ನವದೆಹಲಿ: ದೆಹಲಿ ಹೈಕೋರ್ಟ್ ನ್ಯಾಯಾಧೀಶರು ಮತ್ತು ಇತರ ನ್ಯಾಯಾಂಗ ಅಧಿಕಾರಿಗಳು ಮತ್ತು ಅವರ ಕುಟುಂಬಗಳಿಗೆ ಆದ್ಯತೆಯ ಆಧಾರದ ಮೇಲೆ ತನ್ನ ಆವರಣವನ್ನ ಕೋವಿಡ್-19 ಸೌಲಭ್ಯವಾಗಿ ಪರಿವರ್ತಿಸುವಂತೆ ಅಶೋಕ ಹೋಟೇಲ್ʼನ್ನ ಕೇಳುವಂತೆ ದೆಹಲಿ ಸರ್ಕಾರವನ್ನ ಕೋರಿಲ್ಲ ಎಂದು ದೆಹಲಿ ಹೈಕೋರ್ಟ್ ಮಂಗಳವಾರ ಸ್ಪಷ್ಟಪಡಿಸಿದೆ. ದೆಹಲಿ ಹೈಕೋರ್ಟ್ ದೆಹಲಿ ಸರ್ಕಾರಕ್ಕೆ ಈ ಮನವಿಯನ್ನ ಮಾಡಿದೆ ಎನ್ನುವ ತಪ್ಪು ಅಭಿಪ್ರಾಯವನ್ನ ಪ್ರಚಾರ ಮಾಡಲಾಗ್ತಿದೆ. ‘ಜನರು ಹಾಸಿಗೆ ಪಡೆಯಲು ಸಾಧ್ಯವಾಗದಿದ್ದಾಗ, ನಾವು ಪಂಚತಾರಾ ಹೋಟೆಲ್ʼನಲ್ಲಿ 100 …
Read More »Yearly Archives: 2021
ರಾಜ್ಯದಲ್ಲಿ ಕೊರೋನಾ ತಡೆಗೆ ಕಠಿಣ ನಿಯಮವಿದ್ರೂ ಮದ್ಯಪ್ರಿಯರಿಗೆ ರಾಜ್ಯ ಸರ್ಕಾರದಿಂದ ಗುಡ್ ನ್ಯೂಸ್
ಬೆಂಗಳೂರು: ಷರತ್ತು ವಿಧಿಸಿ ರಾಜ್ಯದಲ್ಲಿ ಮದ್ಯ ಮಾರಾಟಕ್ಕೆ ಅನುಮತಿ ನೀಡಲಾಗಿದೆ. ಅಬಕಾರಿ ಇಲಾಖೆಯಿಂದ ಮದ್ಯ ಮಾರಾಟಕ್ಕೆ ಅನುಮತಿ ನೀಡಲಾಗಿದ್ದು, ಬೆಳಗ್ಗೆ 6 ಗಂಟೆಯಿಂದ 10 ಗಂಟೆಯವರೆಗೆ ಮಾತ್ರ ಮದ್ಯ ಮಾರಾಟ ಮಾಡಬಹುದಾಗಿದೆ. ಸೀಲ್ಡ್ ಬಾಟಲ್ ಗಳಲ್ಲಿ ಪಾರ್ಸೆಲ್ ನೀಡಬೇಕು. ಎಂಆರ್ಪಿ ದರದಲ್ಲಿ ಮದ್ಯ ಮಾರಾಟ ಮಾಡಬೇಕು. ಗರಿಷ್ಠ ಎರಡು ಲೀಟರ್ ಬಿಯರ್ ಮಾತ್ರ ಖರೀದಿಸಬೇಕು. ಮದ್ಯ ಖರೀದಿ ವೇಳೆ ನೂಕಾಟ ಮಾಡುವಂತಿಲ್ಲ. ಮದ್ಯದಂಗಡಿಗಳಲ್ಲಿ ಸ್ಯಾನಿಟೈಸರ್ ವ್ಯವಸ್ಥೆ ಮಾಡಬೇಕು. ಸೂಪರ್ ಮಾರ್ಕೇಟ್ …
