Breaking News

Yearly Archives: 2021

ಕೊರೊನಾ ಹಿನ್ನೆಲೆ ತರಕಾರಿ ಮಾರುಕಟ್ಟೆ ಸ್ಥಳಾಂತರ- ಕೊಳ್ಳುವವರೂ ಇಲ್ಲ, ಮಾರುವವರೂ ಇಲ್

ಧಾರವಾಡ/ಗದಗ: ಕೊರೊನಾ ಪ್ರಕರಣಗಳು ಹೆಚ್ಚಳವಾಗುತ್ತಿರುವ ಹಿನ್ನೆಲೆ, ಧಾರವಾಡ ಮಹಾನಗರ ಪಾಲಿಕೆ ಧಾರವಾಡ ತರಕಾರಿ ಮಾರುಕಟ್ಟೆಯನ್ನು ನಗರದ ಕೆಇ ಬೊರ್ಡ್ ಶಾಲೆಯ ಆವರಣಕ್ಕೆ ಸ್ಥಳಾಂತರಿಸಿದೆ. ಆದರೆ ಅಲ್ಲಿ ಕೊಳ್ಳವವರೂ ಬರುತ್ತಿಲ್ಲ, ಮಾರುವವರೂ ಬರುತ್ತಿಲ್ಲ. ಹೀಗಾಗಿ ಆವರಣ ಬಿಕೋ ಎನ್ನುತ್ತಿದೆ. ವ್ಯಾಪಾರಕ್ಕೆ ಬರುವವರಿಗೆ ಇಗಾಗಲೇ ಪಾಲಿಕೆ ಮಾರ್ಕಿಂಗ್ ಮಾಡಿ ಜಾಗ ಗುರುತಿಸುವ ಕೆಲಸ ಮಾಡುತ್ತಿದೆ. ಅಲ್ಲದೆ ಕೆಲವೇ ಕೆಲವು ತರಕಾರಿ ವ್ಯಾಪಾರಿಗಳು ಮಾತ್ರ ಸ್ಥಳಕ್ಕೆ ಆಗಮಿಸಿದ್ದಾರೆ. ಆದರೆ ವ್ಯಾಪಾರ ಇಲ್ಲದ ಕಾರಣ ಮೊದಲಿನ …

Read More »

ಮದುವೆ ದಿನವೇ ಪೊಲೀಸ್ ಠಾಣೆ ಮೆಟ್ಟಿಲೇರಿದ ನವದಂಪತಿ

ಚಿಕ್ಕೋಡಿ: ಕೊರೊನಾ ರಣಕೇಕೆ ಹಿನ್ನೆಲೆ ರಾಜ್ಯಾದ್ಯಂತ ಸಭೆ, ಮದುವೆ ಸಮಾರಂಭಗಳಿಗೆ ಸರ್ಕಾರ ಕಟ್ಟು ನಿಟ್ಟಿನ ನಿಯಮ ಜಾರಿಗೊಳಿಸಿದೆ. ಆದರೆ ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಸಂಕೇಶ್ವರ ಪಟ್ಟಣದಲ್ಲಿ ಕೋವಿಡ್ ನಿಯಮದ ನಡುವೆಯೂ ಅದ್ಧೂರಿ ಮದುವೆ ಆಯೋಜಿಸಿದ್ದ ವಧ ವರನ ಮೇಲೆ ಪ್ರಕರಣ ದಾಖಲಾಗಿದೆ. ಕೋವಿಡ್ ನಿಯಂತ್ರಣಕ್ಕೆ ಸರ್ಕಾರ ಜಾರಿಗೊಳಿಸುರುವ ಕೊರೊನಾ ಟಫ್ ರೂಲ್ಸ್ ಬ್ರೇಕ್ ಮಾಡಿ ಸಂಕೇಶ್ವರ ಪಟ್ಟಣದ ನೀಡಸೊಸಿ ರಸ್ತೆಯಲ್ಲಿರುವ ಮಿಲನ್ ಹಾಲ್ ದಲ್ಲಿ ಅದ್ಧೂರಿ ಮದುವೆ ಆಯೋಜನೆ …

Read More »

