ಬೆಂಗಳೂರು: ಪರಪ್ಪನ ಅಗ್ರಹಾರ ಜೈಲಿನಲ್ಲಿ ಕೊರೊನಾ ಸೋಂಕಿನ ಭೀತಿ ಎದುರಾಗಿದೆ. ಹೀಗಾಗಿ ಸೋಂಕು ಹರಡದಂತೆ ತಡೆಯಲು ಜೈಲಿನಲ್ಲಿ ಸುರಕ್ಷತೆಗೆ ಪೂರಕ ವ್ಯವಸ್ಥೆ ಮಾಡಲಾಗಿದೆ. ಕೈದಿಗಳಿಗೆ ಕೊರೊನಾ ನೆಗಟಿವ್ ರಿಪೋರ್ಟ್ ಕಡ್ಡಾಯ ಮಾಡಲಾಗಿದೆ. ಪ್ರತಿದಿನ ಬರುವ ಕೈದಿಗಳಿಗೆ ಕೊರೊನಾ ಟೆಸ್ಟ್ ಮಾಡಲಾಗ್ತಿದೆ. ಈವರೆಗೆ ಒಟ್ಟು 44 ಕೈದಿಗಳಿಗೆ ಕೊರೊನಾ ಪಾಸಿಟಿವ್ ಬಂದಿದೆ. ಆದ್ರೆ ಬಹುತೇಕ ಕೈದಿಗಳಿಗೆ ಏಸಿಂಪ್ಟಮ್ಯಾಟಿಕ್ ಇದೆ. ಅಂದ್ರೆ ಅವರಿಗೆ ರೋಗಲಕ್ಷಣ ಕಾಣಿಸಿಕೊಂಡಿಲ್ಲ. ಪರಪ್ಪನ ಅಗ್ರಹಾರ ಜೈಲಿನಲ್ಲಿ ಒಟ್ಟು 5,062 …
Read More »Yearly Archives: 2021
ಅತ್ಯಾಚಾರಕ್ಕೆ ಯತ್ನ: ಸಂಬಂಧಿಯ ಮರ್ಮಾಂಗ ಕತ್ತರಿಸಿ ಹಂದಿಗಳಿಗೆ ಉಣಬಡಿಸಿದ ಸಂತ್ರಸ್ತೆಯ ಲವರ್!
ಬ್ರಾಸಿಲಿಯಾ: ಸೋದರಸಂಬಂಧಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ವ್ಯಕ್ತಿಯ ಮರ್ಮಾಂಗ ಮತ್ತು ವೃಷಣಗಳನ್ನು ಕತ್ತರಿಸಿ ಕಾಡುಹಂದಿಗೆ ಆಹಾರವಾಗಿ ನೀಡಿರುವ ಘಟನೆ ಏಪ್ರಿಲ್ 19ರಂದು ಬ್ರೆಜಿಲ್ನಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. 20 ವರ್ಷದ ಸೋದರಸಂಬಂಧಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ವಿಷಯವೂ ಉತ್ತರ ಬ್ರೆಜಿಲಿಯನ್ ಮುನ್ಸಿಪಾಲಿಟಿಯ ಒಲ್ಹಾಸ್ ಡಿ ಔಗಾ ಪಟ್ಟಣದಲ್ಲಿ ಭಾರಿ ಆಕ್ರೋಶ ವ್ಯಕ್ತವಾಗಿದ್ದು, 36 ವರ್ಷದ ಆರೋಪಿಗೆ ಕಠಿಣ ಶಿಕ್ಷೆ ನೀಡುವಂತೆ ಒತ್ತಾಯಿಸಲಾಗಿದೆ. ಸೋದರಸಂಬಂಧಿ ಮನೆಯಲ್ಲಿ ಮಲಗಿದ್ದ ವೇಳೆ ಪಾನಮತ್ತ …
