ತಮಿಳುನಾಡು ಸಿಎಂ ಆಗಿದ್ದ ದಿವಂಗತ ಜಯಲಲಿತಾರ ಆತ್ಮಚರಿತ್ರೆ ಆಧಾರಿತ ಸಿನಿಮಾ ʼತಲೈವಿʼಯಲ್ಲಿ ಕಂಗನಾ ರಣಾವತ್ ನಟಿಸ್ತಾ ಇರೋದು ನಿಮಗೆಲ್ಲಾ ಗೊತ್ತೇ ಇದೆ. ಈ ಸಿನಿಮಾ ಬಳಿಕ ಕಂಗನಾ ದೇಶ ಕಂಡ ಮತ್ತೊಬ್ಬ ಪ್ರಬಲ ಮಹಿಳಾ ರಾಜಕಾರಣಿಯ ಪಾತ್ರವನ್ನ ನಿರ್ವಹಿಸೋಕೆ ಸಜ್ಜಾಗಿದ್ದಾರೆ. ತಮ್ಮ ಮುಂಬರುವ ಸಿನಿಮಾದಲ್ಲಿ ನಟಿ ಕಂಗನಾ ರಣಾವತ್ ದೇಶದ ಮಾಜಿ ಪ್ರಧಾನಿ ಇಂದಿರಾ ಗಾಂಧಿ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಅಂದ ಹಾಗೆ ಈ ಸಿನಿಮಾ ಇಂದಿರಾ ಗಾಂಧಿ ಆತ್ಮಚರಿತ್ರೆಯಲ್ಲ. ದೇಶದಲ್ಲಿ …
Read More »Yearly Archives: 2021
ಕುದುರೆ ರೇಸ್ ಜೂಜಾಟದಲ್ಲಿ ತೊಡಗಿದ್ದ ಮೂವರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
ಬೆಂಗಳೂರು: ಕುದುರೆ ರೇಸ್ ಜೂಜಾಟದಲ್ಲಿ ತೊಡಗಿದ್ದ ಮೂವರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಎಸ್. ಮಿಥುನ್ (33), ವಿ ರಘು (47), ಶಿವರಾಜು ಕೆ (30) ಬಂಧಿತ ಆರೋಪಿಗಳು. ಬಂಧಿತರಿಂದ 5. 5 ಲಕ್ಷ ರೂ. ಸೇರಿ 5 ಮೊಬೈಲ್ ಫೋನ್ ಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಸಿಸಿಬಿ ಜಂಟಿ ಪೊಲೀಸ್ ಆಯುಕ್ತ ಸಂದೀಪ್ ಪಾಟೀಲ್ ತಿಳಿಸಿದ್ದಾರೆ. ಆರೋಪಿಗಳು, ಲೈಸೆನ್ಸ್ ಇಲ್ಲದೆ ಸಾರ್ವಜನಿಕರಿಂದ ಹಣ ಕಟ್ಟಿಸಿಕೊಂಡು ಜೂಜಾಟ ನಡೆಸಿದ್ದರು. ಪೋಲೀಸರು ಖಚಿತ ಮಾಹಿತಿ …
Read More »‘ಕೆಜಿಎಫ್ ಚಾಪ್ಟರ್-2” ರಿಲೀಸ್ ಗೆ ಡೇಟ್ ಫಿಕ್ಸ್..!
