ಸ್ಯಾಂಡಲ್‍ವುಡ್ ನಟಿ ಮಾಲಾಶ್ರೀ ಅವರ ಪತಿ ನಿರ್ಮಾಪಕ ರಾಮು (52) ಅವರು ಕೊರೊನಾಗೆ ಬಲಿಯಾಗಿದ್ದಾರೆ. ಕಳೆದ ಒಂದು ವಾರದ ಹಿಂದೆ ಕೊರೊನಾ ದೃಢಪಟ್ಟಿದ್ದು, ಉಸಿರಾಟದ ತೊಂದರೆಯಿಂದಾಗಿ 3 ದಿನಗಳ ಹಿಂದೆ ಎಂಎಸ್ ರಾಮಯ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು ಚಿಕಿತ್ಸೆ ಫಲಕಾರಿಯಾಗದೇ ಇಂದು ಮೃತಪಟ್ಟಿದ್ದಾರೆ. ಎಕೆ 47, ಲಾಕಪ್ ಡೆತ್, ಕಲಾಸಿಪಾಳ್ಯ, ಸಿಬಿಐ ದುರ್ಗಾ, ಅರ್ಜುನಗೌಡ ಸೇರಿ ಹಲವು ಚಿತ್ರಗಳನ್ನು ನಿರ್ಮಿಸಿದ್ದರು. ಇವರು ಸ್ಯಾಂಡಲ್‍ವುಡ್‍ನಲ್ಲಿ ಕೋಟಿ ರಾಮು ಎಂದೇ ಹೆಸರು …
Read More »Yearly Archives: 2021
ಬಾಗಲಕೋಟೆ: ಕಾರಾಗೃಹಕ್ಕೂ ಒಕ್ಕರಿಸಿದ ಕೋವಿಡ್; ಓರ್ವ ಸಿಬಂದಿ ಸೇರಿ 39 ಕೈದಿಗಳಿಗೆ ಸೋಂಕು
ಬಾಗಲಕೋಟೆ : ನಗರದ ಜಿಲ್ಲಾ ಕೇಂದ್ರ ಕಾರಾಗೃಹದಲ್ಲಿ ಕೊರೊನಾ ದಾಳಿ ಇಟ್ಟಿದ್ದು, ಓರ್ವ ಸಿಬ್ಬಂದಿ ಸೇರಿ 40 ಜನರಿಗೆ ದೃಢಪಟ್ಟಿದೆ. ಜೈಲಿನಲ್ಲಿದ್ದ 39 ವಿಚಾರಣಾಧೀನ ಖೈದಿಗಳಿಗೆ ಹಾಗೂ ಓರ್ವ ಜೈಲಿನ ಸಿಬ್ಬಂದಿಗೂ ಕೊರೊನಾ ತಗುಲಿದೆ. ಎಪ್ರಿಲ್ 24 ರಂದು ಓರ್ವ ಖೈದಿಗೆ ಕೋವಿಡ್ ದೃಢವಾಗಿತ್ತು. ಆ ಹಿನ್ನೆಲೆ ಖೈದಿಗಳು ,ಸಿಬ್ಬಂದಿ ಸೇರಿದಂತೆ 200 ಜನರ ಟೆಸ್ಟ್ ಮಾಡಲಾಗಿತ್ತು. ಕೋವಿಡ್ ಹೇಗೆ ಬಂತು ಯಾವ ಮೂಲದಿಂದ ಬಂತು ಎಂದು ಆರೋಗ್ಯ ಇಲಾಖೆ …
Read More »ರಾಜ್ಯಗಳು ಲಾಕ್‌ಡೌನ್ ಘೋಷಿಸಿದ್ದರೂ ರೈಲುಗಳು ಮಾತ್ರ ಎಂದಿನಂತೆ ಸಂಚರಿಸಲಿವೆ.:ಭಾರತೀಯ ರೈಲ್ವೆ ಮಂಡಳಿ
