ಹೊಸದಿಲ್ಲಿ : ಹದಿನೈದು ವರ್ಷ ಹಳೆಯ ವಾಣಿಜ್ಯ ಮತ್ತು 20 ವರ್ಷ ಹಳೆಯ ವೈಯಕ್ತಿಕ ಬಳಕೆಯ ವಾಹನಗಳನ್ನು ಗುಜರಿಗೆ ಹಾಕಿದರೆ ಹೊಸ ವಾಹನ ಖರೀದಿ ವೇಳೆ ಶೇ. 5ರಷ್ಟು ರಿಯಾಯಿತಿ ಸಿಗಲಿದೆ. ಇದು ಕೇಂದ್ರ ಸರಕಾರದ ಹೊಸ ಗುಜರಿ ನೀತಿಯ ಪ್ರಮುಖ ಅಂಶ. ಗುರುವಾರ ಕೇಂದ್ರ ಹೆದ್ದಾರಿ ಮತ್ತು ರಸ್ತೆ ಸಾರಿಗೆ ಸಚಿವ ನಿತಿನ್ ಗಡ್ಕರಿ ಹೊಸ ಗುಜರಿ ನೀತಿ ಪ್ರಕಟಿಸಿದ್ದಾರೆ. ಗುಜರಿ ನೀತಿಯಂತೆ, 20 ವರ್ಷ ಪೂರೈಸಿದ ವೈಯಕ್ತಿಕ ಬಳಕೆಯ ವಾಹನಗಳು …
Read More »Yearly Archives: 2021
ಶೀಘ್ರದಲ್ಲಿ ಆ ಮಹಾನ್ ನಾಯಕ ಯಾರು ಎಂದು ಗೊತ್ತಾಗಲಿದೆ: S.T.ಸೋಮಶೇಖರ್
ಮೈಸೂರು: ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣದಲ್ಲಿ ಮನೆ ಹಾಳು ಮಾಡಿದ ಮಹಾನ್ ನಾಯಕ ಯಾರು ಎಂದು ತಿಳಿದುಕೊಳ್ಳುವ ಕುತೂಹಲ ರಾಜ್ಯಕ್ಕೆ ಇದೆ. ಅದರಲ್ಲಿ ನಾನು ಸಹಾ ಒಬ್ಬ. ಶೀಘ್ರದಲ್ಲಿ ಆ ಮಹಾನ್ ನಾಯಕ ಯಾರು ಎಂದು ಗೊತ್ತಾಗಲಿದೆ ಎಂದು ಸಚಿವ ಎಸ್.ಟಿ.ಸೋಮಶೇಖರ್ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಕರಣದ ಬಗ್ಗೆ ಎಸ್‌ಐಟಿ ತನಿಖೆ ನಡೆಸುತ್ತಿದೆ. ಆದರೆ ಮಹಾನ್ ನಾಯಕ ಹೇಳಿಕೆ ಬಗ್ಗೆ ಡಿ.ಕೆ. ಶಿವಕುಮಾರ್ ತಮ್ಮನ್ನೇ ಏಕೆ ಮುಟ್ಟಿಕೊಳ್ಳುತ್ತಿದ್ದಾರೆ. ಎಲ್ಲಾ …
Read More »ಸಾಹುಕಾರ್ ಸಿಡಿ ಪ್ರಕರಣ; ಪತ್ರಕರ್ತನ ವಿಡಿಯೋ ಮೂಲ ಪತ್ತೆ ಹಚ್ಚಿದ ಎಸ್‌ಐಟಿ
ಬೆಂಗಳೂರು: ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣದ ಕಿಂಗ್ ಪಿನ್ ಎಂದೇ ಹೇಳಲಾಗುತ್ತಿರುವ ಮಾಜಿ ಪತ್ರಕರ್ತ ನರೇಶ್ ನಿನ್ನೆ ಬಿಡುಗಡೆ ಮಾಡಿದ್ದ ವಿಡಿಯೋ ಹೇಳಿಕೆಯ ಮೂಲ ಇದೀಗ ಪತ್ತೆಯಾಗಿದೆ. ನಿನ್ನೆ ನರೇಶ್, ಸಿಡಿ ಪ್ರಕರಣಕ್ಕೂ ತನಗೂ ಯಾವುದೇ ಸಂಬಂಧವಿಲ್ಲ. ಪ್ರಕರಣದಲ್ಲಿ ಅನಗತ್ಯವಾಗಿ ನನ್ನನ್ನು ಸಿಲುಕಿಸುವ ಯತ್ನ ನಡೆದಿದೆ ಎಂದು 8 ನಿಮಿಷಗಳ ವಿಡಿಯೋ ಬಿಡುಗಡೆ ಮಾಡಿದ್ದರು. ಅಲ್ಲದೇ ರಮೇಶ್ ಜಾರಕಿಹೊಳಿ ಮಾಡಬಾರದ ತಪ್ಪು ಮಾಡಿದ್ದಾರೆ. ಯುವತಿಗೆ ಅನ್ಯಾಯವಾಗಿದೆ ಎಂದು ಆರೋಪಿಸಿದ್ದರು. ಇದೀಗ …
