Breaking News

Yearly Archives: 2021

ಎಸಿಬಿ ಅಧಿಕಾರಿಗಳಿಂದ ಪೊಲೀಸ್ ಇನ್ಸ್‌ಪೆಕ್ಟರ್ ವಿಕ್ಟರ್ ಸೈಮನ್ ಬಂಧನ

ಬೆಂಗಳೂರು: ಆದಾಯಕ್ಕಿಂತ ಹೆಚ್ಚು ಆಸ್ತಿ ಹೊಂದಿರುವ ಆರೋಪದ ಮೇಲೆ ದಾಳಿಗೊಳಗಾಗಿದ್ದ ಬೆಂಗಳೂರು ಮಹಾನಗರ ಕಾರ್ಯಪಡೆ (ಬಿಎಂಟಿಎಫ್) ಪೊಲೀಸ್ ಇನ್ಸ್‌ಪೆಕ್ಟರ್ ವಿಕ್ಟರ್ ಸೈಮನ್ ಅವರನ್ನು ಭ್ರಷ್ಟಾಚಾರ ನಿಗ್ರಹ ದಳದ (ಎಸಿಬಿ) ಅಧಿಕಾರಿಗಳು ಬುಧವಾರ ಬಂಧಿಸಿದ್ದಾರೆ. ಮಂಗಳವಾರ ವಿಕ್ಟರ್ ಸೈಮನ್ ಅವರ ಮನೆ ಮತ್ತು ಇತರ ಕೆಲವು ಸ್ಥಳಗಳ ಮೇಲೆ ಎಸಿಬಿ ದಾಳಿ ನಡೆದಿತ್ತು. ಮನೆಯಲ್ಲಿ ₹1 ಕೋಟಿ ಮೌಲ್ಯದ ಬಾಂಡ್ ಪೇಪರ್ ಸೇರಿದಂತೆ ಅಪಾರ ಪ್ರಮಾಣದ ಆಸ್ತಿ ಪತ್ತೆಯಾಗಿತ್ತು. ‘ಇನ್ನೂ ಕೆಲವು …

Read More »

ರಾಜ್ಯದಲ್ಲಿ 2.28 ಲಕ್ಷ ಬಿಪಿಎಲ್‌ ಪಡಿತರ ಚೀಟಿ ರದ್ದು: ಸಚಿವ ಉಮೇಶ್‌ ಕತ್ತಿ

ಬೆಂಗಳೂರು: ರಾಜ್ಯದಲ್ಲಿ 2,28,188 ಅನರ್ಹ ಬಿಪಿಎಲ್‌ ಪಡಿತರ ಚೀಟಿಗಳನ್ನು ಪತ್ತೆ ಮಾಡಿ ರದ್ದುಪಡಿಸಲಾಗಿದೆ. ಅರ್ಹತೆ ಇಲ್ಲದೆ ಬಿಪಿಎಲ್‌ ಪಡಿತರ ಚೀಟಿ ಪಡೆದಿದ್ದ ವ್ಯಕ್ತಿಗಳಿಂದ ₹ 3.07 ಕೋಟಿ ದಂಡ ವಸೂಲಿ ಮಾಡಲಾಗಿದೆ ಎಂದು ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಉಮೇಶ್ ಕತ್ತಿ ತಿಳಿಸಿದರು. ಮಂಗಳವಾರ ವಿಧಾನ ಪರಿಷತ್‌ನಲ್ಲಿ ಕಾಂಗ್ರೆಸ್‌ನ ಪಿ.ಆರ್‌. ರಮೇಶ್‌ ಪ್ರಶ್ನೆಗೆ ಉತ್ತರಿಸಿದ ಸಚಿವರು, ‘ರಾಜ್ಯದಲ್ಲಿ 10.90 ಲಕ್ಷ ಅಂತ್ಯೋದಯ ಅನ್ನ ಯೋಜನೆ ಪಡಿತರ ಚೀಟಿಗಳು ಮತ್ತು …