ಹೇಗಿರುತ್ತೆ ವೀಕೆಂಡ್ ಕರ್ಫ್ಯೂ

ಬೆಂಗಳೂರು: ಕೊರೊನಾ ನಿಯಂತ್ರಣಕ್ಕೆ ರಾಜ್ಯಾದ್ಯಂತ ಕಠಿಣ ನಿಯಮಗಳು ಜಾರಿಯಾಗಿದ್ದು, ಎರಡು ದಿನಗಳ ಕಾಲ ಕರ್ನಾಟಕ ಸಂಪೂರ್ಣ ಬಂದ್ ಆಗಲಿದೆ. ಇಂದು ರಾತ್ರಿ 9ಗಂಟೆಯಿಂದ ಸೋಮವಾರ ಬೆಳಿಗ್ಗೆ 6 ಗಂಟೆಯವರೆಗೆ ವೀಕೆಂಡ್ ಕರ್ಫ್ಯೂ ಜಾರಿಯಾಗಿದ್ದು, ಏನೆಲ್ಲ ಇರುತ್ತೆ, ಯಾರಿಗೆಲ್ಲ ನಿರ್ಬಂಧ ವಿಧಿಸಲಾಗಿದೆ ಎಂಬುದನ್ನು ಕಂದಾಯ ಸಚಿವ ಆರ್.ಅಶೋಕ್ ತಿಳಿಸಿದ್ದಾರೆ. ಎರಡು ದಿನಗಳ ಕಾಲ ರಾಜ್ಯದಲ್ಲಿ ವಾರಾಂತ್ಯದ ಕರ್ಫ್ಯೂ ಜಾರಿಯಲ್ಲಿದ್ದು, ಸಂಪೂರ್ಣ ಬಂದ್ ವಾತಾವರಣವಿರಲಿದೆ. ಮೆಡಿಕಲ್ ಸೇವೆ ಹೊರತುಪಡಿಸಿ ಉಳಿದ ಸೇವೆಗಳಿಗೆ ನಿರ್ಬಂಧ …

Read More »

ಸಂತೆಗೆ ಬರುವ ಗ್ರಾಹಕರ, ವ್ಯಾಪಾರಿಗಳ ಕೊವಿಡ್ ಟೆಸ್ಟ್

ಬೆಳಗಾವಿ: ರಾಜ್ಯದಲ್ಲಿ ಕೊರೊನಾ ಎರಡನೇ ಅಲೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಮಹಾರಾಷ್ಟ್ರದ ಗಡಿಗೆ ಹೊಂದಿಕೊಂಡಿರುವ ಜಿಲ್ಲೆಯ ಹುಕ್ಕೇರಿ ತಾಲೂಕಿನ ಸಂಕೇಶ್ವರ ಪಟ್ಟಣದಲ್ಲಿ ಪುರಸಭೆ ಅಧಿಕಾರಿಗಳು ಹೊಸ ಐಡಿಯಾ ಮಾಡಿದ್ದಾರೆ. ಸಂತೆಯಲ್ಲೇ ಕೋವಿಡ್ ಟೆಸ್ಟ್ ಮಾಡಲು ಪುರಸಭೆ ಹಾಗೂ ಆರೋಗ್ಯ ಇಲಾಖೆ ಅಧಿಕಾರಿಗಳು ಮುಂದಾಗಿದ್ದು, ಶುಕ್ರವಾರ ಸಂತೆಗೆ ಬರುವ ಗ್ರಾಹಕರು ಹಾಗೂ ವ್ಯಾಪಾರಿಗಳ ಕೊರೊನಾ ಪರೀಕ್ಷೆಯನ್ನು ಸ್ಥಳದಲ್ಲೇ ಮಾಡುತ್ತಿದ್ದಾರೆ. ವಾರದ ಸಂತೆ ಹಿನ್ನೆಲೆ ಸಂತೆಗೆ ನೂರಾರು ಜನ ಆಗಮಿಸುತ್ತಾರೆ, ಈ ಹಿನ್ನೆಲೆಯಲ್ಲಿ ಕಠಿಣ …

Read More »

