Breaking News

Yearly Archives: 2021

ಕೋವಿಶೀಲ್ಡ್ ಲಸಿಕೆ ಬಗ್ಗೆ ಭಯ ಬೇಡ : ರಾಜೇಶ್ವರಿ ಹಿರೇಮಠ

ಬೆಟಗೇರಿ : ನಮ್ಮ ದೇಶದ ವಿಜ್ಞಾನಿಗಳು ತಯಾರಿಸಿದ ಕೋವಿಡ್-19 ಲಸಿಕೆ ಬಗ್ಗೆ ವಿಶ್ವವೇ ಹೆಮ್ಮೆಪಡುತ್ತಿದೆ. ಕೋವಿಶೀಲ್ಡ್ ಲಸಿಕೆಯಿಂದ ಅಡ್ಡ ಪರಿಣಾಮಗಳು ಆಗುವುದು ತುಂಬಾ ವಿರಳ, ಇದು ಸುರಕ್ಷಿತವಾಗಿದೆ ಎಂದು ಗೋಕಾಕ ತಾಲೂಕಿನ ಬೆಟಗೇರಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ರಾಜೇಶ್ವರಿ ಹಿರೇಮಠ ತಿಳಿಸಿದರು.   ಗೋಕಾಕ ತಾಲೂಕಿನ ಬೆಟಗೇರಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಬುಧವಾರದಂದು ನಡೆದ ಕೋವಿಶೀಲ್ಡ್ ಲಸಿಕೆ ಹಾಕುವ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ದೇಶದಲ್ಲಿ ಕರೊನಾ ಸೋಂಕಿತರ ಸಂಖ್ಯೆ …

Read More »

ಕನ್ನಡ ಧ್ವಜದ ಬಗ್ಗೆ ಪ್ರಶ್ನಿಸಲು ನಾಡದ್ರೋಹಿ, ಎಂಇಎಸ್-ಶಿವಸೇನೆ ಯಾವೂರ ದೊಣ್ಣೆ ನಾಯಕರು..ಮಾಜಿ ಸಿಎಂ ಎಚ್‍ಡಿಕೆ ಗರಂ..!

ಕರ್ನಾಟಕದ ಕೆಲ ಪ್ರದೇಶಗಳನ್ನು ಮಹಾರಾಷ್ಟ್ರಕ್ಕೆ ಸೇರಿಸುವುದಾಗಿ ಉದ್ಧ(ಟ)ವ ಠಾಕ್ರೆ ಹೇಳಿದ್ದರು. ಬೆಳಗಾವಿಯಲ್ಲಿ ಕಿಡಿಗೇಡಿಗಳು, ಸಮಾಜಘಾತುಕರು ನಡೆಸುತ್ತಿರುವ ಧ್ವಜವಿರೋಧಿ ಹೋರಾಟ ಬೆಂಬಲಿಸುವ ಮೂಲಕ ಶಿವಸೇನೆ ಠಾಕ್ರೆ ಇಚ್ಛೆಯನ್ನು ಜಾರಿಗೆ ತರಲು ಹೊರಟಿದೆ. ನ್ಯಾಯದ ಉದ್ದೇಶವಿಲ್ಲದ ಈ ಹೋರಾಟವನ್ನು ಸರ್ಕಾರ ಮುಲಾಜಿಲ್ಲದೇ ಹತ್ತಿಕ್ಕಬೇಕು. ಸರಣಿ ಟ್ವೀಟ್ ಮೂಲಕ ನಾಡದ್ರೋಹಿಗಳ ವಿರುದ್ಧ ಗರಂ ಆಗಿರುವ ಮಾಜಿ ಸಿಎಂ ಕುಮಾರಸ್ವಾಮಿ ನಮ್ಮ ನೆಲ, ನಮ್ಮ ಭಾಷಾ , ನಮ್ಮ ಧ್ವಜ. ಕನ್ನಡ ಮಾತಾಡುತ್ತೇವೆ, ಕನ್ನಡದ ಧ್ವಜ …

