ಬೆಂಗಳೂರು: ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ಸಚಿವ ಡಿ. ವಿ. ಸದಾನಂದಗೌಡ ಗುರುವಾರ ಡಾ. ಸಿ.ಎನ್. ಅಶ್ವತ್ಥ ನಾರಾಯಣ ಅವರ ಪದವಿ ಮುಂದಿರುವ ಉಪ ಹೋಗಿ ಆದಷ್ಟು ಬೇಗ ಮುಖ್ಯಮಂತ್ರಿಯಾಗಲಿ ಎಂಬ ಅಭಿಲಾಷೆ ವ್ಯಕ್ತಪಡಿಸಿದ್ದರು. ಈ ಹೇಳಿಕೆಯನ್ನೇ ದಾಳವನ್ನಾಗಿ ಮಾಡಿಕೊಂಡಿರುವ ಕಾಂಗ್ರೆಸ್, ಬಿಎಸ್ ಯಡಿಯೂರಪ್ಪ ಮುಕ್ತ ಬಿಜೆಪಿ ಸಿದ್ಧತೆ ಜೋರಾಗಿದೆ ಎಂದು ಅಭಿಪ್ರಾಯಪಟ್ಟಿದೆ. ಈ ಕುರಿತು ಟ್ವೀಟ್ ಮಾಡಿರುವ ರಾಜ್ಯ ಕಾಂಗ್ರೆಸ್ ಘಟಕ, ಸ್ವಪಕ್ಷದ ಶಾಸಕ ಬಸನಗೌಡ ಪಾಟೀಲ್ …
Read More »Yearly Archives: 2021
ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣ: ಐವರು ಎಸ್ ಐಟಿ ವಶಕ್ಕೆ!
ಬೆಂಗಳೂರು: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರ ರಾಸಲೀಲೆ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಚುರುಕುಗೊಂಡಿದ್ದು, ವಿಶೇಷ ತನಿಖಾ ತಂಡ(ಎಸ್‌ಐಟಿ) ಶಂಕಿತ ಐವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದೆ. ಸಾಮಾಜಿಕ ಕಾರ್ಯಕರ್ತ ದಿನೇಶ್ ಕಲ್ಲಹಳ್ಳಿ ಗೆ ಸಿಡಿ ನೀಡಿದ ಆರೋಪದಡಿ ಓರ್ವ ಯುವಕನನ್ನು ಸಿಐಡಿ ಕಚೇರಿಯಲ್ಲಿ ವಿಚಾರಣೆಗೆ ಒಳಪಡಿಸಲಾಗಿದೆ ಎಂದು ಎಸ್.ಐ.ಟಿ ಮೂಲಗಳು ತಿಳಿಸಿವೆ. ಐವರ ಕಾಲ್ ರೆಕಾರ್ಡ್ ಆಧಾರದ ಮೇಲೆ ಬೆಂಗಳೂರಿನ ಯಶವಂತಪುರದ ಓರ್ವ, ಚಾಮರಾಜಪೇಟೆಯಲ್ಲಿ ಒಬ್ಬ, ವಿಜಯನಗರದಲ್ಲಿ …
Read More »ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ ಐಟಿ ಮೊದಲ ದಿನವೇ ನಾಲ್ವರು ಆರೋಪಿಗಳನ್ನು ವಶಕ್
