ಚಿಕ್ಕಮಗಳೂರು: ಖಾತೆ ಹಂಚಿಕೆ ಅಸಮಾಧಾನದ ಬೆನ್ನಲ್ಲೇ ಮತ್ತೆ ರೆಸಾರ್ಟ್ ರಾಜಕೀಯ ಆರಂಭವಾಗಿದ್ದು, ಜಲ ಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ನೇತೃತ್ವದಲ್ಲಿ ನಾಲ್ವರು ಸಚಿವರು ಚಿಕ್ಕಮಗಳೂರಿನ ರೆಸಾರ್ಟ್ ಒಂದರಲ್ಲಿ ಬೀಡುಬಿಟ್ಟಿದ್ದಾರೆ. ಚಿಕ್ಕಮಗಳೂರಿನ ಸರಾಯ್ ರೆಸಾರ್ಟ್ ನಲ್ಲಿ ರಮೇಶ್ ಜಾರಕಿಹೊಳಿ ನೇತೃತ್ವದಲ್ಲಿ ಅಸಮಾಧಾನಿತ ಸಚಿವರುಗಳ ಗೌಪ್ಯ ಸಭೆ ನಡೆದಿದೆ. ಸಭೆಯಲ್ಲಿ ಸಿ.ಪಿ.ಯೋಗೇಶ್ವರ್, ಗೋಪಾಲಯ್ಯ, ಶಾಸಕ ಎಂಪಿ ಕುಮಾರಸ್ವಾಮಿ ಸೇರಿದಂತೆ ಹಲವರು ಭಾಗಿಯಾಗಿದ್ದಾರೆ. ಒಟ್ಟಾರೆ ಖಾತೆ ಹಂಚಿಕೆ ಬೆನ್ನಲ್ಲೇ ಅಸಮಾಧಾನಿತ ಸಚಿವರು, ಶಾಸಕರ ಈ …
Read More »Yearly Archives: 2021
ಆಹ್ವಾನ ಇದ್ದವರಿಗೆ ಮಾತ್ರ ಗಣರಾಜ್ಯೋತ್ಸವ ಪರೇಡ್ ವೀಕ್ಷಣೆಗೆ ಅವಕಾಶ
ನವದೆಹಲಿ,ಜ.23-ಆಹ್ವಾನ ಪತ್ರಿಕೆ ಇಲ್ಲವೆ ಟಿಕೆಟ್ ಹೊಂದಿರುವವರಿಗೆ ಮಾತ್ರ ಗಣರಾಜ್ಯೋತ್ಸವ ಪರೇಡ್‍ನಲ್ಲಿ ಪಾಲ್ಗೊಳ್ಳಲು ಅವಕಾಶ ಕಲ್ಪಿಸಲಾಗಿದೆ. ಹೀಗಾಗಿ ಆಹ್ವಾನಪತ್ರಿಕೆ ಹೊಂದಿರುವವರು ಮಾತ್ರ ಪರೇಡ್‍ಗೆ ಆಗಮಿಸಬೇಕು. 15 ವರ್ಷದೊಳಗಿನ ಮಕ್ಕಳಿಗೆ ಅವಕಾಶವಿಲ್ಲ ಎಂದು ದೆಹಲಿ ಪೊಲೀಸರು ಸಾರ್ವಜನಿಕರಿಗೆ ಸಲಹೆ ನೀಡುತ್ತಿದ್ದಾರೆ. ಆಹ್ವಾನ ಪತ್ರಿಕೆ ಇಲ್ಲದವರು ಮನೆಯಲ್ಲೆ ಕುಳಿತು ಟಿವಿಯಲ್ಲಿ ಕಾರ್ಯಕ್ರಮ ವೀಕ್ಷಿಸುವಂತೆ ಮನವಿ ಮಾಡಿಕೊಳ್ಳುತ್ತಿದ್ದಾರೆ. ಕಾರ್ಯಕ್ರಮಕ್ಕೆ ಆಗಮಿಸುವವರು ಕ್ಯಾರಿ ಬ್ಯಾಗ್, ಸೂಟ್‍ಕೇಸ್, ಪಿನ್‍ಗಳು, ತಿಂಡಿತಿನಿಸುಗಳು, ಕ್ಯಾಮರಾ ಮತ್ತಿತರ ಎಲೆಕ್ಟ್ರಾನಿಕ್ ಉಪಕರಣಗಳನ್ನು ತರುವಂತಿಲ್ಲ ಎಂದು …
Read More »ಮಹಾರಾಷ್ಟ್ರ ಏಕೀಕರಣ ಸಮಿತಿ ಬ್ಯಾನ್ ಮಾಡಿ,:ವಾಟಾಳ್ ನಾಗರಾಜ್
