Breaking News

Yearly Archives: 2021

ಪಕ್ಷದಿಂದ ಉಚ್ಛಾಟನೆ ಮಾಡಬೇಡಿ ಅಂತ ಎಂದೂ ಯಾರಿಗೂಹೇಳಿಲ್ಲ.: ಅರುಣಸಿಂಗ್‍ಗೆ ಯತ್ನಾಳ ತಿರುಗೇಟು

ಹುಬ್ಬಳ್ಳಿ: ತನ್ನನ್ನು ವಜಾ ಮಾಡುವುದಾಗಿ ಹೇಳಿರುವ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ ಸಿಂಗ್ ಅವರ ಹೇಳಿಕೆಗೆ ಬಸನಗೌಡ ಪಾಟೀಲ ಯತ್ನಾಳ ತಿರುಗೇಟು ನೀಡಿದ್ದಾರೆ. ಮುಖ್ಯಮಂತ್ರಿ ಕುಟುಂಬದ ಭ್ರಷ್ಟಾಚಾರ, ಕುಟುಂಬ ರಾಜಕಾರಣ ವಿರುದ್ಧ ಮಾತನಾಡಿದ್ದೇನೆ. ಭ್ರಷ್ಟಾಚಾರದಲ್ಲಿ ತೊಡಗಿರುವವರನ್ನು ಮೊದಲು ಉಚ್ಛಾಟಿಸಲಿ ನಂತರ ನನ್ನ ಬಗ್ಗೆ ಚಿಂತನೆ ಮಾಡಲಿ ಎಂದು ಪ್ರತ್ಯುತ್ತರ ನೀಡಿದ್ದಾರೆ. ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನನ್ನನ್ನು ಪಕ್ಷದಿಂದ ಉಚ್ಛಾಟನೆ ಮಾಡಬೇಡಿ ಅಂತ ಎಂದೂ ಯಾರಿಗೂ ಹೇಳಿಲ್ಲ. ನೀವೆ ತಂದೆ …

Read More »

ಕಾನೂನು ಸುವ್ಯವಸ್ಥೆಗೆ 10 ಸ್ಕಾರ್ಪಿಯೊ

ಕಲಬುರ್ಗಿ: ದೆಹಲಿಯ ನಿರ್ಭಯಾ ಘಟನೆ ಬಳಿಕ ನಗರ ಪ್ರದೇಶದಲ್ಲಿ ಮಹಿಳಾ ಸುರಕ್ಷತೆ ಸೇರಿದಂತೆ ಸಂಭವ ನೀಯ ಅವಘಡಗಳನ್ನು ತಡೆಯಲು ಕಲಬುರ್ಗಿ ಕಮಿಷನರೇಟ್‌ಗೆ ಗೃಹ ಇಲಾಖೆ 10 ಸುಸಜ್ಜಿತ ಸ್ಕಾರ್ಪಿಯೊ ಜೀಪ್‌ಗಳನ್ನು ಮಂಜೂರು ಮಾಡಿದೆ. ಕೆಲವೇ ದಿನಗಳಲ್ಲಿ ಅವು ಸೇವೆಗೆ ಸೇರ್ಪಡೆಗೊಳ್ಳಲಿವೆ. ಈ ವಾಹನಕ್ಕೆ ಜಿಪಿಎಸ್‌ ವ್ಯವಸ್ಥೆ ಇರಲಿದ್ದು, 112 ಸಂಖ್ಯೆಗೆ ಯಾರಾದರೂ ಕರೆ ಮಾಡಿದರೆ ಅದರ ವಿವರಗಳು ಬೆಂಗಳೂರಿನ ಕಂಟ್ರೋಲ್‌ ರೂಮ್‌ಗೆ ಹೋಗಲಿದೆ. ಅಲ್ಲಿಂದ ಸಮೀಪದ ವಾಹನದಲ್ಲಿರುವ ಕಂಪ್ಯೂಟರ್‌ ಪರದೆಯ …

Read More »

5ನೇ ದಿನಕ್ಕೆ ಕಾಲಿಟ್ಟ ಸಾರಿಗೆ ನೌಕರರ ಮುಷ್ಕರ : ಇಂದು 8 ಗಂಟೆಯವರೆಗೆ ಸಂಚರಿಸಿದ ಸಾರಿಗೆ ಬಸ್ ಗಳು ಎಷ್ಟು ಗೊತ್ತಾ.?

