Breaking News

Yearly Archives: 2021

GST ವ್ಯಾಪ್ತಿಗೆ ಪೆಟ್ರೋಲ್‌, ಡಿಸೇಲ್‌ : ಕೇಂದ್ರ ಇಂಧನ ಸಚಿವ ಧರ್ಮೇಂದ್ರ ಪ್ರಧಾನ್ ಒತ್ತಾಯ

ನವದೆಹಲಿ : ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ಏರಿಕೆಯಿಂದ ದೇಶೀಯ ಮಾರುಕಟ್ಟೆಯಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆಯಾಗುತ್ತಿದೆ ಎಂದು ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವ ಧರ್ಮೇಂದ್ರ ಪ್ರಧಾನ್ ಹೇಳಿದ್ದಾರೆ. ಕರೋನಾ ವೈರಸ್ ಪೂರೈಕೆ ಕಡಿತಕ್ಕೆ ಕಾರಣವಾಗಿ ತೈಲ ಉತ್ಪಾದನೆಮೇಲೂ ಪರಿಣಾಮ ಬೀರಿತು. ಪೆಟ್ರೋಲಿಯಂ ಉತ್ಪನ್ನಗಳನ್ನು ಅದರ ಪರಿಮಿತಿಯೊಳಗೆ ಸೇರಿಸಿ ಜನರಿಗೆ ಅನುಕೂಲ ಮಾಡಿಕೊಡುವ ನಿಟ್ಟಿನಲ್ಲಿ ಜಿಎಸ್ ಟಿ ಕೌನ್ಸಿಲ್ ಗೆ ನಾವು ನಿರಂತರವಾಗಿ ಮನವಿ …

Read More »

ಕೃಷ್ಣಾ ಮೇಲ್ದಂಡೆ ಯೋಜನೆ ವಿಚಾರದಲ್ಲಿ ಸರ್ಕಾರದಿಂದ ಕಣ್ಣೊರೆಸುವ ತಂತ್ರ: ಎಂಬಿ ಪಾಟೀಲ್ ವಾಗ್ದಾಳಿ

ವಿಜಯಪುರ: ಕೃಷ್ಣಾ ಮೇಲ್ದಂಡೆ ಯೋಜನೆಯನ್ನ ರಾಷ್ಟ್ರೀಯ ಯೋಜನೆಯಾಗಿ ಘೋಷಣೆ ಮಾಡುವುದು ಕಷ್ಟಸಾಧ್ಯ.  ಒಂದು ವೇಳೆ ರಾಜ್ಯ ಸರಕಾರ ಕೇಂದ್ರದ ಮೇಲೆ ಒತ್ತಡ ತಂದು ರಾಷ್ಟ್ರೀಯ ಯೋಜನೆ ಎಂದು ಘೋಷಣೆ ಮಾಡಿಸಿದರೆ ಕೃತಜ್ಞತೆ ಸಲ್ಲಿಸುವುದಾಗಿ ಜಲಸಂಪನ್ಮೂಲ ಖಾತೆ ಮಾಜಿ ಸಚಿವ ಎಂ. ಬಿ. ಪಾಟೀಲ ತಿಳಿಸಿದ್ದಾರೆ. ವಿಜಯಪುರ ಜಿಲ್ಲೆಯ ಇಟ್ಟಂಗಿಹಾಳದಲ್ಲಿ ಮಾತನಾಡಿದ ಅವರು, ಯಾವುದೇ ನೀರಾವರಿ ಯೋಜನೆ ರಾಷ್ಟ್ರೀಯ ಯೋಜನೆ ಘೋಷಣೆಯಾಗಬೇಕಾದರೆ ಎರಡು ಅಂಶಗಳನ್ನು ಪ್ರಮುಖವಾಗಿ ಪರಿಗಣಿಸಲಾಗುತ್ತದೆ.  ಭದ್ರಾ ಮೇಲ್ದಂಡೆ ಯೋಜನೆ ರಾಷ್ಟ್ರೀಯ …

Read More »

