ಬೆಂಗಳೂರು: ಸರ್ಕಾರಿ ಜಾಗದಲ್ಲಿ ಅಕ್ರಮವಾಗಿ ಧಾರ್ಮಿಕ ಕಟ್ಟಡ ನಿರ್ಮಿಸಿ ಎಂದು ಯಾವ ಧರ್ಮ ಹೇಳುತ್ತದೆ ಎಂದು ಪ್ರಶ್ನಿಸಿರುವ ಹೈಕೋರ್ಟ್, ದೇವರು-ಧರ್ಮದ ಹೆಸರಲ್ಲಿ ಸಾರ್ವಜನಿಕ ಆಸ್ತಿ ದುರ್ಬಳಕೆ ಮಾಡಿಕೊಳ್ಳುವುದನ್ನು ನ್ಯಾಯಾಲಯ ಸಹಿಸುವುದಿಲ್ಲ ಎಂದು ಹೈಕೋರ್ಟ್ ಹೇಳಿದೆ. ಕೋಲಾರದ ಚನ್ನಸಂದ್ರ ಹಾಗೂ ಮಂಗಸಂದ್ರ ಗ್ರಾಮಗಳಲ್ಲಿನ ಸರ್ಕಾರಿ ಗೋಮಾಳಗಳ ಜಮೀನಿನಲ್ಲಿ ಅನಧಿಕೃತವಾಗಿ ದೇವಸ್ಥಾನ, ಚರ್ಚ್ ಹಾಗೂ ಮಿನಾರ್ ನಿರ್ಮಾಣ ಮಾಡಿದ್ದು, ಅವುಗಳನ್ನು ತೆರವುಗೊಳಿಸಬೇಕು ಎಂದು ಕೋರಿ ಸ್ಥಳೀಯ ನಿವಾಸಿ ಸಿದ್ದನಹಳ್ಳಿಯ ಕಿಶೋರ್ ರಾಮಮೂರ್ತಿ ಸಲ್ಲಿಸಿರುವ …
Read More »Yearly Archives: 2021
ಪುಣೆ: ಶಿವಾಜಿ ಮಾರುಕಟ್ಟೆಯಲ್ಲಿ ಬೆಂಕಿ; 25 ಅಂಗಡಿಗಳು ನಾಶ
ಪುಣೆ: ‘ಮಹಾರಾಷ್ಟ್ರದ ಪುಣೆಯ ಹಣ್ಣು ಮತ್ತು ತರಕಾರಿಯ ಹಳೆಯ ಮಾರುಕಟ್ಟೆಯೊಂದರಲ್ಲಿ ಮಂಗಳವಾರ ಬೆಳಿಗ್ಗೆ ದೊಡ್ಡ ಪ್ರಮಾಣದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಇದರಲ್ಲಿ 25 ಕ್ಕೂ ಹೆಚ್ಚು ಅಂಗಡಿಗಳು ನಾಶವಾಗಿದೆ’ ಎಂದು ಅಗ್ನಿಶಾಮಕ ದಳದ ಅಧಿಕಾರಿಗಳು ತಿಳಿಸಿದರು. ‘ಪುಣೆಯ ಪ್ರಸಿದ್ಧ ಶಿವಾಜಿ ಮಾರುಕಟ್ಟೆಯಲ್ಲಿ ಮಂಗಳವಾರ ನಸುಕಿನ 4 ಗಂಟೆಗೆ ಬೆಂಕಿ ಕಾಣಿಸಿಕೊಂಡಿದ್ದು, ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಆದರೆ 25 ಅಂಗಡಿಗಳು ಸುಟ್ಟು ಹೋಗಿವೆ’ ಎಂದು ಅಧಿಕಾರಿಯೊಬ್ಬರು ಹೇಳಿದರು. ‘ನಮಗೆ ಈ ಬಗ್ಗೆ ಮಾಹಿತಿ …
