ಹುಬ್ಬಳ್ಳಿ: ಕಂದಾಯ ಸಚಿವ ಆರ್ ಅಶೋಕ್ ಮತ್ತೊಂದು ಗ್ರಾಮ ವಾಸ್ತವ್ಯಕ್ಕೆ ಮುಂದಾಗಿದ್ದಾರೆ. ‘ಜಿಲ್ಲಾಧಿಕಾರಿ ನಡೆ ಹಳ್ಳಿ ಕಡೆ’ ಕಾರ್ಯಕ್ರಮ ಅಂಗವಾಗಿ ಮಾರ್ಚ್ 20ರಂದು ಕಂದಾಯ ಸಚಿವ ಅಶೋಕ್ ಹುಬ್ಬಳ್ಳಿ ತಾಲೂಕಿನ ಛಬ್ಬಿ ಗ್ರಾಮದಲ್ಲಿ ವಾಸ್ತವ್ಯ ಮಾಡಲಿದ್ದಾರೆ ಎಂದು ಧಾರವಾಡ ಜಿಲ್ಲಾಧಿಕಾರಿ ನಿತೇಶ್ ಪಾಟೀಲ್ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ. Grama Vastavya ಜಿಲ್ಲಾಧಿಕಾರಿ ನಡೆ ಹಳ್ಳಿ ಕಡೆ: ಮೆರವಣಿಗೆ ಮುಖಾಂತರ ಕಂದಾಯ ಸಚಿವ ಅರ್. ಅಶೋಕ ಅವರಿಗೆ ಸ್ವಾಗತ ಮಾಡಿಕೊಳ್ಳಲು ಸಿದ್ದತೆ ನಡೆದಿದೆ. …
Read More »Yearly Archives: 2021
‘ರಮೇಶ್ CD ಮಾಹಿತಿ ಕೊಟ್ಟಿದ್ದು ನಾನು; ಮಹಾನಾಯಕ ಯಾರೆಂದು ಗೊತ್ತು’ ?
ಬೆಂಗಳೂರು: ರಮೇಶ್ ಜಾರಕಿಹೊಳಿ ಅಶ್ಲೀ ಸಿ.ಡಿ ಪ್ರಕರಣದ ಬಗ್ಗೆ ಮೊದಲು ಮಾಹಿತಿ ಕೊಟ್ಟಿದ್ದೇ ನಾನು. ಈ ಪ್ರಕರಣ ಐದು ಕೋಟಿ ರೂ.ಗೆ ಡೀಲ್ ಆಗಿದೆ. ನರೇಶ್ ಗೌಡ ಭಾಗಿಯಾಗಿದ್ದಾನೆ ಎಂದು ಹೆಸರು ಹೇಳಿದ್ದೇ ನಾನು ಎಂದು ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಹೇಳಿದ್ದಾರೆ. ನಗರದ ಜೆಪಿ ಭವನದಲ್ಲಿ ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿದ ಕುಮಾರಸ್ವಾಮಿ(HD Kumaraswamy), ಸಿ.ಡಿ ಪ್ರಕರಣದಲ್ಲಿ ಕೈವಾಡವಿರುವ ಮಹಾನ್ ನಾಯಕ ಯಾರು ಎಂಬುದರ ಬಗ್ಗೆ ನನಗೆ ಮಾಹಿತಿ …
Read More »ಸಿಡಿ ಸ್ಫೋಟ ಹಿಂದಿನ ಸತ್ಯಾಂಶ,,?ದೊಡ್ಡ ರಾಜಕಾರಣಿಗಳ ನೆರಳು ಇರುವುದು ಕಾಣುತ್ತಿದೆ?.
ಬೆಂಗಳೂರು, ಮಾರ್ಚ್ 18: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಸ್ಫೋಟ ಪ್ರಕರಣ ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿದೆ. ಸಿಡಿ ಸ್ಫೋಟ ಹಿಂದಿನ ಸತ್ಯಾಂಶ ಕುರಿತು ವಿಶೇಷ ತನಿಖಾ ತಂಡ ಸಾಂದರ್ಭಿಕ ಸಾಕ್ಷ್ಯಾಧಾರಗಳನ್ನು ಕಲೆ ಹಾಕುವಲ್ಲಿ ಯಶಸ್ವಿಯಾಗಿದೆ. ಎರಡು ರಾಜಕೀಯ ಪಕ್ಷಗಳ ನಡುವಿನ ಸಮರವೂ ಮುಂದುವರೆದಿದೆ. ಇದರ ಬೆನ್ನಲ್ಲೇ ಈ ಪ್ರಕರಣದಲ್ಲಿ ತಳಕು ಹಾಕಿಕೊಂಡಿರುವ ಇಬ್ಬರು ವ್ಯಕ್ತಿಗಳು ವಿಡಿಯೋ ಬಿಡುಗಡೆ ಮಾಡುವ ಮೂಲಕ ಹೊಸ ಟ್ವಿಸ್ಟ್ ಕೊಟ್ಟಿದ್ದಾರೆ. ಯಾರು ಸತ್ಯ ? …
Read More »ಆರು ಸಚಿವರು ಹೈಕೋರ್ಟ್ ಮೊರೆ ಹೋಗಿರುವುದನ್ನು ವಿಧಾನಸಭೆಯಲ್ಲಿ ಪ್ರಸ್ತಾವಿಸಲು ಕಾಂಗ್ರೆಸ್ ಮುಂದಾಗಿದೆ.