Read More »ಲಾಕ್ ಡೌನ್; ರಾತ್ರಿ 9ರ ನಂತರ ಸರ್ಕಾರಿ ಬಸ್ ಇಲ್ಲ
ಬೆಂಗಳೂರು, ಏಪ್ರಿಲ್ 27; ಕರ್ನಾಟಕ ಸರ್ಕಾರ ಕೋವಿಡ್ 2ನೇ ಅಲೆ ಹರಡುವಿಕೆ ತಡೆಯಲು 14 ದಿನಗಳ ಕಾಲ ಲಾಕ್ ಡೌನ್ ಘೋಷಣೆ ಮಾಡಿದೆ. ಮಂಗಳವಾರ ರಾತ್ರಿ 9 ಗಂಟೆಯಿಂದ ರಾಜ್ಯಾದ್ಯಂತ ಲಾಕ್ ಡೌನ್ ಜಾರಿಗೆ ಬರಲಿದೆ. ಕರ್ನಾಟಕ ಸರ್ಕಾರದ ಮಾರ್ಗಸೂಚಿ ಅನ್ವಯ ಅಗತ್ಯ ಸೇವೆಗಳ ಸರಕು ಸಾಗಣೆಗೆ ಮಾತ್ರ ವಾಹನ ಸಂಚಾರ ಇರುತ್ತದೆ. ಖಾಸಗಿ, ಸರ್ಕಾರಿ ಬಸ್‌ಗಳ ಸಂಚಾರ ರಾಜ್ಯಾದ್ಯಂತ ಸ್ಥಗಿತಗೊಳ್ಳಲಿದೆ. ಬೆಂಗಳೂರು ನಗರದಿಂದ ಇತರ ಪ್ರದೇಶಗಳಿಗೆ ತೆರಳುವ …
Read More »ಹುಟ್ಟೂರಿನಲ್ಲಿ ನೆರವೇರಿದ ನಿರ್ಮಾಪಕ ರಾಮು ಅಂತ್ಯ ಸಂಸ್ಕಾರ
ತುಮಕೂರು: ಕೋವಿಡ್‌ನಿಂದ ಮೃತಪಟ್ಟ ನಿರ್ಮಾಪಕ ಹಾಗೂ ನಟಿ ಮಾಲಾಶ್ರೀ ಪತಿ ರಾಮು ಅಂತ್ಯಕ್ರಿಯೆ ಕುಣಿಗಲ್ ತಾಲ್ಲೂಕಿನ ಕೊಡಗಿಹಳ್ಳಿ ಗ್ರಾಮದಲ್ಲಿರುವ ತೋಟದಲ್ಲಿ ಮಂಗಳವಾರ ಮಧ್ಯಾಹ್ನ ನೆರವೇರಿತು. ಕೋವಿಡ್ ನಿಯಮದಂತೆ ಅಂತ್ಯ ಸಂಸ್ಕಾರ ಮಾಡಲಾಯಿತು.ರಾಮು ಪಾರ್ಥೀವ ಶರೀರಕ್ಕೆ ಮಾಲಾಶ್ರೀ ಅಂತಿಮ ನಮನ ಸಲ್ಲಿಸಿದರು. ಪುತ್ರ ಆರ್ಯನ್ ಅಂತ್ಯ ಸಂಸ್ಕಾರದ ವಿಧಿಗಳನ್ನು ನೆರವೇರಿಸಿ ಚಿತೆಗೆ ಅಗ್ನಿ ಸ್ಪರ್ಶ ಮಾಡಿದರು. ಪುತ್ರಿ ಅನನ್ಯ ಇದ್ದರು. ಕೋವಿಡ್‌ನಿಂದ ಬಳಲುತ್ತಿದ್ದ ಚಿತ್ರ ನಿರ್ಮಾಪಕ, ನಟಿ ಮಾಲಾಶ್ರೀ ಅವರ ಪತಿ …
Read More »ಅಥಣಿ ಹೆಸ್ಕಾಂನಲ್ಲಿ ಭಾರಿ ಭ್ರಷ್ಟಾಚಾರ!
