ತುಮಕೂರು: ರಾಜ್ಯದಲ್ಲಿ ಕೊರೊನಾ ಸೋಂಕು ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಒಂದೇ ದಿನ ಸರ್ಕಾರಿ ಶಾಲೆಯ ಮೂವರು ಶಿಕ್ಷಕರು ಕೊರೊನಾ ಸೋಂಕಿಗೆ ಬಲಿಯಾಗಿರುವ ಘಟನೆ ತುಮಕೂರಿನ ಕುಣಿಗಲ್ ತಾಲೂಕಿನಲ್ಲಿ ನಡೆದಿದೆ. ಕಿಣಿಗಲ್ ತಾಲೂಕಿನ ಉಜ್ಜಯನಿ ಪ್ರೌಢ ಶಾಲೆಯ ಶಿಕ್ಷಕ ಶಿವರಾಮೇಗೌಡ, ಮಲ್ಲಿಪಾಳ್ಯ ಪ್ರೌಢ ಶಾಲೆಯ ಪರಮೇಶ್ವರ್ ಆಚಾರ್ ಹಾಗೂ ತುರುಗೂರು ಪ್ರಾಥಮಿಕ ಶಾಲಾ ಶಿಕ್ಷಕ ಕೃಷ್ಣಪ್ಪ ಕೊರೊನ ಸೋಂಕಿನಿಂದ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ. ಈ ನಡುವೆ ತುಮಕೂರು ಜಿಲ್ಲೆಯಲ್ಲಿ ಕೊರೊನಾ ಸೋಂಕು …
Read More »Yearly Archives: 2021
ವೈದ್ಯಾಧಿಕಾರಿಗಳ ನೇಮಕಾತಿ ಕನಿಷ್ಟ ವಯೋಮಿತಿ ಹೆಚ್ಚಳ: ಸರ್ಕಾರದ ಕ್ರಮ ಎತ್ತಿಹಿಡಿದ ಹೈಕೋರ್ಟ್
ಬೆಂಗಳೂರು: ವೈದ್ಯಾಧಿಕಾರಿಗಳ ನೇಮಕಾತಿಗೆ ಕನಿಷ್ಠ ವಯೋಮಿತಿಯನ್ನು 21 ರಿಂದ 26 ವರ್‌ಷಕ್ಕೆ ಹೆಚ್ಚಿಸಿ ರಾಜ್ಯ ಸರ್ಕಾರ ಜಾರಿಗೆ ತಂದ ನಿಯಮವನ್ನು ಹೈಕೋರ್ಟ್ ಎತ್ತಿಹಿಡಿದಿದೆ. ಅಲ್ಲದೇ, ಅರ್ಜಿದಾರರು ಹೈಕೋರ್ಟ್ ಗೆ ಮೊರೆ ಹೋಗುವ ಮೊದಲು ಸರ್ಕಾರದ ನಿಯಮ ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಯನ್ನು ವಜಾಗೊಳಿಸಿರುವ ಕರ್ನಾಟಕ ಆಡಳಿತ ನ್ಯಾಯಮಂಡಳಿ (ಕೆಎಟಿ)ಯ ಕ್ರಮ ಸರಿ ಇದೆ ಎಂದೂ ಸಹ ಹೈಕೋರ್ಟ್ ಹೇಳಿದೆ. ಕರ್ನಾಟಕ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ನಿರ್ದೇಶನಾಲಯ ಸೇವೆಗಳು (ಹಿರಿಯ ವೈದ್ಯಾಧಿಕಾರಿಗಳು/ಪರಿಣಿತರು, …
Read More »ಸಂತಸ ಮೂಡಿಸಿದ ಲಾಕ್ ಡೌನ್: 22 ವರ್ಷಗಳ ನಂತರ ಮನೆಗೆ ಮಗ ಬಂದ!