ಬೆಂಗಳೂರು : ಸಾರಿಗೆ ನೌಕರರ ಮುಷ್ಕರ ಇಂದಿಗೆ 5ನೇ ದಿನಕ್ಕೆ ಕಾಲಿಟ್ಟಿದೆ. 6ನೇ ವೇತನ ಆಯೋಗ ಶಿಫಾರಸ್ಸು ಸೇರಿದಂತೆ ವಿವಿಧ ಬೇಡಿಕೆಗಳನ್ನು ಒತ್ತಾಯಿಸಿ, ಇಂದು ಕೂಡ ಸಾರಿಗೆ ನೌಕರರು ಅನಿರ್ಧಿಷ್ಟಾವಧಿಯ ಮುಷ್ಕರ ಮುಂದುವರೆಸಿದ್ದಾರೆ. ಇಂತಹ ಸಾರಿಗೆ ನೌಕರರ ಮುಷ್ಕರದಿಂದಾಗಿ ರಾಜ್ಯಾಧ್ಯಂತ ಸಾರಿಗೆ ಬಸ್ ಸಂಚಾರ ಕೂಡ ವಿರಳವಾಗಿದೆ. ಯುಗಾದಿ ಹಬ್ಬಕ್ಕೆ ತೆರಳುತ್ತಿರುವಂತ ನೌಕರರು ಬಸ್ ಗಳಿಲ್ಲದೇ ಪರದಾಡುವಂತ ಪರಿಸ್ಥಿತಿಯನ್ನು ಎದುರಿಸುವಂತಾಗಿದೆ. ಇದರ ಮಧ್ಯೆ 8 ಗಂಟೆಯವರೆಗೆ ವಿವಿಧ ನಿಗಮಗಳಿಂದ ಒಟ್ಟು …

Read More »

ಯಡಿಯೂರಪ್ಪನವರ ಕೈ ಬಲಪಡಿಸಿ ಅವರಿಗೆ ಶಕ್ತಿ ತುಂಬುವಂತೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಶಶಿಕಲಾ ಜೊಲ್ಲೆ ಹೇಳಿದರು.

ಗೋಕಾಕ: ಮಹಿಳೆಯರ ಕಲ್ಯಾಣಕ್ಕಾಗಿ ಬಿಜೆಪಿ ನೇತೃತ್ವದ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಶ್ರಮಿಸುತ್ತಿದ್ದು, ಸಾಕಷ್ಟು ಯೋಜನೆಗಳನ್ನು ಮಹಿಳೆಯರ ಅಭ್ಯುದಯಕ್ಕಾಗಿ ರೂಪಿಸಿವೆ. ಸಮಗ್ರ ಅಭಿವೃದ್ದಿ ದೃಷ್ಟಿಕೋನದಿಂದ ಬಿಜೆಪಿಗೆ ಆಶೀರ್ವದಿಸಿ ಪ್ರಧಾನಿ ನರೇಂದ್ರ ಮೋದಿ ಮತ್ತು ಸಿಎಮ್ ಯಡಿಯೂರಪ್ಪನವರ ಕೈ ಬಲಪಡಿಸಿ ಅವರಿಗೆ ಶಕ್ತಿ ತುಂಬುವಂತೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಶಶಿಕಲಾ ಜೊಲ್ಲೆ ಹೇಳಿದರು. ಶನಿವಾರದಂದು ಇಲ್ಲಿನ ಹೊರವಲಯದ ಪ್ರಭಾ ಶುಗರ್ಸ್ ಪ್ರಿಯದರ್ಶಿನಿ ಸಮುದಾಯ ಭವನದಲ್ಲಿ ಅಭ್ಯರ್ಥಿ ಮಂಗಳಾ ಅಂಗಡಿ …

Read More »

ರಜಾ ದಿನವೂ ನಾಮಪತ್ರ ಸಲ್ಲಿಕೆಗೆ ಅವಕಾಶ ನೀಡಲು ಡಿಕೆಶಿ ಮನವಿ

ಬೆಂಗಳೂರು: ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ನಾಮಪತ್ರ ಸಲ್ಲಿಸಲು ರಜಾದಿನವಾದ ಏ.13 ಮತ್ತು 14 ರಂದು ನಾಮಪತ್ರ ಸಲ್ಲಿಕೆಗೆ ಅವಕಾಶ ಮಾಡಿಕೊಡಲು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ರಾಜ್ಯ ಚುನಾವಣಾ ಆಯುಕ್ತರಿಗೆ ಮನವಿ ಮಾಡಿದ್ದಾರೆ. ಈ ಕುರಿತು ಪತ್ರ ಬರೆದಿರುವ ಅವರು, ರಾಜ್ಯದ 8 ಜಿಲ್ಲೆಗಳ 10 ನಗರ ಸ್ಥಳೀಯ ಸಂಸ್ಥೆಗಳ 266 ವಾರ್ಡ್‌ಗಳಿಗೆ ನಿಗದಿಯಾಗಿರುವ ಚುನಾವಣೆಗೆ ಏ.15 ನಾಮಪತ್ರ ಸಲ್ಲಿಕೆಗೆ ಕೊನೆಯ ದಿನ. ನಾಮಪತ್ರ ಸಲ್ಲಿಕೆಗೆ 8 ದಿನ ಕಾಲಾವಕಾಶ …

