Breaking News

Yearly Archives: 2021

ರಾಜ್ಯ ರಸ್ತೆ ಸಾರಿಗೆ ನೌಕರರಿಂದ ಮತ್ತೆ ಮುಷ್ಕರ;

ಬೆಂಗಳೂರು: ರಾಜ್ಯ ಸರ್ಕಾರ ಮೂರು ತಿಂಗಳ ಗಡುವಿನೊಳಗೆ ಸಾರಿಗೆ ನೌಕರರ ಒಂಬತ್ತು ಬೇಡಿಕೆ ಈಡೇರಿಸದ ಹಿನ್ನೆಲೆಯಲ್ಲಿ ರಾಜ್ಯ ರಸ್ತೆ ಸಾರಿಗೆ ನೌಕರರ ಕೂಟ ಏಪ್ರಿಲ್ 7ರಿಂದ ಅನಿರ್ಧಿಷ್ಟಾವಧಿ ಮುಷ್ಕರ ನಡೆಸಲು ತೀರ್ಮಾನಿಸಿದೆ. ಈ ಕುರಿತಂತೆ ಕೂಟವು ಮುಖ್ಯಮಂತ್ರಿ, ಸಾರಿಗೆ ಸಚಿವ, ರಸ್ತೆ ಸಾರಿಗೆಯ ನಾಲ್ಕು ನಿಗಮದ ವ್ಯವಸ್ಥಾಪಕ ನಿರ್ದೇಶಕರು ಹಾಗೂ ಕಾರ್ಮಿಕ ಇಲಾಖೆ ಆಯುಕ್ತರಿಗೆ ಮಂಗಳವಾರ ಮುಷ್ಕರದ ನೋಟಿಸ್ ನೀಡಿದೆ. ಕಾರ್ಮಿಕ ಕಾಯ್ದೆ ನಿಯಮದ ಪ್ರಕಾರ ನೋಟಿಸ್ ನೀಡಿದ 22 …

Read More »

ಉಪಚುನಾವಣೆ: ಬಿಜೆಪಿ- ಕಾಂಗ್ರೆಸ್ ಸಿದ್ಧತೆ: ಸ್ಪರ್ಧೆ ಬಗ್ಗೆ ತೀರ್ಮಾನಿಸದ ಜೆಡಿಎಸ್

ಬೆಂಗಳೂರು: ಬೆಳಗಾವಿ ಲೋಕಸಭಾ ಕ್ಷೇತ್ರ, ಬಸವಕಲ್ಯಾಣ ಮತ್ತು ಮಸ್ಕಿ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ಬಿಜೆಪಿ ಮತ್ತು ಕಾಂಗ್ರೆಸ್‌ ಪಕ್ಷಗಳು ವೇದಿಕೆ ಸಜ್ಜುಪಡಿಸಿಕೊಂಡಿದ್ದು, ಅಭ್ಯರ್ಥಿಗಳನ್ನು ಕಣಕ್ಕಿಳಿಸುವ ಬಗ್ಗೆ ಜೆಡಿಎಸ್‌ ತೀರ್ಮಾನ ಇನ್ನಷ್ಟೇ ಹೊರಬೀಳಬೇಕಿದೆ. ಬೆಳಗಾವಿ ಲೋಕಸಭಾ ಕ್ಷೇತ್ರಕ್ಕೆ ಬಿಜೆಪಿ ಮತ್ತು ಕಾಂಗ್ರೆಸ್‌ ಎರಡೂ ಪಕ್ಷಗಳಲ್ಲೂ ಟಿಕೆಟ್ ಆಕಾಂಕ್ಷಿಗಳ ಸಂಖ್ಯೆ ಹೆಚ್ಚೇ ಇದೆ. ಬಿಜೆಪಿಯಿಂದ ದಿವಂಗತ ಸುರೇಶ್‌ ಅಂಗಡಿ ಪುತ್ರಿ ಶ್ರದ್ಧಾ ಶೆಟ್ಟರ್‌, ರಮೇಶ ಕತ್ತಿ, ಪ್ರಭಾಕರ ಕೋರೆ, ಮಹಂತೇಶ ಕವಟಗಿಮಠ ಅವರ …

