Breaking News

Yearly Archives: 2021

ಇಡೀ ದಿನ ಬಾರ್ ಓಪನ್ ಇರ್ತಾವೆ ಎಂದೇ ಹೇಳಲಾಗಿತ್ತು. ಆದ್ರೇ.. ಇಡೀ ದಿನ ಓಪನ್ ಇರೋದಿಲ್ಲ

ಬೆಂಗಳೂರು : ರಾಜ್ಯದಲ್ಲಿ ಇಂದು ರಾತ್ರಿ 9 ಗಂಟೆಯಿಂದ ಮೇ.12ರವರೆಗೆ ಕೊರೋನಾ ಕರ್ಪ್ಯೂ ಜಾರಿಗೊಳಿಸಿದೆ. ಕೊರೋನಾ ನಿಯಂತ್ರಣಕ್ಕೆ ಈ ಕ್ರಮ ಕೈಗೊಳ್ಳಲಾಗಿದೆ. ಇದರ ಮಧ್ಯೆಯೂ ಮದ್ಯ ಸರಬರಾಜಿಗೆ ಸರ್ಕಾರ ಅವಕಾಶ ನೀಡಿತ್ತು. ಇಡೀ ದಿನ ಬಾರ್ ಓಪನ್ ಇರ್ತಾವೆ ಎಂದೇ ಹೇಳಲಾಗಿತ್ತು. ಆದ್ರೇ.. ಇಡೀ ದಿನ ಓಪನ್ ಇರೋದಿಲ್ಲ. ಅಗತ್ಯ ವಸ್ತು ಖರೀದಿಸೋದಕ್ಕೆ ನಿಗದಿಪಡಿಸಿರುವಂತೆ ಬೆಳಿಗ್ಗೆ 6 ರಿಂದ 10 ಗಂಟೆಯವರೆಗೆ ಮಾತ್ರವೇ ಅವಕಾಶವನ್ನು ನೀಡಲಾಗಿದೆ. ಈ ಮೂಲಕ ಮದ್ಯಪ್ರಿಯರಿಗೆ …

Read More »

ರಾಜ್ಯದಲ್ಲಿಂದು ಕೋವಿಡ್ ಮಹಾಸ್ಫೋಟ : 31830 ಹೊಸ ಪ್ರಕರಣ,180 ಜನ ಸಾವು

ಬೆಂಗಳೂರು: ವಾರಾಂತ್ಯದ ಕರ್ಫ್ಯೂ ತೆರೆವಾದ ಬೆನ್ನಲ್ಲೆ ರಾಜ್ಯದಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆಯಲ್ಲಿ ಭಾರೀ ಏರಿಕೆ ಕಂಡಿದೆ. ಕಳೆದ 24 ಗಂಟೆಗಳ( ಸೋಮವಾರ) ಅವಧಿಯಲ್ಲಿ ಬರೋಬ್ಬರಿ 31830 ಜನರಿಗೆ ಕೋವಿಡ್ ಸೋಂಕು ತಗುಲಿರುವುದು ದೃಢಪಟ್ಟಿದೆ. ಮಿತಿ ಮೀರಿ ಹೆಚ್ಚುತ್ತಿರುವ ಕೋವಿಡ್‍ಗೆ ಕಡಿವಾಣ ಹಾಕುವ ನಿಟ್ಟಿನಲ್ಲಿ ರಾಜ್ಯದಲ್ಲಿ ಕಳೆದ ಶುಕ್ರವಾರ ರಾತ್ರಿಯಿಂದ ಸೋಮವಾರದ ಮುಂಜಾನೆ ವರೆಗೆ ವಾರಾಂತ್ಯದ ಕರ್ಫ್ಯೂ ವಿಧಿಸಲಾಗಿತ್ತು. ಇದರಿಂದ ಭಾನುವಾರ ದಾಖಲಾದ ಕೋವಿಡ್ ಪ್ರಕರಣಗಳಲ್ಲಿ ಇಳಿಮುಖ ಖಂಡಿತ್ತು. ಆದರೆ, ಸೋಮವಾರ …