ಎಂಇಎಸ್ ಮುಖಂಡರಿಗೆ ಮರಾಠಿ, ಮಹಾರಾಷ್ಟ್ರ ಬೇಕು ಎನ್ನುವುದಾದ್ರೆ ಉದ್ಧವ್ ಠಾಕ್ರೆ ಹತ್ತಿರ ಹೋಗಬೇಕು. ಇನ್ನು 15 ದಿನಗಳಲ್ಲಿ ಮಹಾರಾಷ್ಟ್ರ ಏಕೀಕರಣ ಸಮಿತಿ ಬ್ಯಾನ್ ಮಾಡಿ, ಕರ್ನಾಟಕ ಏಕೀಕರಣ ಸ್ಥಾಪಿಸಬೇಕು ಎಂದು ಸಿಎಂ ಬಿಎಸ್ ಯಡಿಯೂರಪ್ಪಗೆ ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಆಗ್ರಹಿಸಿದರು. ಗಡಿ ವಿಚಾರದಲ್ಲಿ ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆ ಉದ್ಧಟತನ ಹೇಳಿಕೆ ಹಾಗೂ ಶಿವಸೇನೆ, ಎಂಇಎಸ್ ಪುಂಡಾಟ ಖಂಡಿಸಿ ಬೆಳಗಾವಿಯ ರಾಣಿ ಚನ್ನಮ್ಮಾಜಿ ವೃತ್ತದಲ್ಲಿ ಕನ್ನಡ ಹೋರಾಟಗಾರ ವಾಟಾಳ್ …
Read More »ಇನ್ಮುಂದೆ ಪ್ರತಿವರ್ಷ ಜ.23 ‘ಪರಾಕ್ರಮ ದಿನ’ ಎಂದು ಆಚರಿಸಲಾಗುತ್ತದೆ- ಸಿಎಂ
ಬೆಂಗಳೂರು: ನೇತಾಜಿ ಸುಭಾಷ್‌ಚಂದ್ರ ಬೋಸ್ ಅವರ ಜನ್ಮದಿನದ ಹಿನ್ನೆಲೆಯಲ್ಲಿ ಇನ್ಮುಂದೆ ಪ್ರತಿ ವರ್ಷ ಜನವರಿ 23ರಂದು ಪರಾಕ್ರಮ ದಿನ ಎಂದು ಆಚರಿಸಲಾಗುತ್ತದೆ ಎಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ತಿಳಿಸಿದ್ದಾರೆ. ಇಂದು ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ಜನ್ಮದಿನದ ಅಂಗವಾಗಿ ವಿಧಾನಸೌಧದಲ್ಲಿ ಮಾತನಾಡಿದ ಸಿಎಂ, ನೀವು ನನಗೆ ರಕ್ತ ಕೊಡಿ, ನಾನು ನಿಮಗೆ ಸ್ವಾತಂತ್ರ್ಯ ಕೊಡುತ್ತೇನೆ ಎಂದು ನೇತಾಜಿ ಕರೆ ಕೊಟ್ಟಿದ್ದರು. ಆ ಮೂಲಕ ಯುವಕರನ್ನ ಸಂಘಟಿಸಿದ್ದರು. ಯುವಕರಲ್ಲಿ …
Read More »ವಿಧಾನಪರಿಷತ್ ಗಲಾಟೆಗೆ ಮಾಧುಸ್ವಾಮಿ, ಅಶ್ವತ್ಥನಾರಾಯಣ ಕಾರಣ’
ಬೆಂಗಳೂರು: ‘ವಿಧಾನಪರಿಷತ್ತಿನಲ್ಲಿ ಡಿ.15 ರಂದು ನಡೆದ ಗಲಾಟೆಗೆ ಉಪಮುಖ್ಯಮಂತ್ರಿ ಡಾ.ಸಿ.ಎನ್. ಅಶ್ವತ್ಥನಾರಾಯಣ ಮತ್ತು ಸಚಿವ ಜೆ.ಸಿ ಮಾಧುಸ್ವಾಮಿ ಅವರೇ ಕಾರಣರು’ ಎಂದು ಗಲಾಟೆಯ ವಿಚಾರಣೆಗೆಂದು ನೇಮಿಸಿದ್ದ ಸದನ ಸಮಿತಿ ತನ್ನ ಮಧ್ಯಂತರ ವರದಿಯಲ್ಲಿ ತಿಳಿಸಿದೆ. ಸಭಾಪತಿ ಪ್ರತಾಪಚಂದ್ರ ಶೆಟ್ಟಿ ಅವರು ವಿಧಾನಪರಿಷತ್ ಸದಸ್ಯ ಮರಿತಿಬ್ಬೇಗೌಡ ಅಧ್ಯಕ್ಷತೆಯಲ್ಲಿ ಸದನ ಸಮಿತಿಯನ್ನು ರಚಿಸಿದ್ದರು. ಸಮಿತಿ ಶುಕ್ರವಾರ ಮಧ್ಯಂತರ ವರದಿಯನ್ನು ಸಲ್ಲಿಸಿದ್ದು, ಪೂರ್ಣ ವರದಿ ಸಲ್ಲಿಸಲು ಹೆಚ್ಚಿನ ಕಾಲಾವಕಾಶವನ್ನು ಕೇಳಿದೆ. ಅಶ್ವತ್ಥನಾರಾಯಣ, ಮಾಧುಸ್ವಾಮಿ ಮತ್ತು …