Read More »

ಬೆಳಗಾವಿ ಲೋಕಸಭೆ ಉಪಚುನಾವಣೆ ಕಾಂಗ್ರೆಸ್ಸ್ ಹಾಗೂ ಬಿಜೆಪಿಯಿಂದ ಸ್ಪ್ರದಿಸೋ ಅಭರ್ಥಿ ಗಳು ಯಾರು ಗೊತ್ತಾ..?

ಬೆಂಗಳೂರು: ಬೆಳಗಾವಿ ಲೋಕಸಭೆ ಮತ್ತು ಮಸ್ಕಿ, ಬಸವಕಲ್ಯಾಣ ವಿಧಾನಸಭೆ ಕ್ಷೇತ್ರಗಳಿಗೆ ಉಪಚುನಾವಣೆ ದಿನಾಂಕ ನಿಗದಿಯಾಗಿದೆ. ಮಾರ್ಚ್ 23 ರಂದು ಅಧಿಸೂಚನೆ ಪ್ರಕಟಿಸಲಾಗುವುದು. ಮಾರ್ಚ್ 30 ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾಗಿದ್ದು, ಮಾರ್ಚ್ 31 ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದೆ. ಏಪ್ರಿಲ್ 3 ರಂದು ನಾಮಪತ್ರ ಹಿಂಪಡೆದುಕೊಳ್ಳಲು ಕೊನೆಯ ದಿನವಾಗಿದ್ದು, ಏಪ್ರಿಲ್ 17 ರಂದು ಮತದಾನ ನಡೆಯಲಿದೆ. ಮೇ 2 ರಂದು ಮತ ಎಣಿಕೆ ನಡೆಸಲಾಗುವುದು. ಬೆಳಗಾವಿ ಲೋಕಸಭೆ ಸದಸ್ಯರಾಗಿದ್ದ ಕೇಂದ್ರ …

Read More »

ರಾಜಕಾರಣದಲ್ಲಿ ಬದ್ಧತೆ ಕೊರತೆ: ಬಸವರಾಜ ಹೊರಟ್ಟಿ ವಿಷಾದ

ಗದಗ: ‘ಇಂದಿನ ರಾಜಕಾರಣದಲ್ಲಿ ಬದ್ಧತೆ ಇಲ್ಲ. ಚುನಾವಣೆ ಮಾಡುವ ಎಲ್ಲ ಪಕ್ಷದವರೂ ಹಣ, ಹೆಂಡ ಹಂಚುತ್ತಾರೆ’ ಎಂದು ವಿಧಾನ ಪರಿಷತ್‌ ಸಭಾಪತಿ ಬಸವರಾಜ ಹೊರಟ್ಟಿ ಹೇಳಿದರು. ‘ಇಂತಹ ಕಲುಷಿತ ವಾತಾವರಣದಲ್ಲಿ ನಾವು ಇನ್ನೂ ರಾಜಕಾರಣ ಮಾಡಬೇಕಿದೆ. ಓಟು ಹಾಕುವವರು ಮೂವರಿಂದಲೂ ಪಡೆದುಕೊಂಡು ಒಬ್ಬರಿಗೆ ವೋಟು ಹಾಕಿ ಇನ್ನಿಬ್ಬರಿಗೆ ಟೋಪಿ ಹಾಕುತ್ತಾರೆ. ಟೋಪಿ ಹಾಕಿಸಿಕೊಂಡವನು ಸೋಲುತ್ತಾನೆ. ಎಂದಾರೂ ಆರಿಸಿ ಬಂದರೆ ಅವನು ಎಲ್ಲರಿಗೂ ಟೋಪಿ ಹಾಕುತ್ತಾನೆ. ಇವತ್ತು ದುಡ್ಡಿದ್ದವರದ್ದೇ ರಾಜಕಾರಣವಾಗಿದೆ. ಪಕ್ಷಗಳು …

