ಬೆಂಗಳೂರು : ರಾಜ್ಯದಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ಗಣನೀಯ ಪ್ರಮಾಣದಲ್ಲಿ ಹೆಚ್ಚಾಗುತ್ತಿದ್ದು ಇದರ ನಿಯಂತ್ರಣಕ್ಕೆ ಸರಕಾರ ಹೊಸ ಮಾರ್ಗಸೂಚಿಯನ್ನು ಬಿಡುಗಡೆ ಮಾಡಿದೆ. ಇದರಂತೆ ರಾಜ್ಯದಲ್ಲಿ ನಡೆಸುವ ಸಾರ್ವಜನಿಕ ಸಮಾರಂಭಗಳು, ಆಚರಣೆಗಳು ಹಾಗೂ ಮನೋರಂಜನಾ ಕಾರ್ಯಕ್ರಮಗಳಿಗೆ ಹೆಚ್ಚಿನ ಮಿತಿಯನ್ನು ಹೇರಲಾಗಿದೆ. ಈ ಹೊಸ ಮಾರ್ಗಸೂಚಿಯು ಏಪ್ರಿಲ್ 30 ರ ವರೆಗೆ ಜಾರಿಯಲ್ಲಿರಲಿದೆ. ಮಾರ್ಗಸೂಚಿಗಳು : – ತೆರೆದ ಪ್ರದೇಶದಲ್ಲಿ ನಡೆಸುವ ಮದುವೆ ಕಾರ್ಯಕ್ರಮಗಳಲ್ಲಿ 200 ಮಂದಿಗೆ ಅವಕಾಶ ಕಲ್ಪಿಸಲಾಗಿದ್ದು, ಹಾಗೂ ಕಲ್ಯಾಣ …
Read More »Yearly Archives: 2021
ಏಪ್ರಿಲ್ 18 ರಂದು ಸಿಎಂ ಜೊತೆ ನಡೆಯಬೇಕಿದ್ದ ಸರ್ವಪಕ್ಷ ಸಭೆ ಮುಂದೂಡಿಕೆ!
ಬೆಂಗಳೂರು : ಏಪ್ರಿಲ್ 18 ರಂದು ಸಿಎಂ ಯಡಿಯೂರಪ್ಪ ಕರೆದಿದ್ದ ಸರ್ವ ಪಕ್ಷ ಸಭೆಯನ್ನು ಮುಂದೂಡಿಕೆ ಮಾಡಲಾಗಿದೆ. ವಿಧಾನಸೌಧದಲ್ಲಿ ಏಪ್ರಿಲ್ 18 ಸಂಜೆ 4 ಗಂಟೆಗೆ ಸಭೆಯನ್ನು ಆಯೋಜನೆ ಮಾಡಲಾಗಿತ್ತು. ಕೋವಿಡ್ ನಿಯಂತ್ರಣ ಸಂಬಂಧ ಎಲ್ಲಾ ಪಕ್ಷದ ಮುಖಂಡರ ಜೊತೆ ಸಲಹೆ ಪಡೆಯುವ ಉದ್ದೇಶದಿಂದ ಸಿಎಂ ಸಭೆ ಕರೆದಿದ್ದರು. ಸಭೆಯಲ್ಲಿ ಸಿದ್ದರಾಮಯ್ಯ, ಕುಮಾರಸ್ವಾಮಿ, ಡಿಕೆ ಶಿವಕುಮಾರ್ ಸೇರಿದಂತೆ ಹಲವು ಮುಖಂಡರು ಭಾಗಿಯಾಗುತ್ತಾರೆ ಎಂದು ಹೇಳಲಾಗಿತ್ತು. ಇದೀಗ ಸಭೆಯನ್ನು ದಿಢೀರ್ ಮುಂದೂಡಿಕೆ …
Read More »ತಮಿಳು ಚಿತ್ರರಂಗದ ಹಿರಿಯ ಹಾಸ್ಯ ಕಲಾವಿದ ವಿವೇಕ್ ವಿಧಿವಶ
