Breaking News

Yearly Archives: 2021

ಅರ್ಥವ್ಯವಸ್ಥೆಯ ಪುನಶ್ಚೇತನದ ಬಜೆಟ್​ ಎಂದ ಸಿಎಂ; ಆತ್ಮ ಬರ್ಬಾದ್​ ಬಜೆಟ್​ ಎಂದ ಸಿದ್ದರಾಮಯ್ಯ

ಬೆಂಗಳೂರು (ಫೆ.1): ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್​ ಮಂಡಿಸಿರುವ ಬಜೆಟ್​ ಬಸವಳಿದಿರುವ ಭಾರತೀಯ ಅರ್ಥವ್ಯವಸ್ಥೆಯ ಪುನಶ್ಚೇತನಕ್ಕೆ ಸಂಜೀವಿನಿಯಂತಿದೆ ಎಂದು ಮುಖ್ಯಮಂತ್ರಿ ಬಿಎಸ್​ ಯಡಿಯೂರಪ್ಪ ಪ್ರತಿಕ್ರಿಯಿಸಿದ್ದಾರೆ. ಬಜೆಟ್​ ಕುರಿತು ಪ್ರತಿಕ್ರಿಯಿಸಿದ ಅವರು, ಕೊರೋನಾ ಸಾಂಕ್ರಾಮಿಕದಿಂದ ಸ್ಥಗಿತಗೊಂಡ ಅರ್ಥವ್ಯವಸ್ಥೆ ಮತ್ತೆ ಮೇಲೆರಲು ವೇಗವರ್ಧಕವಾಗಿದೆ. ಕೋವಿಡ್​ ಸಂಕಷ್ಟದ ನಡುವೆ ಮಂಡನೆಯಾಗಿರುವ ಈ ಬಜೆಟ್​ ಉತ್ತಮವಾಗಿದೆ ಎಂದಿದ್ದಾರೆ. ಕೋವಿಡ್ ಲಸಿಕೆ ಅಭಿಯಾನಕ್ಕೆ 35,000 ಕೋಟಿ ರೂ, ಕೃಷಿ ಬಲವರ್ಧನೆ, ಅನ್ನದಾತ ರೈತರ ಅಭಿವೃದ್ಧಿಗೆ ಪ್ರಾಮುಖ್ಯತೆ, ಕೌಶಲ್ಯ …

Read More »

ಕೇಂದ್ರ ಬಜೆಟ್​​​ನಲ್ಲಿ ಹೈದರಾಬಾದ್​​-ಕರ್ನಾಟಕ ಭಾಗಕ್ಕೆ ತೀವ್ರ ನಿರಾಸೆ;

ಕಲಬುರ್ಗಿ(ಫೆ.01): ಕೋವಿಡ್ ನಂತರ ಕೇಂದ್ರ ಬಜೆಟ್ ಮಂಡನೆಯಾಗಿದ್ದು, ಬಹು ನಿರೀಕ್ಷಿತ ಬಜೆಟ್ ಕೆಲ ವಲಯಗಳ ಜನತೆಗೆ ತೀವ್ರ ನಿರಾಸೆ ಮೂಡಿಸಿದೆ. ಅದರಲ್ಲಿಯೂ ಅತ್ಯಂತ ಹಿಂದುಳಿದ ಭಾಗವೆನಿಸಿಕೊಂಡ ಹೈದರಾಬಾದ್ ಕರ್ನಾಟಕಕ್ಕೆ ಬಜೆಟ್ ನಲ್ಲಿ ಯಾವುದೇ ಯೋಜನೆಗಳು ಘೋಷಣೆಯಾಗಿಲ್ಲ. ಇದರಿಂದಾಗಿ ಈ ಭಾಗದ ಜನತೆ ತೀವ್ರ ಬೇಸರ ವ್ಯಕ್ತಪಡಿಸಿದ್ದಾರೆ. ನಿರೀಕ್ಷೆಗಳೆಲ್ಲವೂ ಹುಸಿಯಾಗುವ ಜೊತೆಗೆ ತೈಲ ದರ ಏರಿಕೆಯ ಬರೆ ಹಾಕಿಸಿಕೊಳ್ಳುವಂತಾಗಿದೆ ಎಂದು ಜನತೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮ್ …

Read More »

ತೌಸೀಪ್ ಫನೀಬಂಧ್ ಮಾರಿಹಾಳ ಗ್ರಾಪಂ ಅದ್ಯಕ್ಷ ….