ಹಾಸನ: ಕೋವಿಡ್ ನಿಯಂತ್ರಿಸಲು ವಿಧಿಸಲಾಗಿರುವ ಲಾಕ್ ಡೌನ್ ಬಹಳಷ್ಟು ಜನರ ನೆಮ್ಮದಿಗೆಡಿಸಿದೆ. ಕೆಲಸ ಕಾರ್ಯವಿಲ್ಲದೆ ದಿನದೂಡುವುದೇ ಕಷ್ಟವಾಗಿದೆ. ಆದರೆ ಇಲ್ಲೊಂದು ಮನೆಯಲ್ಲಿ ಲಾಕ್ ಡೌನ್ ಸಂತಸಕ್ಕೆ ಕಾರಣವಾಗಿದೆ. ಮನೆ ಬಿಟ್ಟು ಹೋಗಿದ್ದ ಮಗ 22 ವರ್ಷಗಳ ನಂತರ ಮನೆಗೆ ವಾಪಸ್ಸಾಗಿದ್ದು ಹೆತ್ತವರಲ್ಲಿ ಸಂತಸ ಮೂಡಿಸಿದೆ. ಹಾಸನ ತಾಲೂಕು ಶಾಂತಿಗ್ರಾಮ ಹೋಬಳಿ ಹೊಂಗರೆ ಗ್ರಾಮದ ರಾಜೇಗೌಡ ಮತ್ತು ಅಕ್ಕಯ್ಯಮ್ಮ ದಂಪತಿ ಪುತ್ರ ಶೇಖರ್ (38) ಮನೆಗೆ ವಾಪಸ್ಸಾದವ. ಈತ, 18 …
Read More »ಸರ್ಕಾರಿ, ಖಾಸಗಿ ಆಸ್ಪತ್ರೆಗಳಿಗೆ ರೆಮ್‌ಡಿಸಿವಿರ್ ಹಂಚಿಕೆಗೆ ಸಮಿತಿ: ಡಿ.ಸಿಡಾ.ಕೆ. ಹರೀಶ್ ಕುಮಾರ್
ಬೆಳಗಾವಿ: ‘ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಗಳಿಗೆ ರೆಮ್‌ಡಿಸಿವಿರ್ ಸಮರ್ಪಕ ಹಂಚಿಕೆ, ಲಭ್ಯವಿರುವ ಹಾಸಿಗೆಗಳ ನಿರ್ವಹಣೆಗೆ ಸಂಬಂಧಿಸಿದಂತೆ ಹಲವು ಸುತ್ತಿನ ಸಭೆಗಳನ್ನು ನಡೆಸಲಾಗಿದೆ. ವಿವಿಧ ಸಮಿತಿಗಳನ್ನು ರಚಿಸಲಾಗಿದೆ’ ಎಂದು ಜಿಲ್ಲಾಧಿಕಾರಿ ಡಾ.ಕೆ. ಹರೀಶ್ ಕುಮಾರ್ ತಿಳಿಸಿದರು. ಇಲ್ಲಿನ ಜಿಲ್ಲಾ ಪಂಚಾಯ್ತಿ ಸಭಾಂಗಣದಲ್ಲಿ ಜನಪ್ರತಿನಿಧಿಗಳು ನಡೆಸಿದ ಸಭೆಯಲ್ಲಿ ಮಾತನಾಡಿದ ಅವರು, ‘ಲಸಿಕಾಕರಣ ಚುರುಕುಗೊಳಿಸಲು ಕ್ರಮ ಕೈಗೊಂಡಿದ್ದು, ಮಾರ್ಗಸೂಚಿ ಪ್ರಕಾರ ಅಕ್ಟೋಬರ್ ವೇಳೆಗೆ ಸಂಪೂರ್ಣ ಲಸಿಕೆಗೆ ಆದ್ಯತೆ ನೀಡಲಾಗುತ್ತಿದೆ’ ಎಂದರು. ‘ಬಿಮ್ಸ್ ಆಸ್ಪತ್ರೆಯಲ್ಲಿ ಊಟ, …
Read More »BPL’ ಕಾರ್ಡ್ ಹೊಂದಿರುವ ಬಡವರಿಗೆ ಉಚಿತ ಕೋವಿಡ್ ಚಿಕಿತ್ಸೆ : ಸಚಿವ ಬಿ.ಸಿ.ಪಾಟೀಲ್
