ದಳಪತಿ’ ವಿಜಯ್ ಮತ್ತು ‘ಮಕ್ಕಳ್ ಸೆಲ್ವನ್’ ವಿಜಯ್ ಸೇತುಪತಿ ಒಟ್ಟಿಗೆ ಅಭಿನಯಿಸಿರುವ ‘ಮಾಸ್ಟರ್’ ಸಿನಿಮಾ ಜನವರಿ 13ರಂದು ತೆರೆಕಂಡು ಅದ್ದೂರಿ ಪ್ರದರ್ಶನ ಕಾಣುತ್ತಿದೆ. ಶೇ.50 ಆಸನ ಭರ್ತಿಗೆ ಮಾತ್ರ ಅವಕಾಶ ಇದ್ದರೂ, ಕಲೆಕ್ಷನ್ ವಿಚಾರದಲ್ಲಿ ದಾಖಲೆ ಬರೆಯುತ್ತಿದೆ. ಈ ಮಧ್ಯೆ ಪೈರಸಿ ಕಾಟವೂ ಚಿತ್ರಕ್ಕೆ ಇದೆ. ಸದ್ಯ ಇದರ ವಿರುದ್ಧ ನಿರ್ಮಾಪಕರು ಹೋರಾಟಕ್ಕೆ ನಿಂತಿದ್ದಾರೆ. ಈ ಪ್ರಕರಣವೀಗ ಪೊಲೀಸ್ ಠಾಣೆ ಮೆಟ್ಟಿಲೇರಿದೆ! ಜೊತೆಗೆ 25 ಕೋಟಿ ರೂ. ಪರಿಹಾರಕ್ಕೆ ನಿರ್ಮಾಪಕರು …
Read More »Yearly Archives: 2021
ಸ್ಮಾಟ್‍ಫೋನ್ ಅಥವಾ ಕಂಪ್ಯೂಟರ್ ನೋಡುವುದರಿಂದ ಕಣ್ಣುಗಳನ್ನು ಕಳಕೋತಿರಾ ಹುಷಾರ್ !
ಮಾನವನ ಕಣ್ಣಿನ ಸ್ವಾಭಾವಿಕ ನೋಡುವ ವಿಧಾನವೆಂದರೆ, ಯಾವುದಾದರೂ ವಸ್ತುವಿನ ಮೇಲೆ ಬೆಳಕಿನ ಕಿರಣಗಳು ಬಿದ್ದಾಗ ಅವುಗಳನ್ನು ಆ ವಸ್ತುವು ಹೀರುವುದರಿಂದ ಹಾಗೂ ಅದರ ಪ್ರತಿಫಲನದಿಂದ ಉಂಟಾಗುವ ಕಿರಣಗಳು ನಮ್ಮ ಕಣ್ಣಿನ ಮೇಲೆ ಬೀಳುವುದರಿಂದ. ಈ ಪ್ರಕ್ರಿಯೆಯಲ್ಲಿ ನಮ್ಮ ಅಕ್ಷಿಪಟಲದ ಮೇಲೆ ಬೀಳುವ ಬೆಳಕಿನ ಶಕ್ತಿಯು ಅಲ್ಪ ಪ್ರಮಾಣದ್ದಾಗಿರುತ್ತದೆ. ಆದರೆ ವಿದ್ಯುನ್ಮಾನ ಪರದೆಗಳನ್ನು ವೀಕ್ಷಿಸುವಾಗ ಈ ಕಿರಣಗಳು ನೇರವಾಗಿ ಅಕ್ಷಿಪಟಲದ ಮೇಲೆ ಬೀಳುವುದರಿಂದ ಹೆಚ್ಚು ಪ್ರಮಾಣದ ಶಕ್ತಿಪಾತ ಕಣ್ಣಿನ ಮೇಲಾಗುತ್ತದೆ. ಫೋನಿನಲ್ಲಿ …
Read More »ಬೆಂಗಳೂರಿನ ರಸ್ತೆಗುಂಡಿಗಳ ಚಿತ್ರವನ್ನು ವಾಟ್ಯಾಪ್ಪ್ ಮೂಲಕ ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರಕ್ಕೆ ನೀಡಿದರೆ ಚಿತ್ರಗಳು ಹೈಕೋರ್ಟ್ ತಲುಪಲಿವೆ.