ಬೆಂಗಳೂರು: ಮಾಜಿ ಸಚಿವ ರಮೇಶ್ ಜಾರಕಿಹೊಳಿ ವಿರುದ್ಧದ ರಾಸಲೀಲೆ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸುತ್ತಿರುವ ಎಸ್ ಐಟಿ ಮೊದಲ ದಿನವೇ ನಾಲ್ವರು ಆರೋಪಿಗಳನ್ನು ವಶಕ್ಕೆ ಪಡೆದುಕೊಂಡಿದೆ. ಸಿಡಿ ಪ್ರಕರಣದಲ್ಲಿ ಭಾಗಿಯಾಗಿರುವ ಆರೋಪಕ್ಕೆ ಸಂಬಂಧಿಸಿದಂತೆ ಮೂವರು ಯುವಕರು ಹಾಗೂ ಓರ್ವ ಯುವತಿ ಸೇರಿದಂತೆ ಒಟ್ಟು ನಾಲ್ವರನ್ನು ಎಸ್ ಐಟಿ ಅಧಿಕಾರಿಗಳು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಬೆಂಗಳೂರಿನ ವಿಜಯನಗರ ಹಾಗೂ ಚಾಮರಾಜಪೇಟೆಯಲ್ಲಿ ರೂಂ ಮಾಡಿಕೊಂಡಿದ್ದ ಇಬ್ಬರು ಯುವಕರು ಹಾಗೂ ಚಿಕ್ಕಮಗಳೂರಿನ …
Read More »ಗೀತಾ ಶಿವರಾಜ್‌ಕುಮಾರ್ ಸಾಧಾರಣ ಮಹಿಳೆಯಲ್ಲ, ಅವರಿಗೆ ಸೂಕ್ತ ಸ್ಥಾನಮಾನ ನೀಡಬೇಕು: DK ಶಿವಕುಮಾರ್
ಅಧಿಕೃತವಾಗಿ ಕಾಂಗ್ರೆಸ್ ಸೇರಲಿರುವ ಮಾಜಿ ಶಾಸಕ ಮಧು ಬಂಗಾರಪ್ಪ ಅವರ ಜತೆ ಸದಾಶಿವನಗರದ ತಮ್ಮ ನಿವಾಸದಲ್ಲಿ ಶುಕ್ರವಾರ ಸಮಾಲೋಚನೆ ನಡೆಸಿದ ಬಳಿಕ ಅವರ ಜತೆ ಡಿಕೆ ಶಿವಕುಮಾರ್ ಜಂಟಿ ಪತ್ರಿಕಾಗೋಷ್ಠಿ ನಡೆಸಿದ್ದಾರೆ. ಪತ್ರಿಕಾಗೋಷ್ಟಿಯಲ್ಲಿ ಮಧು ಬಂಗಾರಪ್ಪ ಅವರು ತಮ್ಮ ಸಹೋದರಿ ಗೀತಾ ಶಿವರಾಜ್‌ಕುಮಾರ್ ಕಾಂಗ್ರೆಸ್ ಸೇರುವುದನ್ನು ಸ್ಪಷ್ಟಪಡಿಸಿದ್ದರು. ಈ ಕುರಿತು ಪ್ರತಿಕ್ರಿಯಿಸಿದ ಡಿಕೆ ಶಿವಕುಮಾರ್ ಗೀತಾ ಅವರು ಸಾಧಾರಣ ಮಹಿಳೆ ಅಲ್ಲ, ಅವರಿಗೆ ಸೂಕ್ತ ಗೌರವ ನೀಡಬೇಕು ಎಂದು ಹೇಳಿದ್ದಾರೆ. …
Read More »ರಮೇಶ್ ಜಾರಕಿಹೊಳಿ ಅವರಿಗೆ “ನಾನು ಧೈರ್ಯ ಹೇಳಿದ್ದು ನಿಜ: ಎಚ್ ಡಿ ರೇವಣ್ಣ
ಹಾಸನ, ಮಾರ್ಚ್.12: ಸಿಡಿ ಪ್ರಕರಣದಲ್ಲಿ ಸಿಲುಕಿರುವ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರಿಗೆ “ನಾನು ಧೈರ್ಯ ಹೇಳಿದ್ದು ನಿಜ ಕಣ್ರಿ.. ರಾಜಕಾರಣಿಗಳಿಗೆ ಮನುಷ್ಯತ್ವ ಇರಬೇಕು” ಎಂದು ಮಾಜಿ ಸಚಿವ ಎಚ್ ಡಿ ರೇವಣ್ಣ ಹೇಳಿದ್ದಾರೆ. ಹಾಸನದಲ್ಲಿ ಮಾತನಾಡಿದ ಮಾಜಿ ಸಚಿವ ಎಚ್ ಡಿ ರೇವಣ್ಣ, ನಾವು ಮೊದಲು ಮನುಷ್ಯತ್ವನ್ನು ಹೊಂದಿರಬೇಕು ಎಂದರು. ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರು ಬಹಳ ಕಷ್ಟಪಟ್ಟು ಮೇಲೆ ಬಂದವರು. ಒಳ್ಳೆಯದ್ದು ಮತ್ತು ಕೆಟ್ಟದ್ದನ್ನು ದೇವರಿಗೆ …