Read More »ಎರಡನೇ ದಿನವೂ ಮುಂದುವರೆದ ಬ್ಯಾಂಕ್ ನೌಕರರ ಮುಷ್ಕರ
ನವದೆಹಲಿ, ಮಾ.16-ಕೇಂದ್ರ ಸರ್ಕಾರದ ಖಾಸಗೀಕರಣ ನೀತಿ ವಿರೋಸಿ ಬ್ಯಾಂಕ್ ನೌಕರರು ನಡೆಸುತ್ತಿರುವ ರಾಷ್ಟ್ರ ವ್ಯಾಪಿ ಬ್ಯಾಂಕ್ ಮುಷ್ಕರ ಎರಡನೆ ದಿನಕ್ಕೆ ಕಾಲಿಟ್ಟಿದೆ. ಬ್ಯಾಂಕ್‍ಗಳ ಮುಷ್ಕರದಿಂದ ದೇಶಾದ್ಯಂತ ಗ್ರಾಹಕರು ಹಣ ಡ್ರಾ, ಠೇವಣಿ, ಚೆಕ್ ಕ್ಲಿಯರೆನ್ಸ್ ಮತ್ತಿತರ ಸೇವೆಗಳಿಂದ ವಂಚಿತರಾಗಿದ್ದಾರೆ. ವಿತ್ತ ಸಚಿವೆ ನಿರ್ಮಲಾ ಸೀತರಾಮನ್ ಘೋಷಿಸಿರುವ ಖಾಸಗೀಕರಣ ನೀತಿ ವಿರೋಸಿ ಒಂಬತ್ತು ಬ್ಯಾಂಕ್ ನೌಕರರ ಸಂಘಟನೆ ನಿನ್ನೆಯಿಂದ ಹಮ್ಮಿಕೊಂಡಿರುವ ಮುಷ್ಕರದಲ್ಲಿ 10 ಲಕ್ಷಕ್ಕೂ ಹೆಚ್ಚು ಸಿಬ್ಬಂದಿ ಪಾಲ್ಗೊಂಡಿದ್ದು ನಮ್ಮ ಹೋರಾಟ …
Read More »ಎರಡನೇ ದಿನವೂ ಮುಂದುವರೆದ ಬ್ಯಾಂಕ್ ನೌಕರರ ಮುಷ್ಕರ
ನವದೆಹಲಿ, ಮಾ.16-ಕೇಂದ್ರ ಸರ್ಕಾರದ ಖಾಸಗೀಕರಣ ನೀತಿ ವಿರೋಸಿ ಬ್ಯಾಂಕ್ ನೌಕರರು ನಡೆಸುತ್ತಿರುವ ರಾಷ್ಟ್ರ ವ್ಯಾಪಿ ಬ್ಯಾಂಕ್ ಮುಷ್ಕರ ಎರಡನೆ ದಿನಕ್ಕೆ ಕಾಲಿಟ್ಟಿದೆ. ಬ್ಯಾಂಕ್‍ಗಳ ಮುಷ್ಕರದಿಂದ ದೇಶಾದ್ಯಂತ ಗ್ರಾಹಕರು ಹಣ ಡ್ರಾ, ಠೇವಣಿ, ಚೆಕ್ ಕ್ಲಿಯರೆನ್ಸ್ ಮತ್ತಿತರ ಸೇವೆಗಳಿಂದ ವಂಚಿತರಾಗಿದ್ದಾರೆ. ವಿತ್ತ ಸಚಿವೆ ನಿರ್ಮಲಾ ಸೀತರಾಮನ್ ಘೋಷಿಸಿರುವ ಖಾಸಗೀಕರಣ ನೀತಿ ವಿರೋಸಿ ಒಂಬತ್ತು ಬ್ಯಾಂಕ್ ನೌಕರರ ಸಂಘಟನೆ ನಿನ್ನೆಯಿಂದ ಹಮ್ಮಿಕೊಂಡಿರುವ ಮುಷ್ಕರದಲ್ಲಿ 10 ಲಕ್ಷಕ್ಕೂ ಹೆಚ್ಚು ಸಿಬ್ಬಂದಿ ಪಾಲ್ಗೊಂಡಿದ್ದು ನಮ್ಮ ಹೋರಾಟ …