ಶಿವಮೊಗ್ಗದಂತೆ ಇಲ್ಲೂ ಅಕ್ರಮಗಳ ಹಿಂದೆ ಬಿಜೆಪಿಗರೇ ಇದ್ದಾರೆ. ಈ ದುರಂತಕ್ಕೆ ಉಸ್ತುವಾರಿ ಸಚಿವ ಡಾ. ಕೆ. ಸುಧಾಕರ್ ನೇರ ಹೊಣೆ :ಕಾಂಗ್ರೆಸ್ ಆರೋಪ

ಬೆಂಗಳೂರು (ಫೆ. 23): ಶಿವಮೊಗ್ಗದ ಭದ್ರಾವತಿ ಬಳಿ ಜಿಲೆಟಿನ್ ಸ್ಫೋಟಗೊಂಡ ದುರಂತ ಮಾಸುವ ಮುನ್ನವೇ ಚಿಕ್ಕಬಳ್ಳಾಪುರದಲ್ಲಿ ಅದೇ ರೀತಿಯ ಮತ್ತೊಂದು ಘಟನೆ ನಡೆದಿದೆ. ಚಿಕ್ಕಬಳ್ಳಾಪುರದ ಕಲ್ಲು ಕ್ವಾರಿಯಲ್ಲಿ ಜಿಲೆಟಿನ್ ಸ್ಫೋಟಗೊಂಡು 6 ಜನರು ಸಾವನ್ನಪ್ಪಿದ್ದಾರೆ. ಈ ಪ್ರಕರಣಕ್ಕೆ ಭಾರೀ ಆಕ್ರೋಶ ವ್ಯಕ್ತವಾಗಿದ್ದು, ಪ್ರಧಾನಿ ನರೇಂದ್ರ ಮೋದಿ ಕೂಡ ಈ ಘಟನೆಯ ಬಗ್ಗೆ ಟ್ವೀಟ್ ಮಾಡಿ, ಸಾವನ್ನಪ್ಪಿದವರಿಗೆ ಸಂತಾಪ ಸೂಚಿಸಿದ್ದಾರೆ. ಈಗಾಗಲೇ ಈ ಪ್ರಕರಣದ ತನಿಖೆ ನಡೆಸುವಂತೆ ಸಿಎಂ ಬಿಎಸ್ ಯಡಿಯೂರಪ್ಪ …

Read More »

ಯತ್ನಾಳ್ ಹಿಂದುತ್ವವಾದಿ ಎಂಬುದಕ್ಕೆ ಖುಷಿ ಇದೆ, ಆದರೂ ಪಕ್ಷದ ಶಿಸ್ತಿನ ಒಳಗೆ ಇದ್ದರೆ ಒಳ್ಳೆಯದು; ಈಶ್ವರಪ್ಪ

ಶಿವಮೊಗ್ಗ (ಫೆಬ್ರವರಿ 23); ಇತ್ತೀಚಿನ ದಿನಗಳಲ್ಲಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್  ಸಿಎಂ ಯಡಿಯೂರಪ್ಪ  ವಿರುದ್ದ ಒಂದರ ಹಿಂದೊಂದರಂತೆ ಹೇಳಿಕೆ ನೀಡುತ್ತಲೇ ಇದ್ದಾರೆ. ಇದರಿಂದ ಪಕ್ಷದ ಒಳಗೆ ಮುಜುಗರದ ಪರಿಸ್ಥಿತಿ ಉಂಟಾಗಿದೆ. ಈ ಕುರಿತು ಬಿಜೆಪಿ ಹಿರಿಯ ನಾಯಕರು ಗಂಭೀರವಾಗಿ ಪರಿಗಣಿಸಿದ್ದಾರೆ. ಅಲ್ಲದೆ, ಶಾಸಕ ಯತ್ನಾಳ್​ಗೆ ನೊಟೀಸ್​ ಸಹ ಜಾರಿ ಮಾಡಿದ್ದಾರೆ. ಈ ಕುರಿತು ಇಂದು ಶಿವಮೊಗ್ಗ ದಲ್ಲಿ ಮಾತನಾಡಿರುವ ಸಚಿವ ಕೆ.ಎಸ್​. ಈಶ್ವರಪ್ಪ, “ಯತ್ನಾಳ್ ಅವರು ಸಿಎಂ ಬಗ್ಗೆ ಈ ರೀತಿಯ …

