ಬೆಂಗಳೂರು: 11 ತಿಂಗಳ ಕಂದಮ್ಮನಿಗೆ ಆಪತ್ತು ಎದುರಾಗಿದೆ. ಹೆತ್ತವರಿಗೆ ಖುಷಿಯೇ ಇಲ್ಲದಂತಾಗಿದೆ. ಮಗುವಿನ ಮುಖ ನೋಡಿ ನಿತ್ಯ ಕಣ್ಣೀರಿಡುವಂತಾಗಿದೆ. ಯಾಕಂದ್ರೆ ಇಡೀ ವೈದ್ಯಲೋಕ.. ಇಡೀ ಜಗತ್ತೇ ದಂಗಾಗುವಂಥಾ ಸಮಸ್ಯೆಗೆ ತುತ್ತಾಗಿದೆ. 11 ತಿಂಗಳ ಕಂದ ಜನೀಶ್. ಸಂಜೀವಿನಿ ನಗರದ ನಿವಾಸಿಗಳಾಗಿರುವ ನವೀನ್ಕುಮಾರ್-ಜ್ಯೋತಿ ದಂಪತಿ ಪುತ್ರ. ಕುಟುಂಬದ ಪರಿಸ್ಥಿತಿಯೂ ಅಷ್ಟೇನು ಚೆನ್ನಾಗಿಲ್ಲ. ಇಂಥಾದ್ರ ಮಧ್ಯೆ ಮಗುವಿಗೆ ಜೀನ್ ಸಮಸ್ಯೆ ಕಾಣಿಸಿಕೊಂಡಿದೆ. ಸ್ಪೈನಲ್ ಮಸ್ಕ್ಯೂಲರ್ ಆಟ್ರೋಪಿ (Spinal Muscular Atrophy) ಅಂದ್ರೆ, ಬೆನ್ನು …
Read More »Yearly Archives: 2021
ಬಜೆಟ್‌ನಲ್ಲಿ ಸಾರಿಗೆ ನೌಕರರ ಬೇಡಿಕೆಗಳಿಗೆ ಎಳ್ಳು ನೀರು ..?
ಬೆಂಗಳೂರು: ಮಾರ್ಚ್ 8ರಂದು ಹಣಕಾಸು ಸಚಿವರೂ ಆದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮಂಡಿಸಿದ ಬಜೆಟ್‌ನಲ್ಲಿ ಪ್ರಸ್ತಾಪವೇ ಆಗದ 6 ನೇ ವೇತನ ಆಯೋಗ ವಿಚಾರಕ್ಕೆ ಸಂಬಂಧಿಸಿದಂತೆ. ಇದೇ ತಿಂಗಳ 16ನೇ ತಾರೀಕಿನಂದು ಮತ್ತೆ ಮುಷ್ಕರ ಕೈಗೊಳ್ಳುವಂತೆ ಸಾರಿಗೆ ನೌಕಕರು ಮುಂದಾಗಿದ್ದಾರೆ. ಈ ಕುರಿತಂತೆ ಇಂದು ಸಾರಿಗೆ ನೌಕರರ ಕೂಟದ ಅಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ನೇತೃತ್ವದಲ್ಲಿ ಮಹತ್ವದ ಸಭೆ ನಡೆಸಲಿದ್ದಾರೆ. ಡಿಸೆಂಬರ್ ತಿಂಗಳಿನಲ್ಲಿ ನಾಲ್ಕು ದಿನಗಳ ಕಾಲ ಸಾರಿಗೆ ನೌಕರರ ಮುಷ್ಕರ ನಡೆಸಲಾಗಿತ್ತು. …
Read More »ದೇಶೀಯ ವಿಮಾನಯಾನ: ಪ್ರಯಾಣಿಕರ ಸಂಖ್ಯೆ ಕುಸಿತ