Read More »ಫೋನೂ ಇಲ್ಲ, ಮೆಸೇಜ್ ಇಲ್ಲ! ಎಲ್ಲಿರುವೆ?: S.I.T…
ಬೆಂಗಳೂರು: ಫೋನೂ ಇಲ್ಲ; ಮೆಸೇಜ್ ಇಲ್ಲ! ಎಲ್ಲಿರುವೆ? ಎಂಬಂತಾಗಿದೆ ರಾಜ್ಯ ಪೊಲೀಸರ ಅಸಹಾಯಕತೆ. ಏಕೆಂದರೆ ರಾಜ್ಯ ರಾಜಕೀಯದಲ್ಲಿ ಬಿರುಗಾಳಿ ಎಬ್ಬಿಸಿರುವ ಮಾಜಿ ಸಚಿವರೊಬ್ಬರ ಲೈಂಗಿಕ ಸಿಡಿ ಪ್ರಕರಣದಲ್ಲಿ ಪ್ರಧಾನ ಪಾತ್ರಧಾರಿ ಎನ್ನಲಾಗಿರುವ ಯುವತಿಯ ಬೆನ್ನು ಹತ್ತಿದ ಎಸ್‌ಐಟಿ ಹೈರಾಣಗೊಂಡಿದೆ.. ನೋಟಿಸ್ ಮೇಲೆ ನೋಟಿಸ್ ನೀಡುತ್ತಲೇ ಆ ಕಡೆಯಿಂದ ಮಾತ್ರ ಫೋನೂ ಇಲ್ಲ; ಮೆಸೇಜ್ ಇಲ್ಲ- ಈ ಮೈಲ್ ಸಹ ಇಲ್ಲ! ಹಾಗಾಗಿ ಎಸ್‌ಐಟಿ ಪೊಲೀಸರು ಎಲ್ಲಿರುವೆ? ಎಂದು ಕುಂತ್ರೂ ನಿಂತ್ರೂ …
Read More »ವಿಧಾನಸಭೆ ಉಪ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಪ್ರಕಟ!
ಬೆಂಗಳೂರು, ಮಾ. 18: ತೀವ್ರ ಕುತೂಹಲ ಮೂಡಿಸಿರುವ ಉಪ ಚುನಾವಣೆಗೆ ಕಾಂಗ್ರೆಸ್ ಪಕ್ಷ ತನ್ನ ಅಭ್ಯರ್ಥಿಗಳನ್ನು ಘೊಷಣೆ ಮಾಡಿದೆ. ಬೆಳಗಾವಿ ಲೋಕಸಭೆ ಹಾಗೂ ಮಸ್ಕಿ ಮತ್ತು ಬಸವಕಲ್ಯಾಣ ವಿಧಾನಸಭಾ ಕ್ಷೇತ್ರಗಳಿಗೆ ಕೇಂದ್ರ ಚುನಾವಣಾ ಆಯೋಗ ಚುನಾವಣೆ ಘೊಷಣೆ ಮಾಡಿದೆ. ಚುನಾವಣೆ ಘೊಷಣೆ ಆಗುತ್ತಿದ್ದಂತೆಯೆ ಎಲ್ಲರಿಗಿಂತ ಮೊದಲು ಕಾಂಗ್ರೆಸ್ ತನ್ನ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದೆ. ವಿಜಯಪುರ ಜಿಲ್ಲೆ ಸಿಂದಗಿ ಕ್ಷೇತ್ರಕ್ಕೆ ದಿ. ಮಾಜಿ ಸಚಿವ ಎಂ.ಸಿ. ಮನಗೂಳಿ ಅವರ ಪುತ್ರ …
Read More »ಸಚಿವರ ಮನೆ ಮುಂದೆ ಇಂದು ಮಾರಾಮಾರಿ
