ಬೆಂಗಳೂರು: ರಾಜ್ಯದಲ್ಲಿ ಕೊರೊನಾ 2ನೇ ಅಲೆಯ ಸೋಂಕಿತರಲ್ಲಿ ಹೆಚ್ಚು ಕಡಿಮೆ ಅರ್ಧಕ್ಕರ್ಧದಷ್ಟು ಯುವಜನರೇ ಇದ್ದು, ಈ ಪೈಕಿ 63 ಮಂದಿ ಸಾವಿಗೀಡಾಗಿದ್ದಾರೆ. ಕೊರೊನಾ ವಯಸ್ಸಾದವರಲ್ಲಿ ಹೆಚ್ಚಾಗಿರುತ್ತದೆ ಹಾಗೂ ಬೇರೆ ಕಾಯಿಲೆಗಳು ಇದ್ದವರು ಮತ್ತು ವಯಸ್ಸಾದವರು ಮಾತ್ರ ಸಾವಿಗೀಡಾಗುತ್ತಾರೆ ಎಂಬ ಭಾವನೆ ಜನರಲ್ಲಿದೆ. ಅದಕ್ಕೆ ವಿರುದ್ಧವಾದ ವಿದ್ಯಮಾನ ಈಗ ಕಂಡು ಬರುತ್ತದೆ. ಎರಡನೇ ಅಲೆಗೆ ಹೆಚ್ಚು 20ರಿಂದ 40 ವರ್ಷದ ಯುವಜನರೇ ಹೆಚ್ಚಾಗಿ ಬಲಿಯಾಗುತ್ತಿದ್ದಾರೆ. ಅಲ್ಲದೆ, ಯಾವುದೇ ಆನಾರೋಗ್ಯ ಇಲ್ಲದಿದ್ದವರೂ ತೀವ್ರ …
Read More »Yearly Archives: 2021
ಭಾರತದಲ್ಲಿ ಒಂದೇ ದಿನದಲ್ಲಿ 73,600 ಕೋವಿಡ್ ಲಸಿಕೆ ಕೇಂದ್ರಗಳ ಕಾರ್ಯಾಚರಣೆ
ನವದೆಹಲಿ : ಭಾರತದಲ್ಲಿ ಸೋಮವಾರ ಒಂದೇ ದಿನದಲ್ಲಿ 73,600 ಕೊರೋನಾ ಲಸಿಕೆ ಕೇಂದ್ರಗಳು ಕಾರ್ಯನಿರ್ವಹಿಸುವ ಮೂಲಕ ಇಲ್ಲಿವರೆಗಿನ ಅತ್ಯಂತ ಹೆಚ್ಚಿನ ಲಸಿಕಾ ಕೇಂದ್ರ ಕಾರ್ಯಾಚರಣೆಗೆ ಸಾಕ್ಷಿಯಾಯಿತು. ಇದು ಒಂದು ದಿನದಲ್ಲಿ ದೇಶಾದ್ಯಂತ ಸರಾಸರಿ 45,000 ಕ್ರಿಯಾತ್ಮಕ ಸಿವಿಸಿಗಳಿಗಿಂತ 28,600 ಹೆಚ್ಚಾಗಿದೆ. ಸೋಮವಾರ ರಾತ್ರಿ 8 ಗಂಟೆಯವರೆಗೆ ಭಾರತದಲ್ಲಿ 31 ಲಕ್ಷಕ್ಕೂ ಹೆಚ್ಚು ಲಸಿಕೆ ಡೋಸ್ ಗಳನ್ನು ನೀಡಲಾಯಿತು. ಫಲಾನುಭವಿಗಳಲ್ಲಿ ಸುಮಾರು 21.7 ಲಕ್ಷ ಜನರು ತಮ್ಮ ಮೊದಲ ಡೋಸ್ ಪಡೆಯುತ್ತಿದ್ದರು …
Read More »ಲಾಕ್ಡೌನ್ ಘೋಷಣೆಯಾಗುತ್ತಿದ್ದಂತೆ ಮದ್ಯ ಖರೀದಿಗೆ ಮುಗಿಬಿದ್ದ ಮದ್ಯಪ್ರಿಯರು
ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಕೊರೊನಾ ಸೋಂಕು ವ್ಯಾಪಕವಾಗಿ ಹರಡುತ್ತಿದ್ದು, ನಿಯಂತ್ರಣಕ್ಕೆ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ನೇತೃತ್ವದ ಸರ್ಕಾರ 6 ದಿನ ಲಾಕ್ ಡೌನ್ ಘೋಷಿಸಿದೆ. ಸೋಮವಾರ ರಾತ್ರಿಯಿಂದಲೇ ದೆಹಲಿಯಲ್ಲಿ ಲಾಕ್ಡೌನ್ ಜಾರಿಯಲ್ಲಿದೆ. ಲಾಕ್ಡೌನ್ ಘೋಷಣೆಯಾಗುತ್ತಿದ್ದಂತೆ ಮದ್ಯಪ್ರಿಯರು ಮದ್ಯ ಖರೀದಿಗೆ ಮುಗಿಬಿದ್ದ ದೃಶ್ಯಗಳು ಕಂಡು ಬಂದಿವೆ. ದೆಹಲಿಯಲ್ಲಿ ಪರಿಸ್ಥಿತಿ ಕೈ ಮೀರಿದ್ದು, ಸೋಂಕು ತಡೆಗೆ ಲಾಕ್ಡೌನ್ ಜಾರಿಮಾಡಲಾಗಿದೆ. ಸಿಎಂ ಕೇಜ್ರಿವಾಲ್ ಅವರು, ಇದು ಸಣ್ಣ ಪ್ರಮಾಣದ ಲಾಕ್ ಡೌನ್ ಆಗಿದ್ದು, …
Read More »ಮುಷ್ಕರ ನಿರತ ಸಾರಿಗೆ ನೌಕರರು ಮತ್ತು ಸರ್ಕಾರದ ನಡುವೆ ಯಾವುದೇ ಸಂಧಾನದ ಪ್ರಕ್ರಿಯೆ ನಡೆದಿಲ್ಲ” ಲಕ್ಷ್ಮಣ ಸವದಿ
ಬೆಂಗಳೂರು: ಮುಷ್ಕರ ನಿರತ ಸಾರಿಗೆ ನೌಕರರು ಮತ್ತು ಸರ್ಕಾರದ ನಡುವೆ ಸಂಧಾನದ ಮಾತುಕತೆ ನಡೆದಿದೆ ಎಂದು ಕೆಲವು ಮಾಧ್ಯಮಗಳಲ್ಲಿ ವರದಿಯಾಗಿರುವುದು ನನ್ನ ಗಮನಕ್ಕೆ ಬಂದಿದೆ. ಆದರೆ ಆ ರೀತಿಯ ಯಾವುದೇ ಸಂಧಾನದ ಪ್ರಕ್ರಿಯೆ ನಡೆದಿಲ್ಲ ಎಂದು ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಸ್ಪಷ್ಟನೆ ನೀಡಿದ್ದಾರೆ. ಸಾರಿಗೆ ನೌಕರರ ಮುಷ್ಕರದ ಪ್ರಾರಂಭದ ಸಂದರ್ಭದಲ್ಲಿಯೇ ಮುಖ್ಯಮಂತ್ರಿಗಳು ಯಾವುದೇ ಮಾತುಕತೆ, ಸಂಧಾನದ ಅವಶ್ಯಕತೆ ಇರುವುದಿಲ್ಲ. ಮೊದಲು ಸಾರಿಗೆ ನೌಕರರು ಕರ್ತವ್ಯಕ್ಕೆ ಹಾಜರಾಗಲಿ ಎಂದು ತಾಕೀತು …
