ್ಪು ಮಾಹಿತಿ ನೀಡಿದ ಆರೋಪ ಹಿನ್ನೆಲೆಯಲ್ಲಿ ಎಐಸಿಸಿ ಸದಸ್ಯ ದೀಪಕ್‌ಗೆ ಧಾರವಾಡ ಡಿಸಿ ನೋಟಿಸ್
ಧಾರವಾಡ: ಜಿಲ್ಲೆಯ ಜನರಿಗೆ ತಪ್ಪು ಮಾಹಿತಿ ನೀಡಿದ ಆರೋಪ ಹಿನ್ನೆಲೆಯಲ್ಲಿ ಎಐಸಿಸಿ ಸದಸ್ಯ ದೀಪಕ್‌ಗೆ ಧಾರವಾಡ ಡಿಸಿ ನೋಟಿಸ್ ಜಾರಿ ಮಾಡಿದ್ದಾರೆ. ಧಾರವಾಡ ಜಿಲ್ಲೆಯಲ್ಲಿ ಆಕ್ಸಿಜನ್, ಬೆಡ್, ವೆಂಟಿಲೇಟ್, ICU ಬೆಡ್ ಇಲ್ಲವೆಂದು ದೀಪಕ್ ವಿಡಿಯೋ ಮಾಡಿದ್ದರು. ಆದರೆ ಧಾರವಾಡ ಜಿಲ್ಲೆಯಲ್ಲಿ 80 ಐಸಿಯು ಬೆಡ್, 103 ವೆಂಟಿಲೇಟರ್, 545 ಆಕ್ಸಿಜನ್ ಬೆಡ್ ಖಾಲಿ ಇವೆ. ಹೀಗಾಗಿ ತಪ್ಪು ಮಾಹಿತಿ ನೀಡಿದ ಹಿನ್ನೆಲೆಯಲ್ಲಿ ದೀಪಕ್‌ಗೆ ನೋಟಿಸ್ ಜಾರಿ ಮಾಡಿದ್ದಾರೆ. ಎಐಸಿಸಿ …
Read More »ನಿಮ್ಮ ತಿಕ್ಕಲುತನವನ್ನು ದೇಶದ ಜನತೆ ಎಂದಿಗೂ ಕ್ಷಮಿಸರು:H.D.K.
ಬೆಂಗಳೂರು: ಮೇ ಒಂದರಿಂದ 18 ವರ್ಷ ಮೇಲ್ಪಟ್ಟ ಎಲ್ಲರಿಗೂ ಉಚಿತ ಲಸಿಕೆ ಎಂದು ಬೊಬ್ಬೆ ಹೊಡೆದ ಕೇಂದ್ರ ಮತ್ತು ರಾಜ್ಯ ಸರ್ಕಾರ ಪುಕ್ಕಟೆ ಪುಂಗಿ ಊದಿದ್ದೇ ಬಂತು. ಲಸಿಕೆಯ ದಾಸ್ತಾನಿಲ್ಲದೆ, ಸೂಕ್ತ ಮುನ್ನೆಚ್ಚರಿಕೆ, ವ್ಯವಸ್ಥೆ ಮಾಡಿಕೊಳ್ಳದೆ ಬರೀ ಪ್ರಚಾರ ತೆಗೆದುಕೊಂಡ ಕೇಂದ್ರ, ರಾಜ್ಯ ಸರ್ಕಾರಗಳ ನಿಲುವು ಅಕ್ಷಮ್ಯ ಮತ್ತು ಖಂಡನೀಯ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಟೀಕಿಸಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಲಭ್ಯವಿರುವ ಮಾಹಿತಿ ಪ್ರಕಾರ ಮೇ …
Read More »ಚಿಕ್ಕೋಡಿ ಪಟ್ಟಣದ ಜ್ಯೋತಿ ಬಜಾರ್ ಸೀಲ್ ಮಾಡಿಸಿದ ಅಧಿಕಾರಿ ಅಪೂರ್ವ ಬೀದ್ರಿ
ಸಚಿವೆ ಶಶಿಕಲಾ ಜೊಲ್ಲೆ ಮತ್ತು ಸಂಸದ ಅಣ್ಣಾಸಾಹೇಬ ಜೊಲ್ಲೆ ಒಡೆತನದ ಜ್ಯೋತಿ ಬಜಾರ್ ಅನ್ನು ಚಿಕ್ಕೋಡಿ ಪುರಸಭೆ ಮುಖ್ಯಾಧಿಕಾರಿ ಅಪೂರ್ವ ಬೀದ್ರಿ (KAS) ಅವರ ನೇತ್ರತ್ವದಲ್ಲಿ ದಾಳಿ ಮಾಡಿ ಜ್ಯೋತಿ ಬಜಾರ್ ಸೀಲ್ ಮಾಡಿಸಿದ ಅಧಿಕಾರಿ. ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ಪಟ್ಟಣದಲ್ಲಿರುವ ಜ್ಯೋತಿ ಬಜಾರ್ ಕೊರೊನಾ ನಿಯಮ ಗಾಳಿಗೆ ತೊರಿ ವ್ಯಾಪಾರ ನಡೆಸುತ್ತಿರುವ ಆರೋಪದ ಅಡಿ ಸೀಲ್ ಮಾಡಿಸಿದ ಅಧಿಕಾರಿ ಯಾಕೆ ಅಂಗಡಿ ತಗೆದಿದ್ದೀರಿ ಎಂದು ಜ್ಯೋತಿ ಬಜಾರ್ ಸಿಬ್ಬಂಧಿಗೆ …
