ಬೆಂಗಳೂರು:ಕರ್ನಾಟಕದ ವೈದ್ಯಕೀಯ ಎಂಜಿನಿಯರಿಂಗ್ ಮತ್ತು ದಂತ ಕಾಲೇಜುಗಳ ಒಕ್ಕೂಟ (COMEDK UGET 2021) ನಡೆಸುವ ಎಂಜಿನಿಯರಿಂಗ್ ಕೋರ್ಸ್‌ಗಳಿಗೆ ಪದವಿಪೂರ್ವ ಪ್ರವೇಶ ಪರೀಕ್ಷೆ ಜೂನ್ 20 ರಂದು ನಡೆಯಲಿದೆ. ಆನ್‌ಲೈನ್ ಮೋಡ್‌ನಲ್ಲಿ 400 ಪರೀಕ್ಷಾ ಕೇಂದ್ರಗಳೊಂದಿಗೆ ರಾಷ್ಟ್ರದಾದ್ಯಂತ 150 ನಗರಗಳಲ್ಲಿ ಪರೀಕ್ಷೆಯನ್ನು ನಡೆಸಲಾಗುವುದು. 2020 ರಲ್ಲಿ ನೋಂದಾಯಿತ 63,000 ರಂತೆ ಈ ವರ್ಷ ಸುಮಾರು 80,000 ನೋಂದಣಿಗಳನ್ನು ಸಂಘಟಕರು ನಿರೀಕ್ಷಿಸಿದ್ದಾರೆ. ಕಳೆದ ವರ್ಷ, ಪ್ರವೇಶ ಪರೀಕ್ಷೆಯನ್ನು ಮೂರು ಬಾರಿ ಮುಂದೂಡಲಾಯಿತು ಮತ್ತು …
Read More »Yearly Archives: 2021
ಪ್ರತಿಭಟನಾನಿರತ ರೈತರಿಗೂ ಲಸಿಕೆ ನೀಡಿ: ರೈತ ಮುಖಂಡ ರಾಕೇಶ್ ಟಿಕಾಯತ್
ನವದೆಹಲಿ: ದೆಹಲಿಯ ಗಡಿಗಳಲ್ಲಿ 111 ದಿನಗಳಿಂದ ಕೃಷಿ ಕಾಯ್ದೆಗಳನ್ನು ವಿರೋಧಿಸಿ ಪ್ರತಿಭಟನೆ ನಡೆಸುತ್ತಿರುವ ರೈತರಿಗೆ ಕೋವಿಡ್ ಲಸಿಕೆ ನೀಡಬೇಕೆಂದು ರೈತ ಮುಖಂಡ ರಾಕೇಶ್ ಟಿಕಾಯತ್ ಗುರುವಾರ ಒತ್ತಾಯಿಸಿದ್ದಾರೆ. ಈ ವಿಚಾರವಾಗಿ ಮಾತನಾಡಿರುವ ಅವರು, ‘ದೇಶದಾದ್ಯಂತ ಕೋವಿಡ್ ಪ್ರಕರಣಗಳ ಸಂಖ್ಯೆಯಲ್ಲಿ ಏರಿಕೆ ಕಂಡುಬರುತ್ತಿದ್ದು, ಪ್ರತಿಭಟನಾ ಸ್ಥಳದಲ್ಲಿಯೇ ಮುನ್ನೆಚ್ಚರಿಕಾ ಕ್ರಮವಾಗಿ ಸಮಾಜಿಕ ಅಂತರ ಹಾಗೂ ಕೊರೊನಾ ಸಂಬಂಧಿ ಮಾರ್ಗಸೂಚಿಗಳನ್ನು ಅನುಸರಿಸುತ್ತಿದ್ದೇವೆ. ಹೋರಾಟದಲ್ಲಿ ಪಾಲ್ಗೊಂಡಿರುವ ರೈತರಿಗೆ ಸರ್ಕಾರವು ಲಸಿಕೆ ನೀಡಬೇಕು. ನಾನು ಕೂಡ ಲಸಿಕೆ …
