ಭಾನುವಾರ ಮಧ್ಯಾಹ್ನದಿಂದ ಕಾಣೆಯಾಗಿದ್ದ ರಾಯಚೂರು ಜಿಲ್ಲೆಯ ಮಾನ್ವಿ ಕ್ಷೇತ್ರದ ಮಾಜಿ ಶಾಸಕ ಹಂಪಯ್ಯ ನಾಯಕ್ ಅವರ ಇಬ್ಬರು ಮೊಮ್ಮಕ್ಕಳು ಶವವಾಗಿ ಪತ್ತೆಯಾಗಿದ್ದಾರೆ. ಪೊಲೀಸರು ಹಾಗೂ ಕುಟುಂಬಸ್ಥರು ಭಾನುವಾರ ಮಧ್ಯಾಹ್ನದಿಂದ ಹುಡುಕಾಟ ನಡೆಸಿದ್ದರೂ ಬಾಲಕರು ಪತ್ತೆಯಾಗಿರಲಿಲ್ಲ. 9 ವರ್ಷದ ವರುಣ್, 5 ವರ್ಷದ ಸಣ್ಣಯ್ಯ ಸಾವನ್ನಪ್ಪಿರುವ ಬಾಲಕರು. ಹಂಪಯ್ಯ ನಾಯಕ್ ಕೊನೆಯ ಪುತ್ರ ಶಿವಾನಂದ ಮಕ್ಕಳಾದ ವರುಣ್ ಹಾಗೂ ಸಣ್ಣಯ್ಯ ಶವವಾಗಿ ಪತ್ತೆಯಾಗಿದ್ದು, ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಸಿರವಾರ ಪೊಲೀಸ್ …
Read More »Yearly Archives: 2021
ಬಜೆಟ್ ಮಂಡಿಸಲು ಯಡಿಯೂರಪ್ಪಗೆ ನೈತಿಕತೆಯಿಲ್ಲ: ಸಿದ್ದರಾಮಯ್ಯ
ಬೆಂಗಳೂರು: ರಾಜ್ಯದಲ್ಲಿ ಅಧಿಕಾರ ನಡೆಸಲು ಮತ್ತು ಬಜೆಟ್ ಮಂಡಿಸಲು ಬಿ ಎಸ್ ಯಡಿಯೂರಪ್ಪಗೆ ನೈತಿಕತೆ ಇಲ್ಲ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ ಬಜೆಟ್ ಅಧಿವೇಶನಕ್ಕೂ ಮುನ್ನ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ವಿಪಕ್ಷ ನಾಯಕ ಸಿದ್ದರಾಮಯ್ಯ, ರಾಜ್ಯ ಸರ್ಕಾರದ ವಿರುದ್ಧ ಹರಿಹಾಯ್ದರು. 26 ಎಕರೆ ಬಡಾವಣೆ ಯೋಜನೆಯಲ್ಲಿ ಡಿನೋಟಿಫೈ ಗೆ ಸಂಬಂಧಿಸಿದ ಅವ್ಯವಹಾರ ಕೇಳಿಬಂದಿತ್ತು. ಈ ವಿಚಾರದಲ್ಲಿ ಬಿಎಸ್ ವೈ ಮತ್ತು ಮುರುಗೇಶ್ ನಿರಾಣಿ ವಿರುದ್ಧ ತನಿಖೆ ನಡೆಸುವಂತೆ …
Read More »ನಿರ್ದಿಷ್ಟ ಗುರಿ- ಕಾರಣ ಇಲ್ಲದ, ಕರ್ನಾಟಕ ಇತಿಹಾಸದಲ್ಲೇ ಕೆಟ್ಟ ಬಜೆಟ್: ಪರಮೇಶ್ವರ್ ಟೀಕೆ
ಬೆಂಗಳೂರು: ಯಾವುದೇ ನಿರ್ದಿಷ್ಟ ಗುರಿ, ಕಾರಣ ಇಲ್ಲದಿರುವ ಬಜೆಟ್ ನ್ನು ಸಿಎಂ ಯಡಿಯೂರಪ್ಪ ಬಜೆಟ್ ಮಂಡಿಸಿದ್ದಾರೆ. ಇದು ಕರ್ನಾಟಕ ಇತಿಹಾಸದಲ್ಲೇ ಕೆಟ್ಟ ಬಜೆಟ್ ಎಂದು ಮಾಜಿ ಸಚಿವ ಪರಮೇಶ್ವರ್ ಟೀಕಿಸಿದ್ದಾರೆ. ಸಿಎಂ ಬಿಎಸ್ ವೈ, 71 ಸಾವಿರ ಕೋಟಿ ಸಾಲ ಮಾಡಿರುವುದಾಗಿ ಘೋಷಣೆ ಮಾಡಿದ್ದಾರೆ. ಫಿಸಿಕಲ್ ಆಕ್ಟ್ ತಂದಿದ್ದರು. ಅವರ ಪ್ರಕಾರ ಸಾಲ 25 ರಷ್ಟು ಮೇಲೆ ಹೋಗದಂತೆ ಸೂಚಿಸಲಾಗಿತ್ತು. ಅದನ್ನು ಮೀರಿ 26% ಸಾಲ ಪಡೆದಿದ್ದಾರೆ. ಮುಂದಿನ ದಿನದಲ್ಲಿ …
