ಹೊಸಪೇಟೆ: ಗಣರಾಜ್ಯೋತ್ಸವದ ನಿಮಿತ್ತ ರಾಜಪಥದಲ್ಲಿ ಜ. 26ರಂದು ನಡೆಯಲಿರುವ ಪಥಸಂಚಲನದಲ್ಲಿ ಪಾಲ್ಗೊಳ್ಳಲಿರುವ ವಿಜಯನಗರ ಸಾಮ್ರಾಜ್ಯದ ವೈಭವ ಸಾರುವ ಸ್ತಬ್ಧಚಿತ್ರದಲ್ಲಿ ಕನ್ನಡ ಕಡೆಗಣಿಸಿರುವುದಕ್ಕೆ ಸಾಮಾಜಿಕ ಜಾಲತಾಣಗಳಲ್ಲಿ ಟೀಕೆಗಳು ವ್ಯಕ್ತವಾಗಿವೆ. ಸ್ತಬ್ಧಚಿತ್ರದ ಮುಂಭಾಗದಲ್ಲಿ ಕನ್ನಡದ ಬದಲು ಹಿಂದಿ ಭಾಷೆಯಲ್ಲಿ ಕರ್ನಾಟಕ ಎಂದು ಬರೆಯಲಾಗಿದೆ. ಇಷ್ಟೇ ಅಲ್ಲ, ಕನ್ನಡ ಬಾವುಟದ ಬದಲು ಕೇಸರಿ ಧ್ವಜ ಬಳಸಲಾಗಿದೆ. ಇದೇ ವಿಷಯ ಈಗ ಟೀಕೆಗೆ ಕಾರಣವಾಗಿದೆ. ಇದೇನು ಒಕ್ಕೂಟ ವ್ಯವಸ್ಥೆಯ ದೇಶವೋ ಏನು? ಕನ್ನಡ ಬಾವುಟ ಎಲ್ಲಿ? …
Read More »Yearly Archives: 2021
ಸಂಬಳ ನೀಡದೇ ಸತಾಯಿಸಿದ್ದಕ್ಕೆ 5 ಬಸ್ ಗಳಿಗೆ ಬೆಂಕಿ ಯಿಟ್ಟ
ಮುಂಬೈ: ಕೊರೊನಾ ಸಂಕಷ್ಟದಿಂದ ಕಂಗೆಟ್ಟಿದ್ದರೂ ಸಂಬಳ ನೀಡದೇ ಸತಾಯಿಸಿದ್ದಕ್ಕೆ ಮಾಲೀಕನ ವಿರುದ್ಧ ಕೋಪಗೊಂಡ ಬಸ್ ಚಾಲಕನೊಬ್ಬ 5 ಬಸ್ ಗಳಿಗೆ ಬೆಂಕಿ ಹಚ್ಚಿರುವ ಘಟನೆ ಮುಂಬೈನಲ್ಲಿ ನಡೆದಿದೆ. ಆರೋಪಿ ಬಸ್ ಚಾಲಕ 24 ವರ್ಷದ ಅಜಯ್ ನನ್ನು ಪೊಲೀಸರು ಬಂಧಿಸಿದ್ದಾರೆ. ಕಳೆದ ಒಂದು ತಿಂಗಳಲ್ಲಿ ಆತ್ಮಾರಾಂ ಟ್ರ್ಯಾವಲ್ಸ್ ಬಸ್ ನ 5 ಬಸ್ ಗಳು ಬೆಂಕಿಗಾಹುತಿಯಾಗಿದ್ದವು. ಈ ಪ್ರಕರಣದ ತನಿಖೆ ನಡೆಸಿದ ಪೊಲೀಸರಿಗೆ ಇದೀಗ ಸತ್ಯಬಯಲಾಗಿದೆ. 2020ರ ಡಿಸೆಂಬರ್ ನಲ್ಲಿ …
Read More »ಜನವರಿ 26 ದಂದು ರೈತರ ಬೃಹತ್ ಪರೇಡ್
