ಗೋಕಾಕ: ಬೆಳಗಾವಿ ಸೇರಿದಂತೆ ಎಲ್ಲಾಕಡೆ ಮತದಾನ ಮಂದಗತಿಯಿಂದ ಪ್ರಾರಂಭ ವಾಗಿದ್ದು ಸಮಯ್ ಕಳೆದಂತೆ ಜೋರಾಗಿಯೇ ನಡಿತಿದೆ ಸುಮಾರು 20ರಿಂದ 30 ಶೇಕಡಾ ಮತದಾನ ಗೋಕಾಕ ಹಾಗೂ ಅರಭಾವಿ ಕ್ಷೇತ್ರದಲ್ಲಿ ಆಗಿದೆ ಎಂಬ ಮಾಹಿತಿ ಸದ್ಯಕ್ಕೆ ಲಭ್ಯ ವಾಗುತ್ತಿದೆ. ಇಂದು ಮಾಜಿ ಸಚಿವ ಹಾಗೂ ಗೋಕಾಕ ಹಾಲಿ ಶಾಸಕ ರಮೇಶ್ ಜಾರಕಿಹೊಳಿ ಅವರ್ ಸುಪುತ್ರ ಶ್ರೀ ಸಂತೋಷ್ ಜಾರಕಿಹೊಳಿ ಹಾಗೂ ಅವರ್ ಸೊಸೆ ಅಂಬಿಕಾ ಸಂತೋಷ್ ಜಾರಕಿಹೊಳಿ ಅವರು ಎಲ್ಲರಂತೆ ಸರಳ …
Read More »Yearly Archives: 2021
ಕೆಂಪುಕೋಟೆ ಮೇಲೆ ಬಾವುಟ ಪ್ರಕರಣ- ನಟ ದೀಪ್ ಸಿಧುಗೆ ಜಾಮೀನು
ನವದೆಹಲಿ: ಗಣರಾಜ್ಯೋತ್ಸವ ದಿನ ರೈತ ಸಂಘಟನೆಗಳ ಟ್ರಾಕ್ಟರ್ ರ‍್ಯಾಲಿಯಲ್ಲಿ ಕೆಂಪು ಕೋಟೆ ಮೇಲೆ ಬಾವುಟ ಹಾರಿಸಿದ್ದ ನಟ ದೀಪ್ ಸಿಧುಗೆ ದೆಹಲಿ ಕೋರ್ಟ್ ಜಾಮೀನು ನೀಡಿದೆ. ಜನವರಿ 26 ರ ಹಿಂಸಾಚಾರ ಪ್ರಕರಣದಲ್ಲಿ ದೆಹಲಿ ನ್ಯಾಯಾಲಯವು ದೀಪ್ ಸಿಧುಗೆ ಜಾಮೀನು ನೀಡಿದೆ. ಕಳೆದ ವಿಚಾರಣೆಯ ವೇಳೆ, ಜನವರಿ 26 ರಂದು ಕೆಂಪು ಕೋಟೆಗೆ ಹೋಗುವಂತೆ ಆಂದೋಲನ ನಡೆಸುತ್ತಿರುವ ರೈತರಿಗೆ ಯಾವುದೇ ಕರೆ ನೀಡಿಲ್ಲ ಎಂದು ದೀಪ್ ಸಿಧು ನ್ಯಾಯಾಲಯಕ್ಕೆ ಮನವಿ …
Read More »ಹೆಚ್‍ಡಿಕೆಗೆ ಕೊರೊನಾ ಸೋಂಕು
ಬೆಂಗಳೂರು: ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಅವರಿಗೆ ಕೊರೊನಾ ಸೋಂಕು ತಗುಲಿದೆ. ತಮ್ಮ ಕೋವಿಡ್ ವರದಿ ಪಾಸಿಟಿವ್ ಬರುತ್ತಲೇ ಟ್ವಿಟ್ಟರ್ ಮೂಲಕ ಮಾಹಿತಿ ನೀಡಿರುವ ಕುಮಾರಸ್ವಾಮಿ ಅವರು, ತಮ್ಮ ಸಂಪರ್ಕಕ್ಕೆ ಬಂದವರು ಕೊರೊನಾ ಪರೀಕ್ಷೆ ಮಾಡಿಸಿಕೊಳ್ಳುವಂತೆ ಮನವಿ ಮಾಡಿಕೊಂಡಿದ್ದಾರೆ. ಕೆಲ ದಿನಗಳ ಹಿಂದೆ ಮಾಜಿ ಪ್ರಧಾನಿಗಳಾದ ದೇವೇಗೌಡರು ಮತ್ತು ಅವರ ಶ್ರೀಮತಿ ಚನ್ನಮ್ಮ ಅವರಿಗೂ ಸೋಂಕು ತಗುಲಿತ್ತು. ಇದೀಗ ಕುಮಾರಸ್ವಾಮಿ ಅವರಿಗೂ ಸೋಂಕು ತಗುಲಿದೆ. ನಿನ್ನೆಯಷ್ಟೆ ಸಿಎಂ ಬಿ.ಎಸ್.ಯಡಿಯೂರಪ್ಪನವರಿಗೂ ಕೊರೊನಾ ದೃಢಪಟ್ಟ …