Read More »ಕಳೆದ ಎರಡು ವರ್ಷಗಳಲ್ಲಿ 2000 ಸಾವಿರ ರೂಪಾಯಿ ಮುಖಬೆಲೆಯ ನೋಟುಗಳನ್ನು ಮುದ್ರಿಸಲಾಗಿಲ್ಲ
ನವದೆಹಲಿ:ಕಳೆದ ಎರಡು ವರ್ಷಗಳಲ್ಲಿ 2000 ಸಾವಿರ ರೂಪಾಯಿ ಮುಖಬೆಲೆಯ ನೋಟುಗಳನ್ನು ಮುದ್ರಿಸಲಾಗಿಲ್ಲ ಎಂದು ಹಣಕಾಸು ಸಚಿವಾಲಯ ಸೋಮವಾರ(ಮಾರ್ಚ್ 15) ಲೋಕಸಭೆಗೆ ತಿಳಿಸಿದೆ. ನೋಟು ಅಮಾನ್ಯೀಕರಣದ ನಂತರ 2000 ರೂಪಾಯಿ ಮುಖಬೆಲೆಯ ನೋಟುಗಳನ್ನು ಚಲಾವಣೆಗೆ ತಂದ ನಂತರ ಇದೀಗ 2000 ಮುಖಬೆಲೆಯ ನೋಟುಗಳು ವಿರಳವಾಗಿರುವುದು ಯಾಕೆ ಎಂಬ ಪ್ರಶ್ನೆಗೆ ಹಣಕಾಸು ಸಚಿವಾಲಯ ಈ ಉತ್ತರ ನೀಡಿದೆ. 2019-20 ಹಾಗೂ 2020-21ನೇ ಸಾಲಿನಲ್ಲಿ 2000 ರೂಪಾಯಿ ಮುಖಬೆಲೆಯ ನೋಟುಗಳನ್ನು ಮುದ್ರಿಸಲು ಪ್ರಿಂಟಿಂಗ್ ಪ್ರೆಸ್ …
Read More »ಕೆಂಪು, ಹಳದಿ ಬಾವುಟ ಹಾಕಿಕೊಂಡು ಓಡಾಡಿದ್ರೆ ಅಟ್ಟಾಡಿಸಿ ಹೊಡೀತಾನಂತೆ…!!
ಬೆಳಗಾವಿ: ಕನ್ನಡಿಗರನ್ನೆ ಅಟ್ಟಾಡಿಸಿ ಹೊಡ್ತಿವಿ ಎಂದು ಬೆಳಗಾವಿಯಲ್ಲಿ ಎಂಇಎಸ್ ಮುಖಂಡ ಹೂಂಕರಿಸಿ ಸಂಕಷ್ಟಕ್ಕೆ ಬಿದ್ದಿದ್ದಾನೆ. ಬೆಳಗಾವಿ ನೆಲದಲ್ಲಿ ನಿಂತುಕೊಂಡು ಈ ರೀತಿ ಧಮ್ಕಿ ಹಾಕಿದವ ಎಂಇಎಸ ಮುಖಂಡ ಶುಭಂ ಸಾಳುಂಕೆ. ಬೆಳಗಾವಿಯಲ್ಲಿ ಎಂಇಎಸ್ ಮತ್ತು ಶಿವಸೇನೆ ಎರಡು ಒಂದಾಗಿವೆ ಎಂದಿರುವ ಸಾಳುಂಕೆ, ಹಳದಿ ಕೆಂಪು ಬಣ್ಣದ ಶಾಲು ಧರಿಸಿದವರನ್ನು ಸಿಕ್ಕ ಸಿಕ್ಕಲ್ಲಿ ನಾವು ಹೊಡ್ತಿವಿ ಎಂದಿದ್ದಾನೆ. ನಮ್ಮ ಶಾಂತಿಯುತ ಹೋರಾಟವನ್ನ ತಪ್ಪಾಗಿ ಅರ್ಥೈಸಿಕೊಳ್ಳಬೇಡಿ ಎಂದು ಕನ್ನಡಿಗರು ಮತ್ತು ಸರಕಾರಕ್ಕೆ ಎಚ್ಚರ …
