Breaking News

Yearly Archives: 2021

ಬ್ಯಾಂಕ್ ಗ್ರಾಹಕರೇ ಗಮನಿಸಿ : ಮುಷ್ಕರ ಸೇರಿದಂತೆ ಮಾರ್ಚ್‌ ತಿಂಗಳಿನಲ್ಲಿ 11 ದಿನ ಬ್ಯಾಂಕ್‌ ಬಂದ್‌,

ನವದೆಹಲಿ: ಫೆಬ್ರವರಿ ತಿಂಗಳು ಮುಗಿಯುತ್ತಿರುವುದರಿಂದ ಬ್ಯಾಂಕ್ ಖಾತೆದಾರರು ಗಮನಿಸಬೇಕಾದ ಅಂಶವೆಂದರೆ ಮುಂಬರುವ ಮಾರ್ಚ್‌ ತಿಂಗಳಿನಲ್ಲಿ ದೇಶಾದ್ಯಂತ ಬ್ಯಾಂಕ್ ಗಳು ಮುಚ್ಚುವ 11 ದಿನಗಳು ಮುಚ್ಚಲಿವೆ. ನೀವು ನಿಮ್ಮ ಯಾವುದೇ ಕೆಲಸವನ್ನು ಮಾರ್ಚ್ ಗೆ ಮುಂದೂಡಿದ್ದರೆ, ನೀವು ಒಮ್ಮೆ ಬ್ಯಾಂಕ್‌ ಗಳಿಗೆ ರಜೆಯಲ್ಲಿರುವ ಕ್ಯಾಲೆಂಡರ್ ಅನ್ನು ನೋಡಬೇಕು. ಆ ದಿನಗಳಲ್ಲಿ ಯಾವುದೇ ಬ್ಯಾಂಕ್ ವ್ಯವಹಾರವನ್ನು ಯೋಜಿಸುವ ಮುನ್ನ ಬ್ಯಾಂಕ್ ರಜಾ ದಿನಗಳನ್ನು ತಿಳಿದುಕೊಳ್ಳುವುದು ಉತ್ತಮವಾಗಿದೆ ಕೂಡ.   ಭಾರತೀಯ ರಿಸರ್ವ್ ಬ್ಯಾಂಕ್ …

Read More »

ಶ್ರೀ ಮಹಾಲಕ್ಷ್ಮೀದೇವಿ ಹಾಗೂ ಶ್ರೀ ಬಸವೇಶ್ವರ ಜಾತ್ರಾ ಮಹೋತ್ಸವ

ಮೂಡಲಗಿ: ಕೊರೊನಾ ಕಾರಣದಿಂದ ಕಳೆದ ಒಂದು ವರ್ಷದಿಂದ ಜಾತ್ರೆ, ಹಬ್ಬ ಹರಿದಿನಗಳು ನಿಂತುಹೋಗಿದ್ದವು. ದೇವಿಯ ಕೃಪೆಯಿಂದ ಕರೋನಾ ಕಾರ್ಮೋಡ ಕರಗಿ ಮತ್ತೆ ಎಂದಿನಂತೆ ಜನಜೀವನ ಸಾಗುವಂತಾಗಲಿ ಎಂದು ಶ್ರೀ ಮಹಾಲಕ್ಷ್ಮೀ ದೇವಿಯಲ್ಲಿ ಪ್ರಾರ್ಥಿಸೋಣ ಎಂದು ರಾಜ್ಯ ಸಭಾ ಸದಸ್ಯ ಹಾಗೂ ರಾಜ್ಯ ಬಿಜೆಪಿ ರೈತ ಮೋರ್ಚಾ ಅಧ್ಯಕ್ಷರಾದ ಈರಣ್ಣ ಕಡಾಡಿ ಹೇಳಿದ್ದಾರೆ. ಮೂಡಲಗಿ ತಾಲೂಕಿನ ಮಸಗುಪ್ಪಿ ಗ್ರಾಮದ ಶ್ರೀ ಮಹಾಲಕ್ಷ್ಮೀದೇವಿ ಹಾಗೂ ಶ್ರೀ ಬಸವೇಶ್ವರ ಜಾತ್ರಾ ಮಹೋತ್ಸವದ ಅಂಗವಾಗಿ ಆಯೋಜಿಸಿದ …

Read More »

ಬೆಳಗಾವಿ ಸೇರಿದಂತೆ ಕೆಲವೆಡೆ ಲೋಕಸಭೆ ಮತ್ತು ವಿಧಾನಸಭೆಗಳ ಉಪಚುನಾವಣೆಯೂ ಘೋಷಣೆಯಾಗುವ ಸಾಧ್ಯತೆ….!

