Breaking News

Yearly Archives: 2021

2021ರ ಫಿಲಂಫೇರ್ ಅವಾರ್ಡ್ ವಿಜೇತರ ಪಟ್ಟಿ ಪ್ರಕಟ

ಮುಂಬೈ: 2021ರ ಫಿಲಂಫೇರ್ ಅವಾರ್ಡ್ ವಿಜೇತರ ಪಟ್ಟಿ ಪ್ರಕಟವಾಗಿದ್ದು, ಅಂಗ್ರೆಜಿ ಮೀಡಿಯಂ ಸಿನಿಮಾ ನಟನೆಗಾಗಿ ದಿ.ಇರ್ಫಾನ್ ಖಾನ್ ಅವರಿಗೆ ಅತ್ಯುತ್ತಮ ನಟ ಪ್ರಶಸ್ತಿ ಲಭಿಸಿದೆ. ಅಜಯ್ ದೇವ್‍ಗನ್ ಮತ್ತು ಕಾಜೋಲ್ ನಟನೆಯ ‘ತಾನ್ಹಾಜಿ- ದಿ ಅನ್‍ಸಂಗ್ ವಾರಿಯರ್’ ಚಿತ್ರ ಹಲವು ವಿಭಾಗಗಳಲ್ಲಿ ಪ್ರಶಸ್ತಿಯನ್ನ ಬಾಚಿಕೊಂಡಿದೆ. ಪ್ರಶಸ್ತಿ ವಿಜೇತರ ಪಟ್ಟಿ ಈ ಕೆಳಗಿನಂತಿದೆ. ಅತ್ಯುತ್ತಮ ಚಿತ್ರ: ಥಪ್ಪಡ್ ಅತ್ಯುತ್ತಮ ನಟ: ಇರ್ಫಾನ್ ಖಾನ್ (ಸಿನಿಮಾ-ಅಂಗ್ರೇಜಿ ಮೀಡಿಯಂ) ಅತ್ಯುತ್ತಮ ನಟಿ: ತಾಪ್ಸಿ ಪನ್ನು …

Read More »

ಇಂದಿನಿಂದ ರಾತ್ರಿ 8 ರಿಂದ ಬೆಳಗ್ಗೆ 7ರವರೆಗೆ ನೈಟ್ ಕರ್ಫ್ಯೂ ಜಾರಿ ..

ಮುಂಬೈ: ಇಂದಿನಿಂದ ಮಹಾರಾಷ್ಟ್ರದಲ್ಲಿ ರಾತ್ರಿ 8 ರಿಂದ ಬೆಳಗ್ಗೆ 7ರವರೆಗೆ ನೈಟ್ ಕರ್ಫ್ಯೂ ಜಾರಿಯಾಗಲಿದೆ. ನಿಯಮ ಮೀರಿದರೆ ಕಠಿಣ ಕ್ರಮಗಳನ್ನು ಕೈಗೊಳ್ಳುವುದಾಗಿ ಸರ್ಕಾರ ಸೂಚನೆಯನ್ನು ನೀಡಿದೆ. ಮಹಾರಾಷ್ಟ್ರದಲ್ಲಿ ದಿನದಿಂದ ದಿನಕ್ಕೆ ಮಾರಕ ಕೊರೊನಾ ಸೋಂಕಿನ ಪ್ರಕರಣಗಳು ಹೆಚ್ಚಾಗುತ್ತಲೇ ಇವೆ. ಇದರ ಬೆನ್ನಲ್ಲೇ ಮಹಾರಾಷ್ಟ್ರ ಸರ್ಕಾರ ಇಂದಿನಿಂದ (ಮಾರ್ಚ್ 28) ರಾಜ್ಯಾದ್ಯಂತ ರಾತ್ರಿ ಕರ್ಫ್ಯೂ ವಿಧಿಸಿದೆ. ಮುಂದಿನ ಆದೇಶದವರೆಗೆ ರಾತ್ರಿ ಕರ್ಫ್ಯೂ ಜಾರಿಯಲ್ಲಿ ಇರುತ್ತದೆ ಎಂದು ಮುಖ್ಯಮಂತ್ರಿ ಕಚೇರಿಯಿಂದ ಸೂಚನೆಯನ್ನು ನೀಡಲಾಗಿದೆ.ಭಾರತದಲ್ಲಿ …