Read More »ಮತ್ತೆ ಲಾಕ್‌ಡೌನ್ ಆಗದಿರಲಿ; ಸಾರ್ವಜನಿಕರ ಪಾತ್ರ ಮುಖ್ಯ
ನೆರೆಯ ಮಹಾರಾಷ್ಟ್ರದಲ್ಲಿ ಕೊರೊನಾ ಸೋಂಕು ಎಲ್ಲೆ ಮೀರುತ್ತಿದ್ದು, ಒಂದೊಂದೇ ಜಿಲ್ಲೆಗಳು ಲಾಕ್‌ಡೌನ್‌ಗೆ ಮೊರೆ ಹೋಗುತ್ತಿವೆ. ಕರ್ನಾಟಕದಲ್ಲಿ ಸದ್ಯಕ್ಕೆ ಅಂಥ ಪರಿಸ್ಥಿತಿ ಮೇಲ್ನೋಟಕ್ಕೆ ಕಾಣಿಸುತ್ತಿಲ್ಲವಾದರೂ ಇದು ಅಷ್ಟೊಂದು ಸರಳವಾದ ವಿಚಾರ ವಂತೂ ಅಲ್ಲ. ರಾಜ್ಯದಲ್ಲಿ ದಿನೇ ದಿನೆ ಕೊರೊನಾ ಪ್ರಕರಣಗಳು ಏರಿಕೆ ಯಾಗುತ್ತಿರುವುದನ್ನು ಗಮನಿಸಿದರೆ ನಾವು ಇನ್ನೊಮ್ಮೆ ಲಾಕ್‌ಡೌನ್‌ನತ್ತ ಮುಖ ಮಾಡದೆ ಇರುವಂತೆ ನೋಡಿಕೊಳ್ಳಬೇಕಾಗಿದೆ. ಇದನ್ನೇ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಒತ್ತಿ ಒತ್ತಿ ಹೇಳುತ್ತಿರುವುದು. ಸೂಕ್ತ ಮುಂಜಾಗ್ರತ ಕ್ರಮ ಕೈಗೊಳ್ಳುವ ಮೂಲಕ ನಾವು …
Read More »ಈ ಸಾಲಿನ ಬಜೆಟ್ ರಾಜ್ಯ ಆರ್ಥಿಕವಾಗಿ ದಿವಾಳಿಯಾಗಲಿದೆ: ಸಿದ್ದರಾಮಯ್ಯ
ಬೆಂಗಳೂರು: ಪ್ರಸಕ್ತ ಸಾಲಿನ ಬಜೆಟ್ ರಾಜ್ಯದ ಅಭಿವೃದ್ಧಿಗೆ ಸಂಪೂರ್ಣ ಮಾರಕವಾಗಿದೆ. ಕಾರಣ ಈ ಸಾಲಿನಲ್ಲಿ ರಾಜಸ್ವ ಆದಾಯಕ್ಕಿಂತ ರಾಜಸ್ವ ಖರ್ಚು ಹೆಚ್ಚಾಗುವ ಮೂಲಕ ಮೊದಲನೇ ಬಾರಿಗೆ ರಾಜಸ್ವ ಖೋತಾ ಅಥವಾ ರಾಜಸ್ವ ಕೊರತೆ ಉಂಟಾಗಿದೆ. 2004 ರ ನಂತರ ವಿತ್ತೀಯ ಹೊಣೆಗಾರಿಕೆ ನೀತಿಯನ್ನು ಕರ್ನಾಟಕ ಅಳವಡಿಸಿಕೊಂಡ ನಂತರದಲ್ಲಿ ಇಂಥದ್ದೊಂದು ರಾಜಸ್ವ ಕೊರತೆಯ ಬಜೆಟ್ ಈ ವರೆಗೆ ಮಂಡನೆಯಾಗಿರಲಿಲ್ಲ ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಟೀಕಿಸಿದ್ದಾರೆ. ವಿಧಾನಸಭೆಯಲ್ಲಿ ಬಜೆಟ್ …