ನವದೆಹಲಿ: ಹೆಚ್ಚುತ್ತಿರುವ ಕೋವಿಡ್-19 ಪ್ರಕರಣಗಳನ್ನು ನಿಯಂತ್ರಿಸಲು ಹಲವು ರಾಜ್ಯಗಳು ಲಾಕ್‌ಡೌನ್ ಘೋಷಿಸಿದ್ದರೂ ರೈಲುಗಳು ಮಾತ್ರ ಎಂದಿನಂತೆ ಸಂಚರಿಸಲಿವೆ. ಅಗತ್ಯಬಿದ್ದರೆ ವಿಶೇಷ ರೈಲುಗಳನ್ನು ಓಡಿಸಲಾಗುವುದು ಎಂದು ಭಾರತೀಯ ರೈಲ್ವೆ ಮಂಡಳಿಯು ತಿಳಿಸಿದೆ. ಪ್ರಸ್ತುತ ಮೇಲ್ ಮತ್ತು ಎಕ್ಸ್‌ಪ್ರೆಸ್ ಸೇರಿದಂತೆ ಶೇ 70ರಷ್ಟು ರೈಲುಗಳು ಕೋವಿಡ್ ಪೂರ್ವದಿಂದಲೂ ಕಾರ್ಯನಿರ್ವಹಿಸುತ್ತಿವೆ. ಅಲ್ಲದೇ, ಸುಮಾರು 330 ಬೇಸಿಗೆ ವಿಶೇಷ ರೈಲುಗಳು ಸಹ ಸಂಚರಿಸುತ್ತಿವೆ ಎಂದು ರೈಲ್ವೆ ಮಂಡಳಿಯ ಅಧ್ಯಕ್ಷ ಸುನೀತ್ ಶರ್ಮಾ ಹೇಳಿದ್ದಾರೆ. ‘ಮಹಾರಾಷ್ಟ್ರ, ದೆಹಲಿ, …
Read More »14 ದಿನ ಕರ್ನಾಟಕ ಲಾಕ್‌ಡೌನ್: ಬಸ್, ಕಾರು, ಆಟೊ ಸಂಚಾರವೂ ಇಲ್ಲ
ಬೆಂಗಳೂರು: ಕೋವಿಡ್ ಪ್ರಕರಣಗಳು ದಿನೇ ದಿನೇ ಹೆಚ್ಚುತ್ತಿರುವ ಕಾರಣ ಸಾರ್ವಜನಿಕರು ಮನೆ ಬಿಟ್ಟು ಹೊರಬರುವುದನ್ನು ತಡೆಯಲು ಮಂಗಳವಾರ (ಏ.27) ರಾತ್ರಿಯಿಂದಲೇ 14 ದಿನಗಳ ಕಾಲ (ಮೇ 12ರವರೆಗೆ) ರಾಜ್ಯಾದ್ಯಂತ ಲಾಕ್‌ಡೌನ್ ಮಾಡಲು ಸರ್ಕಾರ ತೀರ್ಮಾನಿಸಿದೆ. ಕೊರೊನಾ ಸೋಂಕಿನ ಸರಪಳಿ ತುಂಡರಿಸಿ, ಕೋವಿಡ್ ಪ್ರಕರಣಗಳನ್ನು ತಗ್ಗಿಸಲು ಸಾಧ್ಯ ಎಂಬುದಾಗಿ ತಜ್ಞರು ನೀಡಿದ ಸಲಹೆಯನ್ನು ಆಧರಿಸಿ ಸಚಿವ ಸಂಪುಟ ಸಭೆಯಲ್ಲಿ ಈ ನಿರ್ಧಾರ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಸೋಮವಾರ ಸುದ್ದಿಗೋಷ್ಠಿಯಲ್ಲಿ …
Read More »ಖಾಸಗಿ ಬಸ್ಸುಗಳಿಂದ ಸುಲಿಗೆ ಆರಂಭ: ದರ ಮೂರು ಪಟ್ಟು ಹೆಚ್ಚಳ!