Read More »

ಹರುಕು ಬಾಯಿಯಿಂದ ಹಗುರುವಾಗಿ ಮಾತಾಡಬೇಡಿ: ಯತ್ನಾಳ್‍ಗೆ ರೇಣುಕಾಚಾರ್ಯ ಎಚ್ಚರಿಕೆ

ಶಿವಮೊಗ್ಗ: ನಿಮ್ಮ ಹರುಕು ಬಾಯಿಯಿಂದ ಮುಖ್ಯಮಂತ್ರಿಗಳ ಬಗ್ಗೆ ಹಗುರುವಾಗಿ ಮಾತಾಡಬೇಡಿ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರಿಗೆ ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ ಎಚ್ಚರಿಕೆ ನೀಡಿದ್ದಾರೆ. ಶಿವಮೊಗ್ಗದಲ್ಲಿ ಮಾಧ್ಯಮದವರ ಜೊತೆ ಮಾತನಾಡಿದ ಅವರು, ಯತ್ನಾಳ್ ಪದೇ ಪದೇ ಮುಖ್ಯಮಂತ್ರಿ ಯಡಿಯೂರಪ್ಪ ಹಾಗೂ ಅವರ ಕುಟುಂಬದ ವಿರುದ್ಧ ವಾಗ್ದಾಳಿ ನಡೆಸುತ್ತಿದ್ದಾರೆ. ಇದು ಒಳ್ಳೆಯ ಬೆಳವಣಿಗೆಯಲ್ಲ. ಈ ರೀತಿ ಉದ್ಧಟತನದಿಂದ ವರ್ತಿಸಿದ್ದರಿಂದಲೇ ಈ ಹಿಂದೆ ನಿಮ್ಮನ್ನು ಪಕ್ಷದಿಂದ ಉಚ್ಛಾಟಿಸಿದ್ದು, ಆಗ ಜೆಡಿಎಸ್ …

Read More »

ಕೇಂದ್ರದ ವಿರುದ್ಧ ಮಾಧುಸ್ವಾಮಿ ಮಾತಿಗೆ ತೇಜಸ್ವಿ ಸೂರ್ಯ ಆಕ್ಷೇಪ

ಮೈಸೂರು: ರಾಜ್ಯಗಳ ರಚನೆ ಸಂಬಂಧ ಸಚಿವ ಮಾಧುಸ್ವಾಮಿ ಮಂಡಿಸಿದ ವಾದಕ್ಕೆ ಸಂಸದ ತೇಜಸ್ವಿ ಸೂರ್ಯ ಆಕ್ಷೇಪ ವ್ಯಕ್ತಪಡಿಸಿದರು. ಆಡಳಿತಾತ್ಮಕ ಉದ್ದೇಶಕ್ಕಾಗಿ ರಾಜ್ಯಗಳನ್ನು ಹೊಸದಾಗಿ ರೂಪಿಸಲಾಗುತ್ತಿದೆಯೇ ಹೊರತು ರಾಜಕೀಯ ಕಾರಣಕ್ಕಾಗಿ ಅಲ್ಲ. 16 ರಾಜ್ಯಗಳು ಇದ್ದದ್ದು, ಈಗ 29 ಆಗಿರುವುದರಲ್ಲಿ ತಪ್ಪೇನಿದೆ? ಪರಿಣಾಮಕಾರಿ ಆಡಳಿತಕ್ಕಾಗಿ ಹೆಚ್ಚು ರಾಜ್ಯಗಳನ್ನು ರೂಪಿಸಿದರೆ ಸಮಸ್ಯೆ ಏನು’ ಎಂದು ಪ್ರಶ್ನಿಸಿದರು. ‘ರಾಜ್ಯದ ವಿಚಾರಕ್ಕೆ ಬಂದಾಗ, ಬೆಂಗಳೂರು ಮತ್ತು ಹಳೇ ಮೈಸೂರು ಭಾಗಕ್ಕೆ ಹೆಚ್ಚು ಆದ್ಯತೆ ನೀಡುತ್ತಿರುವುದು ಕಾಣಿಸುತ್ತದೆ. …