Read More »ಕೊರೊನಾ ರೋಗಿಯನ್ನ ಕೊಲೆಗೈದಿದ್ದಾರೆಂದು ಫೇಕ್ ವಿಡಿಯೋ ಅಪ್ಲೋಡ್ ಮಾಡಿದ ಯುವಕನಿಂದ ಕ್ಷಮೆ ಯಾಚನೆ
ಬೆಂಗಳೂರು: ಕೊರೊನಾ ಸೋಂಕು ಪ್ರಕರಣಗಳ ಏರಿಕೆ ಜನರನ್ನ ಆತಂಕಕ್ಕೀಡುಮಾಡಿದೆ. ಇಂಥ ಹೊತ್ತಲ್ಲಿ ಕೆಲವರು ಸಾಮಾಜಿಕ ಜಾಲತಾಣದಲ್ಲಿ ಫೇಕ್ ಸುದ್ದಿಗಳನ್ನ ಹರಿಬಿಟ್ಟು ಜನರ ದಾರಿ ತಪ್ಪಿಸುತ್ತಿರೋದು ಬೆಳಕಿಗೆ ಬಂದಿದೆ. ಕೊರೊನಾ ಆಸ್ಪತ್ರೆಯೊಂದರಲ್ಲಿ ದುಡ್ಡಿಗಾಗಿ ರೋಗಿಯ ಕತ್ತುಹಿಸುಕು ಸಾಯಿಸಿದ್ದಾರೆ ಎನ್ನಲಾದ ವಿಡಿಯೋ, ಮತ್ತೊಂದು ಆಸ್ಪತ್ರೆಯಲ್ಲಿ ವೈದ್ಯಕೀಯ ಸಿಬ್ಬಂದಿ ರೋಗಿ ಮೇಲೆ ಹಲ್ಲೆ ಮಾಡಿದ್ದಾರೆ ಎಂಬ ವಿಡಿಯೋ ತುಣುಕು ಜೊತೆಗೆ ಯುವತಿಯೊಬ್ಬಳು ತನ್ನ ತಂದೆಯನ್ನ ಕಳೆದುಕೊಂಡು ರೋಧಿಸಿದ್ದ ವಿಡಿಯೋವನ್ನ ಸೇರಿಸಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದು, …
Read More »ರೈತನಿಗೆ ನೀನು ಸತ್ತು ಹೋಗಿ ಬಿಡುವುದು ಒಳ್ಳೆಯದು ಎಂದ್ರಾ ಉಮೇಶ್ ಕತ್ತಿ? ಆಡಿಯೋ ವೈರಲ್
ಬೆಳಗಾವಿ: ರಾಜ್ಯ ಸರ್ಕಾರ ಪಡಿತರ ವಿತರಣೆಯಲ್ಲಿ 2 ಕೆ.ಜಿ. ಅಕ್ಕಿ ಕಡಿತಗೊಳಿಸಿರುವ ವಿಚಾರಕ್ಕೆ ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಉಮೇಶ್ ಕತ್ತಿ ರೈತ ಸಂಘದ ಕಾರ್ಯಕರ್ತರೊಂದಿಗೆ ಬೇಜವಾಬ್ದಾರಿ ಹೇಳಿಕೆ ನೀಡಿದ್ದಾರೆ ಎನ್ನಲಾದ ಆಡಿಯೋ ವೈರಲ್ ಆಗಿದೆ. ಸಚಿವರು ಮಾತನಾಡಿದ್ದರೆ ಎನ್ನಲಾದ ಆಡಿಯೋದಲ್ಲಿ ಗದಗ ಜಿಲ್ಲೆಯ ಕುರ್ತಕೋಟೆ ಗ್ರಾಮದ ನಿವಾಸಿ, ರೈತ ಸಂಘದ ಕಾರ್ಯಕರ್ತ ಈಶ್ವರ್ ಎಂಬುವರು ಪಡಿತರ ಕಡಿತ ಕುರಿತಂತೆ ಸಚಿವರಿಗೆ ಕರೆ ಮಾಡಿ ತರಾಟೆ ತೆಗೆದುಕೊಂಡಿದ್ದು, ಎರಡು …
