ಬೆಳಗಾವಿ: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಭಾನುವಾರನಗರಕ್ಕೆ ಭೇಟಿ ಬೆಳಗಾವಿ ಲೋಕಸಭಾ ಕ್ಷೇತ್ರದ ಉಪ ಚುನಾವಣೆ ಹಿನ್ನೆಲೆಯಲ್ಲಿ ಪಕ್ಷದ ಅಭ್ಯರ್ಥಿ ಸತೀಶ ಜಾರಕಿಹೊಳಿ ಪರವಾಗಿ ಪ್ರಚಾರ ಕಾರ್ಯತಂತ್ರ ರೂಪಿಸುವುದಕ್ಕಾಗಿ ಅವರು ಪ್ರವಾಸ ಕೈಗೊಂಡಿದ್ದಾರೆ. ಸಾಂಬ್ರಾ ವಿಮಾನನಿಲ್ದಾಣಕ್ಕೆ ಬರುವ ಅವರು, ಸಂಜೆ 7ಕ್ಕೆ ಕಾಂಗ್ರೆಸ್ ನಾಯಕರೊಂದಿಗೆ ಸಮಾಲೋಚನೆ ನಡೆಸಲಿದ್ದಾರೆ. ಮಾರ್ಚ್ 29ರಂದು ಬೆಳಿಗ್ಗೆ 11ಕ್ಕೆ ಇಲ್ಲಿನ ಜಿಲ್ಲಾಧಿಕಾರಿ ಕಚೇರಿಯಲ್ಲಿ ಪಕ್ಷದ ಅಭ್ಯರ್ಥಿಯೊಂದಿಗೆ ನಾಮಪತ್ರ ಸಲ್ಲಿಕೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ವಿಧಾನಸಭೆ ವಿರೋಧಪಕ್ಷದ …
Read More »Yearly Archives: 2021
ಬೆಳಗಾವಿ ಲೋಕಸಭಾ ಉಪ ಚುನಾವಣೆ: ಲಿಂಗಾಯತ ಸಮಾಜದ ಬೆಂಬಲ ಕೋರಿದ ಮಂಗಲಾ ಅಂಗಡಿ
ಬೆಳಗಾವಿ: ಬೆಳಗಾವಿ ಲೋಕಸಭಾ ಕ್ಷೇತ್ರದ ಉಪ ಚುನಾವಣೆಯ ಬಿಜೆಪಿ ಅಭ್ಯರ್ಥಿ ಮಂಗಲಾ ಅಂಗಡಿ ಅವರು, ನಗರದಲ್ಲಿ ಲಿಂಗಾಯತ ಸಂಘಟನೆ ಸದಸ್ಯರೊಂದಿಗೆ ಭಾನುವಾರ ಸಭೆ ನಡೆಸಿದರು. ‘ಕ್ಷೇತ್ರದ ಸರ್ವತೋಮುಖ ಅಭಿವೃದ್ಧಿಗಾಗಿ ಉಪ ಚುನಾವಣೆಯಲ್ಲಿ ಸಮುದಾಯದ ಸಂಪೂರ್ಣ ಬೆಂಬಲ ಹಾಗೂ ಸಹಕಾರವನ್ನು ನನಗೆ ನೀಡಬೇಕು’ ಎಂದು ಕೋರಿದರು. ‘ಪತಿಯಾಗಿದ್ದ ದಿವಂಗತ ಸುರೇಶ ಅಂಗಡಿ ಅವರು ಹತ್ತು ಹಲವು ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿದ್ದಾರೆ. ಅವುಗಳನ್ನು ಪೂರ್ಣಗೊಳಿಸಿ ಜನರಿಗೆ ಅನುಕೂಲ ಮಾಡಿಕೊಡಲು ಅವಕಾಶ ಕಲ್ಪಿಸಬೇಕು’ …