ಬೆಂಗಳೂರು: ಕೇಂದ್ರದ ಕೃಷಿ ಕಾಯ್ದೆ ವಿರುದ್ಧ ರೈತರು ಮತ್ತೆ ಹೋರಾಟ ಮುಂದುವರೆಸಿದ್ದು, ಜನವರಿ 26 ಗಣರಾಜ್ಯೋತ್ಸವದ ದಿನದಂದು ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ರೈತರು ಬೃಹತ್ ಪರೇಡ್ ನಡೆಸಲಿದ್ದಾರೆ. ರಾಜ್ಯ ರೈತ ಸಂಘದ ಅಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ಈ ಬಗ್ಗೆ ತಿಳಿಸಿದ್ದು, ಗಣರಾಜ್ಯೋತ್ಸವದಂದು ಕೆಂಪು ಕೋಟೆಯಲ್ಲಿ ಪ್ರಧಾನಿ ಮೋದಿ ಭಾಷಣ ಮುಗಿಸುತ್ತಿದ್ದಂತೆಯೇ ರಾಜ್ಯದ ರೈತರು ಬೆಂಗಳೂರಿನಲ್ಲಿ ಪರೇಡ್ ಆರಂಭಿಸಲಿದ್ದಾರೆ. ತುಮಕೂರು ರಸ್ತೆ ನೈಸ್ ಜಂಕ್ಷನ್ ನಿಂದ ಅರಂಭವಾಗಲಿರುವ ಪರೇಡ್ ಫ್ರೀಡಂ ಪಾರ್ಕ್ …
Read More »ಭೀಕರ ಅಪಘಾತದಲ್ಲಿ ಬೆಳಗಾವಿಯ ಮಹಿಳಾ ಪಿಎಸ್ ಐ ಲಕ್ಷ್ಮಿ ನಲವಡೆ (ಪವಾರ್) ಸೇರಿದಂತೆ ಕಾರಿನಲ್ಲಿದ್ದ ನಾಲ್ವರು ಮೃತಪಟ್ಟಿದ್ದಾರೆ.
ಬೆಳಗಾವಿ: ಬೆಳಗಾವಿಯ ಸವದತ್ತಿ ಬಳಿ ಕೆಎಸ್ ಆರ್ ಟಿಸಿ ಬಸ್ ಹಾಗೂ ಕಾರಿನ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಬೆಳಗಾವಿಯ ಮಹಿಳಾ ಪಿಎಸ್ ಐ ಲಕ್ಷ್ಮಿ ನಲವಡೆ (ಪವಾರ್) ಸೇರಿದಂತೆ ಕಾರಿನಲ್ಲಿದ್ದ ನಾಲ್ವರು ಮೃತಪಟ್ಟಿದ್ದಾರೆ. ಬೆಳಗಾವಿ ಜಿಲ್ಲೆ ಸವದತ್ತಿ ತಾಲೂಕಿನ ಚಚಡಿ ಕ್ರಾಸ್ ಬಳಿ ಇಂದು ಸಂಜೆ ಬಸ್ ಹಾಗೂ ಕಾರಿನ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿತ್ತು. ಅಪಘಾತದ ರಭಸಕ್ಕೆ ಕಾರು ಬಸ್ಸಿನ ಅಡಿಗೆ ಸಿಲುಕಿಕೊಂಡಿತ್ತು. ಕ್ರೇನ್ ಮೂಲಕ …