Read More »ಪೆಟ್ರೋಲ್, ಡೀಸೆಲ್ ಜಿಎಸ್‌ಟಿ ವ್ಯಾಪ್ತಿಗೆ ಇಲ್ಲ: ನಿರ್ಮಲಾ ಸೀತಾರಾಮನ್
ನವದೆಹಲಿ: ಕಚ್ಚಾ ತೈಲ, ಪೆಟ್ರೋಲ್, ಡೀಸೆಲ್, ವಿಮಾನ ಇಂಧನ (ಎಟಿಎಫ್) ಮತ್ತು ನೈಸರ್ಗಿಕ ಅನಿಲವನ್ನು ಸರಕು ಮತ್ತು ಸೇವಾ ತೆರಿಗೆ (ಜಿಎಸ್‌ಟಿ) ವ್ಯಾಪ್ತಿಗೆ ತರುವ ಪ್ರಸ್ತಾವ ಈ ಹಂತದಲ್ಲಿ ಇಲ್ಲ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ತಿಳಿಸಿದ್ದಾರೆ. ‘ಈ ಉತ್ಪನ್ನಗಳನ್ನು ಜಿಎಸ್‌ಟಿ ವ್ಯವಸ್ಥೆಯ ಅಡಿ ತರುವುದು ಯಾವಾಗಿನಿಂದ ಎಂಬ ಬಗ್ಗೆ ಜಿಎಸ್‌ಟಿ ಮಂಡಳಿ ಶಿಫಾರಸು ಮಾಡಬೇಕು ಎಂದು ಕಾನೂನು ಹೇಳುತ್ತದೆ. ಆದರೆ, ರಾಜ್ಯಗಳಿಗೂ ಪ್ರಾತಿನಿಧ್ಯ ಇರುವ ಜಿಎಸ್‌ಟಿ …
Read More »ವಂಶವಾಹಿ ರಾಜಕಾರಣ ನಾಶ ಖಚಿತ
ದೇಶದಲ್ಲಿ ಈಗ “ಒಂದು ರಾಷ್ಟ್ರ ಒಂದು ಚುನಾವಣೆ’ ಎಂಬ ಪರಿಕಲ್ಪನೆ ಬಗ್ಗೆ ಚರ್ಚೆ ಆರಂಭವಾಗಿದೆ. ಈಚೆಗಷ್ಟೇ ರಾಜ್ಯ ವಿಧಾನಮಂಡಲಗಳಲ್ಲಿ ಈ ಬಗ್ಗೆ ಚರ್ಚೆಗೆ ಸಮಯ ನಿಗದಿಯಾಗಿತ್ತಾದರೂ, ವಿಪಕ್ಷಗಳ ವಿರೋಧದಿಂದ ಚರ್ಚೆ ಸಾಧ್ಯವಾಗಿಲ್ಲ. ಈ ಬಗ್ಗೆ “ಉದಯವಾಣಿ’ಯ ವೇದಿಕೆಯಲ್ಲಿ ರಾಜಕಾರಣಿಗಳು, ವಿಷಯ ತಜ್ಞರು ತಮ್ಮ ವಾದ ಮಂಡಿಸಲಿದ್ದಾರೆ. ದೃಷ್ಟಾರ ಮುಂದಿನ ಪೀಳಿಗೆಯ ಬಗ್ಗೆ ಯೋಚನೆ ಮಾಡಿದರೆ, ರಾಜಕೀಯ ನಾಯಕ ಕೇವಲ ಮುಂದಿನ ಚುನಾವಣೆ ಗೆಲ್ಲುವುದು ಹೇಗೆ ಎನ್ನುವುದನ್ನಷ್ಟೇ ಯೋಚಿಸುತ್ತಾನೆ. ಇದು ರಾಜಕೀಯ …
Read More »