ಬೆಂಗಳೂರು: ‘ಆನ್‌ಲೈನ್ ಶಿಕ್ಷಣದಿಂದ ಮಕ್ಕಳ ಕಣ್ಣಿನ ಮೇಲೆ ಪರಿಣಾಮ ಬೀರುತ್ತಿರುವ ವಿಷಯ ಗಮನಕ್ಕೆ ಬಂದಿದೆ. ಈ ಬಗ್ಗೆ ಆರೋಗ್ಯ ಸಚಿವರ ಜತೆ ಚರ್ಚಿಸಿ ಪರಿಹಾರ ಕಂಡುಕೊಳ್ಳಲಾಗುವುದು’ ಎಂದು ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಹೇಳಿದರು. ವಿಧಾನ ಪರಿಷತ್‌ನಲ್ಲಿ ಕಾಂಗ್ರೆಸ್ಸಿನ ಯು.ಬಿ. ವೆಂಕಟೇಶ್ ಅವರ ಪ್ರಶ್ನೆಗೆ ಉತ್ತರಿಸಿದ ಅವರು, ‘ಖಾಸಗಿ ಶಾಲೆಗಳು ಎಲ್‌ಕೆಜಿ, ಯುಕೆಜಿ ಮಕ್ಕಳಿಗೂ ಆನ್‌ಲೈನ್ ಶಿಕ್ಷಣ ಆರಂಭಿಸಿವೆ. ಆನ್‌ಲೈನ್ ಶಿಕ್ಷಣದಿಂದ ಮಕ್ಕಳ ಮೇಲೆ ಪರಿಣಾಮ ಬೀರುತ್ತಿರುವ ಬಗ್ಗೆ …
Read More »Yearly Archives: 2021
ರಾಜ್ಯದ ವಿಶೇಷ ಮಕ್ಕಳ ಅನುದಾನಿತ ಶಾಲೆಗಳ ಶಿಕ್ಷಕರಿಗೆ ಸಿಹಿಸುದ್ದಿ : ಶೀಘ್ರದಲ್ಲೇ ಪಿಂಚಣಿ ಸೌಲಭ್ಯ
ಬೆಂಗಳೂರು : ರಾಜ್ಯ ಸರ್ಕಾರವು ವಿಶೇಷ ಮಕ್ಕಳ ಅನುದಾನಿತ ಶಾಲೆಗಳ ಶಿಕ್ಷಕರಿಗೆ ಸಿಹಿಸುದ್ದಿಯೊಂದನ್ನು ನೀಡಿದ್ದು, ವಿಶೇಷ ಮಕ್ಕಳ ಅನುದಾನಿತ ಶಾಲೆಗಳ ಶಿಕ್ಷಕರಿಗೆ ಪಿಂಚಣಿ ಸೌಲಭ್ಯ ಒದಗಿಸುವ ಕುರಿತು ನಿರ್ಧಾರ ಕೈಗೊಳ್ಳಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಶಶಿಕಲಾ ಜೊಲ್ಲೆ ಭರವಸೆ ನೀಡಿದ್ದಾರೆ. ವಿಧಾನಪರಿಷತ್ ನಲ್ಲಿ ಮಾತನಾಡಿದ ಸಚಿವೆ ಶಶಿಕಲಾ ಜೊಲ್ಲೆ, ರಾಜ್ಯದಲ್ಲಿರುವ ವಿಶೇಷ ಮಕ್ಕಳ ಅನುದಾನಿತ ಶಾಲೆಗಳಲ್ಲಿ ಕೆಲಸ ಮಾಡುತ್ತಿರುವ ಶಿಕ್ಷಕರಿಗೆ ಪಿಂಚಣಿ ಸೌಲಭ್ಯ ಒದಗಿಸುವ …
Read More »ಬೆಳಗಾವಿ ಲೋಕಸಭಾ ಉಪ ಚುನಾವಣೆ ಕ್ಷೇತ್ರದಲ್ಲಿ ಒಟ್ಟು 18.07 ಲಕ್ಷ ಮತದಾರರು:
ಬೆಳಗಾವಿ: ಬೆಳಗಾವಿ ಲೋಕಸಭಾ ಉಪ ಚುನಾವಣೆಗೆ ನಾಮಪತ್ರ ಸಲ್ಲಿಸಲು ಮಾರ್ಚ್ 30 ಕಡೆಯ ದಿನವಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಅವರು ತಿಳಿಸಿದರು. ಲೋಕಸಭಾ ಉಪ ಚುನಾವಣೆಗೆ ಸಂಬಂಧಿಸಿದಂತೆ ಸೋಮವಾರ (ಮಾ.22) ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಈ ವಿಷಯ ತಿಳಿಸಿದರು. ನಾಮಪತ್ರಗಳ ಪರಿಶೀಲನೆ ಮಾರ್ಚ್ 31 ರಂದು ನಡೆಯಲಿದೆ. ನಾಮಪತ್ರಗಳನ್ನು ಹಿಂತೆಗೆದುಕೊಳ್ಳಲು ಏಪ್ರಿಲ್ 3 ಕಡೆಯ ದಿನವಾಗಿದೆ. ಏಪ್ರಿಲ್ 17, 2021 ರಂದು ಮತದಾನ ನಡೆಯಲಿದ್ದು, …
Read More »ಕೂಡ್ಲಿಗಿ:ಪಪಂ ಚುನಾವಣೆ ಮತಯಾಚಿಸಿದ,ಶಾಸಕ ಎನ್.ವೈ.ಗೋಪಾಲಕೃಷ್ಣ
ವಿಜಯನಗರ ಜಿಲ್ಲೆ ಕೂಡ್ಲಿಗಿ ಪಟ್ಟಣದಲ್ಲಿ ಶಾಸಕ ಎನ್.ವೈ.ಗೋಪಾಲಕೃಷ್ಣ ರವರು,ಪಪಂನ 1ಮತ್ತು 12ನೇ ವಾರ್ಡ್ ಗಳ ಚುನಾವಣಾ ಪ್ರಯುಕ್ತ.ಅಭ್ಯರ್ಥಿಗಳಾದ ಪ್ರಕಾಶ ನಾಯ್ಕ ಹಾಗೂ ಶ್ರೀಮತಿ ಮಲ್ಲಮ್ಮ ಪರ ಮತಯಾಚನೆ ಮಾಡಿ ಮಾತನಾಡಿದರು,12ನೇವಾರ್ಡ್ ನಲ್ಲಿ ಶ್ರೀಸೊಲ್ಲಮ್ಮ ದೇವಿ ದೇವಸ್ಥಾನದ ಆವರಣದಲ್ಲಿ,ಮತದಾರರನ್ನು ಉದ್ದೇಶಿಸಿ ಮಾತನಾಡಿ ಮತಯಾಚನೆ ಮಾಡಿದರು. ಪಟ್ಟಣದ ಸರ್ವತೋಮುಖ ಅಭಿವೃದ್ಧಿಗಾಗಿ ಪ್ರಾಮಾಣಿಕ ಪ್ರಯತ್ನ ನಡೆಸಿದ್ದೇವೆ.ಪಟ್ಟಣದ ಹಿತಕ್ಕಾಗಿ ಹಾಗೂ ನಾಗರೀಕರ ಸಮಸ್ಥ ಶ್ರೇಯೋಭಿವೃದ್ಧಿಗಾಗಿ, ಬಿ.ಜೆ.ಪಿ ಶ್ರಮಿಸುತ್ತಿದೆ ಕಾರಣ ಬಿಜೆಪಿ ಅಭ್ಯರ್ಥಿಗಳನ್ನ ಆರಿಸಿ ಎಂದರು.ಬಿಜೆಪಿ ಜಿಲ್ಲಾ …
Read More »ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡುವ ಉದ್ದೆಶದಿಂದ ’ಫೊನ್ ಇನ್ ಕಾರ್ಯಕ್ರಮ’ಕ್ಕೆ ಕ್ಷೇತ್ರ ಶಿಕ್ಷಣಾಧಿಕಾರಿ ಲಕ್ಷ್ಮಣರಾವ್ ಯಕ್ಕುಂಡಿ ಚಾಲನೆ