Read More »

ಕೇಂದ್ರದ ಸರ್ವಾಧಿಕಾರಿ ಧೋರಣೆ ಹೆಚ್ಚುತ್ತಿದೆ: ಸಚಿವ ಜೆ.ಸಿ.ಮಾಧುಸ್ವಾಮಿ ಅಸಮಾಧಾನ

ಮೈಸೂರು: ‘ರಾಜ್ಯಗಳ ವಿಚಾರಗಳಲ್ಲಿ ಕೇಂದ್ರ ಸರ್ಕಾರ ಅತಿಕ್ರಮಣ ಮಾಡಿ, ಹಸ್ತಕ್ಷೇಪ ನಡೆಸುತ್ತಿದೆ. ಇದರಿಂದ ಒಕ್ಕೂಟ ವ್ಯವಸ್ಥೆಗೆ ಧಕ್ಕೆಯಾಗುವ ಆತಂಕ ಎದುರಾಗಿದೆ’ ಎಂದು ಸಚಿವ ಜೆ.ಸಿ.ಮಾಧುಸ್ವಾಮಿ ಇಲ್ಲಿ ಅಸಮಾಧಾನ ವ್ಯಕ್ತಪಡಿಸಿದರು. ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್‌ ಶನಿವಾರ ಆಯೋಜಿಸಿದ್ದ ‘ರಾಷ್ಟ್ರೀಯ ಏಕತೆ ಮತ್ತು ಪ್ರಾದೇಶಿಕ ಸ್ವಾತಂತ್ರ್ಯ’ ವಿಚಾರ ಸಂಕಿರಣದಲ್ಲಿ ಮಾತನಾಡಿದ ಅವರು, ‘ಕೇಂದ್ರದ ಸರ್ವಾಧಿಕಾರಿ ಧೋರಣೆ ಹೆಚ್ಚುತ್ತಿದ್ದು, ಅಧಿಕಾರದ ಕೇಂದ್ರೀಕರಣಕ್ಕೆ ಮುಂದಾಗಿದೆ. ಈ ಧೋರಣೆಯಿಂದಲೇ ಪ್ರಾದೇಶಿಕ ಭಾವನೆ ಬೆಳೆಯುತ್ತಿದೆ. ಎಲ್ಲೋ …

Read More »

ಸಿಪಿಐ ವಿರುದ್ಧ ರೇಪ್ ಕೇಸ್…! ಜ್ಯೂಸ್ ನಲ್ಲಿ ಮತ್ತಿನ ಔಷಧ ನೀಡಿ ಅತ್ಯಾಚಾರ

ಶಿವಮೊಗ್ಗ : ಜಿಲ್ಲೆಯ ಸಾಗರ ಪೊಲೀಸ್ ಠಾಣೆಯ ಸಿಪಿಐ ಅಶೋಕ್ ಕುಮಾರ್ ಎಂಬುವವರ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಾಗಿದೆ. ಈ ವ್ಯಕ್ತಿ ಕಳೆದ ನಾಲ್ಕು ವರ್ಷದಿಂದ ಮಹಿಳೆಯ ಮೇಲೆ ನಿರಂತರವಾಗಿ ಅತ್ಯಾಚಾರ ನಡೆಸಿದ್ದಾರೆ ಎಂದು ದೂರು ದಾಖಲಾಗಿದೆ. ಸಂತ್ರಸ್ತೆ ಪ್ರಕರಣವೊಂದರ ಸಲುವಾಗಿ ದೂರು ಸಲ್ಲಿಸಲು ಠಾಣೆಗೆ ಬಂದಿದ್ದರು. ಈ ಸಂದರ್ಭದಲ್ಲಿ ಸಿಪಿಐ ಅವರ ಮೊಬೈಲ್ ನಂಬರ್ ಪಡೆದಿದ್ದಾರೆ. ಆ ನಂತರ ಅವರ ಪರಿಚಯ ಮಾಡಿಕೊಂಡಿದ್ದಾರೆ. ನಂತರ ಸಲುಗೆ ಬೆಳೆಸಿದ್ದಾರೆ ಎಂದು …

