ಬೆಂಗಳೂರು; ಸಾರಿಗೆ ನೌಕರರ ಮುಷ್ಕರ 4ನೇ ದಿನಕ್ಕೆ ಕಾಲಿಟ್ಟಿದ್ದು, ಕರ್ತವ್ಯಕ್ಕೆ ಹಾಜರಾಗದ ಸಾರಿಗೆ ಸಿಬ್ಬಂದಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಬಿಎಂಟಿಸಿ ಮುಂದಾಗಿದ್ದು, ಮುಷ್ಕರ ಹತ್ತಿಕ್ಕಲು ಸರ್ವಪ್ರಯತ್ನ ನಡೆಸಿದೆ. ಮುಷ್ಕರದಲ್ಲಿ ಭಾಗವಹಿಸಿರುವ 118 ಸಾರಿಗೆ ಸಿಬ್ಬಂದಿಗಳನ್ನು ಬಿಎಂಟಿಸಿ ವಜಾ ಮಾಡಿ ಆದೇಶ ಹೊರಡಿಸಿದೆ. ಇದೇ ವೇಳೆ ಸೀನಿಯರ್ ನೌಕರರಿಗೆ ನಿವೃತ್ತಿ ನಿಡುವ ಎಚ್ಚರಿಕೆಯನ್ನು ನೀಡಿದೆ. 55 ವರ್ಷ ಮೇಲ್ಪಟ್ಟ ಬಿಎಂಟಿಸಿ ಸಿಬ್ಬಂದಿ ವೈದ್ಯಕೀಯ ಹಾಗೂ ದೇಹದಾರ್ಡ್ಯತೆ ಪ್ರಮಾಣ ಪತ್ರವನ್ನು ಏಪ್ರಿಲ್ …
Read More »Yearly Archives: 2021
62.55 ಲಕ್ಷ ನಗದು ವಶ ಚುನಾವಣಾ ಅಕ್ರಮ ತಡೆಗೆ ತೀವ್ರ ನಿಗಾ: ಡಾ.ಕೆ.ಹರೀಶ್ ಕುಮಾರ್
ಬೆಳಗಾವಿ: ಬೆಳಗಾವಿ ಲೋಕಸಭಾ ಉಪ ಚುನಾವಣೆ ಸಂದರ್ಭದಲ್ಲಿ ಅಕ್ರಮ ಹಣ ಅಥವಾ ಮದ್ಯ ಸಾಗಾಣಿಕೆ ಮೇಲೆ ತೀವ್ರ ನಿಗಾ ವಹಿಸಲಾಗಿದ್ದು, ಚೆಕ್ ಪೋಸ್ಟ್ ಗಳಲ್ಲಿ ಇದುವರೆಗೆ 62.55 ಲಕ್ಷ ರೂಪಾಯಿ ವಶಪಡಿಸಿಕೊಳ್ಳಲಾಗಿರುತ್ತದೆ ಎಂದು ಜಿಲ್ಲಾ ಚುನಾವಣಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ಡಾ.ಕೆ.ಹರೀಶ್ ಕುಮಾರ್ ತಿಳಿಸಿದ್ದಾರೆ. ಈ ಕುರಿತು ಪ್ರಕಟಣೆ ನೀಡಿರುವ ಅವರು, ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಸ್ಥಾಪಿಸಲಾಗಿರುವ 27 ಚೆಕ್ ಪೋಸ್ಟ್ ಗಳಲ್ಲಿ ಚುನಾವಣಾ ಕಾರ್ಯಕ್ಕೆ ನಿಯೋಜಿತಗೊಂಡಿರುವ ಎಸ್.ಎಸ್.ಟಿ. ತಂಡಗಳು ತಪಾಸಣೆ …
Read More »ಯಡಿಯೂರಪ್ಪ ಕುಳಿತಿರುವ ಹಡಗು ಮುಳುಗುತ್ತಿದೆ, ಯತ್ನಾಳ್ ಅದಕ್ಕೆ ಸಾಕ್ಷಿ : ಸಿದ್ದರಾಮಯ್ಯ
