Breaking News

Yearly Archives: 2021

ಸಿದ್ದರಾಮಯ್ಯ ಅರ್ಜೆಂಟಾಗಿ ಸಿಎಂ ಆಗಬೇಕಾಗಿದೆ ಎಂದ ಸಚಿವ ಈಶ್ವರಪ್ಪ

ಶಿವಮೊಗ್ಗ: ಸಿಎಂ ಯಡಿಯೂರಪ್ಪ ವಿರುದ್ಧ ರಾಜ್ಯಪಾಲರಿಗೆ, ವರಿಷ್ಠರಿಗೆ ದೂರು ವಿಚಾರವಾಗಿ ಮಾತನಾಡಿದ ಸಚಿವ ಕೆ.ಎಸ್.ಈಶ್ವರಪ್ಪ ನಾನು ಯಾರಿಗೂ ಬಗ್ಗುವುದೂ ಇಲ್ಲ, ಜಗ್ಗುವುದೂ ಇಲ್ಲ. ನನ್ನ ಮಾತಿಗೆ ಬದ್ಧನಾಗಿದ್ದೇನೆ ಎಂದು ಹೇಳಿದ್ದಾರೆ. ಶಿವಮೊಗ್ಗದಲ್ಲಿ ಮಾತನಾಡಿದ ಈಶ್ವರಪ್ಪ, ಸಹಿ ಸಂಗ್ರಹ, ಖಾತೆ ಬದಲಾವಣೆ, ರಾಜೀನಾಮೆ ಇವೆಲ್ಲ ವಿಚಾರಗಳು ಮೊನ್ನೆ ಚರ್ಚೆಯಾದವು. ಈಗ ಅದು ಮುಗಿದ ಕಥೆ. ಯಾರು ಏನೇ ಹೇಳಿದರೂ ನನ್ನ ಪತ್ರ ನ್ಯಾಯಬದ್ಧವಾಗಿದೆ. ನನ್ನ ಮಾತಿಗೆ ನಾನು ಬದ್ಧನಾಗಿದ್ದೇನೆ. ಎಲ್ಲ ಸಮಸ್ಯೆಗಳನ್ನು ಶೀಘ್ರದಲ್ಲಿ …

Read More »

ಸಿಎಂ ಬದಲಾವಣೆಯಾಗಲೇಬೇಕೆಂದು ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿಯೇ ಹೇಳಿದ್ದರು: ಹೊಸ ಬಾಂಬ್ ಸಿಡಿಸಿದ ಯತ್ನಾಳ್

ವಿಜಯಪುರ: ಸಿಎಂ ಬದಲಾವಣೆ ವಿಚಾರಕ್ಕೆ ಸಂಬಂಧಿಸಿದಂತೆ ಹೊಸ ಬಾಂಬ್ ಸಿಡಿಸಿರುವ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ಈ ಬಗ್ಗೆ ನನ್ನ ಬಳಿ ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ರವಿಕುಮಾರ್ ಅವರೇ ಹೇಳಿದ್ದರು ಎಂದು ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಯತ್ನಾಳ್, ಸಿಎಂ ಬದಲಾವಣೆಯಾಗಲೇಬೇಕು. ಬಿ‌ ಎಸ್ ವೈ ಸಿಎಂ ಆಗಿ ಮುಂದುವರಿದರೆ ಬಿಜೆಪಿಗೆ ಭವಿಷ್ಯ ಇಲ್ಲ. ಹಾಗಾಗಿ ಸಿಎಂ ಬದಲಾವಣೆಯಾಗಬೇಕು ಎಂದು ವಿಧಾನಸೌಧದಲ್ಲಿ ರವಿಕುಮಾರ್ ಭೇಟಿಯಾದ ವೇಳೆ ಹೇಳಿದ್ದರು. ನಾನು ಸಿಎಂ …

Read More »

