Breaking News

Yearly Archives: 2021

ವೈಷ್ಣವಿಯ ಬಟ್ಟೆ ಎಳೆದ ಶಮಂತ್​ ಬ್ರೋ ಗೌಡ! ಕಿಚ್ಚನ ಎದುರು ವೈಷ್ಣವಿ ಗಂಭೀರ ಆರೋಪ

ಆರಂಭದಲ್ಲಿ ಸ್ವಲ್ಪ ಸಪ್ಪೆ ಆಗಿದ್ದ ಬಿಗ್​ ಬಾಸ್​ ಕನ್ನಡ ಸೀಸನ್​ 8ರಲ್ಲಿ ಈಗ ಹೊಸ ಹೊಸ ಟ್ವಿಸ್ಟ್​ ಸಿಗುತ್ತಿದೆ. ಅದರಲ್ಲೂ ಎರಡನೇ ವಾರವಂತೂ ದೊಡ್ಮನೆಯಲ್ಲಿ ಒಂದು ಯುದ್ಧವೇ ನಡೆದು ಹೋಯ್ತು. ಆ ಘಟನೆಯಲ್ಲಿ ಶಮಂತ್​ ನಡೆದುಕೊಂಡ ರೀತಿ ಸರಿ ಇರಲಿಲ್ಲ ಎಂದು ನಟಿ ವೈಷ್ಣವಿ ಆರೋಪಿಸಿದ್ದಾರೆ. ಕಿಚ್ಚನ ಎದುರಿನಲ್ಲಿ ತಮ್ಮ ಬೇಸರ ತೋಡಿಕೊಂಡಿದ್ದಾರೆ. ಎರಡನೇ ವಾರದಲ್ಲಿ ಮನೆಯೊಳಗಿನ ಸ್ಪರ್ಧಿಗಳಿಗೆ ವೈರಸ್​ ವರ್ಸಸ್​ ಮನುಷ್ಯರು ಎಂಬ ಟಾಸ್ಕ್​ ನೀಡಲಾಗಿತ್ತು. ಅದರಲ್ಲಿ ಎಲ್ಲರೂ …

Read More »

ಕೆಲ ದಿನಗಳಲ್ಲಿ ಆರಂಭವಾಗಲಿದೆ ಜನಗಣತಿಯ ಕಾರ್ಯಕಲಾಪ

ದೆಹಲಿ: 2021ನೇ ಸಾಲಿನ ಜನಗಣತಿಯ ಕಾರ್ಯ ಕಲಾಪಗಳು ಇನ್ನೇನು ಕೆಲವೇ ದಿನಗಳಲ್ಲಿ ಆರಂಭವಾಗಲಿದೆ ಎಂದು ಗೃಹ ಸಚಿವಾಲಯ ಸಂಸತ್​ ಸಮಿತಿಗೆ ತಿಳಿಸಿದೆ. ಪ್ರತಿ ಹತ್ತು ವರ್ಷಗಳಿಗೊಮ್ಮೆ ನಡೆಯುವ ಜನಗಣತಿ 2011ರಲ್ಲಿ ನಡೆದಿತ್ತು. ಅದೇ ಪ್ರಕಾರ ಈ ವರ್ಷ ಮತ್ತೊಮ್ಮೆ ಜನಗಣತಿ ನಡೆಯಬೇಕಿತ್ತು. 2021ರ ಜನಗಣತಿಗೆ 2020ರ ಸೆಪ್ಟೆಂಬರ್​ ತಿಂಗಳಿನಿಂದಲೇ ತಯಾರಿ ಪ್ರಕ್ರಿಯೆ ಆರಂಭವಾಗಬೇಕಿತ್ತಾದರೂ, ಕೊರೊನಾ ಸೋಂಕು ಪಿಡುಗಿನಿಂದ ಜನಗಣತಿ ಪ್ರಕ್ರಿಯೆಗೆ ಸಂಬಂಧಿಸಿದ ಎಲ್ಲಾ ಕೆಲಸಗಳು ಸ್ಥಗಿತಗೊಂಡಿದ್ದವು. ಇದೀಗ ಜನಗಣತಿಗೆ ಸಂಬಂಧಿಸಿ …

Read More »

ಟ್ವೀಟ್​ ಮಾಡಿ.. ಸಿಡಿ ವಿಚಾರದಲ್ಲಿ ಮಹಾನಾಯಕಿಯನ್ನು ಎಳೆದು ತಂದ ಬಿಜೆಪಿ! ಯಾರದು?