Read More »ಆನ್‍ಲೈನ್ ಮೂಲಕ ಮಾವು ಮಾರಾಟ
ಬೆಂಗಳೂರು, – ಮಾವು ಬೆಳೆಗಾರರ ಸಾಮಾಜಿಕ ಮತ್ತು ಆರ್ಥಿಕ ಸ್ಥಿತಿ ಸುಧಾರಿಸುವ ನಿಟ್ಟಿನಲ್ಲಿ ಕರ್ನಾಟಕ ರಾಜ್ಯ ಮಾವು ಅಭಿವೃದ್ಧಿ ಮತ್ತು ಮಾರುಕಟ್ಟೆ ನಿಗಮ ಗ್ರಾಹಕರಿಗೆ ಬೆಳೆಗಾರರಿಂದ ನೇರವಾಗಿ ತಾಜ ಮತ್ತು ಸ್ವಾದಿಷ್ಟ ಮಾವಿನ ಹಣ್ಣುಗಳನ್ನು ಆನ್‍ಲೈನ್‍ನಲ್ಲಿ ಖರೀದಿಸುವ ವ್ಯವಸ್ಥೆ ಕಲ್ಪಿಸಿದೆ ಎಂದು ಮಾವು ನಿಗಮದ ಅಧ್ಯಕ್ಷ ಕೆ.ವಿ. ನಾಗರಾಜು ತಿಳಿಸಿದರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕೋವಿಡ್-19ರ 2ನೆ ಅಲೆ ಹೆಚ್ಚುತ್ತಿರುವುದರಿಂದ ಹಿಂದಿನಂತೆ ಕಾರ್ಸಿರಿ ಮ್ಯಾಂಗೋಸ್ ಎಂಬ ಆನ್‍ಲೈನ್ ಪೋರ್ಟಲ್ (https://karsirimangoes.karnataka.gov.in) …
Read More »ಮಸ್ಕಿಯಲ್ಲಿ ಝಗಮಗಿಸುವ ‘ಸಖಿ’ ಮತಗಟ್ಟೆ
ಮಸ್ಕಿ (ರಾಯಚೂರು): ಮಸ್ಕಿ ವಿಧಾನಸಭೆ ಉಪಚುನಾವಣೆಗೆ ಶನಿವಾರ ಮತದಾನ ನಡೆಯುತ್ತಿದ್ದು, ಮಹಿಳಾ ಮತದಾರರು ಹೆಚ್ಚಿನ ಸಂಖ್ಯೆಯಲ್ಲಿರುವ ಎರಡು ಕಡೆಗೆ ‘ಸಖಿ’ ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ. ಈ ಮತಗಟ್ಟೆಗಳ ವಿಶೇಷ ಅಲಂಕಾರವು ಗಮನ ಸೆಳೆಯುತ್ತಿದೆ. ಮಸ್ಕಿ ಪಟ್ಟಣದ ಬಾಲಕಿಯರ ಸರ್ಕಾರಿ ಪದವಿಪೂರ್ವ ಕಾಲೇಜು ಶುಕ್ರವಾರ ಗುಲಾಬಿ ವರ್ಣದಲ್ಲಿ ಮುಳುಗಿಸಲಾಗಿದೆ. ‘ಪಿಂಕ್ ಬೂತ್’ ಹೆಸರಿಗೆ ತಕ್ಕಂತೆ ಗುಲಾಬಿ ವರ್ಣವೈವಿಧ್ಯದಲ್ಲಿ ಅಲಂಕಾರ ಮಾಡಲಾಗಿದ್ದು, ಕಾಲೇಜು ಮೂಲ ಕಟ್ಟಡ ಎಲ್ಲಿದೆ ಎಂದು ಹುಡುಕಾಟ ಮಾಡುವಷ್ಟು ಬದಲಾವಣೆ ಮಾಡಲಾಗಿದೆ. …
Read More »ಉಪಚುನಾವಣೆ: ಬೆಳಗಾವಿ ಮತ್ತು ಮಸ್ಕಿ, ಬಸವಕಲ್ಯಾಣದಲ್ಲಿ ಮತದಾನ ಆರಂಭ