ಹಿರೇಕೆರೂರು : ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರೊನಾ ವೈರಸ್ ಸೋಂಕಿನ ಪ್ರಕರಣಗಳು ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಬಿಪಿಎಲ್ ಕಾರ್ಡ್ ಹೊಂದಿರುವವರಿಗೆ ಉಚಿತ ಕೋವಿಡ್ ಚಿಕಿತ್ಸೆ ನೀಡುವುದಾಗಿ ಕೃಷಿ ಸಚಿವ ಬಿ.ಸಿ.ಪಾಟೀಲ್ ಹೇಳಿದ್ದಾರೆ. ಹೌದು, ಬಿಪಿಎಲ್ ಕಾರ್ಡ್ ಹೊಂದಿರುವ ತಮ್ಮ ಕ್ಷೇತ್ರದ ಬಡವರು ಕೋವಿಡ್ ಸೋಂಕಿತರಾಗಿ ಜಿಲ್ಲೆಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯಲು ಮುಂದಾದರೆ ಅಂತವರಿಗೆ ಸಂಪೂರ್ಣ ಚಿಕಿತ್ಸಾ ವೆಚ್ಚ ಭರಿಸುವುದಾಗಿ ಹೇಳಿದ್ದಾರೆ. ಈ ಮೂಲಕ ತಮ್ಮ ಕ್ಷೇತ್ರದ ಬಿಪಿಎಲ್ ಕಾರ್ಡ್ ಹೊಂದಿದವರಿಗೆ …
Read More »ಕಿಲ್ಲರ್ ಕೊರೊನಾ: ಆಯಂಬುಲೆನ್ಸ್ ಚಾಲಕರಿಂದಲೇ ಅಂತ್ಯಸಂಸ್ಕಾರ, ವಿಡಿಯೋ ನೋಡಿ ವಿದಾಯ ಹೇಳುತ್ತಿರುವ ಕುಟುಂಬಸ್ಥರು
ಬೆಂಗಳೂರು: ಕಿಲ್ಲರ್ ಕೊರೊನಾಗೆ ಜನ ಬಲಿಯಾಗುತ್ತಿದ್ದಾರೆ. ದಿನದಿಂದ ದಿನಕ್ಕೆ ಸೋಂಕಿತರ ಹಾಗೂ ಸಾಯುವವರ ಸಂಖ್ಯೆ ಏರಿಕೆಯಾಗುತ್ತಿದೆ. ದೇಶದಲ್ಲಿ ಗಂಭೀರ ಪರಿಸ್ಥಿತಿ ನಿರ್ಮಾಣವಾಗಿದೆ. ಇನ್ನು ವಿಪರ್ಯಾಸವೆಂದರೆ ಸೋಂಕಿನಿಂದ ಮೃತಪಟ್ಟವರ ಕುಟುಂಬಸ್ಥರು ಮೃತರ ಅಂತ್ಯಸಂಸ್ಕಾರವನ್ನು ವಿಡಿಯೋ ಮೂಲಕ ವೀಕ್ಷಿಸುತ್ತಿದ್ದಾರೆ. ತಮ್ಮವರನ್ನು ವಿಡಿಯೋ ಮೂಲಕವೇ ವಿದಾಯ ಹೇಳುತ್ತಿದ್ದಾರೆ. ಹೌದು ಮಹಾಮಾರಿ ಕೊರೊನಾದಿಂದ ಮೃತಪಟ್ಟಂತಹ ವ್ಯಕ್ತಿಯ ಅಂತ್ಯಸಂಸ್ಕಾರದಲ್ಲಿ ಕುಟುಂಬಸ್ಥರು ಭಾಗಿಯಾಗುತ್ತಿಲ್ಲ. ಕೆಲವರು ಮೃತದೇಹವನ್ನೇ ಬಿಟ್ಟು ಹೋಗುತ್ತಿದ್ದಾರೆ. ಮತ್ತೆ ಕೆಲವರು ಮೊಬೈಲ್ ವಿಡಿಯೋದಲ್ಲೇ ಅಂತ್ಯಸಂಸ್ಕಾರವನ್ನು ವೀಕ್ಷಿಸಿ ದೂರದಿಂದಲೇ …
Read More »ಇಂದು ಮದುವೆಯಾಗಬೇಕಿದ್ದ ಮದುಮಗ ಕೊರೊನಾಗೆ ಬಲಿ!