ಬೆಂಗಳೂರು : ರಾಜ್ಯ ರಾಜಕೀಯದಲ್ಲಿ ಸಂಚಲನ ಮೂಡಿಸಿರುವ ಸಿ.ಡಿ. ಪ್ರಕರಣ ಹಾಗೂ ಆರು ಸಚಿವರು ಹೈಕೋರ್ಟ್ ಮೊರೆ ಹೋಗಿರುವುದನ್ನು ವಿಧಾನಸಭೆಯಲ್ಲಿ ಪ್ರಸ್ತಾವಿಸಲು ಕಾಂಗ್ರೆಸ್ ಮುಂದಾಗಿದೆ. ಪ್ರಶ್ನೋತ್ತರ ಹಾಗೂ ಶೂನ್ಯ ವೇಳೆ ತರುವಾಯ ಈ ವಿಷಯದಲ್ಲಿ ನಿಲುವಳಿ ಸೂಚನೆ ಮಂಡಿಸಲು ಅವಕಾಶ ಕೋರಿ ವಿಧಾನಸಭೆ ಕಾರ್ಯದರ್ಶಿಯವರಿಗೆ ವಿಪಕ್ಷ ನಾಯಕ ಸಿದ್ದರಾಮಯ್ಯ ಪತ್ರ ನೀಡಿದ್ದಾರೆ. ರಮೇಶ್ ಜಾರಕಿಹೊಳಿ ಅವರ ಲೈಂಗಿಕ ಸಿ.ಡಿ. ಪ್ರಕರಣ ಹಾಗೂ ಇಂಥದ್ದೇ ಭೀತಿಯಿಂದ ಆರು ಮಂದಿ ಸಚಿವರು ಕೋರ್ಟಿಗೆ …
Read More »ವಿಜಯಪುರದಲ್ಲೂ ಕೋವಿಡ್ ಎರಡನೇ ಅಲೆ ಸ್ಫೋಟ; ಆತಂಕ
ವಿಜಯಪುರ: ಜಿಲ್ಲೆಯಲ್ಲಿ ಕೋವಿಡ್ -19 ಎರಡನೇ ಅಲೆ ಪ್ರಾರಂಭವಾಗಿರುವ ಲಕ್ಷಣಗಳು ಕಂಡು ಬಂದಿದೆ. ಗುರುವಾರ ಒಂದೇ ದಿನ 46 ಕೋವಿಡ್ ಪಾಸಿಟಿವ್ ಪ್ರಕರಣಗಳು ವರದಿಯಾಗಿರುವುದು ತೀವ್ರ ಆತಂಕಕ್ಕೆ ಕಾರಣವಾಗಿದೆ. ಜಿಲ್ಲೆಯಲ್ಲಿ ಇದುವರೆಗೆ 14,719 ಜನರಲ್ಲಿ ಕೋವಿಡ್ ಪಾಸಿಟಿವ್ ಪ್ರಕರಣಗಳು ವರದಿಯಾಗಿದ್ದು, 14,403 ಜನ ಗುಣಮುಖವಾಗಿದ್ದಾರೆ. 206 ಜನ ಕೋವಿಡ್‌ನಿಂದ ಸಾವಿಗೀಡಾಗಿದ್ದಾರೆ. ಸದ್ಯ 110 ಸಕ್ರಿಯ ಪ್ರಕರಣಗಳು ಇವೆ. ಕಳೆದ ನಾಲ್ಕೈದು ತಿಂಗಳಿಂದ ಈಚೆಗೆ ಇಷ್ಟೊಂದು ದೊಡ್ಡ ಸಂಖ್ಯೆಯಲ್ಲಿ ಪಾಸಿಟಿವ್ ಪ‍್ರಕರಣಗಳು …
Read More »ಪತ್ತೆಯಾಗದ ಸೋಂಕಿತರ ಸಂಪರ್ಕಿತರು; ಆರೋಗ್ಯ ಸಿಬ್ಬಂದಿಗೆ ಸವಾಲಾದ ಇಲಾಖೆ ಗುರಿ
ಬೆಂಗಳೂರು: ಪ್ರತಿಯೊಬ್ಬ ಕೋವಿಡ್ ಸೋಂಕಿತ ವ್ಯಕ್ತಿಯ ಜತೆ 20 ಮಂದಿ ನೇರ ಮತ್ತು ಪರೋಕ್ಷ ಸಂಪರ್ಕಿತರನ್ನು ಪತ್ತೆ ಮಾಡಲು ಸಾಧ್ಯವಾಗದೇ ಆರೋಗ್ಯ ಇಲಾಖೆ ಇಕ್ಕಟ್ಟಿಗೆ ಸಿಲುಕಿದೆ. ಕೋವಿಡ್ ತಾಂತ್ರಿಕ ಸಲಹಾ ಸಮಿತಿ 20 