Breaking News

Yearly Archives: 2021

ಬೆಳಗಾವಿ ಜಿಲ್ಲೆಯ ಗೋಕಾಕ್ ಅಥವಾ ಚಿಕ್ಕೋಡಿ ಜಿಲ್ಲೆಗಳನ್ನು ರಚಿಸುವ ಕುರಿತಂತೆ ಚರ್ಚೆ

ಬೆಂಗಳೂರು: ರಾಜ್ಯದಲ್ಲಿ ಇತ್ತೀಚೆಗೆ ವಿಜಯನಗರ ಜಿಲ್ಲೆಯನ್ನು ರಚಿಸಲಾಗಿದ್ದು, ಇದರೊಂದಿಗೆ ಜಿಲ್ಲೆಗಳ ಸಂಖ್ಯೆ 31 ಕ್ಕೆ ಏರಿಕೆಯಾಗಿದೆ. ಶೀಘ್ರವೇ ರಾಜ್ಯದಲ್ಲಿ 3 -4 ಹೊಸ ಜಿಲ್ಲೆಗಳನ್ನು ರಚಿಸುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ. ಉತ್ತರ ಕರ್ನಾಟಕ ಜಿಲ್ಲೆಯ ಶಿರಸಿ, ಬೀದರ್ ಜಿಲ್ಲೆಯ ಬಸವಕಲ್ಯಾಣ, ತುಮಕೂರು ಜಿಲ್ಲೆಯ ತಿಪಟೂರು ಅಥವಾ ಮಧುಗಿರಿ, ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ, ಬೆಳಗಾವಿ ಜಿಲ್ಲೆಯ ಗೋಕಾಕ್ ಅಥವಾ ಚಿಕ್ಕೋಡಿ ಜಿಲ್ಲೆಗಳನ್ನು ರಚಿಸುವ ಕುರಿತಂತೆ ಚರ್ಚೆ ನಡೆದಿದೆ ಎನ್ನಲಾಗಿದ್ದು, ಸಾರ್ವಜನಿಕರಿಗೆ …

Read More »

ಬೆಂಗಳೂರಲ್ಲಿಂದು ರೈತರ ರಣಕಹಳೆ

ಬೆಂಗಳೂರು: ದೆಹಲಿ ರೈತ ನಾಯಕರ ನೇತೃತ್ವದಲ್ಲಿ ಇಂದು ವಿಧಾನಸೌಧ ಚಲೋ ಹಮ್ಮಿಕೊಳ್ಳಲಾಗಿದೆ. ಭಾರತೀಯ ನಾಯಕರಾದ ರಾಕೇಶ್ ಟಿಕಾಯತ್, ಡಾ. ದರ್ಶನ್ ಪಾಲ್, ಯುದ್ಧವೀರ ಸಿಂಗ್ ಭಾಗಿಯಾಗಲಿದ್ದಾರೆ. ಸಂಯುಕ್ತ ಹೋರಾಟ ಕರ್ನಾಟಕ ಸಂಘಟನೆ ನೇತೃತ್ವದಲ್ಲಿ ಹೋರಾಟ ನಡೆಯಲಿದೆ. ದೆಹಲಿಯಲ್ಲಿ 100 ಕ್ಕೂ ಅಧಿಕ ದಿನಗಳಿಂದ ಹೋರಾಟ ನಡೆಸಲಾಗುತ್ತಿದೆ. ಕೇಂದ್ರದ ಕೃಷಿ ತಿದ್ದುಪಡಿ ಕಾಯ್ದೆಗಳನ್ನು ವಿರೋಧಿಸಿ ನಡೆಯುತ್ತಿರುವ ಹೋರಾಟ ಮಾರ್ಚ್ 26 ರಂದು 4 ತಿಂಗಳು ಪೂರೈಸಲಿದೆ. ಈ ಹಿನ್ನೆಲೆಯಲ್ಲಿ ರೈತ ನಾಯಕರು …

Read More »

ಸಿ.ಟಿ.ರವಿ, ನಟ ಶಿವಣ್ಣ ಹಾಗೂ ಲಲಿತಾ ನಾಯಕ್ ಹತ್ಯೆ ಮಾಡುವುದಾಗಿ ಬೆದರಿಕೆ ಪತ್ರ..!