ಬೆಂಗಳೂರು: ರಮೇಶ್​ ಜಾರಕಿಹೊಳಿ ಅಶ್ಲೀಲ ಸಿಡಿ ವಿಚಾರದಲ್ಲಿ ‘ಮಹಾನಾಯಕ’ರೊಬ್ಬರ ಕೈವಾಡ ಇದೆ ಎಂಬ ಆರೋಪ ರಾಜ್ಯ ರಾಜಕಾರಣದಲ್ಲಿ ಇದೀಗ ಬಿಸಿಬಿಸಿ ಚರ್ಚೆಗೆ ಕಾರಣವಾಗಿದೆ. ಮಹಾನಾಯಕ ಯಾರು ಎಂಬ ಕುತೂಹಲ ಎಲ್ಲರಲ್ಲೂ ಮೂಡಿದ್ದು, ಆ ಸಂಗತಿಯೀಗ ಬಿಜೆಪಿ ಮತ್ತು ಕಾಂಗ್ರೆಸ್​ ನಡುವಿನ ಟ್ವೀಟ್​ ಕದನಕ್ಕೆ ನಾಂದಿ ಹಾಡಿದೆ. ಈ ಹಿಂದೆ ಡಿ.ಕೆ.ಶಿವಕುಮಾರ್​ ಅದೇಕೆ ತಮ್ಮನ್ನು ತಾವು ‘ಮಹಾನಾಯಕ’ ಎಂದುಕೊಂಡು ಆರೋಪವನ್ನು ಮೈಮೇಲೆ ಎಳೆದುಕೊಳ್ಳುತ್ತಿದ್ದಾರೆ ಅಂತ ತಿಳಿಯುತ್ತಿಲ್ಲವೆಂದು ಬಿಜೆಪಿ ನಾಯಕರೂ ಸೇರಿದಂತೆ ಪಕ್ಷ …

Read More »

ಯಡಿಯೂರಪ್ಪ ಅವರತ್ತ ಪರೋಕ್ಷವಾಗಿ ಗುರಿ ಇಟ್ಟ ಬಿಜೆಪಿ: ಕಾಂಗ್ರೆಸ್ ತಿರುಗೇಟು

ಬೆಂಗಳೂರು, ಮಾ.16: “ಜೈಲಿನಿಂದ ಜಾಮೀನಿನ ಮೇಲೆ ಹೊರಬಂದಿರುವ ಭ್ರಷ್ಟಾಚಾರ ಆರೋಪಿ ಮಹಾ ನಾಯಕ” ಎನ್ನುತ್ತ ಬಿ.ಎಸ್.ಯಡಿಯೂರಪ್ಪ ಅವರತ್ತ ಏಕೆ ಪರೋಕ್ಷವಾಗಿ ಗುರಿ ಇಡುತ್ತಿದ್ದೀರಿ? ಎಂದು ಬಿಜೆಪಿಗೆ ಕಾಂಗ್ರೆಸ್ ಟ್ವಿಟರ್ ನಲ್ಲಿ ತಿರುಗೇಟು ನೀಡಿದೆ. ಬಸನಗೌಡ ಪಾಟೀಲ್ ಯತ್ನಾಳ್, ವಿಜಯೇಂದ್ರ ಸಿಡಿ ಫ್ಯಾಕ್ಟರಿ ಮೂಲಕ ಬ್ಲಾಕ್ಮೇಲ್ ಮಾಡಲಾಗುತ್ತದೆ ಎಂಬ ಮಾತನ್ನ ನೀವೂ ಪರೋಕ್ಷವಾಗಿ ಹೇಳುತ್ತಾ ಬಿಎಸ್ವೈ ಮುಕ್ತ ಬಿಜೆಪಿ ಅಭಿಯಾನ ಮುಂದುವರೆಸುತ್ತಿರುವಿರಾ ಎಂದು ಕಾಂಗ್ರೆಸ್ ಪ್ರಶ್ನಿಸಿದೆ. ನಿಮ್ಮ ಶ್ರೀನಿವಾಸ್ ಪ್ರಸಾದ್ ಹೇಳಿದಂತೆ …