ಬೆಂಗಳೂರು: ಕರ್ಫ್ಯೂ ಜಾರಿಯಾಗಿರುವುದನ್ನೇ ಬಂಡವಾಳ ಮಾಡಿಕೊಂಡಿರುವ ಖಾಸಗಿ ಬಸ್ ಕಂಪನಿಗಳು, ಏಕಾಏಕಿ ಪ್ರಯಾಣ ದರವನ್ನೂ ಮೂರು ಪಟ್ಟು ಏರಿಕೆ ಮಾಡಿವೆ. ಸೋಮವಾರ ಮಧ್ಯಾಹ್ನದವರೆಗೆ ಸಾಮಾನ್ಯ ಪ್ರಯಾಣ ದರವೇ ಇತ್ತು. ಆದರೆ, ಕರ್ಫ್ಯೂ ಘೋಷಣೆಯಾಗುತ್ತಿದ್ದಂತೆ ಪ್ರಯಾಣ ದರವನ್ನೂ ಹೆಚ್ಚಿಸಲಾಗಿದೆ. ಆನ್‌ಲೈನ್ ಮೂಲಕ ಸೀಟುಗಳ ಬುಕ್ಕಿಂಗ್ ಆರಂಭವಾಗಿದೆ. ಊರಿಗೆ ಹೋಗಲು ಸಿದ್ಧವಾಗಿರುವವರು ಅನಿವಾರ್ಯವಾಗಿಯೇ ದುಬಾರಿ ದರವನ್ನೇ ಕೊಟ್ಟು ಸೀಟು ಕಾಯ್ದಿರಿಸಿದ್ದಾರೆ. ಬೆಂಗಳೂರಿನಿಂದ ಹುಬ್ಬಳ್ಳಿ-ಧಾರವಾಡ, ಬೆಳಗಾವಿ, ಕಲಬುರ್ಗಿ, ವಿಜಯಪುರ, ಮಂಗಳೂರು ಸೇರಿದಂತೆ ಹಲವು ನಗರಗಳಿಗೆ …
Read More »ದೇಶದಲ್ಲಿ ಕೊರೊನಾ ಏರಿಕೆಗೆ ಚುನಾವಣಾ ಆಯೋಗವೇ ಕಾರಣ ಎಂದ ಮದ್ರಾಸ್ ಹೈಕೋರ್ಟ್
ಚೆನ್ನೈ, ಏಪ್ರಿಲ್ 27: ದೇಶದಲ್ಲಿ ಕೊರೊನಾ ಎರಡನೇ ಅಲೆ ಇಷ್ಟು ಆತಂಕಕಾರಿ ಮಟ್ಟದಲ್ಲಿ ಹರಡಲು ಚುನಾವಣಾ ಆಯೋಗವೇ ಕಾರಣ ಎಂದು ಮದ್ರಾಸ್ ಹೈಕೋರ್ಟ್ ಕಿಡಿಕಾರಿದೆ. ಅತ್ಯಂತ ಬೇಜವಾಬ್ದಾರಿಯಿಂದ ಚುನಾವಣಾ ಆಯೋಗ ವರ್ತಿಸುತ್ತಿದೆ. ಈ ಆಯೋಗದ ಅಧಿಕಾರಿಗಳ ವಿರುದ್ಧ ಕೊಲೆ ಪ್ರಕರಣವನ್ನೂ ದಾಖಲಿಸಿಕೊಳ್ಳಬಹುದು ಎಂದಿದೆ. ಮೇ 2ರಂದು ಮತ ಎಣಿಕೆ ನಡೆಸುವಾಗ ಕೊರೊನಾ ತಡೆ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ನಿರ್ದೇಶನ ನೀಡಬೇಕೆಂದು ಕೋರಿ ತಮಿಳುನಾಡು ಸಾರಿಗೆ ಸಚಿವ, ಎಐಎಡಿಎಂಕೆ ಅಭ್ಯರ್ಥಿ ಎಂ.ಆರ್. …
Read More »ತಾಯಿ ನಿಧನಕ್ಕೆ ಆಕ್ರೋಶಗೊಂಡ ಪೊಲೀಸ್ ಅಧಿಕಾರಿಯಿಂದ ವೈದ್ಯರ ಮೇಲೆ ಹಲ್ಲೆ..!