Read More »ಸಿ.ಡಿ ಪ್ರಕರಣ: ಎಸ್‌ಐಟಿ ಸತ್ಯಾಸತ್ಯತೆ ಕಂಡು ಹಿಡಿಯುತ್ತದೆ -ಬಸವರಾಜ ಬೊಮ್ಮಾಯಿ
ಬೆಂಗಳೂರು: ‘ಸಿ.ಡಿ ಪ್ರಕರಣದಲ್ಲಿ ಆಡಿಯೊ, ವಿಡಿಯೊ, ಸಿಡಿಗಳ ಪರಿಶೀಲನೆ ಎಲ್ಲವನ್ನೂ ವೈಜ್ಞಾನಿಕವಾಗಿ ಎಸ್‌ಐಟಿ ಪೊಲೀಸರು ಪರಿಶೀಲನೆ ಮಾಡುತ್ತಾರೆ. ಅದಕ್ಕೆ ಒಂದು ಪದ್ದತಿ, ವ್ಯವಸ್ಥೆ ಇದೆ. ಎಸ್‌ಐಟಿ ತಂಡ ಖಂಡಿತವಾಗಿಯೂ ಇದರ ಸತ್ಯ ಸತ್ಯತೆ ಕಂಡು ಹಿಡಿಯುತ್ತದೆ. ಇದರಲ್ಲಿ ಯಾವುದೇ ಪ್ರಶ್ನೆಯೇ ಇಲ್ಲ’ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದರು. ಸುದ್ದಿಗಾರರ ಜೊತೆ ಭಾನುವಾರ ಮಾತನಾಡಿದ ಅವರು, ‘ನಾನು ಒಬ್ಬ ಗೃಹ ಸಚಿವ. ಬೇರೆಯವರ ಹೇಳಿಕೆಗೆಲ್ಲ ಪ್ರತಿಕ್ರಿಯೆ ಕೇಳಬೇಡಿ. ಎಸ್‌ಐಟಿ …
Read More »ಚಕ್ರವರ್ತಿ ಸೂಲಿಬೆಲೆ ಕಾರ್ಯಕ್ರಮ ವಿರೋಧಿಸಿ ಪ್ರತಿಭಟನೆ
ಶಿವಮೊಗ್ಗ: ನಗರದ ನೆಹರೂ ಕ್ರೀಡಾಂಗಣದಲ್ಲಿ ಶನಿವಾರ ಹಮ್ಮಿಕೊಂಡಿದ್ದ ಚಕ್ರವರ್ತಿ ಸೂಲಿಬೆಲೆ ವಿಶೇಷ ಉಪನ್ಯಾಸ ಕಾರ್ಯಕ್ರಮ ವಿರೋಧಿಸಿ ಎನ್‌ಎಸ್‌ಯುಐ ಕಾರ್ಯಕರ್ತರು ಗೋ ಬ್ಯಾಕ್ ಚಳವಳಿ ನಡೆಸಿದರು. ‘ಕೊರೊನಾ ನಿಯಮಗಳನ್ನು ಉಲ್ಲಂಘಿಸಿ ಉಪನ್ಯಾಸ ಕಾರ್ಯಕ್ರಮ ಆಯೋಜಿಸಲಾಗುತ್ತಿದೆ. ಚಕ್ರವರ್ತಿ ಸೂಲಿಬೆಲೆ ಅವರು ಹಲವು ಸುಳ್ಳುಗಳನ್ನು ಹೇಳಿ ಯುವ ಸಮೂಹ ಹಾಗೂ ಜನರ ದಿಕ್ಕು ತಪ್ಪಿಸುತ್ತಿದ್ದಾರೆ. ಅವರ ಭಾಷಣಕ್ಕೆ ಅವಕಾಶ ನೀಡಬಾರದು’ ಎಂದು ಆಗ್ರಹಿಸಿದರು. ನೆಹರೂ ಕ್ರೀಡಾಂಗಣಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ ಕಾರ್ಯಕರ್ತರನ್ನು ಪೊಲೀಸರು ತಡೆದರು. …
Read More »ಬೆಳಗಾವಿಗೆ ಡಿ.ಕೆ ಶಿವಕುಮಾರ್ ಆಗಮನ: ಸಾಂಬ್ರಾ ನಿಲ್ದಾಣದಲ್ಲಿ ಬಿಗಿ ಬಂದೋಬಸ್ತ್..!
