Home / 2021 (page 8)

Yearly Archives: 2021

ಡಿ. 31 ರ ಬದಲು ಬೇರೆ ದಿನ ಕರ್ನಾಟಕ ಬಂದ್..? ದಿನಾಂಕದಲ್ಲಿ ಬದಲಾವಣೆ ಸಾಧ್ಯತೆ

ಬೆಂಗಳೂರು: ಡಿಸೆಂಬರ್ 31 ರ ಕರ್ನಾಟಕ ಬಂದ್ ದಿನಾಂಕದಲ್ಲಿ ಬದಲಾವಣೆ ಆಗುವ ಸಾಧ್ಯತೆಯಿದೆ. ದಿನಾಂಕವನ್ನು ಬದಲಾವಣೆ ಮಾಡುವಂತೆ ಮನವಿ ಮಾಡಲಾಗುವುದು ಎಂದು ಕರ್ನಾಟಕ ರಕ್ಷಣಾ ವೇದಿಕೆ ಅಧ್ಯಕ್ಷ ಪ್ರವೀಣ್ ಕುಮಾರ್ ಶೆಟ್ಟಿ ಹೇಳಿದ್ದಾರೆ. ಬಂದ್ ಗೆ ಬೆಂಬಲಿಸುವ ಕುರಿತಾಗಿ ನಾಳೆ ತೀರ್ಮಾನ ಕೈಗೊಳ್ಳಲಾಗುವುದು. ನನ್ನ ಅಭಿಪ್ರಾಯವನ್ನು ಪತ್ರದ ಮೂಲಕ ಕನ್ನಡಪರ ಹೋರಾಟಗಾರರಾದ ವಾಟಾಳ್ ನಾಗರಾಜ್ ಮತ್ತು ಸಾ.ರಾ. ಗೋವಿಂದು ಅವರಿಗೆ ಕಳುಹಿಸುತ್ತೇನೆ ಎಂದು ಪ್ರವೀಣ್ ಕುಮಾರ್ ಶೆಟ್ಟಿ ತಿಳಿಸಿದ್ದಾರೆ. ಬಂದ್ ದಿನಾಂಕ …

Read More »

ಶಾಲೆಗೆ ದಿಢೀರ್ ಭೇಟಿ ನೀಡಿದ ಶಾಸಕ : ಗೈರಾದ ಶಿಕ್ಷಕರಿಗೆ ನೋಟಿಸ್

ಕುಷ್ಟಗಿ: ಶಿಕ್ಷಕರು ಸಮಯ ಪಾಲನೆ ಮಾಡದ ಹಿನ್ನೆಲೆಯಲ್ಲಿ ಶಾಸಕ ಅಮರೇಗೌಡ ಪಾಟೀಲ ಬಯ್ಯಾಪೂರ ವಿವಿಧ ಶಾಲೆಗಳಿಗೆ ಭೇಟಿ ನೀಡಿ ಪರಿಶೀಲಿಸಿ ಗೈರಾದ ಶಿಕ್ಷಕರಿಗೆ ನೋಟೀಸ್ ಜಾರಿ ಮಾಡಲು ಕ್ಷೇತ್ರ ಶಿಕ್ಷಣಾಧಿಕಾರಿಗೆ ಸೂಚಿಸಿದರು. ಶಾಸಕ ಅಮರೇಗೌಡ ಪಾಟೀಲ ಬಯ್ಯಾಪೂರ, ಕುಷ್ಟಗಿ ಪಟ್ಟಣದ 3ನೇ ವಾರ್ಡ್ ನ ಗೌರಿ ನಗರ, ನೆರೆಬೆಂಚಿ, ಕುರಬನಾಳ ದಿಢೀರ್ ಭೇಟಿ ನೀಡಿ ಮಕ್ಕಳ ಹಾಜರಿ, ಶಿಕ್ಷಕರ ಹಾಜರಿ ದಾಖಲೆ ಪರಿಶೀಲಿಸಿದರಲ್ಲದೇ ಶಾಲೆಯ ಕುಂಧು ಕೊರತೆಗಳ ಬಗ್ಗೆ ವಿಚಾರಿಸಿದರು. ಗೌರಿ …

Read More »

ಮುಖ್ಯಮಂತ್ರಿ ಬದಲಿಸುತ್ತೇವೆ ಎನ್ನುವವರಿಗೆ ಸಂಪುಟದಿಂದ ಗೇಟ್ ಪಾಸ್.