ನವದೆಹಲಿ – ದೇಶದಲ್ಲಿ 5 ರಾಜ್ಯಗಳ ವಿಧಾನಸಭೆ ಚುನಾವಣೆ ಮಾರ್ಚ್ ತಿಂಗಳಲ್ಲಿ ನಡೆಯಲಿದೆ. ಇದಕ್ಕಾಗಿ ದಿನಾಂಕ ನಿಗದಿಪಡಿಸಲು ಕೇಂದ್ರ ಚುನಾವಣೆ ಆಯೋಗ  ಬೆಳಗ್ಗೆ ಸಭೆ ಸೇರಲಿದೆ. ಆಸ್ಸಾಂ, ಪಶ್ಚಿಮಬಂಗಾಳ, ಪುದುಚೆರಿ, ತಮಿಳುನಾಡು ಹಾಗೂ ಕೇರಳ ರಾಜ್ಯಗಳಲ್ಲಿ ಚುನಾವಣೆ ನಡೆಯಬೇಕಿದೆ. ಇದರೊಂದಿಗೆ, ಬೆಳಗಾವಿ ಸೇರಿದಂತೆ ಕೆಲವೆಡೆ ಲೋಕಸಭೆ ಮತ್ತು ವಿಧಾನಸಭೆಗಳ ಉಪಚುನಾವಣೆಯೂ ಘೋಷಣೆಯಾಗುವ ಸಾಧ್ಯತೆ ಇದೆ. ಕರ್ನಾಟಕದಲ್ಲಿ ಬೆಳಗಾವಿ ಲೋಕಸಭೆ ಮತ್ತು 3 ವಿಧಾನಸಭೆ ಸ್ಥಾನಗಳಿಗೆ ಚುನಾವಣೆ ನಡೆಯಬೇಕಿದೆ.

Read More »

ಬೆಂಗಳೂರಲ್ಲಿ ಅನಾವರಣಗೊಂಡಿದೆ ಹೊಸ ಪಾನ್​ ಪ್ರಪಂಚ

ಊಟ ಆದ್ಮೇಲೆ ತಿನ್ನೋ ಪಾನ್ ಬೀಡಾ ನಿಮಗಿಷ್ಟವಾ?ಅದೆಷ್ಟು ವೆರೈಟಿ ಪಾನ್ ಗಳನ್ನ ಸವಿಯಬಹುದು ಎನ್ನುವ ಅಂದಾಜು ನಿಮಗಿದೆಯಾ? ಪಾನ್ ಅಂದ್ರೆ ಸಾದಾ ಪಾನ್, ಗುಲ್ಕನ್ ಹಾಕಿರೋ ಸ್ವೀಟ್ ಬೀಡಾ, ಜರ್ದಾ ಇಂಥಾ ಒಂದೈದಾರು ವೆರೈಟಿ ಪರಿಚಯ ಇರ್ಬಹುದು.. ಆದ್ರೆ ಇಲ್ಲೊಂದು ಕಡೆ ಬರೋಬ್ಬರಿ 150ಕ್ಕೂ ಹೆಚ್ಚು ವೆರೈಟಿ ಪಾನ್ ಗಳ ದೊಡ್ಡ ಭಂಡಾರವೇ ತೆರೆದಿದೆ… ಯಾವ್ದಪ್ಪಾ ಇದು ಅಂದ್ಕೊತಿದೀರಾ? ಇಲ್ಲಿದೆ ಫುಲ್ ಡೀಟೆಲ್ಸ್…! ಪಿಸ್ತಾ ಪಾನ್, ಹೇಜಲ್ ನಟ್ ಪಾನ್, …