ಚೆನ್ನೈ: ನಿನ್ನೆ (ಏಪ್ರಿಲ್ 16) ಹೃದಯಾಘಾತದಿಂದ ಆಸ್ಪತ್ರೆಗೆ ದಾಖಲಾಗಿದ್ದ ತಮಿಳು ಚಿತ್ರರಂಗದ ಹಿರಿಯ ಹಾಸ್ಯ ಕಲಾವಿದ ವಿವೇಕ್ ಚಿಕಿತ್ಸೆ ಫಲಿಸದೇ ಇಂದು ಬೆಳಗ್ಗೆ (ಏಪ್ರಿಲ್ 17) ವಿಧಿವಶರಾಗಿದ್ದಾರೆ. ಎಡ ಮುಂಭಾಗದ ಅಪಧಮನಿ ನಾಳವು ಶೇ 100 ರಷ್ಟು ಬ್ಲಾಕ್ ಆಗಿದ್ದು, ತೀವ್ರತರವಾದ ಹೃದಯಾಘಾತಕ್ಕೆ ಕಾರಣವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ. ವಿವೇಕ್ ಅವರ ಹೃದಯಾಘಾತಕ್ಕೆ ಗುರುವಾರ ತೆಗೆದುಕೊಂಡ ಕೋವಿಡ್ ಲಸಿಕೆ ಕಾರಣ ಎಂಬ ಆರೋಪ ಕೇಳಿಬಂದಿತ್ತು. ಇದರ ಬೆನ್ನಲ್ಲೇ ಸ್ಪಷ್ಟನೆ ನೀಡಿದ …
Read More »ರೈಲು ಇಳಿಯುತ್ತಿದ್ದಂತೆ ನಿಲ್ದಾಣದಿಂದ ಎದ್ನೋ ಬಿದ್ನೋ ಎಂದು ಓಡಿದ ಜನರು: ಕಾರಣ ಕೇಳಿದ್ರೆ ದಂಗಾಗ್ತೀರಾ!
ಪಟನಾ: ಎಲ್ಲಿ ನಮ್ಮನೆಲ್ಲ ಹಿಡಿದು ಕರೊನಾ ವೈರಸ್ ಟೆಸ್ಟ್ ಮಾಡಿಸುತ್ತಾರೋ ಎಂಬ ಭಯದಲ್ಲಿ ಮಕ್ಕಳು, ಯುವಕರು ಸೇರಿದಂತೆ ಅನೇಕರು ರೈಲು ನಿಲ್ದಾಣದಲ್ಲಿ ಯರ್ರಾಬಿರ್ರಿ ಓಡಿದ ಘಟನೆ ಬಿಹಾರದ ಬುಕ್ಸರ್ನಲ್ಲಿ ಗುರುವಾರ ನಡೆದಿದೆ. ರೈಲು ಇಳಿದು ನಿಲ್ದಾಣದಿಂದ ಹೊರ ಹೋಗುವ ಮುಂಚೆ ಕರೊನಾ ಟೆಸ್ಟ್ ಮಾಡಿಸಲು ಅಲ್ಲಿನ ಆರೋಗ್ಯ ಕಾರ್ಯಕರ್ತರು ಕೇಳಿದಾಗ, ಟೆಸ್ಟ್ ತಪ್ಪಿಸಿಕೊಳ್ಳುವ ಉದ್ದೇಶದಿಂದಲೇ ಜನರು ಅಲ್ಲಿಂದ ಕಾಲ್ಕಿತ್ತಿದ್ದಾರೆ. ಇದಕ್ಕೆ ಸಂಬಂಧಿಸಿದ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ರೈಲು …
Read More »ಸಾರಿಗೆ ಮುಷ್ಕರ- ಕಿಡಿಗೇಡಿಗಳಿಂದ ಕಲ್ಲು ತೂರಾಟ, ಬಸ್ ಚಾಲಕ ದುರ್ಮರಣ