ಬೆಳಗಾವಿ, ಏ.10- ಸದ್ಯ ಮುಖ್ಯಮಂತ್ರಿ ಯಡಿಯೂರಪ್ಪ ಕುಳಿತಿರುವ ಹಡಗೇ ಈಗ ಮುಳುಗುತ್ತಿದೆ. ಇದಕ್ಕೆ ಅವರದ್ದೇ ಪಕ್ಷದ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಅವರೆ ಸಾಕ್ಷಿ ಎಂದು ಹೇಳುವ ಮೂಲಕ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ. ಕಾಂಗ್ರೆಸ್ ಮುಳುಗುತ್ತಿರುವ ಹಡಗು ಎಂಬ ಯಡಿಯೂರಪ್ಪ ಹೇಳಿಕೆಗೆ ತೀಕ್ಷ್ಣವಾಗಿ ಪ್ರತಿಕ್ರಿಯಿಸಿರುವ ಸಿದ್ದರಾಮಯ್ಯಅವರು, ಯಡಿಯೂರಪ್ಪ ಕುಳಿತಿರುವ ಹಡಗೇ ಮುಳುಗುತ್ತಿದೆ. ಬಸನಗೌಡ ಪಾಟೀಲ್ ಯತ್ನಾಳ್ ಅವರೇ ಇದಕ್ಕೆ ಸಾಕ್ಷಿಯಾಗಿದ್ದಾರೆ ಎಂದು ಹೇಳಿದ್ದಾರೆ. .ಮಾಧ್ಯಮದವರೊಂದಿಗೆ ಮಾತನಾಡಿದ ಅವರು, …
Read More »ನೀರಿನ ಟ್ಯಾಂಕ್‍ಗೆ ವಿಷ ಮಾತ್ರೆಯ ಬಾಟೆಲ್ ಹಾಕಿದ ಕಿರಾತಕರು
ವಿಜಯನಗರ: ಕುಡಿಯುವ ನೀರಿನ ಟ್ಯಾಂಕ್ ವಿಷದ ಮಾತ್ರೆಗಳು ತುಂಬಿದ ಬಾಟೆಲ್ ಹಾಕಿರುವ ಘಟನೆ ವಿಜಯನಗರ ಜಿಲ್ಲೆಯ ಹರಪನಹಳ್ಳಿ ತಾಲೂಕಿನ ಚಿಗಟೇರಿ ಗ್ರಾಮದಲ್ಲಿ ನಡೆದಿದೆ. ಗ್ರಾಮಸ್ಥರ ಸಮಯ ಪ್ರಜ್ಞೆಯಿಂದ ಭಾರೀ ಅನಾಹುತ ತಪ್ಪಿದೆ. ಬೆಳೆಗಳಿಗೆ ಸಿಂಪಡಿಸುವ ಕ್ರಿಮಿನಾಶಕ ಮಾತ್ರೆಗಳುಳ್ಳ ಬಾಟೆಲ್ ಇದಾಗಿದೆ. ಇಂದು ಬೆಳಗ್ಗೆ ನೀರು ಸರಬರಾಜು ಮಾಡುವ ಸಿಬ್ಬಂದಿ ಟ್ಯಾಂಕ್ ಮೇಲೇರಿ ಪರಿಶೀಲಿಸಿದಾಗ ನೀರಿನಲ್ಲಿ ವಿಷದ ಬಾಟೆಲ್ ಬಿದ್ದಿರೋದು ಕಂಡು ಬಂದಿದೆ. ಕೂಡಲೇ ಗ್ರಾಮಸ್ಥರಿಗೆ ವಿಷಯ ತಿಳಿಸಿದ್ದಾರೆ. ಸದ್ಯ ನೀರಿನಲ್ಲಿದ್ದ …
Read More »ಕಾಂಗ್ರೆಸ್ ಅಭ್ಯರ್ಥಿ ಸತೀಶ್ ಜಾರಕಿಹೊಳಿ ಗೆಲುವು ಸಾಧಿಸಿ ಹೊಸ ಇತಿಹಾಸ ನಿರ್ಮಿಸುತ್ತಾರೆ: ಸಿದ್ರಾಮಯ್ಯ