Read More »

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸದುಪಯೋಗ ಪಡೆದುಕೊಂಡು ಮಹಿಳೆಯರು

ಬೆಳಗಾವಿ: ತಾಲೂಕಿನ ಕಂಗ್ರಾಳಿ ಕೆ ಎಚ್ ಕಾರ್ಯಕ್ಷೇತ್ರದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್(ರಿ) ಬೆಳಗಾವಿ ಮಹಿಳಾ ಜ್ಞಾನ ವಿಕಾಸ ಕಾರ್ಯಕ್ರಮದಡಿಯಲ್ಲಿ ವಿಶ್ವ ಮಹಿಳಾ ದಿನಾಚರಣೆ ನಿಮಿತ್ಯ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿತ್ತು. ಸೋಮವಾರ ಕಂಗ್ರಾಳಿ ಕೆಎಚ್ ಗ್ರಾಮದ ಮಹಾತ್ಮಾ ಪುಲೆ ಮಂಗಲ ಕಾರ್ಯಾಲಯದಲ್ಲಿ ಹಮ್ಮಿಕೊಂಡಿದ್ದ ವಿಶ್ವ ಮಹಿಳಾ ದಿನಾಚರಣೆ ಕಾರ್ಯಕ್ರಮವನ್ನು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಬಿಸಿ ಟ್ರಸ್ಟ್(ರಿ) ಬೆಳಗಾವಿ ಜಿಲ್ಲಾ ನಿರ್ದೇಶಕರಾದ ಶ್ರೀ ಪ್ರದೀಪ …

Read More »

ಲೋಕಸಭಾ ಉಪ‌ಚುನಾವಣೆ ಘೋಷಣೆ ನೀತಿಸಂಹಿತೆ ತಕ್ಷಣವೇ ಜಾರಿ: ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ

ಬೆಳಗಾವಿ: ಲೋಕಸಭಾ ಉಪ‌ಚುನಾವಣೆ ಘೋಷಣೆಯಾಗಿರುವುದರಿಂದ ನೀತಿಸಂಹಿತೆ ತಕ್ಷಣವೇ ಜಾರಿಗೆ ಬಂದಿದ್ದು, ಚುನಾವಣಾ ಆಯೋಗದ ನಿರ್ದೇಶನಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ಜಿಲ್ಲಾ ಚುನಾವಣಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಲೋಕಸಭಾ ಚುನಾವಣೆ ಘೋಷಣೆ ಹಿನ್ನೆಲೆಯಲ್ಲಿ ಮಂಗಳವಾರ (ಮಾ.16) ಸಂಜೆ ನಡೆದ ತುರ್ತು ವಿಡಿಯೋ ಸಂವಾದದಲ್ಲಿ ಅವರು ಮಾತನಾಡಿದರು. ಚುನಾವಣೆಗೆ ಸಂಬಂಧಿಸಿದಂತೆ ಈಗಾಗಲೇ ಎಲ್ಲ ರೀತಿಯ ತಂಡಗಳನ್ನು ರಚಿಸಲಾಗಿದ್ದು, ತರಬೇತಿ ಕೂಡ ನೀಡಲಾಗಿರುತ್ತದೆ. ಇದೀಗ ಉಪ ಚುನಾವಣೆ ಘೋಷಣೆಯಾಗಿರುವುದರಿಂದ …

Read More »