ಅಥಣಿ: ಪಟ್ಟಣ ಮತ್ತು ತಾಲೂಕಿನ ವಿವಿಧ ಗ್ರಾಮಗಳಲ್ಲಿ ಹೊಸದಾಗಿ ನಿರ್ಮಾಣಗೊಳ್ಳುತ್ತಿರುವ ಹಾಗೂ ನಿರ್ಮಾಣಗೊಂಡ ನೂತನ ಬಡಾವಣೆಗಳಿಗೆ ವಿದ್ಯುತ್ ಸಂಪರ್ಕ ನೀಡುವಾಗ ಸಾಕಷ್ಟು ಅವ್ಯವಹಾರ ನಡೆದ ಬಗ್ಗೆ ಸಾರ್ವಜನಿಕರಿಂದ ಚಿಕ್ಕೋಡಿಯ ಹೆಸ್ಕಾಂ ಜಾಗೃತದಳ ಪೊಲೀಸ್ ಠಾಣೆಗೆ ದೂರು ಹೋಗಿದ್ದವು. ಆ ದೂರುಗಳನ್ನಾಧರಿಸಿ ಹೆಸ್ಕಾಂ ಜಾಗೃತದಳ ಪರಿಶೀಲನೆ ನಡೆಸಿ, ಮೇಲ್ನೋಟಕ್ಕೆ ಅವ್ಯವಹಾರ ಕಂಡು ಬಂದಿದ್ದರಿಂದ ಕೆಲವು ಅಂಶಗಳ ಮಾಹಿತಿ ಕೋರಿ ನೋಟಿಸ್ ನೀಡಿದೆ. ಯಾವುದೇ ಪೂರ್ವಾನುಮತಿ ಇಲ್ಲದೆ ನೇರವಾಗಿ ಬಡಾವಣೆಗಳಿಗೆ ವಿದ್ಯುತ್ ಸಂಪರ್ಕ …
Read More »14 ದಿನ ಲಾಕ್ ಡೌನ್ ಹಿನ್ನೆಲೆ..ಗೋಕಾಕನಲ್ಲಿ ಮಧ್ಯಾಹ್ನವೇ ಅಂಗಡಿ-ಮುಂಗಟ್ಟು ಬಂದ್
ಸರಕಾರದ ಕೊರಾನಾ ಹೊಸ ಮಾರ್ಗಸೂಚಿ ಬೆನ್ನಲ್ಲೆ ಗೋಕಾಕದಲ್ಲಿ ಅಂಗಡಿ ಮುಗ್ಗಟುಗಳನ್ನು ಬಂದ್ ಮಾಡಿಸಲು ಮುಂದಾದ ಪೋಲಿಸ್ ಮತ್ತು ನಗರಸಭೆ ಅಧಿಕಾರಿಗಳು. ಹೌದು ಕೊರಾನಾ2ಅಲೆಯು ತನ್ನ ಅಟ್ಟಹಾಸವನ್ನು ದಿನದಿನಕ್ಕೂ ಸಾವು ಪಡೆಯಯತ್ತಿರುವುದು ಒಂದು ಕಡೆಯಾದರೆ ಇನ್ನೊಂದು ಕಡೆ ಸಾರ್ವಜನಿಕರು ಕೊರಾನಾ ಬಗ್ಗೆ ನಿರ್ಲಕ್ಷ ವಹಿಸುತ್ತಿರುವುದು ಇನ್ನೊಂದು ಕಡೆ, ಹೇಗಾದರೂ ಮಾಡಿ ಕೊರಾನಾದಿಂದ ಸರಕಾರ ಸಾರ್ವಜನಿಕರನ್ನು ರಕ್ಷಿಸಲು ಹೊಸ ಮಾರ್ಗಸೂಚಿ ಸಂಜೆಯಿಂದ ಅನ್ವಯವಾಗಲೆಂದು ಬಿಡುಗಡೆ ಮಾಡಿತ್ತು, ಆದರೆ ಗೋಕಾಕ ನಗರದಲ್ಲಿ ಇವತ್ತು ಸಂಜೆ …
Read More »ʼಲಾಕ್ ಡೌನ್ʼ ಭೀತಿಯಿಂದ ಬೆಂಗಳೂರು ತೊರೆಯುತ್ತಿರುವ ಜನ