Read More »ಅಮಾನತುಗೊಂಡ ಪೊಲೀಸ್ ಅಧಿಕಾರಿ ಬಳಿ ಮತ್ತೆರಡು ಲಕ್ಸುರಿ ಕಾರು ಪತ್ತೆ
ಮುಂಬಯಿ: ಅಮಾನತುಗೊಂಡಿರುವ ಮುಂಬಯಿ ಪೊಲೀಸ್ ಅಧಿಕಾರಿ ಸಚಿನ್ ವಾಜೆಗೆ ಸಂಬಂಧಪಟ್ಟ ಇನ್ನೆರಡು ಲಕ್ಸುರಿ ಕಾರುಗಳನ್ನು ರಾಷ್ಟ್ರೀಯ ತನಿಖಾ ದಳ(ಎನ್ ಐಎ) ವಶಪಡಿಸಿಕೊಂಡಿದೆ. ಎನ್ ಐಎ ಮೂಲಗಳ ಪ್ರಕಾರ ಟೊಯೊಟಾ ಲ್ಯಾಂಡ್ ಕ್ರೂಸರ್ ಪ್ರಡೊ ಕಾರು ವಾಜೆ ನಿವಾಸದಲ್ಲಿ ಪತ್ತೆಯಾಗಿದೆ. ಮರ್ಸಡೀಸ್ ಕಾರನ್ನು ಕೂಡ ಸಚಿನ್ ಮನೆಯಿಂದ ವಶಕ್ಕೆ ಪಡೆಯಲಾಗಿದೆ. ಇದುವರೆಗೆ ಒಟ್ಟು ಐದು ಲಕ್ಸುರಿ ಕಾರುಗಳನ್ನು ವಶಕ್ಕೆ ಪಡೆಯಲಾಗಿದೆ. ವಾಜೆ ಜತೆಯಲ್ಲಿ ಕೆಲಸ ಮಾಡುತ್ತಿದ್ದ ಇಬ್ಬರು ಹಿರಿಯ ಪೊಲೀಸ್ ಇನ್ಸ್ …
Read More »ಹೊತ್ತಿ ಉರಿದ ಕ್ಯಾಂಟರ್: ಚಾಲಕ ಸಜೀವ ದಹನ
ಹಾಸನ: ರಸ್ತೆ ಬದಿ ನಿಲ್ಲಿಸಿದ್ದ ಕ್ಯಾಂಟರ್ ವಾಹನ ಹೊತ್ತಿ ಉರಿದ ಪರಿಣಾಮ ಚಾಲಕ ಸಜೀವ ದಹನವಾದ ಘಟನೆ ಹಾಸನ ನಗರದ ಹೊರವಲಯದ ಬಿಟ್ಟಗೌಡನಹಳ್ಳಿಯ ಬೈಪಾಸ್ ರಸ್ತೆಯ ಬಳಿ ನಡೆದಿದೆ. ತಮಿಳುನಾಡು ಮೂಲದ ಜಮೀರ್(40) ವಾಹನದಲ್ಲಿಯೇ ಸಜೀವ ದಹನಗೊಂಡ ಚಾಲಕ. ಈತ ತಮಿಳುನಾಡಿನಿಂದ ತಂದ ಸರಕನ್ನು ನಿಗದಿತ ಸ್ಥಳಕ್ಕೆ ತಲುಪಿಸಿ ನಂತರ ಬಿಟ್ಟಗೌಡನಹಳ್ಳಿ ವೃತ್ತದ ಬೈಪಾಸ್ ರಸ್ತೆ ಬದಿ ನಿಲ್ಲಿಸಿ ವಾಹನದಲ್ಲಿಯೇ ಮಲಗಿದ್ದಾನೆ. ಬೆಳಗಿನ ಜಾವದಲ್ಲಿ ಚಾಲಕನ ಸೀಟು ಬಳಿ ಬೆಂಕಿ …
Read More »Covid-19 Karnataka Updates: ಸತತ ನಾಲ್ಕನೇ ದಿನ ಸಾವಿರ ದಾಟಿದ ಹೊಸ ಪ್ರಕರಣ Covid-19 Karnataka Updates: ಸತತ ನಾಲ್ಕನೇ ದಿನ ಸಾವಿರ ದಾಟಿದ ಹೊಸ ಪ್ರಕರಣ