ಬೆಂಗಳೂರು,ಮಾ.21- ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ, ಹ್ಯಾಟ್ರಿಕ್ ಹೀರೋ ಶಿವರಾಜ್‍ಕುಮಾರ್ ಹಾಗೂ ನನ್ನನ್ನೂ ಸೇರಿದಂತೆ ಪ್ರಮುಖರನ್ನು ಹತ್ಯೆ ಮಾಡುವ ಬೆದರಿಕೆ ಪತ್ರ ಬಂದಿದೆ ಎಂದು ಮಾಜಿ ಸಚಿವೆ ಬಿ.ಟಿ.ಲಲಿತಾ ನಾಯಕ್ ಹೇಳಿದ್ದಾರೆ. ಮೈಸೂರು ರಸ್ತೆಯಲ್ಲಿರುವ ಪೂರ್ಣಿಮಾ ಪ್ಯಾಲೇಸ್‍ನಲ್ಲಿ ಮಾಜಿ ಸಚಿವ ರೇವಣ್ಣ ಅವರು ಸಾರ್ವಜನಿಕ ಜೀವನದಲ್ಲಿ 40 ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಪ್ರತಿಷ್ಠಾನ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಮೇ 1ರಂದು ಪ್ರಮುಖರನ್ನು ಕೊಲೆ ಮಾಡುವ ಪತ್ರ ಬಂದಿದೆ. …

Read More »

ತಿಂಗಳೊಳಗೆ ಸಿದ್ದರಾಮಯ್ಯ ಕಾಂಗ್ರೆಸ್ ಗೆ ಗುಡ್ ಬೈ..? : ನಳಿನ್‌ ಕುಮಾರ್ ಕಟೀಲ್‌

ಬೆಂಗಳೂರು, ಮಾ.21. ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಒಂದು ತಿಂಗಳಲ್ಲೇ ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡಲಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್ ಕಟೀಲ್‌ ಭವಿಷ್ಯ ನುಡಿದರು. ಬಿಜೆಪಿ ಪಕ್ಷದ ಕಾರ್ಯಕರ್ತರ ಸಮಾವೇಶದಲ್ಲಿ ಮಾತನಾಡಿದ ಅವರು, ಬಿಜೆಪಿ ಗೆಲ್ಲುವ ಪಕ್ಷವಾಗಿದ್ದು, ಕಾಂಗ್ರೆಸ್‌ ಸೋಲಿನ ಪಕ್ಷವಾಗಿದೆ. ಕಾಂಗ್ರೆಸ್‌ ಒಳಜಗಳದ ಮಿತಿಮೀರಿದ್ದು, ಎಲ್ಲಿಯೂ ನಿಲ್ಲದ ಸಿದ್ದರಾಮಯ್ಯ ಅವರು ಈ ಹಿಂದೆ ಗುರುವಿಗೆ ತಿರುಮಂತ್ರ ಹಾಕಿ ಜೆಡಿಎಸ್‌ ಗೆ ಗುಡ್ ಬೈ ಹೇಳಿ ಕಾಂಗ್ರೆಸ್‌ …

Read More »

