Breaking News

Yearly Archives: 2021

ಯಡಿಯೂರಪ್ಪ ಸಂಪುಟದಲ್ಲಿ ಇನ್ನೂ ದೊಡ್ಡಮಟ್ಟದ ಸ್ಫೋಟವಾಗಲಿದೆ: ಮತ್ತೆ ಕಿಡಿಕಾರಿದ ಯತ್ನಾಳ್

ವಿಜಯಪುರ: ಸಚಿವ ಈಶ್ವರಪ್ಪ ಕೂಡ ಯಡಿಯೂರಪ್ಪ ಅವರಂತೆ ಪಕ್ಷ ಕಟ್ಡಿದ ಹಿರಿಯ ನಾಯಕ. ಅವರಿಗೆ ಇಲಾಖೆಯಲ್ಲಿ ಸಚಿವರಾಗಿ ಮುಕ್ತ ಸ್ವಾತಂತ್ರ್ಯ ಇಲ್ಲವಾಗಿದ್ದು, ತಾಳ್ಮೆ ಮೀರಿ ಸ್ಫೋಟಗೊಂಡಿದ್ದಾರೆ. ಸಂಪುಟದಲ್ಲಿ ಇನ್ನೂ ಸ್ಪೋಟಗಳಾಗುತ್ತದೆ ನೋಡ್ತಾ ಇರಿ ಎಂದು ವಿಜಯಪುರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಹೇಳಿದ್ದಾರೆ. ಶುಕ್ರವಾರ ನಗರದಲ್ಲಿ ವಾರ್ಡ್ ನಂ22 ರಲ್ಲಿ ಏಕತಾ ನಗರದಲ್ಲಿ ಸಮುದಾಯ ಭವನದ ಕಾಮಗಾರಿ ಭೂಮಿ ಪೂಜೆಯಲ್ಲಿ ಪಾಲ್ಗೊಂಡ ಬಳಿಕ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಮೇ 2 …

Read More »

ವಿದ್ಯಾರ್ಥಿಯ ಭವಿಷ್ಯಕ್ಕೆ ಕೊಳ್ಳಿ ಇಟ್ಟ ಪ್ರಾಂಶುಪಾಲೆ

ಹಾಸನ: ವಿದ್ಯಾರ್ಥಿಗಳ ಹಿತ ಕಾಯಬೇಕಿದ್ದ ಮಹಿಳಾ ಪ್ರಾಂಶುಪಾಲರೊಬ್ಬರು ತಲೆ ತಗ್ಗಿಸುವಂತಹ ಕೆಲಸ ಮಾಡಿದ್ದು, ಗುರು-ಶಿಷ್ಯರ ಸಂಬಂಧಕ್ಕೆ ಮಸಿ ಬೆಳೆದಿದ್ದಾರೆ. ಉದ್ದೇಶ ಪೂರ್ವಕವಾಗಿಯೇ ವಿದ್ಯಾರ್ಥಿಯೊಬ್ಬನ ಉತ್ತರ ಪತ್ರಿಕೆಯ ಉತ್ತರಗಳನ್ನು ವಿರೂಪಗೊಳಿಸಿದ ಆರೋಪ ಕೇಳಿಬಂದಿದ್ದು, ಈ ಘಟನೆ ಹಾಸನ ಸರ್ಕಾರಿ ನರ್ಸಿಂಗ್ ಕಾಲೇಜಿನಲ್ಲಿ ನಡೆದಿದೆ. ಈ ಸಂಬಂಧ ಪ್ರಾಂಶುಪಾಲೆ ಶೋಭಾದೇವಮಾನೆ ವಿರುದ್ಧ ಹಾಸನ ಬಡಾವಣೆ ಠಾಣೆಯಲ್ಲಿ ಎಫ್​ಐಆರ್​ ದಾಖಲಾಗಿದೆ. ನೊಂದ ವಿದ್ಯಾರ್ಥಿ ಚನ್ನಯ್ಯ ನೀಡಿದ ದೂರಿನ ಆಧಾರದ ಮೇಲೆ ಎಫ್​ಐಆರ್​ ದಾಖಲಿಸಲಾಗಿದೆ. ಕಾಲೇಜಿನ …