Read More »ಸಹೋದರನ ಹಾದಿಯನ್ನೇ ಹಿಡಿದ ಗೀತಾ ಶಿವರಾಜ್ ಕುಮಾರ್ ಕಾಂಗ್ರೆಸಗೆ ಸೇರ್ಪಡೆ…
ನಟ, ರಾಜಕಾರಣಿ ಮಧು ಬಂಗಾರಪ್ಪ ಅವರು ಜೆಡಿಎಸ್ ತೊರೆದು ಕಾಂಗ್ರೆಸ್ ಕೈಹಿಡಿದಿದ್ದಾರೆ. ಕೆಲವೇ ದಿನಗಳಲ್ಲಿ ಅಧಿಕೃತವಾಗಿ ಕಾಂಗ್ರೆಸ್ ಸೇರ್ಪಡೆ ಆಗಲಿದ್ದಾರೆ. ಈ ನಡುವೆ ಸಹೋದರನ ಹಾದಿಯನ್ನೇ ಅಕ್ಕ ಗೀತಾ ಶಿವರಾಜ್ ಕುಮಾರ್ ಸಹ ಹಿಡಿಯಲಿದ್ದಾರೆ ಎನ್ನಲಾಗುತ್ತಿದೆ. ನಟ ಶಿವರಾಜ್ ಕುಮಾರ್ ಅವರ ಪತ್ನಿ, ಜೆಡಿಎಸ್ ಸದಸ್ಯೆ ಗೀತಾ ಶಿವರಾಜ್ ಕುಮಾರ್ ಅವರು ಸಹ ಕಾಂಗ್ರೆಸ್‌ಗೆ ಹೋಗಲಿದ್ದಾರೆ ಎನ್ನುವ ಸುದ್ದಿ ಬಲವಾಗಿ ಕೇಳಿ ಬರುತ್ತಿದೆ. ಸದಾಶಿವನಗರದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಈ ಬಗ್ಗೆ …
Read More »ಬೆಂಗಳೂರಿನಲ್ಲಿ ನಿರ್ಮಾಣವಾಗಲಿದೆ 100 ಅಡಿ ಅಗಲದ ಜಲಪಾತ
ಬೆಂಗಳೂರು, ಮಾರ್ಚ್ 11: ಐಟಿ ಸಿಟಿ, ಕರ್ನಾಟಕ ರಾಜಧಾನಿ ಬೆಂಗಳೂರಿನಲ್ಲಿ ಜಲಪಾತವೊಂದು ಸೃಷ್ಟಿಯಾಗಲಿದ್ದು, ಉಪ ಮುಖ್ಯಮಂತ್ರಿ ಡಾ.ಸಿ.ಎನ್ ಅಶ್ವಥ್ ನಾರಾಯಣ ಅವರು ಮಹಾ ಶಿವರಾತ್ರಿ ದಿನದಂದು ಆ ಯೋಜನೆ ಕುರಿತು ಅಧಿಕಾರಿಗಳ ಜೊತೆ ಚರ್ಚೆ ನಡೆಸಿದರು. ಉದ್ಯಾನನಗರಿ ಬೆಂಗಳೂರಿನ ಮಲ್ಲೇಶ್ವರದಲ್ಲಿರುವ ಸ್ಯಾಂಕಿ ಕೆರೆಯ ಈಜುಕೊಳದ ಪಕ್ಕದಲ್ಲಿ ಜಲಪಾತ ನಿರ್ಮಿಸುವ ಸಂಬಂಧ ಉಪ ಮುಖ್ಯಮಂತ್ರಿ ಅಶ್ವಥ್ ನಾರಾಯಣ ಅವರು ಸ್ಥಳ ಪರಿಶೀಲನೆ ನಡೆಸಿದರು. ಈ ಮೂಲಕ ಬೆಂಗಳೂರಿನಲ್ಲಿ ಇದೇ ಮೊದಲ ಬಾರಿಗೆ …
Read More »ಕರ್ನಾಟಕ ಪ್ರವೇಶಿಸಲು ಕೋವಿಡ್ ಟೆಸ್ಟ್ ನೆಗೆಟಿವ್ ರಿಪೋರ್ಟ್ ಕಡ್ಡಾಯ
ಮಂಗಳೂರು, ಮಾರ್ಚ್ 11: ಕೇರಳದಿಂದ ಮಂಗಳೂರಿಗೆ ತೆರಳುವವರು ಆರ್‌ಟಿ-ಪಿಸಿಆರ್ ನೆಗೆಟಿವ್ ಸರ್ಟಿಫಿಕೇಟ್ ಹೊಂದಿರಬೇಕೆಂದು ದಕ್ಷಿಣ ಕನ್ನಡ ಆರೋಗ್ಯ ಮತ್ತು ಕುಟುಂಬ ಆರೋಗ್ಯ ಕಚೇರಿಯು ಕಾಸರಗೋಡು ಜಿಲ್ಲಾ ವೈದ್ಯಾಧಿಕಾರಿಗೆ ಪತ್ರ ಬರೆದಿದೆ. ಕೇರಳದಿಂದ ಕರ್ನಾಟಕ ಪ್ರವೇಶಿಸುವರು