Read More »

ನಕಲಿ ಸಿ.ಡಿ ತಯಾರಿಸಿದ್ದು ಕಾಂಗ್ರೆಸಿನ ಕೆಲವು ‘ಮನೆಹಾಳ’ ನಾಯಕರು: ಸಚಿವ ಸೋಮಶೇಖರ್

ಬೆಂಗಳೂರು: ‘ಸಮ್ಮಿಶ್ರ ಸರ್ಕಾರ’ದ ಪತನಕ್ಕೆ ಕಾರಣರಾದವರ ರಾಜಕೀಯ ಜೀವನ ಮುಗಿಸಲು ಕಾಂಗ್ರೆಸ್‌ ಪಿತೂರಿ ಮಾಡಿದ್ದು, ಅದರ ಭಾಗವಾಗಿಯೇ ರಮೇಶ ಜಾರಕಿಹೊಳಿ ಅವರ ತೇಜೋವಧೆಯ ಸಿ.ಡಿ ಬಿಡುಗಡೆ ಆಗಿದೆ ಎಂದು ಸಹಕಾರ ಸಚಿವ ಎಸ್‌.ಟಿ.ಸೋಮಶೇಖರ್‌ ದೂರಿದರು. ‘ನಕಲಿ ಸಿ.ಡಿ ತಯಾರಿಸಿದ್ದು ನೂರಕ್ಕೆ ನೂರರಷ್ಟು ಆ ಪಕ್ಷದಲ್ಲಿರುವ ಕೆಲವು ಮನೆಹಾಳ ನಾಯಕರೇ’ ಎಂದು ಹೇಳಿದ ಅವರು, ’20 ವರ್ಷಕ್ಕೂ ಹೆಚ್ಚು ಕಾಲ ಕಾಂಗ್ರೆಸ್‌ನಲ್ಲಿದ್ದ ನನಗೆ ಆ ಪಕ್ಷದ ಮಹಾನ್‌ ನಾಯಕರ ನೈತಿಕತೆ- ಅನೈತಿಕತೆಯ …

Read More »

ಸಚಿವರ ಸಾಮೂಹಿಕ ಗೈರು: ಪರಿಷತ್ ಕಲಾಪ ಸೋಮವಾರಕ್ಕೆ ಮುಂದೂಡಿಕೆ ‘

ಬೆಂಗಳೂರು: ಕಲಾಪದಲ್ಲಿ ಭಾಗವಹಿಸಬೇಕಿದ್ದ ಸಚಿವರು ಸಾಮೂಹಿಕವಾಗಿ ಗೈರಾಗಿದ್ದರಿಂದ ಬುಧವಾರ ಮಧ್ಯಾಹ್ನದ ಬಳಿಕ ವಿಧಾನ ಪರಿಷತ್ ಕಲಾಪ ನಡೆಯಲಿಲ್ಲ. ಮಧ್ಯಾಹ್ನ 1.45ಕ್ಕೆ ಗಂಟೆಗೆ ಸದನದ ಕೋರಂ ಬೆಲ್ ಹಾಕಲಾಯಿತು. 15 ನಿಮಿಷಗಳ ಬಳಿಕ ಕಲಾಪ ಆರಂಭವಾಯಿತು. ಆದರೆ, ಸಭಾ ನಾಯಕ‌ ಕೋಟ ಶ್ರೀನಿವಾಸ ಪೂಜಾರಿ ಮತ್ತು ಕೆಲವು ಸದಸ್ಯರು ಮಾತ್ರ ಆಡಳಿತ ಪಕ್ಷದ ಸಾಲಿನಲ್ಲಿದ್ದರು. ಸಚಿವರಾದ ಎಂ.ಟಿ.ಬಿ. ನಾಗರಾಜ್, ಕೆ. ಗೋಪಾಲಯ್ಯ, ಸಿ.ಸಿ. ಪಾಟೀಲ, ಮುರುಗೇಶ ನಿರಾಣಿ, ಸಿ.ಪಿ. ಯೋಗೇಶ್ವರ ಹಾಜರಿರಬೇಕಿತ್ತು. …