ಖಾನಾಪುರ – ಕೊವಿಡ್ -೧೯ ಹಿನ್ನೆಲೆಯಲ್ಲಿ ಈ ವರ್ಷ ಎಸ್ ಎಸ್ ಎಲ್ ಸಿ ಪರೀಕ್ಷೆಗಳು ಜೂನ್ ತಿಂಗಳಲ್ಲಿ ನಡೆಯುತ್ತಿದ್ದು ಖಾನಾಪುರ ತಾಲೂಕಿನಲ್ಲಿ ಕಲಿಯುತ್ತಿರುವ ಎಸ್. ಎಸ್. ಎಲ್. ಸಿ. ವಿದ್ಯಾರ್ಥಿಗಳು ನಿರ್ಭಯವಾಗಿ ಹಾಗೂ ಆತ್ಮವಿಶ್ವಾಸದಿಂದ ಪರೀಕ್ಷೆಗಳನ್ನು ಎದುರಿಸಲು ಸಹಯವಾಗುವ ನಿಟ್ಟಿನಲ್ಲಿ ಈ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡುವ ಉದ್ದೆಶದಿಂದ ’ಫೊನ್ ಇನ್ ಕಾರ್ಯಕ್ರಮ’ಕ್ಕೆ ಕ್ಷೇತ್ರ ಶಿಕ್ಷಣಾಧಿಕಾರಿ ಲಕ್ಷ್ಮಣರಾವ್ ಯಕ್ಕುಂಡಿ ಚಾಲನೆ ನೀಡಿದರು. ಆಯ್ದ ಸಂಪನ್ಮೂಲ ವ್ಯಕ್ತಿಗಳು ಈ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ …
Read More »ತಾನೂ ಬೆಳಗಾವಿ ಬಿಜೆಪಿ ಟಿಕೆಟ್ ಆಕಾಂಕ್ಷಿ: ಪ್ರಮೋದ್ ಮುತಾಲಿಕ್
ಹುಬ್ಬಳ್ಳಿ: ಬೆಳಗಾವಿ ಲೋಕಸಭಾ ಕ್ಷೇತ್ರದ ಉಪ ಚುನಾವಣೆಗೆ ಬಿಜೆಪಿಯಿಂದ ತಾವು ಟಿಕೆಟ್ ಆಕಾಂಕ್ಷಿ ಆಗಿದ್ದು, ತಮಗೆ ಟಿಕೆಟ್ ದೊರೆಯುವ ವಿಶ್ವಾಸವಿದೆ ಎಂದು ಶ್ರೀರಾಮಸೇನಾ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಹೇಳಿದರು. ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬೆಳಗಾವಿ ಲೋಕಸಭಾ ಕ್ಷೇತ್ರದ ಉಪಚುನಾವಣೆ ಟಿಕೆಟ್ ವಿಷಯವಾಗಿ ಹಲವು ನಾಯಕರೊಂದಿಗೆ ಚರ್ಚಿಸಿದ್ದೇನೆ. ಸಕಾರಾತ್ಮಕ ಸ್ಪಂದನೆ ವ್ಯಕ್ತವಾಗಿದೆ. ನನಗೀಗ 66 ವರ್ಷ, ಇದು ಕೊನೆಯ ಯತ್ನ. ದೊರೆತರೆ ಸರಿ ಇಲ್ಲವಾದರೆ ಇಲ್ಲ. ಪಕ್ಷೇತರನಾಗಿ ಸ್ಪರ್ಧಿಸುವುದಿಲ್ಲ ಎಂದರು. …
Read More »ಲೋಕಸಭಾ ಉಪಚುನಾವಣೆ ಹಿನ್ನೆಲೆ ಎಂ.ಜಿ.ಹಿರೇಮಠ ಅವರನ್ನು ವರ್ಗಾವಣೆ ಮಾಡಲಾಗಿದೆ.