ಮಂದಿ ನೇರ ಮತ್ತು ಪರೋಕ್ಷ ಸಂಪರ್ಕಿತರನ್ನು ಪತ್ತೆ ಮಾಡುವ ಗುರಿಯನ್ನು ನಿಗದಿ ಮಾಡಿತ್ತು. ಆದರೆ, ಆರೋಗ್ಯ ಸಿಬ್ಬಂದಿಗೆ ಸೋಂಕಿತರ ಪ್ರಯಾಣದ ಇತಿಹಾಸ ಹಾಗೂ ಸಂಪರ್ಕದ ಜಾಡನ್ನು ಭೇದಿಸಲು ಸಾಧ್ಯವಾಗುತ್ತಿಲ್ಲ. ಇದರಿಂದಾಗಿ ಸದ್ಯ ಪ್ರತಿ ಕೋವಿಡ್ ಪೀಡಿತ …
Read More »ಕೆಎಸ್‌ಆರ್‌ಟಿಸಿ ಸಿಬ್ಬಂದಿ ತರಬೇತಿ ಅವಧಿ 2 ರಿಂದ ಒಂದು ವರ್ಷಕ್ಕೆ ಇಳಿಕೆ: ಲಕ್ಷ್ಮಣ ಸವದಿ
ಬೆಂಗಳೂರು: ರಾಜ್ಯದಲ್ಲಿ ಕೆಎಸ್‍ಆರ್ ಟಿಸಿ ಸಿಬ್ಬಂದಿ ತರಬೇತಿ ಅವಧಿಯನ್ನು ಎರಡರಿಂದ ಒಂದು ವರ್ಷಕ್ಕೆ ಕಡಿಮೆ ಮಾಡಬೇಕು ಎಂಬ ಸಾರಿಗೆ ಸಿಬ್ಬಂದಿಯ ಬೇಡಿಕೆಗೆ ಸರ್ಕಾರ ಸ್ಪಂದಿಸಿದ್ದು, ತರಬೇತಿ ಅವಧಿಯನ್ನು ಎರಡು ವರ್ಷದಿಂದ ಒಂದು ವರ್ಷಕ್ಕೆ ಇಳಿಸಲಾಗಿದೆ ಎಂದು ಉಪ ಮುಖ್ಯಮಂತ್ರಿ ಹಾಗೂ ಸಾರಿಗೆ ಸಚಿವ ಲಕ್ಷ್ಮಣ್ ಸವದಿ ಅವರು ಗುರುವಾರ ಹೇಳಿದ್ದಾರೆ. ಇದು ರಾಜ್ಯದ ನಾಲ್ಕು ಸಾರಿಗೆ ಸಂಸ್ಥೆಗಳಾದ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ, ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ, …
Read More »ಖಜಾನೆಯಿಂದ ಹೊರಗುಳಿದ ₹ 17,000 ಕೋಟಿ: ಶ್ವೇತಪತ್ರ ಪ್ರಕಟಿಸಲು ಪಾಟೀಲ್ ಆಗ್ರಹ
ಬೆಂಗಳೂರು: ಅಧಿಕಾರಿಗಳ ವೈಯಕ್ತಿಕ ಠೇವಣಿ (ಪಿ.ಡಿ) ಖಾತೆಗಳು ಹಾಗೂ ವಿವಿಧ ಬ್ಯಾಂಕ್‌ಗಳಲ್ಲಿ ಇರಿಸಿರುವ ಪ್ರತ್ಯೇಕ ಠೇವಣಿಗಳು ಸೇರಿದಂತೆ ₹17,000 ಕೋಟಿ ಮೊತ್ತ ರಾಜ್ಯ ಸರ್ಕಾರದ ಖಜಾನೆಯಿಂದ ಹೊರಗಿದೆ. ಈ ಕುರಿತು ತಕ್ಷಣವೇ ಸರ್ಕಾರ ಶ್ವೇತಪತ್ರ ಪ್ರಕಟಿಸಬೇಕು ಎಂದು ಕಾಂಗ್ರೆಸ್‌ನ ಎಚ್.ಕೆ. ಪಾಟೀಲ ಗುರುವಾರ ವಿಧಾನಸಭೆಯಲ್ಲಿ ಆಗ್ರಹಿಸಿದರು. ಬಜೆಟ್ ಮೇಲಿನ ಚರ್ಚೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ‘ನಾನು ಸಾರ್ವಜನಿಕ ಲೆಕ್ಕಪತ್ರ ಸಮಿತಿಯ ಅಧ್ಯಕ್ಷನಾಗಿದ್ದ ಅವಧಿಯಲ್ಲಿ ಈ ಕುರಿತು ಕೆಲವು ಮಾಹಿತಿ ಲಭಿಸಿತ್ತು. …