ಬೆಳಗಾವಿ/ರಾಯಚೂರು: ಕಾಂಗ್ರೆಸ್ ಮತ್ತು ಬಿಜೆಪಿ ಮಧ್ಯೆ ತೀವ್ರ ಜಿದ್ದಾಜಿದ್ದಿನ ಕಣಗಳಾಗಿರುವ ಬೆಳಗಾವಿ ಲೋಕಸಭಾ ಕ್ಷೇತ್ರ ಹಾಗೂ ಮಸ್ಕಿ, ಬಸವಕಲ್ಯಾಣ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯ ಮತದಾನ ಆರಂಭವಾಗಿದೆ. ಕೋವಿಡ್ ಪ್ರಕರಣಗಳು ಹೆಚ್ಚುತ್ತಿರುವ ಕಾರಣ ಸೋಂಕು ಹರಡದಂತೆ ಎಚ್ಚರ ವಹಿಸಲು ಮತಗಟ್ಟೆಗಳಲ್ಲಿ ಅಂತರ ಕಾಯ್ದುಕೊಂಡು ಮತದಾನ ಮಾಡಬೇಕಿದೆ. ಹೀಗಾಗಿ, ಮತದಾನದ ಅವಧಿಯನ್ನು ಒಂದು ಗಂಟೆ ಹೆಚ್ಚಿಸಲಾಗಿದ್ದು, ಬೆಳಿಗ್ಗೆ 7ರಿಂದ ಸಂಜೆ 7ರ ವರೆಗೆ ಮತದಾನಕ್ಕೆ ಅವಕಾಶ ಕಲ್ಪಿಸಲಾಗಿದೆ. ಕೇಂದ್ರದಲ್ಲಿ ಸಚಿವರಾಗಿದ್ದ ಸುರೇಶ ಅಂಗಡಿ …
Read More »ಬೆಳಗಾವಿ: ಕೋವಿಡ್ ಹಿನ್ನೆಲೆಯಲ್ಲಿ ಮತಗಟ್ಟೆಗಳಲ್ಲಿ ಮುಂಜಾಗ್ರತಾ ಕ್ರಮ
ಬೆಳಗಾವಿ: ‘ಬೆಳಗಾವಿ ಲೋಕಸಭಾ ಕ್ಷೇತ್ರದ ಉಪ ಚುನಾವಣೆ ಏ.17ರಂದು ನಡೆಯಲಿದೆ. ಕೋವಿಡ್-19 ಎರಡನೇ ಅಲೆಯ ಆತಂಕದ ಹಿನ್ನೆಲೆಯಲ್ಲಿ, ಮತಗಟ್ಟೆಗಳಲ್ಲಿ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ’ ಎಂದು ಜಿಲ್ಲಾ ಚುನಾವಣಾಧಿಕಾರಿ ಡಾ.ಕೆ. ಹರೀಶ್‌ಕುಮಾರ್ ತಿಳಿಸಿದರು. ಇಲ್ಲಿ ಶುಕ್ರವಾರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ‘ಮತಯಂತ್ರವನ್ನು ಎಲ್ಲರೂ ಬಳಸುತ್ತಾರೆ ಎಂಬ ಆತಂಕ ಮತದಾರರಿಗೆ ಇದೆ. ರಾಜಕೀಯ ಪಕ್ಷದವರೂ ಈ ಬಗ್ಗೆ ಗಮನಸೆಳೆದಿದ್ದರು. ಹೀಗಾಗಿ, ಜನರಲ್ಲಿ ಜಾಗೃತಿ ಮೂಡಿಸಲಾಗುತ್ತಿದೆ. ಚುನಾವಣಾ ಆಯೋಗ ಹಾಗೂ ಆರೋಗ್ಯ …
Read More »ಮತದಾನ ಮಾಡಿ ಗೆಲ್ಲುವ ವಿಶ್ವಾಸ ನನ್ನಲಿದೆ ಎಂದ ಮಂಗಲ್ ಅಂಗಡಿ
