ದಾವಣಗೆರೆ: ಮುಂದಿನ ಒಂದು ವರ್ಷದೊಳಗೆ ರಾಜ್ಯದ ಎಲ್ಲಾ ಬಂಜಾರ ತಾಂಡಾಗಳನ್ನು ಕಂದಾಯ ಗ್ರಾಮಗಳನ್ನಾಗಿ ಮಾಡಲು ಕಂದಾಯ ಅಧಿಕಾರಿಗಳಿಗೆ ಆದೇಶಿಸಿದ್ದೇನೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತಿಳಿಸಿದ್ದಾರೆ. ನ್ಯಾಮತಿ ತಾಲೂಕಿನ ಸೂರಗೊಂಡನಕೊಪ್ಪದಲ್ಲಿ ಶ್ರೀ ಸಂತ ಸೇವಾಲಾಲ್ ಮಹಾರಾಜರ 282ನೇ ಜಯಂತ್ಯೋತ್ಸವ ಉದ್ಘಾಟಿಸಿ, ಮಾತನಾಡಿದ ಅವರು, ಮುಂದಿನ ಸೇವಾಲಾಲ್ ಜಯಂತಿ ವೇಳೆಗೆ ಸರ್ವೆ ಮುಗಿಸಿ ಕಂದಾಯ ಗ್ರಾಮಗಳನ್ನಾಗಿ ಮಾಡುವ ಕಾರ್ಯ ಪೂರ್ಣಗೊಳಿಸಲು ಸೂಚಿಸಿದ್ದೇನೆ ಎಂದರು. ಸೂರಗೊಂಡನಕೊಪ್ಪಕ್ಕೆ ಮಂಜೂರಾಗಿರುವ ರೇಲ್ವೆ ಸ್ಟೇಷನ್ ಗೆ ಸಂತ …
Read More »Yearly Archives: 2021
ಕಾಂಗ್ರೆಸ್‌ನ ಪ್ರಮುಖರನ್ನೇ ಬಿಜೆಪಿಗೆ ಸೇರಿಸುವೆ
ಬೆಳಗಾವಿ: ನಾನು ಮನಸ್ಸು ಮಾಡಿದರೆ 24 ಗಂಟೆಯಲ್ಲಿ ಯಾರೂ ನಂಬಲು ಆಗದಂಥ ಕಾಂಗ್ರೆಸ್‌ನ ಪ್ರಮುಖ ಐವರು ಶಾಸಕರನ್ನು ಬಿಜೆಪಿಗೆ ತರುತ್ತೇನೆ ಎಂದು ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಹೇಳಿದರು. ಬಿಜೆಪಿ ಗ್ರಾಮೀಣ ಕ್ಷೇತ್ರದ ನೂತನ ಗ್ರಾ.ಪಂ. ಸದಸ್ಯರ ಸಮ್ಮಾನ ಸಮಾರಂಭದಲ್ಲಿ ಮಾತನಾಡಿದ ಅವರು, ಕಾಂಗ್ರೆಸ್‌ನಲ್ಲಿ ಟಾಪ್ 5 ಆ ಶಾಸಕರ ಹೆಸರು ಕೇಳಿದರೆ ಎಲ್ಲರೂ ಬೆರಗಾಗುತ್ತಾರೆ ಎಂದರು. ಬಿಜೆಪಿಯಲ್ಲಿ ತೃಪ್ತಿ : ಬಿಜೆಪಿಯಲ್ಲಿ ಖುಷಿ ಹಾಗೂ ಹುಮ್ಮಸ್ಸಿನಿಂದ ಕೆಲಸ ಮಾಡುತ್ತಿದ್ದೇನೆ. …
Read More »ಕೇಂದ್ರ ಆರೋಗ್ಯ ಇಲಾಖೆʼಯಿಂದ ʼಕಚೇರಿʼಗಳಿಗೆ ಹೊಸ ʼಗೈಡ್ ಲೈನ್ಸ್ʼ ಜಾರಿ: ಉದ್ಯೋಗಿಗಳೇ ನೀವು ಇವುಗಳನ್ನ ಪಾಲಿಸ್ಲೇಬೇಕು