Read More »

ಳಗಾವಿ ಲೋಕಸಭಾ ಉಪಚುನಾವಣೆಗೆ ಬಿಜೆಪಿಯಿಂದ ನನಗೆ ಟಿಕೆಟ್ ಸಿಗುವ ವಿಶ್ವಾಸವಿದೆ: ಪ್ರಮೋದ್ ಮುತಾಲಿಕ್

ಧಾರವಾಡ: ಬೆಳಗಾವಿ ಲೋಕಸಭಾ ಉಪಚುನಾವಣೆಗೆ ಬಿಜೆಪಿಯಿಂದ ನನಗೆ ಟಿಕೆಟ್ ಸಿಗುವ ವಿಶ್ವಾಸವಿದೆ ಎಂದು ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಹೇಳಿದ್ದಾರೆ. ಧಾರವಾಡದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮುತಾಲಿಕ್, ಈಗಾಗಾಲೇ ಬಿಜೆಪಿ ನಾಯಕರ ಜೊತೆ ಮೂರು ಸುತ್ತಿನ ಮಾತುಕತೆ ನಡೆಸಲಾಗಿದೆ. ನಾಯಕರು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ. ರಾಜಕಾರಣದಲ್ಲಿ ಜಾತಿ, ಹಣ ಎಲ್ಲ ಇರುವುದರಿಂದ ಶೇ.80ರಷ್ಟು ನನಗೇ ಟಿಕೆಟ್ ಸಿಗುವ ಭರವಸೆ ಇದೆ ಎಂದರು. ಒಂದು ವೇಳೆ ಬಿಜೆಪಿ ಟಿಕೆಟ್ ಸಿಗದಿದ್ದರೆ ಪಕ್ಷ ಯಾರಿಗೆ ಟಿಕೆಟ್ …

Read More »

‘ವೈದ್ಯಕೀಯ ಸೀಟು ಬ್ಲಾಕಿಂಗ್ ದಂಧೆ ವಿರುದ್ಧ ಕಠಿಣ ಕ್ರಮ’

ಬೆಂಗಳೂರು: ‘ವೈದ್ಯಕೀಯ ಕಾಲೇಜುಗಳಲ್ಲಿನ ಸೀಟ್ ಬ್ಲಾಕಿಂಗ್ ದಂಧೆ ತಡೆಯಬೇಕು ಮುಂದಿನ ವರ್ಷದಿಂದ ಕಠಿಣ ಕ್ರಮಗಳನ್ನು ತೆಗೆದುಕೊಳ್ಳಲಾಗುವುದು’ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಸುಧಾಕರ್ ಭರವಸೆ ನೀಡಿದರು. ವಿಧಾನಪರಿಷತ್‍ನಲ್ಲಿ ಬಿಜೆಪಿಯ ಎನ್‌. ರವಿಕುಮಾರ್ ಪ್ರಶ್ನೆಗೆ ಉತ್ತರಿಸಿದ ಅವರು, ‘ಕಾನೂನಿನಲ್ಲಿರುವ ಲೋಪಗಳನ್ನು ಬಳಸಿಕೊಂಡು ಸೀಟ್ ಬ್ಲಾಕಿಂಗ್ ವ್ಯವಹಾರ ನಡೆಯುತ್ತಿರುವುದು ಗಮನಕ್ಕೆ ಬಂದಿದೆ. ರಾಜ್ಯದಲ್ಲಿರುವ 65 ವೈದ್ಯಕೀಯ ಕಾಲೇಜುಗಳ ಪೈಕಿ 45 ಕಾಲೇಜುಗಳು ಖಾಸಗಿಯವರ ಒಡೆತನದಲ್ಲಿವೆ. ಈ ಕಾಲೇಜುಗಳು ಸುಪ್ರೀಂ ಕೋರ್ಟ್‌ ಆದೇಶವನ್ನು …