ಚಿಕಿತ್ಸೆ ಫಲಕಾರಿಯಾಗದೇ ತಾಯಿ ಮೃತಪಟ್ಟಿದ್ದಕ್ಕೆ ಆಕ್ರೋಶಗೊಂಡ ಪೊಲೀಸ್ ಇನ್ಸ್ಪೆಕ್ಟರ್ ವೈದ್ಯರ ಮೇಲೆ ಹಲ್ಲೆ ನಡೆಸಿದ ಘಟನೆ ಪ್ರಯಾಗ್ರಾಜ್ನ ಸ್ವರೂಪ್ ರಾಣಿ ನೆಹರು ಆಸ್ಪತ್ರೆಯಲ್ಲಿ ನಡೆದಿದೆ. ಚಿಕಿತ್ಸೆ ಪಡೆಯುತ್ತಿದ್ದ ವೇಳೆ ಪೊಲೀಸ್ ಅಧಿಕಾರಿಯ 72 ವರ್ಷದ ತಾಯಿ ಸಾವಿಗೀಡಾಗಿದ್ದದಾರೆ. ಇದರಿಂದ ಆಕ್ರೋಶಗೊಂಡ ಜುಲ್ಫೀಕರ್ ಅಲಿ ಹಾಗೂ ಆತನ ಸಹೋದರ ವೈದ್ಯರ ನಿರ್ಲಕ್ಷ್ಯದಿಂದ ಈ ರೀತಿ ಆಗಿದೆ ಎಂದು ಆರೋಪಿಸಿದ್ದಾರೆ. ಇಬ್ಬರು ಮೊಬೈಲ್ನಲ್ಲಿ ವಿಡಿಯೋ ಮಾಡಲು ಆರಂಭಿಸಿದ್ದಾರೆ. ಇದಕ್ಕೆ ವೈದ್ಯರು ತಡೆ ಒಡ್ಡುತ್ತಿದ್ದಂತೆಯೇ …
Read More »VTU’ನ ಎಲ್ಲಾ ಪರೀಕ್ಷೆ ಮುಂದೂಡಿಕೆ, ಇಲ್ಲಿದೆ ಅಧಿಕೃತ ಮಾಹಿತಿ
ಬೆಂಗಳೂರು : ರಾಜ್ಯದಲ್ಲಿ ಕೊರೊನಾ ಸೋಂಕಿನ ಪ್ರಕರಣಗಳು ಹೆಚ್ಚಳವಾಗುತ್ತಿರುವ ಹಿನ್ನೆಲೆ ರಾಜ್ಯದಲ್ಲಿ ನಾಳೆಯಿಂದ 14 ದಿನ ಕೊರೊನಾ ಕರ್ಪ್ಯೂ ಜಾರಿಗೊಳಿಸಲಾಗಿದೆ. ಈ ಹಿನ್ನೆಲೆ ವಿಶ್ವೇಶ್ವರ ತಾಂತ್ರಿಕ ವಿಶ್ವವಿದ್ಯಾಲಯದ ( VTU) ಎಲ್ಲಾ ಪರೀಕ್ಷೆಗಳು ಮುಂದೂಡಿಕೆಯಾಗಿದೆ ಎಂದು ವಿವಿ ಮಾಹಿತಿ ನೀಡಿದೆ. ಮುಂದಿನ ಆದೇಶದವರೆಗೂ ಪರೀಕ್ಷೆಗಳನ್ನು ಮುಂದೂಡಿ ವಿಟಿಯು ಆದೇಶ ಹೊರಡಿಸಿದೆ. ನಾಳೆ ಸಂಜೆಯಿಂದ 14 ದಿನಗಳ ಕಾಲ ರಾಜ್ಯದಲ್ಲಿ ‘ಕೊರೊನಾ ಕರ್ಪ್ಯೂ’ ಜಾರಿಗೊಳಿಸಿ ರಾಜ್ಯ ಸರ್ಕಾರ ಮಹತ್ತರ ಆದೇಶ ಹೊರಡಿಸಿದೆ. …
Read More »ಸರ್ಕಾರದ ನಿಯಮಗಳಿಂದ ತೊಂದರೆಗೊಳಗಾಗುವವರಿಗೆ ಆರ್ಥಿಕ ಪ್ಯಾಕೇಜ್ ನೀಡುವಂತೆ ಡಿಕೆಶಿ ಆಗ್ರಹ
