ಮಂಡ್ಯ: ಕಾಂಗ್ರೆಸ್‌ನ ಕುಟುಂಬ ರಾಜಕಾರಣ ವಿರುದ್ಧ ಪಕ್ಷದ ಹಿರಿಯ ಮುಖಂಡರು ಸಿಡಿದು ನಿಂತಿದ್ದಾರೆ. ಇತ್ತೀಚೆಗೆ ಕಾಂಗ್ರೆಸ್‌ನ 17ಕ್ಕೂ ಹೆಚ್ಚು ಹಿರಿಯ ನಾಯಕರು ಕಾಶ್ಮೀರದಲ್ಲಿ ಸಭೆ ನಡೆಸಿದ್ದು, ಪಕ್ಷದ ನಾಯಕತ್ವದ ವಿರುದ್ಧ ಬಂಡೆದ್ದಿದ್ದಾರೆ. ವಂಶಪಾರoಪರ್ಯ ವ್ಯವಸ್ಥೆ ಇರುವವರೆಗೂ ದೇಶದಲ್ಲಿ ಕಾಂಗ್ರೆಸ್ ಪಕ್ಷ ಉದ್ಧಾರ ಆಗುವುದಿಲ್ಲ ಎಂದು ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್ ವಾಗ್ದಾಳಿ ನಡೆಸಿದರು. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್‌ನ ವಂಶಪಾರoಪರ್ಯ ರಾಜಕಾರಣ ನಿಲ್ಲದಿದ್ದರೆ ಪಕ್ಷದ ಬೆಳವಣಿಗೆ ಅಸಾಧ್ಯ ಎಂದು …
Read More »Yearly Archives: 2021
ನಿವೃತ್ತಿಗೊಂಡು ತವರಿಗೆ ಮರಳಿದ ಯೋಧನಿಗೆ ಗ್ರಾಮಸ್ಥರಿಂದ ಸಾಂಪ್ರದಾಯಿಕ ಸ್ವಾಗತ
ವಿಜಯಪುರ : ದೇಶ ರಕ್ಷಣೆಯ ಸುದೀರ್ಘ ಕರ್ತವ್ಯ ಮುಗಿಸಿ ನಿವೃತ್ತಿಗೊಂಡು ತವರಿಗೆ ಮರಳಿದ ಭಾರತೀಯ ಯೋಧನಿಗೆ ನಾಲತವಾಡ ಗ್ರಾಮಸ್ಥರು ಸಾಂಪ್ರದಾಯಿಕ ಸ್ವಾಗತದ ಮೂಲಕ ಅದ್ದೂರಿ ಸ್ವಾಗತ ಕೋರಿದ್ದಾರೆ. ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸಿ ತವರಿಗೆ ಮರಳಿದ ವೀರಯೋಧ ರಾಘವೇಂದ್ರ ಅವರನ್ನು ಪಟ್ಟಣದ ಪ್ರವೇಶ ದ್ವಾರದಲ್ಲೇ ತಡೆದು, ಹೂ ಮಳೆಗೈದು, ಮಹಿಳೆಯರು ಸಾಂಪ್ರದಾಯಿಕವಾಗಿ ಅದ್ಧೂರಿಯಾಗಿ ಸ್ವಾಗತಿಸಿದರು. ದೇಶಮುಖ ಕಾಲೋನಿಯ ವೀರಯೋಧ ರಾಘವೇಂದ್ರ ಸಂಗಪ್ಪ ಕ್ಷತ್ರಿ ಇವರು ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸಿ …
Read More »ನಾಲ್ಕು ದಿನಗಳಲ್ಲಿ ಉಪ ಚುನಾವಣೆ ಘೋಷಣೆ, ನಾಲ್ಕರಲ್ಲೂ ಗೆಲುವು ನಮ್ಮದೇ: ಬಿಎಸ್‌ವೈ
ಶಿವಮೊಗ್ಗ: ನಾಲ್ಕು ದಿನಗಳಲ್ಲಿ ಉಪ ಚುನಾವಣೆ ಘೋಷಣೆಯಾಗಲಿದೆ. ನಾಲ್ಕು ಕ್ಷೇತ್ರಗಳಲ್ಲೂ ಬಿಜೆಪಿ ಗೆಲುವು ಸಾಧಿಸಲಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದರು. ಬೆಳಗಾವಿ ಲೋಕಸಭಾ ಕ್ಷೇತ್ರ ಹಾಗೂ ಮಸ್ಕಿ, ಬಸವ ಕಲ್ಯಾಣ, ಸಿಂಧಗಿ ವಿಧಾನಸಭಾ ಕ್ಷೇತ್ರಗಳಿಗೆ ಉಪ ಚುನಾವಣೆ ನಡೆಯಲಿದೆ. ಉಪ ಚುನಾವಣೆಗೆ ಪಕ್ಷದ ಉಸ್ತುವಾರಿಗಳನ್ನು ನೇಮಕ ಮಾಡಲಾಗಿದೆ. ಚುನಾವಣೆ ಘೋಷಣೆಯಾದ ತಕ್ಷಣ ಅಭ್ಯರ್ಥಿಗಳ ಪಟ್ಟಿ ಪ್ರಕಟಿಸಲಾಗುವುದು. ಮಾರ್ಚ್ 8ರಂದು ಬಜೆಟ್ ಮಂಡಿಸಿದ ನಂತರ ಚುನಾವಣಾ ಪ್ರಚಾರ ಆರಂಭಿಸುವೆ ಎಂದರು. …
Read More »TRP ತಿರುಚಿದ ಪ್ರಕರಣದ ಆರೋಪಿ ಪಾರ್ಥೋ ದಾಸ್ ಗುಪ್ತಾಗೆ ಬಾಂಬೆ ಕೋರ್ಟ್ ಜಾಮೀನು..!