Read More »

ಕೋವಿಡ್ ಟೆಸ್ಟ್ ಮಾಡದೆ ಸಾಮಗ್ರಿಗಳ ವ್ಯರ್ಥ- ಇಬ್ಬರು ಆರೋಗ್ಯ ಸಿಬ್ಬಂದಿ ಅಮಾನತು

ಬೆಂಗಳೂರು: ಕೋವಿಡ್ ಟೆಸ್ಟ್ ಮಾಡದೆ ಸಾಮಗ್ರಿಗಳನ್ನು ವ್ಯರ್ಥ ಮಾಡುತ್ತಿದ್ದ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದಂತೆ ಆರೋಗ್ಯ ಸಿಬ್ಬಂದಿಯನ್ನು ಅಮಾನತು ಮಾಡಲಾಗಿದೆ. ಯಲಹಂಕ ವಲಯದ ಕೊಡಿಗೇಹಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಕೋವಿಡ್ ಟೆಸ್ಟ್ ಮಾಡದೆ ಟೆಸ್ಟಿಂಗ್ ಸಾಮಗ್ರಿಗಳನ್ನು ವ್ಯರ್ಥ ಮಾಡುತ್ತಿದ್ದರು. ಅಲ್ಲದೆ ಹೆಚ್ಚು ಟೆಸ್ಟ್ ಮಾಡಿದಂತೆ ಲೆಕ್ಕ ನೀಡುತ್ತಿದ್ದರು. ಈ ದೃಶ್ಯಾವಳಿ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗಿತ್ತು. ದೃಶ್ಯಾವಳಿ ಗಮನಿಸಿದ ಆಧಾರದ ಮೇಲೆ ಇಬ್ಬರು ಸ್ವಾಬ್ ಕಲೆಕ್ಟರ್ ಗಳನ್ನು …

Read More »

ಬ್ಯಾಂಕ್ ಆಫ್ ಬರೋಡಾ – ಪದವಿ ಆದವರಿಗೆ ಉದ್ಯೋಗಾವಕಾಶ

ಸೀನಿಯರ್ ರಿಲೇಶನ್‌ಶಿಪ್ ಮ್ಯಾನೇಜರ್, ಟೆರಿಟರಿ ಹೆಡ್, ಪ್ರಾಡಕ್ಟ್ ಹೆಡ್, ಐಟಿ ಫಂಕ್ಷನಲ್ ಅನಾಲಿಸ್ಟ್ ಮತ್ತು ಇತರ ಹುದ್ದೆಗಳ ನೇಮಕಾತಿಗಾಗಿ ಬ್ಯಾಂಕ್ ಆಫ್ ಬರೋಡಾ (ಬಿಒಬಿ) ಅಧಿಕೃತ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ bankofbaroda.in ಮೂಲಕ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು. ಅಭ್ಯರ್ಥಿಗಳು 29 ಏಪ್ರಿಲ್ 2021 ರೊಳಗೆ ಇತ್ತೀಚಿನ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು. ಖಾಲಿ ಹುದ್ದೆಗಳ‌ ವಿವರಗಳು ಬ್ಯಾಂಕ್ ಆಫ್ ಬರೋಡಾ (ಬಿಒಬಿ) …

Read More »

ಅನುಕಂಪದ ನೌಕರಿ ನಿಯಮ ತಿದ್ದುಪಡಿಗೆ ಅಧಿಸೂಚನೆ: ಏನಿದೆ ಹೊಸ ನಿಯಮದಲ್ಲಿ?

ಬೆಂಗಳೂರು: ಸರ್ಕಾರಿ ಹುದ್ದೆಯಲ್ಲಿದ್ದವರು ಮೃತಪಟ್ಟರೆ, ಅನುಕಂಪದ ಆಧಾರದಲ್ಲಿ ಅವಲಂಬಿತರಿಗೆ ಸರ್ಕಾರಿ ಹುದ್ದೆಗೆ ನೇಮಕಾತಿ ಮಾಡಿಕೊಳ್ಳುವ ಕುರಿತಂತೆ ಕರ್ನಾಟಕ ನಾಗರಿಕ ಸೇವಾ (ಅನುಕಂಪದ ಆಧಾರದ ಮೇಲೆ ನೇಮಕಾತಿ) ನಿಯಮಗಳಿಗೆ ತಿದ್ದುಪಡಿ ಮಾಡಿ ರಾಜ್ಯ ಸರ್ಕಾರ ಅಧಿಸೂಚನೆ ಹೊರಡಿಸಿದೆ. ತಿದ್ದುಪಡಿ ನಿಯಮದ ಪ್ರಕಾರ, ಸರ್ಕಾರಿ ನೌಕರ ಮೃತಪಟ್ಟರೆ ಆತನ ಜೊತೆ ವಾಸವಿದ್ದ ವಿಧವಾ ಪತ್ನಿ ಅನುಕಂಪದ ಆಧಾರದಲ್ಲಿ ಹುದ್ದೆ ಪಡೆಯಲು ಅರ್ಹರಾಗುತ್ತಾರೆ. ನೇಮಕಾತಿಗೆ ಆಕೆಗೆ ಅರ್ಹತೆ ಇಲ್ಲದಿದ್ದರೆ ಅಥವಾ ನೇಮಕಾತಿ ಬಯಸದೇ ಇದ್ದರೆ …