ಮನೆಯವರೂ ನನ್ನ ವಿರುದ್ಧ ತಿರುಗಿ ಬಿದ್ದಿದ್ದಾರೆ: ಸಿಡಿ ಯುವತಿ

ಬೆಂಗಳೂರು: ಮನೆಯವರ ಒತ್ತಡದಿಂದ ಆಕಾಶ್ ನನ್ನನ್ನು ಅರ್ಧದಲ್ಲಿಯೇ ಬಿಟ್ಟು ಹೋದ. ನಾನು, ಆಕಾಶ್ ಈಗ ಬೇರೆ ಬೇರೆಯಾಗಿದ್ದೀವಿ. ಈಗ ನನ್ನ ಹಾಗೂ ಆಕಾಶ್ ನಡುವೆ ಏನೂ ಇಲ್ಲ ಎಂದು ಸಿಡಿ ಯುವತಿ ಹೇಳಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.   ನಾಲ್ಕನೇ ದಿನವಾದ ಇಂದು ಕೂಡ ಯುವತಿಯನ್ನು ಎಸ್‍ಐಟಿ ವಿಚಾರಣೆಗೆ ಒಳಪಡಿಸಿತು. ಆರ್.ಟಿ.ನಗರ ಕೇಸ್ ಸಂಬಂಧ ವಿಚಾರಣೆಯ ವೇಳೆ ಯುವತಿ ಸಾಕಷ್ಟು ವಿಚಾರಗಳನ್ನು ಬಯಲು ಮಾಡಿದರು. ಯಾರಾದರೂ ನಿಮ್ಮನ್ನು ಕಿಡ್ನಾಪ್ ಮಾಡಿದ್ರಾ..?, ಇಷ್ಟು …

Read More »

ರಾಜಕೀಯ ಸಮಾವೇಶಗಳಲ್ಲಿ ಇಲ್ಲದ ನಿರ್ಬಂಧ ಸಿನಿಮಾ ಥಿಯೇಟರ್‌ಗೆ ಏಕೆ..?: ದುನಿಯಾ ವಿಜಿ

ದಾವಣಗೆರೆ: ರಾಜಕೀಯ ಸಮಾವೇಶಗಳಲ್ಲಿ ಸಾವಿರಾರು ಜನ ಸೇರ್ತಾರೆ. ಅದಕ್ಕೆ ನಿರ್ಬಂಧ ಇಲ್ಲ. ಎಲ್ಲೂ ಇಲ್ಲದ ನಿಯಮಗಳು ಸಿನಿಮಾ ಥಿಯೇಟರ್‌ಗೆ ಏಕೆ ಎಂದು ಸ್ಯಾಂಡಲ್‍ವುಡ್ ನಟ ದುನಿಯಾ ವಿಜಯ್ ಪ್ರಶ್ನಿಸಿದ್ದಾರೆ. ದಾವಣಗೆರೆ ಜಿಲ್ಲೆ ಹರಿಹರ ತಾಲೂಕಿನ ಹರಿಹರದ ಬೆಳ್ಳೂಡಿ ಕಾಗಿನೆಲೆ ಶಾಖಾ ಮಠದಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತಾ, ಥಿಯೇಟರ್‌ಗಳಿಗೆ ಶೇ.50 ರಷ್ಟು ಪ್ರೇಕ್ಷಕರಿಗೆ ಮಾತ್ರ ಅವಕಾಶ ಎಂಬ ಸರ್ಕಾರದ ಅದೇಶಕ್ಕೆ ಪ್ರತಿಕ್ರಿಯಿಸಿದರು. ಅಲ್ಲದೆ ಸರ್ಕಾರದ ವಿರುದ್ಧ ಅಸಮಾಧಾನ ಹೊರ ಹಾಕಿದರು. ಎಲ್ಲೂ ಇಲ್ಲದ ನಿಯಮಗಳು …

Read More »

ಕರ್ನಾಟಕ ರಕ್ಷಣಾ ವೇದಿಕೆಯ ನೂತನ ಜಿಲ್ಲಾ ಅಧ್ಯಕ್ಷರಾಗಿ ಆರ್.ಅಭಿಲಾಷ್ ಅವರು ಅಧಿಕಾರ ಸ್ವೀಕರಿಸಿದರು.

