ನವದೆಹಲಿ: ಈಗಾಗಲೇ ಬೆಲೆ ಏರಿಕೆಯಿಂದ ತತ್ತರಿಸಿರುವ ಗ್ರಾಹಕರಿಗೆ ಮತ್ತೊಂದು ಶಾಕ್ ಎದುರಾಗಿದ್ದು, ಏಪ್ರಿಲ್ 1 ರಿಂದ ಏರ್ ಕಂಡೀಷನರ್, ರೆಫ್ರಿಜರೇಟರ್, ಕೂಲರ್, ಟಿವಿಗಳ ಬೆಲೆ ಹೆಚ್ಚಿಸಲು ಕಂಪನಿಗಳು ನಿರ್ಧರಿಸಿವೆ ಎನ್ನಲಾಗಿದೆ. ಕಚ್ಚಾ ವಸ್ತುಗಳ ಬೆಲೆ ಏರಿಕೆಯಿಂದಾಗಿ ಕಂಪನಿಗಳು ಎಲೆಕ್ಟ್ರಾನಿಕ್ ವಸ್ತುಗಳ ಬೆಲೆಗಳನ್ನು ಹೆಚ್ಚಿಸಲು ಮುಂದಾಗಿವೆ. ಬಹುತೇಕ ಎಲ್ಲ ಕಂಪನಿಗಳು ಏಪ್ರಿಲ್ ನಿಂದ ಎಲೆಕ್ಟ್ರಾನಿಕ್ ಉತ್ಪನ್ನಗಳ ಬೆಲೆಯನ್ನು ಹೆಚ್ಚಿಸಲು ನಿರ್ಧರಿಸಿವೆ. 2021ರಲ್ಲಿ ಉಪಕರಣಗಳ ಬೆಲೆಯಲ್ಲಿ ಇದು ಎರಡನೇ ಏರಿಕೆ ಯಾಗಿದೆ. …
Read More »Yearly Archives: 2021
ಇನ್ಸ್ಟಾಗ್ರಾಂನಲ್ಲಿ ಹುಟ್ಟಿದ ಪ್ರೀತಿ ಮದ್ವೆ ಬಳಿಕ ಆತ್ಮಹತ್ಯೆ
ಹೈದರಾಬಾದ್: ಪ್ರೀತಿ ಮತ್ತು ಮದುವೆ ಹೆಸರಿನಲ್ಲಿ ಪ್ರಿಯಕರನಿಂದ ಮೋಸ ಹೋದ ಯುವತಿ ತಂದೆಗೆ ಸೆಲ್ಫಿ ವಿಡಿಯೋ ಮಾಡಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಹೈದರಾಬಾದ್ನಲ್ಲಿ ನಡೆದಿದೆ. ಐಶ್ವರ್ಯಾ (25) ಮೃತ ಯುವತಿ. ಸೂರ್ಯಪೇಟ್ ಮೂಲದ ಐಶ್ವರ್ಯಾ, ಖಾಸಗಿ ಕಂಪನಿಯೊಂದರ ಉದ್ಯೋಗಿ ಆಗಿದ್ದಳು. ಇನ್ಸ್ಟಾಗ್ರಾಂ ಮೂಲಕ ಮಿಯಾಪುರ್ ಮೂಲದ ಆಶಿರ್ ಕುಮಾರ್ (26) ಎಂಬಾತನ ಪರಿಚಯ ಆಗಿತ್ತು. ಆಶಿರ್ ಖೈರಾತಬಾದ್ನ ಖಾಸಗಿ ಕಂಪನಿಯ ಉದ್ಯೋಗಿ. ಸ್ನೇಹದ ಹೆಸರಿನಲ್ಲಿ ಐಶ್ವರ್ಯಾಳನ್ನು ಆಶಿರ್ ಪರಿಚಯ ಮಾಡಿಕೊಂಡಿದ್ದಾನೆ. …
Read More »“ಅಭಿವೃದ್ಧಿಯೇ ಬಿಜೆಪಿಯ ಮೂಲ ಮಂತ್ರ”