ಬೆಂಗಳೂರು: ಸದಾಶಿವನಗರದಲ್ಲಿ ಸಚಿವರೊಬ್ಬರ ಮನೆ ಮುಂದೆ ಇಂದು ಮಾರಾಮಾರಿ ನಡೆದಿದ್ದು, ವಿಡಿಯೋ ವೈರಲ್ ಆಗಿದೆ. ಆರೋಗ್ಯ ಮತ್ತು ವೈದ್ಯಕೀಯ ಸಚಿವ ಡಾ.ಕೆ. ಸುಧಾಕರ್ರ ನಿವಾಸದ ಬಳಿ ಶುಕ್ರವಾರ ಬೆಳಗ್ಗೆ ಸಿಬ್ಬಂದಿಗಳ ನಡುವೆ ಗಲಾಟೆ ಆಗಿದೆ. ಸಚಿವರ ಗನ್ಮಾನ್ ತಿಮ್ಮಯ್ಯರಿಂದ ಸೋಮಶೇಖರ್ ಮೇಲೆ ಹಲ್ಲೆ ನಡೆದಿದೆ. ಸೋಮಶೇಖರ್ ಸಚಿವರ ಮನೆಯ ಖಾಸಗಿ ಡ್ರೈವರ್. ಇವರಿಬ್ಬರು ಮನೆ ಮುಂದೆ ಉರುಳಾಡಿಕೊಂಡು, ಅಂಗಿ ಕಿತ್ತು ಬರುವಂತೆ ಕಿತ್ತಾಡಿಕೊಂಡಿದ್ದಾರೆ. ನಿನ್ನೆ ಚಹಾ ಮಾರುತ್ತಿದ್ದ ಅಂಗವಿಕಲನಿಗೆ ತಿಮ್ಮಯ್ಯ …
Read More »“ಕೊರೊನಾವೈರಸ್‌ಗೆ ಲಸಿಕೆ ಉಂಟು, ಬಿಜೆಪಿಯ ಭ್ರಷ್ಟಾಚಾರದ ವೈರಸ್‌ಗೆ ಲಸಿಕೆ ಇಲ್ಲ”
ಬೆಂಗಳೂರು, ಮಾರ್ಚ್ 19: ”ಕರ್ನಾಟಕದಲ್ಲಿ ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗಿಗೆ ನಿಯಂತ್ರಣವೇ ತಪ್ಪಿ ಹೋಗಿದೆ. ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರ ಸೋಂಕು ಹರಡುವಿಕೆಗೆ ಕಡಿವಾಣ ಹಾಕುವುದರಲ್ಲಿ ಸೋತಿದೆ” ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ. ರಾಜ್ಯದಲ್ಲಿ ಪ್ರತಿನಿತ್ಯ ಸೋಂಕಿತ ಪ್ರಕರಣಗಳ ಸಂಖ್ಯೆ ಸಾವಿರದ ಗಡಿ ದಾಟುತ್ತಿದೆ. ನಾಲ್ಕು ತಿಂಗಳಿನಲ್ಲೇ ಮೊದಲ ಬಾರಿಗೆ ರಾಜ್ಯದಲ್ಲಿ 1400ಕ್ಕೂ ಹೆಚ್ಚು ಹೊಸ ಪ್ರಕರಣಗಳು ಪತ್ತೆಯಾಗಿವೆ. ಕಳೆದ 24 ಗಂಟೆಗಳಲ್ಲಿ 1488 …
Read More »ಕೋವಿಡ್ ನಿಯಂತ್ರಣದ ಹೆಸರಿನಲ್ಲಿ ಭ್ರಷ್ಟಾಚಾರ: ಸಿದ್ದರಾಮಯ್ಯ
ಬೆಂಗಳೂರು: ಕೋವಿಡ್ ನಿಯಂತ್ರಣ ಹೆಸರಿನಲ್ಲಿ ಭ್ರಷ್ಟಾಚಾರ ನಡೆಯುತ್ತಿದೆ ಎಂದು ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ಗಂಭೀರ ಆರೋಪ ಮಾಡಿದ್ದಾರೆ. ಈ ಕುರಿತು ಸರಣಿ ಟ್ವೀಟ್ ಮಾಡಿರುವ ಅವರು, ‘ಕೊರೊನಾ ನಿಯಂತ್ರಣದ ಹೆಸರಲ್ಲಿ ಭ್ರಷ್ಟಾಚಾರ ನಡೆಯುತ್ತಿದೆ ಎಂಬ ನಮ್ಮ ಆರೋಪಕ್ಕೆ ಸಾಕ್ಷಿ ಹೇಳುವಂತಿದೆ ಮತ್ತೆ ಅವತರಿಸಿ ಕೇಕೆ ಹಾಕುತ್ತಿರುವ ಕೊರೊನಾ ವೈರಸ್. ಮುಖ್ಯಮಂತ್ರಿಯವರೇ, ಕೋವಿಡ್-19 ನಿಯಂತ್ರಣಕ್ಕೆ ಸರ್ಕಾರ ಖರ್ಚು ಮಾಡಿದ್ದರೆ ಮತ್ತೆ ಯಾಕೆ ಕೊರೊನಾ ಸೋಂಕು ಉಲ್ಬಣಗೊಳ್ಳುತ್ತಿದೆ’ ಎಂದು ಪ್ರಶ್ನಿಸಿದ್ದಾರೆ. ‘ಕೊರೊನಾ …