Read More »ಹುಣಸೋಡು ಜಿಲೆಟಿನ್ ಸ್ಫೋಟ ಪ್ರಕರಣ: ಮೂವರು ವಶಕ್ಕೆ, ಬಾಂಬ್ ನಿಷ್ಕ್ರಿಯ ದಳ ಭೇಟಿ
ಶಿವಮೊಗ್ಗ: ಹುಣಸೋಡು ಬಳಿಯ ಕ್ರಶರ್‌ನಲ್ಲಿ ಜಿಲೆಟಿನ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರನ್ನು ವಶಕ್ಕೆ ಪಡೆದಿರುವುದಾಗಿ ಪೊಲೀಸ್ ವರಿಷ್ಠಾಧಿಕಾರಿ ಕೆ.ಎಂ ಶಾಂತರಾಜು ಪ್ರಜಾವಾಣಿಗೆ ತಿಳಿಸಿದ್ದಾರೆ. ಕಲ್ಲು ಗಣಿಗಾರಿಕೆಗೆ ಭೂಮಿ ನೀಡಿದ್ದ ಅವಿನಾಶ್ ಕುಲಕರ್ಣಿ, ನಿರ್ವಹಣೆ ಮಾಡುತ್ತಿದ್ದ ನರಸಿಂಹ ಗಂಧದಮನೆ, ಸುಧಾಕರ್ ಅವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ. ಬೆಳಿಗ್ಗೆ 11ರ ಸುಮಾರಿಗೆ ಘಟನಾ ಸ್ಥಳಕ್ಕೆ ಬಾಂಬ್ ನಿಷ್ಕ್ರಿಯ ದಳ, ಗಣಿ ಮತ್ತು ಭೂ ವಿಜ್ಞಾನ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. …
Read More »ಅಪಾರ್ಟ್ ಮೆಂಟ್ ನಲ್ಲಿ ಜೂಜಾಟ 2 ಲಕ್ಷದ 10 ಸಾವಿರ ರೂಪಾಯಿ ಹಣ ವಶಕ್ಕೆ
ಬೆಂಗಳೂರು: ಅಪಾರ್ಟ್ ಮೆಂಟ್ ಒಂದರಲ್ಲಿ ಜೂಜಾಟ ನಡೆಸುತ್ತಿದ್ದ ಅಡ್ಡೆ ಮೇಲೆ ದಾಳಿ ನಡೆಸಿದ ಸಿಸಿಬಿ ಪೊಲೀಸರು 8 ಜನ ಆರೋಪಿಗಳನ್ನು ಬಂಧಿಸಿರುವ ಘಟನೆ ಬೆಂಗಳೂರಿನ ಜೆ.ಪಿ.ನಗರದಲ್ಲಿ ನಡೆದಿದೆ. ಕೃಷ್ಣ, ಮಹೇಶ್, ಮಂಜುನಾಥ್, ವಿಶ್ವನಾಥ್, ರಘು, ಪ್ರಸಾದ್, ಲಕ್ಷ್ಮಣ, ಹರೀಶ್ ಬಂಧಿತ ಆರೋಪಿಗಳು. ಅಪಾರ್ಟ್ ಮೆಂಟ್ ನ್ನೇ ತಮ್ಮ ಜೂಜಾಟ ಕೇಂದ್ರವನ್ನಾಗಿ ಆರೋಪಿಗಳು ಮಾಡಿಕೊಂಡಿದ್ದರು. ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಪೊಲೀಸರು 8 ಜನರನ್ನು ಬಂಧಿಸಿದ್ದು, 2 ಲಕ್ಷ 10 …
Read More »ಶಿವಸೇನೆ ಪುಂಡರ ವಿರುದ್ಧ ಕಾಕತಿ ಪೊಲೀಸರು ಎಫ್ ಐಆರ್ ದಾಖಲಿಸಿದ್ದಾರೆ.