Read More »ಮೋಯಿನ್ ಅಲಿ ಮೋಡಿ- ರಾಜಸ್ಥಾನ ವಿರುದ್ಧ ಚೆನ್ನೈಗೆ 45 ರನ್‍ಗಳ ಭರ್ಜರಿ ಜಯ
ಮುಂಬೈ: ಚೆನ್ನೈ ತಂಡದ ಸಿನ್ಪರ್ ಮೋಯಿನ್ ಅಲಿಯವರ ಮೋಡಿಗೆ ತಲೆ ಬಾಗಿದ ರಾಜಸ್ಥಾನ ರಾಯಲ್ಸ್ ತಂಡ ಚೆನ್ನೈ ವಿರುದ್ಧ 45 ರನ್‍ಗಳ ಸೋಲು ಕಂಡಿದೆ. ಚೆನ್ನೈ ಪರ ಬಿಗುವಿನ ದಾಳಿ ಸಂಘಟಿಸಿದ ಮೋಯಿನ್ ಅಲಿ 3 ಓವರ್ ಎಸೆದು 7 ರನ್ ನೀಡಿ ಡೇವಿಡ್ ಮಿಲ್ಲರ್, ರಿಯಾನ್ ಪರಾಗ್ ಮತ್ತು ಕ್ರಿಸ್ ಮೋರಿಸ್ ಅವರ ಪ್ರಮುಖ 3 ವಿಕೆಟ್ ಪಡೆಯುವ ಮೂಲಕ ಚೆನ್ನೈ ಗೆಲುವಿನ ರೊವಾರಿಯಾದರು. ಚೆನ್ನೈ ನೀಡಿದ 189 …
Read More »ಮುಂಬೈನಲ್ಲಿ ಕರ್ಫ್ಯೂ: ಬಾಯ್ ಫ್ರೆಂಡ್ ಜೊತೆ ಮಾಲ್ಡೀವ್ಸ್‌ಗೆ ಹಾರಿದ ನಟಿ ಆಲಿಯಾ ಭಟ್
ಕೊರೊನಾ ಎರಡನೇ ಅಲೆ ಹೆಚ್ಚಾಗಿದ್ದು, ದಿನದಿಂದ ದಿನಕ್ಕೆ ಸೋಂಕಿತರ ಸಂಖ್ಯೆ ಏರಿಯಾಗುತ್ತಿದೆ. ಕೊರೊನಾ ನಿಯಂತ್ರಣಕ್ಕೆ ಈಗಾಗಲೇ ಅನೇಕ ಕಡೆ ಕರ್ಫ್ಯೂ ಜಾರಿ ಮಾಡಲಾಗಿದೆ. ಮುಂಬೈನಲ್ಲಿ ಕರ್ಫ್ಯೂ ಜಾರಿಯಾಗಿದ್ದು, ಅನೇಕ ಬಾಲಿವುಡ್ ಕಲಾವಿದರು ಮುಂಬೈ ತೊರೆದಿದ್ದಾರೆ. ಸಿನಿಮಾ ಕೆಲಸಗಳಿಗೆ ಬ್ರೇಕ್ ಬಿದ್ದ ಪರಿಣಾಮ ಸಮಯ ಕಳೆಯಲು ಸಿನಿ ತಾರೆಯರು ತಮ್ಮ ನೆಚ್ಚಿನ ಸ್ಥಳಕ್ಕೆ ಹೋಗುತ್ತಿದ್ದಾರೆ. ಇತ್ತೀಚಿಗಷ್ಟೆ ದೀಪಿಕಾ ಮತ್ತು ರಣ್ವೀರ್ ಸಿಂಗ್ ದಂಪತಿ ಮುಂಬೈ ತೊರೆದು ಬೆಂಗಳೂರಿಗೆ ಬಂದಿದ್ದಾರೆ. ಅನೇಕರು ಮುಂಬೈನಿಂದ …
Read More »ಸ್ವತಃ ಲಾಕ್ ಡೌನ್ ಹೇರಿಕೊಂಡ ಗ್ರಾಮಸ್ಥರು