ಬೆಂಗಳೂರು: ರಾಜ್ಯದಲ್ಲಿ ಸತತ ನಾಲ್ಕನೇ ದಿನ ಹೊಸ ಪ್ರಕರಣಗಳ ಸಂಖ್ಯೆ ಸಾವಿರದ ಗಡಿ ದಾಟಿದೆ. ಶುಕ್ರವಾರ 1,587 ಪ್ರಕರಣಗಳು ದೃಢಪಟ್ಟಿವೆ. ಮೂರುವರೆ ತಿಂಗಳಲ್ಲಿ 24 ಗಂಟೆಗಳ ಅವಧಿಯಲ್ಲಿ ವರದಿಯಾದ ಗರಿಷ್ಠ ಪ್ರಕರಣಗಳು ಇವಾಗಿವೆ. ಈವರೆಗೆ ಸೋಂಕಿತರಾದವರ ಸಂಖ್ಯೆ 9.66 ಲಕ್ಷ ದಾಟಿದೆ. ಹೊಸ ಪ್ರಕರಣಗಳು ಏರುಗತಿ ಪಡೆದ ಕಾರಣ ಸಕ್ರಿಯ ಪ್ರಕರಣಗಳು ಮತ್ತಷ್ಟು ಹೆಚ್ಚಳವಾಗಿದ್ದು, 12,067 ಮಂದಿ ಆಸ್ಪತ್ರೆ ಸೇರಿದಂತೆ ವಿವಿಧೆಡೆ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ. ಅವರಲ್ಲಿ 131 ಮಂದಿ ತೀವ್ರ …
Read More »‘ವಾಟ್ಸಾಪ್’ ಚಾಟ್ ಯುವತಿ ಸಾವಿಗೆ ಕಾರಣವಾಯ್ತು
ಸಾಮಾಜಿಕ ತಾಣಗಳು ಎಷ್ಟು ಅನುಕೂಲವೋ ಅಷ್ಟೇ ಮಾರಕವೆಂಬುದು ಹಲವು ಸಂದರ್ಭಗಳಲ್ಲಿ ಸಾಬೀತಾಗಿದ್ದು, ಇದಕ್ಕೆ ಮತ್ತೊಂದು ಪ್ರಕರಣ ಸೇರ್ಪಡೆಯಾಗಿದೆ. ವಾಟ್ಸಾಪ್ ಮೂಲಕ ಪರಿಚಿತನಾಗಿದ್ದ ಯುವಕನೊಬ್ಬ ತನ್ನನ್ನು ಪ್ರೀತಿಸುವಂತೆ ಯುವತಿಗೆ ಗಂಟು ಬಿದ್ದ ಹಿನ್ನೆಲೆಯಲ್ಲಿ ಬೇಸತ್ತ ಆಕೆ ಪ್ರಾಣವನ್ನೇ ಕಳೆದುಕೊಂಡಿದ್ದಾಳೆ. ಶಿವಮೊಗ್ಗ ಜಿಲ್ಲೆ ಹೊಸನಗರ ತಾಲೂಕಿನ ಕೆಂಚನಾಲ ಕಲ್ಯಾಣಪುರ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ರಿಪ್ಪನ್ ಪೇಟೆ ಪಟ್ಟಣದ ಸರ್ಕಾರಿ ಪದವಿ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಕಾಂ ವ್ಯಾಸಂಗ ಮಾಡುತ್ತಿದ್ದ 19 ವರ್ಷದ …