ಬೆಳಗಾವಿ ಲೋಕಸಭಾ ಮತಕ್ಷೇತ್ರದಲ್ಲಿ ಮಾಜಿ ಸಿಎಂ ಸಿದ್ರಾಮಯ್ಯ ಮತಬೇಟೆಯಾಡುತ್ತಿದ್ದು,ಇಂದು ಪ್ರಚಾರಕ್ಕೆ ತೆರಳುವ ಮುನ್ನ ಮಾದ್ಯಮಗಳ ಜೊತೆ ಮಾತನಾಡಿ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು. ಬೆಳಗಾವಿ ಲೋಕಸಭಾ ಮತಕ್ಷೇತ್ರದಲ್ಲಿ ನಿರೀಕ್ಷೆಗೆ ಮೀರಿ,ಬೆಂಬಲ ವ್ಯೆಕ್ತವಾಗುತ್ರಿದೆ,ಕಾಂಗ್ರೆಸ್ ಅಭ್ಯರ್ಥಿ ಸತೀಶ್ ಜಾರಕಿಹೊಳಿ ಗೆಲುವು ಸಾಧಿಸಿ ಹೊಸ ಇತಿಹಾಸ ನಿರ್ಮಿಸುತ್ತಾರೆ ಎಂದು ಸಿದ್ರಾಮಯ್ಯ ವಿಶ್ವಾಸ ವ್ಯೆಕ್ತ ಪಡಿಸಿದರು. ಸಿಎಂ ಯಡಿಯೂರಪ್ಪ ಕಾಂಗ್ರೆಸ್ ಮುಳುಗುತ್ತಿರುವ ಹಡಗು,ಎಂದು ಹೋದಲೆಲ್ಲಾ ಹೇಳ್ತಾ ಇದ್ದಾರೆ,ಯಡಿಯೂರಪ್ಪ ಕುಂತ ಹಡಗೇ ಈಗ ಮುಳುಗುತ್ತಿದೆ.ಯತ್ನಾಳ ಒಬ್ಬ ಸೀನಿಯರ್ …
Read More »ಕೋಡಿಹಳ್ಳಿ ಚಂದ್ರಶೇಖರ್ ಪೊಲೀಸರ ವಶಕ್ಕೆ
ಬೆಳಗಾವಿ: ಸಾರಿಗೆ ನೌಕರರ ಒಕ್ಕೂಟದ ಗೌರವಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ಅವರನ್ನು ಪೊಲೀಸರು ವಶಕ್ಕೆ ಪಡೆದಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ. 6ನೇ ವೇತನ ಆಯೋಗ ಜಾರಿಗೆ ಆಗ್ರಹಿಸಿ ಸಾರಿಗೆ ನೌಕರರು ನಡೆಸುತ್ತಿರುವ ಮುಷ್ಕರ 4ನೇ ದಿನಕ್ಕೆ ಕಾಲಿಟ್ಟಿದ್ದು, ಈ ನಡುವೆ ಮುಷ್ಕರವನ್ನು ರಾಜ್ಯಾದ್ಯಂತ ಇನ್ನಷ್ಟು ತೀವ್ರಗೊಳಿಸಲು ಸಿದ್ಧತೆ ನಡೆಸುವ ಸಲುವಾಗಿ ಕೋಡಿಹಳ್ಳಿ ಚಂದ್ರಶೇಖರ್ ಬೆಳಗಾವಿಗೆ ಆಗಮಿಸಿದ್ದರು. ಬೆಳಗಾವಿ ನಗರದ ಖಾಸಗಿ ಹೋಟೆಲ್ ನಲ್ಲಿ ಕೋಡಿಹಳ್ಳಿ ಚಂದ್ರಶೇಖರ್ ಸಾರಿಗೆ ನೌಕರರು ಹಾಗೂ ರೈತ …
Read More »RSS ಮುಖ್ಯಸ್ಥ ಮೋಹನ್ ಭಾಗವತ್ ಅವರಿಗೆ ಕೊರೊನಾವೈರಸ್!