ಬಾಗಲಕೋಟೆ: ಸಾರಿಗೆ ನೌಕರರ ಮುಷ್ಕರ 10ನೇ ದಿನವೂ ಮುಂದುವರೆದಿದ್ದು, ಕುಟುಂಬಕ್ಕೆ ಆಧಾರವಾಗಿದ್ದ ಚಾಲಕ ಹಿರಿಯ ಅಧಿಕಾರಿಗಳ ಕಟ್ಟುನಿಟ್ಟಿನ ಸೂಚನೆ ಹಿನ್ನೆಲೆಯಲ್ಲಿ ಆರೋಗ್ಯ ತಪಾಸಣೆ ಮಾಡಿಸಿಕೊಂಡು ಪ್ರಮಾಣ ಪತ್ರ ಸಲ್ಲಿಸಿ ಕರ್ತವ್ಯಕ್ಕೆ ಹಾಜರಾಗಿದ್ದರು. ಆದರೆ ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿದ್ದರಿಂದಾಗಿ ಕುತ್ತಿಗೆಗೆ ಬಲವಾದ ಪೆಟ್ಟು ಬಿದ್ದು, ದಾರುಣವಾಗಿ ಸಾವನ್ನಪ್ಪಿದ್ದಾರೆ. ಜಿಲ್ಲೆಯ ಜಮಖಂಡಿ ಡಿಪೋದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ 55 ವರ್ಷದ ಎನ್.ಕೆ.ಅವಟಿ ಕಲ್ಲೇಟಿಗೆ ತುತ್ತಾಗಿ, ಚಿಕಿತ್ಸೆ ಫಲಕಾರಿಯಾಗದೆ ಇಂದು ಮೃತಪಟ್ಟಿದ್ದಾರೆ. ಕರ್ತವ್ಯಕ್ಕೆ ಹಾಜರಾಗಿ …
Read More »ಬೀದಿಬದಿ ವ್ಯಾಪಾರಿಗಳಿಗೆ ಸೌಲಭ್ಯ ಕಲ್ಪಿಸಲು ಆಗ್ರಹ
ಲಿಂಗಸುಗೂರು: ‘ಬೀದಿಬದಿ ವ್ಯಾಪಾರಿಗಳಿಗೆ ಜೀವನ ಭದ್ರತೆ ಒದಗಿಸಲು ಸ್ಥಳೀಯ ಸಂಸ್ಥೆಗಳು ವ್ಯಾಪಾರ ಘಟಕಗಳನ್ನು ರಚಿಸಿ, ಅಗತ್ಯ ಸೌಲಭ್ಯಗಳನ್ನು ಕಲ್ಪಿಸಬೇಕು’ ಎಂದು ಆಗ್ರಹಿಸಿ ಬೀದಿಬದಿ ವ್ಯಾಪಾರಿಗಳ ಮಹಾಮಂಡಲ ತಾಲ್ಲೂಕು ಘಟಕದ ಪದಾಧಿಕಾರಿಗಳು ಶುಕ್ರವಾರ ಪುರಸಭೆ ಮುಖ್ಯಾಧಿಕಾರಿ ವಿಜಯಲಕ್ಷ್ಮಿ ಅವರಿಗೆ ಮನವಿ ಸಲ್ಲಿಸಿದರು. ‘ರಸ್ತೆ ಬದಿ ವ್ಯಾಪಾರಿಗಳ ಅನುಕೂಲಕ್ಕೆ ಮಾರುಕಟ್ಟೆ ಸಮಿತಿ ರಚಿಸಲಾಗಿದೆ. ಸಮಿತಿ ಸದಸ್ಯರನ್ನು ಕನಿಷ್ಠ ಮೂರು ತಿಂಗಳಿಗೊಮ್ಮೆ ಏಳು ದಿನಗಳ ನೋಟಿಸ್ ನೀಡಿ ಸಭೆ ಕರೆದು ಕುಂದುಕೊರತೆ ವಿಚಾರಣೆ ಮಾಡುವುದನ್ನು …
Read More »ನೌಕರರು ಆತ್ಮಹತ್ಯೆ ಮಾಡಿಕೊಳ್ಳಲು ಮುಂದಾಗ್ತಿದ್ದಾರೆ, ಮೊಂಡುತನ ಒಳ್ಳೆಯದಲ್ಲ- ಕೋಡಿಹಳ್ಳಿ
