ದಿನದಿಂದ ದಿನಕ್ಕೆ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆಯಾಗುತ್ತಿರುವುದನ್ನು ಖಂಡಿಸಿ ರಾಜ್ಯಾದ್ಯಂತ ಲಾರಿ ಮುಷ್ಕರಕ್ಕೆ ಕರೆ ನೀಡಲಾಗಿದೆ. ಈ ಕುರಿತು ಮಾತನಾಡಿದ ಕರ್ನಾಟಕ ರಾಜ್ಯ ಲಾರಿ ಮಾಲೀಕರ ಸಂಘಗಳ ಒಕ್ಕೂಟದ ಅಧ್ಯಕ್ಷ ಷಣ್ಮುಗಪ್ಪ, ಒಂದು ಕಿಲೋಮೀಟರ್ ಗೆ ಲಾರಿ ಓಡಿಸಲು ಮಾಲೀಕರಿಗೆ 36 ರೂ. ವೆಚ್ಚವಾಗುತ್ತಿದೆ. ರಾಜ್ಯದಿಂದ 40 ಸಾವಿರ ಲಾರಿಗಳು ಬೇರೆ ರಾಜ್ಯಗಳಿಗೆ ಹೋಗುತ್ತಿವೆ. ಹೊರ ರಾಜ್ಯದಲ್ಲಿ ಡಿಸೇಲ್ ಕಡಿಮೆ ಇದೆ. ಕಡಿಮೆ ಇರುವ ರಾಜ್ಯಗಳಿಂದ ಮಾಲೀಕರು ಡಿಸೇಲ್ ಹಾಕಿಸಿಕೊಂಡು ಬರುತ್ತಿದ್ದಾರೆ. …
Read More »Yearly Archives: 2021
ಮೂಲಭೂತ ಸೌಲಭ್ಯಗಳನ್ನು ನೀಡದ ತಹಸೀಲ್ದಾರ್ ಕ್ರಮವನ್ನು ಖಂಡಿಸಿ ಪಟ್ಟಣದ ತಹಸೀಲ್ದಾರ್ ಕಚೇರಿ ಎದುರು ಪ್ರತಿಭಟನೆ ಅಲ್ಲೇ ಅಡುಗೆ, ಅಲ್ಲೇ ಊಟ,
ಖಾನಾಪುರ: ೨೦೧೯ರ ಅಗಸ್ಟ್ ತಿಂಗಳ ಮೊದಲ ವಾರದಲ್ಲಿ ಸುರಿದ ಭಾರೀ ಮಳೆಯಿಂದ ಮಲಪ್ರಭಾ ನದಿಗೆ ಉಂಟಾದ ಪ್ರವಾಹದಲ್ಲಿ ತಮ್ಮ ಮನೆ ಮತ್ತು ಆಸ್ತಿ-ಪಾಸ್ತಿ ಕಳೆದುಕೊಂಡಿರುವ ತಾಲೂಕಿನ ಹಿರೇಹಟ್ಟಿಹೊಳಿ ಗ್ರಾಮದ ೭೦ಕ್ಕೂ ಹೆಚ್ಚು ನೆರೆ ಸಂತ್ರಸ್ತರು ಗುರುವಾರ ತಮಗೆ ನಿವೇಶನ, ತಾತ್ಕಾಲಿಕ ವಸತಿ ವ್ಯವಸ್ಥೆ ಮತ್ತು ಇತರೆ ಮೂಲಭೂತ ಸೌಲಭ್ಯಗಳನ್ನು ನೀಡದ ತಹಸೀಲ್ದಾರ್ ಕ್ರಮವನ್ನು ಖಂಡಿಸಿ ಪಟ್ಟಣದ ತಹಸೀಲ್ದಾರ್ ಕಚೇರಿ ಎದುರು ಪ್ರತಿಭಟನೆಯನ್ನು ಕೈಗೊಂಡಿದ್ದಾರೆ. ಪ್ರತಿಭಟನೆಯ ಅಂಗವಾಗಿ ಪ್ರವಾಹ ಸಂತ್ರಸ್ತರು ತಹಸೀಲ್ದಾರ್ ಕಚೇರಿಯ …
Read More »ವಿವಿಧ ಖಾಯಿಲೆಗಳಿಂದ ಬಳಲುತ್ತಿದ್ದ 18 ಜನರಿಗೆ ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ ಆರ್ಥಿಕ ನೆರವು: ಲಕ್ಷ್ಮಿ ಹೆಬ್ಬಾಳಕರ್
ಬೆಳಗಾವಿ – ಬೆಳಗಾವಿ ಗ್ರಾಮೀಣ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ವಿವಿಧ ಖಾಯಿಲೆಗಳಿಂದ ಬಳಲುತ್ತಿದ್ದ 18 ಜನರಿಗೆ ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ ಆರ್ಥಿಕ ನೆರವು ಒದಗಿಸಿದ್ದಾರೆ. ಗ್ರಾಮೀಣ ಕ್ಷೇತ್ರದಲ್ಲಿರುವ ಆರ್ಥಿಕವಾಗಿ ಹಿಂದುಳಿದಿರುವ ಕೆಲವರು