ಬೆಳಗಾವಿ :ಇಂದು ಬೆಳಗಾವಿಯಲ್ಲಿ, ಲೋಕಸಭಾ ಉಪಚುನಾವಣೆ ನಿಮಿತ್ತ ಸನ್ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಬಿ.ಎಸ್. ಯಡಿಯೂರಪ್ಪ ಜಿ, ಹಾಗೂ ಬಿಜೆಪಿ ರಾಜ್ಯಾಧ್ಯಕ್ಷರಾದ ಶ್ರೀ ನಳಿನ್ ಕುಮಾರ್ ಕಟೀಲ್ ಜಿ, ಅವರ ಮುಖ್ಯ ಉಪಸ್ಥಿತಿಯಲ್ಲಿ, ನಮ್ಮ ಪಕ್ಷದ ಅಭ್ಯರ್ಥಿ ಶ್ರೀಮತಿ ಮಂಗಲಾ ಸುರೇಶ್ ಅಂಗಡಿ ಅವರ ಪರವಾಗಿ ನಡೆದ ಪ್ರಚಾರ ಸಮಾವೇಶದಲ್ಲಿ ರಾಜ್ಯ ಮಹಿಳಾ ಮತ್ತು ಮಕ್ಕಳ ಕಲ್ಯಾಣ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಸಚಿವರಾದ ಸೌ. ಶಶಿಕಲಾ ಜೊಲ್ಲೆ …
Read More »ಏರ್ಪೋರ್ಟ್ನಲ್ಲಿ ಆತ್ಮಹತ್ಯೆಗೆ ಯತ್ನಿಸಿದ್ದ ಟ್ಯಾಕ್ಸಿ ಚಾಲಕ ಚಿಕಿತ್ಸೆ ಫಲಕಾರಿಯಾಗದೆ ಸಾವು
ಬೆಂಗಳೂರು: ದಿನಪೂರ್ತಿ ದುಡಿದರೂ ಹಸಿವು ನೀಗುವಷ್ಟು ಸಂಪಾದಿಸಲಾಗದಿರುವ ಸಂಕಷ್ಟದಿಂದ ನೊಂದು ಕೆಂಪೇಗೌಡ ಏರ್ಪೋರ್ಟ್ನಲ್ಲಿ ಆತ್ಮಹತ್ಯೆಗೆ ಯತ್ನಿಸಿದ್ದ ಟ್ಯಾಕ್ಸಿ ಚಾಲಕ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ನಿನ್ನೆ ಟ್ಯಾಕ್ಸಿ ಚಾಲಕ ಪ್ರತಾಪ್ ಏರ್ಪೋರ್ಟ್ನಲ್ಲಿ ಪೆಟ್ರೋಲ್ ಸುರಿದು ಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದರು. ಶೇ.70 ಸುಟ್ಟ ಗಾಯಗಳಿಂದ ಪ್ರತಾಪ್ ಅವರನ್ನು ಚಿಕಿತ್ಸೆಗಾಗಿ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ತಡರಾತ್ರಿ ಚಿಕಿತ್ಸೆ ಫಲಕಾರಿಯಾಗದೇ ಪ್ರತಾಪ್ ಸಾವನ್ನಪ್ಪಿದ್ದಾರೆ. ಕರ್ನಾಟಕ ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ಪ್ರಾಧಿಕಾರದ ಏರ್ಪೋರ್ಟ್ನ ಟ್ಯಾಕ್ಸಿ …
Read More »ಬೆಳಗಾವಿಗೆ ಬನ್ನಿ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿ- ಜಾರಕಿಹೊಳಿಗೆ ಸಿಎಂ ಬುಲಾವ್