Read More »ಕೃಷಿ ಪೂರಕ ಚಟುವಟಿಕೆಗಳಿಗೆ 31,028 ಕೋಟಿ ಅನುದಾನ
ಬೆಂಗಳೂರು, ಮಾರ್ಚ್ 8: ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರು 2021-22ನೇ ಸಾಲಿನ ಆಯವ್ಯಯ ಮಂಡಿಸಿದ್ದು, ಅದರಲ್ಲಿ ಕೃಷಿ ಕ್ಷೇತ್ರಕ್ಕೆ ಪ್ರಾಧಾನ್ಯತೆ ಕೊಟ್ಟಿದ್ದಾರೆ. ಕೃಷಿ ಹಾಗೂ ಪೂರಕ ಚಟುವಟಿಕೆ ” ಕೃಷಿಕರ ಆದಾಯವನ್ನು 2023ರ ವೇಳೆಗೆ ದ್ವಿಗುಣಗೊಳಿಸುವ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಕನಸನ್ನು ಸಾಕಾರಗೊಳಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರವು ಕೇಂದ್ರದೊಂದಿಗೆ ಕೈಜೋಡಿಸಿ ಹಲವು ಕ್ರಮಗಳನ್ನು ಕೈಗೊಂಡಿದೆ.” “ಗುಣಮಟ್ಟದ ಬಿತ್ತನೆ ಬೀಜ ಲಭ್ಯತೆ, ಬೆಳೆ ನಿರ್ವಹಣೆ, ಕೊಯ್ಲೋತ್ತರ ನಿರ್ವಹಣೆ, ಸಂಗ್ರಹಣೆ, ಸಂಸ್ಕರಣೆ …
Read More »Karnataka Budget 2021 | ಎಲ್ಲ ಜಿಲ್ಲೆಗಳಲ್ಲಿ ಗೋಶಾಲೆ: ಸಿಎಂ ಯಡಿಯೂರಪ್ಪ ಘೋಷಣೆ
ಬೆಂಗಳೂರು: ಗೋ ಸಂಪತ್ತಿನ ರಕ್ಷಣೆಗಾಗಿ ರಾಜ್ಯದ ಪ್ರತಿ ಜಿಲ್ಲೆಗಳಲ್ಲಿ ಗೋಶಾಲೆ ನಿರ್ಮಾಣ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಘೋಷಿಸಿದ್ದಾರೆ. 2021-22ನೇ ಸಾಲಿನ ಬಜೆಟ್ ಮಂಡನೆ ಮಾಡಿದ ಅವರು, ‘ದೇಶೀಯ ಪಶು ಸಂಪತ್ತಿನ ರಕ್ಷಣೆಗೆ ಸರ್ಕಾರ ಕ್ರಮ ಕೈಗೊಳ್ಳಲಿದೆ. ದೇಶೀಯ ಗೋ ಸಂಪತ್ತಿನ ಪ್ರದರ್ಶನ ಮತ್ತು ಪ್ರಾತ್ಯಕ್ಷಿಕೆಯೊಂದಿಗೆ ಮಾಹಿತಿ ತರಬೇತಿ ನೀಡಲು ಹೆಸರಘಟ್ಟದಲ್ಲಿ ಥೀಮ್ ಪಾರ್ಕ್ ಸ್ಥಾಪನೆ ಮಾಡಲಾಗುವುದು’ ಎಂದು ತಿಳಿಸಿದ್ದಾರೆ. ನಂದಿ ದುರ್ಗ ಮೇಕೆ ತಳಿಗಳನ್ನು ಅಭಿವೃದ್ಧಿಪಡಿಸಿ ಉತ್ಕೃಷ್ಟ ದರ್ಜೆಯ …
Read More »Karnataka Budget 2021| ಒಕ್ಕಲಿಗ ಅಭಿವೃದ್ಧಿ ನಿಗಮ ಸ್ಥಾಪನೆ: 500 ಕೋಟಿ ಅನುದಾನ