Read More »

ಒಬ್ಬರನ್ನ ಬಲಿ ಪಡಿದು ಸತ್ತ ಶ್ವಾನ

    ಚಲಿಸುತ್ತಿದ್ದ ಬೈಕ್​ಗೆ ಶ್ವಾನವೊಂದು ಅಡ್ಡಬಂದ ಪರಿಣಾಮ‌ ಡಿಕ್ಕಿ ಸಂಭವಿಸಿ ಬೈಕ್​ ಹಿಂಬದಿ ಕುಳಿತಿದ್ದ ಮಹಿಳೆ ಸಾವನ್ನಪ್ಪಿರುವ ಘಟನೆ ಧಾರವಾಡ ತಾಲೂಕಿನ ಸಲಕಿನಕೊಪ್ಪ ಗ್ರಾಮದ ಬಳಿ ನಡೆದಿದೆ. ಧಾರವಾಡದ ಬೆನಕಟ್ಟಿ ಗ್ರಾಮದ ದಿಲ್ ಶಾದ್ ಬಿಸ್ಮಿಲ್ಲಾ ಚಪ್ಪರಬಂಧ್ (43) ಮೃತ ಮಹಿಳೆ. ನಿಗದಿ ಗ್ರಾಮದಿಂದ ಪ್ರಕಾಶ ಎಂಬುವರ ಬೈಕ್​ನಲ್ಲಿ ಧಾರವಾಡಕ್ಕೆ ಮನೆಗೆಲಸಕ್ಕೆಂದು ಬರುತ್ತಿದ್ದ ವೇಳೆ ಅಪಘಾತ ಸಂಭವಿಸಿದ್ದು, ಬೈಕ್ ಚಾಲಕನಿಗೆ ಯಾವುದೇ ಗಾಯಗಳಾಗಿಲ್ಲ. ಆದರೆ, ಬೈಕ್ ಡಿಕ್ಕಿ ಹೊಡೆದ …

Read More »

ತೀವ್ರ ಕುತೂಹಲಕ್ಕೆ ಕಾರಣವಾಗಿದೆ ಗೃಹ ಸಚಿವ ಬೊಮ್ಮಾಯಿ – ಮಾಜಿ ಸಿಎಂ ಹೆಚ್ಡಿಕೆ ಭೇಟಿ

ಬೆಂಗಳೂರು : ಇಂದು ಗೃಹ ಸಚಿವ ಬಸವರಾಜ್ ಬೊಮ್ಮಾಯಿ ನಿವಾಸಕ್ಕೆ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಭೇಟಿ ನೀಡಿದ್ದು, ತೀವ್ರ ಕುತೂಹಲಕ್ಕೆ ಕಾರಣವಾಗಿದೆ. ಇಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಅವರು ಆರ್.ಟಿ. ನಗರದ ಬೊಮ್ಮಾಯಿ ಅವರ ನಿವಾಸಕ್ಕೆ ಭೇಟಿ ನೀಡಿ, ಅರ್ಧ ಗಂಟೆಗೂ ಹೆಚ್ಚು ಹೊತ್ತು ಚರ್ಚೆ ನಡೆಸಿದ್ದಾರೆ. ಭೇಟಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಹೆಚ್.ಡಿ.ಕುಮಾರಸ್ವಾಮಿ, ನನ್ನ ಕ್ಷೇತ್ರದ ಕೆಲ ಪೋಸ್ಟಿಂಗ್ ವಿಚಾರದ ಬಗ್ಗೆ ಚರ್ಚೆ ಮಾಡಿದ್ದೇವೆ. ರಾಜಕೀಯ ಬೆಳವಣಿಗೆ ಬಗ್ಗೆ …

Read More »