ಬೆಳಗಾವಿ: ಸಿಡಿ ಪ್ರಕರಣದಲ್ಲಿ ರಮೇಶ್ ಜಾರಕಿಹೊಳಿ ಅವರ ವಿರುದ್ಧ ದುರುದ್ದೇಶಪೂರಿತ ಆರೋಪ ಮಾಡಲಾಗುತ್ತಿದೆ. ರಮೇಶ್ ಜಾರಕಿಹೊಳಿ ಅವರು ಚುನಾವಣಾ ಪ್ರಚಾರದಲ್ಲಿ ತೊಡಗಬೇಕೆಂದು ಅವರಲ್ಲಿ ವಿನಂತಿಸುತ್ತೇನೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ. ಈ ಕುರಿತು ನಗರದ ವಿಮಾನ ನಿಲ್ದಾಣದಲ್ಲಿ ಮಾತನಾಡಿದ ಅವರು, ಸಿಡಿ ಪ್ರಕರಣದ ತನಿಖೆಯನ್ನು ನಿಷ್ಪಕ್ಷಪಾತವಾಗಿ ಮಾಡಲಾಗುತ್ತಿದ್ದು, ಎಸ್‍ಐಟಿ ಸಮರ್ಪಕವಾಗಿ ನಡೆಸುತ್ತಿದೆ. ತನಿಖೆ ಬಳಿಕ ಸತ್ಯಾಸತ್ಯತೆ ಹೊರ ಬರಲಿದೆ. ರಮೇಶ್ ಜಾರಕಿಹೊಳಿ ವಿರುದ್ಧ ಅನಗತ್ಯ, ರಾಜಕೀಯ ದುರುದ್ದೇಶಪೂರಿತ ಆರೋಪಗಳನ್ನು ಮಾಡುತ್ತಿದ್ದಾರೆ. …
Read More »ಮಹಾರಾಷ್ಟ್ರದ ಕೋಲ್ಹಾಪುರ ಮಹಾಲಕ್ಷ್ಮೀ ದೇವಾಲಯಕ್ಕೆ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿ: ಸಿಡಿ ಲೇಡಿ ನ್ಯಾಯಾಧೀಶರ ಮುಂದೆ ಹೇಳಿಕೆ ನೀಡಿದ ಬೆನ್ನಲ್ಲೇ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಟೆಂಪಲ್ ರನ್ ಶುರು ಮಾಡಿದ್ದು, ಮಹಾರಾಷ್ಟ್ರದ ಕೋಲ್ಹಾಪುರದ ಮಹಾಲಕ್ಷ್ಮೀ ದೇವಾಲಯಕ್ಕೆ ಭೇಟಿ ನೀಡಿ, ಪೂಜೆ ಸಲ್ಲಿಸಿದ್ದಾರೆ. ಸಂತ್ರಸ್ತ ಯುವತಿ ಇಂದು ನ್ಯಾಯಾಧೀಶರ ಮುಂದೆ ಹಾಜರಾಗಿ ತಮ್ಮ ಹೇಳಿಕೆಯನ್ನು ದಾಖಲಿಸಿದ್ದು, ಇದರಿಂದಾಗಿ ಮಾಜಿ ಸಚಿವ ರಮೇಶ್ ಜಾರಕಿಹೊಳಿಗೆ ಬಂಧನ ಭೀತಿ ಎದುರಾಗಿದೆ. ಹೀಗಾಗಿ ಮಹಾರಾಷ್ಟ್ರಕ್ಕೆ ಪ್ರಯಾಣ ಬೆಳೆಸಿದ್ದು, ಕೊಲ್ಹಾಪುರದ ಮಹಾಲಕ್ಷ್ಮೀ ದೇವಾಸ್ಥಾನಕ್ಕೆ ಭೇಟಿ ನೀಡಿದ್ದಾರೆ. …
