ಬೆಂಗಳೂರು, ಏ.19-ಮುಷ್ಕರದಲ್ಲಿ ಭಾಗಿಯಾಗಿರುವ ಕೆಲವು ಉದ್ಯೋಗಿಗಳ ಅಮಾನತು ಆದೇಶಗಳನ್ನು ಹಿಂತೆಗೆದುಕೊಳ್ಳುವ ಮತ್ತು ಭವಿಷ್ಯದಲ್ಲಿ ವಜಾಗೊಳಿಸಿದ ಆದೇಶಗಳನ್ನು ರದ್ದುಗೊಳಿಸುವಂತಹ ಯಾವುದೇ ನಿಬಂಧನೆ ಅಥವಾ ಆಲೋಚನೆ ಸರ್ಕಾರದ ಮಟ್ಟದಲ್ಲಿ ಇಲ್ಲ ಎಂದು ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ಸ್ಪಷ್ಟಪಡಿಸಿದೆ. ಮುಷ್ಕರವನ್ನು ಪ್ರೋತ್ಸಾಹಿಸುವ ಮತ್ತು ಕರ್ತವ್ಯಕ್ಕೆ ಗೈರುಹಾಜರಾದವರ ವಿರುದ್ಧ ಬಿಎಂಟಿಸಿ ಕಠಿಣ ಕ್ರಮ ಕೈಗೊಳ್ಳುತ್ತಿದೆ. ಅಮಾನತು ಅಥವಾ ವಜಾಗೊಳಿಸಿದ ನಂತರ ಅನೇಕ ಉದ್ಯೋಗಿಗಳು ಯೂನಿಯನ್ ಭಯದಿಂದಾಗಿ ಕೆಲಸಕ್ಕೆ ಬರಲಿಲ್ಲ ಎಂದು ಹೇಳಿಕೊಂಡಿದ್ದಾರೆ. ಕೆಲಸಕ್ಕೆ ಮರಳುವ …
Read More »Yearly Archives: 2021
ಜಿಲ್ಲಾ ಮತ್ತು ತಾಲ್ಲೂಕು ಪಂಚಾಯತ್ ಚುನಾವಣೆ ಮುಂದೂಡಿಕೆ..?
ಬೆಂಗಳೂರು,ಏ.19-ರಾಜ್ಯದಲ್ಲಿ ಕೋವಿಡ್-19 ಸೋಂಕು ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಬಹುನಿರೀಕ್ಷಿತ ಜಿಲ್ಲಾ ಮತ್ತು ತಾಲ್ಲೂಕು ಪಂಚಾಯತ್ ಚುನಾವಣೆ ಮುಂದೂಡುವುದು ಖಚಿತವಾಗಿದೆ. ಬೆಂಗಳೂರಿನಲ್ಲಿ ಈ ಬಗ್ಗೆ ಸುಳಿವು ನೀಡಿರುವ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‍ರಾಜ್ ಸಚಿವ ಕೆ.ಎಸ್.ಈಶ್ವರಪ್ಪ , ಜಿಲ್ಲಾ ಮತ್ತು ತಾಲ್ಲೂಕು ಪಂಚಾಯ್ತಿ ಚುನಾವಣೆಯನ್ನು ಮುಂದೂಡುವ ಬಗ್ಗೆ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿ ಚುನಾವಣಾ ಆಯೋಗಕ್ಕೆ ಮನವಿ ಮಾಡುತ್ತೇವೆ ಎಂದು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. ರಾಜ್ಯದಲ್ಲಿ ಕೋವಿಡ್ ಸೋಂಕಿನ ಪ್ರಕರಣಗಳು ನಮ್ಮ ನಿರೀಕ್ಷೆಗೂ ಮೀರಿ …