Read More »

ಚುನಾವಣಾ ರ್‍ಯಾಲಿ, ಕುಂಭಮೇಳದಿಂದ ಕೊರೋನ ಹೆಚ್ಚಾಗಿಲ್ಲ: ಶೋಭಾ ಕರಂದ್ಲಾಜೆ

ಚಿಕ್ಕಮಗಳೂರು, ಎ.27: ಚುನಾವಣೆ ರ್‍ಯಾಲಿ, ಕುಂಭಮೇಳ ಕೋವಿಡ್ ಸೋಂಕು ಹೆಚ್ಚಳ ವಾಗಲು ಕಾರಣವಲ್ಲ. ಚುನಾವಣಾ ರ್‍ಯಾಲಿ, ಕುಂಭಮೇಳದಿಂದ ಕೊರೋನ ಹೆಚ್ಚಾಗಿಲ್ಲ ಎಂದು ಸಂಸದೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ. ಮಂಗಳವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚುನಾವಣೆ ಘೋಷಣೆ ಮಾಡಿದ್ದು ಚುನಾವಣಾ ಆಯೋಗ. ಚುನಾವಣಾ ರ್‍ಯಾಲಿಯಲ್ಲಿ ಎಲ್ಲಾ ಪಕ್ಷದವರು ಭಾಗಿಯಾಗಿದ್ದಾರೆ. ಚುನಾವಣೆ ಇಲ್ಲದ ರಾಜ್ಯಗಳಲ್ಲೂ ಕೊರೋನ ಜಾಸ್ತಿಯಾಗಿದೆ. ಕುಂಭಮೇಳದಲ್ಲಿ ರಾಜ್ಯದ ಕೆಲವೇ ಮಂದಿ ಭಾಗವಹಿಸಿದ್ದು, ರ್‍ಯಾಲಿ, ಕುಂಭಮೇಳದಿಂದ ಕೊರೋನ ಹೆಚ್ಚಾಗಿದೆ ಎಂಬುದು …

Read More »

ಟೆಸ್ಟ್ , ಟ್ರ್ಯಾಕ್, ಟ್ರೀಟ್ ಮೂರನ್ನೂ ರಾಜ್ಯ ಬಿಜೆಪಿ ಸರ್ಕಾರ ನಿರ್ಲಕ್ಷಿಸಿದೆ: ಬಿಜೆಪಿ ಆಡಳಿತದ ವಿರುದ್ದ ಕಾಂಗ್ರೆಸ್‌ ವಾಗ್ದಾಳಿ

ಬೆಂಗಳೂರು: ಕೊರೊನಾ ಲಾಕ್‌ಡೌನ್‌ ಕಾರಣದಿಂದಾಗಿ ಆತಂಕಕ್ಕೆ ಒಳಗಾದ ಹಲವಾರು ಕಾರ್ಮಿಕರು, ವಿದ್ಯಾರ್ಥಿಗಳು ತಮ್ಮ ಊರಿಗೆ ತೆರಳುತ್ತಿದ್ದಾರೆ. ಆದರೆ “ಸರ್ಕಾರ ಊರಿಗೆ ತೆರಳುವವರಿಗೆ ಬಸ್ ವ್ಯವಸ್ಥೆ ಜೊತೆಗೆ ಸೋಂಕು ಪರೀಕ್ಷೆ, ಐಸೋಲೇಶನ್ ನಿಯಮ ರೂಪಿಸಿಲ್ಲ. ಇದು ಸರ್ಕಾರದ ಬೌದ್ಧಿಕ ದಿವಾಳಿತನಕ್ಕೆ ಸಾಕ್ಷಿ” ಎಂದು ಪ್ರತಿಪಕ್ಷ ಕಾಂಗ್ರೆಸ್‌ ಬಿಜೆಪಿ ಸರ್ಕಾರದ ವಿರುದ್ದ ವಾಗ್ದಾಳಿ ನಡೆಸಿದೆ. ಈ ಬಗ್ಗೆ ತನ್ನ ಅಧಿಕೃತ ಟ್ವೀಟ್‌ ಮಾಡಿರುವ ಕಾಂಗ್ರೆಸ್‌, “ಹಿಂದಿನ ಲಾಕ್‌ಡೌನ್‌ನಿಂದ ಗಾರ್ಮೆಂಟ್ಸ್ ಉದ್ಯಮ ಇನ್ನೂ ಹೊರಬಂದಿಲ್ಲ, …