ಬೆಂಗಳೂರು: ಒಕ್ಕಲಿಗರ ಅಭಿವೃದ್ಧಿ ನಿಗಮ ಸ್ಥಾಪನೆ ಮಾಡುವುದಾಗಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಬಜೆಟ್‌ನಲ್ಲಿ ಘೋಷಿಸಿದ್ದಾರೆ. 2021-22ನೇ ಸಾಲಿನ ಅಯವ್ಯಯವನ್ನು ಸೋಮವಾರ ಮಂಡಿಸಿದ ಮುಖ್ಯಮಂತ್ರಿ ಈ ವಿಚಾರ ಘೋಷಣೆ ಮಾಡಿದರು. ‘ಲಿಂಗಾಯತ ಅಭಿವೃದ್ಧಿ ನಿಗಮವನ್ನು ಈಗಾಗಲೇ ಘೋಷಣೆ ಮಾಡಿ ₹500 ಅನುದಾನವನ್ನೂ ನಿಗದಿ ಮಾಡಲಾಗಿದೆ. ಅದರಂತೆಯೇ ಒಕ್ಕಲಿಗರ ಅಭಿವೃದ್ಧಿ ನಿಗಮವನ್ನೂ ಸ್ಥಾಪಿಸಲಾಗುತ್ತಿದೆ. ಅದಕ್ಕಾಗಿ ₹500 ಕೋಟಿ ನೀಡಲಾಗುತ್ತಿದೆ,’ ಎಂದು ಘೋಷಿಸಿದರು. ಮುಖ್ಯಮಂತ್ರಿ ಈ ಘೋಷಣೆ ಮಾಡುತ್ತಲೇ ವಿಧಾನಸಭೆ ಸದಸ್ಯರು ಮೇಜು …
Read More »ಮದ್ಯಪ್ರಿಯರಿಗೆ ಗುಡ್ ನ್ಯೂಸ್, ವಾಹನ ಸವಾರರಿಗೆ ನಿರಾಸೆ!
ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ 2021ನೇ ಸಾಲಿನ ಬಜೆಟ್ ನಲ್ಲಿ ಮದ್ಯ ಪ್ರಿಯರಿಗೆ ಗುಡ್ ನ್ಯೂಸ್ ನೀಡಿದರೆ, ವಾಹನ ಸವಾರರಿಗೆ ನಿರಾಸೆ ಮೂಡಿಸಿದ್ದಾರೆ. ಸೋಮವಾರ ಬಜೆಟ್ ಮಂಡಿಸಿದ ಅಬಕಾರಿ ಸುಂಕ ಏರಿಕೆ ಮಾಡದೇ ಇರುವ ಪ್ರಸ್ತಾಪವನ್ನು ಮುಂದಿಟ್ಟರು. ಅಲ್ಲದೇ ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ತೆರಿಗೆಯಲ್ಲಿ ಯಾವುದೇ ಬದಲಾವಣೆ ಮಾಡದೇ ಇರುವುದಾಗಿ ಘೋಷಿಸಿದರು. ಕೊರೊನಾ ವೈರಸ್ ಮತ್ತು ಲಾಕ್ ಡೌನ್ ನಿಂದ ಆರ್ಥಿಕ ಸಂಕಷ್ಟದಿಂದ ತತ್ತರಿಸಿರುವ ಜನತೆಗೆ ರಾಜ್ಯ ಬಜೆಟ್ ನಲ್ಲಿ ನಿರಾಸೆ …
Read More »ಅಪಾರ್ಟ್‍ಮೆಂಟ್ ಖರೀದಿಸುವವರಿಗೆ ಬಜೆಟ್ ನಲ್ಲಿ ಗುಡ್ ನ್ಯೂಸ್..!
ಬೆಂಗಳೂರು, ಮಾ.8- ರಿಯಲ್ ಎಸ್ಟೇಟ್ ಉದ್ಯಮವನ್ನು ಪ್ರೋತ್ಸಾಹಿಸುವ ಸಲುವಾಗಿ ಅಪಾರ್ಟ್‍ಮೆಂಟ್‍ಗಳ ಮೊದಲ ನೋಂದಣಿಗೆ ಮುದ್ರಾಂಕ ಶುಲ್ಕವನ್ನು ಶೇ.5ರಿಂದ 3ಕ್ಕೆ ಕಡಿಮೆ ಮಾಡಿರುವುದಾಗಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ. ಮಧ್ಯಮವರ್ಗ ಕೈಗೆಟುಕುವ ಮನೆಗಳನ್ನು ಖರೀದಿಸಲು ಪ್ರೋತ್ಸಾಹಿಸುವ ಸಲುವಾಗಿ 35ರಿಂದ 45 ಲಕ್ಷಮೌಲ್ಯದೊಳಗಿನ ಅಪಾರ್ಟ್‍ಮೆಂಟ್‍ಗಳ ಖರೀದಿಯ ಮುದ್ರಾಂಕ ಶುಲ್ಕವನ್ನು ಕಡಿಮೆ ಮಾಡಲಾಗಿದೆ. ಕಳೆದ ವರ್ಷ ನೋಂದಣಿ ಮತ್ತು ಮುದ್ರಾಂಕ ಇಲಾಖೆಗೆ 12,665 ಕೋಟಿ ರೂ.ಗಳ ರಾಜಸ್ವ ಸಂಗ್ರಹಣೆಯ ಗುರಿ ನಿಗದಿಪಡಿಸಲಾಗಿತ್ತು. ಫೆಬ್ರವರಿ ಅಂತ್ಯಕ್ಕೆ 9014 …