ಯುವಕನೋರ್ವ ನಡೆದುಕೊಂಡು ಹೋಗುತ್ತಿದ್ದ ಸಮಯದಲ್ಲಿ ದುಷ್ಕರ್ಮಿಗಳು ತಲ್ವಾರನಿಂದ ಹಲ್ಲೆ

ಹುಬ್ಬಳ್ಳಿ: ಯುವಕನೋರ್ವ ನಡೆದುಕೊಂಡು ಹೋಗುತ್ತಿದ್ದ ಸಮಯದಲ್ಲಿ ದುಷ್ಕರ್ಮಿಗಳು ತಲ್ವಾರನಿಂದ ಹಲ್ಲೆ ಮಾಡಿರುವ ಘಟನೆ ನಡೆದಿದ್ದು, ತೀವ್ರವಾಗಿ ಗಾಯಗೊಂಡಿರುವ ಯುವಕನನ್ನ ಚಿಕಿತ್ಸೆಗಾಗಿ ಕಿಮ್ಸಗೆ ದಾಖಲು ಮಾಡಲಾಗಿದೆ. image credits to speednews kannada.com ಇಸ್ಮಾಯಿಲ್ ಎಂಬ ಯುವಕನಿಗೆ ತಲ್ವಾರನಿಂದ ಹಲ್ಲೆ ಮಾಡಲಾಗಿದೆ. ಘಟನೆಯಲ್ಲಿ ಯುವಕನ ತಲೆ ಹಾಗೂ ಕೈಗೆ ತಲ್ವಾರಿನೇಟು ಬಿದ್ದಿದ್ದು, ತೀವ್ರ ಥರದ ರಕ್ತಸ್ರಾವವಾಗಿದೆ.ರಸ್ತೆಯಲ್ಲಿ ಬಿದ್ದಿದ್ದ ಯುವಕನನ್ನ ಕಿಮ್ಸ ಆಸ್ಪತ್ರೆಗೆ ಚಿಕಿತ್ಸೆಗಾಗಿ ತರಲಾಗಿದ್ದು, ಬೆಂಡಿಗೇರಿ ಪೊಲೀಸ್ ಠಾಣೆಯ ಹಿರಿಯ ಅಧಿಕಾರಿಗಳು, …

Read More »

ಭಾರತದ ವಿರುದ್ಧ ಇಂಗ್ಲೆಂಡ್ ಗೆ ಭರ್ಜರಿ ಜಯ

ನಿನ್ನೆ ನಡೆದ ಭಾರತ ಹಾಗೂ ಇಂಗ್ಲೆಂಡ್ ನಡುವಣ ಟಿ20 ಸರಣಿಯ ಮೂರನೇ ಪಂದ್ಯದಲ್ಲಿ ಇಂಗ್ಲೆಂಡ್ ತಂಡದ ನಾಯಕ ಇಯಾನ್ ಮೊರ್ಗನ್ ಟಾಸ್ ಗೆದ್ದು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡರು. ಮೊದಲು ಬ್ಯಾಟಿಂಗ್ ಮಾಡಿದ ಭಾರತ ತಂಡ ಆರಂಭದಲ್ಲಿ ಕೆಎಲ್ ರಾಹುಲ್ ಶೂನ್ಯಕ್ಕೆ ಔಟಾದರು ನಂತರ ಆರಂಭಿಕ ಆಟಗಾರ ರೋಹಿತ್ ಶರ್ಮ 15ರನ್ ಗಳಿಸಿದ್ದು ಮಾರ್ಕ್ ವುಡ್ ಗೆ ತಮ್ಮ ವಿಕೆಟ್ ಒಪ್ಪಿಸಿದರು. ಇಶಾನ್ ಕಿಶನ್ 4ರನ್ ಗೆ ಕ್ರಿಸ್ ಜೋರ್ಡನ್ ಬೌಲಿಂಗ್‌ನಲ್ಲಿ …

Read More »