ಬೆಂಗಳೂರು: ಬೆಂಗಳೂರಿನ ರಸ್ತೆಗುಂಡಿಗಳ ಚಿತ್ರವನ್ನು ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರಕ್ಕೆ ನೀಡಿದರೆ ಚಿತ್ರಗಳು ಹೈಕೋರ್ಟ್ ತಲುಪಲಿವೆ. ಸಾರ್ವಜನಿಕರಿಂದಲೇ ನಗರದ ರಸ್ತೆಗುಂಡಿಗಳ ಬಗ್ಗೆ ಮಾಹಿತಿ ಸಂಗ್ರಹಿಸಲು ಪ್ರಾಧಿಕಾರ ಮುಂದಾಗಿದೆ. ಬಿಬಿಎಂಪಿ ನಡೆಸಿರುವ ರಸ್ತೆಗುಂಡಿ ಮುಚ್ಚುವ ಕಾಮಗಾರಿಯ ಗುಣಮಟ್ಟವನ್ನು ಪರಿಶೀಲಿಸುವಂತೆ ಪ್ರಾಧಿಕಾರಕ್ಕೆ ಹೈಕೋರ್ಟ್ ನಿರ್ದೇಶನ ನೀಡಿರುವ ಹಿನ್ನೆಲೆಯಲ್ಲಿ ಸಾಲ್ವ್ ನಿಂಜಾ ಎಂಬ ಸ್ವಯಂ ಸೇವಕ ಸಂಸ್ಥೆಯ ಸಹಕಾರದೊಂದಿಗೆ ರಸ್ತೆಗುಂಡಿಗಳ ಬಗ್ಗೆ ಸಾರ್ವಜನಿಕರಿಂದಲೇ ಮಾಹಿತಿ ಪಡೆದು ನ್ಯಾಯಾಲಯಕ್ಕೆ ಒದಗಿಸಲಾಗುತ್ತದೆ. ಅದಕ್ಕಾಗಿ ವಾಟ್ಸಾಪ್ ಸಂಖ್ಯೆಯನ್ನು …
Read More »ಕೇಂದ್ರ ಬಜೆಟ್ : ಜ.30ರಂದು ಪ್ರಧಾನಿ ಮೋದಿ ಸರ್ವಪಕ್ಷ ಸಭೆ
ಹೊಸದಿಲ್ಲಿ : ಫೆಬ್ರವರಿ 1 ರಂದು 2021-2022ನೇ ಸಾಲಿನ ಕೇಂದ್ರ ಬಜೆಟ್ ಮಂಡನೆಯಾಗಲಿದ್ದು, ಈ ಹಿನ್ನೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಜನವರಿ 30 ರಂದು ಸರ್ವಪಕ್ಷ ಸಭೆ ಕರೆದಿದ್ದಾರೆ. ಕೊರೋನಾ ಸಾಂಕ್ರಾಮಿಕ ರೋಗ ಹಿನ್ನೆಲೆಯಲ್ಲಿ ವಿಡಿಯೋ ಕಾನ್ಫರೆನ್ಸ್ ಮೂಲಕ ಪ್ರಧಾನಿ ಮೋದಿಯವರು ಸರ್ವಪಕ್ಷ ಸಭೆ ನಡೆಸಲಿದ್ದಾರೆಂದು ವರದಿಗಳು ತಿಳಿಸಿವೆ. ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಫೆಬ್ರವರಿ 1 ರಂದು ಕೇಂದ್ರ ಬಜೆಟ್ 2021-22 ಅನ್ನು ಮಂಡಿಸಲಿದ್ದಾರೆ. ಬಜೆಟ್ ಅಧಿವೇಶನವು …