ನಾಗ್ಪುರ್, ಏಪ್ರಿಲ್ 10: ದೇಶದಲ್ಲಿ ಕೊರೊನಾವೈರಸ್ ಸೋಂಕಿನ ಹರಡುವಿಕೆ ವೇಗ ಹೆಚ್ಚುತ್ತಿದೆ. ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಸರಸಂಘ ಚಾಲಕ ಮೋಹನ್ ಭಾಗವತ್ ಅವರಿಗೆ ಕೊರೊನಾವೈರಸ್ ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ. ಕೊವಿಡ್-19 ಸೋಂಕು ತಗುಲಿರುವು ಹಿನ್ನೆಲೆ ಮೋಹನ್ ಭಾಗವತ್ ಅವರನ್ನು ನಾಗ್ಪುರದಲ್ಲಿರುವ ಆಸ್ಪತ್ರೆಗೆ ದಾಖಲಿಸಿದ್ದು, ಚಿಕಿತ್ಸೆ ನೀಡಲಾಗುತ್ತಿದೆ ಎಂದು ಮೂಲಗಳಿಂದ ತಿಳಿದು ಬಂದಿದೆ. ಇತ್ತೀಚಿನ ದಿನಗಳಲ್ಲಿ ಅವರ ಜೊತೆಗೆ ಸಂಪರ್ಕಕ್ಕೆ ಬಂದಿದ್ದವರು ಸ್ವಯಂಪ್ರೇರಿತರಾಗಿ ಕೊರೊನಾವೈರಸ್ ಸೋಂಕಿನ ತಪಾಸಣೆ …
Read More »ಬೆಳಗಾವಿ ವಿಚಾರದಲ್ಲಿನ ಶಿವಸೇನೆ ಹೇಳಿಕೆಗೆ ಕಾಂಗ್ರೆಸ್ ನಿಲುವೇನು?: ಬಿಜೆಪಿ
ಬೆಂಗಳೂರು: ಬೆಳಗಾವಿ ಮಹಾರಾಷ್ಟ್ರಕ್ಕೆ ಸೇರಬೇಕು ಎಂಬ ಶಿವಸೇನೆಯ ಹೇಳಿಕೆ ವಿಚಾರದಲ್ಲಿ ಕಾಂಗ್ರೆಸ್ ಪಕ್ಷದ ನಿಲುವು ಏನು ಎಂದು ಬಿಜೆಪಿ ರಾಜ್ಯ ಘಟಕ ಟ್ವಿಟರ್‌ನಲ್ಲಿ ಪ್ರಶ್ನಿಸಿದೆ. ‘ಬೆಳಗಾವಿಯು ಕರ್ನಾಟಕ ಆಕ್ರಮಿತ ಮಹಾರಾಷ್ಟ್ರ’ ಎಂಬ ಅಲ್ಲಿನ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಹೇಳಿಕೆ ಕುರಿತು ಶುಕ್ರವಾರ ಸರಣಿ ಟ್ವೀಟ್ ಮಾಡಿರುವ ಬಿಜೆಪಿ ರಾಜ್ಯ ಘಟಕ, ‘ಪಕ್ಕದ ರಾಜ್ಯದಲ್ಲಿ ಶಿವಸೇನೆ ಮತ್ತು ಕಾಂಗ್ರೆಸ್ ಮೈತ್ರಿಯಲ್ಲಿವೆ. ಬೆಳಗಾವಿಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಮತ್ತು ವಿರೋಧ ಪಕ್ಷದ …