Read More »

ಜನರ ಸಾವು, ನೋವು, ಸಂಕಟ, ಕಣ್ಣೀರಿಗೆ ರಾಜ್ಯ ಸರ್ಕಾರ ಕಾರಣ’

ಬೆಂಗಳೂರು: ‘ಕೋವಿಡ್‌ ತಾಂತ್ರಿಕ ಸಲಹಾ ಸಮಿತಿಯ ವರದಿಯನ್ನು ರಾಜ್ಯ ಸರ್ಕಾರ ಸಂಪೂರ್ಣ ನಿರ್ಲಕ್ಷಿಸಿದ್ದು ಜನರ ಸಾವು, ನೋವು, ಸಂಕಟ, ಕಣ್ಣೀರಿಗೆ ಕಾರಣ’ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಕಿಡಿಕಾರಿದರು. ಸುದ್ದಿಗೋಷ್ಠಿಯಲ್ಲಿ ಮಂಗಳವಾರ ಮಾತನಾಡಿದ ಅವರು, ‘ಕೇಂದ್ರ ಮತ್ತು ರಾಜ್ಯ ಸರ್ಕಾರ ತಮ್ಮ ಬೇಜವಾಬ್ದಾರಿ ಹಾಗೂ ನಿರ್ಲಕ್ಷ್ಯತನದ ಬದಲಿಗೆ ಲಾಕ್‌ಡೌನ್ ಘೋಷಿಸಿ ದುಡಿಯುವ ವರ್ಗ ಮತ್ತು ಸಮುದಾಯಗಳನ್ನು ಹಸಿವಿಗೆ ದೂಡಿವೆ’ ಎಂದರು. ‘ಲಕ್ಷಾಂತರ ಮಂದಿ ಆರೋಗ್ಯ ಸವಲತ್ತು ಸಿಗದೆ …

Read More »

ಚುನಾವಣಾ ಫಲಿತಾಂಶ ದಿನದಂದು ರಾಜಕೀಯ ಪಕ್ಷಗಳ ವಿಜಯೋತ್ಸವ ನಿಷೇಧ : ಚುನಾವಣಾ ಆಯೋಗದಿಂದ ಮಹತ್ವದ ನಿರ್ಧಾರ

ನವದೆಹಲಿ : ದೇಶದಲ್ಲಿ ಕೊರೊನಾ ವೈರಸ್ ಸೋಂಕಿನ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಮೇ.2 ರ ಚುನಾವಣಾ ಫಲಿತಾಂಶ ದಿನದಂದು ರಾಜಕೀಯ ಪಕ್ಷಗಳ ವಿಜಯೋತ್ಸವಕ್ಕೆ ನಿಷೇಧ ಹೇರಿ ಚುನಾವಣಾ ಆಯೋಗ ಮಹತ್ವದ ನಿರ್ಧಾರ ಆದೇಶ ಹೊರಡಿಸಿದೆ. ದೇಶದಲ್ಲಿ ಕೊರೊನಾ ವೈರಸ್ ಸೋಂಕಿನ ಅಬ್ಬರ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಚುನಾವಣಾ ಆಯೋಗ ರಾಜಕೀಯ ಪಕ್ಷಗಳ ವಿಜಯೋತ್ಸವಕ್ಕೆ ನಿಷೇಧ ಹೇರಿದ್ದು, ಚುನಾವಣೆ ಫಲಿತಾಂಶದ ಬಳಿಕ ವಿಜೇತ ಅಭ್ಯರ್ಥಿಯ ಜೊತೆಗೆ ಇಬ್ಬರಿಗಿಂತ ಹೆಚ್ಚು ಮಂದಿ …