Read More »ಕೋವಿಡ್ ಪ್ರಕರಣ ಹೆಚ್ಚಳ: ಲಾಕ್ ಡೌನ್ ಒಂದು ಆಯ್ಕೆ: ಉದ್ಧವ್ ಠಾಕ್ರೆ
ನವದೆಹಲಿ: ಒಂದೇ ಸಮನೆ ಹೆಚ್ಚಳವಾಗುತ್ತಿರುವ ಕೋವಿಡ್ 19 ಸೋಂಕು ತಡೆಯಲು ಲಾಕ್ ಡೌನ್ ಒಂದು ಆಯ್ಕೆಯಾಗಿದೆ ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಶುಕ್ರವಾರ(ಮಾರ್ಚ್ 19) ತಿಳಿಸಿದ್ದಾರೆ. ಸುದ್ದಿಗಾರರ ಜತೆ ನಡೆಸಿದ ಸಂವಹನದಲ್ಲಿ ಸುರಕ್ಷತೆಯ ದೃಷ್ಟಿಯಿಂದ ಜನರು ಕೋವಿಡ್ 19 ಮಾರ್ಗಸೂಚಿಯನ್ನು ಪಾಲಿಸುತ್ತಾರೆ ಎಂಬ ನಂಬಿಕೆ ಇದೆ. ಆದರೂ ಲಾಕ್ ಡೌನ್ ಒಂದು ಆಯ್ಕೆಯಾಗಿದೆ ಎಂದು ಹೇಳಿದರು. ಪರಿಸ್ಥಿತಿ ಕೈಮೀರುವ ಹಂತದಲ್ಲಿ ಲಾಕ್ ಡೌನ್ ನಮ್ಮ ಆಯ್ಕೆಯಾಗಿದೆ. ಆದರೆ ರಾಜ್ಯದ …
Read More »ಪರೀಕ್ಷಾ ಪೇ ಚರ್ಚಾ’ಗೆ ಆಯ್ಕೆ: ಆರ್ಡಿ ಶಾಲೆಯ ಅನುಷಾಗೆ ಅಭಿನಂದನೆ ಸಲ್ಲಿಸಿದ ಸುರೇಶ್ ಕುಮಾರ್
ಕುಂದಾಪುರ: ಪ್ರಧಾನಿ ನರೇಂದ್ರ ಮೋದಿ ನಡೆಸಿಕೊಡುವ ‘ಪರೀಕ್ಷಾ ಪೇ ಚರ್ಚಾ’ ಸಂವಾದ ಕಾರ್ಯಕ್ರಮಕ್ಕೆ ಆಯ್ಕೆಯಾದ ಉಡುಪಿ ಜಿಲ್ಲೆಯ ಆರ್ಡಿಯ ಚಾರ್ಮಕ್ಕಿ ನಾರಾಯಣ ಶೆಟ್ಟಿ ಸ್ಮಾರಕ ಸರ್ಕಾರಿ ಪ್ರೌಢಶಾಲೆ ವಿದ್ಯಾರ್ಥಿನಿ ಅನುಷಾಗೆ ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರು ಕರೆ ಮಾಡಿ ಅಭಿನಂದನೆ ಸಲ್ಲಿಸಿದರು. ಅನುಷಾಗೆ ಕರೆ ಮಾಡಿದ ಸಚಿವರು, ಪ್ರಧಾನಿಯವರ ಜೊತೆ ಮಾತನಾಡಲು ನೀನು ಆಯ್ಕೆಯಾಗಿರುವುದು ನಮಗೆ ಖುಷಿಯಾಗಿದೆ. ನೀನು ಶಾಲೆಗೆ ಮತ್ತು ರಾಜ್ಯಕ್ಕೆ ಹೆಮ್ಮೆ ತರಬೇಕು ಎಂದು ಹೇಳಿದರು. …