ಬೆಳಗಾವಿ- ಬೆಳಗಾವಿ ತಾಲ್ಲೂಕಿನ ಗ್ರಾಮ ಪಂಚಾಯತಿಗಳ ಅದ್ಯಕ್ಷ ಉಪಾಧ್ಯಕ್ಷರ ಚುನಾವಣೆಗಳು ಇಂದಿನಿಂದ ಆರಂಭವಾಗಿದ್ದು ಮಾರಿಹಾಳ ಗ್ರಾಮ ಪಂಚಾಯತಿ ಅದ್ಯಕ್ಷರಾಗಿ ತೌಸೀಫ್ ಅಲ್ಲಾವುದ್ದೀನ್ ಫನೀಬಂಧ್ ಮತ್ತು ಉಪಾಧ್ಯಕ್ಷರಾಗಿ,ಬಸವರಾಜ್ ವೀರಭದ್ರಪ್ಪ ಮಾಧನ್ನವರ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಮಾರಿಹಾಳ ಗ್ರಾಮ ಪಂಚಾಯತಿಗೆ ನೂತನವಾಗಿ ಆಯ್ಕೆಯಾದ ಅದ್ಯಕ್ಷ ಉಪಾಧ್ಯಕ್ಷರನ್ನು ಗ್ರಾಮ ಪಂಚಾಯತಿಯ ಸದಸ್ಯರು ಸತ್ಕರಿಸಿ ಗೌರವಿಸಿದರು.ಈ ಸಂಧರ್ಭದಲ್ಲಿ ಮಾರಿಹಾಳ ಗ್ರಾಮದ ಹಿರಿಯರು ಉಪಸ್ಥಿತರಿದ್ದರು.

Read More »

ಬಜೆಟ್-21:ಕೃಷಿ ಕ್ಷೇತ್ರಕ್ಕೆ ಸಿಕ್ಕಿದ್ದೆಷ್ಟು?ಕೃಷಿ ಸಾಲದ ಗುರಿ 16.5 ಲಕ್ಷ ಕೋಟಿಗೆ ಏರಿಕೆ

ನವದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಸೋಮವಾರ(ಫೆ.1, 2021) ಸಂಸತ್ ನಲ್ಲಿ ಮಂಡಿಸಿದ 2021-22ನೇ ಸಾಲಿನ ಆಯವ್ಯಯದಲ್ಲಿ ಕೇಂದ್ರ ಕೃಷಿ ಕ್ಷೇತ್ರದ ಸಾಲವನ್ನು 16. 5 ಲಕ್ಷ ಕೋಟಿ ರೂಪಾಯಿಗೆ ಏರಿಕೆ ಮಾಡಿರುವುದಾಗಿ ಘೋಷಿಸಿದೆ.   ಕೇಂದ್ರ ಸರ್ಕಾರ ರೈತರ ಅಭಿವೃದ್ಧಿಗೆ ಬದ್ಧವಾಗಿರುವುದಾಗಿ ಪುನರುಚ್ಚರಿಸಿದ್ದು, ಎಲ್ಲಾ ಬೆಳೆಗಳ ಬೆಂಬಲ ಬೆಲೆಯನ್ನು (ಎಂಎಸ್ ಪಿ) ಮತ್ತಷ್ಟು ಹೆಚ್ಚಳ ಮಾಡುವುದಾಗಿ ನಿರ್ಮಲಾ ಸೀತಾರಾಮನ್ ಭರವಸೆ ನೀಡಿದ್ದಾರೆ. 2013-14ನೇ ಸಾಲಿನಲ್ಲಿ ಗೋಧಿಯನ್ನು …

Read More »

2021 Budget: ಇದು ರೈತ ಪರ ಹಾಗೂ ಗ್ರಾಮೀಣ ಭಾರತದ ಬಜೆಟ್: ಪ್ರಧಾನಿ ನರೇಂದ್ರ ಮೋದಿ

ನವದೆಹಲಿ: ಲೋಕಸಭೆಯಲ್ಲಿ 2021-22ನೇ ಸಾಲಿನ ಕೇಂದ್ರ ಬಜೆಟ್ ಅನ್ನು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಿದ ನಂತರ ದೇಶದ ಜನರನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಇದು ರೈತರ ಹಾಗೂ ಗ್ರಾಮೀಣ ಭಾರತದ ಬಜೆಟ್ ಆಗಿದೆ ಎಂದು ತಿಳಿಸಿದ್ದಾರೆ. ಜನಸಾಮಾನ್ಯರ ಜೀವನಕ್ಕೆ ಅನುಕೂಲವಾಗುವ, ಉದ್ಯಮ, ಆರೋಗ್ಯ ಕ್ಷೇತ್ರವನ್ನು ಇನ್ನಷ್ಟು ಅಭಿವೃದ್ಧಿಗೊಳಿಸುವ ಬಜೆಟ್ ಇದಾಗಿದ್ದು, ಉತ್ತಮ ಬಜೆಟ್ ನೀಡಿದ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಮತ್ತು ತಂಡಕ್ಕೆ ಅಭಿನಂದನೆ ಸಲ್ಲಿಸುವುದಾಗಿ …