Read More »

ಬೆಳಗಾವಿಯಲ್ಲಿ ಹುಲಿಯಾ ಸಿದ್ದರಾಮಯ್ಯನವರಿಗೆ ಕುಡುಕನ ಕಾಟ!

ಬೆಳಗಾವಿ, ಏಪ್ರಿಲ್ 10: ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯನವರ ಚುನಾವಣಾ ಪ್ರಚಾರದ ವೇಳೆ ವ್ಯಕ್ತಿಯೊಬ್ಬ ಗಲಾಟೆ ಮಾಡಿದ್ದರಿಂದ, ಆತನನ್ನು ಸ್ಥಳದಿಂದ ಹೊರಕ್ಕೆ ಹಾಕಿದ ಘಟನೆ ಶುಕ್ರವಾರ (ಏ 9) ರಾತ್ರಿ ನಡೆದಿದೆ. ಕಾಂಗ್ರೆಸ್ ಅಭ್ಯರ್ಥಿ ಸತೀಶ್ ಜಾರಕಿಹೊಳಿ ಪ್ರಚಾರ ಮಾಡುತ್ತಾ ಸಿದ್ದರಾಮಯ್ಯ, “ಏನು ಮಾಡಿದರೂ ರೈತರು ಸುಮ್ಮನಿರುತ್ತಾರೆ ಎಂದು ಬಿಜೆಪಿಯವರು ಅಂದು ಕೊಂಡಿದ್ದರು. ಈಗ ರೈತರ ಪ್ರತಿಭಟನೆಯ ಬಿಸಿ ಬಿಜೆಪಿಗೆ ತಟ್ಟಿದೆ”ಎಂದು ಸಿದ್ದರಾಮಯ್ಯ ಭಾಷಣ ಮಾಡುತ್ತಿದ್ದರು.   ಆಗ ಸಭೆಗೆ …

Read More »

ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರಿಗೆ ಸಮಾಜದ ವತಿಯಿಂದ ‘ಪಂಚಅಶ್ವ’ ಎಂಬ ಕುದುರೆಯನ್ನು ಶುಕ್ರವಾರ ಕೊಡುಗೆ ನೀಡಲಾಯಿತು.

ಬೈಲಹೊಂಗಲ: ಲಿಂಗಾಯತ ಪಂಚಮಸಾಲಿ ಸಮಾಜದ ಮೀಸಲಾತಿ ಹೋರಾಟದಲ್ಲಿ ಪ್ರಮುಖರಾಗಿ ಗುರುತಿಸಿಕೊಂಡಿರುವ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರಿಗೆ ಸಮಾಜದ ವತಿಯಿಂದ ‘ಪಂಚಅಶ್ವ’ ಎಂಬ ಕುದುರೆಯನ್ನು ಶುಕ್ರವಾರ ಕೊಡುಗೆ ನೀಡಲಾಯಿತು. ಪಟ್ಟಣದ ವೀರರಾಣಿ ಕಿತ್ತೂರು ಚನ್ನಮ್ಮನ ವೃತ್ತದಲ್ಲಿ ನಡೆದ ಕಾರ್ಯಕ್ರಮದಲ್ಲಿ, ಯತ್ನಾಳ್ ಹಾಗೂ ಬಸವ ಜಯಮೃತ್ಯುಂಜಯ ಸ್ವಾಮೀಜಿ ಅವರನ್ನು ಅದ್ಧೂರಿಯಾಗಿ ಸ್ವಾಗತಿಸಲಾಯಿತು. ಚನ್ನಮ್ಮನ ಪುತ್ಥಳಿಗೆ ಪುಷ್ಪ ಮಾಲೆ ಹಾಕಿ ಕೇಸರಿ ತಿಲಕ ಹಚ್ಚಿಕೊಂಡು ಬಿಳಿ ಬಣ್ಣದ ಕುದುರೆ ಏರಿದ ಯತ್ನಾಳ, ‘ಜೈ …

Read More »