ಬೆಂಗಳೂರು: ಕೇಂದ್ರ ಆರೋಗ್ಯ ಇಲಾಖೆ ಕಚೇರಿಗಳಿಗೆ ಪ್ರತ್ಯೇಕ ಮಾರ್ಗಸೂಚಿ ಪ್ರಕಟಿಸಿದ್ದು, ಉದ್ಯೋಗಿಗಳು ಕಡ್ಡಾಯವಾಗಿ ಇವುಗಳನ್ನ ಪಾಲಿಸಿಲೇ ಬೇಕು ಎಂದು ತಾಕೀತು ಮಾಡಿದೆ. ಕೇಂದ್ರ ಆರೋಗ್ಯ ಇಲಾಖೆ ಉದ್ಯೋಗಿಗಳಿಗೆ ನೀಡಿದ ಸಾಮಾನ್ಯ ಹಾಗೂ ನಿರ್ಧಿಷ್ಟ ಮಾರ್ಗಸೂಚಿಗಳು ಈ ಕೆಳಗಿನಂತಿವೆ. ಸಾಮಾನ್ಯ ಮಾರ್ಗಸೂಚಿಗಳು ಇಂತಿವೆ..! * ವ್ಯಕ್ತಿಯಿಂದ ವ್ಯಕ್ತಿಗೆ 6 ಅಡಿ ಅಂತರ ಕಾಯ್ದುಕೊಳ್ಳಬೇಕು. * ಕಚೇರಿಯಲ್ಲಿ ಇರುವಷ್ಟು ಸಮಯ ಕಡ್ಡಾಯವಾಗಿ ಮಾಸ್ಕ್ ಹಾಕಿಕೊಳ್ಳಬೇಕು. * ಸ್ಯಾನಿಟೈಸರ್ ಬಳಸಬೇಕು ಅಥವಾ ಸೋಪ್ ಬಳಸಿ …
Read More »ಫಾಸ್ಟ್ ಟ್ಯಾಗ್ ಕಡ್ಡಾಯ
ಹೊಸದಿಲ್ಲಿ/ನಾಗ್ಪುರ : ರಾಷ್ಟ್ರೀಯ ಹೆದ್ದಾರಿಗಳಲ್ಲಿ ಫೆ. 16ರಿಂದ ಫಾಸ್ಟ್ಯಾಗ್ ಮೂಲಕ ಟೋಲ್ ಪಾವತಿ ಕಡ್ಡಾಯ. ಫಾಸ್ಟಾಗ್ ಅಳವಡಿಸಿ ಕೊಳ್ಳದಿದ್ದರೆ 2 ಪಟ್ಟು ಟೋಲ್ ಪಾವ ತಿಸಬೇಕು ಎಂದು ಕೇಂದ್ರ ರಸ್ತೆ ಮತ್ತು ಸಾರಿಗೆ ಸಚಿವಾಲಯ ರವಿವಾರ ಆದೇಶ ಹೊರಡಿಸಿದೆ. ಸೋಮವಾರ ಮಧ್ಯರಾತ್ರಿ ಯಿಂದಲೇ ಇದು ಜಾರಿಗೆ ಬರಲಿದೆ ಎಂದು ಆದೇಶದಲ್ಲಿ ಉಲ್ಲೇಖೀಸಲಾಗಿದೆ. ಗಡುವು ವಿಸ್ತರಣೆ ಇಲ್ಲ : ಈಗಾಗಲೇ 3-4 ಬಾರಿ ಗಡುವು ವಿಸ್ತರಿಸಲಾಗಿದೆ. ಇನ್ನು ವಿಸ್ತರಣೆ ಇಲ್ಲ ಎಂದು …
Read More »ಪ್ರೇಮಿಗಳ ದಿನವೇಹಂಚಿನಾಳದಲ್ಲಿ ಪ್ರೇಮಿಗಳಿಬ್ಬರು ಆತ್ಮಹತ್ಯೆ