ರಾಜ್ಯದಲ್ಲಿ ಕೊರೊನಾ ವೈರಸ್ ತಾಂಡವವಾಡ್ತಿದೆ. ಅದರಲ್ಲೂ ವಿಶೇಷವಾಗಿ ಬೆಂಗಳೂರಿನಲ್ಲಿ ಡೆಡ್ಲಿ ವೈರಸ್ ಕಾಟ ಮಿತಿಮೀರಿದೆ. ಸೋಂಕು ನಿಯಂತ್ರಣಕ್ಕಾಗಿ ರಾಜ್ಯ ಸರ್ಕಾರ ಲಾಕ್ಡೌನ್ ಹೇರಿದ್ದು ರಾಜ್ಯ ರಾಜಧಾನಿಯ ಬಹುತೇಕ ಮಂದಿ ಕಳೆದ ವರ್ಷದಂತೆಯೇ ಈ ವರ್ಷವೂ ಸಹ ತವರೂರಿಗೆ ವಾಪಸ್ಸಾಗ್ತಾ ಇದ್ದಾರೆ. ಕೊರೊನಾ ಬಂದರೆ ವೈದ್ಯಕೀಯ ಸೌಲಭ್ಯ ಸಿಗದೇ ಹೋದರೆ ಎನ್ನುವ ಭಯ, ಲಾಕ್ಡೌನ್ನಿಂದಾಗಿ ಹೊಟ್ಟೆಪಾಡು ಹೇಗೆ ಎಂಬ ಆತಂಕ ಈ ಎಲ್ಲಾ ಕಾರಣಗಳಿಂದಾಗಿ ಬೆಂಗಳೂರಿನ ಬಹುತೇಕ ಮಂದಿ ಊರು ಖಾಲಿ …
Read More »ಕಳ್ಳರು ರಾತ್ರೋರಾತ್ರಿ ಎಟಿಎಂ ಮಷಿನ್ಅನ್ನೇ ಕದ್ದು, ಸಿಸಿಟಿವಿಯನ್ನು ಧ್ವಂಸಗೊಳಿಸಿ ಪರಾರಿ
ಬೀದರ್: ಕಳ್ಳರು ರಾತ್ರೋರಾತ್ರಿ ಎಟಿಎಂ ಮಷಿನ್ಅನ್ನೇ ಕದ್ದು, ಸಿಸಿಟಿವಿಯನ್ನು ಧ್ವಂಸಗೊಳಿಸಿ ಪರಾರಿಯಾಗಿರುವ ಘಟನೆ ಜಿಲ್ಲೆಯ ಔರಾದ್ ಪಟ್ಟಣದ ಉಪ್ಪೇ ಪೆಟ್ರೋಲ್ ಬಂಕ್ ಬಳಿ ನಡೆದಿದೆ. ಪೆಟ್ರೋಲ್ ಬಂಕ್ ಎದುರಿನ ಇಂಡಿ ಕ್ಯಾಶ್ ಎಟಿಎಂ ಮಷಿನ್ ಕಳೆದ ರಾತ್ರಿ ಕಳ್ಳತನವಾಗಿದೆ. ಕಳ್ಳರು ಯಂತ್ರವನ್ನೇ ಕದ್ದೊಯ್ದಿದ್ದಾರೆ.ಕಳ್ಳರು ಇದಕ್ಕೂ ಮೊದಲು ಸಿಸಿಟಿವಿಗಳನ್ನು ಧ್ವಂಸಗೊಳಿಸಿದ್ದಾರೆ. ದೃಶ್ಯಗಳನ್ನು ನೋಡಿದ್ರೆ ಹಗ್ಗದ ಒಂದು ಬದಿ ವಾಹನಕ್ಕೆ ಕಟ್ಟಿ ಮತ್ತೊಂದು ಬದಿ ಎಟಿಎಂ ಮಷಿನ್ಗೆ ಕಟ್ಟಿ ಕದ್ದೊಯ್ದಿರುವ ಶಂಕೆ ಮೂಡುತ್ತಿದೆ.ಸುದ್ದಿ …