Read More »

ಬಿಜೆಪಿ ಅಭ್ಯರ್ಥಿ ಕಾರಿನಲ್ಲಿ ಇವಿಎಂ ಪತ್ತೆ : ಮರು ಮತದಾನಕ್ಕೆ ಆಯೋಗ ತೀರ್ಮಾನ

ಕರೀಂಗಂಜ್, ಏ.2- ಬಿಜೆಪಿ ಅಭ್ಯರ್ಥಿ ಕಾರಿನಲ್ಲಿ ಇವಿಎಂ ಯಂತ್ರ ಸಾಗಿಸಲಾಗುತ್ತಿತ್ತು ಎಂಬ ಆರೋಪ ಕೇಳಿ ಬಂದಿರುವ ಹಿನ್ನೆಲೆಯಲ್ಲಿ ಅಸ್ಸಾಂನ ರತಬರಿ ವಿಧಾನಸಭಾ ಕ್ಷೇತ್ರದ ಒಂದು ಮತಕೇಂದ್ರಕ್ಕೆ ಮರು ಮತದಾನ ನಡೆಸಲು ಚುನಾವಣಾ ಆಯೋಗ ತೀರ್ಮಾನಿಸಿದೆ. ಘಟನೆಗೆ ಸಂಬಂಧಿಸಿದಂತೆ ಮೂವರು ಅಧಿಕಾರಿಗಳನ್ನು ಚುನಾವಣಾ ಆಯೋಗ ಅಮಾನತುಗೊಳಿಸಿದೆ.ಇಂದಿರಾ ಎಂ.ವಿ.ಶಾಲೆಯ ಮತ ಕೇಂದ್ರದಲ್ಲಿ ನಡೆದ ಮತದಾನದ ಇವಿಎಂ ಯಂತ್ರಗಳನ್ನು ಬಿಜೆಪಿ ಮುಖಂಡನ ಕಾರಿನಲ್ಲಿ ಸಾಗಿಸಲಾಗುತ್ತಿತ್ತು ಎಂದು ಆರೋಪಿಸಿ ಕೆಲವರು ಆರೋಪಿಸಿ ದಾಂಧಲೆ ನಡೆಸಿದ್ದರು. ಪರಿಸ್ಥಿತಿ …

Read More »

ಸರಕು ಸಾಗಣೆಯಲ್ಲಿ ನೈಋತ್ಯ ರೈಲ್ವೆಯ ಹುಬ್ಬಳ್ಳಿ ವಿಭಾಗ ಹೊಸ ದಾಖಲೆ

ಹುಬ್ಬಳ್ಳಿ, ಏ.2- ದೇಶದಲ್ಲಿ ಕೊರೊನಾ ಸೋಂಕಿನ ಆರ್ಭಟ ಮತ್ತು ಆರ್ಥಿಕ ಹಿಂಜರಿತದ ಪರಿಣಾಮದ ಹೊರತಾಗಿಯೂ ನೈಋತ್ಯ ರೈಲ್ವೆ ವಲಯ ಹುಬ್ಬಳ್ಳಿ ವಿಭಾಗ ಸರಕು ಸಾಗಣೆ ಮೂಲಕ ಉತ್ತಮ ಆದಾಯ ಗಳಿಸಿದೆ. ಪ್ರಸಕ್ತ ವರ್ಷದ ಮಾರ್ಚ್ ತಿಂಗಳಲ್ಲಿ ಸುಮಾರು 3.45 ಮಿಲಿಯನ್ ಟನ್ ಸರಕು ಸಾಗಣೆ ಮಾಡುವ ಹೊಸ ದಾಖಲೆ ಮಾಡಿದ್ದು, ಇದು ಕಳೆದ 4 ವರ್ಷಗಳಲ್ಲಿ ಗರಿಷ್ಠ ಮಾಸಿಕ ಸರಕು ಸಾಗಣೆ ಆಗಿದೆ. ಮಾರ್ಚ್ 31 ರಂದು 2286 ವ್ಯಾಗನ್ …