ನಿನಗೆ ತಾಕತ್ತಿದ್ದರೆ ಸಿಎಂ ಬದಲಾವಣೆ ಮಾಡಿ ತೋರಿಸು: ಯತ್ನಾಳ್‍ಗೆ ರೇಣುಕಾಚಾರ್ಯ ಸವಾಲ್

ದಾವಣಗೆರೆ: ನಿನಗೆ ಸವಾಲು​ ಹಾಕ್ತೀನಿ.. ತಾಕತ್ತಿದ್ದರೆ ಮುಖ್ಯಮಂತ್ರಿಗಳನ್ನ ಬದಲಾವಣೆ ಮಾಡಿ ನೋಡು ಅಂತ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎಂ.ಪಿ ರೇಣುಕಾಚಾರ್ಯ ಶಾಸಕ ಬಸನಗೌಡ ಪಾಟೀಲ್ ಯತ್ನಾಳೆಗೆ ಸವಾಲೆಸೆದಿದ್ದಾರೆ. ಪಂಚರಾಜ್ಯಗಳ ಚುನಾವಣೆಯ ನಂತರ ನೂರಕ್ಕೆ ನೂರರಷ್ಟು ಸಿಎಂ ಬದಲಾವಣೆ ಖಚಿತ ಎಂದು ಯತ್ನಾಳ್ ಹೇಳಿಕೆ ನೀಡಿದ್ದರು. ಈ ಹಿನ್ನೆಲೆ ರೇಣುಕಾಚಾರ್ಯ ಏಕವಚನದಲ್ಲೇ​​ ಯತ್ನಾಳ್​ ವಿರುದ್ಧ ಕಿಡಿಕಾರಿದ್ದಾರೆ. ​ರಾಜ್ಯದಲ್ಲಿ ಬಿಜೆಪಿಯನ್ನ ಕಟ್ಟಿ ಬೆಳೆಸಿದ್ದು ಯಡಿಯೂರಪ್ಪ, ಅನಂತಕುಮಾರ್​. ಯಡಿಯೂರಪ್ಪನವರನ್ನ ಮುಖ್ಯಮಂತ್ರಿಯನ್ನಾಗಿ ಮಾಡಿದ್ದು, ಪ್ರಧಾನಮಂತ್ರಿ ನರೇಂದ್ರಮೋದಿ …

Read More »

ಖತರ್ನಾಕ್ ಕಳ್ಳರ ಬಂಧನ; ₹6 ಲಕ್ಷ ಮೌಲ್ಯದ 12 ಬೈಕ್​ ವಶ

ಮೈಸೂರು: ನಗರದ ನರಸಿಂಹರಾಜ ಠಾಣಾ ಪೊಲೀಸರು ಕಾರ್ಯಾಚರಣೆ ನಡೆಸಿ ಇಬ್ಬರು ದ್ವಿಚಕ್ರ ವಾಹನ ಕಳ್ಳರನ್ನು ಬಂಧಿಸಿದ್ದಾರೆ. ಫಯಾಜ್​ ಅಹಮ್ಮದ್​ ಹಾಗೂ ಮೊಕ್ತಾರ್​​ ಪಾಷಾ ಬಂಧಿತ ಆರೋಪಿಗಳು. ಈ ಹಿಂದೆ ಹಲವು ಪ್ರಕರಣಗಳಲ್ಲಿ ಭಾಗಿಯಾಗಿದ್ದ ಆರೋಪಿಗಳು ನಕಲಿ ಕೀ ಬಳಸಿ ಬೈಕ್​ಗಳನ್ನ ಕಳ್ಳತನ ಮಾಡುತ್ತಿದ್ದರು. ಬೈಕ್​ ಕಳುವಾಗಿರುವ ಸಂಬಂಧ ಪೊಲೀಸ್​ ಠಾಣೆಯಲ್ಲಿ ದೂರುಗಳು ದಾಖಲಾಗಿದ್ದವು. ಕದ್ದ ಬೈಕ್​ಗಳನ್ನ ಮಾರಾಟ ಮಾಡಲು ಮುಂದಾದ ಆರೋಪಿಗಳು ಪೊಲೀಸರಿಗೆ ಸಿಕ್ಕಿಬಿದ್ದಿದ್ದಾರೆ. ಬಂಧಿತ ಆರೋಪಿಗಳಿಂದ ಪೊಲೀಸರು, 6 …