Read More »ಯಾರೋ ಹೇಳಿದಕ್ಕೆ ನಾನು ಆ ಅಸಯ್ಯದ ಕೆಲಸ ಮಾಡಿಬಿಟ್ಟೆ: ದಿನೇಶ್ ಕಲ್ಲಹಳ್ಳಿ
ಬೆಂಗಳೂರು, ಮಾರ್ಚ್ 18: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರ ಸಿಡಿ ಸ್ಫೋಟ ಪ್ರಕರಣ ಸಂಬಂಧ ದೂರುದಾರ ದಿನೇಶ್ ಕಲ್ಲಹಳ್ಳಿ “ದೂರು ವೃತ್ತಾಂತ”ವನ್ನು ಎಸ್‌ಐಟಿಗೆ ನಾಲ್ಕು ಪುಟಗಳ ಹೇಳಿಕೆಯನ್ನು ಸಲ್ಲಿಸಿದ್ದಾರೆ. ಕೆಲ ವರ್ಷಗಳಿಂದ ಪರಿಚಯವಿದ್ದ ಯುವಕ ಸಿಡಿ ಕೊಟ್ಟಿದ್ದು, ದೂರು ಕೊಡುವ ನೆಪದಲ್ಲಿ ಸಿಡಿ ಸ್ಫೋಟಿಸಿದ ಸಂಗತಿಯನ್ನು ಬಿಚ್ಚಿಟ್ಟಿದ್ದಾರೆ. ಯಾರೋ ಹೇಳಿದಕ್ಕೆ ನಾನು ಆ ಅಸಯ್ಯದ ಕೆಲಸ ಮಾಡಿಬಿಟ್ಟೆ ಮಾ. 2 ರಂದು ದಿನೇಶ್ ಕಲ್ಲಹಳ್ಳಿ ಜನ ಸಂಪನ್ಮೂಲ …
Read More »ಸಿ.ಡಿ ಪ್ರಕರಣ: ಶ್ರವಣ ತಂದೆಯಿಂದ ಹೈಕೋರ್ಟ್‌ಗೆ ಹೇಬಿಯಸ್ ಕಾರ್ಪಸ್ ಅರ್ಜಿ
ಬೆಂಗಳೂರು: ಶಾಸಕ ರಮೇಶ ಜಾರಕಿಹೊಳಿ ಸಿ.ಡಿ ಪ್ರಕರಣದ ಆರೋಪಿ ಎನ್ನಲಾದ ಶ್ರವಣಕುಮಾರ್ ಅವರ ತಂದೆ ಹೈಕೋರ್ಟ್‌ಗೆ ಹೇಬಿಯಸ್ ಕಾರ್ಪಸ್ ಅರ್ಜಿ ಸಲ್ಲಿಸಿದ್ದಾರೆ. ಮತ್ತೊಬ್ಬ ಮಗ ಚೇತನ್ ಅವರನ್ನು ಎಸ್‌ಐಟಿ ಪೊಲೀಸರು ಅಕ್ರಮವಾಗಿ ಬಂಧನದಲ್ಲಿ ಇರಿಸಿಕೊಂಡಿದ್ದಾರೆ ಎಂದು ಅರ್ಜಿಯಲ್ಲಿ ಪಿ.ಸೂರ್ಯಕುಮಾರ್ ದೂರಿದ್ದಾರೆ. ಗೃಹ ಇಲಾಖೆ ಕಾರ್ಯದರ್ಶಿ, ಎಸ್‌ಐಟಿ, ಕಬ್ಬನ್ ಪಾರ್ಕ್ ಹಾಗೂ ಸದಾಶಿವನಗರ ಪೊಲೀಸ್ ಠಾಣಾಧಿಕಾರಿಗಳನ್ನು ಪ್ರತಿವಾದಿ ಮಾಡಲಾಗಿದೆ. ಅರ್ಜಿ ಇನ್ನಷ್ಟೇ ವಿಚಾರಣೆಗೆ ಬರಬೇಕಿದೆ. ‘ಮಾ.13ರಂದು ಮನೆಗೆ ದಾಳಿ ಮಾಡಿದ್ದ ಎಸ್‌ಐಟಿ …
Read More »