ಚಿಕ್ಕಮಗಳೂರು : ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರೊನಾ ವೈರಸ್ ಸೋಂಕಿನ ಅಬ್ಬರ ಹೆಚ್ಚಳವಾಗುತ್ತಿದ್ದು, ಇಂದು ಹಸೆಮಣೆ ಏರಬೇಕಾಗಿದ್ದ ಯುವಕನೋರ್ವ ಕೊರೊನಾ ಸೋಂಕಿನಿಂದ ಮೃತಪಟ್ಟಿರುವ ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದೆ. ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ದೇವರಕೊಡಿಗೆಯಲ್ಲಿ ಇಂದು ಮದುವೆಯಾಗಬೇಕಿದ್ದ 32 ವರ್ಷದ ಪೃಥ್ವಿರಾಜ್ ಎಂಬ ಯುವಕ ಶಿವಮೊಗ್ಗ ಮೆಗ್ಗಾನ್ ಅಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಸಾವಿಗೀಡಾಗಿದ್ದಾರೆ. 10 ದಿನಗಳ ಹಿಂದೆ ಬೆಂಗಳೂರಿನಿಂದ ಮನೆಗೆ ಬಂದಿದ್ದ ಪೃಥ್ವಿರಾಜ್ ಗೆ ಕೊರೊನಾ ವೈರಸ್ ಸೋಂಕು ದೃಢಪಟ್ಟಿತ್ತು. …
Read More »45 ವರ್ಷ ಮೇಲ್ಪಟ್ಟ ಎಲ್ಲ ನಾಗರಿಕರಿಗೂ ಲಸಿಕೆ ನೀಡಲು ಕ್ರಮ ಕೈಗೊಳ್ಳಲಾಗಿದೆ ಎಂದ ಜಿಲ್ಲಾಧಿಕಾರಿ ಡಾ.ಕೆ.ಹರೀಶ್ ಕುಮಾರ್
ಬೆಳಗಾವಿ: ಕೋವಿಡ್ -19 ಸಾಕ್ರಾಂಮಿಕ ರೋಗವನ್ನು ತಡೆಗಟ್ಟುವ ಹಿನ್ನಲೆಯಲ್ಲಿ ಜನತಾ ಕಫ್ಯೂ೯ ಸಂದರ್ಭದಲ್ಲಿಯೂ ಸರ್ಕಾರದ ನಿರ್ದೇಶನದಂತೆ 45 ವರ್ಷ ಮೇಲ್ಪಟ್ಟ ಎಲ್ಲ ನಾಗರಿಕರಿಗೂ ಲಸಿಕೆ ನೀಡಲು ಕ್ರಮ ಕೈಗೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಕೆ.ಹರೀಶ್ ಕುಮಾರ್ ತಿಳಿಸಿದ್ದಾರೆ. ನಗರ ಪ್ರದೇಶಗಳಲ್ಲಿ 45 ವರ್ಷ ಮೇಲ್ಪಟ್ಟ ಎಲ್ಲ ನಾಗರಿಕರು ಕೋವಿಡ್-19 ಲಸಿಕೆ ಪಡೆದುಕೊಳ್ಳಲು ಆನ್ ಲೈನ್ ಮೂಲಕ ನೋಂದಣಿ ಮಾಡಿಕೊಳ್ಳಬೇಕು ಮತ್ತು ಲಸಿಕಾ ಕೇಂದ್ರಗಳಿಗೆ ತೆರಳುವಾಗ ಭಾವಚಿತ್ರ ಹೊಂದಿದ ಅಧಿಕೃತ ಗುರುತಿನ ಚೀಟಿ …