Read More »

ಬೆಳಗಾವಿಗೆ ಬಂದ ಯುವತಿಯ ಪೋಷಕರು; ಪೊಲೀಸ್ ಭದ್ರತೆ

ಬೆಳಗಾವಿ: ಗೋಕಾಕ ಬಿಜೆಪಿ ಶಾಸಕ ರಮೇಶ ಜಾರಕಿಹೊಳಿ‌ ಅವರಿಗೆ ಸಂಬಂಧಿಸಿದ್ದು ಎನ್ನಲಾದ ಸಿ.ಡಿ.ಯಲ್ಲಿರುವ ಯುವತಿಯ ಪೋಷಕರನ್ನು ಎಸ್​ಐಟಿ ತಂಡದವರು ಬೆಂಗಳೂರಿನಿಂದ ಬೆಳಗಾವಿಗೆ ಕರೆ ತಂದು ಇಲ್ಲಿನ ಎಪಿಎಂಸಿ ಠಾಣೆಗೆ ಭಾನುವಾರ ಮುಂಜಾನೆ ಹಸ್ತಾಂತರಿಸಿದರು. ಎಸ್‌ಐಟಿ ತಂಡದ ಎಸಿಪಿ ಪರಮೇಶ್ವರ್ ನೇತೃತ್ವದಲ್ಲಿ 16 ಎಸ್‌ಐಟಿ ಸಿಬ್ಬಂದಿಯ ತಂಡ ಎಪಿಎಂಸಿ ಪೊಲೀಸ್ ಠಾಣೆಗೆ ಬಂದು, ಸಂತ್ರಸ್ತೆಯ ಕುಟುಂಬದವರನ್ನು ತಲುಪಿಸಿದರು. ಬಳಿಕ ಪೊಲೀಸರಿಗೆ ಹಸ್ತಾಂತರಿಸಿತು. ಠಾಣೆಯ ಸಿಪಿಐ ದಿಲೀಪ್‌ಕುಮಾರ್ ಒಂದು ಗಂಟೆಗೂ ಹೆಚ್ಚು ಕಾಲ …

Read More »

ರಾಜ್ಯದಲ್ಲಿ ‘ಭ್ರಷ್ಟ’ ಮತ್ತು ‘ಪ್ರಾಮಾಣಿಕ ರಾಜಕಾರಣಿಗಳು’ ಎಂಬ ಎರಡು ಗುಂಪುಗಳಿವೆ ಎಂದ ಯತ್ನಾಳ್

ಹಾವೇರಿ: ರಾಜ್ಯದಲ್ಲಿ ಕೋವಿಡ್ ಚರ್ಚೆಗಿಂತಲೂ ಹೆಚ್ಚಾಗಿ ಸಿಡಿ ಕೇಸ್ ಗೆ ಸಂಬಂಧಿಸಿದ ಚರ್ಚೆ ಜೋರಾಗಿದೆ. ಮಾಜಿ ಸಚಿವ ರಮೇಶ ಜಾರಕಿಹೊಳಿ ಸೆಕ್ಸ್ ಸಿಡಿಗೆ ಸಂಬಂಧಿಸಿದಂತೆ ಸಂತ್ರಸ್ತ ಯುವತಿ ಈಗಾಗಲೇ ಮಹಾನಾಯಕನ ಹೆಸರು ಬಾಯಿಬಿಟ್ಟಿದ್ದಾಳೆ. ಇದರ ಮಧ್ಯೆ ಮಾಧ್ಯಮದವರೊಂದಿಗೆ ಮಾತನಾಡಿದ ಶಾಸಕ ಬಸನಗೌಡ ಪಾಟೀಲ ಯತ್ನಾಳ ‘ಕಾಂಗ್ರೆಸ್ ಮಹಾನಾಯಕ’ ಮತ್ತು ‘ಬಿಜೆಪಿಯ ಯುವರಾಜ’ ಇವರ ಬಳಿ ಸಿ.ಡಿ. ತಯಾರಿಸುವ ಕಾರ್ಖಾನೆಗಳಿವೆ. ಇವರು ಸಿ.ಡಿ.ಗಳನ್ನೂ ಖರೀದಿ ಮಾಡುತ್ತಾರೆ. ಈಗಾಗಲೇ ಕೆಲವೇ ದಿನಗಳಲ್ಲಿ ‘ಬಿಜೆಪಿ …