Read More »

ಬಿಸಿ ಪಾಟೀಲ್‍ಗೆ ಮನೆಯಲ್ಲಿ ಲಸಿಕೆ ನೀಡಿದ ಆರೋಗ್ಯಾಧಿಕಾರಿ ಅಮಾನತು

ಹಾವೇರಿ: ಕೃಷಿ ಸಚಿವ ಬಿ.ಸಿ.ಪಾಟೀಲ್ ಅವರಿಗೆ ಮನೆಯಲ್ಲಿಯೇ ಕೊರೊನಾ ಲಸಿಕೆಗೆ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಹಿರೇಕೆರೂರು ತಾಲ್ಲೂಕು ವೈದ್ಯಾಧಿಕಾರಿಯನ್ನು ಅಮಾನತು ಮಾಡಲಾಗಿದೆ. ಭಾರತೀಯ ಆರೋಗ್ಯ ಸೇವಾ ಆಯುಕ್ತ ಕೆ.ವಿ.ತ್ರಿಲೋಕಚಂದ್ರ ಟಿಎಚ್‍ಒ ಡಾ.ಝಡ್.ಆರ್.ಮಕಾಂದಾರ್ ಅವರನ್ನು ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ. ಮಾರ್ಚ್ 2 ರಂದು ಕೃಷಿ ಸಚಿವ ಬಿ.ಸಿ.ಪಾಟೀಲ್‌ ಮನೆಯಲ್ಲಿಯೇ ದಂಪತಿಗೆ ವಾಕ್ಸಿನ್ ನೀಡಿದ್ದು ದೊಡ್ಡಮಟ್ಟದ ವಿವಾದವಾಗಿತ್ತು. ಅಲ್ಲದೆ ಮನೆಯಲ್ಲಿಯೇ ಲಸಿಕೆ ನೀಡಿದ್ದಕ್ಕೆ ಹಾವೇರಿಯ ಡಿಎಚ್‍ಓ ಕಾರಣ ಕೇಳಿ ನೋಟಿಸ್ ನೀಡಿದ್ದರು. …

Read More »

ಸಿದ್ದಗಂಗಾ ಶ್ರೀಗಳ ಸ್ಮರಿಸಿದ ಪ್ರಧಾನಿ ಮೋದಿ.. ಉದಾತ್ತ ಆಲೋಚನೆಗಳ ಸ್ವಾಮೀಜಿಗೆ ಶಿರಬಾಗಿ ನಮಿಸುವೆ ಎಂದ್ರು

ತುಮಕೂರು: ಸಿದ್ದಗಂಗಾ ಮಠದ ಲಿಂಗೈಕ್ಯ ಶಿವಕುಮಾರ ಸ್ವಾಮೀಜಿ ಜಯಂತಿ ಪ್ರಯುಕ್ತ ಅವರನ್ನು ಸ್ಮರಿಸಿರುವ ಭಾರತದ ಪ್ರಧಾನ ಮಂತ್ರಿ ನರೇಂದ್ರ ಮೋದಿ ತಮ್ಮ ಅಧಿಕೃತ ಟ್ವಿಟರ್​ ಖಾತೆಯ ಮುಖೇನ ಸ್ವಾಮೀಜಿಗಳಿಗೆ ನಮನ ಸಲ್ಲಿಸಿದ್ದಾರೆ. ಈ ಕುರಿತು ಟ್ವೀಟ್​ ಮಾಡಿರುವ ನರೇಂದ್ರ ಮೋದಿ, ಸಿದ್ದಗಂಗಾ ಮಠದ ಶಿವಕುಮಾರ ಸ್ವಾಮೀಜಿಗೆ ಅವರ ಜಯಂತಿಯಂದು ಶಿರಬಾಗಿ ನಮಿಸುವೆ. ಸಮಾಜಕ್ಕೆ ಸ್ವಾಮಿಗಳು ಸಲ್ಲಿಸಿದ ಸೇವೆ, ಬಡವರ ಬಗೆಗಿನ ಅವರ ಕಾಳಜಿ ಸ್ಮರಣಾರ್ಹ. ಶಿವಕುಮಾರ ಸ್ವಾಮೀಜಿಯವರ ಉದಾತ್ತ ಆಲೋಚನೆ, …

Read More »

ಜೈನ ಸಂತರಿಗೂ ಉಚಿತ ಕೋವಿಡ್‌ ಲಸಿಕೆ?