Read More »ಆಸ್ತಿ ವಿವಾದ : ಬೆಳಗಾವಿಯಲ್ಲಿ 4 ವರ್ಷದ ಬಾಲಕನ ಕೊಲೆಗೈದ ಪಾಪಿ
ಬೆಳಗಾವಿ : ಆಸ್ತಿ ವಿವಾದಕ್ಕೆ ಸಮಂಧಿಸಿದಂತೆ 4 ವರ್ಷದ ಬಾಲಕನನ್ನ ಕೊಲೆ ಮಾಡಿದ ಘಟನೆ ಸವದತ್ತಿ ತಾಲ್ಲೂಕಿನ ಹಾರುಗೊಪ್ಪ ಗ್ರಾಮದಲ್ಲಿ ನಡೆದಿದೆ. ಮಾರುತಿ ವಿರೇಶ್ ಸಂಕಣ್ಣವರ ಹತ್ಯೆಯಾದ ಬಾಲಕ. ಈರಪ್ಪ ಬಸಪ್ಪ ಸಂಕಣ್ಣ(35) ಕೊಲೆ ಆರೋಪಿಯಾಗಿದ್ದು, ಹೆಚ್ಚಿನ ಮಾಹಿತಿ ತನಿಖೆಯಿಂದ ತಿಳಿದು ಬರಬೇಕಿದೆ. ಸ್ಥಳಕ್ಕೆ ಮುರಗೋಡ ಪೊಲೀಸರು ಭೇಟಿ ನೀಡಿ ಪರಿಶೀಲಿಸಿ, ತನಿಖೆ ನಡೆಸಿದ್ದಾರೆ.
Read More »ವೈದ್ಯರೇ ನಿರ್ಮಿಸುತ್ತಿರುವ ಸಿನಿಮಾದಲ್ಲಿ ಬಿಳಿ ಕೋಟು ಧರಿಸಲಿದ್ದಾರೆ ಗಣೇಶ್
ವೈದ್ಯರಿಗೂ ಸಿನಿಮಾಕ್ಕೂ ಎತ್ತಣಿಂದೆತ್ತ ಸಂಬಂಧ?! ಎನ್ನುವಂತಿಲ್ಲ, ಏಕೆಂದರೆ ವೈದ್ಯರಿಬ್ಬರು ಸೇರಿ ನಿರ್ಮಿಸುತ್ತಿರುವ ಸಿನಿಮಾದಲ್ಲಿ ಕನ್ನಡದ ಸ್ಟಾರ್ ನಟರಲ್ಲೊಬ್ಬರಾದ ಗಣೇಶ್ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. 25 ವರ್ಷ ವೈದ್ಯೆಯಾಗಿ ಸೇವೆ ಸಲ್ಲಿಸಿರುವ ಶಶಿಕಲಾ ಪುಟ್ಟಸ್ವಾಮಿ ನಿರ್ದೇಶಿಸುತ್ತಿರುವ ಮತ್ತೊಬ್ಬ ವೈದ್ಯ ಶೈಲೇಶ್ ನಿರ್ಮಾಣ ಮಾಡುತ್ತಿರುವ ಸಿನಿಮಾದಲ್ಲಿ ಗೋಲ್ಡನ್ ಸ್ಟಾರ್ ಗಣೇಶ್ ನಾಯಕ ಪಾತ್ರದಲ್ಲಿ ನಟಿಸುತ್ತಿದ್ದಾರೆ. ಸಿನಿಮಾದಲ್ಲಿ ಅವರದ್ದು ವೈದ್ಯನ ಪಾತ್ರ. 25 ವರ್ಷಗಳ ಹಿಂದೆ ಶಶಿಕಲಾ ಹಾಗೂ ಶೈಲೇಶ್ ಒಟ್ಟಿಗೆ ವೈದ್ಯಕೀಯ ಶಿಕ್ಷಣವನ್ನು ಪಡೆದವರು. …