ಸಂಕಷ್ಟಕ್ಕೆ ಮಿಡಿದ ಎಂ.ಬಿ.ಪಾಟೀಲ್‌ಗೆ ಧನ್ಯವಾದ: ಸುಧಾಕರ್

ವಿಜಯಪುರ/ಬೆಂಗಳೂರು, ಏಪ್ರಿಲ್ 23: ಮಾಜಿ ಸಚಿವರಾದ ಎಂ.ಬಿ.ಪಾಟೀಲ್ ತಮ್ಮ ಆಸ್ಪತ್ರೆಯಲ್ಲಿ ಕಡಿಮೆ ದರಕ್ಕೆ ಸೇವೆ ನೀಡಿ ಕೊರೊನಾ ಸಂಕಷ್ಟದ ಪರಿಸ್ಥಿತಿ ನಿಭಾಯಿಸಲು ಸಹಕಾರ ನೀಡಿದ್ದಾರೆ. ಇದೇ ರೀತಿ ಆಸ್ಪತ್ರೆಗಳು, ವೈದ್ಯಕೀಯ ಸಂಸ್ಥೆಗಳು ಜನರ ಸಂಕಷ್ಟಕ್ಕೆ ಮಿಡಿಯಬೇಕು ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಮನವಿ ಮಾಡಿದ್ದಾರೆ. ವಿಜಯಪುರದ ಬಿಎಲ್‌ಡಿಇ ಮೆಡಿಕಲ್ ಕಾಲೇಜಿನ ಮುಖ್ಯಸ್ಥರಾದ ಮಾಜಿ ಸಚಿವ ಎಂ.ಬಿ.ಪಾಟೀಲ್ ಕೊರೊನಾದಿಂದಾಗಿ ಬಾಧಿತರಾಗಿರುವ ಜನರ ಸಂಕಷ್ಟಕ್ಕೆ ಸ್ಪಂದಿಸಿದ್ದಾರೆ. ರಾಜ್ಯ ಸರ್ಕಾರದಿಂದ …

Read More »

ಕೊರೋನಾ ಸೋಂಕಿನ ಹೆಚ್ಚಳ’ದ ಈ ಸಂದರ್ಭದಲ್ಲಿ, ನಿಮ್ಮ ಬಳಿ ಇರಲಿ, ಈ ‘ಸಹಾಯವಾಣಿ’ ಸಂಖ್ಯೆಗಳು.!

ರಾಜ್ಯದಲ್ಲಿ ಕೊರೋನಾ 2ನೇ ಅಲೆಯ ಅಬ್ಬರಿಸುತ್ತಿದೆ. ದಿನವೊಂದಕ್ಕೆ 10 ಸಾವಿರಕ್ಕೂ ಹೆಚ್ಚು ಕೊರೋನಾ ಸೋಂಕಿನ ಪ್ರಕರಣಗಳು ವರದಿಯಾಗುತ್ತಿವೆ. ಇಂತಹ ಸಂದರ್ಭದಲ್ಲಿ ರಾಜ್ಯ ಸರ್ಕಾರದಿಂದ ಕೊರೋನಾ ಸೋಂಕಿನ ತುರ್ತು ಸಂದರ್ಭದ ಸಹಾಯಕ್ಕಾಗಿ ಸಹಾಯವಾಣಿ ಕೂಡ ಆರಂಭಿಸಲಾಗಿದೆ. ನಿಮಗೆ ಬೇಕಾದ ಮಾಹಿತಿಯನ್ನು ನೀವು ಕುಳಿತಲ್ಲೇ ಒಂದು ಕರೆ ಮಾಡುವ ಮೂಲಕ ಪಡೆಯಬಹುದಾಗಿದೆ. ಹೌದು.. ರಾಜ್ಯ ಆರೋಗ್ಯ ಇಲಾಖೆಯೂ ಕೊರೋನಾ ಸೋಂಕಿನ ಪ್ರಕರಣಗಳ ಸಂಖ್ಯೆ ಹೆಚ್ಚಳದಿಂದಾಗಿ, ರಾಜ್ಯದ ಸಾರ್ವಜನಿಕರಿಗೆ ಉಪಯೋಗವಾಗುವ ರೀತಿಯಲ್ಲಿ ಸಹಾಯವಾಣಿ ಸಂಖ್ಯೆ …