Read More »ಕೋವಿಡ್; ಚಿತ್ರಮಂದಿರ, ಕಚೇರಿಗಳಲ್ಲಿ ಶೇ.50ರಷ್ಟು ಮಾತ್ರ ಅವಕಾಶ;
ಮುಂಬೈ:ಕೋವಿಡ್ 19 ಸೋಂಕು ಪ್ರಕರಣ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಮಾರ್ಚ್ 31ರವರೆಗೆ ಎಲ್ಲಾ ಚಿತ್ರಮಂದಿರಗಳು, ಆಡಿಟೋರಿಯಂ ಹಾಗೂ ಕಚೇರಿಗಳಲ್ಲಿ ಶೇ.50ರಷ್ಟು ಮಾತ್ರ ಜನಸಂಖ್ಯೆಗೆ ಸೀಮಿತಗೊಳಿಸಿ ಮಹಾರಾಷ್ಟ್ರ ಸರ್ಕಾರ ಶುಕ್ರವಾರ(ಮಾರ್ಚ್ 31) ಆದೇಶ ಹೊರಡಿಸಿದೆ. ಕಳೆದ 24ಗಂಟೆಯಲ್ಲಿ ಮಹಾರಾಷ್ಟ್ರದಲ್ಲಿ 25,833 ಕೋವಿಡ್ 19 ಸೋಂಕು ಪ್ರಕರಣ ವರದಿಯಾಗಿದೆ. ಇದು ಕಳೆದ ವರ್ಷ ಕೋವಿಡ್ ಸೋಂಕು ಆರಂಭವಾದ ನಂತರ ಗರಿಷ್ಠ ಪ್ರಮಾಣದಲ್ಲಿ ಪತ್ತೆಯಾದ ಪ್ರಕರಣವಾಗಿದೆ. ಒಂದು ವೇಳೆ ಮಾಸ್ಕ್ ಧರಿಸದೇ ಎಲ್ಲೆಂದರಲ್ಲಿ ಓಡಾಡುತ್ತಿದ್ದರೆ ಜನರು …
Read More »ವರ್ಕ್ ಫ್ರಮ್ ಹೋಂ ಓಕೆ ..! ಸಂಬಳ ಕಡಿತ ಯಾಕೆ..? : ವರದಿ
ನವ ದೆಹಲಿ : ಕೋವಿಡ್ 19 ಭಾರತದ ಮೇಲೆ ಅತ್ಯಂತ ದೊಡ್ಡ ಪ್ರಮಾಣದಲ್ಲಿ ಪರಿಣಾಮ ಬೀರಿದೆ. ಆರ್ಥಿಕ ಸ್ಥಿತಿ, ಉದ್ಯಮ ಕ್ಷೇತ್ರಗಳ ಮೇಲಂತೂ ಬಾರಿ ಪ್ರಹಾರ ಮಾಡಿರುವುದು ಸುಳ್ಳಲ್ಲ. ಪರಿಸ್ಥಿತಿ ಚೇತರಿಕೆಯಾಗುವತ್ತ ಮುಖ ಮಾಡುತ್ತಿದೆ ಎನ್ನುವಷ್ಟರಲ್ಲೆ ರೂಪಾಂತರಿ ಕೋವಿಡ್ ಮತ್ತೆ ಅಲೆ ಎಬ್ಬಿಸಿದೆ. ಕೇಂದ್ರ ಸರ್ಕಾರ ಲಾಕ್ ಡೌನ್ ಮಾಡುವ ಪರಿಸ್ಥಿತಿ ಇಲ್ಲ ಎಂದು ಹೇಳಿದ್ದರೂ ಕೂಡ ಜನರಲ್ಲಿ ಮತ್ತೆ ಲಾಕ್ ಡೌನ್ ಆಗಬಹುದು ಎಂಬ ಭೀತಿ ಆರಂಭವಾಗಿದೆ. ಕೋವಿಡ್ …
Read More »