ಬೀದರ್ : ಕೊರೊನಾ ಅಟ್ಟಹಾಸಕ್ಕೆ ಗಡಿ ಜಿಲ್ಲೆ ನಲುಗಿ ಹೋಗುತ್ತಿದೆ. ಈ ನಿಟ್ಟಿನಲ್ಲಿ ಸರ್ಕಾರವು ಸಾಕಷ್ಟು ರೂಲ್ಸ್ ಜಾರಿಗೊಳಿಸುತ್ತಿದೆ. ಸದ್ಯ ಗ್ರಾಮಸ್ಥರೇ ಇಲ್ಲಿ ಸ್ವಯಂ ಲಾಕ್ ಡೌನ್ ಘೋಷಿಸಿಕೊಳ್ಳುತ್ತಿದ್ದಾರೆ. ಹೌದು! ಜಿಲ್ಲೆಯಲ್ಲಿ ಪ್ರತಿ ದಿನ 400ರ ಆಸುಪಾಸಿನಲ್ಲಿ ಕೇಸ್ ಗಳು ದಾಖಲಾಗುತ್ತಿವೆ. ಇದರಿಂದ ಭಯಗೊಂಡ ಗ್ರಾಮಸ್ಥರು ಸ್ವಯಂ ಲಾಕ್ ಡೌನ್ ಹೇರಿಕೊಳ್ಳುತ್ತಿರುವ ಘಟನೆ ಬೀದರ್ ನಲ್ಲಿ ನಡೆದಿದೆ. ಗ್ರಾಮದ ಹಿರಿಯರು, ಜನಪ್ರತಿನಿಧಿಗಳು ಸೇರಿಕೊಂಡು ಮಹಾಮಾರಿಗೆ ಕಡಿವಾಣ ಹಾಕಲು ಈ ನಿರ್ಧಾರ …
Read More »ಸಿಎಂ ಆಸ್ಪತ್ರೆಯಲ್ಲಿದ್ದಾರೆ, ಬಿಜೆಪಿ ಸರ್ಕಾರ ಐಸಿಯುನಲ್ಲಿದೆ – ಸಿದ್ದರಾಮಯ್ಯ
ಬೆಂಗಳೂರು: ಕೊರೊನಾ ನಿಯಂತ್ರಣದಲ್ಲಿ ಸರ್ಕಾರ ವಿಫಲವಾಗಿದೆ. ಸಿಎಂ ಬಿಎಸ್ ವೈ ಆಸ್ಪತ್ರೆಯಲ್ಲಿದ್ದಾರೆ, ರಾಜ್ಯ ಬಿಜೆಪಿ ಸರ್ಕಾರ ಐಸಿಯುನಲ್ಲಿದ್ದಾರೆ ಎಂದು ಸಾಲುಸಾಲಾಗಿ ಟ್ವೀಟ್ ಮಾಡುವ ಮೂಲವಾಗಿ ವಿಪಕ್ಷ ನಾಯಕ ಸಿದ್ದರಾಮಯ್ಯ ಬಿಜೆಪಿ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ. ಕೊರೊನಾ ಎರಡನೇ ಅಲೆ ದಿನದಿಂದ ದಿನಕ್ಕೆ ಮಾರಣಾಂತಿಕವಾಗುತ್ತಿದ್ದು, ಸೋಂಕು ಹರಡುವುದನ್ನು ತಡೆಯಲಿಕ್ಕಾಗದ ರಾಜ್ಯ ಬಿಜೆಪಿ ಸರ್ಕಾರ ಜನತೆಯ ಮುಂದೆ ಬೆತ್ತಲಾಗುತ್ತಿದೆ. ತನ್ನ ವೈಫಲ್ಯವನ್ನು ಮುಚ್ಚಿಕೊಳ್ಳುವ ವಿಫಲ ಪ್ರಯತ್ನದಲ್ಲಿ ತೊಡಗಿದೆ. ಕೊರೊನಾ ಸೋಂಕಿತರಿಗೆ ಸರ್ಕಾರಿ …
Read More »ಲಾಕ್‍ಡೌನ್ ಮಾಡಿದ್ರೆ ಜನ ಸಾಯ್ತಾರೆ, ಸೆಕ್ಷನ್ 144 ತನ್ನಿ: ಸಿ.ಎಂ.ಇಬ್ರಾಹಿಂ