ಕೆಪಿಸಿಸಿ ಅಧ್ಯಕ್ಷ್ಯ ಡಿ.ಕೆ ಶಿವಕುಮಾರ್ ಅವ್ರು ಇಂದು ಬೆಳಗಾವಿ ಆಗಮಿಸಲಿದ್ದು, ಸಾಂಬ್ರಾ ನಿಲ್ದಾಣದಲ್ಲಿ ಬಿಗಿ ಬಂದೋಬಸ್ತ್ ನಿಯೋಜನೆ ಮಾಡಲಾಗಿದೆ. ಹೌದು, ಬೆಳಗಾವಿಗೆ ಡಿ.ಕೆ ಶಿವಕುಮಾರ್ ಆಗಮನ ಹಿನ್ನೆಲೆಯಲ್ಲಿ ಸಾಂಬ್ರಾ ನಿಲ್ದಾಣದಲ್ಲಿ ಬಿಗಿ ಭದ್ರತೆ ಕಲ್ಪಿಸಿದ್ದು, 200 ಪೊಲೀಸರ ನಿಯೋಜನೆ, 4 ಸಿಆರ್‌ಪಿಎಫ್ ತುಕಡಿ ನಿಯೋಜನೆ ಮಾಡಲಾಗಿದೆ. ಡಿಸಿಪಿ ವಿಕ್ರಂ ಅಮಾಟೆ ನೇತೃತ್ವದಲ್ಲಿ ಬಿಗಿ ಬಂದೋಬಸ್ತ್ ಕಲ್ಪಿಸಲಾಗಿದೆ.
Read More »ರಾಜ್ಯದ ಪೊಲೀಸ್ ಇಲಾಖೆಯೂ ಸೇರಿದಂತೆ ಆಡಳಿತ ವ್ಯವಸ್ಥೆ ಸಂಪೂರ್ಣವಾಗಿ ಕುಸಿದು ಬಿದ್ದಿರುವುದಕ್ಕೆ ಈ ಸಿಡಿ ಹಗರಣ ಸಾಕ್ಷಿ.:ಸಿದ್ದರಾಮಯ್ಯ ಟ್ವೀಟ್
ಬೆಂಗಳೂರು: ರಾಜ್ಯದ ರಾಜಕೀಯವನ್ನು ಕಳೆದ ಕೆಲ ದಿನಗಳಿಂದ ಆವರಿಸಿಕೊಂಡಿರುವ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣದ ಕುರಿತು ವಿಪಕ್ಷ ನಾಯಕ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ. ಯುವತಿ ಅಜ್ಞಾತ ಸ್ಥಳದಿಂದ ನಿರಂತರವಾಗಿ ತನ್ನ ಹೇಳಿಕೆಗಳ ಸಿಡಿಗಳನ್ನು ಮಾಧ್ಯಮಗಳಿಗೆ ಬಿಡುಗಡೆ ಮಾಡುತ್ತಿದ್ದಾಳೆ, ತನ್ನ ವಕೀಲನ ಮೂಲಕ ಪೊಲೀಸರಿಗೆ ದೂರು ಕಳುಹಿಸಿಕೊಡುತ್ತಿದ್ದಾಳೆ, ತಂದೆ-ತಾಯಿ ಜೊತೆ ಮಾತನಾಡುತ್ತಿದ್ದಾಳೆ. ಹೀಗಿದ್ದರೂ ಪೊಲೀಸರ ಕೈಗೆ ಮಾತ್ರ ಸಿಗುತ್ತಿಲ್ಲ ಎಂದರೆ ಏನು ಅರ್ಥ? ಎಂದು ಪ್ರಶ್ನಿಸಿರುವ ವಿಪಕ್ಷ ನಾಯಕ ಸಿದ್ದರಾಮಯ್ಯ, ಈ …