Read More »ಕೇಂದ್ರ ಸರ್ಕಾರದ ಕೃಷಿ ಕಾಯ್ದೆಗಳನ್ನು ವಿರೋಧಿಸಿ ಇಂದು ಕಾಂಗ್ರೆಸ್ನಿಂದ ರಾಜಭವನ ಚಲೋ ರ್‍ಯಾಲಿ
ಬೆಂಗಳೂರು; ಕೇಂದ್ರ ಸರ್ಕಾರದ ಕೃಷಿ ಕಾಯ್ದೆಗಳನ್ನ ವಿರೋಧಿಸಿ ಇಂದು ಕಾಂಗ್ರೆಸ್ ವತಿಯಿಂದ ರಾಜಭವನ ಚಲೋ ರ್ಯಾಲಿ ನಡೆಯಲಿದೆ. ಕಾಂಗ್ರೆಸ್ ರ್ಯಾಲಿ ಹಿನ್ನೆಲೆಯಲ್ಲಿ ನಗರದ ಹೃದಯ ಭಾಗ ಮೆಜೆಸ್ಟಿಕ್ ಸುತ್ತಮುತ್ತ ಸಂಚಾರ ದಟ್ಟಣೆ ಹೆಚ್ಚುವ ಸಾಧ್ಯತೆ ಇದೆ. ಬೆಂಗಳೂರಿನ ಹೃದಯ ಭಾಗ ಸ್ತಬ್ಧವಾಗುವ ಸಾಧ್ಯತೆ ದಟ್ಟವಾಗಿದೆ. ಹೀಗಾಗಿ ಜನರು ಇಂದು ರಸ್ತೆಗಿಳಿಯುವ ಮುನ್ನ ಎಚ್ಚರ ವಹಿಸಬೇಕಿದೆ. ಇಂದು ಬೆಳಗ್ಗೆ 10 ಗಂಟೆಗೆ ಕಾಂಗ್ರೆಸ್ ರ್ಯಾಲಿ ಮೆಜೆಸ್ಟಿಕ್ನ ಕೆಎಸ್‌ಆರ್ ರೈಲು ನಿಲ್ದಾಣದಿಂದ ಆರಂಭವಾಗಲಿದೆ. …
Read More »ಪೊಲೀಸರು ತಡೆದರೆ ರಸ್ತೆ ಬಂದ್ ಮಾಡಿ: ಕಾಂಗ್ರೆಸ್ ಕಾರ್ಯಕರ್ತರು, ರೈತರಿಗೆ ಡಿಕೆಶಿ ಕರೆ
ಬೆಂಗಳೂರು: ‘ರಾಜ್ಯ ಸರ್ಕಾರ ಪೊಲೀಸ್ ಇಲಾಖೆಯನ್ನು ದುರ್ಬಳಕೆ ಮಾಡಿಕೊಂಡು ಜನರ ಪ್ರತಿಭಟನೆ ಹಕ್ಕನ್ನು ಕಸಿಯುವ ಪ್ರಯತ್ನ ಮಾಡುತ್ತಿದೆ’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕೇಂದ್ರ ಹಾಗೂ ರಾಜ್ಯ ಸರ್ಕಾರದ ರೈತ ಮತ್ತು ಜನ ವಿರೋಧಿ ಕಾಯ್ದೆಗಳ ವಿರುದ್ಧದ ‘ರಾಜಭವನ ಚಲೋ’ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲು ಬೆಂಗಳೂರಿಗೆ ಆಗಮಿಸುತ್ತಿರುವ ರೈತರು ಹಾಗೂ ಕಾಂಗ್ರೆಸ್ ಕಾರ್ಯಕರ್ತರನ್ನು ನಿನ್ನೆ ರಾತ್ರಿಯಿಂದಲೇ ಪೊಲೀಸರು ಮಾರ್ಗ ಮಧ್ಯದಲ್ಲೇ ತಡೆಯುತ್ತಿದ್ದಾರೆ. ಆ ಮೂಲಕ ರಾಜ್ಯ …
