ಬೆಳಗಾವಿ,ಜ.19- ರಾಜ್ಯ ಸರಕಾರಕ್ಕೆ ನಾಚಿಕೆ, ಮಾನ ಮರ್ಯಾದೆ ಇದ್ದರೆ ಗಡಿ ಉಸ್ತುವಾರಿ ಸಚಿವರನ್ನು ನೇಮಕ ಮಾಡಲಿ. ಬೆಂಗಳೂರಿನ ಎಂಎಸ್ ಬಿಲ್ಡಿಂಗ್ ನಲ್ಲಿರುವ ಗಡಿ ಅಭಿವೃದ್ಧಿ ಪ್ರಾಧಿಕಾರ ಮತ್ತು ಗಡಿ ಸಂರಕ್ಷಣಾ ಆಯೋಗ ಬೆಳ ಗಾವಿಯ ಸುವರ್ಣ ಸೌಧಕ್ಕೆ ಕೊಡ ಬೇಕು ಎಂದು ಹಿರಿಯ ಕನ್ನಡಪರ ಹೋರಾಟಗಾರ ಅಶೋಕ ಚಂದರಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗಡಿಭಾಗದ ಬಗ್ಗೆ ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆ ಅವರ ಹೇಳಿಕೆ ಸಾಕಷ್ಟು ವಿವಾದಕ್ಕೆ …
Read More »Yearly Archives: 2021
IND vs AUS| ಟೀಂ ಇಂಡಿಯಾ ಸಾಧನೆ ಕೊಂಡಾಡಿದ ರಾಷ್ಟ್ರಪತಿ, ಪ್ರಧಾನಿ
ನವದೆಹಲಿ: ಆಸ್ಟ್ರೇಲಿಯಾ ನೆಲದಲ್ಲಿ ಟೆಸ್ಟ್ ಕ್ರಿಕೆಟ್ ಸರಣಿ ಗೆದ್ದು ತ್ರಿವಿಕ್ರಮ ಮೆರೆದಿರುವ ಭಾರತೀಯ ಕ್ರಿಕೆಟ್ ತಂಡವನ್ನು ದೇಶದ ಪ್ರಮುಖರು ಹಾಡಿ ಹೊಗಳಿದ್ದಾರೆ. ಅವರ ಸಾಧನೆಯನ್ನು ಕೊಂಡಾಡಿದ್ದಾರೆ. ರಾಷ್ಟ್ರ ಹೆಮ್ಮೆ ಪಟ್ಟಿದೆ- ರಾಮನಾಥ ಕೋವಿಂದ್ ‘ಆಸ್ಟ್ರೇಲಿಯಾದಲ್ಲಿ ಇದು ಐತಿಹಾಸಿಕ ಕ್ರಿಕೆಟ್ ದಿಗ್ವಿಜಯ. ಕಠಿಣ ಟೆಸ್ಟ್ ಸರಣಿಯನ್ನು ಗೆದ್ದ ಭಾರತದ ಪ್ರತಿಭಾವಂತ ಯುವ ಕ್ರಿಕೆಟ್ ತಂಡಕ್ಕೆ ಅಭಿನಂದನೆಗಳು. ತಂಡವು ಅಸಾಧಾರಣ ಕೌಶಲ ಮತ್ತು ಸ್ಥಿತಿಸ್ಥಾಪಕತೆ ಪ್ರದರ್ಶಿಸಿದೆ. ಅವರ ಸಾಧನೆಯ ಬಗ್ಗೆ ರಾಷ್ಟ್ರ ಹೆಮ್ಮೆಪಡುತ್ತದೆ,’ …
Read More »GST ನೋಂದಣಿಗಾಗಿ ಲಂಚ ಸ್ವೀಕರಿಸುತ್ತಿದ್ದ ಡಾಟಾ ಎಂಟ್ರಿ ಆಪರೇಟರ್ ಎಸಿಬಿ ಬಲೆಗೆ
ಶಿವಮೊಗ್ಗ: ಜಿಎಸ್ ಟಿ ನೋಂದಣಿಗಾಗಿ ಲಂಚ ಸ್ವೀಕರಿಸುತ್ತಿದ್ದ ಡಾಟಾ ಎಂಟ್ರಿ ಆಪರೇಟರ್ ಒಬ್ಬಾತ ಭ್ರಷ್ಟಾಚಾರ ನಿಗ್ರಹ ದಳದ (ಎಸಿಬಿ) ಬಲೆಗೆ ಬಿದ್ದಿರುವ ಘಟನೆ ಭದ್ರಾವತಿಯ ಕಮರ್ಷಿಯಲ್ ಟ್ಯಾಕ್ಸ್ ಕಚೇರಿಯಲ್ಲಿ ಮಂಗಳವಾರ ನಡೆದಿದೆ. ವೇಣು (36) ಎಸಿಬಿ ಬಲೆಗೆ ಬಿದ್ದ ಡಾಟಾ ಎಂಟ್ರಿ ಆಪರೇಟರ್. ಶಾಮಿಯಾನ ಅಂಗಡಿ ಮಾಲೀಕರೊಬ್ಬರ ಜಿಎಸ್ಟಿ ನೋಂದಣಿ ಮಾಡಲು ವೇಣು ಲಂಚ ಕೇಳಿದ್ದು, ಇಂದು 2500 ರೂ. ಹಣ ಪಡೆಯುವ ವೇಳೆ ಎಸಿಬಿ ಅಧಿಕಾರಿಗಳ ಬಲೆಗೆ ಬಿದ್ದಿದ್ದಾನೆ. …