ರಾಜ್ಯದ ಮುಖ್ಯಮಂತ್ರಿಯನ್ನು ಯಾರು ಬೇಕಾದರೂ ಅವರು, ಯಾರು ಹೇಳಿದರೆ ಅವರಿಂದ, ಯಾವಾಗ ಬೇಡ ಎಂದರೆ ಅವಾಗ ಬದಲಿಸಲು ಇದೇನು ಸಂಗೀತ ಖುರ್ಚಿ ಆಟವೇ…?   ಅಥವಾ ಕರ್ನಾಟಕ, ಉತ್ತರಾಖಂಡದಷ್ಟು ರಾಜಕೀಯವಾಗಿ ಬಲಹೀನವೇ…? ಒಂದೇ ವರ್ಷದ ಒಳಗೆ ಇಬ್ಬರು ಮುಖ್ಯಮಂತ್ರಿಗಳನ್ನು ಬದಲಿಸಿ, ಮೂರನೆಯವರನ್ನು ಪ್ರತಿಷ್ಠಾಪಿಸಿ ನಾಲ್ಕನೆಯವರನ್ನು ಹುಡುಕಿ ಚುನಾವಣೆಗೆ ಹೊರಟರೆ ನೋಡಿ ಆಗ ಈ ರಾಜ್ಯ ರಾಜಕಾರಣದಲ್ಲಿ ಬಿಜೆಪಿಗೆ ಒಂದು ಬೆಲೆ ಬಂದೀತು. ಉತ್ತರಾಖಂಡದಲ್ಲಿ ಹೆಚ್ಚು ಕಡಿಮೆ ಹೀಗೆ ಆಗಿರೋದು. ಆದರೆ …

Read More »

ಇತ್ತ ಬಿಜೆಪಿ ಕೋರ್ ಕಮಿಟಿ ಸಭೆ; ಅತ್ತ ಯಡಿಯೂರಪ್ಪ ದುಬೈ ಪ್ರವಾಸ! ಚರ್ಚೆಗೆ ಗ್ರಾಸ

ಬೆಂಗಳೂರು: ರಾಜ್ಯದಲ್ಲಿ ಬಿಜೆಪಿ ಭದ್ರನೆಲೆ ಕಂಡುಕೊಳ್ಳಲು ಬಿ.ಎಸ್. ಯಡಿಯೂರಪ್ಪ ಅವರ ಛಲಬಲವೇ ಪ್ರಮುಖ ಕಾರಣ ಎಂಬುದು ಅವರ ರಾಜಕೀಯ ವೈರಿಗಳೂ ಗೊತ್ತು. ಹೀಗಿರುವಾಗ ಇತ್ತ ಬಿಜೆಪಿ ಕೋರ್ ಕಮಿಟಿ ಸಭೆ ನಡೆಯುತ್ತಿರುವಾಗ ಅತ್ತ ಮಾಜಿ ಮುಖ್ಯಮಂತ್ರಿ ದುಬೈ ಪ್ರವಾಸದಲ್ಲಿರುವುದು ಚರ್ಚೆಗೆ ಗ್ರಾಸವಾಗಿದೆ.   ಹೌದು. ದುಬೈ ಪ್ರವಾಸಕ್ಕೆ ತೆರಳಿರುವ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಹಾಗೂ ಕುಟುಂಬಸ್ಥರು ಪ್ರಮುಖ ಪ್ರವಾಸಿ ತಾಣಗಳಿಗೆ ತೆರಳಿ ವೀಕ್ಷಣೆ ಮಾಡುತ್ತಿದ್ದಾರೆ. ಪುತ್ರರಾದ ರಾಘವೇಂದ್ರ, ವಿಜಯೇಂದ್ರ ಮತ್ತು ಮೊಮ್ಮಕ್ಕಳ …