Read More »

ಬೆಂಗಳೂರಲ್ಲಿ ಇಂದು 15,244 ಹೊಸ ಪ್ರಕರಣ

ಬೆಂಗಳೂರು: ರಾಜ್ಯದಲ್ಲಿ ಕೋವಿಡ್‌ ಪೀಡಿತರ ಸಂಖ್ಯೆ ದಿನೇ ದಿನೆ ಏರುತ್ತಲೇ ಇದೆ. ಗುರುವಾರ ಒಟ್ಟು 25,795 ಮಂದಿಯಲ್ಲಿ ಸೋಂಕು ದೃಢಪಟ್ಟಿದ್ದು, 123 ಮಂದಿ ಮೃತರಾಗಿದ್ದಾರೆ. ರಾಜ್ಯದಲ್ಲಿ ಕೋವಿಡ್‌ ಕಾಣಿಸಿಕೊಂಡ ನಂತರ 24 ಗಂಟೆಗಳ ಅವಧಿಯಲ್ಲಿ ವರದಿಯಾದ ಗರಿಷ್ಠ ಪ್ರಕರಣ ಇದಾಗಿದೆ. ರಾಜ್ಯದ ವಿವಿಧೆಡೆ ಕೋವಿಡ್‌ ತೀವ್ರಗತಿಯಲ್ಲಿ ಏರುತ್ತಿದೆ. ಹೀಗಾಗಿ ಪರೀಕ್ಷೆಗಳ ಸಂಖ್ಯೆಯನ್ನೂ ಹೆಚ್ಚಿಸಲಾಗಿದೆ. ಗುರುವಾರ ಒಟ್ಟು 1.62 ಲಕ್ಷ ಮಾದರಿಗಳನ್ನು ಪರೀಕ್ಷಿಸಲಾಗಿದೆ. ಸೋಂಕು ದೃಢ ಪ್ರಮಾಣ ಶೇ 15.87ಕ್ಕೆ ಏರಿಕೆಯಾಗಿದೆ. …

Read More »

ಬನಶಂಕರಿ ದೇವಸ್ಥಾನಕ್ಕೆ ಭಕ್ತರ ಪ್ರವೇಶಕ್ಕೆ ನಿಷೇಧ

ಬಾದಾಮಿ: ಉತ್ತರ ಕರ್ನಾಟಕದ ಪ್ರಸಿದ್ಧ ಧಾರ್ಮಿಕ ಕೇಂದ್ರ ಸುಕ್ಷೇತ್ರ ಬಾದಾಮಿ ಬನಶಂಕರಿ ದೇವಸ್ಥಾನಕ್ಕೆ ಭಕ್ತರ ಪ್ರವೇಶವನ್ನು ನಿಷೇ ಧಿಸಲಾಗಿದೆ. ಜಿಲ್ಲೆಯಲ್ಲಿ ಕೊರೊನಾ ಎರಡನೇ ಅಲೆಯ ಭೀತಿ ಹಿನ್ನೆಲೆಯಲ್ಲಿ ಜಿಲ್ಲೆಯ ಐತಿಹಾಸಿಕ, ಧಾರ್ಮಿಕ ಕೇಂದ್ರ, ಪ್ರಮುಖ ಶಕ್ತಿ ಪೀಠಗಳಲ್ಲಿ ಒಂದಾದ ಬಾದಾಮಿಯ ಬನಶಂಕರಿ ದೇವಸ್ಥಾನಕ್ಕೆ ಭಕ್ತರ ಪ್ರವೇಶವನ್ನು ನಿಷೇಧಿಸಿ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ. ಜಿಲ್ಲೆಯಲ್ಲಿ ಕೊರೊನಾ ರೋಗಿಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಇದರಿಂದ ಗುಂಪು ಸೇರುವುದು, ಜಾತ್ರೆ, ಉತ್ಸವ ನಿಷೇಧ ಮಾಡಲಾಗಿದೆ. …

Read More »