ವಿವಿಧ ಖಾಯಿಲೆಗಳಿಂದ ಬಳಲುತ್ತಿದ್ದರು. ಆಸ್ಪತ್ರೆಯ ವೆಚ್ಛವನ್ನು ಭರಿಸುವ ಸಾಮರ್ಥ್ಯವಿರಲಿಲ್ಲ. ಹಾಗಾಗಿ ಅವರಿಗೆಲ್ಲ ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ ಹಣ ಬಿಡುಗಡೆ ಮಾಡಿಸಿ, ಅವರವರ ಬ್ಯಾಂಕಿನ ಖಾತೆಗಳಿಗೆ ಹಣ ಜಮಾ ಮಾಡಿಸಲಾಗಿದೆ. ಈ ಕುರಿತ ದಾಖಲೆಗಳನ್ನು ಗುರುವಾರ ಬೆಳಗ್ಗೆ ಲಕ್ಷ್ಮಿ ಹೆಬ್ಬಾಳಕರ್ ಸಂಬಂಧಿಸಿದವರಿಗೆ …
Read More »ಸರ್ಕಾರದಿಂದ ಲಭ್ಯವಿರುವ ಅನುದಾನ ಲ್ಯಾಪ್ಸ್ ಆದರೆ ತಾಪಂ ಸಿಇಒ ಹೊಣೆ
ಬೆಳಗಾವಿ: ಈ ವರ್ಷದ ಅನುದಾನ ಯಾವುದೇ ಕಾರಣಕ್ಕೂ ವ್ಯಪಗತ(ಲ್ಯಾಪ್ಸ್) ಆಗಬಾರದು. ಒಂದು ವೇಳೆ ಅನುದಾನ ವ್ಯಪಗತವಾದರೆ ಸಂಬಂಧಿಸಿದ ಇಲಾಖೆಯ ಅಧಿಕಾರಿಗಳು ಮತ್ತು ತಾಲ್ಲೂಕು ಪಂಚಾಯತ ಕಾರ್ಯನಿರ್ವಾಹಕ ಅಧಿಕಾರಿಗಳನ್ನು ಹೊಣೆ ಮಾಡಲಾಗುವುದು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಸರ್ಕಾರದ ಪ್ರಧಾನ ಕಾರ್ಯದರ್ಶಿ ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಎಲ್.ಕೆ.ಅತೀಕ್ ಎಚ್ಚರಿಕೆ ನೀಡಿದರು. ಜಿಲ್ಲಾ ಪಂಚಾಯತ ಸಭಾಂಗಣದಲ್ಲಿ ಬುಧವಾರ (ಫೆ.24) ನಡೆದ ಜಿಲ್ಲಾ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು …
Read More »ಸಚಿವ ರಮೇಶ್ ಜಾರಕಿಹೊಳಿ, ಬಸವರಾಜ ಬೊಮ್ಮಾಯಿ ಬೆಳಗ್ಗೆ 11 ಗಂಟೆಗೆ
ಬೆಂಗಳೂರು – ಕರ್ನಾಟಕ ರಾಜ್ಯದ ನೀರಾವರಿ ಯೋಜನೆಗಳ ಕಾಮಗಾರಿಗಳ ಪ್ರಗತಿ ಪರಿಶೀಲನೆ, ಅಂತರ ರಾಜ್ಯ ಜಲವಿವಾದಗಳು, ಸರ್ವೋಚ್ಚ ನ್ಯಾಯಾಲಯದಲ್ಲಿರುವ ದಾವೆಗಳ ಕುರಿತಂತೆ ಉನ್ನತ ಮಟ್ಟದ ಸಭೆ (ಫೆ.26) ಬೆಳಗ್ಗೆ 11 ಗಂಟೆಗೆ ವಿಧಾನಸೌಧದ ಸಮಿತಿ ಕೊಠಡಿಯಲ್ಲಿ ನಡೆಯಲಿದೆ. ಈ ಉನ್ನತ ಮಟ್ಟದ ಸಭೆಯ ಅಧ್ಯಕ್ಷತೆಯನ್ನು ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ವಹಿಸಲಿದ್ದು, ಗೃಹ ಮತ್ತು ಕಾನೂನು, ಸಂಸದೀಯ ವ್ಯವಹಾರಗಳ ಸಚಿವ ಬಸವರಾಜ ಬೊಮ್ಮಾಯಿ ಸಭೆಯಲ್ಲಿ ಭಾಗವಹಿಸಲಿದ್ದಾರೆ. ರಾಜ್ಯದ ಅಡ್ವೊಕೇಟ್ ಜನರಲ್ ಮತ್ತು …
Read More »ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ಜಿಲ್ಲಾ ಪ್ರವಾಸ.!