ಸವದತ್ತಿ – ತಾಲೂಕಿನ ಹಂಚಿನಾಳದಲ್ಲಿ ಪ್ರೇಮಿಗಳಿಬ್ಬರು ಆತ್ಮಹತ್ಯೆಗೆ ಶರಣಾಗಿದ್ದಾರೆ. ಪ್ರೇಮಿಗಳ ದಿನವೇ ಇವರು ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಹಂಚಿನಾಳ ಗ್ರಾಮದ ಆಸೀಪ್ ಹುಸೇನಸಾಬ ಜವಳಿ(21) ಮತ್ತು ಮಾಶಾಭೀ ಹಟೇಲಸಾಬ ಧಾರವಾಡ (20) ಮೃತ ಪ್ರೇಮಿಗಳು. ಕೆಲವು ದಿನಗಳಿಂದ ಪರಸ್ಪರ ಪ್ರೀತಿಸುತ್ತಿದ್ದರು. ಆದರೆ ಹುಡುಗಿಯ ಮನೆಯವರು ಬೇರೊಬ್ಬ ಹುಡುಗನ ಜೊತೆಗೆ ಮದುವೆ ನಿಶ್ಚಯ ಮಾಡಿದ್ದರು. ಇದರಿಂದ ನೊಂದು ಇವರು ಆತ್ಮಹತ್ಯೆಗೆ ಶರಣಾಗಿದ್ದಾರೆ. ಈ ಸಂಬಂಧ ಸವದತ್ತಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
Read More »ಲೋಕಸಭಾ ಉಪಚುನಾವಣೆಯಲ್ಲಿ ಮತ್ತೇ ಅರಳಲಿದೆ ಕಮಲ : ಶಾಸಕ, ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ
ಗೋಕಾಕ : ಗ್ರಾಮ ಪಂಚಾಯತಿ ಚುನಾವಣೆಯಲ್ಲಿ ಭಾರತೀಯ ಜನತಾ ಪಾರ್ಟಿ ಬೆಂಬಲಿತ ಅಭ್ಯರ್ಥಿಗಳು ಭರ್ಜರಿ ಜಯ ಸಾಧಿಸಿದ್ದು, ಎಲ್ಲ 33 ಗ್ರಾಮ ಪಂಚಾಯತಿಗಳಲ್ಲಿ ಬಿಜೆಪಿ ಅಧಿಕಾರ ಚುಕ್ಕಾಣಿ ಹಿಡಿದಿದೆ ಎಂದು ಕೆಎಂಎಫ್ ಅಧ್ಯಕ್ಷ ಮತ್ತು ಶಾಸಕ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು. ರವಿವಾರದಂದು ಇಲ್ಲಿಯ ಎನ್‍ಎಸ್‍ಎಫ್ ಅತಿಥಿ ಗೃಹದಲ್ಲಿ ಜರುಗಿದ ನೂತನ ಅಧ್ಯಕ್ಷ-ಉಪಾಧ್ಯಕ್ಷರನ್ನು ಅಭಿನಂದಿಸಿ ಮಾತನಾಡಿದ ಅವರು, ಇದರಿಂದ ತಳಮಟ್ಟದಿಂದ ಪಕ್ಷ ಸಂಘಟಿಸಲು ಗ್ರಾಮ ಪಂಚಾಯತಿ ಚುನಾವಣೆ ಉತ್ತಮ ಅಡಿಪಾಯ ಎಂದು …
Read More »ಮನುಷ್ಯ ಎಷ್ಟೇ ದೊಡ್ಡ ಶ್ರೀಮಂತನಾಗಿರಲಿ,
