Breaking News

Yearly Archives: 2021

ಲಾರಿ-ಬಸ್ ಮುಖಾಮುಖಿ ಢಿಕ್ಕಿ: ಬಸ್ ಚಾಲಕ, ನಿರ್ವಾಹಕ ಸೇರಿ 7 ಜನರಿಗೆ ಗಾಯ

ಕಲಬುರಗಿ: ಲಾರಿಯ ಟೈಯರ್ ಸ್ಫೋಟವಾಗಿ ಎದುರಿನಿಂದ ಬರುತ್ತಿದ್ದ ಸಾರಿಗೆ ಬಸ್ ಗೆ ಡಿಕ್ಕಿ ಹೊಡೆದ ಘಟನೆ ಜಿಲ್ಲೆಯ ವಾಡಿ ಸಮೀಪದ ರೇವೂರ್ ಗ್ರಾಮದ ಬಳಿ ನಡೆದಿದೆ. ಘಟನೆಯಲ್ಲಿ ಬಸ್ ಚಾಲಕ ಹಾಗೂ ನಿರ್ವಾಹಕ ಸೇರಿ ಬಸ್ ನಲ್ಲಿದ್ದ ಏಳು ಜನರು ಗಾಯಗೊಂಡಿದ್ದಾರೆ. ನಗರ ಸಾರಿಗೆ ಬಸ್ ಜೇವರ್ಗಿಯಿಂದ ಚಿತ್ತಾಪುರ ಕಡೆಗೆ ಹೊರಟ್ಟಿತ್ತು. 25 ರಿಂದ 30 ಜನ ಬಸ್ ನಲ್ಲಿದ್ದರು ಎನ್ನಲಾಗಿದೆ. ಈ ವೇಳೆ ಎದುರುಗಡೆಯಿಂದ ಲಾರಿಯ ಟೈಯರ್ ಬ್ಲಾಸ್ಟ್ …

Read More »

ಪಂಚಮಸಾಲಿ ಸಮುದಾಯಕ್ಕೆ ಬಿಗ್‌ ಶಾಕ್:‌ ʼಮೀಸಾಲಾತಿ ಸಾಧ್ಯವಿಲ್ಲʼ ಎಂದ ರಾಜ್ಯ ಸರ್ಕಾರ..!

ಬೆಂಗಳೂರು: ಪಂಚಮಸಾಲಿ ಸಮುದಾಯವನ್ನ ಪ್ರವರ್ಗ 2ಎ ಸೇರಿಸಬೇಕು ಎಂದು ಆಗ್ರಹಿಸಿ ಬಸವ ಜಯಮೃತ್ಯುಂಜಯ ಸ್ವಾಮೀಜಿ ನೇತೃತ್ವದಲ್ಲಿ ಹೋರಾಟ ಮುಂದುವರೆದಿದೆ. ಈ ಮಧ್ಯೆ ರಾಜ್ಯ ಸರ್ಕಾರ ಶಾಕ್ ಪಂಚಮಸಾಲಿ ಸಮುದಾಯಕ್ಕೆ ಬಿಗ್‌ ಶಾಕ್‌ ನೀಡಿದ್ದು, ಮೀಸಲಾತಿ ಕಲ್ಪಿಸಲು ಸಾಧ್ಯವಿಲ್ಲ ಎಂದು ಸಚಿವರ ಮೂಲಕ ಸ್ಪಷ್ಟ ಸಂದೇಶ ರವಾನಿಸಿದೆ. ಹೌದು, ಸರ್ಕಾರದ ನಿಲುವನ್ನ ಧರಣಿ ನಿರತ ಮುಖಂಡರಿಗೆ ತಿಳಿಸಿದ್ದು, ನೀವು ಪಟ್ಟು ಕದಿಲಿಸದೇ ಈ ರೀತಿ ಹೋರಾಟ ಮಾಡಿದ್ರೆ ಪ್ರಯೋಜನೆ ಇಲ್ಲ. ಹೋರಾಟ …

Read More »

ಭಾರತದಲ್ಲಿ ‘ವಾಟ್ಸ್ ಆಪ್’ ಬ್ಯಾನ್.?