Read More »ನಿಷ್ಠಾವಂತ ಸಿಬ್ಬಂದಿಗಳ ರಕ್ಷಣೆಗೆ ಬದ್ಧ: ಕೆಎಸ್‌ಆರ್‌ಟಿಸಿ
ಬೆಂಗಳೂರು, ಏ.19-ಕರ್ತವ್ಯಕ್ಕೆ ಹಾಜರಾಗುವ ಸಿಬ್ಬಂದಿಗಳ ಮೇಲೆ ಹಲ್ಲೆ ಹಾಗೂ ಬಸ್ಸುಗಳ ಮೇಲೆ ಕಲ್ಲು ತೂರಾಟ ನಡೆಸುವ ದುಷ್ಕರ್ಮಿಗಳು ಕಠಿಣ ಪರಿಣಾಮವನ್ನು ಎದುರಿಸಬೇಕಾಗುತ್ತದೆ ಎಂದು ಕೆಎಸ್‌ಆರ್‌ಟಿಸಿ ತಿಳಿಸಿದೆ. ಕರ್ತವ್ಯಕ್ಕೆ ಹಾಜರಾಗುವ ನಮ್ಮ ನಿಷ್ಠಾವಂತ ಸಿಬ್ಬಂದಿಗಳಿಗೆ ಸೂಕ್ತ ರಕ್ಷಣೆ ನೀಡಲಾಗುವುದುಎಂದು ಕೆಎಸ್‌ಆರ್‌ಟಿಸಿ ಅಧಿಕೃತ ಪ್ರಕಟಣೆ ತಿಳಿಸಿದೆ. ಬಸ್ಸುಗಳ ಕಾರ್ಯಾಚರಣೆಯಲ್ಲಿನ ಏರಿಕೆಯಿಂದಾಗಿ ಮುಷ್ಕರ ನಿರತರು ವಿಚಲಿತರಾಗಿದ್ದಾರೆ. ನಿಷ್ಠಾವಂತ ಸಿಬ್ಬಂದಿಗಳ ಮೇಲೆ ಹಲ್ಲೇ , ಬಸ್ಸುಗಳಿಗೆ ಕಲ್ಲು ಹೊಡೆಯುವುದನ್ನು ಹೆಚ್ಚು ಮಾಡುತ್ತಿದ್ದಾರೆ ಎಂದು ಆರೋಪಿಸಿದೆ. ಈ …
Read More »ಶಿಕ್ಷಣ ಸಚಿವ ಸುರೇಶ್ ಕುಮಾರ್ ಆಪ್ತ ಸಹಾಯಕ ಕೋವಿಡ್‌ಗೆ ಬಲಿ
ಬೆಂಗಳೂರು: ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್. ಸುರೇಶ್ ಕಮಾರ್ ಅವರ ಆಪ್ತ ಸಹಾಯಕ ಎಚ್.ಜೆ. ರಮೇಶ್ ಅವರು ಕೋವಿಡ್‌ಗೆ ಸೋಮವಾರ ಬೆಳಿಗ್ಗೆ ಬಲಿಯಾಗಿದ್ದಾರೆ. ರಮೇಶ್ ಅವರಿಗೆ ಏ. 13ರಂದು ಕೋವಿಡ್ ದೃಢಪಟ್ಟಿತ್ತು. ಅವರನ್ನು ಸೇಂಟ್ ಜಾನ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಉಸಿರಾಟ ಸಮಸ್ಯೆ ಕಾಣಿಸಿಕೊಂಡ ಕಾರಣ, ಸೋಮವಾರ ಬೆಳಿಗ್ಗೆ 9.30ಕ್ಕೆ ಸಾವನ್ನಪ್ಪಿದ್ದಾರೆ. ‘ರಮೇಶ್ ಅವರು ಸಚಿವರ ಮನೆಯಲ್ಲಿ ಸಹಾಯಕರಾಗಿ ಕೆಲಸ ಮಾಡುತ್ತಿದ್ದರು. ರಮೇಶ್ ಅವರಿಗೆ ಉಸಿರಾಟ ಸಮಸ್ಯೆ ಎದುರಾದಾಗ, …
Read More »ಕನ್ನಡ ನಿಘಂಟು ತಜ್ಞ ಪ್ರೊ. ಜಿ. ವೆಂಕಟಸುಬ್ಬಯ್ಯ ಇನ್ನಿಲ್ಲ!