ಬೆಂಗಳೂರು: ಲಾಕ್‍ಡೌನ್ ಮಾಡಿದ್ರೆ ಜನರು ಸಾಯ್ತಾರೆ. ಅದರ ಬದಲಾಗಿ ಬೆಂಗಳೂರಿನಲ್ಲಿ ಸೆಕ್ಷನ್ 144 ಜಾರಿಗೆ ತರಬೇಕು. ಎಲ್ಲದಕ್ಕೂ ಲಾಕ್‍ಡೌನ್ ಪರಿಹಾರ ಅಲ್ಲ ಎಂದು ಕಾಂಗ್ರೆಸ್ ಎಂಎಲ್‍ಸಿ ಸಿ.ಎಂ.ಇಬ್ರಾಹಿಂ ಹೇಳಿದ್ದಾರೆ. ಸಿಎಂ, ಸಚಿವರು, ಬೆಂಗಳೂರಿನ ಶಾಸಕರ ಜೊತೆಗಿನ ಸಭೆ ಬಳಿಕ ಸಿಎಂ ಇಬ್ರಾಹಿಂ ಮಾಧ್ಯಮಗಳ ಜೊತೆ ಮಾತನಾಡಿದರು. ಸರ್ಕಾರ ಸಂಪೂರ್ಣವಾಗಿ ಗೊಂದಲದಲ್ಲಿದ್ದು, ಗಂಟು ಹಾಕಿ ಹೊಳೆಯಲ್ಲಿ ಬಿಟ್ಟಂತಾಗಿದೆ. ರಾಜ್ಯದಲ್ಲಿ ಬೆಡ್, ಆಕ್ಸಿಜನ್, ಇಂಜೆಕ್ಷನ್, ಲಸಿಕೆ ಮತ್ತು ಔಷಧಿಗಳ ಕೊರತೆ ಇದೆ. ಈ …
Read More »ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ ಕೆಎಲ್‍ಇ ಸಂಸ್ಥೆಯ ಸಿ.ಎಸ್.ಅಂಗಡಿ ಪದವಿಪೂರ್ವ ಮಹಾವಿದ್ಯಾಲಯದ 32 ವಿದ್ಯಾರ್ಥಿಗಳು
ಗೋಕಾಕ: ನಗರದ ಕೆಎಲ್‍ಇ ಸಂಸ್ಥೆಯ ಸಿ.ಎಸ್.ಅಂಗಡಿ ಪದವಿಪೂರ್ವ ಮಹಾವಿದ್ಯಾಲಯದ 32 ವಿದ್ಯಾರ್ಥಿಗಳು ಪದವಿಪೂರ್ವ ಮಹಾವಿದ್ಯಾಲಯಗಳ ಇಲಾಖಾ ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ ವಿವಿಧ ಕ್ರೀಡೆಗಳಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳನ್ನು ಸಂಸ್ಥೆಯ ವತಿಯಿಂದ ಸತ್ಕರಿಸಲಾಯಿತು. ಬಾಲಕರ ವಿಭಾಗ ಖೋಖೋ: ಸುನೀಲ ಹಳ್ಳೂರ, ಪರಮೇಶ್ವರ ಬಬಲೇನ್ನವರ, ಗೋಪಾಲ ಪರಮೋಜಿ, ಲಕ್ಷ್ಮೀಕಾಂತ ದಂಡಿನ. ಬಾಸ್ಕೇಟ್ ಬಾಲ್ ಕಾರ್ತಿಕ ಹೂಲಿ, ಶಿವಕುಮಾರ ನವನೇರ, ರೋಹಿತ ಕುಂದರಗಿ, ಮಾಸುಮ್ ಮುಲ್ಲಾ, ವಿಕಾಸ ಪಟವಾರಿ. …
Read More »