ನವದೆಹಲಿ: ದೇಶದಲ್ಲಿ ಕಳೆದ ತಿಂಗಳು ವಿಮಾನಯಾನ ಕೈಗೊಳ್ಳುವವರ ಸಂಖ್ಯೆಯಲ್ಲಿ ಭಾರಿ ಇಳಿಕೆಯಾಗಿದೆ ಎಂದು ಡಿಜಿಸಿಎ ವರದಿ ಆಧರಿಸಿ ಐಸಿಆರ್‌ಎ ಹೇಳಿದೆ. ಪ್ರಯಾಣ ನಿರ್ಬಂಧ ಮತ್ತು ವಿಮಾನ ಪ್ರಯಾಣದಲ್ಲಿ ಇರುವ ಕೆಲವೊಂದು ನಿಯಮಗಳಿಂದಾಗಿ ಪ್ರಯಾಣಿಕರ ಸಂಖ್ಯೆಯಲ್ಲಿ ಇಳಿಕೆಯಾಗಿದ್ದು, ಫೆಬ್ರುವರಿ ತಿಂಗಳಿನಲ್ಲಿ ಒಟ್ಟಾರೆ ಶೇ 37 ಕುಸಿತ ಕಂಡುಬಂದಿದೆ ಎಂದು ವರದಿಯಾಗಿದೆ. ಫೆಬ್ರುವರಿ ತಿಂಗಳಿನಲ್ಲಿ ದೇಶೀಯ ವಿಮಾನದಲ್ಲಿ ಒಟ್ಟು 78 ಲಕ್ಷ ಮಂದಿ ಪ್ರಯಾಣಿಸಿದ್ದಾರೆ. ಆದರೆ ಜನವರಿ 2021ಕ್ಕೆ ಹೋಲಿಸಿದರೆ ಸ್ವಲ್ಪ ಪ್ರಮಾಣದಲ್ಲಿ …
Read More »ರಾಜ್ಯ ಬಜೆಟ್: ಕೋವಿಡ್ ಕಾಲದ ಕೊರತೆ ನೀಗಿಸಲು ಆರೋಗ್ಯ ಕ್ಷೇತ್ರಕ್ಕೆ ಹಲವು ಯೋಜನೆಗಳು
ಬೆಂಗಳೂರು: ಕೊರೊನಾ ಸೇರಿದಂತೆ ಸಾಂಕ್ರಾಮಿಕ ರೋಗಗಳ ಸಂದರ್ಭದಲ್ಲಿ ಎದುರಾಗುವ ತೀವ್ರ ನಿಗಾ ಘಟಕಗಳ (ಐಸಿಯು) ಕೊರತೆ ನೀಗಿಸಲು ಮುಂದಾಗಿರುವ ಸರ್ಕಾರ ರಾಜ್ಯದ ಜಿಲ್ಲಾ ಮತ್ತು ತಾಲೂಕು ಆಸ್ಪತ್ರೆಗಳಲ್ಲಿ ತೀವ್ರನಿಗಾಘಟಕಗಳನ್ನು ಅಭಿವೃದ್ಧಿ ಪಡಿಸಲು ನಿರ್ಧರಿಸಿದೆ. ಮುಂದಿನ ದಿನಗಳಲ್ಲಿ ಎದುರಾಗಬಹುದಾದ ಕೊರೊನಾ ಎರಡನೇ ಅಲೆ ಸೇರಿದಂತೆ ಸಾಂಕ್ರಾಮಿಕ ರೋಗಗಳನ್ನು ಗಂಭೀರವಾಗಿ ಪರಿಗಣಿಸಿದೆ. ಈ ನಿಟ್ಟಿನಲ್ಲಿ ರಾಜ್ಯದ 19 ಜಿಲ್ಲಾ ಆಸ್ಪತ್ರೆಗಳಲ್ಲಿ 25 ಹಾಸಿಗೆ ಮತ್ತು 100 ತಾಲೂಕು ಆಸ್ಪತ್ರೆಗಳಲ್ಲಿ ಆರು ಹಾಸಿಗೆ ಸಾಮರ್ಥ್ಯಯುಳ್ಳ …
Read More »ಕಾಂಗ್ರೆಸ್ ನಿಂದ ಮುಂದುವರಿದ ಬಹಿಷ್ಕಾರ: ಸಿಎಂ ಬಂದು ಕಾದರು ಸಭೆಗೆ ಬಾರದ ಸಿದ್ದರಾಮಯ್ಯ!