Read More »

ಅರಣ್ಯ ಇಲಾಖೆ ಬೋನಿಗೆ ಸೆರೆಸಿಕ್ಕ ಚಿರತೆ

ಶಿಕಾರಿಪುರ: ತಾಲ್ಲೂಕಿನ ಮದಗಹಾರನಹಳ್ಳಿ ಗ್ರಾಮದ ಸಮೀಪ ಅರಣ್ಯ ಇಲಾಖೆ ಸಂಗ್ರಹಿಸಿಟ್ಟಿದ ಬೋನಿನಲ್ಲಿ ಬುಧವಾರ ಮುಂಜಾನೆ ಚಿರತೆ ಸೆರೆ ಸಿಕ್ಕಿದೆ. ಗ್ರಾಮದ ಸುತ್ತಲೂ ಚಿರತೆ ಓಡಾಡುತ್ತಿದೆ ಎಂಬ ಮಾಹಿತಿಯನ್ನು ಕೆಲವು ದಿನಗಳ ಹಿಂದೆ ಗ್ರಾಮಸ್ಥರು ಅರಣ್ಯ ಇಲಾಖೆ ಅಧಿಕಾರಿಗಳಿಗೆ ನೀಡಿದ್ದರು. ಗ್ರಾಮಸ್ಥರ ಮಾಹಿತಿ ಆಧಾರದ ಮೇಲೆ ಸಹಾಯಕ ಅರಣ್ಯ ಸಂರಕ್ಷಣಾ ಅಧಿಕಾರಿ ಗೋಪ್ಯಾನಾಯ್ಕ ಮಾರ್ಗದರ್ಶನದಲ್ಲಿ ಕಾರ್ಯಾಚರಣೆ ನಡೆಸುತ್ತಿದ್ದ ಅಧಿಕಾರಿಗಳು ಚಿರತೆ ಚಲನವಲನ ಗಮನಿಸಿ ಎರಡು ದಿನಗಳ ಹಿಂದೆ ಗ್ರಾಮ ಸಮೀಪವೇ ನಾಯಿ …

Read More »

ಸದನದಲ್ಲಿ ಆಡಳಿತ ಪಕ್ಷದ ಶಾಸಕರಿಂದಲೇ ಮೀಸಲಾತಿ ಕದನ

ಬೆಂಗಳೂರು, ಮಾ.10- ಲಿಂಗಾಯತ ಪಂಚಮಸಾಲಿ ಸಮುದಾಯವನ್ನು 2ಎಗೆ ಸೇರ್ಪಡೆ ಮಾಡುವ ಕುರಿತಾಗಿ ಆಡಳಿತ ಪಕ್ಷದ ಸದಸ್ಯರ ನಡುವೆಯೇ ವಾಗ್ವಾದ ನಡೆಯಿತು. ಶಾಸಕ ಬಸವನಗೌಡ ಪಾಟೀಲ್ ವಿಷಯ ಪ್ರಸ್ತಾಪಿಸಿ ನಾವು ಅನೇಕ ದಿನಗಳಿಂದ ಮೀಸಲಾತಿ ಗಾಗಿ ಹೋರಾಟ ಮಾಡುತ್ತಿದ್ದೇವೆ. ಸರ್ಕಾರದಿಂದ ನಮಗೆ ಯಾವುದೇ ರೀತಿಯ ಸ್ಪಷ್ಟ ಭರವಸೆ ಸಿಗುತ್ತಿಲ್ಲ. ಮೀಸಲಾತಿ ಕೊಡುತ್ತೀರೋ, ಇಲ್ಲವೋ ಎಂಬುದನ್ನು ಸದನದಲ್ಲೇ ಸ್ಪಷ್ಟವಾಗಿ ತಿಳಿಸಿ ಎಂದು ಒತ್ತಾಯಿಸಿದರು. ಸದನದಲ್ಲಿ ಇಂದು ಚರ್ಚೆಗೆ ಅವಕಾಶ ಕೊಡುತ್ತೇವೆ ಎಂದಿದ್ದೀರಿ. ಮುಖ್ಯಮಂತ್ರಿಗಳು …