Read More »

ಶಾಲಾರಂಭದಲ್ಲಿ ಕರ್ನಾಟಕವೇ ಮುಂದು; ಸಚಿವ ಸುರೇಶ್ ಕುಮಾರ್

ಬೆಂಗಳೂರು (ಫೆಬ್ರವರಿ 24): ಆಂಧ್ರ ಮತ್ತು ಪಂಜಾಬ್ ಹೊರತುಪಡಿಸಿದರೆ ಆರನೇ ತರಗತಿಯಿಂದ ಶಾಲೆ ಆರಂಭ ಮಾಡಿರುವುದು ನಮ್ಮ ರಾಜ್ಯ ಮಾತ್ರ. ನಾವು ಎಲ್ಲರ ಹಿತದೃಷ್ಟಿಯಿಂದ ಈ ನಿರ್ಧಾರ ಕೈಗೊಂಡಿದ್ದೇವೆ. ಇನ್ನೂ ಕೋವಿಡ್ ತಾಂತ್ರಿಕ ಸಲಹಾ ಸಮಿತಿ ಸಭೆ ಸೇರಿ ಒಂದನೇ ತರಗತಿಯಿಂದ ಶಾಲೆ ಆರಂಭಿಸಲೂ ಚಿಂತನೆ ನಡೆಸಿದ್ದೇವೆ. ಹಾಗೆಯೇ ಮಕ್ಕಳ ಮತ್ತು ಶಾಲೆಗಳ ಹಿತದೃಷ್ಟಿಯಿಂದ ಶಾಲಾ ದಾಖಲಾತಿ ಸಮಯವನ್ನೂ ವಿಸ್ತರಿಸಲಾಗಿದೆ. ಇದೆಲ್ಲವನ್ನೂ ನಮ್ಮ ಆಡಳಿತ ಮಂಡಳಿಗಳೂ ಗಮನಿಸಬೇಕಿದೆ ಎಂದೂ ಸುರೇಶ್ ಕುಮಾರ್ …

Read More »

ಧರ್ಮಟ್ಟಿ ಪಿಕೆಪಿಎಸ್ ಪತ್ತ ಹೆಚ್ಚಳ, 2 ಕೋಟಿ ರೂ.ಗಳಿಂದ 3.50 ಕೋಟಿ ರೂ.ಗಳಿಗೆ ಏರಿಕೆ : ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ

ಮೂಡಲಗಿ : ಧರ್ಮಟ್ಟಿ ಪಿಕೆಪಿಎಸ್‍ನಲ್ಲಿ ಈಗಾಗಲೇ 2 ಕೋಟಿ ರೂ.ಗಳ ಪತ್ತನ್ನು 3.50 ಕೋಟಿ ರೂ.ಗಳಿಗೆ ಹೆಚ್ಚಿಸಿ ರೈತರಿಗೆ ಶೂನ್ಯ ಬಡ್ಡಿದರದಲ್ಲಿ ಸಾಲವನ್ನು ನೀಡಲಾಗುವುದು ಎಂದು ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು. ತಾಲೂಕಿನ ಧರ್ಮಟ್ಟಿ ಗ್ರಾಮದ ಲಕ್ಷ್ಮೀ ದೇವಸ್ಥಾನಕ್ಕೆ ತೆರಳಿ ದೇವರ ದರ್ಶನ ಪಡೆದ ಬಳಿಕ ಸಾರ್ವಜನಿಕರನ್ನುದ್ಧೇಶಿಸಿ ಮಾತನಾಡಿದ ಅವರು, ರೈತರಿಗೆ ಪಿಕೆಪಿಎಸ್ ಗಳು ಜೀವನಾಡಿಯಾಗಿವೆ ಎಂದು ಹೇಳಿದರು. ಧರ್ಮಟ್ಟಿ ಪಿಕೆಪಿಎಸ್‍ನಿಂದ ರೈತರಿಗೆ ಅನುಕೂಲವಾಗಲು ಸಾಲವನ್ನು …

Read More »