ಬೆಳಗಾವಿ, ಏಪ್ರಿಲ್ 17: ಬೆಳಗಾವಿ ಲೋಕಸಭೆ ಉಪಚುನಾವಣೆ ಮತದಾನ ಪ್ರಕ್ರಿಯೆ ಬೆಳಗ್ಗೆ 7 ಗಂಟೆಯಿಂದ ಆರಂಭವಾಗಿದೆ. ಬಿಜೆಪಿ ಅಭ್ಯರ್ಥಿ ಮಂಗಲ ಅಂಗಡಿ ಮತದಾನ ಮಾಡಿದ ಪ್ರಮುಖರಲ್ಲಿ ಮೊದಲಿಗರಾಗಿದ್ದು ವಿಶೇಷ. ವಿಶ್ವೇಶ್ವರಯ್ಯ ನಗರದಲ್ಲಿರುವ ಸರ್ಕಾರಿ ಶಾಲೆಯ ಮತಗಟ್ಟೆ ಸಂಖ್ಯೆ ಎರಡರಲ್ಲಿ ಬೆಳಗ್ಗೆ 7 ಗಂಟೆಗೆ ಆಗಮಿಸಿದ ಮಂಗಲ ಅವರು ಮತದಾನ ಮಾಡಿದರು. ಮತಗಟ್ಟೆ ಆಗಮಿಸುತ್ತಿದ್ದಂತೆ ಮೊದಲಿಗೆ ಮತದಾರರ ಕಾಲು ಮುಗಿದು ಆಶೀರ್ವಾದ ಪಡೆದ ಮಂಗಲ ಅವರು ನಂತರ ಸರತಿ ಸಾಲಿನಲ್ಲಿ ನಿಂತರು. …
Read More »ಪಿಕಾರ್ಡ್ ಬ್ಯಾಂಕ್ ಮಾಜಿ ಅಧ್ಯಕ್ಷರ ಮೇಲೆ ಹಲ್ಲೆ
ಹೊನ್ನಾಳಿ: ತಾಲ್ಲೂಕಿನ ಕುಂದೂರು ಗ್ರಾಮದ ಹೊರವಲಯದ ಮನೆಯೊಂದರ ಮೇಲೆ ಐದು ಜನರಿದ್ದ ದುಷ್ಕರ್ಮಿಗಳ ತಂಡ ಗುರುವಾರ ರಾತ್ರಿ ಕುಂದೂರು ಗ್ರಾಮದ ನಿವಾಸಿ, ಹೊನ್ನಾಳಿ ಪಿಕಾರ್ಡ್ ಬ್ಯಾಂಕ್ ಮಾಜಿ ಅಧ್ಯಕ್ಷ ಎಂಜಿಆರ್ ಮಂಜುನಾಥ್ ಅವರ ಮೇಲೆ ಹಲ್ಲೆ ನಡೆಸಿದೆ. ತೀವ್ರವಾಗಿ ಗಾಯಗೊಂಡಿರುವ ಅವರನ್ನು ಹೊನ್ನಾಳಿ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಲಾಗಿದೆ. ಕುಂದೂರು ಗ್ರಾಮಕ್ಕೆ ಪಿಎಸ್‌ಐ ಬಸನಗೌಡ ಬಿರಾದಾರ ಅವರು ಭೇಟಿ ನೀಡಿ ಪರಿಶೀಲಿಸಿದರು. ಈ ಸಂಬಂಧ ಒಬ್ಬನನ್ನು ಪೊಲೀಸರು ಬಂಧಿಸಿದ್ದಾರೆ. ತಪ್ಪಿಸಿಕೊಂಡಿರುವ ಇತರ …
Read More »ರೇಕಿಂಗ್ : CBI ಮಾಜಿ ಮುಖ್ಯಸ್ಥ ರಂಜಿತ್ ಸಿನ್ಹಾ ನಿಧನ
ನವದೆಹಲಿ : ಸಿಬಿಐ ಮಾಜಿ ಮುಖ್ಯಸ್ಥ ರಂಜಿತ್ ಸಿನ್ಹಾ ಇಂದು ಬೆಳಗ್ಗೆ ನಿಧನರಾಗಿದ್ದಾರೆ. 1974 ರ ಬ್ಯಾಚ್ ಐಪಿಎಸ್ ಅಧಿಕಾರಿಯಾಗಿದ್ದ ರಂಜಿತ್ ಸಿನ್ಹಾ ಸಿಬಿಐ ನಿರ್ದೇಶಕರು ಮತ್ತು ಡಿಜಿ ಐಟಿಬಿಪಿ ಸೇರಿದಂತೆ ಹಲವು ಹುದ್ದೆಗಳನ್ನು ಅಲಂಕರಿಸಿದ್ದರು. ನಿವೃತ್ತ ಅಧಿಕಾರಿ ರಂಜಿತ್ ಸಿನ್ಹಾ ಅವರಿಗೆ ಕೊರೊನಾ ಸೋಂಕು ತಗುಲಿದ್ದು, ಇಂದು ಬೆಳಗ್ಗೆ 4.30 ಸುಮಾರಿಗೆ ದೆಹಲಿಯಲ್ಲಿ ನಿಧನರಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.
Read More »