ನವದೆಹಲಿ : ಕೇಂದ್ರ ಸರ್ಕಾರ ಗುರುವಾರ ಎಲ್ಲ ಹೊಸ ಮಾಹಿತಿ ತಂತ್ರಜ್ಞಾನ ನಿಯಮಗಳು 2021 ಅನ್ನು ಪ್ರಕಟಿಸಿದ್ದು, ಇದರಲ್ಲಿ ಮಧ್ಯವರ್ತಿ ಮಾರ್ಗದರ್ಶಿ ಸೂತ್ರಗಳು ಮತ್ತು ಡಿಜಿಟಲ್ ಮಾಧ್ಯಮ ನೀತಿ ಸಂಹಿತೆ ಯನ್ನು ಒಳಗೊಂಡಿದೆ. ಹೊಸ ನಿಯಮ ಜಾರಿಗೆ ಬರಲು ಸ್ವಲ್ಪ ಸಮಯ ಹಿಡಿಯಲಿದ್ದು, ಸಂದೇಶದ ಮೂಲವನ್ನು ಗುರುತಿಸುವ ದೃಢ ನಿಲುವನ್ನು ಸರ್ಕಾರ ಮುಂದಿಟ್ಟಿದೆ. ಅಂದರೆ ಸಂದೇಶಗಳಿಗೆ ಎಂಡ್ ಟು ಎಂಡ್ ಎನ್ ಕ್ರಿಪ್ಶನ್ ಬಳಸುವ ವಾಟ್ಸಾಪ್, ಸಿಗ್ನಲ್, ಟೆಲಿಗ್ರಾಂ ಮುಂತಾದ …

Read More »

1.20 ಕೋಟಿ ರೂ. ಮೊತ್ತದ ಜೆಜೆಎಂ ಹಾಗೂ ಕಾಂಕ್ರೀಟ್ ರಸ್ತೆ ಕಾಮಗಾರಿಗೆ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರಿಂದ ಗುದ್ದಲಿ ಪೂಜೆ

ಗೋಕಾಕ : ಪೈಪಲೈನ್ ಮೂಲಕ 1242 ಮನೆಗಳಿಗೆ ಕುಡಿಯುವ ನೀರಿನ ಸೌಕರ್ಯ ತಲುಪಲಿದ್ದು, ಈ ಯೋಜನೆಗಾಗಿ ಒಂದು ಕೋಟಿ ರೂ. ಅನುದಾನ ಬಿಡುಗಡೆಯಾಗಿದೆ ಎಂದು ಕೆಎಂಎಫ್ ಅಧ್ಯಕ್ಷ ಹಾಗೂ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು. ಇತ್ತೀಚೆಗೆ ತಾಲೂಕಿನ ಕೌಜಲಗಿಯಲ್ಲಿ ಜರುಗಿದ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ನೆರವೇರಿಸಿ ಮಾತನಾಡಿದ ಅವರು, ಮನೆ ಮನೆಗೆ ಗಂಗೆ ಎಂಬ ವಿನೂತನ ಯೋಜನೆಯನ್ನು ಸರ್ಕಾರ ಜಾರಿಗೊಳಿಸಿದ್ದು, ಇದನ್ನು ಗ್ರಾಮಸ್ಥರು ಸದುಪಯೋಗಪಡಿಸಿಕೊಳ್ಳುವಂತೆ ಕೋರಿದರು. ಈಗಾಗಲೇ ಜಲಜೀವನ …

Read More »