ರಾಕಿಂಗ್ ಸ್ಟಾರ್ ಯಶ್ ಅಭಿನಯದ ಬಹು ನಿರೀಕ್ಷಿತ ಕೆಜಿಎಫ್-2 ಚಿತ್ರ ಬಿಡುಗಡೆ ದಿನಾಂಕ ಕೊನೆಗೂ ಫಿಕ್ಸ್ ಆಗಿದ್ದು, ಚಿತ್ರತಂಡದಿಂದ ದಿನಾಂಕ ಘೋಷಣೆಯಾಗಿದೆ. ದೇಶಾದ್ಯಂತ ಈ ಚಿತ್ರ ಜುಲೈ 16ರಂದು ರಿಲೀಸ್ ಆಗಲಿದೆ. ಇದಕ್ಕೆ ಸಂಬಂಧಿಸಿದಂತೆ ಹೊಂಬಾಳೆ ಫಿಲಂಸ್, ಯಶ್ ಹಾಗೂ ಪ್ರಶಾಂತ್ ನೀಲ್ ಟ್ವಿಟರ್ ಅಕೌಂಟ್ನಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. Fasten your seat belt coz the date is set.. ? pic.twitter.com/LsmIvf7SSz – Yash (@TheNameIsYash) January …
Read More »ರಾಮಮಂದಿರ ನಿರ್ಮಾಣ | ತಾಂತ್ರಿಕ ಉಸ್ತುವಾರಿಯಾಗಿ ಕೋಟೆ ನಾಡಿನ ಎಂಜಿನಿಯರ್ ನೇಮಕ ; ಸಚಿವ ರಮೇಶ್ ಜಾರಕಿಹೊಳಿ ಹರ್ಷ
ರಾಮಜನ್ಮಭೂಮಿ ಅಯೋಧ್ಯೆಯಲ್ಲಿ ನಿರ್ಮಾಣವಾಗಲಿರುವ ಭವ್ಯ ಶ್ರೀ ರಾಮಚಂದ್ರನ ದೇವಾಲಯದ ತಾಂತ್ರಿಕ ಉಸ್ತುವಾರಿಯಾಗಿ ನೇಮಕವಾಗಿರುವ ದೇಶದ ಹಿರಿಯ ಜಿಯೋ ಟೆಕ್ನಿಕಲ್ ಎಂಜಿನಿಯರ್, ಕನ್ನಡಿಗ ಪ್ರೊ. ಟಿಜಿ ಸೀತಾರಾಮ್ ಅವರಿಗೆ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಶುಭಾಶಯ ತಿಳಿಸಿದ್ದಾರೆ. ಗುವಾಹಟಿ ಐಐಟಿ ನಿರ್ದೇಶಕರಾಗಿರುವ ಚಿತ್ರದುರ್ಗ ಮೂಲದ ಪ್ರೊ. ಟಿಜಿ ಸೀತಾರಾಮ್, ಜಿಯೋ ಟೆಕ್ನಿಕಲ್ ಎಂಜಿನಿಯರಿಂಗ್ ನಲ್ಲಿ ನುರಿತ ತಜ್ಞರಾಗಿದ್ದು, ಇವರ ತಂಡದ ಸಲಹೆಯಂತೆಯೇ ‘ಶ್ರೀ ರಾಮ ಮಂದಿರ’ ದ ತಳಪಾಯದ ಕೆಲಸ ನಡೆಯುತ್ತದೆ. …
Read More »ಮಹಾ ಸಿಎಂ ಹೇಳಿಕೆ ಖಂಡಿಸಿ ಕನ್ನಡ ಪರ ಸಂಘಟನೆಗಳ ಭುಗಿಲೆದ್ದ ಆಕ್ರೋಶ: 1 ಲಕ್ಷ ಕನ್ನಡಿಗರೊಂದಿಗೆ ಮಹಾರಾಷ್ಟ್ರ ಗಡಿಗೆ ನುಗ್ಗಲು ಸಜ್ಜು
ಬೆಂಗಳೂರು: ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆ ಹೇಳಿಕೆ ಖಂಡಿಸಿ ಕನ್ನಡ ಚಳುವಳಿ ವಾಟಾಳ್ ನಾಗರಾಜ್ ನೇತೃತ್ವದಲ್ಲಿ ಕನ್ನಡಪರ ಸಂಘಟನೆಗಳು ಬೆಂಗಳೂರಿನ ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣ ಬಳಿ ಬೃಹತ್ ಪ್ರತಿಭಟನೆ ನಡೆಸಿದ್ದು, ರೈಲ್ವೆ ಚಳುವಳಿ ಆರಂಭಿಸಿದ್ದಾರೆ. ಮಹಾರಾಷ್ಟ್ರ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿದ ಪ್ರತಿಭಟನಾಕಾರರು, ಬೆಳಗಾವಿ ನಮ್ಮದು, ರಾಜ್ಯದ ಒಂದಿಂಚು ಜಾಗವನ್ನೂ ಬಿಡುವ ಪ್ರಶ್ನೆಯೇ ಇಲ್ಲ ಎಂದು ಹೇಳಿದ್ದಾರೆ. ಈ ವೇಳೆ ಮಾತನಾಡಿದ ವಾಟಾಳ್ ನಾಗರಾಜ್, ಎಂಇಎಸ್ ನಿಷೇಧ ಮಾಡಬೇಕು. …