Read More »ರಾಜ್ಯದಲ್ಲಿಂದು 35024 ಪಾಸಿಟಿವ್ ಪ್ರಕರಣ, 270 ಜನರ ಸಾವು
ಬೆಂಗಳೂರು : ರಾಜ್ಯದಲ್ಲಿ ಕೋವಿಡ್ ಹೊಸ ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಏರುಗತಿಯಲ್ಲಿಯೇ ಸಾಗಿದ್ದು, ಇಂದು ಕೂಡ 30 ಸಾವಿರ ಗಡಿ ದಾಡಿದೆ. ಇಂದು ( ಗುರುವಾರ) ಸಂಜೆ ಕರ್ನಾಟಕ ಆರೋಗ್ಯ ಇಲಾಖೆ ಬಿಡುಗಡೆ ಮಾಡಿರುವ ವರದಿಗಳ ಪ್ರಕಾರ ರಾಜ್ಯದಲ್ಲಿ ಕಳೆದ 24 ಗಂಟೆಗಳ ( ದಿನಾಂಕ:28.04.2021, 00:00 ರಿಂದ 23:59 ) ಅವಧಿಯಲ್ಲಿ ಬರೋಬ್ಬರಿ 35024 ಜನರಿಗೆ ಕೋವಿಡ್ ಪಾಸಿಟಿವ್ ಸೋಂಕು ದೃಢಪಟ್ಟಿದೆ. ಈ ಮೂಲಕ ರಾಜ್ಯದಲ್ಲಿ ಒಟ್ಟು …
Read More »ಆರ್‌ಎಸ್‌ಎಸ್‌ನಿಂದ ಕೋವಿಡ್ ನೆರವು ಕೇಂದ್ರ ಸ್ಥಾಪನೆ..!
ಹುಬ್ಬಳ್ಳಿ: ಪರಸ್ಪರ ಸಹಕಾರದಿಂದ ಮಾತ್ರ ಕೊರೊನಾ ಎರಡನೇ ಅಲೆಯನ್ನು ಎದುರಿಸಲು ಸಾಧ್ಯ ಎಂದು ಆರ್‍ಎಸ್‍ಎಸ್ ಹಿರಿಯ ಪ್ರಚಾರಕ ರಾಷ್ಟ್ರೀಯ ವ್ಯವಸ್ಥಾ ಪ್ರಮುಖ ಮಂಗೇಶ ಬೇಂಡೆ ಹೇಳಿದರು. ಸೇವಾ ಭಾರತಿ ಟ್ರಸ್ಟ್ ಹಾಗೂ ನೆರವು ಸಹಯೋಗದಲ್ಲಿ ಇಲ್ಲಿನ ಕಿಮ್ಸ್ ಎದುರು ಸ್ಥಾಪಿಸಲಾದ ಕೊರೊನಾ ಮಾಹಿತಿ ಕೇಂದ್ರವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಕೊರೊನಾ ವಿಚಾರದಲ್ಲಿ ಭಾರತವನ್ನು ಇತರೆ ರಾಷ್ಟ್ರಗಳ ಜೊತೆಗೆ ಹೋಲಿಕೆ ಮಾಡುವುದು ಸರಿಯಲ್ಲ. ಅಮೆರಿಕ, ಇಂಗ್ಲೆಂಡ್ ಗೆ ಹೋಲಿಸಿದರೆ ಭಾರತ ಕೊರೊನಾ …
Read More »ಬೆಳಗಾವಿ ಜಿಲ್ಲೆಯಲ್ಲಿ 360 ಜನರಿಗೆ ಕೊರೋನಾ ಸೋಂಕು
ಬೆಳಗಾವಿ – ರಾಜ್ಯದಲ್ಲಿ ಬುಧವಾರ 39,047 ಜನರಿಗೆ ಹೊಸದಾಗಿ ಕೊರೋನಾ ಸೋಂಕು ದೃಢಪಟ್ಟಿದೆ. 229 ಜನರು ಕಳೆದ 24 ಗಂಟೆಯಲ್ಲಿ ಸಾವಿಗೀಡಾಗಿದ್ದಾರೆ. 2,192 ಜನರು ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರೆ, 11,833 ಜನರು ಡಿಸ್ಚಾರ್ಜ್ ಆಗಿದ್ದಾರೆ. ಬೆಂಗಳೂರು ನಗರದಲ್ಲಿ 22,596 ಜನರಿಗೆ ಕೊರೋನಾ ದೃಢಪಟ್ಟಿದೆ. ಬೆಳಗಾವಿ ಜಿಲ್ಲೆಯಲ್ಲಿ 360 ಜನರಿಗೆ ಸೋಂಕು ತಗುಲಿದ್ದು, ಬೆಳಗಾವಿ ನಗರದಲ್ಲೇ 291 ಜನರಿಗೆ ಕೊರೋನಾ ದೃಢಪಟ್ಟಿದೆ. ಅಥಣಿ 4, ಬೈಲಹೊಂಗಲ 15, ಚಿಕ್ಕೋಡಿ 2, ಗೋಕಾಕ …
Read More »