Read More »ಲಾಕ್‌ಡೌನ್: ಆಟೋ, ಟ್ಯಾಕ್ಸಿ ಇಲ್ಲ, 150 ಬಿಎಂಟಿಸಿ ಬಸ್ ಸಂಚಾರ
ಬೆಂಗಳೂರು: ಲಾಕ್‌ಡೌನ್ ಇದ್ದರೂ ಕಾರ್ಯನಿರ್ವಹಿಸುವ ಜನರ ಸಂಚಾರಕ್ಕೆ ಅನುಕೂಲ ಆಗುವಂತೆ 150 ಬಸ್‌ಗಳನ್ನು ರಸ್ತೆಗಳಿಸಲು ಬಿಎಂಟಿಸಿ ನಿರ್ಧರಿಸಿದೆ. ಬೆಳಿಗ್ಗೆ 6ರಿಂದ ರಾತ್ರಿ 7 ಗಂಟೆ ತನಕ ಈ ಬಸ್‌ಗಳು ಕಾರ್ಯಾಚರಣೆ ಮಾಡಲಿವೆ. ಕೆಂಪೇಗೌಡ ಬಸ್ ನಿಲ್ದಾಣದಿಂದ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಕಾರ್ಯಾಚರಣೆ ಮಾಡುವ 6 ಬಸ್‌ಗಳು ದಿನದ 24 ಗಂಟೆಯೂ ಕಾರ್ಯಾಚರಣೆ ಮಾಡಲಿವೆ ಎಂದು ಬಿಎಂಟಿಸಿ ತಿಳಿಸಿದೆ. ಸಾಮಾನ್ಯ ಬಸ್‌ಗಳು ಶಿವಾಜಿನಗರ, ಕೆಂಪೇಗೌಡ ಬಸ್ ನಿಲ್ದಾಣ, ಮಲ್ಲೇಶ್ವರ, ಹಂಪಿನಗರ, ಬನಶಂಕರಿ, …
Read More »ಕರ್ನಾಟಕ ಲಾಕ್‌ಡೌನ್; ಜನರಿಗೆ ಮತ್ತೊಮ್ಮೆ ಮನವಿ ಮಾಡಿದ ಸಿಎಂ
ಬೆಂಗಳೂರು, ಏಪ್ರಿಲ್ 28: ಮಂಗಳವಾರ ರಾತ್ರಿಯಿಂದ ರಾಜ್ಯದಲ್ಲಿ ಹದಿನಾಲ್ಕು ದಿನಗಳ ಅವಧಿಯ ಲಾಕ್‌ಡೌನ್ ಆರಂಭವಾಗಿದ್ದು, ಮುಖ್ಯಮಂತ್ರಿ ಯಡಿಯೂರಪ್ಪ ಅವರು ಜನರಿಗೆ ಮತ್ತೊಮ್ಮೆ ಮನವಿ ಮಾಡಿದ್ದಾರೆ. ಕೊರೊನಾ ಸರಪಳಿಯನ್ನು ಮುರಿಯಲು ಎರಡು ವಾರಗಳ ಕಠಿಣ ಲಾಕ್‌ಡೌನ್ ಹೇರಲಾಗಿದೆ. ರಾಜ್ಯದ ಪ್ರತಿಯೊಬ್ಬರಿಗೂ ನಾನು ಕೇಳಿಕೊಳ್ಳುತ್ತೇನೆ. ಕೊರೊನಾ ಮಾರ್ಗಸೂಚಿಗಳನ್ನು ಪಾಲಿಸಿ. ಸರ್ಕಾರಕ್ಕೆ ಬೆಂಬಲ ನೀಡಿ. ಮನೆಯೊಳಗೇ ಇರಿ. ನಾವೆಲ್ಲರೂ ಒಟ್ಟಾದರೆ ಕೊರೊನಾವನ್ನು ಸೋಲಿಸುವುದು ಸುಲಭವಾಗಲಿದೆ ಎಂದು ಟ್ವೀಟ್ ಮಾಡಿದ್ದಾರೆ. ರಾಜ್ಯದಲ್ಲಿ, ಅದರಲ್ಲೂ ಬೆಂಗಳೂರಿನಲ್ಲಿ ಕೊರೊನಾ …