ಕೈಯಲ್ಲಿ ತಲ್ವಾರ್ ಹಿಡಿದು ಬರ್ತ್ ಡೇ ಆಚರಣೆ

ಬೆಳಗಾವಿ – ಇಲ್ಲಿಯ ಶಾಲಾ ಆವರಣವೊಂದರಲ್ಲಿ  ಬರ್ತ್ ಡೇ ಆಚರಣೆ ನಡೆದಿದ್ದು, ವಿಡೀಯೋ ವೈರಲ್ ಆಗಿದೆ. ವಿಜಯನಗರ (ಹಿಂಡಲಗಾ) ಶಾಲಾ ಆವರಣದಲ್ಲಿ ಬುಧವಾರ ರಾತ್ರಿ ಸ್ಥಳೀಯ ಮುಖಂಡ ಜ್ಯೋತಿಬಾ (ಮುತ್ತುರಾಜ್) ಎನ್ನುವವರ ಬರ್ತ್ ಡೇ ಆಚರಿಸಲಾಗಿದೆ. ಜೆ ಬಾಸ್ ಎಂದೂ, ಜ್ಯೋತಿಬಾ ಅಣ್ಣಾ ಎಂದು ಬ್ಯಾನರ್ ಹಾಕಿಕೊಂಡು ಜೋರಾದು ಸಂಗೀತ, ನೃತ್ಯದೊಂದಿಗೆ ಬರ್ತ್ ಡೇ ಪಾರ್ಟಿ ನಡೆದಿದೆ. ನೂರಾರು ಜನರು ಸೇರಿ ಕುಣಿದು ಕುಪ್ಪಳಿಸಿ ಬರ್ತ್ ಡೇ ಆಚರಿಸಿದ್ದು, ಕೈಯಲ್ಲಿ …

Read More »

ಡಿಜಿಟಲ್ ಮಾಧ್ಯಮ, ಸಾಮಾಜಿಕ ಜಾಲತಾಣ, ಒಟಿಟಿ ಗಳಿಗೆ ಸರ್ಕಾರದಿಂದ ಮಾರ್ಗಸೂಚಿ ಪ್ರಕಟ

ಹೊಸದಿಲ್ಲಿ: ಸಾಮಾಜಿಕ ಜಾಲತಾಣಗಳು, ಒಟಿಟಿ ಪ್ಲಾಟ್ ಫಾರ್ಮ್, ಡಿಜಿಟಲ್ ಮಾಧ್ಯಮಗಳಿಗೆ ಗುರುವಾರ ಸರ್ಕಾರ ಹೊಸ ಮಾರ್ಗಸೂಚಿಯೊಂದನ್ನು ಪ್ರಕಟಿಸಿದೆ. ಕೇಂದ್ರ ಸಚಿವ ರವಿ ಶಂಕರ್ ಪ್ರಸಾದ್ ಅವರು ಸುದ್ದಿಗೋಷ್ಠಿ ನಡೆಸಿ ಈ ಮಾಹಿತಿಗಳನ್ನು ಹಂಚಿಕೊಂಡರು. ಹೊಸ ಮಾರ್ಗಸೂಚಿಗಳು ಸಾಮಾಜಿಕ ಜಾಲತಾಣ ಸೇರಿದಂತೆ ವಿವಿಧ ಸಮೂಹ ಸಂವಹನ ಮಾಧ್ಯಮಗಳ ವಿಷಯದ ಮೇಲೆ ನಿಗಾ ಇಡುತ್ತವೆ ಎಂದರು. ದೇಶದಲ್ಲಿ ಸಾಮಾಜಿಕ ಮಾಧ್ಯಮಗಳ ದುರುಪಯೋಗವನ್ನು ಎತ್ತಿ ತೋರಿಸಿದ ಸಚಿವರು ದೇಶದಲ್ಲಿ ಕಾರ್ಯನಿರ್ವಹಿಸುತ್ತಿರುವ ಸಾಮಾಜಿಕ ಮಾಧ್ಯಮ ವೇದಿಕೆಗಳು …

Read More »