ಬೆಂಗಳೂರು: ವಿಧಾನಸೌಧದಲ್ಲಿ ಇಂದು ನಡೆದ ಕಲಾಪ ಸಲಹಾ ಸಮಿತಿ ಸಭೆಯಲ್ಲಿ ಕಾಂಗ್ರೆಸ್ ಹಾಜರಾಗದೆ ಬಹಿಷ್ಕರಿಸಿತು. ಸೋಮವಾರ ಬಜೆಟ್ ಮಂಡನೆ ವೇಳೆ ಸದನದಿಂದ ಸಭಾತ್ಯಾಗ ಮಾಡಿದ್ದ ಕಾಂಗ್ರೆಸ್ ಇಂದು ಕೂಡಾ ಬಿಎಸಿ ಸಭೆಗೂ ಹಾಜರಾಗದೆ ಅಸಮಾಧಾನ ತೋರಿತು. ವಿಧಾನಸಭೆಯ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿಯವರ ಅಧ್ಯಕ್ಷತೆಯಲ್ಲಿ ನಡೆಯುತ್ತಿರುವ ಕಲಾಪ ಸಲಹಾ ಸಮಿತಿ ಸಭೆಯಲ್ಲಿ ಭಾಗವಹಿಸದಿರಲು ಕಾಂಗ್ರೆಸ್ ಶಾಸಕಾಂಗ ಸಭೆಯಲ್ಲಿ ನಿರ್ಧರಿಸಲಾಗಿತ್ತು. ಹೀಗಾಗಿ ಇಂದು ಸಭೆ ಹಾಜರಾಗಬೇಕಿದ್ದ ವಿಪಕ್ಷ ನಾಯಕ ಸಿದ್ದರಾಮಯ್ಯ ಗೈರಾದರು. …
Read More »ಅನೈತಿಕ ಸರ್ಕಾರವಾಗಿದ್ದರೆ ಸದನದಲ್ಲಿ ಚರ್ಚಿಸಿ: ಕಾಂಗ್ರೆಸ್ ಗೆ ಜಗದೀಶ್ ಶೆಟ್ಟರ್ ಸವಾಲು
ಬೆಂಗಳೂರು: ಕಲಾಪ ಸಲಹಾ ಸಮಿತಿ ಸಭೆಯನ್ನು ಕಾಂಗ್ರೆಸ್ ಪಾರ್ಟಿ ಸಭೆಗೆ ಬಹಿಷ್ಕರಿಸಿದೆ. ಬಜೆಟ್ ಕಲಾಪವನ್ನೂ ಬಹಿಷ್ಕರಿಸಿತ್ತು. ಇಂತಹ ನಡವಳಿಕೆ ಪ್ರಜಾತಂತ್ರ ವ್ಯವಸ್ಥೆಯಲ್ಲಿ ಸರಿಯಲ್ಲ ಎಂದು ಸಚಿವ ಜಗದೀಶ್ ಶೆಟ್ಟರ್ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅನೈತಿಕ ಸರ್ಕಾರವಾಗಿದ್ದರೆ ನೀವು ಸದನದಲ್ಲಿ ಚರ್ಚಿಸಿ. ಬಹಿಷ್ಕರಸಿ ಏನು ಪ್ರಯೋಜನ? ಇದರಿಂದ ಯಾವುದೇ ಪ್ರಯೋಜನವಿಲ್ಲ ಎಂದರು. ನಾನು ಪ್ರತಿಪಕ್ಷ ನಾಯಕನಾಗಿದ್ದಾಗ ಸಭಾತ್ಯಾಗ ಎಂದು ಮಾಡಬಾರದುಅವರೇ ಹೇಳುತ್ತಿದ್ದರು. ಸದನದೊಳಗೆ ಏನೇ ಇದ್ದರೂ ಚರ್ಚೆ ಮಾಡಿ ಎನ್ನುತ್ತಿದ್ದರು. …
Read More »ಬೆಳ್ಳಂಬೆಳಗ್ಗೆ ರಾಜ್ಯದ 11 ಜಿಲ್ಲೆಗಳಲ್ಲಿ ಏಕಕಾಲಕ್ಕೆ ಎಸಿಬಿ ದಾಳಿ..!