Read More »ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ; ಆರೋಪಿಗೆ ಐದು ವರ್ಷ ಜೈಲು ಶಿಕ್ಷೆ
ಧಾರವಾಡ: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ ಆರೋಪಿಗೆ ನಗರದ 2ನೇ ವಿಶೇಷ ಜಿಲ್ಲಾ ಹಾಗೂ ಪೋಕ್ಸೋ ನ್ಯಾಯಾಲಯವು 5 ವರ್ಷ ಶಿಕ್ಷೆ ಹಾಗೂ ದಂಡ ವಿಧಿಸಿ ಸೋಮವಾರ ಆದೇಶ ಹೊರಡಿಸಿದೆ. ಇಲ್ಲಿನ ಶೀಲವಂತರ ಓಣಿಯ ಮಾಬೂಲಿ ಶೇಖ್ ಶಿಕ್ಷೆಗೆ ಗುರಿಯಾದವ. ಈತ ಈ ಪ್ರದೇಶದ ಅಪ್ರಾಪೆ¤ಯನ್ನು 2019ರ ಮಾ.27ರಂದು ಪುಸಲಾಯಿಸಿ ಲೈಂಗಿಕ ದೌರ್ಜನ್ಯ ಎಸಗಿದ ಬಗ್ಗೆ ಶಹರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಕುರಿತು ತನಿಖೆ ಮಾಡಿದ್ದ ಪೊಲೀಸರು, …
Read More »ಮಾರ್ಚ್ ಮೊದಲ ವಾರದಲ್ಲಿ ಬಜೆಟ್: ಮುಖ್ಯಮಂತ್ರಿ ಯಡಿಯೂರಪ್ಪ
ಕುಂದಾಪುರ: ಹಣಕಾಸಿನ ಇತಿಮಿತಿಯಲ್ಲಿ ಮಾರ್ಚ್ ಮೊದಲ ವಾರ ಬಜೆಟ್ ಮಂಡಿಸುತ್ತೇನೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದರು. ಕುಂಭಾಶಿಯ ಆನಗುಡ್ಡೆ ದೇವಸ್ಥಾನದಲ್ಲಿ ಮಂಗಳವಾರ ಗಣಹೋಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ‘ಎರಡು ದಿನಗಳಲ್ಲಿ ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಲಾಗುವುದು. ಉಡುಪಿಯ ಧಾರ್ಮಿಕ ಪ್ರವಾಸದಲ್ಲಿ ಸಕಾಲಕ್ಕೆ ಮಳೆ ಬೆಳೆಯಾಗಿ ರಾಜ್ಯ ಸಮೃದ್ಧಿಯಾಗಲಿ’ ಎಂದು ದೇವರಲ್ಲಿ ಪ್ರಾರ್ಥಿಸಿದ್ದೇನೆ ಎಂದರು. ಸಚಿವ ಸಂಪುಟ ವಿಸ್ತರಣೆ ವಿಚಾರವಾಗಿ ಶಾಸಕ ರೇಣುಕಾಚಾರ್ಯ ಜೊತೆ ಮಾತನಾಡಿದ್ದು ಖುದ್ದು ಬಂದು ಭೇಟಿಯಾಗಲಿದ್ದಾರೆ. …