ನವ ದೆಹಲಿ : ಟಿ ಆರ್ ಪಿ ತಿರುಚಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬ್ರಾಡ್ ಕಾಸ್ಟ್ ಆಡಿಯೆನ್ಸ್ ರಿಸರ್ಚ್ ಕೌನ್ಸಿಲ್ ನ ಮಾಜಿ ಸಿಇಒ ಪಾರ್ಥೋ ದಾಸ್ ಗುಪ್ತಾ ಅವರಿಗೆ ಬಾಂಬೆ ಹೈಕೋರ್ಟ್ ಶ್ಯೂರಿಟಿ ಮೇರೆಗೆ ಜಾಮೀನು ನೀಡಿದೆ. 2 ಲಕ್ಷ ಶ್ಯೂರಿಟಿ ಮೇರೆಗೆ ಪಾರ್ಥೋ ಗುಪ್ತಾ ಅವರಿಗೆ ಬಾಂಬೆ ಕೋರ್ಟ್ ಜಾಮೀನು ನೀಡಿದ್ದು, ಆರು ತಿಂಗಳುಗಳ ಕಾಲ ಪ್ರತಿ ಶನಿವಾರ ಮುಂಬೈ ಪೊಲೀಸರ ಅಪರಾಧ ಶಾಖೆಗೆ ವಿಚಾರಣೆಗಾಗಿ ಭೇಟಿ ನೀಡಬೇಕು …
Read More »ಯಾರಿಗೆ ಎಲ್ಲಿ ಅನುಕೂಲವಾಗುತ್ತೋ ಅಲ್ಲಿ ಲಸಿಕೆ ಹಾಕಿಸಿಕೊಳ್ಳಲಿ: ಸಿಎಂ ಯಡಿಯೂರಪ್ಪ
ಬೆಂಗಳೂರು: ಕೊರೊನಾ ಮೂರನೇ ಹಂತದ ಲಸಿಕೆ ನೀಡಿಕೆ ಆರಂಭವಾಗಿದೆ. ಎಲ್ಲರೂ ಲಸಿಕೆ ಪಡೆಯುವುದು ಮುಖ್ಯ. ಹೀಗಾಗಿ ಯಾರು ಯಾರು ಎಲ್ಲೆಲ್ಲಿ ಅನುಕೂಲ ಆಗುತ್ತೋ ಅಲ್ಲಿ ಲಸಿಕೆ ಪಡೆದುಕೊಳ್ಳಲಿ ಎಂದು ಸಿಎಂ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಯಡಿಯೂರಪ್ಪ, ಇನ್ನೆರಡು ದಿನಗಳಲ್ಲಿ ನಾನೂ ಕೂಡ ಲಸಿಕೆ ಹಾಕಿಸಿಕೊಳ್ಳಲಿದ್ದೇನೆ. ಮನೇಲಿ ಹಾಕಿಸಿಕೊಳ್ಳಬೇಕಾ ಅಥವಾ ಆಸ್ಪತ್ರೆಯಲ್ಲಿ ಹಾಕಿಸಿಕೊಳ್ಳಬೇಕಾ ಎಂದು ನೋಡುತ್ತೇನೆ ಎಂದರು. ಇದೇ ವೇಳೆ ನಾನು ರಾಘವೇಂದ್ರ ಸ್ವಾಮಿಗಳ ಭಕ್ತ. ಹಾಗಾಗಿಯೇ …
Read More »ಆರ್ಡರ್ ಮಾಡಿದ್ದು ಆಯಪಲ್ ಐಫೋನ್, ಬಂದಿದ್ದು ಆಯಪಲ್ ಜ್ಯೂಸ್!; ಬುಕ್ ಮಾಡಿದ ಮಹಿಳೆಗೆ ಶಾಕ್..!
