Breaking News

Yearly Archives: 2021

ಮುಷ್ಕರನಿರತ ಸಾರಿಗೆ ನೌಕರರಿಗೆ ಸರ್ಕಾರದಿಂದ ಶಾಕ್: 271 ಚಾಲಕರು, ನಿರ್ವಾಹಕರು ಸಸ್ಪೆಂಡ್

ಬೆಂಗಳೂರು: ಮುಷ್ಕರನಿರತ ನೌಕರರ ಮೇಲೆ ಬಿಎಂಟಿಸಿ ಶಿಸ್ತು ಕ್ರಮ ಕೈಗೊಂಡಿದೆ. 271 ಚಾಲಕರು ಮತ್ತು ನಿರ್ವಾಹಕರನ್ನು ಅಮಾನತು ಮಾಡಲಾಗಿದೆ. ಕರ್ತವ್ಯಕ್ಕೆ ಗೈರು ಹಾಜರಾದ ಹಿನ್ನೆಲೆಯಲ್ಲಿ ಚಾಲಕರು ಮತ್ತು ನಿರ್ವಾಹಕರನ್ನು ಅಮಾನತು ಮಾಡಿ ಆದೇಶ ಹೊರಡಿಸಲಾಗಿದೆ. ಕಳೆದ 8 ದಿನದಲ್ಲಿ 495 ನೌಕರರ ಮೇಲೆ ಶಿಸ್ತಿನ ಅಸ್ತ್ರ ಪ್ರಯೋಗಿಸಲಾಗಿದೆ. ಸಾರಿಗೆ ನೌಕರರ ಮುಷ್ಕರ 9 ನೇ ದಿನಕ್ಕೆ ಕಾಲಿಟ್ಟಿದ್ದು, ಇಂದು ಸಂಜೆ ಮೇಣದಬತ್ತಿ ಹಿಡಿದು ಪ್ರತಿಭಟನೆ ನಡೆಸಲಾಗುವುದು. ಸಾರಿಗೆ ನೌಕರರ ಮುಷ್ಕರವನ್ನು …

Read More »

ಹಾವೇರಿಯಲ್ಲಿ ಹೋಳಿ ಹಬ್ಬದಲ್ಲಿ ಕೈಚಳಕ ತೋರಿದ್ದ ಕಳ್ಳರು ಪೊಲೀಸರ ಬಲೆಗೆ

ಹಾವೇರಿ: ಮಾರ್ಚ್ 28, 2021ರಂದು ಹಾವೇರಿ ನಗರದ ಜನರು ಅದರಲ್ಲೂ ಯಾಲಕ್ಕಿ ಓಣಿಯ ಜನರು ಅಕ್ಷರಶಃ ಬೆಚ್ಚಿ ಬಿದ್ದಿದ್ದರು. ಯಾಕಂದರೆ, ಮಾರ್ಚ್ 28, 2021ರಂದು ರಾತ್ರಿಯಿಡೀ ಜನರು ಹೋಳಿ ಹುಣ್ಣಿಮೆ ಪ್ರಯುಕ್ತ ಹಲಗೆ ಬಾರಿಸುವುದರಲ್ಲಿ ಬ್ಯುಸಿ ಆಗಿದ್ದರು. ಹೀಗೆ ಜನರು ಹಬ್ಬದ ಸಂಭ್ರಮದಲ್ಲಿ ಇದ್ದಾಗಲೇ ಹುಬ್ಬಳ್ಳಿ ಕಡೆಯಿಂದ ಬಂದಿದ್ದ ಮೂವರು ಖದೀಮರ ಗ್ಯಾಂಗ್ ಬೀಗ ಹಾಕಿದ ಮನೆಗಳನ್ನ ಟಾರ್ಗೆಟ್ ಮಾಡಿ ಹುಡುಕಾಡ್ತಿದ್ದರು‌. ಆಗ ಯಾಲಕ್ಕಿ ಓಣಿಯ ಗುಡಿಸಲು ಕೇರಿ ಓಣಿಯಲ್ಲಿ …

Read More »