Read More »

ಇನ್‌ಸ್ಪೆಕ್ಟರ್‌ ವಿಕ್ಟರ್‌ಗೆ ನ್ಯಾಯಾಂಗ ಬಂಧನ

ಬೆಂಗಳೂರು: ಆದಾಯಕ್ಕಿಂತ ಹೆಚ್ಚು ಆಸ್ತಿ ಹೊಂದಿರುವ ಆರೋಪದ ಮೇಲೆ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ಬಂಧಿಸಿರುವ ಬೆಂಗಳೂರು ಮಹಾನಗರ ಕಾರ್ಯಪಡೆ (ಬಿಎಂಟಿಎಫ್‌) ಇನ್‌ಸ್ಪೆಕ್ಟರ್‌ ವಿಕ್ಟರ್‌ ಸೈಮನ್‌ ಅವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಮಾರ್ಚ್‌ 9ರಂದು ವಿಕ್ಟರ್‌ ಅವರ ಮನೆ ಮೇಲೆ ದಾಳಿಮಾಡಿದ್ದ ಎಸಿಬಿ ಅಧಿಕಾರಿಗಳು ಶೋಧ ನಡೆಸಿದ್ದರು. ತನಿಖೆಗೆ ಸಹಕರಿಸದ ಆರೋಪದ ಮೇಲೆ ಮಾ.10ರಂದು ಅವರನ್ನು ಬಂಧಿಸಲಾಗಿತ್ತು. ಸೋಮವಾರವರೆಗೂ ವಿಚಾರಣೆಗಾಗಿ ಆರೋಪಿ ಅಧಿಕಾರಿಯನ್ನು ಎಸಿಬಿ ತನಿಖಾ ತಂಡದ ವಶಕ್ಕೆ ನೀಡಿ …

Read More »

ಕೋವಿಡ್‌ 2ನೇ ಅಲೆ ಮುನ್ಸೂಚನೆ: ರಾತ್ರಿ ಕರ್ಫ್ಯೂ ಬಗ್ಗೆ ಮಾ.17ರ ಬಳಿಕ ತೀರ್ಮಾನ

ಬೆಂಗಳೂರು: ರಾಜ್ಯದಲ್ಲಿ ಕೋವಿಡ್‌ಎರಡನೇ ಅಲೆಯ ಮುನ್ಸೂಚನೆ ಖಚಿತವಾಗಿದ್ದು, ಇದಕ್ಕೆ ಕಡಿವಾಣ ಹಾಕಲು ಸಾರ್ವಜನಿಕರು ಸಹಕರಿಸದಿದ್ದರೆ, ದಂಡ ವಿಧಿಸುವುದು ಅನಿವಾರ್ಯ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಎಚ್ಚರಿಕೆ ನೀಡಿದ್ದಾರೆ. ವಿಧಾನಸೌಧದಲ್ಲಿ ಸೋಮವಾರ ತಜ್ಞರ ಸಭೆಯ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಾರ್ವಜನಿಕರು ಕೋವಿಡ್‌ ಮಾರ್ಗಸೂಚಿಯನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದು ಮನವಿ ಮಾಡಿದರು. ಕೋವಿಡ್‌ ಮತ್ತೆ ಹೆಚ್ಚುತ್ತಿರುವುದರಿಂದ ಇದೇ 17 ರಂದು ಪ್ರಧಾನಿ ನರೇಂದ್ರಮೋದಿ ವಿವಿಧ ರಾಜ್ಯಗಳ ಮುಖ್ಯಮಂತ್ರಿಗಳ ಜತೆ ಸಮಾಲೋಚನೆ ನಡೆಸಲಿದ್ದಾರೆ. ರಾಜ್ಯದಲ್ಲಿ …