ಬೆಂಗಳೂರು – ಬೆಳಗಾವಿ ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಅವರನ್ನು ವರ್ಗಾವಣೆ ಮಾಡಲಾಗಿದೆ. ಡಾ.ಕೆ.ಹರೀಶ್ ಕುಮಾರ ಬೆಳಗಾವಿಯ ನೂತನ ಜಿಲ್ಲಾಧಿಕಾರಿಗಳಾಗಿದ್ದಾರೆ. ಹರೀಶ್ ಕುಮಾರ ಬೆಂಗಳೂರಿನ ಉದ್ಯೋಗ ಮತ್ತು ತರಬೇತಿ ಆಯುಕ್ತರಾಗಿ ಕೆಲಸ ಮಾಡುತ್ತಿದ್ದರು. ಈ ಹಿಂದೆ ಅವರು ಕಾರವಾರ ಜಿಲ್ಲಾಧಿಕಾರಿಗಳಾಗಿಯೂ ಕೆಲಸಮಾಡಿದ್ದಾರೆ ಬೆಳಗಾವಿ ಲೋಕಸಭಾ ಕ್ಷೇತ್ರದ ಉಪಚುನಾವಣೆ ಹಿನ್ನೆಲೆಯಲ್ಲಿ ಈ ಬದಲಾವಣೆ ಮಾಡಲಾಗಿದೆ. ಎಂ.ಜಿ.ಹಿರೇಮಠ ಬೆಳಗಾವಿ ಜಿಲ್ಲೆಯವರಾಗಿರುವುದರಿಂದ ಅವರನ್ನು ಚುನಾವಣೆ ಸಂದರ್ಭದಲ್ಲಿ ವರ್ಗಾಯಿಸಲಾಗಿದೆ.
Read More »ಸಿಇಟಿ, ನೀಟ್ ಜತೆಗೆ ಜೆಇಇ ವಿದ್ಯಾರ್ಥಿಗಳಿಗೂ ಆನ್‌ಲೈನ್ ಕೋಚಿಂಗ್ : ʼಗೆಟ್-ಸೆಟ್ ಗೋʼ ವ್ಯವಸ್ಥೆಗೆ CM ಯಡಿಯೂರಪ್ಪ ಚಾಲನೆ
ಬೆಂಗಳೂರು : ಕಳೆದ ವರ್ಷದಂತೆ ಈ ವರ್ಷವೂ ಸಿಇಟಿ, ನೀಟ್ ಜತೆಗೆ ಜೆಇಇ ಪರೀಕ್ಷೆ ತೆಗೆದುಕೊಳ್ಳುವ ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣ ಇಲಾಖೆ ವತಿಯಿಂದ ವಿಶೇಷ ಕೋಚಿಂಗ್ ನೀಡಲಾಗುವ ʼಗೆಟ್-ಸೆಟ್ ಗೋʼ ವ್ಯವಸ್ಥೆಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಚಾಲನೆ ನೀಡಿದರು. ವಿಧಾನಸೌಧದಲ್ಲಿ ಸೋಮವಾರ ನಡೆದ ಕಾರ್ಯಕ್ರಮದಲ್ಲಿ ʼಗೆಟ್-ಸೆಟ್ ಗೋʼ (GetCETgo) ವ್ಯವಸ್ಥೆಗೆ ಚಾಲನೆ ಕೊಟ್ಟರಲ್ಲದೆ; ‘ಈವರೆಗೆ ಸಿಇಟಿ ಮತ್ತು ನೀಟ್‌ಗೆ ಮಾತ್ರ ತರಬೇತಿ ನೀಡಲಾಗುತ್ತಿತ್ತು. ಈ ವರ್ಷದಿಂದ ಹೆಚ್ಚುವರಿಯಾಗಿ ಜೆಇಇ ವಿದ್ಯಾರ್ಥಿಗಳಿಗೂ ಆನ್‌ಲೈನ್ …