ಬೆಂಗಳೂರು: ವಿವಿಧ ಇಲಾಖೆಯ 9 ಅಧಿಕಾರಿಗಳ ಮನೆ ಮತ್ತು ಕಚೇರಿ ಸೇರಿ 11 ಜಿಲ್ಲೆಯ 28 ಕಡೆ ಭ್ರಷ್ಟಾಚಾರ ನಿಗ್ರಹ ದಳ(ಎಸಿಬಿ) ಮಂಗಳವಾರ ಬೆಳಿಗ್ಗೆ ಏಕ ಕಾಲದಲ್ಲಿ ದಾಳಿ ನಡೆಸಿದೆ. ಚಿಕ್ಕಬಳ್ಳಾಪುರ ನಿರ್ಮಿತಿ ಕೇಂದ್ರದ ಯೋಜನಾ ನಿರ್ದೇಶಕ ಕೃಷ್ಣೇಗೌಡ ಅವರಿಗೆ ಸೇರಿದ ಚಿಕ್ಕಬಳ್ಳಾಪುರ ಮತ್ತು ಕೋಲಾರದಲ್ಲಿನ ಮನೆ, ಸಹೋದರನ ಮನೆ ಮೇಲೂ ದಾಳಿ ನಡೆಸಲಾಗಿದೆ. ಬೆಳಗಾವಿ ವೃತ್ತದ ಉಪ ಮುಖ್ಯ ಎಲೆಕ್ಟ್ರಿಕಲ್ ಎಂಜಿನಿಯರ್ ಹನುಮಂತ ಶಿವಪ್ಪ ಚಿಕ್ಕಣ್ಣನವರ ಅವರಿಗೆ ಸೇರಿದ …
Read More »ಮಹಾನ್ ನಾಯಕನಿಂದ ಈ ಷಡ್ಯಂತ್ರ ನಡೆದಿದೆ: ರಮೇಶ್ ಜಾರಕಿಹೊಳಿ
ಬೆಂಗಳೂರು, ಮಾರ್ಚ್ 9: ಒಬ್ಬ ಮಹಾನ್ ನಾಯಕನಿಂದ ಈ ಷಡ್ಯಂತ್ರ ನಡೆದಿದೆ. ಅವರ ಬಗ್ಗೆ ಈಗ ಹೇಳಲು ಆಗುವುದಿಲ್ಲ. ಸಿಡಿ ಬಿಡುಗಡೆ ಬಗ್ಗೆ ಹೈಕಮಾಂಡ್ ಮೊದಲೇ ನನಗೆ ಮಾಹಿತಿ ನೀಡಿತ್ತು ಎಂದು ಮಾಜಿ ಸಚಿವ ರಮೇಶ್ ಜಾರಕಿಹೊಳಿ ಹೇಳಿದರು. ಸಿಡಿ ಪ್ರಕರಣದಲ್ಲಿ ರಾಜೀನಾಮೆ ನೀಡಿದ ಬಳಿಕ ಮಂಗಳವಾರ ಮೊದಲ ಬಾರಿಗೆ ಸುದ್ದಿಗೋಷ್ಠಿ ನಡೆಸಿದ ರಮೇಶ್ ಜಾರಕಿಹೊಳಿ, ನನ್ನ ವಿರುದ್ಧ ರಾಜಕೀಯ ಷಡ್ಯಂತ್ರ ನಡೆದಿದೆ ಎಂದು ಭಾವುಕರಾದರು. ಈ ಸಿಡಿಯನ್ನು ನಾಲ್ಕು …
Read More »ಸಿ.ಡಿ ಪ್ರಕರಣ ಎಲ್ಲ ಆಯಾಮಗಳಲ್ಲೂ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ.: ಬಸವರಾಜ್ ಬೊಮ್ಮಾಯಿ