18 ಇಲಾಖೆ ಸಿಬಂದಿಗೆ ರಜೆ ಇಲ್ಲ

ಬೆಂಗಳೂರು: ರಾಜ್ಯದಲ್ಲಿ ಕೋವಿಡ್‌ ಸೋಂಕು ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಪ್ರಮುಖ 18 ಇಲಾಖೆಗಳ ಅಧಿಕಾರಿ, ಸಿಬಂದಿ ಕಡ್ಡಾಯವಾಗಿ ಕರ್ತವ್ಯಕ್ಕೆ ಹಾಜರಾಗಬೇಕು. ಅಲ್ಲದೆ ಅವರು ಕೇಂದ್ರ ಸ್ಥಾನ ತೊರೆಯದಂತೆ ಸರಕಾರ ಕಟ್ಟುನಿಟ್ಟಿನ ಸೂಚನೆ ನೀಡಿದೆ. ಪ್ರಮುಖವಾದ ಆರೋಗ್ಯ, ವೈದ್ಯಕೀಯ ಶಿಕ್ಷಣ, ಒಳಾಡಳಿತ, ಕಂದಾಯ, ಗ್ರಾಮೀಣಾಭಿವೃದ್ಧಿ, ನಗರಾಭಿವೃದ್ಧಿ, ಆಹಾರ, ಸಾರಿಗೆ, ವಾರ್ತಾ, ಇಂಧನ, ಖಜಾನೆ, ಸಿಬಂದಿ ಮತ್ತು ಆಡಳಿತ ಸುಧಾರಣೆ, ಪಶುಸಂಗೋಪನೆ, ಕಾರ್ಮಿಕ, ಅರಣ್ಯ, ಕೃಷಿ, ಕೃಷಿ ಮಾರುಕಟ್ಟೆ ಹಾಗೂ ತೋಟಗಾರಿಕೆಯು ಅಗತ್ಯ …

Read More »

ಮಹಾರಾಷ್ಟ್ರದ ಕೋವಿಡ್ ಆಸ್ಪತ್ರೆಯಲ್ಲಿ ಬೆಂಕಿ ಅವಘಡ; ಐಸಿಯುನಲ್ಲಿದ್ದ 13 ರೋಗಿಗಳು ಸಾವು!

ಮುಂಬೈ (ಏ. 23): ಮಹಾರಾಷ್ಟ್ರದಲ್ಲಿ ಇಂದು ಮುಂಜಾನೆ ಭಾರೀ ದುರಂತವೊಂದು ನಡೆದಿದ್ದು, ಕೋವಿಡ್-19 ಸೆಂಟರ್​ಗೆ ಬೆಂಕಿ ಹೊತ್ತಿಕೊಂಡ ಪರಿಣಾಮ 13 ಕೊರೋನಾ ರೋಗಿಗಳು ಸಜೀವ ದಹನವಾಗಿದ್ದಾರೆ. ಮಹಾರಾಷ್ಟ್ರದ ಪಲ್ಘಾರ್ ಜಿಲ್ಲೆಯ ವಾಸೈನಲ್ಲಿನ ವಿಜಯ್ ವಲ್ಲಭ ಆಸ್ಪತ್ರೆಯಲ್ಲಿ ಈ ಘಟನೆ ನಡೆದಿದೆ. ಇನ್ನೂ ಅನೇಕ ರೋಗಿಗಳಿಗೆ ಸುಟ್ಟ ಗಾಯಗಳಾಗಿದ್ದು, ಅವರನ್ನು ಹತ್ತಿರದ ಆಸ್ಪತ್ರೆಗೆ ದಾಖಲಿಸಲಾಗಿದೆ. ಬೆಂಕಿ ಹೊತ್ತಿಕೊಂಡಿದ್ದರಿಂದ ಐಸಿಯುನಲ್ಲಿದ್ದ 13 ರೋಗಿಗಳು ಸಾವನ್ನಪ್ಪಿದ್ದು, ಉಳಿದ ಮೂರ್ನಾಲ್ಕು ಕೊರೋನಾ ರೋಗಿಗಳ ಸ್ಥಿತಿ ಚಿಂತಾಜನಕವಾಗಿದೆ. …

Read More »