Read More »

ರಮೇಶ್ ಜಾರಕಿಹೊಳಿ ಸಿಡಿ ಬಗ್ಗೆ ಹೊಸ ಬಾಂಬ್ ಸಿಡಿಸಿದ ಸಚಿವ ಸೋಮಶೇಖರ್

ಬೆಂಗಳೂರು: ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣದ ಹಿಂದೆ ಕಾಂಗ್ರೆಸ್ ಕೈವಾಡವಿದೆ ಎಂದು ಮಾಜಿ ಸಚಿವ ಎಸ್.ಟಿ.ಸೋಮಶೇಖರ್ ನೇರವಾಗಿ ಆರೋಪಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಎಸ್.ಟಿ.ಸೋಮಶೇಖರ್, ರಮೇಶ್ ಜಾರಕಿಹೊಳಿ ಸಿಡಿ ಮಾಡಿದ್ದು ಕಾಂಗ್ರೆಸ್ ನವರೇ. ನಾನೂ ಕೂಡ ಕಾಂಗ್ರೆಸ್ ನಲ್ಲಿ 20 ವರ್ಷಗಳ ಕಾಲ ಇದ್ದೆ. ಹಾಗಾಗಿ ಕಾಂಗ್ರೆಸ್ ನವರು ಏನೆಲ್ಲಾ ಮಾಡುತ್ತಾರೆ ಎಂಬುದು ನನಗೂ ಗೊತ್ತು. ಇಂಥ ಮನೆ ಹಾಳ ಕೆಲಸ ಮಾಡುವುದು ಅವರೇ ಎಂದು ಹೇಳಿದ್ದಾರೆ. ಸಿಡಿ ಕೇಸ್ ನ್ನು …

Read More »

ರಮೇಶ್ ಜಾರಕಿಹೊಳಿ ಖಾತೆಯ ಮೇಲೆ ಎಲ್ಲರ ಕಣ್ಣು..

ರಮೇಶ ಜಾರಕಿಹೊಳಿಯಿಂದ ತೆರವಾದ ಜಲಸಂಪನ್ಮೂಲ ಖಾತೆ ಮೇಲೆ ಹಲವು ಸಚಿವರ ಕಣ್ ಬೆಂಗಳೂರು: ಮಾಜಿ ಸಚಿವ ರಮೇಶ ಜಾರಕಿಹೊಳಿ ಅವರ ರಾಜೀನಾಮೆಯಿಂದ ತೆರವಾಗಿರುವ ಜಲಸಂಪನ್ಮೂಲ ಖಾತೆ ಮೇಲೆ ಹಲವು ಸಚಿವರು ಕಣ್ಣಿಟ್ಟಿದ್ದಾರೆ. ರಮೇಶ್ ಜಾರಕಿಹೊಳಿ ತಮ್ಮ ಸ್ಥಾನಕ್ಕೆ ರಾಜೀನಾಮೆ ಕೊಡುತ್ತಿದ್ದಂತೆ ಬೃಹತ್ ನೀರಾವರಿ ಖಾತೆ ಮೇಲೆ ಮೊದಲಿನಿಂದಲೂ ಕಣ್ಣಿಟ್ಟಿದ್ದ ಆಕಾಂಕ್ಷಿಗಳು ಸಿಎಂ ಬಳಿ ತಮಗೇ ಖಾತೆ ನೀಡುವಂತೆ ಲಾಬಿ ನಡೆಸಿದ್ದಾರೆ. ಪ್ರಬಲ ಆಕಾಂಕ್ಷಿಗಳು: ಮೊದಲಿನಿಂದಲೂ ನೀರಾವರಿ ಖಾತೆ ಮೇಲೆ ಕಣ್ಣಿಟ್ಟಿದ್ದ …

Read More »

ಸರ್ಕಾರದ ಮೇಲೆ ಅಶೋಕ್ ಪೂಜಾರಿ ಗಂಭೀರ್ ಆರೋಪ..