ರಮೇಶ್ ಜಾರಕಿಹೊಳಿ ಪ್ರಕರಣಕ್ಕೆ ಹೊಸ ತಿರುವು : ಯುವತಿಯ ಅಪಹರಣವಾಗಿದೆ ಎಂದು ಪೋಷಕರ ದೂರು

ಬೆಳಗಾವಿ: ಮಾಜಿ ಸಚಿವ ರಮೇಶ ಜಾರಕಿಹೊಳಿ ಸಿಡಿ ಪ್ರಕರಣಕ್ಕೆ ಮತ್ತೂಂದು ಮಹತ್ವದ ತಿರುವು ಸಿಕ್ಕಿದ್ದು, ಸಿಡಿಯಲ್ಲಿರುವ ತಮ್ಮ ಮಗಳನ್ನು ಅಪಹರಿಸಲಾಗಿದೆ ಎಂದು ಯುವತಿಯ ಪಾಲಕರು ಬೆಳಗಾವಿಯ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಿ ದ್ದಾರೆ. ಇದರೊಂದಿಗೆ ಪ್ರಕರಣ ಮತ್ತೂಂದು ಮಜಲು ಪಡೆದುಕೊಂಡಿದೆ. ಬೆಳಗಾವಿಯ ಹನುಮಾನ ನಗರದ ನಿವಾಸಿಯಾದ ಯುವತಿಯ ಪಾಲಕರು ತಮ್ಮ ಮಗಳನ್ನು ಮಾ.2ರಂದು ಬೆಂಗಳೂರಿನಲ್ಲಿ ಅಪಹರಣ ಮಾಡಿದ್ದಾರೆಂದು ದೂರಿನಲ್ಲಿ ತಿಳಿಸಿದ್ದು, ಎಪಿಎಂಸಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಿದ್ದಾರೆ. ತಮ್ಮ ಮಗಳನ್ನು …

Read More »

ಬೆಳಗಾವಿ ಲೋಕಸಭೆ, ಬಸವ ಕಲ್ಯಾಣ ಹಾಗೂ ಮಸ್ಕಿ ವಿಧಾನಸಭೆ ಉಪ ಚುನಾವಣೆಯಲ್ಲಿ 22,57,469 ಮತದಾರರು ಮತ ಚಲಾಯಿಸುವ ಹಕ್ಕು ಹೊಂದಿದ್ದಾರೆ

ಬೆಂಗಳೂರು: ಬೆಳಗಾವಿ ಲೋಕಸಭೆ, ಬಸವ ಕಲ್ಯಾಣ ಹಾಗೂ ಮಸ್ಕಿ ವಿಧಾನಸಭೆ ಉಪ ಚುನಾವಣೆಯಲ್ಲಿ 22,57,469 ಮತದಾರರು ಮತ ಚಲಾಯಿಸುವ ಹಕ್ಕು ಹೊಂದಿದ್ದಾರೆ. ಮೂರು ಕ್ಷೇತ್ರಗಳ ಉಪ ಚುನಾವಣೆಗೆ ಕೇಂದ್ರ ಚುನಾವಣಾ ಆಯೋಗ ದಿನಾಂಕ ಪ್ರಕಟಿಸಿದ್ದು, ಒಟ್ಟು ಮತದಾರರ ಪೈಕಿ 11,36,293 ಪುರುಷ, 11,21,101 ಮಹಿಳೆ ಮತ್ತು 75 ಇತರ ಮತದಾರರಿದ್ದಾರೆ. ಬೆಳಗಾವಿ ಲೋಕಸಭೆ ಕ್ಷೇತ್ರದಲ್ಲಿ 18,11,642 ಮತದಾರರಿದ್ದರೆ, ಬಸವಕಲ್ಯಾಣದಲ್ಲಿ 2,39,473 ಮತ್ತು ಮಸ್ಕಿ (ಪರಿಶಿಷ್ಟ ಪಂಗಡ)ದಲ್ಲಿ 2,06,354 ಮತದಾರರಿದ್ದಾರೆ. ಬೆಳಗಾವಿಯಲ್ಲಿ …

Read More »