Read More »ಗಡಿ ಉಸ್ತುವಾರಿ ಸಚಿವರನ್ನಾಗಿ ಬಸವರಾಜ ಬೊಮ್ಮಾಯಿ ಅವರನ್ನು ನೇಮಕ ಮಾಡಬೇಕು
ಬೆಳಗಾವಿ – ಗಡಿ ಉಸ್ತುವಾರಿ ಸಚಿವರನ್ನಾಗಿ ಬಸವರಾಜ ಬೊಮ್ಮಾಯಿ ಅವರನ್ನು ನೇಮಕ ಮಾಡಬೇಕು ಎಂದು ಕನ್ನಡ ಸಂಘಟನೆಗಳ ಕ್ರಿಯಾ ಸಮಿತಿ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದೆ. ಜೊತೆಗೆ, ಮಹಾರಾಷ್ಟ್ರದ ವಿರುದ್ಧ ನ್ಯಾಯಾಂಗ ನಿಂದನೆ ಪ್ರಕರಣ ದಾಖಲಿಸುವಂತೆ ಆಗ್ರಹಿಸಿದೆ. ಕ್ರಿಯಾ ಸಮಿತಿ ಅಧ್ಯಕ್ಷ ಅಶೋಕ ಚಂದರಗಿ ಈ ಪತ್ರ ಬರೆದಿದ್ದು, ಕರ್ನಾಟಕ ಮತ್ತು ಮಹಾರಾಷ್ಟ್ರ ನಡುವಣ ಗಡಿ ವಿವಾದ ಪ್ರಕರಣವನ್ನು ಮಹಾರಾಷ್ಟ್ರ ಸರಕಾರ ಪದೇ ಪದೇ ಕೆಣಕುತ್ತಿದೆ. ಅಲ್ಲಿಯ ಮುಖ್ಯಮಂತ್ರಿಗಳು ಸಾಧ್ಯವಿರುವ ಎಲ್ಲ …
Read More »ಜನವರಿ 31ರಂದು ರಾಜ್ಯಾದ್ಯಂತ ಪೋಲಿಯೋ ಲಸಿಕೆ ಅಭಿಯಾನ
ಬೆಂಗಳೂರು: ನಾಳೆ ಭಾನುವಾರ, ಜನವರಿ 31ರಂದು ರಾಜ್ಯಾದ್ಯಂತ ಪೋಲಿಯೋ ಲಸಿಕೆ ಅಭಿಯಾನ ನಡೆಯಲಿದೆ ಎಂದು ಆರೋಗ್ಯ ಸಚಿವ ಡಾ.ಸುಧಾಕರ್ ಮಾಹಿತಿ ನೀಡಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಸಚಿವರು, ಈ ಹಿಂದೆ ಎಷ್ಟೇ ಬಾರಿ ಪೋಲಿಯೋ ಲಸಿಕೆ ಹಾಕಿಸಿದ್ದರೂ 5 ವರ್ಷದೊಳಗಿನ ಎಲ್ಲ ಮಕ್ಕಳಿಗೂ ಕಡ್ಡಾಯವಾಗಿ ಲಸಿಕೆ ಹಾಕಿಸಬೇಕು ಎಂದು ಪೋಷಕರಲ್ಲಿ ಮನವಿ ಮಾಡಿದ್ದಾರೆ. ನಿಮ್ಮ ಹತ್ತಿರದ ಲಸಿಕಾ ಕೇಂದ್ರದ ಬಗ್ಗೆ ಮಾಹಿತಿ ಪಡೆಯಲು ಈ ಆಪ್ ಬಳಸಿ
Read More »“ಕರ್ನಾಟಕಕ್ಕೆ ಮಹಾದಾಯಿ ನದಿಯ 1 ಹನಿ ನೀರನ್ನೂ ಕೊಡಲ್ಲ”
ಪಣಜಿ,ಜ.30- ನನ್ನ ಪಕ್ಷದವರೇ ಇರಲಿ ಅಥವಾ ಬೇರೆ ಯಾರೇ ಇರಲಿ ರಾಜ್ಯದ ಹಿತ ಕಡೆಗಣಿಸಿ ಮಹಾದಾಯಿ ನದಿಯಿಂದ ಒಂದೂ ಹನಿಯನ್ನೂ ಕರ್ನಾಟಕಕ್ಕೆ ಬಿಟ್ಟುಕೊಡುವ ಪ್ರಶ್ನೆಯೇ ಇಲ್ಲ ಎನ್ನುವ ಮೂಲಕ ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಮತ್ತೆ ಕ್ಯಾತೆ ತೆಗೆದಿದ್ದಾರೆ. ವಿರೋಧ ಪಕ್ಷಗಳು ವಿಧಾನಸಭೆಯಲ್ಲಿ ಮಂಡಿಸಿದ್ದ ನಿಲುವಳಿ ಸೂಚನೆ ಮೇಲೆ ಉತ್ತರಿಸಿರುವ ಪ್ರಮೋದ್ ಸಾವಂತ್, ಮಹದಾಯಿಯಿಂದ ನೀರು ಹರಿಸುವಂತೆ ನನ್ನ ಪಕ್ಷವೇ ನನ್ನ ಮೇಲೆ ಒತ್ತಡ ಹಾಕಿದರೂ ನಾನು ಭಾಗುವುದಿಲ್ಲ ಎಂದು …
Read More »ಕೊಲೆ ಮಾಡಿ ಸಿನಿಮಾ ಸ್ಟೈಲಲ್ಲಿಆರೋಪಿಗಳು ಎಸ್ಕೇಪ್..!