Read More »ಆಹಾರ ಸಚಿವ ಉಮೇಶ್ ಕತ್ತಿ ರಾಜೀನಾಮೆ ನೀಡಲಿ; ಡಿ.ಕೆ.ಶಿವಕುಮಾರ್ ಆಗ್ರಹ
ಬೆಂಗಳೂರು: ಪಡಿತರ ಅಕ್ಕಿ ಕೇಳಿದ ವ್ಯಕ್ತಿಯನ್ನು ಸಾಯುವಂತೆ ಹೇಳಿದ ಆಹಾರ ಸಚಿವ ಉಮೇಶ್ ಕತ್ತಿ ರಾಜೀನಾಮೆ ನೀಡಬೇಕೆಂದು ಕೆ.ಪಿ.ಸಿ.ಸಿ. ಅಧ್ಯಕ್ಷ ಡಿ.ಕೆ.ಶಿವಕುಮಾರ್ ಆಗ್ರಹಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಡಿ.ಕೆ.ಶಿವಕುಮಾರ್, ಊಟಕ್ಕೆ ಅಕ್ಕಿ ಕೇಳಿದರೆ ಸಾಯಿ ಎಂದು ಹೇಳುವ ಇವರೆಂತಹ ಆಹಾರ ಸಚಿವರು? ಇದು ಬಿಜೆಪಿ ಸಂಸ್ಕೃತಿಯನ್ನು ತೋರುತ್ತದೆ. ಸಿಎಂ ಯಡಿಯೂರಪ್ಪನವರು ಮೊದಲು ಉಮೇಶ್ ಕತ್ತಿಯವರನ್ನು ಸಂಪುಟದಿಂದ ಕಿತ್ತೊಗೆಯಬೇಕು ಎಂದು ಒತ್ತಾಯಿಸಿದರು. ಕಾಂಗ್ರೆಸ್ ಅಧಿಕಾರದಲ್ಲಿ ಇದ್ದಾಗ 7 ಕೆ.ಜಿ ಅಕ್ಕಿ ಕೊಡುತ್ತಿದ್ದೆವು. ಇವರು …
Read More »ಕ್ಲಾಸ್ ಬಳಿಕ ಕ್ಷಮೆಯಾಚಿಸಿದ ಉಡಾಫೆ ಮಂತ್ರಿ ಉಮೇಶ್ ಕತ್ತಿ
ಬೆಂಗಳೂರು: ರೈತನ ಜೊತೆಗೆ ಬಾಯಿಗೆ ಬಂದಂತೆ ಮಾತನಾಡಿ ಟೀಕೆಗೆ ಗುರಿಯಾಗಿದ್ದ ಉಮೇಶ್ ಕತ್ತಿ ಈಗ ಕ್ಷಮೆಯಾಚಿಸಿದ್ದಾರೆ. ರೈತನ ಜೊತೆಗಿನ ಮಾತುಕತೆಯ ಆಡಿಯೋ ವೈರಲ್ ವಿಚಾರ ಸಂಬಂಧಿಸಿದಂತೆ ಮುಖ್ಯಮಂತ್ರಿ ಯಡಿಯೂರಪ್ಪನವರು ಕ್ಲಾಸ್ ತೆಗೆದುಕೊಂಡ ಬಳಿಕ ಇದೀಗ ಉಮೇಶ್ ಕತ್ತಿ ಅವರು ಹೇಳಿಕೆ ವಿಚಾರವಾಗಿ ಕ್ಷಮೆಯಾಚಿಸಿದ್ದಾರೆ. ಆಡಿಯೋ ವೈರಲ್ ಆಗುತ್ತಿದ್ದಂತೆ ಉಮೇಶ್ ಕತ್ತಿ ವಿರುದ್ಧ ಸಿಎಂ ಯಡಿಯೂರಪ್ಪ ಅಸಮಾಧಾನ ಹೊರಹಾಕಿದರು. ಉಮೇಶ್ ಕತ್ತಿ ಆಹಾರ ಮತ್ತು ನಾಗರೀಕ ಖಾತೆ ಸಚಿವರು, ರೈತನೊಬ್ಬ 5 …
Read More »