Breaking News

Yearly Archives: 2021

ಅಂಚೆ ಮತದಾನ ಮಾಡಿದ ರಮೇಶ್ ಜಾರಕಿಹೊಳಿ ನ್ಯೂ ಇಂಗ್ಲೀಷ್ ಶಾಲೆಯಲ್ಲಿ ರಮೇಶ್ ಜಾರಕಿಹೊಳಿ ಪತ್ನಿ ಜಯಶ್ರೀ ವೋಟಿಂಗ್

ಬೆಳಗಾವಿ; ಕೊರೊನಾ ಸೋಂಕು ಹಿನ್ನಲೆಯಲ್ಲಿ ಹೋಂ ಕ್ವಾರಂಟೈನ್ ನಲ್ಲಿರುವ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಬೆಳಗಾವಿ ಲೋಕಸಭಾ ಉಪಚುನಾವನೆಯಲ್ಲಿ ಅಂಚೆ ಮತದಾನ ಮಾಡಿದ್ದಾರೆ. ಚುನಾವಣಾ ಆಯೋಗ ಕೊರೊನಾ ಸೋಂಕಿತರಿಗೆ ಅಂಚೆ ಮತದಾನಕ್ಕೆ ಅವಕಾಶ ಕಲ್ಪಿಸಿದ ಹಿನ್ನೆಲೆಯಲ್ಲಿ ರಮೇಶ್ ಜಾರಕಿಹೊಳಿ ಎರಡು ದಿನಗಳ ಹಿಂದೆಯೇ ಅಂಚೆ ಮತದಾನದ ಮೂಲಕ ಹಕ್ಕು ಚಲಾಯಿಸಿದ್ದಾರೆ ಎಂದು ತಿಳಿದುಬಂದಿದೆ. ಇಂದು ರಮೇಶ್ ಜಾರಕಿಹೊಳಿ ಪತ್ನಿ ಜಯಶ್ರಿ ಗೋಕಾಕ್ ನ ನ್ಯೂ ಇಂಗ್ಲೀಷ್ ಶಾಲೆಯಲ್ಲಿ ಮತದಾನ ಮಾಡಿದರು.

Read More »

ನಟ ನಿಖಿಲ್ ಕುಮಾರಸ್ವಾಮಿಗೂ ಕೊರೊನಾ ಪಾಸಿಟಿವ್

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಪುತ್ರ, ನಟ ನಿಖಿಲ್ ಕುಮಾರಸ್ವಾಮಿಗೂ ಕೊರೊನಾ ಪಾಸಿಟಿವ್ ಇರುವುದು ದೃಢಪಟ್ಟಿದೆ. ಈ ಸಂಬಂಧ ಟ್ವೀಟ್ ಮಾಡಿರುವ ನಿಖಿಲ್, ನಾನು ಇಂದು ಕೋವಿಡ್ ಪರೀಕ್ಷೆಗೆ ಒಳಪಟ್ಟಿದ್ದು ಪ್ರಾಥಮಿಕ ವರದಿ ಪಾಸಿಟಿವ್ ಬಂದಿದೆ. ಯಾರೂ ಆತಂಕ ಪಡುವ ಅವಶ್ಯಕತೆ ಇಲ್ಲ. ವೈದ್ಯರ ಸಲಹೆಯ ಮೇರೆಗೆ ಚಿಕಿತ್ಸೆ ಪಡೆಯುತ್ತಿದ್ದೇನೆ. ಕಳೆದ ಕೆಲ ದಿನಗಳಲ್ಲಿ ನನ್ನ ಸಂಪರ್ಕದಲ್ಲಿದ್ದವರು ಕೋವಿಡ್ ಪರೀಕ್ಷೆಗೆ ಒಳಗಾಗಿ ಎಂದು ಮನವಿ ಮಾಡಿಕೊಂಡಿದ್ದಾರೆ. ನಾನು …

Read More »