Read More »ಏ. 7ರಿಂದ ಸರ್ಕಾರಿ ಬಸ್ ಸಂಚಾರವಿಲ್ಲ; ಕೋಡಿಹಳ್ಳಿ ಚಂದ್ರಶೇಖರ್
ಬೆಂಗಳೂರು, ಮಾರ್ಚ್ 30; “ರಾಜ್ಯ ಸರ್ಕಾರ ಎಸ್ಮಾ ಜಾರಿಗೊಳಿಸಿದರೂ ನಾವು ಭಯ ಪಡುವುದಿಲ್ಲ. ಏಪ್ರಿಲ್ 7ರಿಂದ ಕರ್ನಾಟಕದಾದ್ಯಂತ ಬಸ್ ಸಂಚಾರ ಸ್ಥಗಿತವಾಗುವುದು ಖಂಡಿತ” ಎಂದು ರಾಜ್ಯ ರಸ್ತೆ ಸಾರಿಗೆ ನೌಕರರ ಒಕ್ಕೂಟದ ಗೌರವಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ಹೇಳಿದರು. ಬೆಂಗಳೂರಿನಲ್ಲಿ ಮಂಗಳವಾರ ಪತ್ರಿಕಾಗೋಷ್ಠಿ ನಡೆಸಿದ ಅವರು, “ಏಪ್ರಿಲ್ 1 ರಿಂದ 6ರ ತನಕ ಸಾರಿಗೆ ಸಂಸ್ಥೆಗಳ ನೌಕರರು ಕೈಗೆ ಕಪ್ಪು ಪಟ್ಟಿ ಕಟ್ಟಿಕೊಂಡು ಕೆಲಸ ಮಾಡಲಿದ್ದಾರೆ” ಎಂದರು. “ಏಪ್ರಿಲ್ 2ರಂದು …
Read More »ಮನೆ ಇಲ್ಲದವರಿಗೆ ಸಿಎಂ ಯಡಿಯೂರಪ್ಪ ಗುಡ್ ನ್ಯೂಸ್: ಸಂತ್ರಸ್ತರೆಲ್ಲರಿಗೂ ಸೂರು ಒದಗಿಸುವ ಭರವಸೆ
ಬೆಳಗಾವಿ: ರಾಜ್ಯದಲ್ಲಿ ಅತಿವೃಷ್ಟಿಯಿಂದ ಸಂತ್ರಸ್ತರಾದವರಿಗೆ ಮನೆ ನಿರ್ಮಿಸಿಕೊಡಲಾಗುವುದು. ಯಾರಿಗೆ ಅನುದಾನ ದೊರೆತಿಲ್ಲವೋ ಅವರೆಲ್ಲರಿಗೂ ಅನುದಾನ ಬಿಡುಗಡೆ ಮಾಡಲಾಗುವುದು. ಸರ್ಕಾರದ ಬೊಕ್ಕಸಕ್ಕೆ ತೊಂದರೆಯಾದರೂ ಚಿಂತೆಯಿಲ್ಲ. ಅತಿವೃಷ್ಟಿ ಸಂತ್ರಸ್ತರಿಗೆ ಸೂರು ನಿರ್ಮಿಸಿಕೊಡಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ. ಬೆಳಗಾವಿಯ ಗಾಂಧಿಭವನದಲ್ಲಿ ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ಬೆಳಗಾವಿ ಮಾತ್ರವಲ್ಲದೆ, ರಾಜ್ಯದಲ್ಲಿ ಅತಿವೃಷ್ಟಿಯಿಂದ ಸಂತ್ರಸ್ತರಾದ ಎಲ್ಲರಿಗೂ ಮನೆ ನಿರ್ಮಿಸಿಕೊಡಲಾಗುವುದು ಎಂದು ತಿಳಿಸಿದ್ದಾರೆ. ದಿ. ಸುರೇಶ್ ಅಂಗಡಿ ಬೆಳಗಾವಿಯಲ್ಲಿ ಪಕ್ಷವನ್ನು ಕಟ್ಟಿ ಮಾದರಿ …