Read More »ಲಿಂಗಾಯತ ಮಠಾಧಿಪತಿಗಳ ಪ್ರಥಮ ಅಧ್ಯಕ್ಷರಾಗಿ ಭಾಲ್ಕಿ ಹಿರೇಮಠ ಸಂಸ್ಥಾನದ ಡಾ. ಬಸವಲಿಂಗ ಪಟ್ಟದೇವರು
ಬೆಳಗಾವಿ : ನಾಡಿನ ಮೂಲೆ ಮೂಲೆಗಳಿಂದ ಆಗಮಿಸಿದ್ದ ನೂರಾರು ಲಿಂಗಾಯತ ಮಠಾಧಿಪತಿಗಳುಬೆಳಗಾವಿಯ ನಾಗನೂರು ರುದ್ರಾಕ್ಷಿಮಠದಲ್ಲಿ ಇದೇ ದಿನಾಂಕ ೨೨ ಮತ್ತು ೨೩ ರಂದು ಅನೇಕ ಪ್ರಸ್ತುತ ವಿಷಯಗಳನ್ನು ಕುರಿತು ಚಿಂತನ -ಮಂಥನ ನಡೆಸಿ, ’ಲಿಂಗಾಯತ ಮಠಾಧಿಪತಿಗಳ ಒಕ್ಕೂಟ’ ಎಂಬ ನೂತನ ಸಂಘಟನೆಯೊಂದನ್ನು ಹುಟ್ಟು ಹಾಕಿದ್ದಾರೆ. ಬಸವನಿಷ್ಠ ಲಿಂಗಾಯತ ಮಠಾಧಿಪತಿಗಳು ಸಮಾಜದ ಎಲ್ಲ ಸಮಸ್ಯೆಗಳಿಗೆ ಈವರೆಗೆ ಸ್ಪಂದಿಸುತ್ತ ಬಂದಿದ್ದಾರೆ. ಅವರು ಮಾಡುತ್ತಿರುವ ಸಾಮಾಜಿಕ, ಧಾರ್ಮಿಕ, ಶೈಕ್ಷಣಿಕ ಹಾಗು ಸಾಂಸ್ಕೃತಿಕ ಸೇವಾಕಾರ್ಯಗಳಿಗೆ ಇನ್ನಷ್ಟು …
Read More »ಶಾಸಕ ಮಹಾಂತೇಶ ದೊಡ್ಡಗೌಡರ್ ಸೋಮವಾರ ಒಟ್ಟೂ 3.27 ಕೋಟಿ ರೂ ವೆಚ್ಚದ 6 ಯೋಜನೆಗಳಿಗೆ ಭೂ ಮಿ ಪೂಜೆ
ಕಿತ್ತೂರು – ಶಾಸಕ ಮಹಾಂತೇಶ ದೊಡ್ಡಗೌಡರ್ ಸೋಮವಾರ ಒಟ್ಟೂ 3.27 ಕೋಟಿ ರೂ ವೆಚ್ಚದ 6 ಯೋಜನೆಗಳಿಗೆ ಭೂ ಮಿ ಪೂಜೆ ನೆರವೇರಿಸಲಿದ್ದಾರೆ. ಅದರ ಸಮಗ್ರ ವಿವರ ಇಲ್ಲಿದೆ – 11 ಗಂಟೆಗೆ ಚಿಕ್ಕನಂದಿಹಳ್ಳಿ ಗ್ರಾಮದಲ್ಲಿ 33 ಲಕ್ಷ ವೆಚ್ಚದಲ್ಲಿ ಜಲಮಿಷನ್ ಯೋಜನೆಯಡಿ ಕುಡಿಯುವ ನೀರಿನ ಯೋಜನೆಯ ಭೂಮಿ ಪೂಜಾ ಕಾರ್ಯಕ್ರಮ. 12 ಗಂಟೆಗೆ ಕಲಬಾಂವಿ ಗ್ರಾಮದಲ್ಲಿ ಜಲಮಿಷನ್ ಯೋಜನೆಯಡಿ 49 ಲಕ್ಷ ವೆಚ್ಚದಲ್ಲಿ ಕುಡಿಯುವ ನೀರಿನ ಯೋಜನೆಯ ಭೂಮಿ …