Read More »ಚೇಂಬರ್ ನಲ್ಲೇ ವಿದ್ಯಾರ್ಥಿನಿ ಮೇಲೆ ಅಧ್ಯಾಪಕನಿಂದ ಅತ್ಯಾಚಾರ: ಫೇಲ್ ಮಾಡುವುದಾಗಿ ಬೆದರಿಸಿ ಕೃತ್ಯ
ಹಾವೇರಿ ಜಿಲ್ಲೆ ರಾಣೆಬೆನ್ನೂರು ತಾಲೂಕಿನ ಹನುಮನಮಟ್ಟಿ ಕೃಷಿ ಮಹಾವಿದ್ಯಾಲಯದಲ್ಲಿ ಅಧ್ಯಾಪಕನೊಬ್ಬ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಎಸಗಿದ ಘಟನೆ ಬಗ್ಗೆ ದೂರು ದಾಖಲಾಗಿದೆ. ರಾಣೆಬೆನ್ನೂರು ಗ್ರಾಮಾಂತರ ಠಾಣೆ ಪೊಲೀಸರಿಗೆ ವಿದ್ಯಾರ್ಥಿನಿ ದೂರು ನೀಡಿದ್ದು, ಹನುಮನಮಟ್ಟಿ ಕೃಷಿ ಮಹಾವಿದ್ಯಾಲಯದಲ್ಲಿ ಸಹಾಯಕ ಅಧ್ಯಾಪಕ 2019 ರಿಂದ ನೀನು ನನಗೆ ಇಷ್ಟ, ನನಗೆ ಸಹಕರಿಸಿದರೆ ನನ್ನ ವಿಷಯದ ಪರೀಕ್ಷೆಯಲ್ಲಿ ಪಾಸ್ ಮಾಡುತ್ತೇನೆ. ಇಲ್ಲದಿದ್ದರೆ ಫೇಲ್ ಮಾಡುತ್ತೇನೆ ಎಂದು ಬೆದರಿಸಿ ಚೇಂಬರ್ ನಲ್ಲಿಯೇ ಅತ್ಯಾಚಾರ ಎಸಗಿರುವುದಾಗಿ ವಿದ್ಯಾರ್ಥಿನಿ …
Read More »ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕರಿಗೆ ಗುಡ್ ನ್ಯೂಸ್
ಬೆಂಗಳೂರು: ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರಿಗೆ ಸೇವಾ ಹಿರಿತನದ ಮೇಲೆ ಗೌರವ ಧನ ನಿಗದಿ ಮಾಡುವ ಕುರಿತಾಗಿ ಕ್ರಮಕೈಗೊಳ್ಳಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಕಲ್ಯಾಣ ಸಚಿವೆ ಶಶಿಕಲಾ ಜೊಲ್ಲೆ ಹೇಳಿದ್ದಾರೆ. ಜೆಡಿಎಸ್ ಸದಸ್ಯ ಶ್ರೀಕಂಠೇಗೌಡ ಅವರು ಅಂಗನವಾಡಿ ಕಾರ್ಯಕರ್ತೆಯರ ಹೋರಾಟದ ಬಗ್ಗೆ ಶೂನ್ಯವೇಳೆಯಲ್ಲಿ ಪ್ರಸ್ತಾಪಿಸಿದಾಗ ಸಚಿವರು ಈ ಬಗ್ಗೆ ಮಾಹಿತಿ ನೀಡಿ, ಸೇವಾ ಹಿರಿತನದ ಮೇಲೆ ಗೌರವ ಧನ ನಿಗದಿ ಮಾಡುವ ಪ್ರಸ್ತಾವನೆಯನ್ನು ಆರ್ಥಿಕ ಇಲಾಖೆಯೊಂದಿಗೆ ಸಮಾಲೋಚನೆ …
Read More »