Read More »ಶಾಲಾ-ಕಾಲೇಜು ವಿದ್ಯಾರ್ಥಿನಿಯರನ್ನು ಲೈಂಗಿಕವಾಗಿ ಬಳಸಿಕೊಳ್ತಿದ್ದ ಗ್ಯಾಂಗ್ ಅರೆಸ್ಟ್
ಮಂಗಳೂರು: ಶಾಲಾ-ಕಾಲೇಜು ವಿದ್ಯಾರ್ಥಿನಿಯರನ್ನು ಬಲೆಗೆ ಬೀಳಿಸಿ ಲೈಂಗಿಕವಾಗಿ ಬಳಸಿಕೊಂಡು ನಂತರ ಬ್ಲಾಕ್ ಮೇಲ್ ಮಾಡುತ್ತಿದ್ದ ಗ್ಯಾಂಗ್ ಒಂದನ್ನು ಮಂಗಳೂರು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ನಗರದ ಅಪ್ರಾಪ್ತ ಬಾಲಕಿಯರು ಮತ್ತು ಯುವತಿಯರಿಗೆ ಲೈಂಗಿಕ ದೌರ್ಜನ್ಯ ಮಾಡುತ್ತಿದ್ದ ನಟೋರಿಯಸ್ ತಂಡ ಇದಾಗಿದ್ದು, ಮಂಗಳೂರಲ್ಲಿ ಶಾಲೆ, ಧಾರ್ಮಿಕ ಕೇಂದ್ರಗಳು, ಒಂಟಿ ಮನೆಗಳು ಹೀಗೆ ವಿವಿಧ ಕಡೆ ಹೋಗಿ ಅಪ್ರಾಪ್ತ ಬಾಲಕಿಯರನ್ನು ಪ್ರೀತಿ ಪ್ರೇಮ ಅಂತ ಪುಸಲಾಯಿಸಿ ಅವರ ಖಾಸಗಿ ಫೋಟೋಗಳು ಮತ್ತು ವೀಡಿಯೋಗಳನ್ನು ಸಂಗ್ರಹಿಸಿ …
Read More »ಮುಂದಿನ ಕಾನೂನು ಹೋರಾಟಕ್ಕೆ ಹಿರಿಯ ವಕೀಲರ ಜೊತೆ ಬಾಲಚಂದ್ರ ಜಾರಕಿಹೊಳಿ ಚರ್ಚೆ
ಬೆಂಗಳೂರು: ಸಿಡಿ ಲೇಡಿ ಇಂದು ನ್ಯಾಯಾಧೀಶರ ಮುಂದೆ ಹಾಜರಾಗುತ್ತಿರುವ ಹಿನ್ನೆಲೆಯಲ್ಲಿ ಮುಂದಿನ ಕಾನೂನು ಪ್ರಕ್ರಿಯೆಗಳನ್ನು ಹೇಗೆ ನಡೆಸಬೇಕು ಎಂಬುದನ್ನು ತಿಳಿಯಲು ಸೋಮವಾರ ರಾತ್ರಿ ಬಾಲಚಂದ್ರ ಜಾರಕಿಹೊಳಿ ಹಿರಿಯ ವಕೀಲರನ್ನು ಭೇಟಿಯಾಗಿ ಚರ್ಚೆ ನಡೆಸಿದ್ದಾರೆ. ನ್ಯಾಯಾಧೀಶರ ಮುಂದೆ ಹೇಳಿಕೆ ಕೊಟ್ಟರೆ ರಮೇಶ್ ಜಾರಕಿಹೊಳಿಗೆ ಸಂಕಷ್ಟ ಗ್ಯಾರಂಟಿ. ಆಕೆಯ ಹೇಳಿಕೆ ವಿಡಿಯೋ ಹೇಳಿಕೆಗೆ ತದ್ವಿರುದ್ಧವಾಗಿ ಇದ್ರೆ ಮಾತ್ರ ಈ ಪ್ರಕರಣದಲ್ಲಿ ಪಾರು. ಇಲ್ಲದಿದ್ದರೆ ರಮೇಶ್ ಜಾರಕಿಹೊಳಿಗೆ ಸಂಕಷ್ಟ ಆಗಲಿದೆ ಎಂದು ಹಿರಿಯ ವಕೀಲರು …
Read More »