ಬೆಂಗಳೂರು: ಕನ್ನಡ ನಿಘಂಟು ತಜ್ಞ, ಶತಾಯುಷಿ ಪ್ರೊ. ಜಿ. ವೆಂಕಟಸುಬ್ಬಯ್ಯ ಅವರು ನಿಧನರಾಗಿದ್ದಾರೆ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. 108 ವರ್ಷದ ಪ್ರೊ. ಜಿ. ವೆಂಕಟಸುಬ್ಬಯ್ಯ ಅವರು ಚಿಕಿತ್ಸೆ ಫಲಕಾರಿಯಾಗದೆ ರಾತ್ರಿ 1.30 ರ ಸುಮಾರಿಗೆ ನಿಧನರಾಗಿದ್ದಾರೆ. 1913ರ, ಆಗಸ್ಟ್ 23ರಂದು ಮೈಸೂರಿನಲ್ಲಿ ಜನಿಸಿದ ಪ್ರೊ| ಜಿ. ವೆಂಕಟಸುಬ್ಬಯ್ಯ ಕನ್ನಡದ ಅಪ್ರತಿಮ ಭಾಷಾ ತಜ್ಞರು, ಸಂಶೋಧಕರು, ಬರಹಗಾರರು ಹಾಗೂ ಶಿಕ್ಷಕರಾಗಿ ಸೇವೆ ಸಲ್ಲಿಸಿದ್ದಾರೆ. …
Read More »‘ಮಠ’ ನಿರ್ದೇಶಕನಿಗೆ ಕೋವಿಡ್ ದೃಢ : ಸರ್ಕಾರದ ವಿರುದ್ಧ ‘ಗುರ್’ ಎಂದ ಗುರು ಪ್ರಸಾದ್
ಬೆಂಗಳೂರು : ಕೋವಿಡ್ ಸೋಂಕು ದೃಢಪಟ್ಟಿರುವ “ಮಠ” ನಿರ್ದೇಶಕ ಗುರುಪ್ರಸಾದ್ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹಾಗೂ ಅವರ ಪುತ್ರ ಬಿ.ವೈ ರಾಘವೇಂದ್ರ ಸೇರಿದಂತೆ ರಾಜ್ಯ ಸರ್ಕಾರದ ವಿರುದ್ಧ ಫುಲ್ ಗರಂ ಆಗಿದ್ದಾರೆ. ಇಂದು ಫೇಸ್‌ಬುಕ್ ಲೈವ್ ನಲ್ಲಿ ಆಕ್ರೋಶ ಹೊರಹಾಕಿರುವ ಅವರು, ‘ಒಂದು ವೇಳೆ ನಾನು ಕೋವಿಡ್‍ದಿಂದ ಸತ್ತರೆ ಅದಕ್ಕೆ ಈ ಸರ್ಕಾರದ ಮಂತ್ರಿಗಳೇ ಹೊಣೆ ಎಂದು ಎಚ್ಚರಿಸಿದ್ದಾರೆ. ಪ್ರಧಾನಿ ಮೋದಿ ಪ್ರಾಮಾಣಿಕ, ಹಾಗಂತ ಬಿಜೆಪಿಯವರೆಲ್ಲ ಪ್ರಾಮಾಣಿಕರಲ್ಲ. ಒಂದು ವರ್ಷ ಟೈಮ್ …
Read More »ಕೇಂದ್ರ ಸರ್ಕಾರದಿಂದ ಆರೋಗ್ಯ ಕಾರ್ಯಕರ್ತರಿಗೆ ಬಿಗ್ ಶಾಕ್ : 50 ಲಕ್ಷ ರೂ. ವಿಮೆ ಸೌಲಭ್ಯ ರದ್ದು!