ಬೆಳಗಾವಿ: ಕರ್ನಾಟಕ ರಕ್ಷಣಾ ವೇದಿಕೆಯ ನೂತನ ಜಿಲ್ಲಾ ಅಧ್ಯಕ್ಷರಾಗಿ ಆರ್.ಅಭಿಲಾಷ್ ಅವರು ಅಧಿಕಾರ ಸ್ವೀಕರಿಸಿದರು. ನಗರದ ಸಂಕಮ್ ಹೋಟೆಲ್ ನಲ್ಲಿ ನಡೆದ ಕಾರ್ಯಕ್ರಮದಲ್ಲಿ ರಾಜ್ಯಾಧ್ಯಕ್ಷರಾದ ಪ್ರವೀಣ್ ಕುಮಾರ್ ಶೆಟ್ಟಿ ಅವರು ಆದೇಶ ಪತ್ರ ನೀಡಿ ಸನ್ಮಾನಿಸಿದರು. ಈ ವೇಳೆ ಮಾತನಾಡಿದ ಪ್ರವೀಣ್ ಕುಮಾರ್ ಶೆಟ್ಟಿ ಅವರು ಬೆಳಗಾವಿ ಜಿಲ್ಲೆಯಲ್ಲಿ ನಾಡ ವಿರೋಧಿ ಚಟುವಟಿಕೆಗಳಿಗೆ ಕಡಿವಾಣ ಹಾಕಲು ನಿರಂತರ ಸಮರ ಮಾಡುವುದಾಗಿ ತಿಳಿಸಿದರು. ಇದೇ ವೇಳೆ ಮಾತನಾಡಿದ ನೂತನ ಜಿಲ್ಲಾ ಅಧ್ಯಕ್ಷರಾದ ಅಭಿಲಾಷ್ …

Read More »

ಬೈಲಹೊಂಗಲ ಸರ್ಕಾರಿ ಆಸ್ಪತ್ರೆಯ ಸರ್ಜನ್ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ)ದ ಬಲೆಗೆ ಬಿದ್ದಿದ್ದಾರೆ.

ಬೆಳಗಾವಿ: ಲಂಚಕ್ಕಾಗಿ ಬೇಡಿಕೆ ಇಟ್ಟು ಹೆರಿಗೆ ಶಸ್ತ್ರಕ್ರಿಯೆಗೆ ಒಳಗಾಗಿದ್ದ ಮಹಿಳೆಯನ್ನು ಡಿಸ್ಚಾರ್ಜ್ ಮಾಡಲು ವಿನಾಕಾರಣ ವಿಳಂಬ ಮಾಡುತ್ತಿದ್ದ ಬೈಲಹೊಂಗಲ ಸರ್ಕಾರಿ ಆಸ್ಪತ್ರೆಯ ಸರ್ಜನ್ ಒಬ್ಬರು ಶನಿವಾರ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ)ದ ಬಲೆಗೆ ಬಿದ್ದಿದ್ದಾರೆ. ಎಸಿಬಿ ಅಧಿಕಾರಿಗಳು ಲಂಚದ ಸಮೇತ ವೈದ್ಯನನ್ನು ರೆಡ್ ಹ್ಯಾಂಡ್ ಆಗಿ ಹಿಡಿದಿದ್ದು, ವಶಕ್ಕೆ ಪಡೆದುಕೊಂಡು ತನಿಖೆ ಮುಂದುವರೆಸಿದ್ದಾರೆ. ಡಾ.ವಿರೇಂದ್ರ ಕುಚಬಾಳ ಎಸಿಬಿ ಬಲೆಗೆ ಬಿದ್ದ ವೈದ್ಯ. ಹೆರಿಗೆ ಶಸ್ತ್ರಕ್ರಿಯೆಗೆ ಒಳಗಾಗಿದ್ದ ಕಿತ್ತೂರು ತಾಲೂಕು ದಾಸ್ತಿಕೊಪ್ಪ ಮೂಲಕ …