Read More »ಕೊರೊನಾಗೆ ಪುಟ್ಟಣ್ಣ ಕಣಗಾಲ್ ಮಗ ರಾಮು ಕಣಗಾಲ್ ಬಲಿ
ಬೆಂಗಳೂರು, ಎಪ್ರಿಲ್ 28: ಕನ್ನಡ ಚಿತ್ರರಂಗದ ಹಿರಿಯ ನಿರ್ದೇಶಕ ಪುಟ್ಟಣ್ಣ ಕಣಗಾಲ್ ಅವರ ಪುತ್ರ ರಾಮು ಕಣಗಾಲ್ ಕೊರೊನಾದಿಂದಾಗಿ ಸಾವನ್ನಪ್ಪಿದ್ದಾರೆ. ಕೆಲ ದಿನಗಳ ಹಿಂದೆ ಅನಾರೋಗ್ಯ ಹಿನ್ನೆಲೆ ವೈದ್ಯಕೀಯ ಪರೀಕ್ಷೆಗೆ ಒಳಗಾಗಿದ್ದಾಗ ಕೊರೊನಾ ಸೋಂಕು ತಗುಲಿರೋದು ದೃಢಪಟ್ಟಿತ್ತು. ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದ ರಾಮು ಕಣಗಾಲ್ರವರ ಆರೋಗ್ಯ ಕಳೆದ ಐದು ದಿನಗಳಿಂದ ತುಂಬಾ ಗಂಭೀರವಾಗಿತ್ತು. ಚಿಕಿತ್ಸೆ ಫಲಕಾರಿಯಾಗದೇ ಇಂದು ರಾಮು ಕಣಗಾಲ್ ನಿಧನರಾಗಿದ್ದಾರೆ. ಚೆನ್ನೈನಲ್ಲಿ ವಿದ್ಯಾಭ್ಯಾಸ ಪಡೆದಿದ್ದ ರಾಮು ಅವರು …
Read More »ಕೊರೊನಾ ನಿಯಂತ್ರಣ, ಚಿಕಿತ್ಸೆ: ಮುಖ್ಯಮಂತ್ರಿ ಯಡಿಯೂರಪ್ಪಗೆ 11 ಸಲಹೆ ನೀಡಿದ ಸಿದ್ದರಾಮಯ್ಯ
ಬೆಂಗಳೂರು: ರಾಜ್ಯದಲ್ಲಿ ಮಿತಿಮೀರಿರುವ ಕೊರೊನಾ ಸೋಂಕನ್ನು ನಿಯಂತ್ರಣ ಮಾಡಲು ಮತ್ತು ಸೋಂಕಿತರಿಗೆ ಸರಿಯಾದ ಚಿಕಿತ್ಸೆ ನೀಡುವ ಸಂಬಂಧ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರಿಗೆ ಮಾಜಿ ಮುಖ್ಯಮಂತ್ರಿ, ವಿಧಾನಸಭೆ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಅವರು 11 ಸಲಹೆಗಳನ್ನು ನೀಡಿದ್ದಾರೆ. ಸಿಎಂ ಬಿಎಸ್‌ವೈಗೆ 11 ಸಲಹೆ ನೀಡಿದ ಸಿದ್ದರಾಮಯ್ಯ: ರಾಜ್ಯದ ಜನರ ರಕ್ಷಣೆಯ ಬಗ್ಗೆ ಸರ್ಕಾರಕ್ಕೆ ಸಲಹೆ ನೀಡಿರುವ ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ಅವರು ರಾಜ್ಯದಲ್ಲಿ ಶೇ. 50ರಷ್ಟು ಕೊವಿಡ್‌ಗೆ ಬೆಡ್ …