Read More »ಸದ್ಯಕ್ಕೆ ನೈಟ್ ಕರ್ಫ್ಯೂ, ಉಪಚುನಾವಣೆ ಮುಗಿತಿದ್ದಂತೆ ಕಠಿಣ ನಿರ್ಬಂಧ ಜಾರಿ ಸಾಧ್ಯತೆ
ರಾಜ್ಯದಲ್ಲಿ ಕೊರೋಣಾ ಎರಡನೆಯ ಅಲೆ ಆತಂಕವನ್ನುಂಟುಮಾಡಿದೆ. ದಿನೇದಿನೇ ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಿದ್ದು ಸೋಂಕು ಹೆಚ್ಚಾಗಿ ಕಂಡುಬರುತ್ತಿರುವ 8 ಮಹಾನಗರಗಳಲ್ಲಿ ನೈಟ್ ಕರ್ಫ್ಯೂ ಜಾರಿಗೊಳಿಸಲಾಗಿದೆ. ನೈಟ್ ಕರ್ಫ್ಯೂ ನಿಂದ ಪ್ರಯೋಜನವಿಲ್ಲ, ರಾತ್ರಿ ಜನ ಸಂಚಾರ ವಿರಳವಾಗಿರುತ್ತದೆ. ಈ ಸಂದರ್ಭದಲ್ಲಿ ಕೊರೋನಾ ಹರಡುವುದಿಲ್ಲ ಎಂದೆಲ್ಲ ಟೀಕೆಗಳು ಕೇಳಿಬರುತ್ತಿವೆ. ಆದರೆ, ಇದಿನ್ನು ಸ್ಯಾಂಪಲ್ ಮಾತ್ರ. ಸದ್ಯಕ್ಕೆ 8 ನಗರಗಳಲ್ಲಿ ನೈಟ್ ಕರ್ಫ್ಯೂ ಜಾರಿ ಮಾಡಲಾಗಿದ್ದು, ಹಂತಹಂತವಾಗಿ ಉಳಿದ ನಗರಗಳಿಗೂ ವಿಸ್ತರಿಸಲಾಗುವುದು. ಉಪ ಚುನಾವಣೆ ಮುಗಿಯುತ್ತಿದ್ದಂತೆ …
Read More »ಇಂದು ರಾತ್ರಿಯಿಂದಲೇ ನೈಟ್ ಕರ್ಫ್ಯೂ
ಬೆಂಗಳೂರು: ಶನಿವಾರದಿಂದ (ಏ. 10) ಇದೇ 20ರವರೆಗೆ ‘ಕೊರೊನಾ ಕರ್ಫ್ಯೂ’ (ರಾತ್ರಿ ಕರ್ಫ್ಯೂ) ಜಾರಿಗೆ ಬರಲಿರುವ ನಗರಗಳಲ್ಲಿ ರಾತ್ರಿ 10 ಗಂಟೆಯಿಂದ ಬೆಳಿಗ್ಗೆ 5 ಗಂಟೆವರೆಗೆ ಎಲ್ಲ ವಾಣಿಜ್ಯ ಚಟುವಟಿಕೆಗಳಿಗೆ ರಾಜ್ಯ ಸರ್ಕಾರ ನಿರ್ಬಂಧ ವಿಧಿಸಿದೆ. ಈ ಸಂಬಂಧ ಮುಖ್ಯ ಕಾರ್ಯದರ್ಶಿ ಪಿ. ರವಿಕುಮಾರ್ ಶುಕ್ರವಾರ ಆದೇಶ ಹೊರಡಿಸಿದ್ದಾರೆ. ಬೆಂಗಳೂರು ನಗರ, ಮೈಸೂರು, ಮಂಗಳೂರು, ಉಡುಪಿ- ಮಣಿಪಾಲ, ಬೀದರ್, ಕಲಬುರ್ಗಿ ಮತ್ತು ತುಮಕೂರು ನಗರಗಳಲ್ಲಿ ರಾತ್ರಿ ಕರ್ಫ್ಯೂ ಜಾರಿಗೆ ಬರಲಿದೆ. …
Read More »