ವಿಡಿಯೋ ವೈರಲ್; ಗೋವಾದಲ್ಲಿ ಕನ್ನಡಿಗರ ಮೇಲೆ ದಬ್ಬಾಳಿಕೆ

ಪಣಜಿ, ಫೆಬ್ರವರಿ 25: ಗೋವಾದಲ್ಲಿ ಪದೇ ಪದೇ ಕನ್ನಡಿಗರ ಮೇಲೆ ದಬ್ಬಾಳಿಕೆ ಮುಂದುವರಿಯುತ್ತಲೇ ಇದೆ. ಪ್ರವಾಸಕ್ಕೆಂದು ತೆರಳಿದ್ದ ಕನ್ನಡಿಗರು ಬಯಲಲ್ಲಿ ಅಡುಗೆ ತಯಾರಿಸಿದ್ದಕ್ಕಾಗಿ ಅವರ ಮೇಲೆ ಗೋವಾ ಪುಂಡರು ಅವಾಚ್ಯ ಶಬ್ದಗಳಿಂದ ನಿಂದಿಸಿ‌, ಹಲ್ಲೆಗೆ ಯತ್ನಿಸಿರುವ ಘಟನೆ ನಡೆದಿದೆ. ಬಾಗಲಕೋಟೆ ಮೂಲದ ಯುವಕರ ತಂಡ ಗೋವಾಕ್ಕೆ ಪ್ರವಾಸಕ್ಕೆ ತೆರಳಿತ್ತು. ಈ ವೇಳೆ ಒಂದು ಬಯಲಲ್ಲಿ ಚಿಕ್ಕ ಗ್ಯಾಸ್ ಸಿಲಿಂಡರ್ ಇಟ್ಟುಕೊಂಡು ಅಡುಗೆ ಮಾಡಿಕೊಳ್ಳುತ್ತಿದ್ದ ವೇಳೆ ಸ್ಥಳಕ್ಕೆ ಬಂದ ಕೆಲ ಗೋವಾದ …

Read More »

ಇಂಧನ ಬೆಲೆ ಏರಿಕೆ ಖಂಡಿಸಿ ಎಲೆಕ್ಟ್ರಿಕ್ ಸ್ಕೂಟರ್ ಏರಿದ ದೀದಿ

ಕೋಲ್ಕತ್ತಾ,ಫೆ.25- ಕೇಂದ್ರ ಸರ್ಕಾರದ ಇಂಧನ ಬೆಲೆ ಏರಿಕೆ ಖಂಡಿಸಿ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು, ಸ್ಕೂಟರ್‍ನಲ್ಲಿ ಸಂಚರಿಸುತ್ತಾ ವಿನೂತನವಾಗಿ ಪ್ರತಿಭಟನೆ ನಡೆಸಿದರು. ದೇಶದಲ್ಲಿ ಇಂಧನ ಬೆಲೆ ಏರಿಕೆ ವಿರುದ್ಧ ಪ್ರತಿಭಟನೆಯ ಸಂಕೇತವಾಗಿ ರಾಜ್ಯ ಕಾರ್ಯದರ್ಶಿ ನಬಣ್ಣಾ ಅವರೊಂದಿಗೆ ಮುಖ್ಯಮಂತ್ರಿಯವರು ಸ್ಕೂಟರ್‍ನಲ್ಲಿ ಕುಳಿತಿದ್ದರು. ಇದರ ವಿಡಿಯೋ ಈಗ ವೈರಲ್ ಆಗಿದ್ದು, ಸಿಎಂ ಬ್ಯಾನರ್ಜಿ ಅವರು, ಹೆಲ್ಮೆಟ್ ಧರಿಸಿ, ಪೆಟ್ರೋಲ್ ಬೆಲೆ ಏರಿಕೆಯ ಖಂಡಿಸಿದರು. ಪ್ರದರ್ಶನ ಫಲಕವನ್ನು ಕುತ್ತಿಗೆಗೆ ಹಾಕಿಕೊಂಡು …

Read More »