Read More »

ಮಗಳ ಅತ್ಯಾಚಾರದ ಆರೋಪಕ್ಕೆ ಮನನೊಂದ ತಂದೆ ನೇಣಿಗೆ ಶರಣು

ಮಡಿಕೇರಿ: ಡೆತ್‌ನೋಟ್ ಬರೆದಿಟ್ಟು ವಿಷ ಸೇವಿಸಿ ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೊಡಗು ಜಿಲ್ಲೆಯ ಮಡಿಕೇರಿ ತಾಲೂಕಿನ ಮರಗೋಡುನಲ್ಲಿ ನಡೆದಿದೆ. ಆತ್ಮಹತ್ಯೆಗೆ ಶರಣಾದವರನ್ನು ಪುದಿಯೊಕ್ಕಡ ಭರತ್(55) ಎಂದು ಗುರುತಿಸಲಾಗಿದೆ. ತನ್ನ ಸಾವಿಗೆ ಪತ್ನಿ, ಮಗಳೇ ಕಾರಣವೆಂದು ಡೆತ್‌ನೋಟ್​ನಲ್ಲಿ ಭರತ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇದೊಂದು ಅಪರೂಪದ ಪ್ರಕರಣವಾಗಿದ್ದು ಈ ಹಿಂದೆ ಸ್ವಂತ ಅಪ್ಪನ ಮೇಲೆಗೆ ಮಗಳು ಅತ್ಯಾಚಾರದ ಆರೋಪ ಹೊರಿಸಿದ್ದಳು. ಹಾಗೂ ಹೆಂಡತಿ, ಮಗಳು ಸೇರಿಕೊಂಡು ಭರತ್​ನಿಗೆ ಚಿತ್ರ ಹಿಂಸೆ …

Read More »

ವೀಡಿಯೊ ಮಾಡಿದ್ದು ನಾನೇ: ಕಾರಣ ಬಿಚ್ಚಿಟ್ಟ ಸಿಡಿ ಯುವತಿ

ಮಾಜಿ ಸಚಿವ ರಮೇಶ್ ಜಾರಕಿಹೊಳಿ ಜೊತೆಗಿನ ರಾಸಲೀಲೆಯ ವೀಡಿಯೊ ಮಾಡಿದ್ದು ನಾನೆ‌ ಆದರೆ ಬ್ಲಾಕ್ ಮೇಲ್ ಮಾಡುವ ಉದ್ದೇಶ ಇರಲಿಲ್ಲ ಎಂದು ಸಿಡಿ ಯುವತಿ ಒಪ್ಪಿಕೊಂಡಿದ್ದಾಳೆ. ಬಿಜೆಪಿ ಶಾಸಕ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣದಲ್ಲಿ ತನಿಖೆ ನಡೆಸುತ್ತಿರುವ ಬೆಂಗಳೂರಿನ ಎಸ್ ಐಟಿ ಮುಂದೆ ಶನಿವಾರ ಹಾಜರಾದ ಸಿಡಿ ಯುವತಿ ಘಟನೆಯನ್ನು ವಿವರಿಸಿದ್ದಾಳೆ ಎಂದು ಮೂಲಗಳು ತಿಳಿಸಿವೆ. ಶನಿವಾರ  ಬೆಳಿಗ್ಗೆ 10 ಗಂಟೆಗೆ ವಿಚಾರಣೆಗೆ ಹಾಜರಾಗುವಂತೆ ಯುವತಿಗೆ ನೊಟೀಸ್ ನೀಡಲಾಗಿತ್ತು. ಈ …