ಬೆಳಗಾವಿ: ಮಹಾನಗರ ಪಾಲಿಕೆ ಬಳಿ ಇದ್ದ ಕನ್ನಡ ಧ್ವಜವನ್ನು ತೆರವು ಮಾಡಲು ಮುಂದಾಗಿದ್ದ ಶಿವಸೇನೆ ಪುಂಡರ ವಿರುದ್ಧ ಕಾಕತಿ ಪೊಲೀಸರು ಎಫ್ ಐಆರ್ ದಾಖಲಿಸಿದ್ದಾರೆ. ಬೆಳಗಾವಿ ಗಡಿ ಪ್ರವೇಶಿಸಿ ಪಾಲಿಕೆಯ ಬಳಿ ಸ್ಥಾಪಿಸಲಾಗಿದ್ದ ಕನ್ನಡ ಧ್ವಜವನ್ನು ತೆರವು ಮಾಡಲು ಯತ್ನಿಸಿದ್ದ ಶಿವಸೇನೆ ಅಧ್ಯಕ್ಷ ವಿಜಯ ದೇವಣೆ ಸೇರಿದಂತೆ 8 ಮಂದಿ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಕರ್ನಾಟಕದ ಗಡಿಯೊಳಗೆ ನುಗ್ಗಲು ಯತ್ನಿಸಿದ್ದ ಶಿವಸೇನೆ ಕಾರ್ಯಕರ್ತರನ್ನು ಜ.21ರಂದು ಪೊಲೀಸರು ಶಿನ್ನೊಳ್ಳಿ ಗಡಿಯಲ್ಲಿ ತಡೆದು …
Read More »ಹಾವೇರಿಯಲ್ಲಿ ನಡೆಯಲಿರುವ 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಹಿರಿಯ ಸಾಹಿತಿ, ಪದ್ಮಶ್ರೀ ಪುರಸ್ಕೃತ ಡಾ.ದೊಡ್ಡರಂಗೇಗೌಡ ಆಯ್ಕೆ
ಹಾವೇರಿ: ಹಾವೇರಿಯಲ್ಲಿ ನಡೆಯಲಿರುವ 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಹಿರಿಯ ಸಾಹಿತಿ, ಪದ್ಮಶ್ರೀ ಪುರಸ್ಕೃತ ಡಾ.ದೊಡ್ಡರಂಗೇಗೌಡ ಆಯ್ಕೆಯಾಗಿದ್ದಾರೆ. ಈ ಕುರಿತು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಡಾ.ಮನುಬಳಿಗಾರ್ ಮಾಹಿತಿ ನೀಡಿದ್ದು, ಹಾವೇರಿಯ ಗುದ್ದಲ್ಯಪ ಹಳ್ಳಿಕೇರಿ ಕಾಲೇಜಿನ ಪಕ್ಕದಲ್ಲಿರುವ ವಿಶಾಲ ಮೈದಾನದಲ್ಲಿ ಫೆ.26, 27 ಹಾಗೂ 28ರಂದು ಸಾಹಿತ್ಯ ಸಮ್ಮೇಳನ ನಡೆಯಲಿದೆ. ಕೋವಿಡ್ ನಿಯಮ ಸಡಿಲಿಸಿ ಅನುಮತಿ ನೀಡುವಂತೆ ಸರ್ಕಾರಕ್ಕೆ ಮನವಿ ಮಾಡಲಾಗಿದ್ದು, ಮೊದಲ ದಿನವೇ 1 …
Read More »ಪೆಟ್ರೋಲ್ ಹಾಗೂ ಡಿಸೇಲ್ ದರದಲ್ಲಿ ಭಾರೀ ಏರಿಕೆ
ನವದೆಹಲಿ: ಪೆಟ್ರೋಲ್ ಹಾಗೂ ಡಿಸೇಲ್ ದರದಲ್ಲಿ ಭಾರೀ ಏರಿಕೆಯಾಗಿದ್ದು, ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆ ಏರಿಕೆಯಾಗಿದ್ದು, ಭಾರತದಲ್ಲಿ ಪೆಟ್ರೋಲ್-ಡೀಸೆಲ್ ದರ ಏರಿಕೆಗೆ ಕಾರಣ ಎನ್ನಲಾಗಿದೆ. ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಪೆಟ್ರೋಲ್-ಡೀಸೆಲ್ ದರ ಲೀಟರ್ ಗೆ 25 ಪೈಸೆ ಹೆಚ್ಚಳವಾಗಿದ್ದು, ಪೆಟ್ರೋಲ್ 85.70 ರೂಪಾಯಿ ಆಗಿದೆ. ಡೀಸೆಲ್ ದರ 75.88 ರೂಪಾಯಿ ತಲುಪಿದೆ. ಮಧ್ಯಪ್ರದೇಶ ಭೋಪಾಲ್ ನಲ್ಲಿ ಪೆಟ್ರೋಲ್-ಡೀಸೆಲ್ ದರ ದಾಖಲೆ ಪ್ರಮಾಣದಲ್ಲಿ ಏರಿಕೆ ಕಂಡಿದ್ದು, ಪೆಟ್ರೋಲ್ ಲೀಟರ್ ಗೆ …
Read More »