ದಾವಣಗೆರೆ: ಲೋಕ ಸಂಚಾರ ಮಾಡುತ್ತಿರುವ ಜೈನ ಸಾಧು- ಸಾಧ್ವಿಯರಿಗೆ ಯಾವುದೇ ದಾಖಲೆ ಕಡ್ಡಾಯಗೊಳಿಸದೆ ಉಚಿತವಾಗಿ ಕೋವಿಡ್‌ ಲಸಿಕೆ ನೀಡಲು ಅನುಮತಿ ಕೋರಿ ರಾಜ್ಯ ಸರಕಾರ ಕೇಂದ್ರಕ್ಕೆ ಮನವಿ ಮಾಡಿದೆ. ಲೋಕ ವಿಹಾರಿಗಳಾದ ಜೈನ ಸಾಧು-ಸಾಧ್ವಿಯರಿಗೆ ಕೋವಿಡ್ ಲಸಿಕೆ ನೀಡುವಂತೆ ಕರ್ನಾಟಕ ರಾಜ್ಯ ಅಲ್ಪಸಂಖ್ಯಾಕ ಅಭಿವೃದ್ಧಿ ನಿಗಮದ ನಿರ್ದೇಶಕ ಗೌತಮ್‌ ಜೈನ್‌ ಅವರು ಸಿಎಂ ಯಡಿಯೂರಪ್ಪ ಹಾಗೂ ಆರೋಗ್ಯ ಸಚಿವ ಡಾ| ಕೆ. ಸುಧಾಕರ್‌ ಅವರಿಗೆ ಮನವಿ ಮಾಡಿದ್ದರು. ಇದಕ್ಕೆ ಸಕಾರಾತ್ಮಕವಾಗಿ …

Read More »

ಪೊಲೀಸ್ ಧ್ವಜ ದಿನಾಚರಣೆ: ಔರಾದಕರ್ ವರದಿ ಜಾರಿಗೆ ಆಗ್ರಹ

ವಿಜಯಪುರ: ರಾಘವೇಂದ್ರ ಔರಾದಕರ್ ವರದಿಯನ್ನು ಸರ್ಕಾರ ತಕ್ಷಣ ಜಾರಿಗೊಳಿಸಬೇಕು ಎಂದು ನಿವೃತ್ತ ಪೊಲೀಸ್ ಅಧಿಕಾರಿ ಬಿ.ಪಿ.ಹುಲಸಗುಂದ ಆಗ್ರಹಿಸಿದರು. ಜಿಲ್ಲಾ ಪೊಲೀಸ್ ಇಲಾಖೆಯಿಂದ ನಗರದ ಪೊಲೀಸ್ ಕವಾಯತು ಮೈದಾನದಲ್ಲಿ ಶುಕ್ರವಾರ ಆಯೋಜಿಸಿದ್ದ ಪೊಲೀಸ್ ಕಲ್ಯಾಣ ಮತ್ತು ಧ್ವಜ ದಿನಾಚರಣೆಯಲ್ಲಿ ಅವರು ಮಾತನಾಡಿದರು. ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿಮಾಡಬೇಕು. ಈ ಮೂಲಕ ಪೊಲೀಸರನ್ನು ಒತ್ತಡ ಮುಕ್ತರನ್ನಾಗಿ ಮಾಡಬೇಕು. ಪೊಲೀಸರು ಬಿಡುವಿನ ವೇಳೆ ತಮ್ಮ ಕುಟುಂಬದ ಕಲ್ಯಾಣಕ್ಕೆ ಗಮನ ನೀಡಲು ಅವಕಾಶ …

Read More »