ಘಟಪ್ರಭಾ: ಶ್ರೀ ದುರದುಂಡೇಶ್ವರ ಪುಣ್ಯಾರಣ್ಯ ಪ್ರೌಢಶಾಲೆಯು ಬಡ ವಿದ್ಯಾರ್ಥಿಗಳ ಪಾಲಿನ ವಿದ್ಯಾ ಕಾಶಿಯಾಗಿದೆ. ಅಕ್ಷರ ಕಲಿಸಿದ ಗುರುವಿನ ಋಣ ತೀರಿಸಿದರೇ ಸಾಲದು. ಪಂಚಋಣ ತೀರಿಸಿದವನೇ ನಿಜವಾದ ಶಿಷ್ಯನ ಕೊಡುಗೆ ಎಂದು ನಿವೃತ್ತ ಶಿಕ್ಷಕ ಎಸ್. ಐ. ಬೆನವಾಡಿ ಹೇಳಿದರು. ರವಿವಾರದಂದು ಅವರು ಸಮೀಪದ ಅರಭಾವಿಮಠದಲ್ಲಿ ಪ್ರಥಮ ಬಾರಿಗೆ ಜರುಗಿದ ಶ್ರೀ ದುರದುಂಡೇಶ್ವರ ಪುಣ್ಯಾರಣ್ಯ ಪ್ರೌಢಶಾಲೆಯ 1980-81ನೇ ಶೈಕ್ಷಣಿಕ ವರ್ಷದ 10ನೇ ತರಗತಿಯ ವಿದ್ಯಾರ್ಥಿಗಳಿಂದ “ಗುರುವಂದನೆ ಹಾಗೂ ಪುನರ್ಮಿಲನ” ಕಾರ್ಯಕ್ರಮದ ಅಧ್ಯಕ್ಷತೆ …
Read More »ಗೋಕಾಕ : ಇಬ್ಬರು ಮಕ್ಕಳೊಂದಿಗೆ ಘಟಪ್ರಭಾ ನದಿಗೆ ಹಾರಿ ಮಹಿಳೆ ಆತ್ಮಹತ್ಯೆ !
ಗೋಕಾಕ : ಮನೆಯಲ್ಲಿ ಜಗಳವಾಡಿ ಇಬ್ಬರು ಮಕ್ಕಳೊಂದಿಗೆ ಕಾಣೆಯಾಗಿದ್ದ ಮಹಿಳೆ ಘಟಪ್ರಭಾ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳಕಿಗೆ ಬಂದಿದೆ. ಗೋಕಾಕ ತಾಲ್ಲೂಕಿನ ಅರಭಾಂವಿಯ ಸಾವಿತ್ರಿ ರಾಜು ಬನಾಜ(30), ಪೂಜಾ (4) ಲಕ್ಷ್ಮಿ (2), ಮೃತರು. ಮನೆಯಲ್ಲಿ ಜಗಳವಾಡಿ ತಮ್ಮಇಬ್ಬರು ಮಕ್ಕಳನ್ನು ಕರೆದುಕೊಂಡು ಆಸ್ಪತ್ರೆಗೆ ಹೋಗಿ ಬರುವುದಾಗಿ ಹೇಳಿ, ಕಾಣೆಯಾಗಿದ್ದರು. ಈ ಬಗ್ಗೆ ಗಂಡನ ಮನೆಯವರು ಪೊಲೀಸ್ ಠಾಣೆಗೆ ಶುಕ್ರವಾರ ದೂರು ನೀಡಿದ್ದರು. ಆದ್ರೆ ಭಾನುವಾರ ಬೆಳಿಗ್ಗೆ ಗೋಕಾಕ …
Read More »ಗೋಕಾಕ: ಇಲ್ಲಿಯ ರೋಟರಿ ರಕ್ತ ಭಂಡಾರದಲ್ಲಿ ಜಿಎನ್‍ಎಸ್ ಶಾಲೆಯ 1998-99 ಸಾಲಿನ ಹಳೆಯ ವಿದ್ಯಾರ್ಥಿಗಳ ಸಂಘದ ಆಶ್ರಯದಲ್ಲಿ ಹಮ್ಮಿಕೊಂಡ ಬೃಹತ್ ರಕ್ತದಾನ ಶಿಬಿರಲ್ಲಿ ಪಾಲ್ಗೊಂಡ ಹಳೆಯ ವಿದ್ಯಾರ್ಥಿಗಳು.