Read More »

ಕೊರಗಜ್ಜ ದೇವರ ಗುಡಿ ಮುಂದೆ ಉಪಯೋಗಿಸಿದ ಕಾಂಡೋಮ್​ ಎಸೆದು ವಿಕೃತಿ ಮೆರೆದ ದುಷ್ಕರ್ಮಿಗಳು

ಮಂಗಳೂರು: ಮಾರ್ನಮಿಕಟ್ಟೆಯಲ್ಲಿರುವ ಪ್ರಸಿದ್ಧ ಕೊರಗಜ್ಜ ದೈವದ ಗುಡಿಯ ಮುಂಭಾಗ ಯಾರೋ ಕಿಡಿಗೇಡಿಗಳು ಕಾಂಡೋಮ್​ ಹಾಕಿ ವಿಕೃತಿ ಮೆರೆದಿದ್ದಾರೆ. ಮಂಗಳವಾರ ಬೆಳಗ್ಗೆ ಈ ಕೃತ್ಯ ಬೆಳಕಿಗೆ ಬಂದಿದ್ದು, ಸ್ಥಳೀಯರು ಮತ್ತು ಭಕ್ತರು ದುಷ್ಕರ್ಮಿಗಳನ್ನು ಪತ್ತೆ ಹಚ್ಚಿ ಬಂಧಿಸುವಂತೆ ಆಗ್ರಹಿಸಿದ್ದಾರೆ. ದುಷ್ಕರ್ಮಿಗಳು ಉಯೋಗಿಸಿದ ಕಾಂಡೋಮ್​ ಅನ್ನು ದೇಗುಲದತ್ತ ಎಸೆದಿದ್ದಾರೆ. ಕೆಲ ತಿಂಗಳ ಹಿಂದೆಯೂ ದೇವಸ್ಥಾನ ಅಪವಿತ್ರಗೊಳಿಸುವ, ಕಳವು ಮಾಡುವ ಕೃತ್ಯಗಳೂ ನಡೆದಿದ್ದವು. ಮತ್ತೆ ಅಶ್ಲೀಲ ವಸ್ತು ಎಸೆಯುವ ಮೂಲಕ ಭಕ್ತರ ಭಾವನೆಗೆ ದಕ್ಕೆ ತಂದಿದ್ದಾರೆ. …

Read More »

ಯಾರೂ ಎಲ್ಲಿಯೂ ಯಾರನ್ನೂ ರ‍್ಯಾಗಿಂಗ್​ ಮಾಡುವಂತಿಲ್ಲ.

ಚಿತ್ರದುರ್ಗ: ಯಾರೂ ಎಲ್ಲಿಯೂ ಯಾರನ್ನೂ ರ‍್ಯಾಗಿಂಗ್​ ಮಾಡುವಂತಿಲ್ಲ. ಮಾಡಿದ್ರೆ ಅದು ಶಿಕ್ಷಾರ್ಹ ಅಪರಾಧ ಎಂದು ಪದೇಪದೆ ಜಾಗೃತಿ ಮೂಡಿಸುವ ಕಾರ್ಯ ನಡೆಯುತ್ತಲೇ ಇದೆ. ಆದರೆ, ಸಾಮಾಜಿಕ ಪಿಗುಡು ಮಾತ್ರ ಇನ್ನೂ ಜೀವಂತವಾಗಿದೆ. ಇದೀಗ ಚಿತ್ರದುರ್ಗ ಜಿಲ್ಲೆಯಲ್ಲಿ ರ‍್ಯಾಗಿಂಗ್​ ಕಿರುಕುಳಕ್ಕೆ 17 ವರ್ಷದ ಬಾಲಕಿಯೊಬ್ಬಳು ಬಲಿಯಾಗಿದ್ದಾಳೆ.   ಹೊಸದುರ್ಗ ತಾಲೂಕಿನ ಕೋಡಿಹಳ್ಳಿಹಟ್ಟಿ ಗ್ರಾಮದ ವಿಜಯಕುಮಾರ್ ಎಂಬುವರ ಪುತ್ರಿ ವಿ.ರಾಧಿಕಾ ಮೃತ ದುರ್ದೈವಿ. ಪಿಯುಸಿ ಓದುತ್ತಿದ್ದ ಈಕೆಯನ್ನು ಪಾಣಿಕಿಟ್ಟದಹಳ್ಳಿ ಗ್ರಾಮದ ಮುತ್ತು, ಶೀರೆನಕಟ್ಟೆ ಗ್ರಾಮದ …