ಸಾಂಸ್ಕೃತಿಕ ನಗರದಲ್ಲಿ ಮೊಳಗಿದ ವಿಜಯ್‌ ಪ್ರಕಾಶ್‌ ʼಜೈ ಹೋʼ

ಮೈಸೂರು: ಸಾಂಸ್ಕೃತಿಕ ನಗರಿಯಲ್ಲಿ ʻಜೈ ಹೋ. ಜೈ ಹೋ.ʼ, ʻಬೊಂಬೆ ಹೇಳುತೈತೆ. ಮತ್ತೆ ಹೇಳುತೈತೆ.. ನೀನೆ ರಾಜಕುಮಾರʼ ಹಾಡುಗಳು ಮಾರ್ದನಿಸಿದವು. ಖ್ಯಾತ ಹಿನ್ನೆಲೆ ಗಾಯಕ ವಿಜಯ ಪ್ರಕಾಶ್‌ ತಮ್ಮ ಕಂಚಿನ ಕಂಠದಿಂದ ಸುಮಧುರ ಗಾಯನಗಳೊಂದಿಗೆ ಸಂತ ಫಿಲೋಮಿನಾ ಕಾಲೇಜಿನ ಯುವ ಮನಸ್ಸುಗಳನ್ನು ಸಂಗೀತ ಅಲೆಯಲ್ಲಿ ತೇಲಿಸಿದರು. ಮೈಸೂರಿನ ಸಂತ ಫಿಲೋಮಿನಾ ಕಾಲೇಜು ಮೈದಾನದಲ್ಲಿ ಆಯೋಜಿಸಿರುವ ಎಡಿನ್‌ ಕ್ರಿಕೆಟ್‌ ಪಂದ್ಯಾವಳಿಗಾಗಿ ರೂಪಿಸಿರುವ ವೇದಿಕೆಯು ಈ ವಿಶೇಷ ಸಂದರ್ಭಕ್ಕೆ ಸಾಕ್ಷಿಯಾಯಿತು. ಕ್ರೀಡೆ ಮತ್ತು …

Read More »

ಬಿಜೆಪಿ ನಾಯಕರು ಆಡಳಿತಕ್ಕಿಂತಲೂ ಚುನಾವಣಾ ಪ್ರಚಾರಕ್ಕೆ ಹೆಚ್ಚಿನ ಆದ್ಯತೆ,ಕೊರೋನಾ 2ನೇ ಅಲೆಗೆ ಬಿಜೆಪಿ ನಾಯಕರೇ ಕಾರಣ : ಸಿದ್ದರಾಮಯ್

ಬೆಂಗಳೂರು, ಏ.17- ಕೋವಿಡ್ ನಿಯಂತ್ರಣದ ಸಲುವಾಗಿ ಜನರಿಗೆ ಶಿಷ್ಠಾಚಾರವನ್ನು ಬೋಧಿಸುವ ಬಿಜೆಪಿ ನಾಯಕರು ಸಾರ್ವಜನಿಕವಾಗಿ ನಿಯಮಗಳನ್ನು ಏಕೆ ಉಲ್ಲಂಘಿಸುತ್ತಿದ್ದಾರೆ ಎಂದು ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ. ಬಿಜೆಪಿ ನಾಯಕರು ಆಡಳಿತಕ್ಕಿಂತಲೂ ಚುನಾವಣಾ ಪ್ರಚಾರಕ್ಕೆ ಹೆಚ್ಚಿನ ಆದ್ಯತೆ ನೀಡಿದ್ದರು. ಕೋವಿಡ್ 2ನೆ ಅಲೆ ರಾಜ್ಯ ಮತ್ತು ಕೇಂದ್ರ ಸರ್ಕಾರಗಳ ವೈಪಲ್ಯವನ್ನು ಬಹಿರಂಗಗೊಳಿಸಿದೆ ಎಂದು ಹೇಳಿದ್ದಾರೆ. ಜನ ಕೋವಿಡ್‍ಗೆ ಚಿಕಿತ್ಸೆ ಸಿಗದೆ ಅಸಹಾಯಕರಾಗಿದ್ದಾರೆ. ಮೊದಲ ಹಂತದ ಅಲೆಯಲ್ಲಾದ ಭಾರೀ ಅನಾವುತಗಳಿಂದ ಕೇಂದ್ರ, ರಾಜ್ಯ …

Read More »