ರಾಜ್ಯಕ್ಕೆ ಬಂದ ನಂತರ ತಕ್ಕ ಪ್ರತ್ಯುತ್ತರ ನೀಡುತ್ತೇನೆ: ಕಾಂಗ್ರೆಸ್ ನ ಬಿ ಟೀಂ ಎಂದ ಸಚಿವರಿಗೆ ಯತ್ನಾಳ್ ತಿರುಗೇಟು

ನವದೆಹಲಿ: “ನಾನು ಕರ್ನಾಟಕಕ್ಕೆ ಹಿಂದಿರುಗಿದ ನಂತರ ಅವರಿಗೆ ತಕ್ಕ ಪ್ರತ್ಯುತ್ತರ ನೀಡುತ್ತೇನೆ” ಎಂದು ಹೇಳುವ ಮೂಲಕ ವಿಜಾಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್‍ ಅವರು ತಾವು ಕಾಂಗ್ರೆಸ್ ನ ಬಿ ಟೀಂ ಎಂದ ಸಚಿವ ಮುರುಗೇಶ್.ಆರ್ ನಿರಾಣಿ ಅವರಿಗೆ ಮಂಗಳವಾರ ತಿರುಗೇಟು ನೀಡಿದ್ದಾರೆ. ಕಾಂಗ್ರೆಸ್‍ನ ಬಿ ಟೀಮ್‍ನಂತೆ ಕೆಲಸ ಮಾಡುತ್ತಿರುವ ಬಸನಗೌಡ ಪಾಟೀಲ್ ಯತ್ನಾಳ್‍ಗೆ ತಾಕತ್ತಿದ್ದರೆ, ಮೊದಲು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ, ಪಕ್ಷೇತರ ಶಾಸಕನಾಗಿ ಗೆದ್ದು ಬರಲಿ ಎಂದು …

Read More »

ಕೇರಳದಲ್ಲಿ ‘ಕುಸ್ತಿ’ ದೆಹಲಿಯಲ್ಲಿ ‘ದೋಸ್ತಿ’: ಪ್ರಲ್ಹಾದ ಜೋಶಿ ವಾಗ್ದಾಳಿ

ತಿರುವನಂತಪುರ: ಕಾಂಗ್ರೆಸ್ ಹಾಗೂ ಎಡ ಪಕ್ಷಗಳ ಕಪಟತೆ ವಿರುದ್ಧ ವಾಗ್ದಾಳಿ ನಡೆಸಿರುವ ಕೇಂದ್ರ ಸಚಿವ ಹಾಗೂ ಬಿಜೆಪಿಯ ಹಿರಿಯ ನಾಯಕ ಪ್ರಲ್ಹಾದ ಜೋಶಿ, ಎರಡೂ ಪಕ್ಷಗಳು ಪಶ್ಚಿಮ ಬಂಗಾಳ ಹಾಗೂ ತಮಿಳುನಾಡಿನಲ್ಲಿ ಸ್ನೇಹಿತರಾಗಿದ್ದು, ಆದರೆ ಕೇರಳದಲ್ಲಿ ಪರಸ್ಪರ ಸ್ಪರ್ಧಿಸುತ್ತಿದೆ ಎಂದು ಲೇವಡಿ ಮಾಡಿದರು. ಲೆಫ್ಟ್ ಡೆಮಾಕ್ರಟಿಕ್ ಫ್ರಂಟ್ ಮತ್ತು ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ ಕೇರಳದಲ್ಲಿ ಸ್ಪರ್ಧಿಸುತ್ತಿದೆ. ಕೇರಳದಲ್ಲಿ ‘ಕುಸ್ತಿ’, ದೆಹಲಿಯಲ್ಲಿ ‘ದೋಸ್ತಿ’. ಈ ಪಕ್ಷಗಳ ಬೂಟಾಟಿಕೆಯನ್ನು ನೋಡಿ. ಟಿಎಂಸಿ ನಾಯಕಿ …

Read More »