Read More »

ಅಪಘಾತಕ್ಕೀಡಾದ ವಿದ್ಯಾರ್ಥಿನಿಯ ಆರೋಗ್ಯ ವಿಚಾರಿಸಿದ ಸಚಿವ ಸುರೇಶ್ ಕುಮಾರ್

ಬೆಂಗಳೂರು: ರಾಷ್ಟ್ರೀಯ ಪ್ರತಿಭಾನ್ವೇಷಣಾ ಪರೀಕ್ಷೆ ಬರೆಯಲು ತೆರಳುವಾಗ ಕೆಂಗೇರಿ ಬಳಿ ರಸ್ತೆ ಅಪಘಾತಕ್ಕೊಳಗಾಗಿ ತೀವ್ರವಾಗಿ ಗಾಯಗೊಂಡು ನಿಮ್ಹಾನ್ಸ್ ನಲ್ಲಿ ಚಿಕಿತ್ಸೆ ಪಡೆಯುತ್ತಿರುವ ವಿದ್ಯಾರ್ಥಿನಿಯನ್ನು ಭೇಟಿಯಾದ ಸಚಿವ ಎಸ್. ಸುರೇಶ್ ಕುಮಾರ್ ಆಕೆಯ ಆರೋಗ್ಯ ವಿಚಾರಿಸಿದರು. ಸರ್ಕಾರಿ ಪ್ರೌಢಶಾಲೆಯ 10ನೇ ತರಗತಿ ವಿದ್ಯಾರ್ಥಿನಿಯಾದ ಯಶಸ್ವಿನಿಗೆ ಕತ್ತಿನ ಬೆನ್ನುಮೂಳೆಯ ಎರಡು ವರ್ಟೆಬ್ರಿಯಾಗಳು ತೀವ್ರವಾಗಿ ಘಾಸಿಗೊಳಾಗಿದ್ದು ಎರಡು ಶಸ್ತ್ರ ಚಿಕಿತ್ಸೆಯ ಅಗತ್ಯವಿದೆ. ವಿದ್ಯಾರ್ಥಿನಿಗೆ ಅಗತ್ಯವಿರುವ ಶಸ್ತ್ರಚಿಕಿತ್ಸೆ ಮಾಡಬೇಕೆಂದು ಆಸ್ಪತ್ರೆಯ ನಿರ್ದೇಶಕರಿಗೆ ಸಚಿವರು ಮನವಿ ಮಾಡಿದರು.

Read More »

ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯಕ್ಷಗಾನ ಕಲಾವಿದ ನಾರಾಯಣ ಗಾಣಿಗ ವಂಡ್ಸೆ ನಿಧನ

ಕುಂದಾಪುರ: ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯಕ್ಷಗಾನದ ಹಿರಿಯ ಸ್ತ್ರೀವೇಷಧಾರಿ ವಂಡ್ಸೆ ನಾರಾಯಣ ಗಾಣಿಗ ಅವರು ಸೋಮವಾರ ನಿಧನ ಹೊಂದಿದರು. ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನಲ್ಲಿರುವ ಕೊಲ್ಲೂರಿನ ವಂಡ್ಸೆ ಗ್ರಾಮದವರಾದ ನಾರಾಯಣ ಗಾಣಿಗರು, ಸುಮಾರು 28 ವರ್ಷಗಳ ಕಾಲ ಹಲವು ಮೇಳಗಳಲ್ಲಿ ತಿರುಗಾಟ ನಡೆಸಿದ್ದರು. ಮಾರಣಕಟ್ಟೆ, ಮಂದಾರ್ತಿ, ಕೊಲ್ಲೂರು, ಧರ್ಮಸ್ಥಳ, ಪೆರ್ಡೂರು, ಸಾಲಿಗ್ರಾಮ ಮತ್ತು ಇಡಗುಂಜಿ ಮೇಳಗಳಲ್ಲಿ ಇವರು ಕಲಾಕೃಷಿ ನಡೆಸಿದ್ದರು. ನಾರಾಯಣ ಗಾಣಿಗ ಅವರು ದ್ರೌಪದಿ, ಶಶಿಪ್ರಭೆ, ಚಿತ್ರಾಂಗದೆ, ಮಂಡೋದರಿ, …

Read More »