Read More »ನಿಧಿ ಸಮರ್ಪಣಾ ಅಭಿಯಾನಕ್ಕೆ ಚಾಲನೆ ನೀಡಿದ ಬಾಲಚಂದ್ರ ಜಾರಕಿಹೊಳಿ
ಮೂಡಲಗಿ : ಬಹುನಿರೀಕ್ಷಿತ ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರ ನೂತನ ಕಟ್ಟಡಕ್ಕೆ ಅರಭಾವಿ ಮತಕ್ಷೇತ್ರದಿಂದ ಹೆಚ್ಚಿನ ಪ್ರಮಾಣದಲ್ಲಿ ದೇಣಿಗೆ ಸಂಗ್ರಹ ಮಾಡಿಸಿಕೊಡುವುದಾಗಿ ಶಾಸಕ ಮತ್ತು ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು. ಅಯೋಧ್ಯೆಯಲ್ಲಿ ಐತಿಹಾಸಿಕ ಶ್ರೀರಾಮ ಮಂದಿರ ನಿರ್ಮಾಣಕ್ಕಾಗಿ ಇಲ್ಲಿಯ ಶಿವಬೋಧರಂಗ ಮಠದಲ್ಲಿ ಸೋಮವಾರದಂದು ಮಹಾ ನಿಧಿ ಸಮರ್ಪಣಾ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ನೂರಾರು ವರ್ಷಗಳ ಭಾರತೀಯರ ಕನಸನ್ನು ಈಡೇರಿಸಿ ಅಯೋಧ್ಯೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಅಗಸ್ಟ್ …
Read More »ಇದೇನಾದರೂ ಜಾರಿ ಆಯ್ತು ಅಂದ್ರೆ ನೀವು ಟ್ರಾಫಿಕ್ ರೂಲ್ಸ್ ಬ್ರೇಕ್ ಮಾಡೋಕೂ ಯೋಚ್ನೆ ಮಾಡ್ತೀರಿ!
ನವದೆಹಲಿ: ಕಾನೂನು ಹೇಗೇ ಇದ್ದರೂ, ದಂಡ ಎಷ್ಟೇ ಇದ್ದರೂ ವಾಹನ ಸವಾರರು ಒಮ್ಮೊಮ್ಮೆ ಸರಾಗವಾಗಿ ಸಂಚಾರ ನಿಯಮ ಉಲ್ಲಂಘಿಸಿ ಬಿಡುತ್ತಾರೆ. ಆದರೆ ಇದೀಗ ಟ್ರಾಫಿಕ್ ರೂಲ್ಸ್ ಪಾಲನೆ ಮಾಡಿಸುವ ನಿಟ್ಟಿನಲ್ಲಿ ಹೀಗೊಂದು ಚಿಂತನೆ ನಡೆದಿದ್ದು, ಒಂದು ವೇಳೆ ಇದೇನಾದರೂ ಜಾರಿಯಾದರೆ ಬಹಳಷ್ಟು ಮಂದಿ ಟ್ರಾಫಿಕ್ ರೂಲ್ಸ್ ಬ್ರೇಕ್ ಮಾಡುವುದು ಕಡಿಮೆಯಾಗುವುದು ಬಹುತೇಕ ಖಚಿತ ಎನ್ನಲಾಗುತ್ತಿದೆ. ಭಾರತೀಯ ವಿಮಾ ನಿಯಂತ್ರಣ ಹಾಗೂ ಅಭಿವೃದ್ಧಿ ಪ್ರಾಧಿಕಾರ (ಐಆರ್ಡಿಎಐ) ನೇಮಿಸಿರುವ ಸಮಿತಿಯೊಂದು ಇಂಥದ್ದೊಂದು ಪ್ರಸ್ತಾವ …
Read More »ಪಂತ್, ಗಿಲ್ ಕೆಚ್ಚೆದೆಯ ಆಟಕ್ಕೆ , ಭಾರತಕ್ಕೆ ಐತಿಹಾಸಿಕ ಗೆಲುವು