ನವದೆಹಲಿ : ಕೇಂದ್ರ ಸರ್ಕಾರವು ಆರೋಗ್ಯ ಕಾರ್ಯಕರ್ತರಿಗೆ ಬಿಗ್ ಶಾಕ್ ನೀಡಿದ್ದು, ಕೊರೊನಾ ಸೋಂಕಿತರ ಆರೈಕೆ ಸಂದರ್ಭದಲ್ಲಿ ಮೃತಪಟ್ಟ ಮುಂಚೂಣಿ ಆರೋಗ್ಯ ಕಾರ್ಯಕರ್ತರಿಗೆ 50 ಲಕ್ಷ ರೂ. ವಿಮೆ ಸೌಲಭ್ಯವನ್ನು ಕೇಂದ್ರ ಸರ್ಕಾರ ಹಿಂಪಡೆದುಕೊಂಡಿದೆ. ಈ ಕುರಿತು ಎಲ್ಲಾ ರಾಜ್ಯಗಳಿಗೆ ಕೇಂದ್ರ ಆರೋಗ್ಯ ಸಚಿವಾಲಯದ ಕಾರ್ಯದರ್ಶಿ ರಾಜೇಶ್ ಭೂಷಣೆ ಪತ್ರ ಬರೆದಿದ್ದು, 2020 ರ ಮಾರ್ಚ್ 20 ರಂದು ಘೋಷಣೆಯಾಗಿದ್ದ ಕೊರೊನಾ ಸೋಂಕಿತರ ಆರೈಕೆ ಸಂದರ್ಭದಲ್ಲಿ ಮೃತಪಟ್ಟ ಮುಂಚೂಣಿ ಆರೋಗ್ಯ …
Read More »ಮಹಾರಾಷ್ಟ್ರದಲ್ಲಿ ಒಂದೇ ದಿನ 68,000ಕ್ಕೂ ಹೆಚ್ಚು ಕೊರೊನಾ ಕೇಸ್!
ಮುಂಬೈ, ಏಪ್ರಿಲ್ 18: ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗಿನ ಎರಡನೇ ಅಲೆಗೆ ಮಹಾರಾಷ್ಟ್ರ ತತ್ತರಿಸಿ ಹೋಗಿದೆ. ಪ್ರತಿನಿತ್ಯ ಇಡೀ ದೇಶದಲ್ಲಿ ಅತಿಹೆಚ್ಚು ಸೋಂಕಿತ ಪ್ರಕರಣಗಳು ಇದೊಂದೇ ರಾಜ್ಯದಲ್ಲಿ ವರದಿಯಾಗುತ್ತಿವೆ. ಮಹಾರಾಷ್ಟ್ರದಲ್ಲಿ ಕಳೆದ 24 ಗಂಟೆಗಳಲ್ಲಿ 68631 ಮಂದಿಗೆ ಕೊರೊನಾವೈರಸ್ ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ. ಒಂದೇ ದಿನ 503 ಮಂದಿ ಪ್ರಾಣ ಬಿಟ್ಟಿದ್ದು, 45,654 ಸೋಂಕಿತರು ಗುಣಮುಖರಾಗಿದ್ದಾರೆ. ಭಾನುವಾರದ ಅಂಕಿ-ಅಂಶಗಳ ಪ್ರಕಾರ, ರಾಜ್ಯದಲ್ಲಿ ಒಟ್ಟು 31,06,828 ಕೊರೊನಾವೈರಸ್ ಸೋಂಕಿತರು …
Read More »ಐಸಿಯು ಬೆಡ್ ಗಾಗಿ ಆಕ್ಸಿಜನ್ ಸಿಲಿಂಡರ್ ನೊಂದಿಗೆ ಆಟೋದಲ್ಲಿ ಆಸ್ಪತ್ರೆಗೆ ಅಲೆದಾಡಿದ ಮಹಿಳೆ