ಮಾಜಿ ಸಚಿವ ವಿನಯ್ ಕುಲಕರ್ಣಿಗೆ ಜೈಲೇ ಗತಿ

ಧಾರವಾಡ : ಜಿಲ್ಲಾ ಪಂಚಾಯ್ತಿ ಸದಸ್ಯ ಯೋಗೀಶ್ ಗೌಡ ಕೊಲೆ ಪ್ರಕರಣದಲ್ಲಿ ಸಿಬಿಐ ನಿಂದ ಬಂಧನಕ್ಕೆ ಒಳಗಾಗಿ ಜೈಲು ಸೇರಿರುವಂತ ಮಾಜಿ ಸಚಿವ ವಿನಯ್ ಕುಲಕರ್ಣಿ ಸಲ್ಲಿಸಿದ್ದಂತ ಜಾಮೀನು ಅರ್ಜಿಯನ್ನು ಧಾರವಾಡ ಹೈಕೋರ್ಟ್ ವಜಾಗೊಳಿಸಿದೆ. ಈ ಮೂಲಕ ಮಾಜಿ ಸಚಿವ ವಿನಯ್ ಕುಲಕರ್ಣಿಗೆ ಜೈಲೇ ಗತಿ ಎನ್ನುವಂತಾಗಿದೆ. ಜಿಲ್ಲಾ ಪಂಚಾಯ್ತಿ ಸದಸ್ಯ ಯೋಗೀಶ್ ಗೌಡ ಕೊಲೆ ಪ್ರಕರಣದಲ್ಲಿ ಸಿಬಿಐನಿಂದ ಮಾಜಿ ಸಚಿವ ವಿನಯ್ ಕುಲಕರ್ಣಿ ಬಂಧನವಾಗಿತ್ತು. ಇಂತಹ ಮಾಜಿ ಸಚಿವ …

Read More »

ಪಡಿತರ ಚೀಟಿದಾರರಿಗೆ ಜೋಳ, ರಾಗಿ ದೊರೆಯುವಂತೆ ಮಾಡುತ್ತೇನೆ : ಸಚಿವ ಉಮೇಶ್ ಕತ್ತಿ

ಬೆಂಗಳೂರು :ಖಾತೆ ಹಂಚಿಕೆ ಬೆನ್ನಲ್ಲೇ ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಉಮೇಶ್ ಕತ್ತಿ ರಾಜ್ಯದ ಪಡಿತರ ಚೀಟಿದಾರರಿಗೆ ಭರ್ಜರಿ ಸಿಹಿಸುದ್ದಿ ನೀಡಿದ್ದು, ಪಡಿತರ ಚೀಟಿದಾರರಿಗೆ ಜೋಳ, ರಾಗಿ ದೊರೆಯುವಂತೆ ಮಾಡುತ್ತೇನೆ ಎಂದು ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಉಮೇಶ್ ಕತ್ತಿ, ರಾಜ್ಯದ ಮಂತ್ರಿಯಾಗಿ ಆತ್ಮಸಾಕ್ಷಿಗೆ ಅನುಗುಣವಾಗಿ ಕೆಲಸ ಮಾಡುತ್ತೇನೆ. ಬಿಪಿಎಲ್ ಪಡಿತರದಾರರಿಗೆ ಅನುಕೂಲವಾಗುವಂತೆ ಕೆಲಸ ಮಾಡುತ್ತೇನೆ. ಪಡಿತರ ಚೀಟಿ ದಾರರಿಗೆ ಜೋಳ, ರಾಗಿ, ದೊರೆಯುವಂತೆಯೂ ಮಾಡುತ್ತೇನೆ ಎಂದು ಹೇಳಿದ್ದಾರೆ. …

Read More »