Read More »ಉತ್ತಮ ಸಂಸದೀಯ ಪಟು ಗುರುತಿಸಲು ಸಮಿತಿ ರಚನೆ
ಬೆಂಗಳೂರು : ರಾಜ್ಯ ವಿಧಾನಸಭೆಯ ಸದಸ್ಯರೊಬ್ಬರಿಗೆ ಪ್ರತಿ ವರ್ಷ ಅತ್ಯುತ್ತಮ ಸಂಸದೀಯ ಪಟು ಅಥವಾ ಅತ್ಯುತ್ತಮ ಶಾಸಕ ಎಂಬ ಪ್ರಶಸ್ತಿ ನೀಡಲು ವಿಧಾನಸಭಾಧ್ಯಕ್ಷರ ಅಧ್ಯಕ್ಷತೆಯಲ್ಲಿ ಆಯ್ಕೆ ಸಮಿತಿಯನ್ನು ರಚನೆ ಮಾಡಲಾಗಿದೆ. ಸಮಿತಿಯಲ್ಲಿ ಉಪಸಭಾಧ್ಯಕ್ಷರು, ಮುಖ್ಯಮಂತ್ರಿ, ವಿರೋಧ ಪಕ್ಷದ ನಾಯಕರು, ಕಾನೂನು ಹಾಗೂ ಸಂಸದೀಯ ವ್ಯವಹಾರಗಳ ಸಚಿವರು, ಸಭಾಧ್ಯಕ್ಷರು ನಾಮ ನಿರ್ದೇಶನ ಮಾಡುವ ಒಬ್ಬರು ಸದಸ್ಯರಾಗಿ ರುತ್ತಾರೆ. ಸಮಿತಿಯ ಶಿಫಾರಸ್ಸಿನ ಮೇಲೆ ಪ್ರಶಸ್ತಿಗೆ ಆಯ್ಕೆಯಾದ ಶಾಸಕರ ಒಪ್ಪಿಗೆಯನ್ನು ಪಡೆಯಬೇಕು. ಒಬ್ಬ ಶಾಸಕರಿಗೆ …
Read More »ಇನ್ನು ಮುಂದೆ ಉಚಿತವಾಗಿ ಸಿಗಲ್ಲ ಅನ್ನಭಾಗ್ಯದ ಅಕ್ಕಿ
ಬೆಂಗಳೂರು : ಬಡತನ ರೇಖೆಗಿಂತ ಕೆಳಗಿರುವ(ಬಿಪಿಎಲ್) ಕುಟುಂಬಗಳಿಗೆ ಅನ್ನಭಾಗ್ಯ ಯೋಜನೆಯಡಿ ಈವರೆಗೂ ನೀಡಲಾಗುತ್ತಿದ್ದ ಉಚಿತ ಅಕ್ಕಿಗೆ ಇನ್ನು ಮುಂದೆ ಹಣ ಪಾವತಿಸಬೇಕಾಗುತ್ತದೆ. ಅನ್ನಭಾಗ್ಯ ಯೋಜನೆಯಿಂದ ಸರಕಾರಕ್ಕೆ ಪ್ರತಿ ತಿಂಗಳು 120 ಕೋಟಿ ರೂ. ವೆಚ್ಚವಾಗುತ್ತಿದೆ. ಆದರೆ ಇಷ್ಟೆಲ್ಲಾ ವೆಚ್ಚ ಮಾಡಿದರೂ ಯೋಜನೆ ದುರ್ಬಳಕೆ ಆಗುತ್ತಿದ್ದು, ಅಕ್ಕಿ ದರ ವಿಧಿಸಿ ಪ್ರಯೋಗಿಸಿದರೆ ಹೇಗೆ ಎಂಬ ಚಿಂತನೆಯಲ್ಲಿ ತೊಡಗಿದೆ. ಈಗಾಗಲೇ ಇಲಾಖೆ ಮಟ್ಟದಲ್ಲಿ ಚರ್ಚೆ ನಡೆಸಲಾಗಿದ್ದು, ಅಂತಿಮವಾಗಿ ಮುಖ್ಯ ಮಂತ್ರಿ ಯಡಿಯೂರಪ್ಪ ಅವರು …
Read More »