ಹನುಮ ಜನ್ಮಭೂಮಿಯಿಂದ ರಾಮ ಜನ್ಮಭೂಮಿಗೆ ಸೈಕಲ್ ಯಾತ್ರೆ ಹೊರಟ ಹಾವೇರಿ ಯುವಕ

ಹಾವೇರಿ: ಯಾಲಕ್ಕಿ ಕಂಪಿನ ನಾಡಿನ ರಾಮಭಕ್ತ ಯುವಕ ಹನುಮ ಜನ್ಮಸ್ಥಳ ಕೊಪ್ಪಳ ಜಿಲ್ಲೆಯ ಅಂಜನಾದ್ರಿ ಬೆಟ್ಟದಿಂದ ರಾಮಜನ್ಮಭೂಮಿ ಅಯೋಧ್ಯೆ ವರೆಗೆ ಸೈಕಲ್ ಯಾತ್ರೆ ಕೈಗೊಂಡಿದ್ದಾರೆ. ಈ ಸೈಕಲ್ ಯಾತ್ರೆಗೆ ಹುಕ್ಕೇರಿಮಠದ ಸದಾಶಿವ ಶ್ರೀಗಳು ಹಾಗೂ ಗಣ್ಯರು ಚಾಲನೆ ನೀಡಿದರು. ನಗರದ ವಿವೇಕಾನಂದ.ಎಸ್.ಇಂಗಳಗಿ ತಮ್ಮ ಒತ್ತಡದ ಕೆಲಸಗಳ ನಡುವೆ ದೇಶದ ಒಳಿತಿಗಾಗಿ ಸಂಕಲ್ಪ ಮಾಡಿಕೊಂಡು ಯಾತ್ರೆಯನ್ನು ಕೈಗೊಂಡಿದ್ದಾರೆ. ಕೊರೊನಾ ಮುಕ್ತ ಭಾರತವಾಗಬೇಕು. ಜಿಲ್ಲೆಯ ಅಭಿವೃದ್ಧಿ, ಸಮಸ್ತ ಕರ್ನಾಟಕ ಜನರ ಒಳಿತಿಗಾಗಿ ಹಾಗೂ …

Read More »

ಯಡಿಯೂರಪ್ಪ ಆರೋಗ್ಯದಲ್ಲಿ ಏರುಪೇರು-

ಬೆಳಗಾವಿ: ಉಪಚುನಾವಣಾ ಪ್ರಚಾರದಲ್ಲಿ ಬ್ಯುಸಿಯಾಗಿರುವ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಆರೋಗ್ಯದಲ್ಲಿ ಏರುಪೇರು ಉಂಟಾಗಿದೆ. ಹೌದು. ಯಡಿಯೂರಪ್ಪ ಅವರಿಗೆ ಜ್ವರ ಬಂದಿರುವ ಹಿನ್ನೆಲೆಯಲ್ಲಿ ಬೆಳಗಾವಿಯ ಖಾಸಗಿ ಹೋಟೆಲ್ ಗೆ ವೈದ್ಯಕೀಯ ತಪಾಸಣೆ ನಡೆಸಲು ವೈದ್ಯರ ತಂಡ ಆಗಮಿಸಿದೆ. ಕೆ.ಎಲ್‍ಇ ಆಸ್ಪತ್ರೆಯ ವೈದ್ಯರಾದ ಮಾಧವ ಪ್ರಭು, ಸಂತೋಷ ಪಾಟೀಲ್ ಆಗಮಿಸಿ ಬಿಎಸ್‍ವೈ ಅವರ ಆರೋಗ್ಯ ತಪಾಸಣೆ ನಡೆಸಿದ್ದಾರೆ. ಇಸಿಜಿ, ಪಲ್ಸ್ ಆಕ್ಸಿ ಮೀಟರ್ ಸೇರಿದಂತೆ ವೈದ್ಯಕೀಯ ತಪಾಸಣೆ ನಡೆಸಲು ಉಪಕರಣವನ್ನು ಸಿಬ್ಬಂದಿ ತಂದಿದ್ದಾರೆ. …

Read More »

ಕೊನೆಯ ಸ್ಲಾಗ್ ಓವರ್ ಗಳಲ್ಲಿ ಬೌಲರ್ ಗಳ ಅತ್ಯುತ್ತಮ ಪ್ರದರ್ಶನದಿಂದ ಆರ್ ಸಿಬಿ ಹೈದರಾಬಾದ್ ವಿರುದ್ಧ 6 ರನ್‍ಗಳಿಂದ ಪಂದ್ಯವನ್ನು ರೋಚಕವಾಗಿ ಗೆದ್ದುಕೊಂಡಿದೆ.