ಚಾಲಕನ ನಿಯಂತ್ರಣ ತಪ್ಪಿ ಪಲ್ಟಿ ಹೊಡೆದ ಕಾರು; ಇಬ್ಬರ ಸಾವು

ಉತ್ತರ ಕನ್ನಡ: ಉತ್ತರ ಕನ್ನಡ ಜಿಲ್ಲೆ ಕಾರವಾರ ತಾಲ್ಲೂಕಿನ ಬೈರೆ ಗ್ರಾಮದ ಬಳಿ ಕಾರೊಂದು ನಿಯಂತ್ರಣ ತಪ್ಪಿ ಅಪಘಾತಕ್ಕೆ ಒಳಗಾದ ಪರಿಣಾಮ ಇಬ್ಬರು ಮೃತಪಟ್ಟು ಐವರು ಗಾಯಗೊಂಡಿದ್ದಾರೆ. ಬೆಂಗಳೂರು ಮೂಲದವರು ಪ್ರಯಾಣಿಸುತ್ತಿದ್ದ ಕಾರು ಬೈರೆ ಗ್ರಾಮದ ಬಳಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಪರಿಣಾಮ ಕಾರಿನಲ್ಲಿದ್ದ ಸೈಯದ್(35) ಮತ್ತು ತಾಯವ್ವ ದುರ್ಮರಣಕ್ಕೀಡಾಗಿದ್ದಾರೆ. ಇನ್ನುಳಿದ ಐವರಿಗೆ ಗಾಯಗಳಾಗಿದ್ದು, ಉತ್ತರ ಕನ್ನಡ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಕಾರಿನಲ್ಲಿದ್ದವರು ಹಳಗಾ ಗ್ರಾಮದ ಖಾಸಗಿ ಆಸ್ಪತ್ರೆಗೆ ಚಿಕಿತ್ಸೆಗಾಗಿ …

Read More »

ಚುನಾವಣಾ ಪ್ರಚಾರದಲ್ಲಿದ್ದ ಕೆಲವರಿಗೆ ಸೋಂಕು: ಲಕ್ಷ್ಮಣ್ ಸವದಿಗೆ ಕ್ವಾರಂಟೈನ್ ಆಗಲು ಸೂಚನೆ

ಬೆಂಗಳೂರು : ಬಸವಕಲ್ಯಾಣ ಉಪಚುನಾವಣೆಯ ಪ್ರಚಾರ ಪಾಲ್ಗೊಂಡಗೊಂಡಿದ್ದ ಪಕ್ಷದ ಕೆಲವರಿಗೆ ಕೋವಿಡ್ ಸೋಂಕು ತಗುಲಿದ್ದು ಮುಂಜಾಗ್ರತ ಕ್ರಮವಾಗಿ ವೈದ್ಯರ ಸಲಹೆಯಂತೆ ಕ್ವಾರಂಟೈನ್ ಆಗಲು ಸೂಚಿಸಿದ್ದಾರೆ ಎಂದುಸಾರಿಗೆ ಸಚಿವ ಲಕ್ಷ್ಮಣ್ ಸವದಿ ಎಂದಿದ್ದಾರೆ. ಈ ಕುರಿತು ಬಗ್ಗೆ ಸ್ವತಃ ಸಚಿವರೇ ಟ್ವೀಟ್ ಮಾಡಿದ್ದು ಬಸವಕಲ್ಯಾಣ ಉಪಚುನಾವಣೆಯ ಪ್ರಚಾರದಲ್ಲಿ ನಾನು ಕೆಲವು ದಿನಗಳ ಕಾಲ ತೊಡಗಿದ್ದ ಸಂದರ್ಭದಲ್ಲಿ ನನ್ನೊಂದಿಗೆ ಭಾಗವಹಿಸಿದ್ದ ಕೆಲವರಿಗೆ ಕೋವಿಡ್ ಸೋಂಕು ತಗುಲಿದ್ದು ಕಂಡುಬಂದಿದೆ. ಅಷ್ಟೇ ಅಲ್ಲ, ನನ್ನ ಗನ್‍ಮ್ಯಾನ್‍ಗೂ …

Read More »

ಬಿಹಾರ ಮಾಜಿ ಸಿಎಂ ಲಾಲೂ ಪ್ರಸಾದ್ ಯಾದವ್‌ಗೆ ಶನಿವಾರ ಜಾರ್ಖಂಡ್ ಹೈಕೋರ್ಟ್ ಜಾಮೀನು ನೀಡಿದೆ.