ಕಲಬುರಗಿ: ಜಿಲ್ಲೆಯಲ್ಲಿ ಕೊರೊನಾ ಸೋಂಕಿತರು ಹೆಚ್ಚುತ್ತಿರುವ ನಡುವೆಯೇ ಸಾಮಾನ್ಯ ರೋಗಿಗಳು ಸಹ ಚಿಕಿತ್ಸೆಗಾಗಿ ಪರದಾಡುವಂತೆ ಆಗಿದೆ. ಮಹಿಳೆಯೊಬ್ಬರು ಐಸಿಯು ಬೆಡ್ ಸಿಗದ ಕಾರಣ ಆಕ್ಸಿಜನ್ ಸಿಲಿಂಡರ್‌ನೊಂದಿಗೆ ಆಟೋದಲ್ಲಿ ಐದಾರು ಗಂಟೆಗಳ ಕಾಲ ಆಸ್ಪತ್ರೆಯಿಂದ ಆಸ್ಪತ್ರೆಗೆ ತಿರುಗಾಡಿದ ಮನಕಲುವ ಘಟನೆ ರವಿವಾರ ನಡೆದಿದೆ. ಇಲ್ಲಿನ ಬಸವ ನಗರದ 55 ವರ್ಷದ ಮಹಿಳೆಯೊಬ್ಬರು ಕೆಮ್ಮು ಮತ್ತು ಉಸಿರಾಟದ ಸಮಸ್ಯೆಯಿಂದ ಬೆಳಗ್ಗೆ ಅಸ್ವಸ್ಥಗೊಂಡಿದ್ದರು. ಹೀಗಾಗಿ ಖಾಸಗಿ ಆಸ್ಪತ್ರೆಯೊಂದಕ್ಕೆ ಕುಟುಂಬದವರು ಕರೆದುಕೊಂಡು ಹೋಗಿದ್ದರು. ಆಗ ಐಸಿಯು …
Read More »ಐಪಿಎಲ್ ಕ್ರಿಕೆಟ್ ಬೆಟ್ಟಿಂಗ್ ಹಾವಳಿ : 8 ಜನರನ್ನು ಬಂಧಿಸಿದ ವಿಜಯಪುರ ಪೊಲೀಸ್
ವಿಜಯಪುರ : ಜಿಲ್ಲೆಯ ಇಂಡಿ ಪಟ್ಟಣದಲ್ಲಿ ಐಪಿಎಲ್ ಕ್ರಿಕೆಟ್ ಪಂದ್ಯಾವಳಿ ಸಂದರ್ಭದಲ್ಲಿ ಬೆಟ್ಟಿಂಗ್ ಕೃತ್ಯದಲ್ಲಿ ತೊಡಗಿದ್ದ 8 ಜನ ಆರೋಪಿಗಳನ್ನು ಬಂಧಿಸಿರುವ ಪೊಲೀಸರು, 92 ಸಾವಿರ ರೂ. ನಗದು ಹಾಗೂ ಕೃತ್ಯಕ್ಕೆ ಬಳಸಿದ ವಸ್ತುಗಳನ್ನು ವಶಕ್ಕೆ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ. ಶನಿವಾರ ಸಂಜೆ ಮುಂಬೈ ಇಂಡಿಯನ್ ಹಾಗೂ ಸನ್ ರೈಸರ್ಸ್ ಹೈದ್ರಾಬಾದ್ ಮಧ್ಯೆ ನಡೆದ ಐಪಿಎಲ್ ಪಂದ್ಯದ ವೇಳೆ ಇಂಡಿ ಪಟ್ಟಣದಲ್ಲಿರುವ ರೋಹಿತ್ ಶಹಾ ಕಾಂಪ್ಲೆಕ್ ಮೇಲ್ಭಾಗದಲ್ಲಿ ಬೆಟ್ಟಿಂಗ್ ದಂಧೆ ನಡೆಸುತ್ತಿದ್ದರು. …
Read More »