Read More »

ಈಸ್ ಆಫ್ ಡೂಯಿಂಗ್ ಬ್ಯುಸಿನೆಸ್‍ನಲ್ಲಿ ಕರ್ನಾಟಕ ಬೆಸ್ಟ್ : ಶೆಟ್ಟರ್

ಬೆಂಗಳೂರು ಫೆ.23- ಕರ್ನಾಟಕ ರಾಜ್ಯ ಈಸ್ ಆಫ್ ಡೂಯಿಂಗ್ ಬ್ಯೂಸಿನೆಸ್ ಅನುಷ್ಠಾನದಲ್ಲಿ ದೇಶದ ಇತರ ರಾಜ್ಯಗಳಿಗೆ ಹೋಲಿಸಿದರೆ ಮುಂಚೂಣಿಯಲ್ಲಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಜಗದೀಶ ಶೆಟ್ಟರ್ ಹೇಳಿದರು. ಅಫೆಡವಿಟ್ ಬೇಸ್ಡ್ ಕ್ಲಿಯರೆನ್ಸ್ (ಎಬಿಸಿ) ಯೋಜನೆಯ ಅನುಷ್ಠಾನ, ಕೈಗಾರಿಕಾ ಸೌಲಭ್ಯ ಕಾಯ್ದೆಯ ತಿದ್ದುಪಡಿ ಮತ್ತು ಹೊಸ ಕೈಗಾರಿಕಾ ನೀತಿ ಘೋಷಣೆಯಿಂದಾಗಿ ರಾಜ್ಯದಲ್ಲಿ ಕೈಗಾರಿಕೆಗಳ ಸ್ಥಾಪನೆಯ ಕಾರ್ಯ ಸುಲಭವಾಗಿದೆ ಎಂದರು. ನಗರದಲ್ಲಿಂದು ಅಸೋಚಾಮ್ ಆಯೋಜಿಸಿದ್ದ ನವ ಕರ್ನಾಟಕ ಈಸ್ …

Read More »

ಬೆಂಗಳೂರಿಗರೇ ಮತ್ತೊಮ್ಮೆ ಕೊರೋನಾ ಸಂಕಷ್ಟ ಎದುರಿಸಲು ತಯಾರಾಗಿ..!?

ಬೆಂಗಳೂರು, ಜ.23- ನಗರದಲ್ಲಿ ಮತ್ತೆ ಕೊರೊನಾ ಸ್ಫೋಟ ಭೀತಿ ಎದುರಾಗಿದೆ. ಬೆಳ್ಳಂದೂರು ವಾರ್ಡ್‍ನ ಅಪಾರ್ಟ್‍ಮೆಂಟ್‍ನ 500 ಮಂದಿಯ ಕೋವಿಡ್-19 ವರದಿ ಇಂದು ಸಂಜೆ ಬರಲಿದ್ದು, ಹೆಚ್ಚು ಮಂದಿಗೆ ಪಾಸಿಟಿವ್ ಕಂಡುಬಂದರೆ ನಗರದಲ್ಲಿ ಮತ್ತೆ ಕೊರೊನಾ ಅಲರ್ಟ್ ಘೋಷಣೆಯಾಗುವ ಸಾಧ್ಯತೆ ಇದೆ. ಫೆಬ್ರವರಿ 15 ರಿಂದ 22ರ ಅವಧಿಯಲ್ಲಿ ಬೆಳ್ಳಂದೂರು ವಾರ್ಡ್, ಅಂಬಲಿಪುರದ ಎಸ್‍ಜೆಆರ್ ವಾಟರ್‍ಮಾರ್ಕ್ ಅಪಾರ್ಟ್‍ಮೆಂಟ್‍ನಲ್ಲಿ 100 ಮಂದಿಗೆ ಕೊರೊನಾ ಇರುವುದು ಪತ್ತೆಯಾದ ಹಿನ್ನೆಲೆಯಲ್ಲಿ ಇಡೀ ಪ್ರದೇಶವನ್ನು ಕಂಟೈನ್ಮೆಂಟ್ ಝೋನ್ …