ಬೆಂಗಳೂರು,ಮಾ.9- ಮಾಜಿ ಸಚಿವ ರಮೇಶ್ ಜಾರಕಿಹೊಳಿ ವಿರುದ್ಧ ಕೇಳಿಬಂದಿರುವ ಸಿ.ಡಿ ಪ್ರಕರಣದ ಕುರಿತಾಗಿ ಎಂದು ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ. ಸುದ್ದಿಗಾರರ ಜೊತೆ ಮಾತನಾಡಿದ ಅವರು, ಸಿ.ಡಿ ವಿವಾದ ಬೆಳಕಿಗೆ ಬಂದ ನಂತರ ಎಲ್ಲ ಆಯಾಮಗಳಲ್ಲೂ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ. ಇದನ್ನು ತಾರ್ಕಿಕ ಹಂತಕ್ಕೆ ಕೊಂಡೊಯ್ಯುವುದು ನಮ್ಮ ಉದ್ದೇಶ ಎಂದರು. ಇದರಲ್ಲಿ 2+3+4 ಭಾಗಿಯಾಗಿದ್ದಾರೆ ಎಂಬುದರ ಬಗ್ಗೆ ನನಗೆ ಯಾವ ಮಾಹಿತಿ ಇಲ್ಲ. ಜಾರಕಿಹೊಳಿ ಕುಟುಂಬದವರು ಅವರದೇ ಆದ …
Read More »ಹೆಚ್‌ಡಿ ಕುಮಾರಸ್ವಾಮಿಗೆ ರಮೇಶ್ ಜಾರಕಿಹೊಳಿ ಧನ್ಯವಾದ ಹೇಳಿದ್ದೇಕೆ?
ಮೈಸೂರು: ಸಿಡಿ ಕೇಸ್ ಸಂಬಂಧ ಸ್ಪಷ್ಟನೆ ನೀಡಲು ಮಾರ್ಚ್ 09ರಂದು ತಮ್ಮ ಸದಾಶಿವನಗರದಲ್ಲಿ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸುದ್ದಿಗೋಷ್ಠಿ ನಡೆಸಿದ್ರು. ಈ ವೇಳೆ ಅವರು ಹೆಚ್.ಡಿ ಕುಮಾರಸ್ವಾಮಿ ಮತ್ತು ಹೆಚ್.ಡಿ ರೇವಣ್ಣನವರಿಗೆ ಅಭಿನಂದನೆ ಸಲ್ಲಿಸಿದ್ದಾರೆ. ಆದ್ರೆ ಈ ರೀತಿ ಹೆಚ್ಡಿಕೆಗೆ ಧನ್ಯವಾದ ಯಾಕೆ ಹೇಳಿದರು? ಸಿಡಿ ನಕಲಿ ಎಂದ ಮೇಲೆ ಸಚಿವ ಸ್ಥಾನಕ್ಕೆ ರಾಜೀನಾಮೆ ಯಾಕೆ ಕೊಟ್ರಿ? ಎಂದು ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ ರಮೇಶ್ ಜಾರಕಿಹೊಳಿಗೆ ಪ್ರಶ್ನಿಸಿದ್ದಾರೆ. ಸಿಡಿ …
Read More »