ಬೆಂಗಳೂರು: 6ನೇ ವೇತನ ಆರೋಗ ಶಿಫಾರಸುಗಳನ್ನು ಜಾರಿ ಮಾಡುವಂತೆ ಸಾರಿಗೆ ನೌಕರರು ನಡೆಸುತ್ತಿರುವ ಪ್ರತಿಭಟನೆ 10ನೇ ದಿನಕ್ಕೆ ಕಾಲಿಟ್ಟಿದ್ದು, ನಾಳೆ 11ನೇ ದಿನದ ಅನಿರ್ದಿಷ್ಟಾವಧಿ ಸತ್ಯಾಗ್ರಹ ಮುಂದುವರಿಯುತ್ತದೆ ಎಂದು ನೌಕರರ ಕೂಟದ ಗೌರವಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ಹೇಳಿದ್ದಾರೆ. ನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಕೋಡಿಹಳ್ಳಿ ಚಂದ್ರಶೇಖರ್, ಈಗ ಇಲಾಖೆ ಅವರು ಸಾರಿಗೆ ನೌಕರರಿಗೆ ಸಂಬಳ ಕೊಟ್ಟಿಲ್ಲ ಅಂತ ಹೇಳಿದರೆ ನಮ್ಮ ದೂರನ್ನ ಪರಿಗಣಿಸಿ ಸಂಬಳ ಕೊಡಿಸುವ ಕೆಲಸ ಮಾಡಬೇಕಿತ್ತು. ಆದರೆ ಕಾರ್ಮಿಕರ …
Read More »ರಸ್ತೆ ಅಪಘಾತದ ಪರಿಹಾರ ನೀಡುವಲ್ಲಿ ವಿಳಂಬ- KSRTC ಕಚೇರಿ ವಸ್ತುಗಳು ಜಪ್ತಿ
ಗದಗ: ಅಪಘಾತದಿಂದ ಮೃತಪಟ್ಟಿದ್ದ ಬಾಲಕನ ಕುಟುಂಬಕ್ಕೆ ಪರಿಹಾರ ನೀಡುವಲ್ಲಿ ವಿಳಂಬ ಮಾಡಿದಕ್ಕೆ ವಾಯುವ್ಯ ಸಾರಿಗೆ ವಿಭಾಗೀಯ ಕಚೇರಿಯ ವಸ್ತುಗಳನ್ನು ಜಪ್ತಿ ಮಾಡಿದ ಘಟನೆ ನಗರದಲ್ಲಿ ನಡೆದಿದೆ. ನಗರದ ಮುಳಗುಂದ ನಾಕಾ ಬಳಿ ಇರುವ ವಾಯುವ್ಯ ಸಾರಿಗೆ ವಿಭಾಗೀಯ ಕಚೇರಿಯಲ್ಲಿನ ಕಂಪ್ಯೂಟರ್, ಮಾನಿಟರ್, ಸಿಪಿಯು ಸೇರಿದಂತೆ ಹಲವಾರು ವಸ್ತುಗಳನ್ನು ಜಪ್ತಿ ಮಾಡಲಾಗಿದೆ. ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ರಾಜಶೇಖರ್ ಪಾಟೀಲ್ ಅವರ ಆದೇಶದ ಮೇರೆಗೆ ಜಪ್ತಿ ಮಾಡಲಾಗಿದೆ. ಏನಿದು ಪ್ರಕರಣ? 2009ರಲ್ಲಿ …
Read More »ಸ್ಯಾಂಡಲ್‍ವುಡ್ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅವರ ಆರೋಗ್ಯದಲ್ಲಿ ಏರುಪೇರು