ಟ್ಯಾಕ್ಸಿ ಪ್ರಯಾಣ ದರ ಹೆಚ್ಚಳ

ಬೆಂಗಳೂರು: ರಾಜ್ಯದ ಎಲ್ಲ ಕಡೆ ಟ್ಯಾಕ್ಸಿಯಲ್ಲಿ ಪ್ರಯಾಣಿಸುವವರ ಜೇಬಿಗೆ ಇನ್ನು ಮತ್ತಷ್ಟು ಕತ್ತರಿ ಬೀಳಲಿದೆ. ಟ್ಯಾಕ್ಸಿ ಬಳಕೆಗೆ ವಿಧಿಸುತ್ತಿದ್ದ ಪ್ರತಿ ಕಿ.ಮೀ ಹಾಗೂ ಕನಿಷ್ಠ 4 ಕಿ.ಮೀ ವರೆಗಿನ ದರವನ್ನು ಹೆಚ್ಚಿಸಿ ಸಾರಿಗೆ ಇಲಾಖೆ ಆದೇಶ ಹೊರಡಿಸಿದೆ. ಜಿಎಸ್‌ಟಿ, ಟೋಲ್‌ ಶುಲ್ಕವನ್ನು ಪ್ರಯಾಣಿಕರಿಂದಲೇ ವಸೂಲಿ ಮಾಡಬಹುದು ಎಂದೂ ಆದೇಶ ಹೇಳಿದೆ. 2018ರಲ್ಲಿ ಹೊರಡಿಸಿದ್ದ ಆದೇಶದಲ್ಲಿ ಬೆಂಗಳೂರು ನಗರ ವ್ಯಾಪ್ತಿ ಮತ್ತು ಬಿಬಿಎಂಪಿ ವ್ಯಾಪ್ತಿಯಿಂದ 25 ಕಿ.ಮೀ.ವರೆಗಿನ ಪರಿಧಿಯಲ್ಲಿ ಟ್ಯಾಕ್ಸಿ ಪ್ರಯಾಣ …

Read More »

ಸಿ.ಡಿ. ಪ್ರಕರಣ: ಡಿಕೆಶಿ ವಿರುದ್ಧವೇ ತಿರುಗಿಬಿದ್ದ ಕಾಂಗ್ರೆಸ್‌ನ ಲಖನ್ ಜಾರಕಿಹೊಳಿ

ಗೋಕಾಕ (ಬೆಳಗಾವಿ ಜಿಲ್ಲೆ): ‘ಸಿ.ಡಿ. ಪ್ರಕರಣಕ್ಕೆ ಸಂಬಂಧಿಸಿದಂತೆ ಆ ಯುವತಿಯ ಪೋಷಕರೇ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ವಿರುದ್ಧ ಆರೋಪ ಮಾಡಿದ್ದಾರೆ. ತಂದೆ-ತಾಯಿಯೇ ಹೇಳಿರುವುದರಿಂದ ಅದು ಸತ್ಯವೇ ಇರಬೇಕು. ಹೀಗಾಗಿ, ನೈತಿಕ ಹೊಣೆ ಹೊತ್ತು ಶಿವಕುಮಾರ್‌ ರಾಜೀನಾಮೆ ನೀಡಬೇಕು’ ಎಂದು ಕಾಂಗ್ರೆಸ್ ಮುಖಂಡ ಲಖನ್‌ ಜಾರಕಿಹೊಳಿ ಆಗ್ರಹಿಸಿದರು. ಇಲ್ಲಿ ಗುರುವಾರ ಮಾಧ್ಯಮ ಪ್ರತಿನಿಧಿಗಳೊಂಧಿಗೆ ಮಾತನಾಡಿದ ಅವರು, ‘ಶಿವಕುಮಾರ್ ವಿರುದ್ಧದ ಆರೋಪವನ್ನು ಕಾಂಗ್ರೆಸ್ ಹೈಕಮಾಂಡ್‌ ಗಂಭೀರವಾಗಿ ಪರಿಗಣಿಸಬೇಕು. ರಾಜೀನಾಮೆ ಪಡೆದುಕೊಳ್ಳಲೇಬೇಕು. ಆರೋಪ …

Read More »