ಕಂಗನಾ ರಾಣಾವತ್ ಗೆ ಮುಂಬೈ ಪೊಲೀಸರು ವಿಚಾರಣೆ ಹಾಜರಾಗುವಂತೆ ನೋಟೀಸ್

ಮುಂಬೈ: ಬಾಲಿವುಡ್ ನಟಿ ಕಂಗನಾ ರಾಣಾವತ್ ಗೆ ಮುಂಬೈ ಪೊಲೀಸರು ವಿಚಾರಣೆ ಹಾಜರಾಗುವಂತೆ ನೋಟೀಸ್ ನೀಡಿದ್ದಾರೆ. ನಟ ಸುಶಾಂತ್ ಸಿಂಗ್ ರಜಪೂತ್ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ನಟಿ ಕಂಗನಾ, ಖ್ಯಾತ ಗೀತ ರಚನೆಕಾರ ಜಾವೇದ್ ಅಖ್ತರ್ ಕುಟುಂಬದ ವಿರುದ್ಧ ಹೇಳಿಕೆ ನಿಡಿದ್ದರು. ಈ ಹಿನ್ನೆಲೆಯಲ್ಲಿ ಅಖ್ತರ್ ಕಂಗನಾ ವಿರುದ್ಧ ಅಂಧೇರಿ ಮೆಟ್ರೊಪಾಲಿಟನ್ ಮ್ಯಾಜಿಸ್ಟ್ರೇಟ್ ನಲ್ಲಿ ಮಾನನಷ್ಟ ಮೊಕದ್ದಮೆ ಪ್ರಕರಣ ದಾಖಲಿಸಿದ್ದರು. ಈ ಪ್ರಕರಣ ಸಂಬಂಧ ಮುಂಬೈ ಪೊಲೀಸರು ಕಂಗನಾ ರಣಾವತ್ …

Read More »

ರಾಗಿಣಿಗೆ 140 ದಿನಗಳ ಸೆರೆವಾಸದ ಬಳಿಕ ಬಿಡುಗಡೆ ಭಾಗ್ಯ

ಬೆಂಗಳೂರು: ಡ್ರಗ್ಸ್ ಪ್ರಕರಣದಲ್ಲಿ ಜೈಲು ಸೇರಿದ್ದ ಸ್ಯಾಂಡಲ್ ವು ನಟಿ ರಾಗಿಣಿ ದ್ವಿವೇದಿಗೆ ಸುಪ್ರೀಂ ಕೋರ್ಟ್ ಜಾಮೀನು ಮಂಜೂರು ಮಾಡಿದೆ. ಸ್ಯಾಂಡಲ್ ವುಡ್ ಗೆ ಡ್ರಗ್ಸ್ ಜಾಲದ ನಂಟು ಆರೋಪ ಪ್ರಕರಣ ಸಂಬಂಧ ಸಿಸಿಬಿ ಪೊಲೀಸರು ಸೆ.4, 2021ರಂದು ಬಂಧಿಸಿದ್ದರು. ಸೆ.14ರಂದು ರಾಗಿಣಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿತ್ತು. ಹಲವುಬಾರಿ ಹೈಕೋರ್ಟ್ ಗೆ ನಟಿ ರಾಗಿಣಿ ಜಾಮೀನಿಗಾಗಿ ಅರ್ಜಿ ಸಲ್ಲಿಸಿದ್ದರು. ಆದರೆ ಹೈಕೋರ್ಟ್ ಜಾಮೀನು ತಿರಸ್ಕರಿಸಿತ್ತು. ಇದನ್ನು ಪ್ರಶ್ನಿಸಿ ರಾಗಿಣಿ ಪರ …

Read More »