Read More »ಹೊಸ ತೆರಿಗೆ ಇಲ್ಲ, ಪೆಟ್ರೋಲ್ ತೆರಿಗೆ ಕಡಿತವೂ ಇಲ್ಲ
ಬೆಂಗಳೂರು: ಕೋವಿಡ್ ಸಾಂಕ್ರಾಮಿಕದಿಂದ ಸಂಕಷ್ಟಕ್ಕೀಡಾಗಿರುವ ಜನತೆಗೆ ಸಿಹಿ ಸುದ್ದಿ ನೀಡಿರುವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಈ ವರ್ಷ ಯಾವುದೇ ಹೊಸ ತೆರಿಗೆ ವಿಧಿಸುವುದಿಲ್ಲ ಎಂದು ಘೋಷಿಸಿದ್ದಾರೆ. ಬಜೆಟ್ ಮಂಡನೆ ವೇಳೆ ಈ ವಿಚಾರ ಬಹಿರಂಗಪಡಿಸಿರುವ ಅವರು, ‘ಕೋವಿಡ್‌ನಿಂದಾಗಿ ಜನ ಈಗಾಗಲೇ ಸಂಕಷ್ಟಕ್ಕೀಡಾಗಿದ್ದಾರೆ. ಅವರಿಗೆ ಮತ್ತಷ್ಟು ತೆರಿಗೆ ಹೊರೆ ವಿಧಿಸುವುದಿಲ್ಲ ಎಂದು ತಿಳಿಸಿದರು. ರಾಜ್ಯ ಸರ್ಕಾರವು ಪೆಟ್ರೋಲ್ ಮತ್ತು ಡೀಸೆಲ್ ಮೇಲೆ ವಿಧಿಸುತ್ತಿರುವ ಮಾರಾಟ ತೆರಿಗೆಯು ದಕ್ಷಿಣದ ಇತರ ರಾಜ್ಯಗಳಿಗೆ ಹೋಲಿಸಿದರೆ ನಮ್ಮಲ್ಲೇ …
Read More »ಮಹಿಳಾ ದಿನಾಚರಣೆ ಅಂಗವಾಗಿ ರಾಜ್ಯ ಬಜೆಟ್ ನಲ್ಲಿ ಮಹಿಳೆಯರಿಗೆ ವಿವಿಧ ಯೋಜನೆಗಳಿಗಾಗಿ 37,188 ಕೋಟಿ ರೂಪಾಯಿ ಮೀಸಲಿಡಲಾಗಿದೆ:BSY
ಬೆಂಗಳೂರು: ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗವಾಗಿ ರಾಜ್ಯ ಬಜೆಟ್ ನಲ್ಲಿ ಮಹಿಳೆಯರಿಗೆ ವಿವಿಧ ಯೋಜನೆಗಳಿಗಾಗಿ 37,188 ಕೋಟಿ ರೂಪಾಯಿ ಮೀಸಲಿಡಲಾಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಘೋಷಿಸಿದ್ದಾರೆ. * ರಾಜ್ಯಾದ್ಯಂತ 60 ಸಾವಿರ ಮಹಿಳೆಯರಿಗೆ ಉದ್ಯೋಗ * ಮಹಿಳಾ ಉದ್ಯಮಿಗಳಿಗೆ ಶೇ.4ರ ಬಡ್ದಿದರದಲ್ಲಿ 2 ಕೋಟಿ ರೂ.ಸಾಲ * ಹಪ್ಪಳ, ಉಪ್ಪಿನಕಾಯಿ ತಯಾರಿಕೆಗೆ ಆನ್ ಲೈನ್ ನಲ್ಲಿ ಮಾರುಕಟ್ಟೆ ಒದಗಿಸಲು ಕ್ರಮ * ಬಿಎಂಟಿಸಿ ಬಸ್ ಗಳಲ್ಲಿ ಮಹಿಳೆಯರಿಗಾಗಿ ರಿಯಾಯಿತಿ ಪಾಸ್ …
Read More » Laxmi News 24×7
Laxmi News 24×7
				 
				
			 
				
			 
				
			 
				
			 
				
			 
				
			 
				
			 
				
			