Read More »

ಮೀಟರ್ ದರ ಏರಿಸುವಂತೆ ಆಟೋ ಚಾಲಕರ ಪ್ರತಿಭಟನೆ

ಬೆಂಗಳೂರು, ಫೆ.23- ಪೆಟ್ರೋಲ್, ಡೀಸೆಲ್, ಗ್ಯಾಸ್ ಸೇರಿದಂತೆ ಎಲ್ಲಾ ಬೆಲೆಗಳು ಹೆಚ್ಚುತ್ತಿವೆ. ಅದಕ್ಕೆ ಅನುಗುಣವಾಗಿ ಆಟೋ ಮೀಟರ್ ದರವನ್ನು ಏರಿಕೆ ಮಾಡುವಂತೆ ಒತ್ತಾಯಿಸಿ ಆಟೋ ಚಾಲಕರು ಇಂದು ನಗರದಲ್ಲಿ ಪ್ರತಿಭಟನೆ ನಡೆಸಿದರು. ಸಿಐಟಿಯು ನೇತೃತ್ವದ ಆಟೋರಿಕ್ಷಾ ಯೂನಿಯನ್ ಇಂದು ಮೈಸೂರು ಬ್ಯಾಂಕ್ ವೃತ್ತದಲ್ಲಿ ಪ್ರತಿಭಟನೆ ನಡೆಸಿದೆ. ಎಂಟು ವರ್ಷಗಳ ಹಿಂದೆ 2013ರಲ್ಲಿ ಆಟೋ ಮೀಟರ್ ದರ ಪರಿಷ್ಕರಣೆಯಾಗಿದೆ. ಅಲ್ಲಿಂದ ಈವರೆಗೂ ದರ ಇದ್ದಷ್ಟೇ ಇದೆ. ಗ್ಯಾಸ್, ಪೆಟ್ರೋಲ್, ಅಡುಗೆ ಎಣ್ಣೆ, …

Read More »

ಅಪ್ಪನಿಗೆ ಹುಟ್ಟಿದ ಮಗ ನಾನು. ನನಗೆ ಅವಮಾನ ಮಾಡಲು ಬರಬೇಡಿ. ಇದು ರೌಡಿಸಂ ವೇದಿಕೆ ಅಲ್ಲ….:ನಟ ಜಗ್ಗೇಶ್‌

ಬೆಂಗಳೂರು: ಅಪ್ಪನಿಗೆ ಹುಟ್ಟಿದ ಮಗ ನಾನು. ನನಗೆ ಅವಮಾನ ಮಾಡಲು ಬರಬೇಡಿ. ಇದು ರೌಡಿಸಂ ವೇದಿಕೆ ಅಲ್ಲ…. ಇದು ನಟ ಜಗ್ಗೇಶ್‌ ಅವರ ಕಟು ಆಕ್ರೋಶದ ಮಾತು. ಮೈಸೂರು ಸಮೀಪ ತಿ. ನರಸೀಪುರದ ಅತ್ತಳ್ಳಿಯಲ್ಲಿ ದರ್ಶನ್‌ ಅಭಿಮಾನಿಗಳಿಂದ ತರಾಟೆಗೆ ಒಳಗಾಗಿದ್ದ ಜಗ್ಗೇಶ್‌ ಅವರು ಘಟನೆಯ ಸಂದರ್ಭ ಇದ್ದ ಯುವಕರಿಗೆ ಹಾಗೂ ಚಿತ್ರರಂಗದ ಪ್ರಮುಖರಿಗೆ ಕಟು ಮಾತುಗಳಲ್ಲಿ ಎಚ್ಚರಿಕೆಯನ್ನೂ ನೀಡಿದರು. ‘ನನಗೆ ಬುದ್ಧಿಹೇಳಬೇಕಾದವರು ಕನ್ನಡದ ಜನ. ನನ್ನನ್ನು ಹೆತ್ತ ಜನ. ಯಾರೋ …

Read More »