Read More »

ಬೆಳಗಾವಿಯಲ್ಲಿ CRPF ಯೋಧನ ಸಾವು

ಬೆಳಗಾವಿ: ಕೋಬ್ರಾ ಬಟಾಲಿಯನ್​ನಲ್ಲಿ ಕಾರ್ಯನಿರ್ವಹಿಸುತ್ತಿದ್ದ ಸಿಆರ್​ಪಿಎಫ್​ನ ವೀರ ಯೋಧ ಮೌಲಾಹುಸೇನ್​ ಕಲೇಬಾಯಿ(40) ಅನಾರೋಗ್ಯದ ಕಾರಣ ಸಾವನ್ನಪ್ಪಿದ್ದಾರೆ. ಮೂಲತಃ ಗದಗ ತಾಲೂಕಿನ ಹೊಂಬಳ ಗ್ರಾಮದವರಾದ ಯೋಧ ಬೆಳಗಾವಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದರು. ಅನಾರೋಗ್ಯದಿಂದ ಬಳಲುತ್ತಿದ್ದ ಯೋಧ ನಿನ್ನೆ ಸೇನಾ ಆಸ್ಪತ್ರೆಯಲ್ಲೇ ಸಾವನ್ನಪ್ಪಿದ್ದಾರೆ. ತಾಯಿ, ಪತ್ನಿ, ಇಬ್ಬರು ಹೆಣ್ಣು ಮಕ್ಕಳು ಹಾಗೂ ಒಂದು ಗಂಡು ಮಗುವನ್ನ ಅಗಲಿದ್ದಾರೆ. ಇಂದೇ ಹೊಂಬಳ ಗ್ರಾಮದಲ್ಲಿ ಅಂತ್ಯಕ್ರಿಯೆ ನಡೆಸಲಾಗುತ್ತಿದೆ.

Read More »

ಕಳೆದುಕೊಂಡ ಮೊಬೈಲ್​ಗಳನ್ನ ಹಿಂದಿರುಗಿಸಿದ ಪೊಲೀಸರು

ಹುಬ್ಬಳ್ಳಿ:ಇತ್ತೀಚೆಗೆ ಮೊಬೈಲ್ ಕಳೆದು ಹೋಯಿತು ಎಂದರೆ ಅದನ್ನು ಮರೆತು ಬಿಡುವುದೇ ವಾಸಿ ಎನ್ನುವಂತಾಗಿದೆ. ಆದರೆ ಅವಳಿ ನಗರದ ಖಾಕಿ ಪಡೆ ಅದಕ್ಕೆ ಅಪವಾದ ಎಂಬಂತೆ ಕೆಲಸ ಮಾಡಿದೆ. ಸಾರ್ವಜನಿಕರಿಗೆ ಉತ್ತಮ ರಕ್ಷಣೆ ನೀಡಿ ಪೊಲೀಸ್ ಸೇವೆ ನೀಡುವ ಮೂಲಕ ಸಾಕಷ್ಟು ಜನಮನ್ನಣೆಗಳಿಸಿರುವ ಹುಬ್ಬಳ್ಳಿ- ಧಾರವಾಡ ಮಹಾನಗರ ಪೊಲೀಸ್ ಕಮೀಷನರೇಟ್ ಈಗ ಮತ್ತೊಂದು ಮಹತ್ವದ ಕಾರ್ಯವನ್ನು ಮಾಡಿದೆ. ಹುಬ್ಬಳ್ಳಿ-ಧಾರವಾಡ ನಗರದಲ್ಲಿ ಸಾರ್ವಜನಿಕರು ಕಳೆದುಕೂಂಡ ಮೊಬೈಲ್​ಗಳನ್ನು ಪತ್ತೆ ಮಾಡಲು ಕಾನೂನು ಮತ್ತು ಸುವ್ಯವಸ್ಥೆ …

Read More »

ಪ್ರತಿಭಾನ್ವಿತ ಕ್ರೀಡಾಪಟುಗಳಾಗಿದ್ದವರಿಗೆ ಇನ್ಮುಂದೆ ಪೊಲೀಸ್ ನೇಮಕಾತಿಯಲ್ಲಿ ಕೋಟಾ.!