ಪಾಟ್ನಾ, ಏಪ್ರಿಲ್ 17: ಮೇವು ಹಗರಣಕ್ಕೆ ಸಂಬಂಧಿಸಿದಂತೆ ಆರ್‌ಜೆಡಿ ಮುಖ್ಯಸ್ಥ ಹಾಗೂ ಬಿಹಾರ ಮಾಜಿ ಸಿಎಂ ಲಾಲೂ ಪ್ರಸಾದ್ ಯಾದವ್‌ಗೆ ಶನಿವಾರ ಜಾರ್ಖಂಡ್ ಹೈಕೋರ್ಟ್ ಜಾಮೀನು ನೀಡಿದೆ. ಇದೇ ಫೆಬ್ರವರಿಯಲ್ಲಿ ಲಾಲೂ ಪ್ರಸಾದ್ ಯಾದವ್ ಅವರಿಗೆ ಜಾಮೀನು ನೀಡಲು ನ್ಯಾಯಾಲಯ ನಿರಾಕರಿಸಿದ್ದು, ಎರಡು ತಿಂಗಳ ನಂತರ ಹೊಸ ಅರ್ಜಿ ಸಲ್ಲಿಸಲು ಸೂಚಿಸಿತ್ತು. ಶನಿವಾರ ಜಾಮೀನು ನೀಡಿದ್ದು, ಜೈಲಿನಿಂದ ಶೀಘ್ರವೇ ಅವರು ಹೊರ ಹೋಗಲಿರುವುದಾಗಿ ತಿಳಿದುಬಂದಿದೆ.   ಲಾಲೂ ಪ್ರಸಾದ್ ಅವರು …

Read More »

ಮೂರು ಕ್ಷೇತ್ರಗಳ ಉಪಚುನಾವಣೆ, ಶಾಂತಿಯುತ ಮತದಾನ

ಏಪ್ರಿಲ್ 17ರಂದು ಕರ್ನಾಟಕದ ಒಂದು ಲೋಕಸಭೆ ಹಾಗೂ ಎರಡು ವಿಧಾನಸಭೆ ಕ್ಷೇತ್ರಗಳ ಉಪ ಚುನಾವಣೆಗೆ ಮತದಾನ ಆರಂಭವಾಗಿದೆ. ಕೇಂದ್ರ ಸಚಿವ ಸುರೇಶ್ ಅಂಗಡಿ ಅವರ ಅಕಾಲಿಕ ನಿಧನದಿಂದ ಬೆಳಗಾವಿ ಲೋಕಸಭಾ ಕ್ಷೇತ್ರಕ್ಕೆ ಚುನಾವಣೆ ನಡೆಯುತ್ತಿದ್ದರೆ, ಕಾಂಗ್ರೆಸ್ ಶಾಸಕರಾಗಿದ್ದ ಬಿ. ನಾರಾಯಣರಾವ್ ಅವರ ನಿಧನದಿಂದ ಬಸವಕಲ್ಯಾಣ ವಿಧಾನಸಭಾ ಕ್ಷೇತ್ರಕ್ಕೆ ಉಪ ಚುನಾವಣೆ ನಡೆಯುತ್ತಿದೆ. ಇನ್ನು ಕಳೆದ ಬಾರಿ ಕಾಂಗ್ರೆಸ್‌ನಿಂದ ಸ್ಪರ್ಧಿಸಿ ಶಾಸಕರಾಗಿದ್ದ ಪ್ರತಾಪ್ ಗೌಡ ಪಾಟೀಲರು ತಮ್ಮ ವಿಧಾನಸಭಾ ಸದಸ್ಯತ್ವ ಸ್ಥಾನಕ್ಕೆ …

Read More »

ಒಳಗಿನವರಿಂದಲ್ಲ, ಹೊರಗಿನಿಂದ ಬರುತ್ತಿರುವ ಕೈದಿಗಳಿಂದ ಕಾರಾಗೃಹದಲ್ಲಿ ಕೊರೋನಾ ಹೆಚ್ಚುತ್ತಿದೆ!