Read More »

ಮೇ ೦೨ ರಂದು ಮುಂಜಾನೆ ೮ ಗಂಟೆಯಿಂದ ಬೆಳಗಾವಿR.P.D. ಮಹಾವಿದ್ಯಾಲಯದಲ್ಲಿ , ಮತ ಎಣಿಕೆ ಕೋವಿಡ್- 19 ನೆಗೆಟಿವ್ ವರದಿ ಕಡ್ಡಾಯ

ಬೆಳಗಾವಿ :  ಬೆಳಗಾವಿ ಲೋಕಸಭಾ ಮತಕ್ಷೇತ್ರಕ್ಕೆ ಸಂಬಂಧಿಸಿದಂತೆ ಉಪ ಚುನಾವಣೆ ಕುರಿತು ಮತ ಎಣಿಕೆ ಕಾರ್ಯ ಮೇ ೦೨ ರಂದು ಮುಂಜಾನೆ ೮ ಗಂಟೆಯಿಂದ ಬೆಳಗಾವಿಯ ರಾಣಿ ಪಾರ್ವತಿ ದೇವಿ ಮಹಾವಿದ್ಯಾಲಯದಲ್ಲಿ ನಡೆಯಲಿದ್ದು, ಮತ ಎಣಿಕೆ ಕೇಂದ್ರ ಪ್ರವೇಶಕ್ಕೆ ಕೋವಿಡ್-೧೯ ನೆಗೆಟಿವ್ ವರದಿ ಕಡ್ಡಾಯ ಎಂದು ಅಪರ ಜಿಲ್ಲಾಧಿಕಾರಿ ಯೋಗೇಶ್ವರ್ ಎಸ್.  ತಿಳಿಸಿದ್ದಾರೆ. ಮತ ಎಣಿಕೆ ದಿನದಂದು ಅಭ್ಯರ್ಥಿಗಳು/ ಅಧಿಕಾರಿಗಳು/ಸಿಬ್ಬಂದಿಗಳು ಹಾಗೂ ಮತ ಎಣಿಕೆ ಸಿಬ್ಬಂದಿ/ಮತ ಎಣಿಕೆ ಎಜೆಂಟರುಗಳಿಗೆ ಕೋವಿಡ್-೧೯ …

Read More »

ಮಲ್ಲಾಪೂರ ಪಿಜಿ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಕೋವಿಡ್ ಕೇರ್ ಸೆಂಟರ್ ಪ್ರಾರಂಭ. ಬಾಲಚಂದ್ರ ಜಾರಕಿಹೊಳಿ

ಗೋಕಾಕ : ತಾಲೂಕಿನ ಎಲ್ಲ ಅಧಿಕಾರಿಗಳು ಪರಸ್ಪರ ಸಮನ್ವಯತೆಯಿಂದ ಕಾರ್ಯನಿರ್ವಹಿಸಿದಲ್ಲಿ ಕೊರೋನಾ ಎರಡನೇ ಅಲೆಯನ್ನು ನಿಯಂತ್ರಿಸಲು ಸಾಧ್ಯ ಎಂದು ಕೆಎಂಎಫ್ ಅಧ್ಯಕ್ಷ ಹಾಗೂ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಅಧಿಕಾರಿಗಳಿಗೆ ಸೂಚಿಸಿದರು.   ಮಲ್ಲಾಪೂರ ಪಿಜಿ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ನೂತನವಾಗಿ ಕೋವಿಡ್ ಕೇರ್ ಸೆಂಟರ್ ಪ್ರಾರಂಭಿಸಿದ ಅಧಿಕಾರಿಗಳನ್ನುದ್ಧೇಶಿಸಿ ದೂರವಾಣಿಯಲ್ಲಿ ಮಾತನಾಡಿದರು. ಮಲ್ಲಾಪೂರ ಪಿಜಿ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಪ್ರಾರಂಭಿಸಿರುವ ಕೋವಿಡ್ ಕೇರ್ ಸೆಂಟರ್ ಸಕಲ ಸೌಲಭ್ಯಗಳನ್ನೊಳಗೊಂಡ …