Read More »

ಫುಡ್ ಡೆಲಿವರಿ ಗಲಾಟೆ : ಹಿತೇಶಾ ವಿರುದ್ಧ ಎಫ್‍ಐಆರ್ ದಾಖಲು

ಬೆಂಗಳೂರು : ಯುವತಿ ಮೇಲೆ ಜೊಮ್ಯಾಟೊ ಫುಡ್ ಡೆಲಿವರಿ ಬಾಯ್ ಹಲ್ಲೆ ನಡೆಸಿದ್ದಾನೆ ಎನ್ನುವ ಆರೋಪದ ಪ್ರಕರಣದಲ್ಲಿ ಮತ್ತೊಂದು ಹೊಸ ಬೆಳವಣೆಗೆ ನಡೆದಿದೆ. ಇಂದು ( ಮಾರ್ಚ್ 15) ಹಲ್ಲೆಗೊಳಗಾಗಿದ್ದೇನೆ ಎಂದು ಆರೋಪಿಸಿದ ಯುವತಿ ಹಿತೇಶಾ ಚಂದ್ರಾಣಿ ಅವರ ವಿರುದ್ಧ ಪ್ರಕರಣ ದಾಖಲಾಗಿದೆ. ಡೆಲಿವರಿ ಬಾಯ್ ಕಾಮರಾಜ್ ದೂರಿನ ಮೇರೆಗೆ ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿ ಪೊಲೀಸ್ ಠಾಣೆಯಲ್ಲಿ 355 (ಹಲ್ಲೆ),504 ( ಅಪಮಾನ) ಮತ್ತು 506 ( ಕ್ರಿಮಿನಲ್ ಬೆದರಿಕೆ) …

Read More »

ಟೋಯಿಂಗ್‌ನಲ್ಲಿ ಅಕ್ರಮ: ಕ್ರಮಕ್ಕೆ ಒತ್ತಾಯ

ಬೆಂಗಳೂರು: ‘ನಿಲುಗಡೆ ನಿರ್ಬಂಧಿಸಿರುವ ಸ್ಥಳಗಳಲ್ಲಿ ನಿಲ್ಲಿಸಿರುವ ವಾಹನಗಳ ಟೋಯಿಂಗ್‌ ಮಾಡುವ ಪ್ರಕ್ರಿಯೆಯಲ್ಲಿ ಭ್ರಷ್ಟಾಚಾರ ನಡೆಯುತ್ತಿದ್ದು, ಹಿರಿಯ ಅಧಿಕಾರಿಗಳು ಇದರ ವಿರುದ್ಧ ಕ್ರಮ ಕೈಗೊಳ್ಳಬೇಕು’ ಎಂದು ಲಂಚಮುಕ್ತ ಕರ್ನಾಟಕ ನಿರ್ಮಾಣ ವೇದಿಕೆಯ ರಾಜ್ಯ ಘಟಕದ ವಿ.ಆರ್. ಮರಾಠೆ ಒತ್ತಾಯಿಸಿದರು. ‘ಟೋಯಿಂಗ್ ಮಾಡಲು ಬಳಸುವ ವಾಹನಗಳನ್ನು ಸಾರಿಗೆ ಇಲಾಖೆ ಅಧಿಕಾರಿಗಳ ಅನುಮತಿ ಪಡೆಯದೆ ಅತಿ ಹೆಚ್ಚು ಮಾರ್ಪಾಡು ಮಾಡಿ ಕಾನೂನುಬಾಹಿರವಾಗಿ ಬಳಸಲಾಗುತ್ತದೆ. ಸಂಚಾರ ಪೊಲೀಸ್‌ ಅಧಿಕಾರಿಗಳಾಗಲಿ, ಸಾರಿಗೆ ಇಲಾಖೆ ಅಧಿಕಾರಿಗಳಾಗಲಿ ಇದರ ಬಗ್ಗೆ …

Read More »