ಗೋಕಾಕ್: ಜಲ ಸಂಪನ್ಮೂಲ ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ಅವರು ಫೆ.೨೭ ರಿಂದ ಮಾ.೨ ರ ವರಗೆ ಬೆಳಗಾವಿ ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ. ಫೆ.೨೭ ರಂದು ೧೦ ಗಂಟೆಗೆ ನಗರದ ಎನ್‌ಇಎಸ್ ಶಾಲಾ ಆವರಣದಲ್ಲಿ ನಡೆಯಲಿರುವ ತಾಲೂಕು ಮಟ್ಟದ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಪಾಲ್ಗೊಂಡು, ಸಂಜೆ ನಗರದಲ್ಲಿ ವಾಸ್ತವ್ಯ ಮಾಡಲಿದ್ದಾರೆ. ಫೆ.೨೮ ರಂದು ಗೋಕಾಕ ತಾಲೂಕಿನ ಜಮನಾಳ ಗ್ರಾಮದ ಸಿದ್ದಲಿಂಗೇಶ್ವರ ದೇವಸ್ಥಾನದ ಹತ್ತಿರ ಆಣೆಕಟ್ಟು ಸ್ಥಳ …
Read More »ಮಠದ ಆಸ್ತಿ ಕಬಳಿಸಲು ಹುನ್ನಾರ: ವಿದ್ಯಾರಣ್ಯ ಭಾರತೀ ಸ್ವಾಮೀಜಿ ಆರೋಪ
ಚಿತ್ರದುರ್ಗ: ಶಿವಮೊಗ್ಗ ಜಿಲ್ಲೆಯ ಕೂಡಲಿ ಶೃಂಗೇರಿ ಶಂಕರಾಚಾರ್ಯ ಮಹಾಸಂಸ್ಥಾನಕ್ಕೆ ಸೇರಿದ ಆಸ್ತಿಯನ್ನು ಕಬಳಿಸಲು ಗುಂಪೊಂದು ಹುನ್ನಾರ ನಡೆಸಿದೆ ಎಂದು ಮಹಾಸಂಸ್ಥಾನದ ಪೀಠಾಧಿಪತಿ ವಿದ್ಯಾಭಿನವ ವಿದ್ಯಾರಣ್ಯ ಭಾರತೀ ಸ್ವಾಮೀಜಿ ಆರೋಪ ಮಾಡಿದರು. ‘ಈಚೆಗೆ ಮಠದೊಳಗೆ ಏಕಾಏಕಿ ನುಗ್ಗಿದ ಗುಂಪೊಂದು ಶಿಷ್ಯರ ಮೇಲೆ ಹಲ್ಲೆ ಮಾಡಿದೆ. ಈ ಕುರಿತು ಪ್ರಕರಣ ದಾಖಲಿಸಿದ್ದೇವೆ. ಅದೇ ಊರಿನವರೇ ಇದರಲ್ಲಿ ಭಾಗಿಯಾಗಿದ್ದಾರೆ’ ಎಂದು ಗುರುವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು. ‘ಮಹಾಸಂಸ್ಥಾನಕ್ಕೆ ಐತಿಹಾಸಿಕ ಹಿನ್ನೆಲೆ ಇದೆ. ಬೆಂಗಳೂರು ಸೇರಿ ರಾಜ್ಯದ …
Read More »ಒಡಿಶಾದಲ್ಲಿ 45 ಕೆ.ಜಿ. ಆನೆ ದಂತ ವಶ, ಇಬ್ಬರ ಬಂಧನ
ಬಾರಿಪಾದ (ಒಡಿಶಾ), ಫೆ.25 (ಪಿಟಿಐ)- ರಾಜ್ಯದ ಮಯೂರ್‍ಭಾನ್ಜ ಜಿಲ್ಲೆಯಲ್ಲಿ 45 ಕಿಲೋ ಗ್ರಾಂ ತೂಕವುಳ್ಳ ಎಂಟು ಆನೆ ದಂತಗಳನ್ನು ವಶಪಡಿಸಿಕೊಂಡು, ಇದಕ್ಕೆ ಸಂಬಂಧಪಟ್ಟಂತೆ ಇಬ್ಬರನ್ನು ಬಂಸಲಾಗಿದೆ ಎಂದು ಒಡಿಶಾ ಅರಣ್ಯ ಇಲಾಖೆ ಅಕಾರಿಗಳು ತಿಳಿಸಿದ್ದಾರೆ. ಖಚಿತ ಸುಳಿವಿನ ಮೇರೆಗೆ ಕಾರ್ಯಾಚರಣೆ ನಡೆಸಿದ ಉದಾಲಾ ವಲಯದ ಅರಣ್ಯ ಸಿಬ್ಬಂದಿ ಸಿಮಿಲ್ಪಾಲ್ ರಾಷ್ಟ್ರೀಯ ಉದ್ಯಾನವನ ತಪ್ಪಲಿನ ಅಂಗರ್ಪಾದ ಗ್ರಾಮಕ್ಕೆ ಭೇಟಿ ನೀಡಿ, ಆನೆ ದಂತ ಖರೀದಿದಾರರಂತೆ ನಟಿಸಿ ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ ದಂತಗಳನ್ನು ವಶಕ್ಕೆ …
Read More »ಕಾಡಿನಲ್ಲಿ ಕಳೆದುಹೋಗಿ 35 ಕೆಜಿ ಉಣ್ಣೆ ಬೆಳೆಸಿಕೊಂಡಿದ್ದ ಕುರಿ: ವಿಡಿಯೋ ಸಖತ್ ವೈರಲ್!