ಚೆನ್ನೈ: ಕೊನೆಯ ಸ್ಲಾಗ್ ಓವರ್ ಗಳಲ್ಲಿ ಬೌಲರ್ ಗಳ ಅತ್ಯುತ್ತಮ ಪ್ರದರ್ಶನದಿಂದ ಆರ್ ಸಿಬಿ ಹೈದರಾಬಾದ್ ವಿರುದ್ಧ 6 ರನ್‍ಗಳಿಂದ ಪಂದ್ಯವನ್ನು ರೋಚಕವಾಗಿ ಗೆದ್ದುಕೊಂಡಿದೆ. ಗೆಲ್ಲಲು 150 ರನ್ ಗಳ ಸವಾಲು ಪಡೆದ ಹೈದರಾಬಾದ್ ಅಂತಿಮವಾಗಿ 20 ಓವರ್ ಗಳಲ್ಲಿ 9 ವಿಕೆಟ್ ನಷ್ಟಕ್ಕೆ 143 ರನ್ ಗಳಿಸಿ ಸೋಲನ್ನು ಅನುಭವಿಸಿತು. 96 ರನ್ ಗಳಿಗೆ 1 ವಿಕೆಟ್ ಕಳೆದುಕೊಂಡು ಉತ್ತಮ ಸ್ಥಿತಿಯಲ್ಲಿದ್ದ ಹೈದರಾಬಾದ್ 46 ರನ್ ಗಳಿಸುಷ್ಟರಲ್ಲಿ 8 …

Read More »

ಕರ್ನಾಟಕದ ಮುಖ್ಯಮಂತ್ರಿ ಬಿ ಎಸ್ ಯಡ್ಡಿಯೂರಪ್ಪ ಗೋಕಾಕಕ್ಕೆ ಆಗಮಿಸಿ ಬೈ ಎಲೆಕ್ಷನ್ ಪ್ರಚಾರದಲ್ಲಿ ಬಾಗಿ.

ಕರ್ನಾಟಕದ ಮುಖ್ಯಮಂತ್ರಿ ಬಿ ಎಸ್ ಯಡ್ಡಿಯೂರಪ್ಪ ಗೋಕಾಕಕ್ಕೆ ಆಗಮಿಸಿ ಬೈ ಎಲೆಕ್ಷನ್ ಪ್ರಚಾರದಲ್ಲಿ ಬಾಗಿ. *ಹೆಚ್ಚಿನ ಸುದ್ದಿಗಾಗಿ ಲಕ್ಷ್ಮಿ ನ್ಯೂಸ್ ಚಾನಲ್ ಅನ್ನ subscribe ಹಾಗೂ ಕ್ಷಣ ಕ್ಷಣದ ಸುದ್ದಿಗಳಿಗಾಗಿ ಲಕ್ಷ್ಮಿ ನ್ಯೂಸ್ ವೆಬ್ ಸೈಟ್ ಫಾಲೋ ಮಾಡಿ*?? *ಸುದ್ದಿ ಮತ್ತು ಜಾಹೀರಾತುಗಳಿಗೆ ಸಂಪರ್ಕಿಸಿರಿ*: *8123967576* *Laxmi News*

Read More »

ಗೋಕಾಕ: ಲೋಕಸಭಾ ಉಪಚುನಾವಣೆಯ ಹಿನ್ನಲೆಯಲ್ಲಿ ಕಾಂಗ್ರೇಸ್ ಅಭ್ಯರ್ಥಿ ಸತೀಶ ಜಾರಕಿಹೊಳಿ ಅವರು ರೋಡ್ ಶೋ ಮೂಲಕ ಪ್ರಚಾರ ನಡೆಸಿ ಮತಯಾಚನೆ ನಡೆಸಿದರು.

ಗೋಕಾಕ: ಕಳೆದ 30 ವರ್ಷಗಳಿಂದ ಎಲ್ಲ ಸಮುದಾಯಗಳ ಅಭಿವೃದ್ದಿಗೆ ಶ್ರಮಿಸುತ್ತಿದ್ದು, ಈ ಬಾರಿ ಲೋಕಸಭಾ ಉಪಚುನಾವಣೆಯಲ್ಲಿ ತಮ್ಮ ಅಮೂಲ್ಯವಾದ ಮತಗಳನ್ನು ನೀಡಿ ಇನ್ನೂ ಹೆಚ್ಚಿನ ಸೇವೆ ಮಾಡಲು ಅವಕಾಶ ಕಲ್ಪಿಸಿಕೊಡುವಂತೆ ಕಾಂಗ್ರೇಸ್ ಅಭ್ಯರ್ಥಿ ಸತೀಶ ಜಾರಕಿಹೊಳಿ ಮತದಾರರಲ್ಲಿ ವಿನಂತಿಸಿದರು. ಮಂಗಳವಾರದಂದು ಸಂಜೆ ನಗರದ ಪ್ರಮುಖ ರಸ್ತೆಗಳಲ್ಲಿ ಹಮ್ಮಿಕೊಂಡ ರೋಡ್ ಶೋ ಮೂಲಕ ಪ್ರಚಾರ ನಡೆಸಿ ಮತಯಾಚನೆ ನಡೆಸಿ ಮಾತನಾಡಿದ ಅವರು, ನಾನು ಹುಟ್ಟಿ ಬೆಳೆದ ನನ್ನೂರಿನ ಜನ ನನಗೆ ಆಶೀರ್ವಾದ …

Read More »

ಇಲ್ಲಿಯ ಲಕ್ಷ್ಮೀ ಎಜುಕೇಶನ ಟ್ರಸ್ಟಿನ ವಿವಿಧ ಅಂಗ ಸಂಸ್ಥೆಗಳ ಸಂಯುಕ್ತಾಶ್ರಯದಲ್ಲಿ ಡಾ: ಬಿ.ಆರ್.ಅಂಬೇಡ್ಕರ ಅವರ 130ನೇ

ಗೋಕಾಕ: ಇಲ್ಲಿಯ ಲಕ್ಷ್ಮೀ ಎಜುಕೇಶನ ಟ್ರಸ್ಟಿನ ವಿವಿಧ ಅಂಗ ಸಂಸ್ಥೆಗಳ ಸಂಯುಕ್ತಾಶ್ರಯದಲ್ಲಿ ಡಾ: ಬಿ.ಆರ್.ಅಂಬೇಡ್ಕರ ಅವರ 130ನೇ ಜನ್ಮ ದಿನಾಚರಣೆ ನಿಮಿತ್ಯ ಭಾವಚಿತ್ರಕ್ಕೆ ಪೂಜೆಯನ್ನು ಸಂಸ್ಥೆಯ ವ್ಯವಸ್ಥಾಪಕ ನಿರ್ದೆಶಕ ಸನತ ಜಾರಕಿಹೊಳಿ ಅವರು ನೆರವೇರಿಸಿದರು. ಚಿತ್ರದಲ್ಲಿ ವಿವಿಧ ಅಂಗ ಸಂಸ್ಥೆಗಳ ಮುಖ್ಯಸ್ಥರಾದ ಆಯ್.ಎಸ್.ಪವಾರ, ಎನ್.ಕೆ.ಮಿರಾಶಿ, ಡಾ: ಎಸ್.ಎಮ್.ನದಾಫ, ಬಿ.ಕೆ.ಕುಲಕರ್ಣಿ, ಎಚ್.ವಿ.ಪಾಗನೀಸ, ಪಿ.ವಿ.ಚಚಡಿ ಇದ್ದಾರೆ.