Read More »ದಾಂಪತ್ಯ ಜೀವನಕ್ಕೆ ಕಾಲಿಟ್ಟ ಬಿಗ್ ಬಾಸ್ ಚೈತ್ರಾ ಕೋಟೂರ್ಉದ್ಯಮಿ ಜೊತೆ ಸಿಂಪಲ್ ವಿವಾಹ
ಬಿಗ್ ಬಾಸ್ ಮಾಜಿ ಸ್ಪರ್ಧಿ ಚೈತ್ರಾ ಕೋಟೂರ್ ಅವರು ಸದ್ದಿಲ್ಲದೇ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ. ಉದ್ಯಮಿ ನಾಗಾರ್ಜುನ್ ಎಂಬುವವರ ಜೊತೆ ಭಾನುವಾರ (ಮಾ.28) ಬೆಳಗ್ಗೆ ಸಿಂಪಲ್ ಆಗಿ ವಿವಾಹ ನೆರವೇರಿದೆ. ಈ ಶುಭ ಸಂದರ್ಭಕ್ಕೆ ಕೆಲವೇ ಕೆಲವು ಆಪ್ತರು ಮಾತ್ರ ಸಾಕ್ಷಿಯಾದರು. ಚೈತ್ರಾ ಕೈ ಹಿಡಿದಿರುವ ಹುಡುಗ ನಾಗಾರ್ಜುನ್ ಅವರು ಮಂಡ್ಯ ಮೂಲದವರು. ಕನ್ಸ್ಟ್ರಕ್ಷನ್ ಮತ್ತು ರಿಯಲ್ ಎಸ್ಟೇಟ್ ಕ್ಷೇತ್ರದಲ್ಲಿ ತೊಡಗಿಕೊಂಡಿದ್ದಾರೆ. ಕಳೆದ ಒಂದು ವರ್ಷದಿಂದ, ಅಂದರೆ ಚೈತ್ರಾ ಬಿಗ್ …
Read More »ನಾಳೆ ಯುವತಿ ನ್ಯಾಯಾಲಯದ ಮುಂದೆ ಹಾಜರಾಗುತ್ತಾಳೆ -ವಕೀಲ ಜಗದೀಶ್?
ಬೆಂಗಳೂರು: ಬಿಜೆಪಿ ಶಾಸಕ ರಮೇಶ್ ಜಾರಕಿಹೊಳಿ ಸಿಡಿ ಸ್ಫೋಟ ಕೇಸ್ಗೆ ಸಂಬಂಧಿಸಿ ನಾವು ಅಂದುಕೊಂಡಂತಾದ್ರೆ ನಾಳೆ ಯುವತಿ ನ್ಯಾಯಾಲಯದ ಮುಂದೆ ಹಾಜರಾಗುತ್ತಾಳೆ. ಸಿಡಿ ಲೇಡಿ ಪೋಷಕರು ತಮ್ಮ ಮಗಳ ಪರವಾಗಿ ನಿಲ್ಲಬೇಕು. ಮಗಳಿಗೆ ಅನ್ಯಾಯವಾಗಿದೆ ಹೀಗಾಗಿ ಆಕೆ ಪರವಾಗಿ ನಿಲ್ಲಬೇಕು ಎಂದು ಫೇಸ್ಬುಕ್ನಲ್ಲಿ ಸಂತ್ರಸ್ತೆ ಪರ ದೂರುದಾರ ವಕೀಲ ಜಗದೀಶ್ ಹೇಳಿದ್ರು. ಈ ಪ್ರಕರಣ ದಾಖಲಾದ ನಂತರ ನಿನ್ನೆ ಪೋಷಕರಿಗೆ ಸೆಕ್ಯೂರಿಟಿ ಕೊಡಿ ಅಂದ್ರೆ ಯಾರನ್ನೂ ಬೇಟಿ ಮಾಡದೇ ಎಸ್‌ಐಟಿ …
Read More »ಸಿಡಿ ವಿಚಾರವಾಗಿ ನೋ ಕಮೇಂಟ್ಸ್ – ಉಮೇಶ್ ಕತ್ತಿ