Read More »

ಸಿಎಂ ಬದಲಾವಣೆ ಬಿಜೆಪಿ ಆಂತರಿಕವಿಚಾರ: ಬಸವ ಜಯ ಮೃತ್ಯುಂಜಯ ಸ್ವಾಮೀಜಿ

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಬದಲಾಯಿಸುವುದು ಬಿಜೆಪಿಯ ಆಂತರಿಕ ವಿಚಾರವಾಗಿದೆ ಎಂದು ಕೂಡಲ ಸಂಗಮ ಪಂಚಮಸಾಲಿ ಪೀಠದ ಬಸವ ಜಯ ಮೃತ್ಯುಂಜಯ ಸ್ವಾಮೀಜಿ ಹೇಳಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ಎಲ್ಲಿಯವರೆಗೆ ಬೊಮ್ಮಾಯಿಯವರು ಸಿಎಂ ಆಗಿರುತ್ತಾರೋ ಅಲ್ಲಿಯವರೆಗೆ ಬೆಂಬಲ ಇದ್ದೇ ಇರುತ್ತದೆ. 2023ರ ವರೆಗೆ ಅವರೇ ಮುಂದುವರೆಯುತ್ತಾರೆ. ಅಲ್ಲಿಯವರೆಗೂ ನಮ್ಮ ಬೆಂಬಲವಿದೆ. ನಾಯಕತ್ವ ಬದಲಾವಣೆ ಅವರ ಪಕ್ಷದ ಆಂತರಿಕ ವಿಚಾರ. ಅದರ ಬಗ್ಗೆ ಮಾತನಾಡುವುದು ಅಷ್ಟು ಸಮಂಜಸವಲ್ಲ. ಯಡಿಯೂರಪ್ಪನವರು ಪಂಚಮಸಾಲಿ ಮೀಸಲಾತಿ …

Read More »

ಉಡುಪಿ; ಕನ್ನಡ ಶಾಲೆಯಲ್ಲಿ ಮಕ್ಕಳಿದ್ದರೂ ಶಿಕ್ಷಕರಿಲ್ಲ!

ಉಡುಪಿ, ಡಿಸೆಂಬರ್ 28; ಸರ್ಕಾರಿ ಶಾಲೆ ಅದು ಊರಿನ ನೆನಪಿದ ಬುತ್ತಿ. ಜ್ಞಾನ ನೀಡುವ ಅಕ್ಷರ ಧಾಮ. ಸರ್ವ ಧರ್ಮಗಳ ಮಂದಿರ. ಇಂತಹ ಸರ್ಕಾರಿಗಳು ಇಂದು, ವಿದ್ಯಾರ್ಥಿಗಳಿಲ್ಲದೇ ಸೊರಗಿ, ಶಿಕ್ಷರಿಲ್ಲದೇ ಬಾಗಿಲು ಮುಚ್ಚುತ್ತಿವೆ. ಆದರೆ ಬುದ್ಧಿವಂತರ ಜಿಲ್ಲೆಯ ಶಾಲೆಯೊಂದರಲ್ಲಿ ಕನ್ನಡ ಕಲಿಯಬೇಕು ಅಂತ ಬಂದಿರುವ ವಿದ್ಯಾರ್ಥಿಗಳಿದ್ದರೂ, ಖಾಯಂ ಶಿಕ್ಷಕರಿಲ್ಲದೇ ಮುಚ್ಚುವ ಹಂತಕ್ಕೆ ಬಂದಿದೆ. ತಾಯಂದಿರು, ಖಾಯಂ ಶಿಕ್ಷಕರನ್ನು ನೇಮಿಸಿ ಶಾಲೆ ಉಳಿಸಿ ಎನ್ನುವ ಹೋರಾಟಕ್ಕೆ ಮುಂದಾಗಿದ್ದಾರೆ. “ಐಸಿಯುನಲ್ಲಿ ಪೇಶೆಂಟ್ ಇಲ್ಲಾ …

Read More »

25 ವರ್ಷಗಳ ವಿವಾದಕ್ಕೆ ತೆರೆ ಎಳೆದ ಬಸವಧರ್ಮ ಪೀಠ..!