ಬೆಂಗಳೂರು: ಸ್ಯಾಂಡಲ್‍ವುಡ್ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿದೆ. ಚಿಕಿತ್ಸೆ ಪಡೆದು ರೆಸ್ಟ್ ಮಾಡುತ್ತಿದ್ದಾರೆ. ಹೀಗಂತ ಸುದ್ದಿಯೊಂದು ನಿನ್ನೆ ಮಧ್ಯಾಹ್ನದಿಂದ ಹರಿದಾಡುತ್ತಲೇ ಇತ್ತು. ಇದೀಗ ಇದೇ ವಿಚಾರವಾಗಿ ಸ್ವತಃ ಕಿಚ್ಚ ಸುದೀಪ್ ಟ್ವೀಟ್ ಮಾಡಿ ಸ್ಪಷ್ಟನೆ ಕೊಟ್ಟಿದ್ದಾರೆ. ಟ್ವೀಟ್‍ನಲ್ಲಿ ಏನಿದೆ? ನನಗೆ ಆರೋಗ್ಯ ಸರಿಯಿಲ್ಲ. ಸದ್ಯದಲ್ಲೇ ಗುಣಮುಖನಾಗುತ್ತೇನೆ ಎಂಬ ಭರವಸೆಯಿದೆ. ಆದರೆ ವೈದ್ಯರು ಇನ್ನೂ ಕೆಲವು ದಿನಗಳ ಕಾಲ ಸಂಪೂರ್ಣ ರೆಸ್ಟ್ ಮಾಡಬೇಕೆಂದು ಹೇಳಿದ್ದಾರೆ. ಹೀಗಾಗಿ …
Read More »ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪನವರೊಂದಿಗೆ ಸಂಪರ್ಕ ಹೊಂದಿದ್ದ ಸವದತ್ತಿ ಶಾಸಕ ಆನಂದ ಮಾಮನಿಗೆ ಕೊರೊನಾ ದೃಢ
ಬೆಂಗಳೂರು: ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪನವರೊಂದಿಗೆ ಸಂಪರ್ಕ ಹೊಂದಿದ್ದ ಸವದತ್ತಿ ಶಾಸಕ ಆನಂದ ಮಾಮನಿಗೆ ಕೊರೊನಾ ದೃಢಪಟ್ಟಿದೆ. ಉಪಚುನಾವಣಾ ಪ್ರಚಾರಕ್ಕಾಗಿ ಸಿಎಂ ಬಿಎಸ್ ಯಡಿಯೂರಪ್ಪನವರು ಕಳೆದ ನಾಲ್ಕು ದಿನಗಳಿಂದ ಬೆಳಗಾವಿ, ಬಸವ ಕಲ್ಯಾಣ, ಮಸ್ಕಿಗೆ ಪ್ರವಾಸ ಬೆಳೆಸಿದ್ದರು. ಈ ವೇಳೆ ಸಿಎಂ ಬಿಎಸ್‍ವೈರನ್ನು ಭೇಟಿ ಮಾಡಿದ್ದ ಸವದತ್ತಿ ಶಾಸಕ ಆನಂದ ಮಾಮನಿಗೆ ಇಂದು ಕೊರೊನಾ ಪಾಸಿಟಿವ್ ವರದಿ ಬಂದಿದೆ. ಸೋಮವಾರದಿಂದ ಜ್ವರದಲ್ಲಿ ಬಳಲುತ್ತಿರುವ ಸಿಎಂ ಬಿಎಸ್‍ವೈ ಮಾತ್ರೆಗಳನ್ನು ಸೇವಿಸಿ ಚುನಾವಣೆ ಪ್ರಚಾರ …
Read More »