ಈಗ ಆಫ್‌ಲೈನ್‌ಗಿಂತ ಆನ್‌ಲೈನ್ ನೆಚ್ಚಿಕೊಂಡವರೇ ಹೆಚ್ಚು. ಏಕೆಂದು ಇದು ಬಹಳ ಸುಲಭ ಹಾಗೂ ಕುಳಿತಲ್ಲೇ ಎಲ್ಲ ಕೆಲಸವೂ ಆಗುತ್ತದೆ. ಆನ್‌ಲೈನ್‌ನಲ್ಲಿ ಆರ್ಡರ್ ಮಾಡಿದರೆ ಫೋನಿಗೆ ಬದಲಾಗಿ ಕಲ್ಲು, ಇಟ್ಟಿಗೆ ಹಾಗೂ ಬದಲಿ ವಸ್ತುಗಳು ಬಂದಿರುವ ನಿದರ್ಶನಗಳು ಸಾಕಷ್ಟಿವೆ. ಗ್ರಾಹಕರು ಆರ್ಡರ್ ಮಾಡುವುದೇ ಒಂದಾದರೆ, ಅವರಿಗೆ ಬರೋದು ಇನ್ನೊಂದು. ಆದರೂ ಕೂಡ ಆನ್‌ಲೈನ್ ಶಾಪಿಂಗ್ ಮಾಡುವುದು ಕಡಿಮೆಯಾಗಿಲ್ಲ. ಚೀನಾದ ಮಹಿಳೆಯೊಬ್ಬಳು ಆನ್‌ಲೈನ್ನಲ್ಲಿ ಲಕ್ಷಾಂತರ ರೂ. ಕೊಟ್ಟು ಆರ್ಡರ್ ಮಾಡಿದ ವಸ್ತುವಿನ ಬದಲು …
Read More »ವಿದ್ಯಾರ್ಥಿನಿಯರ ಜೊತೆ ನೃತ್ಯ ಮಾಡಿದ ರಾಹುಲ್ ಗಾಂಧಿ
ಕಾಂಗ್ರೆಸ್ ನಾಯಕ ಹಾಗೂ ಸಂಸದ ರಾಹುಲ್ ಗಾಂಧಿ ದಿನಕ್ಕೊಂದು ವಿಚಾರಕ್ಕಾಗಿ ಟ್ರೋಲ್ ಆಗ್ತಾನೇ ಇರ್ತಾರೆ. 50 ವರ್ಷದ ರಾಹುಲ್ ಗಾಂಧಿ ಮೀನುಗಾರರ ಜೊತೆ ಈಜಾಡುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗಿತ್ತು. ಇದಾದ ಬಳಿಕ ಅವರು ಟೀ ಶರ್ಟ್ ಧರಿಸಿ ಸಮುದ್ರದಲ್ಲಿ ಈಜಾಡುತ್ತಿರುವ ಫೋಟೋ ಕೂಡ ಸುದ್ದಿ ಮಾಡಿತ್ತು. ಇದೀಗ ರಾಹುಲ್ ಗಾಂಧಿಯ ಮತ್ತೊಂದು ವಿಡಿಯೋ ಸಾಕಷ್ಟು ಸುದ್ದಿಯಲ್ಲಿದೆ. ಇದರಲ್ಲಿ ತಮಿಳುನಾಡಿನ ಮುಲ್ಗಮುಡುಬನ್ನ ಸೇಂಟ್ ಜೋಸೆಫ್ ಮ್ಯಾಟ್ರಿಕ್ ಶಾಲೆಯ …
Read More »ಮಕ್ಕಳು, ಗರ್ಭಿಣಿಯರು, ಬಾಣಂತಿಯರಿಗೆ ಗುಡ್ ನ್ಯೂಸ್: ಅಂಗನವಾಡಿಯಿಂದ ಮನೆ ಬಾಗಿಲಿಗೆ ಆಹಾರ
ಕೊರೋನಾ ಕಾರಣದಿಂದಾಗಿ ಅಂಗನವಾಡಿ ಕೇಂದ್ರಗಳ ಮೂಲಕ ಸೌಲಭ್ಯ ಪಡೆಯುತ್ತಿದ್ದವರಿಗೆ ತೊಂದರೆ ಉಂಟಾಗಿದೆ. ಮಕ್ಕಳು, ಬಾಣಂತಿಯರು, ಗರ್ಭಿಣಿಯರಿಗೆ ಪೌಷ್ಟಿಕ ಆಹಾರವನ್ನು ಮನೆ ಬಾಗಿಲಿಗೆ ತಲುಪಿಸುವ ಕಾರ್ಯವನ್ನು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಯಶಸ್ವಿಯಾಗಿ ಕೈಗೊಂಡಿದೆ. ದಾವಣಗೆರೆ ಜಿಲ್ಲೆಯಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಧಿಕಾರಿಗಳು, ಅಂಗನವಾಡಿ ಫಲಾನುಭವಿಗಳ ಮನೆಗೆ ಪೌಷ್ಟಿಕ ಆಹಾರವನ್ನು ಪೂರೈಕೆ ಮಾಡುತ್ತಿದ್ದಾರೆ. ಕೊರೊನಾ ಕಾರಣದಿಂದ ಅಂಗನವಾಡಿ ಕೇಂದ್ರಗಳು ಮುಚ್ಚಿದ್ದವು. ಇದರಿಂದ ಫಲಾನುಭವಿಗಳಿಗೆ ಸೌಲಭ್ಯ ಸಿಗದಂತಾಗಿತ್ತು. ಇದನ್ನು …
Read More »ಬೆಂಗಳೂರಲ್ಲಿಂದು ಅಂಗನವಾಡಿ, ಸಾರಿಗೆ ಹಾಗೂ ಕಾಂಗ್ರೆಸ್ ಪ್ರತಿಭಟನೆಗಳ ಅಬ್ಬರ
ಬೆಂಗಳೂರು,ಮಾ.2- ದಿನೇ ದಿನೇ ಹೆಚ್ಚಾಗುತ್ತಿರುವ ದಿನಸಿ ಪದಾರ್ಥಗಳ ದರ, ತೈಲ ಹಾಗೂ ಅಡುಗೆ ಅನಿಲ ಸಿಲಿಂಡರ್ ಬೆಲೆ ಏರಿಕೆ ಖಂಡಿಸಿ ಮಹಿಳಾ ಕಾಂಗ್ರೆಸ್ ಘಟಕ ಪ್ರತಿಭಟನೆ ನಡೆಸಿದರೆ ಸಾರಿಗೆ ನೌಕರರು ಹಾಗೂ ಅಂಗನವಾಡಿ ಕಾರ್ಯಕರ್ತೆಯರು ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಸರ್ಕಾರಕ್ಕೆ ಬಿಸಿ ಮುಟ್ಟಿಸಿದರು. ಬೆಲೆ ಏರಿಕೆ ವಿರುದ್ಧ ಕಾಂಗ್ರೆಸ್ ಮಹಿಳಾ ಘಟಕದವರು ರ್ಯಾಲಿ ನಡೆಸಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ವಿರುದ್ಧ ಘೋಷಣೆಗಳನ್ನು ಕೂಗಿದರು. ತಮ್ಮ 9 ಬೇಡಿಕೆಗಳನ್ನು …
Read More »ಶಾಲಾ, ಕಾಲೇಜ್ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಉಚಿತ ಪ್ರಯಾಣಕ್ಕೆ ಮಾ. 31 ರವರೆಗೆ ಅವಕಾಶ
ಕಲಬುರಗಿ: ಪದವಿ ಹಾಗೂ ಇತರ ವರ್ಗದ ವಿದ್ಯಾರ್ಥಿಗಳಿಗೆ 2020-21ನೇ ಶೈಕ್ಷಣಿಕ ವರ್ಷದ ಚಟುವಟಿಕೆ ಪ್ರಾರಂಭವಾಗಿವೆ. ಎಲ್ಲಾ ವರ್ಗದ ಶಾಲಾ/ಕಾಲೇಜು ವಿದ್ಯಾರ್ಥಿಗಳು ಕಳೆದ ವರ್ಷದ ಹಳೆಯ (2019-20) ಬಸ್ ಪಾಸ್ ಮತ್ತು ಪ್ರಸ್ತುತ ಸಾಲಿನಲ್ಲಿ ಶಾಲಾ/ಕಾಲೇಜುಗಳಿಗೆ ಪಾವತಿಸಿರುವ ರಶೀದಿ ತೋರಿಸಿ ಸಂಸ್ಥೆಯ ಬಸ್ ಗಳಲ್ಲಿ ಸಂಬಂಧಪಟ್ಟ ಮಾರ್ಗದಲ್ಲಿ ಅಥವಾ ಹೊಸ ವಿಳಾಸದಲ್ಲಿರುವ ಶಾಲಾ/ಕಾಲೇಜುಗಳಿಗೆ ಸಂಸ್ಥೆಯ ನಗರ, ಹೊರವಲಯ, ಸಾಮಾನ್ಯ ಹಾಗೂ ವೇಗದೂತ ಬಸ್‍ಗಳಲ್ಲಿ 2021ರ ಮಾರ್ಚ್ 31 ರವರೆಗೆ ಉಚಿತವಾಗಿ ಪ್ರಯಾಣಿಸಲು …
Read More »