ಓರ್ವ ಜವಾಬ್ದಾರಿಯುತ ಹಿರಿಯ ಸಚಿವ ರಾಸಲೀಲೆ ಸಿಡಿ ಹಗರಣದಲ್ಲಿ ರಾಜೀನಾಮೆ ಕೊಟ್ಟಿದ್ದಾರೆ ಎಂದರೆ ಅದು ಸಣ್ಣ ವಿಷಯ ಅಲ್ಲ. ಸರ್ಕಾರ ಇದನ್ನು ಗಂಭೀರವಾಗಿ ಪರಿಗಣಿಸಬೇಕಿತ್ತು. ಆದರೆ ಸರ್ಕಾರ ಈವರೆಗೂ ಗಂಭೀರವಾಗಿ ಪರಿಗಣಿಸಿಲ್ಲ ಎಂದು ಜೆಡಿಎಸ್ ಮುಖಂಡ ಅಶೋಕ್ ಪೂಜಾರಿ ಗಂಭೀರ ಆರೋಪ ಮಾಡಿದರು. ಬುಧವಾರ ಬೆಳಗಾವಿಯಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅಶೋಕ ಪೂಜಾರಿ ರಮೇಶ ಜಾರಕಿಹೊಳಿ ಹಾಗೂ ಬಾಲಚಂದ್ರ ಜಾರಕಿಹೊಳಿ ಅವರು ಸಂಪೂರ್ಣವಾಗಿ ಇದು ಫೇಕ್ ವಿಡಿಯೋ ಇದೆ ಎಂದು …

Read More »

2020ರಲ್ಲಿ ದೇಶದ 10 ಸಾವಿರ ಕಂಪನಿಗಳು ಬಂದ್! ಕರ್ನಾಟಕದಲ್ಲಿ ಎಷ್ಟು ಗೊತ್ತಾ?

ನವದೆಹಲಿ : 2020ರ ಏಪ್ರಿಲ್ ನಿಂದ ಈ ವರ್ಷದ ಫೆಬ್ರವರಿವರೆಗೆ ದೇಶದಲ್ಲಿ 10,000 ಕ್ಕೂ ಹೆಚ್ಚು ಕಂಪನಿಗಳು ಸ್ವಯಂ ಪ್ರೇರಿತವಾಗಿ ಬಂದ್ ಆಗಿವೆ ಎಂದು ಕೇಂದ್ರ ಸರ್ಕಾರ ಮಾಹಿತಿ ನೀಡಿದೆ. ಕಾರ್ಪೊರೇಟ್ ವ್ಯವಹಾರಗಳ ಸಚಿವಾಲಯ (ಎಂಸಿಎ) ಲಭ್ಯವಿರುವ ಇತ್ತೀಚಿನ ದತ್ತಾಂಶದ ಪ್ರಕಾರ, ಪ್ರಸಕ್ತ ಹಣಕಾಸು ವರ್ಷದಲ್ಲಿ ಫೆಬ್ರವರಿವರೆಗೆ ಒಟ್ಟು 10,113 ಕಂಪನಿಗಳು ಕಂಪನಿಗಳ ಕಾಯ್ದೆ 2013ರ ಸೆಕ್ಷನ್ 248(2) ರ ಅಡಿಯಲ್ಲಿ ಸ್ಥಗಿತವಾಗಿವೆ.ಸೆಕ್ಷನ್ 248(2) ಪ್ರಕಾರ ಕಂಪನಿಗಳು ಸ್ವಯಂ ಪ್ರೇರಿತವಾಗಿ …

Read More »