ಜನನಾಯಕರ ಹಿತಾಸಕ್ತಿಗೋಸ್ಕರ ಧರಣಿ ಮುಂದುವರಿಸಲು ತೀರ್ಮಾನಿಸಿದ್ದಕ್ಕೆ ಬೇಸರವಾಗಿ ಹಿಂದೆ ಸರಿದಿದ್ದೇನೆ’

ಬೆಂಗಳೂರು: ‘ಮೀಸಲಾತಿಗೆ ಒತ್ತಾಯಿಸಿ ಬೆಂಗಳೂರಿನಲ್ಲಿ ಭಾನುವಾರ ನಡೆದ ಮಹಾರ‍್ಯಾಲಿ ನಂತರ ಧರಣಿ, ಸತ್ಯಾಗ್ರಹ ಮಾಡಬಾರದು ಎಂದು ನಿರ್ಧಾರವಾಗಿತ್ತು. ಆದರೆ, ಜನನಾಯಕರ ಹಿತಾಸಕ್ತಿಗೋಸ್ಕರ ಧರಣಿ ಮುಂದುವರಿಸಲು ತೀರ್ಮಾನಿಸಿದ್ದಕ್ಕೆ ಬೇಸರವಾಗಿ ಹಿಂದೆ ಸರಿದಿದ್ದೇನೆ’ ಎಂದು ಹರಿಹರ ಪಂಚಮಸಾಲಿ ಪೀಠದ ವಚನಾನಂದ ಸ್ವಾಮೀಜಿ ಹೇಳಿದ್ದಾರೆ. ‘ಸಮಾವೇಶದಲ್ಲಿಯೇ ಈ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದರೆ ಗಲಾಟೆ ಆಗುತ್ತಿತ್ತು. ಇದರಿಂದ ಸಮುದಾಯದ ಘನತೆಗೆ ಚ್ಯುತಿಯಾಗುತ್ತದೆ ಎಂಬ ಕಾರಣದಿಂದ ಈ ನಿರ್ಧಾರ ತೆಗೆದುಕೊಂಡಿದ್ದೇನೆ. ಆದರೆ, ಸಮುದಾಯಕ್ಕೆ 2ಎ ಮೀಸಲಾತಿ ಬೇಕು …

Read More »

ಜನಾರ್ದನ ರೆಡ್ಡಿ ಪತ್ನಿಗೆ ಹೈಕೋರ್ಟ್​ನಿಂದ ಬಿಗ್​ ರಿಲೀಫ್..!

ಬಳ್ಳಾರಿ: ಮಾಜಿ ಸಚಿವ ಜನಾರ್ದನ ರೆಡ್ಡಿ ಪತ್ನಿ ಅರುಣಾರಿಗೆ ಹೈಕೋರ್ಟ್​ ಬಿಗ್​ ರಿಲೀಫ್​ ನೀಡಿದ್ದು, ಅಕ್ರಮ ಗಣಿಗಾರಿಕೆ ಪ್ರಕರಣದಿಂದ ಅರುಣಾರನ್ನು ಕೈಬಿಡುವಂತೆ ಆದೇಶ ಹೊರಡಿಸಿದೆ. ಈ ಹಿಂದೆ ಸಿಬಿಐ ವಿಶೇಷ ನ್ಯಾಯಾಲಯ ನೀಡಿದ್ದ ಆದೇಶವನ್ನು ಹೈಕೋರ್ಟ್​ ಪುರಸ್ಕರಿಸಿದೆ. ಅಸೋಸಿಯೇಟೆಡ್ ಮೈನಿಂಗ್ ಕಂಪನಿ ಅಕ್ರಮ ಗಣಗಾರಿಕೆ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಸಿಬಿಐ ದೋಷಾರೋಪಪಟ್ಟಿ ಸಲ್ಲಿಸಿತ್ತು. ಇದರಲ್ಲಿ ಜನಾರ್ದನ ರೆಡ್ಡಿ ಮೊದಲನೆ ಆರೋಪಿ, ಅವರ ಪತ್ನಿ ಅರುಣಾ ಎರಡನೇ ಆರೋಪಿಯಾಗಿದ್ದರು. ಇದನ್ನು ಪ್ರಶ್ನಿಸಿ …

Read More »