Read More »

ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣ – ಮ್ಯಾಜಿಸ್ಟ್ರೇಟ್ ಮುಂದೆ ಯುವತಿ ನೀಡುವ ಹೇಳಿಕೆಯತ್ತ ಎಲ್ಲರ ಚಿತ್ತ

ಬೆಂಗಳೂರು: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣ ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿದ್ದು, ಇದೀಗ ಸಿಡಿಯಲ್ಲಿರುವ ಯುವತಿ ನೀಡುವ ಹೇಳಿಕೆಯ ಮೇಲೆ ಎಲ್ಲರ ಗಮನ ನೆಟ್ಟಿದೆ. ಎಸ್ ಐ ಟಿ ವಿಚರಣೆ ಬಳಿಕ ಸುದ್ದಿಗೋಷ್ಠಿ ನಡೆಸಿದ್ದ ಸಿಡಿ ಲೇಡಿ ಪೋಷಕರು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ವಿರುದ್ಧ ಗಂಭೀರ ಆರೋಪ ಮಾಡಿದ್ದರು. ಇದರ ಬೆನ್ನಲ್ಲೇ ತಾನು ನಿರಪರಾಧಿ ಎಂದು ಯುವತಿ ಪೋಷಕರೇ ಹೇಳಿದ್ದಾರೆ ಎಂದಿರುವ ರಮೇಶ್ ಜಾರಕಿಹೊಳಿ ಇಂದು ಡಿ.ಕೆ.ಶಿವಕುಮಾರ್ ವಿರುದ್ಧ …

Read More »

ಡಿ.ಕೆ. ಶಿವಕುಮಾರ್ ಮಗಳನ್ನು ಒತ್ತೆಯಾಳಾಗಿಟ್ಟುಕೊಂಡಿದ್ದಾರೆ :ಸಿಡಿ ಯುವತಿ ಪೋಷಕರು

ಬೆಳಗಾವಿ: ರಮೇಶ ಜಾರಕಿಹೊಳಿ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿ ಎಸ್‌ಐಟಿ ವಿಚಾರಣೆಗೆ ಹಾಜರಾಗಿದ್ದ ಯುವತಿ ಪೋಷಕರು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ. ತಮ್ಮ ಮಗಳನ್ನು ಮುಂದಿಟ್ಟುಕೊಂಡು ರಾಜಕೀಯ ಮಾಡಲಾಗ್ತಿದೆ. ಡಿ.ಕೆ. ಶಿವಕುಮಾರ್ ಮಗಳನ್ನು ಒತ್ತೆಯಾಳಾಗಿಟ್ಟುಕೊಂಡಿದ್ದಾರೆ ಎಂದು ಪೋಷಕರು ದೂರಿದ್ದಾರೆ. ಅವರು ಬೆಂಗಳೂರಿಂದ ಹೊರಟು ತಡರಾತ್ರಿ 3 ಗಂಟೆಗೆ ಬೆಳಗಾವಿಗೆ ಆಗಮಿಸಿದ್ದಾರೆ. ಎಸ್‌ಐಟಿ ಅಧಿಕಾರಿಗಳ ಜೊತೆ ನೇರವಾಗಿ ಎಪಿಎಂಸಿ ಠಾಣೆಗೆ ಆಗಮಿಸಿದ್ದಾರೆ. ಎಸಿಪಿ ಪರಮೇಶ್ವರ್ ನೇತೃತ್ವದಲ್ಲಿ …

Read More »