ಗೋಕಾಕ : ಎಲ್ಲ ದಾನಗಳಲ್ಲಿ ಶ್ರೇಷ್ಠವಾದ ರಕ್ತದಾನ ಮಾಡುವ ಮೂಲಕ ಜೀವ ಉಳಿಸುವಂತೆ ಪುಣ್ಯ ಕಾರ್ಯದಲ್ಲಿ ಪಾಲ್ಗೊಂಡು ಅರ್ಥಪೂರ್ಣವಾದ ಸಾಮಾಜಿಕ ಕಳಿಕಳಿಯ ಮಾರ್ಗದಲ್ಲಿ ಜೀವನ ಸಾಗಿಸೋಣವೆಂದು ಇಲ್ಲಿಯ ಜಿಎನ್‍ಎಸ್ ಶಾಲೆಯ 1998-99 ಸಾಲಿನ ಹಳೆಯ ವಿದ್ಯಾರ್ಥಿಗಳ ಸಂಘದ ಅಧ್ಯಕ್ಷ ಅಶೋಕ ಕೌಜಲಗಿ ಹೇಳಿದರು. ರವಿವಾರದಂದು ಇಲ್ಲಿಯ ರೋಟರಿ ರಕ್ತ ಭಂಡಾರದಲ್ಲಿ ಜಿಎನ್‍ಎಸ್ ಶಾಲೆಯ 1998-99 ಸಾಲಿನ ಹಳೆಯ ವಿದ್ಯಾರ್ಥಿಗಳ ಸಂಘದ ಆಶ್ರಯದಲ್ಲಿ ರವಿವಾರ ದಿ. 21 ರಂದು ಇಲ್ಲಿಯ ಶುಭ …
Read More »ಆರೋಗ್ಯ ಇಲಾಖೆಯಿಂದ ನೂತನವಾಗಿ ಪ್ರಾರಂಭಿಸಲಾದ ನಗರ ಪ್ರಾಥಮಿಕ ಆರೋಗ್ಯ ಕೇಂದ್ರವನ್ನು ಸಚಿವ ರಮೇಶ ಜಾರಕಿಹೊಳಿ
ಗೋಕಾಕ: ಜನತೆ ಆರೋಗ್ಯ ರಕ್ಷಣೆಗೆ ಹೆಚ್ಚಿನ ಮಹತ್ವ ನೀಡಿ, ಎಲ್ಲ ರೀತಿಯ ಸೌಲಭ್ಯಗಳೊಂದಿಗೆ ವಿಶೇಷ ಆಧುನಿಕ ತಂತ್ರಜ್ಞಾನ ಸಹಕಾರದೊಂದಿಗೆ ಸರ್ಕಾರ ಕಾರ್ಯ ನಿರ್ವಹಿಸುತ್ತಿದೆ ಎಂದು ಜಲಸಂಪನ್ಮೂಲ ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ಹೇಳಿದರು. ರವಿವಾರದಂದು ನಗರದ ಗುರುವಾರ ಪೇಠೆಯಲ್ಲಿ ಆರೋಗ್ಯ ಇಲಾಖೆಯಿಂದ ನೂತನವಾಗಿ ಪ್ರಾರಂಭಿಸಲಾದ ನಗರ ಪ್ರಾಥಮಿಕ ಆರೋಗ್ಯ ಕೇಂದ್ರವನ್ನು ಉದ್ಘಾಟಿಸಿ ಮಾತನಾಡಿದ ಅವರು, ಸರ್ಕಾರದ ಈ ಸೌಲಭ್ಯಗಳನ್ನು ಸದುಪಯೋಗಪಡಿಸಿಕೊಂಡು ಆರೋಗ್ಯವಂತರಾಗಿರಿರೆಂದು ಕರೆ ನೀಡಿದರು. …
Read More »