ಕಡ್ಡಾಯವಾಗಿ ಕೋವಿಡ್ ನೆಗೆಟಿವ್ ಸರ್ಟಿಫಿಕೆಟ್ ಹೊಂದಿರಬೇಕು, ಈ ಬಗ್ಗೆ ಈಗಾಗಲೇ ಪ್ರಚಾರ ನೀಡಲಾಗಿದ್ದು, ಆದರೆ ಸಾರ್ವಜನಿಕರು ಈ ಕುರಿತು ಸರಿಯಾದ ರೀತಿಯಲ್ಲಿ ಪ್ರತಿಕ್ರಿಯಿಸುತ್ತಿಲ್ಲ ಎಂದು ಪತ್ರದಲ್ಲಿ ಹೇಳಲಾಗಿದೆ. ಆದ್ದರಿಂದ ಕಾಸರಗೋಡು ಜಿಲ್ಲಾ ವೈದ್ಯಾಧಿಕಾರಿ ಮೂಲಕ …
Read More »ಬ್ಯಾಂಕ್ ಕೆಲಸ ಇದ್ರೆ ಇಂದೇ ಮುಗಿಸಿಕೊಳ್ಳಿ.. ನಾಳೆಯಿಂದ 4 ದಿನ ತೆರೆಯಲ್ಲ ಬಾಗಿಲು
ನವದೆಹಲಿ: ನಿಮಗೇನಾದರೂ ಬ್ಯಾಂಕ್ನಲ್ಲಿ ಕೆಲಸಗಳಿದ್ದರೆ ಇಂದೇ ಮುಗಿಸಿಕೊಂಡುಬಿಡಿ.. ಯಾಕಂದ್ರೆ ನಾಳೆಯಿಂದ 4 ದಿನಗಳ ಕಾಲ ಬ್ಯಾಂಕ್ಗಳು ಬಾಗಿಲು ತೆರೆಯಲ್ಲ. ಯುನೈಟೆಡ್ ಫೋರಂ ಆಫ್ ಬ್ಯಾಂಕ್ ಯೂನಿಯನ್ಸ್, ಮಾರ್ಚ್ 15 ಮತ್ತು 16ರಂದು ಭಾರತದಾದ್ಯಂತ ಬ್ಯಾಂಕ್ ಬಂದ್ ಮಾಡುವಂತೆ ಕರೆ ನೀಡಿದೆ. ಕೇಂದ್ರ ಸರ್ಕಾರ ಈಗಾಗಲೇ ಹಲವು ಬ್ಯಾಂಕ್ಗಳನ್ನ ಖಾಸಗೀಕರಣ ಮಾಡಿದೆ, ಇನ್ನು ಹಲವು ಬ್ಯಾಂಕ್ಗಳನ್ನ ಖಾಸಗೀಕರಣ ಮಾಡುವುದಾಗಿ ತಿಳಿಸಿದೆ. ಈ ವಿಚಾರವಾಗಿ ಆಕ್ರೋಶಗೊಂಡಿರುವ ಯುನೈಟೆಡ್ ಫೋರಂ ಆಫ್ ಬ್ಯಾಂಕ್ ಯೂನಿಯನ್ಸ್, …
Read More »ಮಹಾರಾಷ್ಟ್ರದಲ್ಲಿ ದಿನೇ ದಿನೇ ಹೆಚ್ಚುತ್ತಿದೆ ಕೊರೊನಾ; ದೇಶದ ಅರ್ಧಕ್ಕಿಂತ ಹೆಚ್ಚು ಕೇಸ್ ಒಂದೇ ರಾಜ್ಯದಲ್ಲಿ ದಾಖಲು
ಮಹಾರಾಷ್ಟ್ರ: ನೆರೆರಾಜ್ಯ ಮಹಾರಾಷ್ಟ್ರದಲ್ಲಿ ದಿನೇ ದಿನೇ ಕೊರೊನಾ ಪ್ರಕರಣಗಳು ಹೆಚ್ಚಾಗುತ್ತಲೇ ಇವೆ. ಈಗಾಗಲೇ ದೇಶದ ಅರ್ಧಕ್ಕಿಂತ ಹೆಚ್ಚು ಪ್ರಕರಣಗಳು ಇದೊಂದೇ ರಾಜ್ಯದಲ್ಲಿ ದಾಖಲಾಗಿದ್ದು, ರಾಜ್ಯದ ಜನತೆಯಲ್ಲಿ ಆತಂಕ ಮೂಡುವಂತಾಗಿದೆ. ಮೊನ್ನೆ ಸುಮಾರು13,000 ನಿನ್ನೆ ಸುಮಾರು 14,000 ಕೊರೊನಾ ಪ್ರಕರಣಗಳು ದಾಖಲಾಗಿದೆ ಎಂದು ಕೇಂದ್ರ ಆರೋಗ್ಯ ಇಲಾಖೆ ತಿಳಿಸಿದೆ. ದೇಶದ ಅರ್ಧಕ್ಕಿಂತ ಹೆಚ್ಚು ಕೇಸ್ಗಳು ಇದೊಂದೇ ರಾಜ್ಯದಲ್ಲಿ ದಾಖಲಾಗಲು ಮೂರು ಮುಖ್ಯ ಕಾರಣಗಳನ್ನ ಆರೋಗ್ಯ ಇಲಾಖೆ ತಿಳಿಸಿದೆ. ಕಡಿಮೆ ಟೆಸ್ಟಿಂಗ್ :- …
Read More »