Read More »ವರದಕ್ಷಿಣೆ ಕಿರುಕುಳಕ್ಕೆ ಮೂರು ತಿಂಗಳ ಗರ್ಭಿಣಿ ಬಲಿ
ಚಿಕ್ಕಬಳ್ಳಾಪುರ: ಮೂರು ತಿಂಗಳ ಗರ್ಭಿಣಿ ಅನುಮಾನಸ್ಪದವಾಗಿ ಸಾವನ್ನಪ್ಪಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ತಾಲೂಕಿನ ಕಾಶಾಪುರ ಗ್ರಾಮದಲ್ಲಿ ನಡೆದಿದೆ. ಪವಿತ್ರ (22) ಮೃತ ಮಹಿಳೆ. ಚಿಕ್ಕಬಳ್ಳಾಪುರ ಜಿಲ್ಲೆ ಬಾಗೇಪಲ್ಲಿ ತಾಲೂಕಿನ ದುಗ್ಗಿನಾಯ್ಕನಪಲ್ಲಿ ನಿವಾಸಿ ಪವಿತ್ರಾಳನ್ನ ಇದೇ ಬಾಗೇಪಲ್ಲಿ ತಾಲೂಕಿನ ಕಾಶಪುರ ಗ್ರಾಮದ ಮಧು ಕಳೆದ 5 ತಿಂಗಳ ಹಿಂದೆ ಮದುವೆ ಮಾಡಿಕೊಂಡಿದ್ದ. ಮದುವೆಯಾದ ನಂತರ ಪವಿತ್ರಳ ಗಂಡ ಮಧು ಹಾಗೂ ಆಕೆಯ ಅತ್ತೆ ವರದಕ್ಷಿಣೆಗಾಗಿ ಪ್ರತಿದಿನ ಒಂದಿಲ್ಲೊಂದು ರೀತಿಯಲ್ಲಿ ಹಿಯಾಳಿಸಿ …
Read More »ಸಚಿವನಾದ ನನಗೇ ಹೀಗಾದ್ರೆ ಜನಸಾಮಾನ್ಯರ ಪಾಡೇನು..? :ಎಂಟಿಬಿ ನಾಗರಾಜ್ ಪ್ರಶ್ನೆ
ನಿನ್ನೆ ನಡೆದ ಸಂಪುಟ ಸಭೆಯಯಲ್ಲಿ ಸಚಿವ ಎಂಟಿಬಿ ನಾಗರಾಜ್ ಆರೋಗ್ಯ ಸಚಿವ ಸುಧಾಕರ್ ಕಾರ್ಯ ವೈಫಲ್ಯತೆ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ ಎನ್ನಲಾಗಿದೆ. ಬೆಡ್ ಕೊಡಿಸಿ,ಆಸ್ಪತ್ರೆ ಸಿಗ್ತಿಲ್ಲ ಅಂತ ನನ್ನ ಕ್ಷೇತ್ರದಲ್ಲಿ ದಿನವೂ ಹಲವು ಕರೆಗಳು ಬರ್ತಿವೆ. ನಮ್ಮ ಸಂಬಂಧಿಕರಿಗೆ ಹಾಸಿಗೆ ಸಿಗದೇ ಪರದಾಡಿದ್ರು. ನಾನೇ ಖುದ್ದು ಆರೋಗ್ಯ ಸಚಿವರಿಗೆ ಮೂರು ಭಾರಿ ಕರೆ ಮಾಡಿದೆ. ಒಂದೇ ಒಂದು ಬೆಡ್ ಅಡ್ಜಸ್ಟ್ ಮಾಡೋಕೆ ಆಗಲಿಲ್ಲ. ಸಚಿವನಾದ ನನಗೇ ಹೀಗಾದ್ರೆ ಜನಸಾಮಾನ್ಯರ ಪಾಡೇನು..? …
Read More »