ಬೆಂಗಳೂರು:ಹೌದು ರಾಜ್ಯ ಸರಕಾರವು ಕರ್ನಾಟಕದ ಪ್ರತಿಭಾನ್ವಿತ ಕ್ರೀಡಾಪಟುಗಳಿಗೆ ಪೊಲೀಸ್ ಪಡೆ ನೇಮಕಾತಿಯಲ್ಲಿ ಶೇಕಡಾ ಎರಡು ಕೋಟಾ ನೀಡಲಾಗುವುದು ಎಂದು ಅಂತಿಮ ಅಧಿಸೂಚನೆ ಹೊರಡಿಸಲಾಗಿದೆ. ವಿಶೇಷ ನಿಯಮಗಳನ್ನು ಕಳೆದ ವರ್ಷ ರೂಪಿಸಲಾಯಿತು ಮತ್ತು ಅಂತಿಮವಾಗಿ ಮಾರ್ಚ್ 3 ರಂದು ರಾಜ್ಯ ಗೆಜೆಟ್‌ನಲ್ಲಿ ತಿಳಿಸಲಾಯಿತು. ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಮತ್ತು ಪೊಲೀಸ್ ಮಹಾನಿರ್ದೇಶಕ ಪ್ರವೀಣ್ ಸೂದ್ ಅವರಿಗೆ ಕೃತಜ್ಞತೆ ಸಲ್ಲಿಸುತ್ತಾ, ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ (ಕೆಎಸ್‌ಆರ್‌ಪಿ) ಅಲೋಕ್ ಕುಮಾರ್ ಅವರು, ‘ಪೊಲೀಸ್ …

Read More »

ಸಿಡಿ ಪ್ರಕರಣವನ್ನು ಬೇರೆ ತನಿಖಾ ಸಂಸ್ಥೆಗೆ ವಹಿಸುವುದಿಲ್ಲ: ಸಚಿವ ಬಸವರಾಜ ಬೊಮ್ಮಾಯಿ

ಧಾರವಾಡ: ಸಿಡಿ ಪ್ರಕರಣದ ತನಿಖೆಯನ್ನು ಎಸ್ ಐ ಟಿ ಸಮರ್ಥವಾಗಿ ನಡೆಸುತ್ತಿದೆ. ಹೀಗಾಗಿ ಈ ಪ್ರಕರಣದ ತನಿಖೆಯನ್ನು ಬೇರೆ ಸಂಸ್ಥೆ ಗೆ‌ ವಹಿಸುವುದಿಲ್ಲ ಎಂದು ಗೃಹ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆ ಸಚಿವರಾದ ಬಸವರಾಜ ಬೊಮ್ಮಾಯಿ ಸ್ಪಷ್ಟಪಡಿಸಿದರು. ಧಾರವಾಡದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಎಸ್ ಐ ಟಿ ಸಿಡಿ ತನಿಖೆಯನ್ನು ನಿಷ್ಪಕ್ಷಪಾತ, ನಿಷ್ಠುರ, ನ್ಯಾಯಸಮ್ಮತವಾಗಿ ನಡೆಸುತ್ತಿದೆ ಎಂದು ಅವರು ಸ್ಪಷ್ಟಪಡಿಸಿದರು. ಹೊರ ರಾಜ್ಯಗಳಲ್ಲಿ ಕೋವಿಡ್ ಹೆಚ್ಚಾಗುತ್ತಿದೆ. ರಾಜ್ಯದಲ್ಲಿ …

Read More »