ಬೆಳಗಾವಿ : ಬೆಳಗಾವಿಯಲ್ಲಿ ಸಚಿವ ಉಮೇಶ್ ಅವರು ಸುದ್ದಿಗಾರರೊಂದಿಗೆ ಮಾತನಾಡುವಾಗ ಸಿಡಿ ಕೇಸ್ ವಿಚಾರವಾಗಿ ಮಾತನಾಡಲು ನಿರಾಕರಿಸಿದ್ದಾರೆ. ಸಿಡಿ ವಿಚಾರವಾಗಿ ನೋ ಕಮೆಂಟ್ಸ್ ಎನ್ನುತ್ತಾ ಹೊರಟು ಹೋಗಿದ್ದಾರೆ. ಇದೇ ವೇಳೆ ಬೆಳಗಾವಿ ಲೋಕಸಭೆ ಉಪ ಚುನಾವಣೆ ಕುರಿತು ಮಾತನಾಡಿದ ಅವರು 3 ಬೈ ಎಲೆಕ್ಷನಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಮಾಡಲಾಗಿದೆ. ಉಪ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳು ಗೆಲುವು ಸಾಧಿಸಲಿದ್ದಾರೆ. ಬೆಳಗಾವಿ ಲೋಕಸಭೆ ಉಪ ಚುನಾವಣೆಗೆ ಸುರೇಶ್ ಅಂಗಡಿ ಪತ್ನಿ ಮಂಗಲ …
Read More »ಡಿಕೆಶಿ ವಿರುದ್ಧ ಪ್ರತಿಭಟನೆ; ಬೆಳಗಾವಿಗೆ ಹೊರಟು ನಿಂತ ಕೆಪಿಸಿಸಿ ಅಧ್ಯಕ್ಷ
ಬೆಳಗಾವಿ, ಮಾರ್ಚ್ 28; ಡಿ. ಕೆ. ಶಿವಕುಮಾರ್ ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ರಮೇಶ್ ಜಾರಕಿಹೊಳಿ ಬೆಂಬಲಿಗರು ಬೃಹತ್ ಪ್ರತಿಭಟನೆ ನಡೆಸುತ್ತಿದ್ದಾರೆ. ತಮ್ಮ ವಿರುದ್ಧ ಪ್ರತಿಭಟನೆ ನಡೆಯುವಾಗಲೇ ಡಿ. ಕೆ. ಶಿವಕುಮಾರ್ ಬೆಳಗಾವಿಗೆ ಹೊರಟು ನಿಂತಿದ್ದಾರೆ. ಭಾನುವಾರ ಡಿ. ಕೆ. ಶಿವಕುಮಾರ್ ರಾಜೀನಾಮೆಗೆ ಆಗ್ರಹಿಸಿ ಗೋಕಾಕ್‌ನಲ್ಲಿ ರಮೇಶ್ ಜಾರಕಿಹೊಳಿ ಬೆಂಬಲಿಗರು ಬೃಹತ್ ಪ್ರತಿಭಟನೆ ಮಾಡುತ್ತಿದ್ದಾರೆ. ಸಂಗೊಳ್ಳಿ ರಾಯಣ್ಣ ವೃತ್ತದಿಂದ ಬಸವೇಶ್ವರ ವೃತ್ತದ ಕಡೆಗೆ ಸಾಗುತ್ತಿರುವ ಮೆರವಣಿಗೆ ಸಾಗುತ್ತಿದ್ದು, …
Read More »