ಆಸ್ಟ್ರೇಲಿಯಾದ ಕಾಡೊಂದರಲ್ಲಿ ಸಿಕ್ಕಿರುವ ವಯಸ್ಸಾದ ಕುರಿಯೊಂದನ್ನು ರಕ್ಷಿಸಲಾಗಿದ್ದು, ಅದರ ಮೈಮೇಲೆ ಬೆಳೆದಿದ್ದ ಸುಮಾರು 35 ಕೆಜಿಯಷ್ಟು ಉಣ್ಣೆಯನ್ನು ತೆಗೆದು ಅದರ ದೇಹದ ಭಾರವನ್ನು ಇಳಿಸಲಾಗಿದೆ. ಈ ಕುರಿಗೆ ‘ಬರಾಕ್’ ಎಂದು ಹೆಸರು ಇಡಲಾಗಿದೆ. ಹೌದು, ಕುರಿಗಳು ಉಣ್ಣೆಗೆ ಪ್ರಸಿದ್ಧಿ. ಆದರೆ ಈ ಕುರಿ ಮೈಮೇಲೆ ಬೆಳೆದಿದ್ದ ಉಣ್ಣೆಯನ್ನು ನೋಡಿ ಸ್ವತಃ ಅದನ್ನು ರಕ್ಷಿಸಿದ ಜನರೇ ಬೆಚ್ಚಿಬಿದ್ದಿದ್ದಾರೆ. ತನ್ನ ಮೈಮೇಲೆಲ್ಲಾ ಉಣ್ಣೆ ಬೆಳೆಸಿಕೊಂಡಿರುವ ಈ ಕುರಿ ನೋಡಲು ಬೇರೆ ಪ್ರಾಣಿ ರೀತಿ …
Read More »ಅರಣ್ಯ ಸಿಬ್ಬಂದಿಗೆ ಇಂಧನ ಭತ್ಯೆ ಅಗತ್ಯ: ಲಿಂಬಾವಳಿ
ಬೆಂಗಳೂರು: ಅರಣ್ಯ ರಕ್ಷಣೆಯಲ್ಲಿ ಮಹತ್ವದ ಪಾತ್ರ ನಿರ್ವಹಿಸುತ್ತಿರುವ ಅರಣ್ಯ ಇಲಾಖೆಯ ಕೆಳಹಂತದ ಸಿಬ್ಬಂದಿಗೆ ಇಂಧನ ಭತ್ಯೆ ನೀಡಬೇಕಾದ ಅಗತ್ಯವಿದೆ ಎಂದು ಅರಣ್ಯ ಸಚಿವ ಅರವಿಂದ ಲಿಂಬಾವಳಿ ಹೇಳಿದರು. ಅರಣ್ಯ ಭವನದಲ್ಲಿ ಬುಧವಾರ ನಡೆದ ಹಿರಿಯ ಐಎಫ್‌ಎಸ್ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, ‘ಇಲಾಖೆಯ ಕೆಳಹಂತದ ಸಿಬ್ಬಂದಿಗೆ ವಾಹನ ಸೌಲಭ್ಯ ನೀಡಿಲ್ಲ. ಅರಣ್ಯ ರಕ್ಷಣೆಗಾಗಿ ಅವರು ಸ್ವಂತ ವಾಹನವನ್ನೇ ಬಳಕೆ ಮಾಡುತ್ತಿದ್ದಾರೆ. ಅಂತಹ ಸಿಬ್ಬಂದಿಗೆ ಇಂಧನ ಭತ್ಯೆಯನ್ನಾದರೂ ನೀಡಬೇಕಿದೆ’ ಎಂದರು. ಕಾಡು ಪ್ರಾಣಿಗಳ …
Read More »