Read More »ತ್ರಿವರ್ಣ ಧ್ವಜ, ಭಾರತದ ನಕ್ಷೆ ಇರುವ ಕೇಕ್ ಕತ್ತರಿಸುವುದು ‘ಅವಮಾನವಲ್ಲ’ : ಮದ್ರಾಸ್ ಹೈಕೋರ್ಟ್
ಚನ್ನೈ: ತ್ರಿವರ್ಣ ಧ್ವಜ ಮತ್ತು ಅಶೋಕ ಚಕ್ರ ವಿನ್ಯಾಸವಿರುವ ಕೇಕ್ ಕತ್ತರಿಸುವುದರಿಂದ 1971ರ ರಾಷ್ಟ್ರೀಯ ಗೌರವ ಕಾಯಿದೆ 1971ರ ಅಡಿಯಲ್ಲಿ ‘ಅವಮಾನ’ ವಲ್ಲವೆಂದು ಮದ್ರಾಸ್ ಹೈಕೋರ್ಟ್ ನ್ಯಾಯಮೂರ್ತಿ ಎನ್.ಆನಂದ್ ವೆಂಕಟೇಶ್ ಅವರಿದ್ದ ನ್ಯಾಯಾಪೀಠ ತೀರ್ಪು ನೀಡಿದೆ. ಈ ಮೂಲಕ ಅವರು 2013ರಲ್ಲಿ ಕೇಕ್ ಕತ್ತರಿಸುವ ಪ್ರಕರಣದ ಬಗ್ಗೆ ಕೊಯಮತ್ತೂರ್ ಮ್ಯಾಜಿಸ್ಟ್ರೇಟ್ ಅವರು ಆರಂಭಿಸಿದ್ದ ಕ್ರಿಮಿನಲ್ ಮೊಕದ್ದಮೆಗಳನ್ನು ರದ್ದುಗೊಳಿಸಿ, ರಾಷ್ಟ್ರಭಕ್ತಿ ಮತ್ತು ರಾಷ್ಟ್ರೀಯ ಸ್ವಾಭಿಮಾನದ ಹಲವು ಮಹತ್ವದ ಮಾಹಿತಿಗಳನ್ನು ನ್ಯಾಯಾಪೀಠ ತಿಳಿಸಿದೆ. …
Read More »ಶಾಸಕರ ಪುತ್ರನಿಗೆ ಯುವತಿ ಬ್ಲ್ಯಾಕ್ ಮೇಲ್ ಮಾಡಿ ಹಣ ಪೀಕಿಸುತ್ತಿದ್ದ ಘಟನೆ ಬೆಳಕಿಗೆ ಬಂದಿದೆ.
ಹುಬ್ಬಳ್ಳಿ: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣದ ಬೆನ್ನಲ್ಲೇ ಇದೀಗ ಮತ್ತೊಂದು ಸಿಡಿ ಪ್ರಕರಣ ಬಹಿರಂಗವಾಗಿದೆ. ಅಶ್ಲೀಲ ವಿಡಿಯೋ ಇಟ್ಟುಕೊಂಡು ಮಾಜಿ ಶಾಸಕರ ಪುತ್ರನಿಗೆ ಯುವತಿಯೊಬ್ಬಳು ಬ್ಲ್ಯಾಕ್ ಮೇಲ್ ಮಾಡಿ ಹಣ ಪೀಕಿಸುತ್ತಿದ್ದ ಘಟನೆ ಬೆಳಕಿಗೆ ಬಂದಿದೆ. ಧಾರವಾಡದ ಮಾಜಿ ಶಾಸಕರ ಪುತ್ರನಿಗೆ ಫೇಸ್ ಬುಕ್ ನಲ್ಲಿ ಪರಿಚಯವಾಗಿದ್ದ ಯುವತಿ ಬಳಿಕ ವಿಡಿಯೋ ಕಾಲ್ ಮಾಡಿ ಸಲುಗೆ ಬೆಳೆಸಿಕೊಂಡಿದ್ದಳು. ಹೀಗೆ ಮಾಡಿದ್ದ ವಿಡಿಯೋ ಕಾಲ್ ಗಳನ್ನೇ ಎಡಿಟ್ ಮಾಡಿ …
Read More »