ತುಮಕೂರು,ಜ.30-ವ್ಯಕ್ತಿಯೊಬ್ಬರನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಿ ನಂತರ ಅಪಘಾತವೆಂದು ಬಿಂಬಿಸಲು ಆತನ ಕಾರನ್ನು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆಸಿ ಆರೋಪಿಗಳು ಅಲ್ಲಿಂದ ಪರಾರಿಯಾಗಿರುವ ಘಟನೆ ಕೊರಟಗೆರೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಬೆಂಗಳೂರಿನ ಅಕ್ಮಲ್ ಅಹಮದ್ (35) ಕೊಲೆಯಾಗಿರುವ ವ್ಯಕ್ತಿ. ಕೊರಟಗೆರೆ-ಮಧುಗಿರಿ ಮಾರ್ಗದ ತುಂಬಾಡಿಯಲ್ಲಿ ಎಡಭಾಗದಲ್ಲಿ ಇರುವ ವಿದ್ಯುತ್ ಕಂಬಕ್ಕೆ ಗುದ್ದಿ ಅಪಘಾತದಲ್ಲಿ ಮೃತಪಟ್ಟಿದ್ದಾನೆಂದು ಸೀನಿಮಿಯ ರೀತಿ ಬಿಂಬಿಸಿದ್ದಾರೆ. ಕೊಲೆ ಮಾಡಿದ ನಂತರ ಅಪಘಾತವೆಂದು ಬಿಂಬಿಸಲು ಆರೋಪಿಗಳು ಅಕ್ಮಲ್ …
Read More »ಪಂಚಾಯಿತಿ ವ್ಯವಸ್ಥೆ ಅಧ್ಯಯನಕ್ಕೆ ಕೇರಳ ಪ್ರವಾಸ: ಕೆ.ಎಸ್. ಈಶ್ವರಪ್ಪ
ಬೆಂಗಳೂರು: ರಾಜ್ಯದಲ್ಲಿನ ಪಂಚಾಯತ್ ರಾಜ್ ವ್ಯವಸ್ಥೆಯನ್ನು ಬಲಪಡಿಸುವ ಉದ್ದೇಶದಿಂದ ಸ್ಥಳೀಯ ಸಂಸ್ಥೆಗಳ ಕ್ಷೇತ್ರಗಳಿಂದ ಆಯ್ಕೆಯಾಗಿರುವ ವಿಧಾನ ಪರಿಷತ್‌ನ 25 ಸದಸ್ಯರನ್ನು ಶೀಘ್ರದಲ್ಲಿ ಕೇರಳ ಪ್ರವಾಸಕ್ಕೆ ಕಳುಹಿಸಲಾಗುವುದು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್. ಈಶ್ವರಪ್ಪ ಭರವಸೆ ನೀಡಿದರು. ಶುಕ್ರವಾರ ವಿಧಾನ ಪರಿಷತ್‌ನಲ್ಲಿ ಪ್ರಶ್ನೋತ್ತರ ಕಲಾಪದಲ್ಲಿ ಗ್ರಾಮ ವಿಕಾಸ ಯೋಜನೆ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಸದಸ್ಯ ಕೆ. ಹರೀಶ್ ಕುಮಾರ್ ಅವರ ಪ್ರಶ್ನೆಗೆ ಉತ್ತರಿಸುವಾಗ ಈ ವಿಷಯ ತಿಳಿಸಿದ …
Read More »