Read More »

60 ಸಾವಿರ ಬೆಲೆಯ ಎರಡು ಬೈಕ್ ವಶ

ಬೆಂಗಳೂರು, ಏ.3- ಕದ್ದ ಬೈಕ್‍ಗಳನ್ನು ಮಾರಾಟ ಮಾಡಲು ಪ್ರಯತ್ನಿಸಲಾಗುತ್ತಿದೆ ಎಂಬ ಮಾಹಿತಿ ಮೇರೆಗೆ ಕಲಾಸಿಪಾಳ್ಯ ಠಾಣೆ ಪೊಲೀಸರು ಸ್ಥಳಕ್ಕೆ ತೆರಳಿ ಆರೋಪಿಯನ್ನು ಬಂಧಿಸಿ 60 ಸಾವಿರ ಬೆಲೆಯ ಎರಡು ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಂಡಿದ್ದಾರೆ. ವಿಲ್ಸನ್ ಗಾರ್ಡನ್ ನಿವಾಸಿ ಶೋಯಬ್ ಫಜಲ್ (19) ಬಂಧಿತ ಆರೋಪಿ. ನಿನ್ನೆ ಕಲಾಸಿಪಾಳ್ಯ ಠಾಣಾ ವ್ಯಾಪ್ತಿಯ ಎಎಂ ರಸ್ತೆಯಲ್ಲಿ ಸಿಬ್ಬಂದಿ ಗಸ್ತಿನಲ್ಲಿದ್ದಾಗ ದ್ವಿಚಕ್ರ ವಾಹನವನ್ನು ಮಾರಾಟ ಮಾಡಲು ವ್ಯಕ್ತಿಯೊಬ್ಬ ಪ್ರಯತ್ನಿಸುತ್ತಿ ದ್ದಾನೆಂಬ ಮಾಹಿತಿ ಮೇರೆಗೆ ಸ್ಥಳಕ್ಕೆ …

Read More »

ಅತ್ಯಾಚಾರ ಸಂತ್ರಸ್ತೆಯ ದೂರು ಸ್ವೀಕರಿಸಲು ಮಲಗು ಬಾ ಎಂದ ಎಸಿಪಿ! ಕಾಮುಕ ಪೊಲೀಸ್​ ವಜಾ

ಜೈಪುರ: ಅತ್ಯಾಚಾರಕ್ಕೊಳಗಾದ ಯುವತಿ ತನ್ನ ಮೇಲೆ ಆಗಿರುವ ಅನ್ಯಾಯದ ವಿರುದ್ಧ ದೂರು ದಾಖಲು ಮಾಡಲು ಬಂದರೆ, ಪೊಲೀಸ್​ ಅಧಿಕಾರಿ ದೂರು ದಾಖಲು ಮಾಡಬೇಕಿದ್ದರೆ ನನ್ನ ಜತೆ ಮಲಗು ಎಂದು ಹೇಳಿರುವ ಭಯಾನಕ ಘಟನೆ ರಾಜಸ್ಥಾನದ ಜೈಪುರದಲ್ಲಿ ನಡೆದಿದೆ. ಈ ಕಾಮುಕ ಎಸಿಪಿಯ ಹೆಸರು ಕೈಲಾಶ್​ ಬೊಹರಾ. ಮಹಿಳಾ ದೌರ್ಜನ್ಯ ವಿರುದ್ದದ ವಿಶೇಷ ತಂಡದ ಎಸಿಪಿಯಾಗಿದ್ದ ಬೋಹರಾ ಇಂಥದ್ದೊಂದು ನೀಚ ಕೃತ್ಯ ಎಸಗಿದ್ದು, ಈತನ ವಿರುದ್ಧ ಸಂತ್ರಸ್ತೆ ಉನ್ನತ ಅಧಿಕಾರಿಗಳಲ್ಲಿ ದೂರು ದಾಖಲು …

Read More »