Read More »

ಇದೇ ಶನಿವಾರ (ಎ.17) ನಡೆಯುವ ಉಪಚುನಾವಣೆಯಲ್ಲಿ ಬೆಳಗಾವಿ ಲೋಕಸಭಾ ಕ್ಷೇತ್ರದ ಮತದಾರರು ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ, ನನ್ನ ಗೆಲುವಿಗೆ ಸಹಕರಿಸಬೇಕು”.:

ಬೆಳಗಾವಿ ಗ್ರಾಮೀಣ ವಿಧಾನಸಭಾ ಮತಕ್ಷೇತ್ರದ ಮಾರೀಹಾಳ, ಬಾಳೇಕುಂದ್ರಿ, ಮೋದಗಾ, ಬಾಳೇಕುಂದ್ರಿ ಕೆ.ಎಚ್., ಮುತಗಾ, ಸಾಂಬ್ರಾ, ತಾರೀಹಾಳ, ಕೆ.ಕೆ. ಕೊಪ್ಪ ಗ್ರಾಮಗಳಲ್ಲಿ ಇಂದು ಬೆಳಗಾವಿ ಲೋಕಸಭಾ ಉಪಚುನಾವಣೆಯ ಪ್ರಚಾರ ನಡೆಸಿ, ಮತಯಾಚಿಸಲಾಯಿತು. ಪ್ರಚಾರದಲ್ಲಿ ಗ್ರಾಮೀಣ ಕ್ಷೇತ್ರದ ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ಹಾಗೂ ವಿವಿಧ ಮುಖಂಡರು ಸಾಥ್ ನೀಡಿದರು. “ಎಲ್ಲ ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ಜನರು ತುಂಬಾ ಕಷ್ಟಪಡುತ್ತಿದ್ದಾರೆ. ಬಿಜೆಪಿ ಸರ್ಕಾರವನ್ನು ನಿಯಂತ್ರಣ ಮಾಡದೇ ಹೋದರೆ ಮುಂದಿನ ದಿನಗಳಲ್ಲಿ ಅಗತ್ಯ ವಸ್ತುಗಳ …

Read More »

ಇಂತಹ ಕೆಟ್ಟ ಸರ್ಕಾರವನ್ನ ಹಿಂದೆಯೂ ನೋಡಿರಲಿಲ್ಲ.. ಮುಂದೆಯೂ ಬರುವುದಿಲ್ಲ: ಹೆಚ್‌.ಡಿ ಕುಮಾರಸ್ವಾಮಿ

ಬೀದರ್: ಕರ್ನಾಟಕದಲ್ಲಿ ಇಂತಹ ಕೆಟ್ಟ ಸರಕಾರ ನೋಡಿರಲಿಲ್ಲ. ಹಿಂದೆಯೂ ಇಂತಹ ಸರ್ಕಾರ ಬಂದಿರಲಿಲ್ಲ.. ಮುಂದೆಯೂ ಬರುವುದಿಲ್ಲ.. ಕೊರೊನಾದಿಂದ ಜನರನ್ನ ದೇವರೇ ಕಾಪಾಡಬೇಕು ಎಂದು ಮಾಜಿ ಮುಖ್ಯಮಂತ್ರಿ ಹೆಚ್‌. ಡಿ ಕುಮಾರಸ್ವಾಮಿ ಹೇಳಿದ್ದಾರೆ. ಬಸವ ಕಲ್ಯಾಣದಲ್ಲಿ ಮಾತನಾಡಿದ ಮಾಜಿ ಸಿಎಂ ‘ಮುಖ್ಯಮಂತ್ರಿ ಯಡಿಯೂರಪ್ಪ ಹೇಳಿಕೆ ಗಮನಿಸಿದೆ. 18ರ ನಂತ್ರ ಸರ್ವಪಕ್ಷ ಸಭೆ ಕರೆದು ಸಲಹೆ ಪಡೆಯುವುದಾಗಿ ಕೇಳ್ತಾರಂತೆ. ಯಾವ ಪುರುಷಾರ್ಥಕ್ಕಾಗಿ ಸಭೆ ಕರೆಯುತ್ತಾರೆ.. ಸಲಹೆ ಪಡೆಯುತ್ತಾರೆ? ಎಂದು ಪ್ರಶ್ನಿಸಿದರು. ಇನ್ನು ಈಗಾಗಲೇ …

Read More »