ಬೆಂಗಳೂರು: ಒಳಗಿರುವವರಿಂದಲ್ಲ, ಹೊರಗಿನಿಂದ ಬರುತ್ತಿರುವ ಕೈದಿಗಳಿಂದ ರಾಜ್ಯದ ಕಾರಾಗೃಹಗಳಲ್ಲಿ ಮಹಾಮಾರಿ ಕೊರೋನಾ ಸೋಂಕು ಹೆಚ್ಚಾಗುತ್ತಿದೆ ಎಂದು ಬೆಂಗಳೂರಿನ ಸಾಂಕ್ರಾಮಿಕ ರೋಗಗಳ ಆಸ್ಪತ್ರೆ ಹೇಳಿದೆ. ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಕೈದಿಗಳಿಗೆ ಚಿಕಿತ್ಸೆ ನೀಡಲು ಬೆಂಗಳೂರಿನ ಸಾಂಕ್ರಾಮಿಕ ರೋಗಗಳ ಆಸ್ಪತ್ರೆಯನ್ನು ನೋಡಲ್ ಕೇಂದ್ರವನ್ನಾಗಿ ಮಾಡಲಾಗಿದೆ. ಕಳೆದ 2 ತಿಂಗಳುಗಳಿಂದ ಆಸ್ಪತ್ರೆ ಒಟ್ಟು 31 ಮಂದಿ ಸೋಂಕಿತ ಕೈದಿಗಳಿಗೆ ಚಿಕಿತ್ಸೆ ನೀಡಿದೆ. ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಮತ್ತು ಕೇಂದ್ರ ಕಾರಾಗೃಹದ ಕಾರ್ಯಕಾರಿ ಸಮಿತಿ …

Read More »

ಮಹಾರಾಷ್ಟ್ರದಲ್ಲಿ ಕರ್ಫ್ಯೂ: ವಲಸಿಗರಿಗೆ, ನಿರುದ್ಯೋಗಿಗಳಿಗೆ ಆಹಾರ ವಿತರಿಸಿದ ಅರ್ಥ್ ಕೆಫೆ

ದೇಶಾದ್ಯಂತ ಕೋವಿಡ್-19 ಎರಡನೇ ಅಲೆ ಶುರುವಾಗಿದ್ದು ಅದರಲ್ಲೂ ಮಹಾರಾಷ್ಟ್ರ, ಮುಂಬೈನಲ್ಲಿ ಮಿತಿ ಮೀರುತ್ತಿದೆ. ಈ ಹಿನ್ನೆಲೆ ಅಲ್ಲಿನ ರಾಜ್ಯ ಸರ್ಕಾರ ಕಳೆದ ಬುಧವಾರದಿಂದ ಮೇ 1ರವರೆಗೆ ಜನತಾ ಕರ್ಫ್ಯೂ ಜಾರಿ ಮಾಡಿ ಎಲ್ಲೆಂದರಲ್ಲಿ ನಾಲ್ಕು ಮಂದಿಗಿಂತ ಹೆಚ್ಚು ಜನರು ಸೇರುವಂತಿಲ್ಲ ಎಂದು ಆದೇಶ ಹೊರಡಿಸಿದೆ. ಜನತಾ ಕರ್ಫ್ಯೂ ಕಾರಣ ಅಲ್ಲಿನ ವಲಸೆ ಕಾರ್ಮಿಕರ, ಬಡವರ, ನಿರುದ್ಯೋಗಿಗಳ ಬದುಕು ಶೋಚನೀಯವಾಗಲಿದೆ. ಇದನ್ನರಿಂದ ಕೆಲವು ಮುಂಬೈ ಮೂಲದ ರೆಸ್ಟೊರೆಂಟ್‍ಗಳು, ಕೆಫೆಗಳು ಉಚಿತವಾಗಿ ಆಹಾರ …

Read More »