“ಆತ್ಮ ಬರ್ಬಾದ್” ಬಜೆಟ್ ಘೋಷಿಸಿದ್ದಾರೆ ನಿರ್ಮಲಾ : ಸಿದ್ದರಾಮಯ್ಯ

ಬೆಂಗಳೂರು : ನಾನು ಬಜೆಟ್ ಬಗ್ಗೆ ಯಾವುದೇ ನಿರೀಕ್ಷೆ ಇಟ್ಟುಕೊಂಡಿರಲಿಲ್ಲ. ನಿರ್ಮಲಾ ಅವರು “ಆತ್ಮ ಬರ್ಬಾದ್” ಬಜೆಟ್ ಕೊಟ್ಟಿದ್ದಾರೆ ಎಂದು ವಿಧಾನ ಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ಕೇಂದ್ರ ಬಟೆಜ್ ಬಗ್ಗೆ ತೀವ್ರ ಟೀಕೆ ಮಾಡಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಆರ್ಥಿಕ ಪರಿಸ್ಥಿತಿ ಅಧೋಗತಿಗೆ ಹೋಗಿದೆ ಅದನ್ನು ಚೇತರಿಕೆ ಹಾದಿಗೆ ತರುತ್ತಾರೆ ಎಂಬ ನಿರೀಕ್ಷೆ ಇತ್ತು ಅದು ಹುಸಿಯಾಗಿದೆ. ಬಹಳ ಜನರು ಕೊರೊನಾ ಲಾಕ್ ಡೌನ್ ನಿಂದ ಉದ್ಯೋಗ ಕಳೆದುಕೊಂಡಿದ್ದರು. …

Read More »

ಸುವರ್ಣ ಸೌಧವನ್ನು ಬೆಳಗಾವಿಯಲ್ಲಿ ಮಾಡಿದ್ದೇಕೆ ? ಡಿ.ಕೆ.ಶಿವಕುಮಾರ್

ಬೆಂಗಳೂರು: ಬೆಳಗಾವಿ ಸುವರ್ಣ ಸೌಧದಲ್ಲಿ ಅಧಿವೇಶನ ನಡೆಸದೇ ಉತ್ತರ ಕರ್ನಾಟಕದ ಜನರಿಗೆ ಅನ್ಯಾಯ ಮಾಡಲಾಗುತ್ತಿದೆ. ಬಜೆಟ್ ಅಧಿವೇಶವನ್ನು ಬೆಳಗಾವಿಯಲ್ಲಿ ಮಾಡಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಆಗ್ರಹಿಸಿದ್ದಾರೆ. ಸುವರ್ಣ ಸೌಧವನ್ನು ಬೆಳಗಾವಿಯಲ್ಲಿ ಯಾಕೆ ಮಾಡಿದ್ದೇವೆ ಎಂಬುದನ್ನೇ ಸರ್ಕಾರ ಮರೆತಿದೆ. ಹೀಗಾಗಿ ಅಲ್ಲಿಯೇ ಬಜೆಟ್ ಅಧಿವೇಶ ಮಾಡುವಂತೆ ಒತ್ತಾಯಿಸಿದ್ದೇವೆ. ಆದರೆ ಬಜೆಟ್ ಅಧಿವೇಶನ ಬಳಿಕ ಮುಂದಿನ ಅಧಿವೇಶನ ಬೆಳಗಾವಿಯಲ್ಲಿ ಮಾಡುತ್ತೇವೆ ಎಂದಿದ್ದಾರೆ ಎಂದು ಹೇಳಿದರು. ಇನ್ನು ಕೇಂದ್ರ ಸರ್ಕಾರ ಮಂಡಿಸುತ್ತಿರುವ ಬಜೆಟ್ …

Read More »

ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದ 684 ಮದ್ಯದ ಬಾಟಲ ವಶಕ್ಕೆ

ಬೆಳಗಾವಿ: ಬಸ್ ನಲ್ಲಿ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಬಂಧಿಸಿರುವ ಪೊಲೀಸರು 684 ಮದ್ಯದ ಬಾಟಲುಗಳನ್ನು ವಶಕ್ಕೆ ಪಡೆದಿರುವ ಘಟನೆ ಬೆಳಗಾವಿ ಜಿಲ್ಲೆ ಖಾನಾಪುರ ತಾಲೂಕಿನ ಕಣಕುಂಟ ಬಳಿ ನಡೆದಿದೆ. ಬೆಳಗಾವಿ ಉಪ ವಿಭಾಗ ಹಾಗೂ ತನಿಖಾ ಠಾಣೆಯ ಅಧಿಕಾರಿಗಳು ವಾಹನ ತಪಾಸಣೆ ನಡೆಸುತ್ತಿದ್ದ ವೇಳೆ ಬಿಳಿ ಬಣ್ಣದ ಅಶೋಕಾ ಲೈಲ್ಯಾಂಡ್ ಕಂಪನಿಯ ಎಸಿ ಬಸ್ ನಿಲ್ಲಿಸಿ ಪರಿಶೀಲಿಸಿದಾಗ ಅಕ್ರಮವಾಗಿ ಮದ್ಯ ಸಾಗಾಟ ಮಾಡುತ್ತಿರುವುದು ಗೊತ್ತಾಗಿದೆ. ಪ್ರಕರಣ …

Read More »