ಮೋದಿʼ ಸ್ಟೇಡಿಯಂ ಪೆವಿಲಿಯನ್​ಗೆ ಅದಾನಿ, ಅಂಬಾನಿ ಹೆಸರಿಟ್ಟಿರುವುದರ ಹಿಂದಿದೆ ಈ ಕಾರಣ

ಗುಜರಾತ್​ನಲ್ಲಿ ರಾಷ್ಟ್ರಪತಿ ರಾಮನಾಥ್​ ಕೋವಿಂದ್​ ನರೇಂದ್ರ ಮೋದಿ ಸ್ಟೇಡಿಯಂನ್ನು ಉದ್ಘಾಟನೆ ಮಾಡಿದ ಬಳಿಕ ಸಾಮಾಜಿಕ ಜಾಲತಾಣದಲ್ಲಿ ಹೊಸ ವಿವಾದದ ಅಲೆಯೇ ಹುಟ್ಟಿಕೊಂಡಿದೆ. ಸರ್ದಾರ್​ ವಲ್ಲಭಬಾಯ್​ ಪಟೇಲ್​ರ ಹೆಸರಲ್ಲಿದ್ದ ಈ ಸ್ಟೇಡಿಯಂಗೆ ಮರುನಾಮಕರಣದ ಅಗತ್ಯವಿತ್ತೇ ಎಂದು ವಿಪಕ್ಷಗಳು ಕೆಂಡ ಕಾರ್ತಿವೆ . ಈ ವಿವಾದ ಇನ್ನೂ ಸುದ್ದಿಯಲ್ಲಿ ಇರುವಾಗಲೇ ಇದೀಗ ಅದಾನಿ ಹಾಗೂ ಅಂಬಾನಿ ಹೆಸರು ಕೂಡ ಈ ಮೈದಾನದ ವಿವಾದದ ಜೊತೆ ಥಳುಕು ಹಾಕಿಕೊಂಡಿದೆ. ಇದಕ್ಕೆ ಮುಖ್ಯ ಕಾರಣ ಅಂದರೆ …

Read More »

ತಮಿಳುನಾಡು: ಪರೀಕ್ಷೆ ಇಲ್ಲದೆ 9, 10, 11ನೇ ತರಗತಿ ವಿದ್ಯಾರ್ಥಿಗಳು ಪಾಸ್, ಸರ್ಕಾರಿ ನೌಕರರ ನಿವೃತ್ತಿ ವಯಸ್ಸು 60ಕ್ಕೆ ಏರಿಕೆ

ಚೆನ್ನೈ: ತಮಿಳುನಾಡು ಸರ್ಕಾರ 2020-21ನೇ ಸಾಲಿನ 9, 10 ಮತ್ತು 11 ನೇ ತರಗತಿಯ ವಿದ್ಯಾರ್ಥಿಗಳನ್ನು ಪರೀಕ್ಷೆಯಿಲ್ಲದೆ ಮುಂದಿನ ತರಗತಿಗೆ ತೇರ್ಗಡೆ ಮಾಡಿದ್ದು, ಸರ್ಕಾರಿ ನೌಕರರ ನಿವೃತ್ತಿ ವಯಸ್ಸನ್ನು 60 ವರ್ಷಕ್ಕೆ ಹೆಚ್ಚಿಸಿದೆ. 2020-21ನೇ ಸಾಲಿನ 9, 10 ಮತ್ತು 11 ನೇ ತರಗತಿಯ ವಿದ್ಯಾರ್ಥಿಗಳನ್ನು ಪರೀಕ್ಷೆಯಿಲ್ಲದೆ ಪಾಸ್ ಮಾಡಲಾಗಿದ್ದು, ಇದರ ಅನುಷ್ಠಾನದ ಬಗ್ಗೆ ವಿವರವಾದ ಮಾರ್ಗಸೂಚಿಗಳನ್ನು ಶೀಘ್ರದಲ್ಲೇ ಬಿಡುಗಡೆ ಮಾಡಲಾಗುವುದು ಎಂದು ತಮಿಳುನಾಡು ಮುಖ್ಯಮಂತ್ರಿ ಎಡಪ್ಪಾಡಿ ಕೆ ಪಳನಿಸ್ವಾಮಿ …

Read More »