ಪೊಗರು’ ವಿವಾದಕ್ಕೆ ತೆರೆ: ವಿವಾದಿತ ದೃಶ್ಯಕ್ಕೆ ಕತ್ತರಿ ಹಾಕುತ್ತೇವೆ ಎಂದ ನಿರ್ದೇಶಕ ನಂದ ಕಿಶೋರ್

ಬೆಂಗಳೂರು: ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಅಭಿನಯದ ಪೊಗರು ಚಿತ್ರದಲ್ಲಿ ಬ್ರಾಹ್ಮಣ ಸಮುದಾಯಕ್ಕೆ ಅವಮಾನ ಮಾಡಲಾಗಿದೆ ಎಂಬ ಆರೋಪ ಕೇಳಿಬಂದಿತ್ತು. ಇದೇ ವಿಚಾರವಾಗಿ ಹೋರಾಟ ನಡೆಸುವುದಾಗಿಯೂ ಬ್ರಾಹ್ಮಣ ಸಮುದಾಯದ ಸಂಘದ ಅಧ್ಯಕ್ಷ ಸಚ್ಚಿದಾನಂದ ಮೂರ್ತಿ ಎಚ್ಚರಿಕೆ ನಿಡಿದ್ದರು. ಇದರ ಬೆನ್ನಲ್ಲೇ ಇದೀಗ ವಿವಾದಕ್ಕೆ ತೆರೆಯೆಳೆಯುವ ಯತ್ನ ನಡೆದಿದೆ. ಪೊಗರು ಚಿತ್ರ ವಿವಾದ ವಿಚಾರವಾಗಿ ಸುದ್ದಿಗೋಷ್ಠಿ ನಡೆಸಿದ ನಿರ್ದೇಶಕ ನಂದ ಕಿಶೋರ್, ಯಾವುದೇ ಸಮುದಾಯಕ್ಕೆ ನೋವುಂಟು ಮಾಡಲು ಸೀನ್ ಮಾಡಿಲ್ಲ. ಬ್ರಾಹ್ಮಣರಿಗೆ …

Read More »

ಬ್ರೇಕಿಂಗ್:‌ ಬಿಜೆಪಿ ರಾಜ್ಯ ʼಉಪಾಧ್ಯಕ್ಷ ಸ್ಥಾನʼಕ್ಕೆ ಅರವಿಂದ ಲಿಂಬಾವಳಿ ರಾಜೀನಾಮೆ..!

ಬೆಂಗಳೂರು: ಭಾರತೀಯ ಜನತಾ ಪಕ್ಷದ ಕರ್ನಾಟಕ ರಾಜ್ಯ ಉಪಾಧ್ಯಕ್ಷ ಹುದ್ದೆಗೆ ಅರಣ್ಯ, ಕನ್ನಡ ಮತ್ತು ಸಂಸ್ಕೃತಿ ಸಚಿವ ಅರವಿಂದ ಲಿಂಬಾವಳಿ ಅವರು ರಾಜೀನಾಮೆ ನೀಡಿದ್ದಾರೆ. ಈ ಬಗ್ಗೆ ಸ್ಪಷ್ಟನೆ ನೀಡಿರುವ ಸಚಿವರು, ‘ಪಕ್ಷದಲ್ಲಿ ಒಬ್ಬ ವ್ಯಕ್ತಿ, ಒಂದು ಹುದ್ದೆ ಎನ್ನುವ ಸಿದ್ಧಾಂತವಿದ್ದು, ಇದರನ್ವಯ ನಾನು ಸಚಿವ ಸ್ಥಾನ ಅಲಂಕರಿಸಿರುವುದರಿಂದ, ಪಕ್ಷದ ರಾಜ್ಯ ಉಪಾಧ್ಯಕ್ಷ ಹುದ್ದೆಗೆ ರಾಜೀನಾಮೆ ಸಲ್ಲಿಸುತ್ತಿದ್ದೇನೆ. ಪಕ್ಷದ ರಾಜ್ಯ ಉಪಾದ್ಯಕ್ಷನಾಗಿ ಜವಾಬ್ದಾರಿ ನಿರ್ವಹಿಸಿದ ಅಧಿಯಲ್ಲಿ ತಮಗೆ ಸಲಹೆ ಸಹಕಾರ …

Read More »