Read More »ಮೂಡಲಗಿಯಲ್ಲಿ ಸಂಸದ ಈರಣ್ಣ ಕಡಾಡಿ ಅವರೊಂದಿಗೆ ತಾಲೂಕಾ ಮಟ್ಟದ ಅಧಿಕಾರಿಗಳ ಸಭೆ ನಡೆಸಿದ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ
ಮೂಡಲ ಮೂಡಲಗಿ : ನೆರೆ ಹಾವಳಿ ಸಮಯದಲ್ಲಿ ಕುಸಿದು ಬಿದ್ದಿರುವ ಮನೆಗಳ ಸಂತ್ರಸ್ತರಿಗೆ ಸೂರು ಕಲ್ಪಿಸಿಕೊಡುವ ವ್ಯವಸ್ಥೆ ಕೂಡಲೇ ಮಾಡಬೇಕು. ಹೈಡ್/ಡೆಲಿಟ್ ಆದ ಮನೆಗಳ ತಾಂತ್ರಿಕ ದೋಷವನ್ನು ಕೂಡಲೇ ನಿವಾರಿಸಬೇಕು. ಮಾರ್ಚ ತಿಂಗಳ ಅಂತ್ಯದೊಳಗೆ ವಸತಿ ಇಲಾಖೆಯಲ್ಲಿನ ಸಮಸ್ಯೆಗಳನ್ನು ನಿವಾರಿಸಬೇಕೆಂದು ಕೆಎಂಎಫ್ ಅಧ್ಯಕ್ಷ ಹಾಗೂ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಪಟ್ಟಣದ ತಹಶೀಲ್ದಾರ ಕಛೇರಿಯಲ್ಲಿ ಶುಕ್ರವಾರದಂದು ಜರುಗಿದ ತಾಲೂಕಾ ಮಟ್ಟದ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, …
Read More »ಬಸ್ ಪಾಸ್ ಇದ್ರು ನಡೆದುಕೊಂಡು ಕಾಲೇಜಿಗೆ ಹೋಗುವ ವಿದ್ಯಾರ್ಥಿಗಳು..!
ಗದಗ (ಜ. 24): ಕೊರೋನಾ ಹಾವಳಿಯಿಂದ ಆನ್ ಲೈನ್ ಶಿಕ್ಷಣವನ್ನು ಮನೆಯಲ್ಲಿಯೇ ಪಡೆದು, ಈಗ ತಾನೇ ಕಾಲೇಜು ಕಡೇ ವಿದ್ಯಾರ್ಥಿಗಳು ಮುಖ ಮಾಡಿದ್ದಾರೆ. ಒಂದು ಕಡೇ ಕೊರೊನಾ ಆತಂಕ ಇನ್ನೊಂದೆಡೆ ಸಮರ್ಪಕ ಸಾರಿಗೆ ಸಂಸ್ಥೆಯ ಬಸ್ ವ್ಯವಸ್ಥೆ ಇರದಿದಕ್ಕೆ ವಿದ್ಯಾರ್ಥಿಗಳು ಪಡಬಾರದ ಕಷ್ಟವನ್ನು ಅನುಭವಿಸುತ್ತಿದ್ದಾರೆ. ತಾಲೂಕಿನ ಹಾತಲಗೇರಿ ಗ್ರಾಮದ ವಿದ್ಯಾರ್ಥಿಗಳು ನಿತ್ಯ ಗದಗ ನಗರಕ್ಕೆ ನಡೆದುಕೊಂಡು ಬರುವಂತಹ ಸ್ಥಿತಿ ನಿರ್ಮಾಣವಾಗಿದೆ. ಹಾತಲಗೇರಿ ಗ್ರಾಮದಲ್ಲಿ ಸುಮಾರು 40 ರಿಂದ 50 ವಿದ್ಯಾರ್ಥಿಗಳು, …