Read More »

ಜೆಎಸ್‌ಎಸ್ ಆಸ್ಪತ್ರೆಯಲ್ಲಿ 500 ಹಾಸಿಗೆ ನೀಡಲು ಸುತ್ತೂರು ಶ್ರೀಗಳಲ್ಲಿ ಮನವಿ

ಮೈಸೂರು, ಏಪ್ರಿಲ್ 27: ಜೆಎಸ್‌ಎಸ್ ಆಸ್ಪತ್ರೆಯಲ್ಲಿ ಕೋವಿಡ್ ಚಿಕಿತ್ಸೆಗೆ 500 ಹಾಸಿಗೆಯನ್ನು ಮೈಸೂರು ಜಿಲ್ಲಾಡಳಿತಕ್ಕೆ ನೀಡುವಂತೆ ಸಹಕಾರ ಮತ್ತು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ ಸೋಮಶೇಖರ್ ಅವರು ಮಂಗಳವಾರ ಸುತ್ತೂರು ಮಠದ ಶ್ರೀ ಶಿವರಾತ್ರಿ ದೇಶೀಕೇಂದ್ರ ಸ್ವಾಮೀಜಿಗೆ ಮನವಿ ಮಾಡಿದರು. ಮಂಗಳವಾರ ಮೈಸೂರಿನ ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿರುವ ಸುತ್ತೂರು ಮಠಕ್ಕೆ ಆಗಮಿಸಿ, ಸುತ್ತೂರು ಶ್ರೀಗಳನ್ನು ಭೇಟಿ ಮಾಡಿದ ಸಚಿವ ಎಸ್.ಟಿ ಸೋಮಶೇಖರ್, ಕೋವಿಡ್ ಚಿಕಿತ್ಸೆಗೆ ನಿಮ್ಮ ಸಂಸ್ಥೆಯ ವ್ಯಾಪ್ತಿಯಲ್ಲಿರುವ …

Read More »

ಮನೆಯಲ್ಲಿ ದಿನಸಿ ಸಂಗ್ರಹಿಸಿದ ಜನರು

ರಾಯಚೂರು: ಲಾಕ್‌ಡೌನ್‌ ದಿನಗಳಲ್ಲಿ ಅಗತ್ಯ ದಿನಸಿ ಸಿಗುತ್ತವೆಯೋ ಇಲ್ಲವೋ ಅಥವಾ ದುಬಾರಿ ಆಗಬಹುದು ಎನ್ನುವ ಆತಂಕದೊಂದಿಗೆ ಜನರು ಮುಗಿಬಿದ್ದು ಸೋಮವಾರ ದಿನಸಿ ಖರೀದಿಸುತ್ತಿರುವುದು ಕಂಡುಬಂತು. ಎಪಿಎಂಸಿ ಆವರಣ, ಚಂದ್ರಮೌಳೇಶ್ವರ ವೃತ್ತ ಹಾಗೂ ಸರ್ದಾರ್‌ ವಲ್ಲಭಾಯ್‌ ಪಟೇಲ್‌ ವೃತ್ತ ಮಾರ್ಗದಲ್ಲಿರುವ ಮಳಿಗೆಗಳಲ್ಲಿ ಖರೀದಿ ಭಾರಾಟೆ ಜೋರಾಗಿತ್ತು. ಚೀಲಗಳನ್ನು ಹಿಡಿದು ಸರದಿ ನಿಂತಿದ್ದರು. ಸಾಮಾನ್ಯ ದಿಗಳಲ್ಲಿ ಒಂದು ಚೀಲದಲ್ಲಿ ಸರಕು ಖರೀದಿಸುತ್ತಿದ್ದವರು ಈಗ ಬೈಕ್‌, ಆಟೋ ಹಾಗೂ ಕಾರುಗಳಲ್ಲಿ ದಿನಸಿಗಳನ್ನು ತುಂಬಿಸಿಕೊಂಡು ಒಯ್ಯುತ್ತಿದ್ದಾರೆ. …

Read More »