ಬೆಂಗಳೂರು: ರಾಜ್ಯದಲ್ಲಿ 15 ದಿನಗಳ ಕಠಿಣ ಕರ್ಫ್ಯೂ ಮಾಡುವ ಬಗ್ಗೆ ಸರ್ಕಾರ ಘೋಷಣೆ ಮಾಡಿದ ಬೆನ್ನಲ್ಲೇ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಪ್ರತಿಕ್ರಿಸಿದ್ದು, ‘ಜನರ ಆರೋಗ್ಯ ಕಾಪಾಡಲು ಯಾವುದೇ ಕ್ರಮಗಳನ್ನು ತೆಗೆದುಕೊಂಡರೂ ನಮ್ಮ ಅಭ್ಯಂತರ ಇಲ್ಲ. ಆದರೆ, ಈ ಕಠಿಣ ನಿಯಮಗಳಿಂದ ತೊಂದರೆಗೊಳಗಾಗುವವರಿಗೆ ಸರ್ಕಾರ ಆರ್ಥಿಕ ಪ್ಯಾಕೇಜ್ ಘೋಷಿಸಬೇಕು’ ಎಂದು ಆಗ್ರಹಿಸಿದ್ದಾರೆ. ‘ಸರ್ಕಾರದ ದಿಢೀರ್ ತೀರ್ಮಾನಗಳಿಂದ ಎಲ್ಲ ವರ್ಗದ ಜನರು ಸಂಕಷ್ಟಕ್ಕೆ ಸಿಲುಕಿದ್ದಾರೆ. ರಾಜ್ಯದಲ್ಲಿ ಉದ್ಯೋಗ ಸೃಷ್ಟಿ ಮಾಡಿ, …
Read More »ಬೆಳಗಾವಿ ನಗರ ಸಿಸಿಬಿ ತಂಡ ದಾಳಿ ನಡೆಸಿ ಅಕ್ರಮವಾಗಿ ರೆಮ್‌ಡಿಸಿವರ್ ಔಷಧಿಯನ್ನು ಮಾರಾಟ ಮಾಡುತ್ತಿದ್ದ ಇಬ್ಬರನ್ನು ಬಂಧಿಸಿದೆ.
ಬೆಳಗಾವಿ – ಬೆಳಗಾವಿ ನಗರ ಸಿಸಿಬಿ ತಂಡ ದಾಳಿ ನಡೆಸಿ ಅಕ್ರಮವಾಗಿ ರೆಮ್‌ಡಿಸಿವರ್ ಔಷಧಿಯನ್ನು ಮಾರಾಟ ಮಾಡುತ್ತಿದ್ದ ಇಬ್ಬರನ್ನು ಬಂಧಿಸಿದೆ. ನಗರದಲ್ಲಿ ಕೋವಿಡ್-೧೯ ರೋಗಿಗಳಿಗೆ ನೀಡುವ ರೆಮ್‌ಡಿಸಿವರ್ ಔಷಧಿಯನ್ನು ಅಕ್ರಮ/ಕಾಳ ಸಂತೆಯಲ್ಲಿ ಮಾರಾಟ ಮಾಡುವಂಥರನ್ನು ಪತ್ತೆ ಮಾಡಿ ಕಾನೂನು ಕ್ರಮ ಜರುಗಿಸುವಂತೆ ಡಾ|| ತ್ಯಾಗರಾಜನ್. ಕೆ. ಪೊಲೀಸ್ ಆಯುಕ್ತರು, ಸಿಟಿ ಕ್ರೈಂ ಬ್ರಾಂಚನ್ ಪಿಐ ನಿಂಗನಗೌಡ ಪಾಟೀಲ ರವರಿಗೆ ಸೂಚಿಸಿದ್ದರು. ಸಿಕ್ಕ ಖಚಿತ ಮಾಹಿತಿಯಂತೆ ಆರೋಪಿಯೊಂದಿಗೆ ತಮ್ಮ ಸಿಬ್ಬಂದಿಯೊಬ್ಬರ ಮುಖಾಂತರ …
Read More »