Read More »ಫೋಟೋ ಶೇರ್ ಮಾಡಿ ಮಗಳ ಹುಟ್ಟುಹಬ್ಬಕ್ಕೆ ನೆನಪಿರಲಿ ಪ್ರೇಮ್ ಪ್ರೀತಿಯ ವಿಶ್
ಸ್ಯಾಂಡಲ್ ವುಡ್ ನ ಲವ್ಲಿ ಸ್ಟಾರ್ ನೆನಪಿರಲಿ ಪ್ರೇಮ್ ಪುತ್ರಿಗೆ ಹುಟ್ಟುಹಬ್ಬದ ಸಂಭ್ರಮ. ಮುದ್ದಿನ ಮುದ್ದಿನ ಮಗಳು ಅಮೃತಾ ಹುಟ್ಟುಹಬ್ಬಕ್ಕೆ ಪ್ರೇಮ್ ಮಗಳ ಜೊತೆಯಿರುವ ಫೋಟೋ ಹಂಚಿಕೊಂಡು ಜನ್ಮದಿನದ ಶುಭಾಶಯ ತಿಳಿಸಿದ್ದಾರೆ. ಪ್ರೇಮ್ ಮಗಳ ಜೊೆತೆ ಇರುವ ಫೋಟೋ ಹಂಚಿಕೊಳ್ಳುತ್ತಿದ್ದಂತೆ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಪ್ರೇಮ್ ಮಗಳ ಫೋಟೋ ಎಲ್ಲರ ಗಮನ ಸೆಳೆಯುತ್ತಿದ್ದು, ಅಭಿಮಾನಿಗಳು ಸಹ ಶುಭಕೋರುತ್ತಿದ್ದಾರೆ. ನೆನಪಿರಲಿ ಪ್ರೇಮ್ ಗೆ ಇಷ್ಟು ದೊಡ್ಡ ಮಗಳಿದ್ದಾರಾ ಎಂದು ಅಚ್ಚರಿ …
Read More »ಮಗಳಿಂದ ತಂದೆಯ ಅಂತ್ಯಸಂಸ್ಕಾರ: ‘ಕನ್ನಡತಿ’ ಧಾರವಾಹಿ ಪ್ರೇರಣೆ
ಕನ್ನಡದ ಜನಪ್ರಿಯ ಧಾರವಾಹಿ ‘ಕನ್ನಡತಿ’ ಇಂದ ಪ್ರೇರಣೆ ಪಡೆದು ಕುಟುಂಬವೊಂದು ಸಂಪ್ರದಾಯವನ್ನು ಮುರಿದು ಹೊಸ ಸಂಪ್ರದಾಯವನ್ನು ಕಟ್ಟಿದ ಘಟನೆ ನಡೆದಿದೆ. ಗಂಡು ಮಕ್ಕಳಷ್ಟೆ ಅಂತಿಮ ಸಂಸ್ಕಾರ ಮಾಡುವ ಪದ್ಧತಿ ಬಹು ಹಳೆಯ ಕಾಲದಿಂದಲೂ ಚಾಲ್ತಿಯಲ್ಲಿದೆ. ಹೆಣ್ಣು ಮಕ್ಕಳು ಅಂತ್ಯ ಸಂಸ್ಕಾರ ಮಾಡುವಂತಿಲ್ಲ. ಆದರೆ ಕನ್ನಡತಿ ಧಾರವಾಹಿಯಲ್ಲಿ ನಾಯಕಿ ತನ್ನ ತಂದೆಯ ಅಂತ್ಯ ಸಂಸ್ಕಾರ ಮಾಡುವ ದೃಶ್ಯವಿದೆ. ಬಹು ಚರ್ಚೆ-ವಿಚಾರ ವಿಮರ್ಶೆಗಳ ಬಳಿಕ ಧಾರವಾಹಿ ನಾಯಕಿ ತಂದೆಯ ಅಂತ್ಯ ಸಂಸ್ಕಾರ ಮಾಡುತ್ತಾರೆ. …
Read More »