ಉದ್ಧವ್ ಠಾಕ್ರೆ ವಿರುದ್ಧ ಹೋರಾಟ ತೀವ್ರಗೊಳಿಸಲು ನಿರ್ಧರಿಸಿರುವ ಕನ್ನಡ ಒಕ್ಕೂಟ

ಬೆಂಗಳೂರು, ಜ.20- ಮರಾಠಿ ಭಾಷಿಗರ ಬಾಹುಳ್ಯ ಪ್ರದೇಶಗಳನ್ನು ಮಹಾರಾಷ್ಟ್ರಕ್ಕೆ ಸೇರಿಸಿಕೊಳ್ಳಬೇಕೆಂಬ ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ವಿರುದ್ಧ ಹೋರಾಟ ತೀವ್ರಗೊಳಿಸಲು ನಿರ್ಧರಿಸಿರುವ ಕನ್ನಡ ಒಕ್ಕೂಟ ಇಂದು ಮಹತ್ವದ ಸಭೆ ನಡೆಸಿತು. ಒಕ್ಕೂಟದ ಅಧ್ಯಕ್ಷ ವಾಟಾಳ್ ನಾಗರಾಜ್, ಡಾ.ರಾಜ್‍ಕುಮಾರ್ ಅಭಿಮಾನಿಗಳ ಸಂಘದ ಅಧ್ಯಕ್ಷ ಸಾ.ರಾ.ಗೋವಿಂದು, ಕನ್ನಡ ಸೇನೆಯ ಕೆ.ಆರ್.ಕುಮಾರ್, ಕನ್ನಡ ಅಭಿವೃದ್ಧಿ ಪ್ರಾಕಾರದ ಮಾಜಿ ಅಧ್ಯಕ್ಷ ಮುಖ್ಯಮಂತ್ರಿಚಂದ್ರು, ಮಂಜುನಾಥ್ ದೇವು, ಗಿರೀಶ್ ಸೇರಿದಂತೆ ಹಲವು ಮುಖಂಡರು ಸಭೆ ನಡೆಸಿ ಮಹಾರಾಷ್ಟ್ರ ಮುಖ್ಯಮಂತ್ರಿ …

Read More »

ಖಾತೆ ಅದಲು-ಬದಲು ಮಾಡಿ ಶಾಕ್ ಕೊಟ್ಟ ಸಿಎಂ,ಅನೇಕಸಚಿವರು ಅಸಮಾಧಾನ “ಜೆ.ಸಿ.ಮಾಧುಸ್ವಾಮಿ ಸಚಿವ ಸ್ಥಾನಕ್ಕೇ ರಾಜೀನಾಮೆ”?

ಬೆಂಗಳೂರು, ಜ.21- ನಿರೀಕ್ಷಿತ ಖಾತೆಗಳು ಸಿಗದಿರುವುದು ಹಾಗೂ ಕೆಲವರ ಖಾತೆಗಳನ್ನು ಅದಲು-ಬದಲು ಮಾಡಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ವಿರುದ್ಧ ಸಚಿವರು ಅತೃಪ್ತಗೊಂಡಿದ್ದು, ಭಿನ್ನಮತ ಸೋಟಗೊಂಡಿದೆ. ಬಿಜೆಪಿ ಸರ್ಕಾರದಲ್ಲಿ ಟ್ರಬಲ್ ಶೂಟರ್ ಎಂದೇ ಹೇಳಲಾಗಿರುವ ಜೆ.ಸಿ.ಮಾಧುಸ್ವಾಮಿ ತಮ್ಮ ಬಳಿ ಇದ್ದ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆಯನ್ನು ಬದಲಾಯಿಸಿದಕ್ಕೆ ಸಚಿವ ಸ್ಥಾನಕ್ಕೇ ರಾಜೀನಾಮೆ ನೀಡುವ ತೀರ್ಮಾನಕ್ಕೆ ಬಂದಿದ್ದಾರೆ ಎನ್ನಲಾಗಿದೆ. ಇದೀಗ ಅವರನ್ನು ಮನವೊಲಿಸುವ ಪ್ರಯತ್ನ ಮುಂದುವರೆದಿದ್ದು, ಶಾಸಕರಾದ ಬಿ.ಸಿ.ನಾಗೇಶ್, ಜ್ಯೋತಿಗಣೇಶ್, ಮಸಾಲೆ …

Read More »