ಬಾಗಲಕೋಟೆ (ಡಿ. 28): 25 ವರ್ಷ ಗಳ ಹಿಂದಿನ ವಚನಗಳ ಅಂಕಿತ ನಾಮ ವಿವಾದಕ್ಕೆ ಬಸವ ಧರ್ಮ ಪೀಠಾಧ್ಯಕ್ಷೆ ಮಾತೆ ಗಂಗಾದೇವಿ (Mate Gangadevi) ಇತಿಶ್ರೀ ಹಾಡಿದ್ದಾರೆ. ಬಾಗಲಕೋಟೆ ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಇನ್ಮುಂದೆ ವಚನಗಳಲ್ಲಿ ಲಿಂಗದೇವ (Lingadeva) ಬದಲಾಗಿ ಕೂಡಲ ಸಂಗಮದೇವ (Kudala Sangamadeva) ವಚನಾಂಕಿತ ಬಳಸಲು ನಿರ್ಧಾರ ಮಾಡಲಾಗಿದೆ ಎಂದು ಸ್ಪಷ್ಟಪಡಿಸಿದ್ದಾರೆ. ಹಲವು ಸ್ವಾಮೀಜಿಗಳ ವಿರೋಧದ ಮಧ್ಯೆ ಈ ವಿವಾದ 25 ವಷ೯ಗಳ ಹಿಂದೆ …

Read More »

ಪೊಲೀಸರೊಂದಿಗೆ ರಂಪಾಟ ನಡೆಸಿದ ಬಿಗ್ ಬಾಸ್ ಖ್ಯಾತಿಯ ದಿವ್ಯಾ ಸುರೇಶ್

ಬೆಂಗಳೂರು: ಎಂ.ಜಿ.ರಸ್ತೆಯಲ್ಲಿ ಓಡಾಡುತ್ತಿದ್ದ ಬಿಗ್ ಬಾಸ್ ಖ್ಯಾತಿಯ ದಿವ್ಯಾ ಸುರೇಶ್ ಅವರಿಗೆ ಮನೆಗೆ ತೆರಳಿ ಎಂದು ಹೇಳಿದ್ದಕ್ಕೆ ಪೊಲೀಸರೊಂದಿಗೆ ರಂಪಾಟ ನಡೆಸಿರುವ ಆರೋಪ ಕೇಳಿಬಂದಿದೆ.‌ ಕರ್ಫ್ಯೂ ಇದೆ ಮನೆಗೆ ಹೋಗಿ ಎಂದಿದ್ದಕ್ಕೆ ಪುಂಡಾಟ ನಡೆಸಿದ್ದಾರೆ ಎಂದು ಹೇಳಲಾಗುತ್ತಿದೆ.‌ ಮತ್ತೊಂದೆಡೆ ಮಾಧ್ಯಮವೊಂದರ ಕ್ಯಾಮೆರಾ ಹೊಡೆದು ಹಾಕುವುದಾಗಿಯೂ ಬೆದರಿಕೆ ಹಾಕಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಲಾಂಗ್ ಡ್ರೈವ್ ಹೊರಟಿದ್ದವನ ಕಾರು ಸೀಜ್ : ನೈಟ್ ಕರ್ಫ್ಯೂ ಇದ್ದರೂ ವ್ಯಕ್ತಿಯೊಬ್ಬ ಚಾಲನೆ ಮಾಡುತ್ತಿದ್ದ ಹುಂಡೈ ಕ್ರೇಟಾ ಕಾರನ್ನು …

Read More »