Read More »ಕೋವಿಡ್ ಗೆದ್ದು ಬಂದ ನಟ ಕೋಮಲ್ : ವೈದ್ಯರ, ನರ್ಸ್ ಗಳ ಪಾದಗಳಿಗೆ ನಮಿಸಿದ ಜಗ್ಗೇಶ್
ಬೆಂಗಳೂರು: ಕನ್ನಡದ ಕಾಮಿಡಿ ನಟ ಕೋಮಲ್ ಅವರು ಮಹಾಮಾರಿ ಕೋವಿಡ್ ವಿರುದ್ಧ ಹೋರಾಡಿ ಗೆಲುವು ಸಾಧಿಸಿ, ಸಂಪೂರ್ಣ ಗುಣಮುಖರಾಗಿದ್ದಾರೆ. ಕೋಮಲ್ ಆರೋಗ್ಯ ಸ್ಥಿತಿ ಸೀರಿಯಸ್ ಆಗಿರುವ ವಿಚಾರವನ್ನು ನಟ ಜಗ್ಗೇಶ್ ಇಷ್ಟು ದಿನ ಬಹಿರಂಗ ಪಡಿಸಿರಲಿಲ್ಲ. ಈಗ ಕೋಮಲ್ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದ್ದು, ಸೋಷಿಯಲ್ ಮೀಡಿಯಾದಲ್ಲಿ ತಮ್ಮ ಮನದಾಳದ ಮಾತುಗಳನ್ನು ಜಗ್ಗೇಶ್ ಹಂಚಿಕೊಂಡಿದ್ದಾರೆ. ಜೊತೆಗೆ ಸಾವಿನ ದವಡೆಯಿಂದ ಕೋಮಲ್‌ರನ್ನ ಪಾರು ಮಾಡಿದ ರಾಯರಿಗೆ ಹಾಗೂ ಆಸ್ಪತ್ರೆಯ ಸಿಬ್ಬಂದಿಗೆ ಜಗ್ಗೇಶ್ ಧನ್ಯವಾದ …
Read More »ಸಿಎಂ ಬಿಎಸ್‌ವೈಗೆ 11 ಸಲಹೆ ನೀಡಿದ ಸಿದ್ದರಾಮಯ್ಯ:
ಬೆಂಗಳೂರು: ರಾಜ್ಯದಲ್ಲಿ ಮಿತಿಮೀರಿರುವ ಕೊರೊನಾ ಸೋಂಕನ್ನು ನಿಯಂತ್ರಣ ಮಾಡಲು ಮತ್ತು ಸೋಂಕಿತರಿಗೆ ಸರಿಯಾದ ಚಿಕಿತ್ಸೆ ನೀಡುವ ಸಂಬಂಧ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರಿಗೆ ಮಾಜಿ ಮುಖ್ಯಮಂತ್ರಿ, ವಿಧಾನಸಭೆ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಅವರು 11 ಸಲಹೆಗಳನ್ನು ನೀಡಿದ್ದಾರೆ. ಸಿಎಂ ಬಿಎಸ್‌ವೈಗೆ 11 ಸಲಹೆ ನೀಡಿದ ಸಿದ್ದರಾಮಯ್ಯ: ರಾಜ್ಯದ ಜನರ ರಕ್ಷಣೆಯ ಬಗ್ಗೆ ಸರ್ಕಾರಕ್ಕೆ ಸಲಹೆ ನೀಡಿರುವ ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ಅವರು ರಾಜ್ಯದಲ್ಲಿ ಶೇ. 50ರಷ್ಟು ಕೊವಿಡ್‌ಗೆ ಬೆಡ್ …
Read More »