ಬ್ರಿಸ್ಬೇನ್, ಜ. 19- ಭಾರತ ತಂಡದ ಯುವ ವಿಕೆಟ್ ಕೀಪರ್ ರಿಷಭ್‍ಪಂತ್ ಹಾಗೂ ಶುಭಮನ್ ಗಿಲ್‍ರ ಕೆಚ್ಚೆದೆಯ ಆಟದಿಂದಾಗಿ ರಹಾನೆ ತಂಡವು 2-1 ರಿಂದ ಐತಿಹಾಸಿಕ ಗೆಲುವು ಸಾಧಿಸಿದೆ. ಆಸ್ಟ್ರೇಲಿಯಾ ನೀಡಿದ್ದ 328 ರನ್‍ಗಳ ಗುರಿಯನ್ನು ಬೆನ್ನಟ್ಟಿದ್ದ ಟೀಂ ಇಂಡಿಯಾಗೆ ನಿನ್ನೆ ಮಳೆ ಕಾಡಿತಾದರೂ ಇಂದು ದಿನಪೂರ್ತಿ ಭಾರತದ ಯುವ ಬ್ಯಾಟ್ಸ್‍ಮನ್‍ಗಳು ಆಸೀಸ್‍ನ ಅನುಭವಿ ಬೌಲಿಂಗ್ ಪಡೆಯನ್ನು ದಂಡಿಸುವ ಮೂಲಕ ರಹಾನೆ ತಂಡ ಕಪ್ ಅನ್ನು ತನ್ನಲ್ಲೇ ಉಳಿಸಿಕೊಂಡಿದೆ. ಇಂದು …
Read More »ದೆಹಲಿಯತ್ತ ಹೊರಟ ಅಸಮಾಧಾನಿತ B.J.P.ಶಾಸಕರು,
ಬೆಂಗಳೂರು,ಜ.19- ಆಡಳಿತಾರೂಢ ಬಿಜೆಪಿಯಲ್ಲಿ ಎಲ್ಲ ಬಿಕ್ಕಟ್ಟು ನಿವಾರಣೆಯಾಗಿದೆ ಎನ್ನುವಷ್ಟರಲ್ಲೇ ಸಂಪುಟದಲ್ಲಿ ಸ್ಥಾನಮಾನ ಸಿಗದ ಅಸಮಾಧಾನಿತ ಶಾಸಕರು ದೆಹಲಿ ತೆರಳಿರುವುದು ಕಮಲ ಪಾಳೆಯದಲ್ಲಿ ಸಂಚಲನ ಸೃಷ್ಟಿಸಿದೆ. ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಪರಮಾಪ್ತ ಹಾಗೂ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ ಮತ್ತು ಶಾಸಕ ಅರವಿಂದ್ ಬೆಲ್ಲದ್ ದಿಢೀರನೆ ರಾಷ್ಟ್ರೀಯ ನಾಯಕರ ಭೇಟಿಗೆ ತೆರಳಿರುವುದು ಕಮಲ ಪಾಳೆಯದಲ್ಲಿ ಎಲ್ಲವೂ ಸರಿಯಿಲ್ಲ ಎಂಬುದನ್ನು ಸಾಬೀತು ಮಾಡಿದೆ. ರಾಷ್ಟ್ರೀಯ ನಾಯಕರ ಸೂಚನೆ ಮೇರೆಗೆ ಇಂದು ಮುಂಜಾನೆ ದಿಢೀರನೆ …
Read More »ಇತ್ತೀಚೆಗೆ ರೈತರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿ ವಿವಾದಕ್ಕೀಡಾಗಿದ್ದ ಕೃಷಿ ಸಚಿವ ಬಿ.ಸಿ.ಪಾಟೀಲ್, ಇದೀಗ ಮತ್ತೊಂದು ವಿವಾದ ಸೃಷ್ಟಿ!
ಮೈಸೂರು: ಇತ್ತೀಚೆಗೆ ರೈತರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿ ವಿವಾದಕ್ಕೀಡಾಗಿದ್ದ ಕೃಷಿ ಸಚಿವ ಬಿ.ಸಿ.ಪಾಟೀಲ್, ಇದೀಗ ಮತ್ತೊಂದು ವಿವಾದ ಸೃಷ್ಟಿಸಿದ್ದಾರೆ. ಮೈಸೂರಿನಲ್ಲಿ ಮಾತನಾಡಿದ ಸಚಿವ ಬಿ.ಸಿ.ಪಾಟೀಲ್, ರೈತರು ವೀಕ್ ಮೈಂಡ್ ಆದಾಗ ಆತ್ಮಹತ್ಯೆಯಂತಹ ನಿರ್ಧಾರ ಕೈಗೊಳ್ಳುತ್ತಾರೆ. ರೈತರ ಆತ್ಮಹತ್ಯೆಗೆ ಅವರ ವೀಕ್ ಮೈಂಡ್ ಕಾರಣ ಎಂದು ಹೇಳುವ ಮೂಲಕ ಹೊಸ ವಿವಾದಕ್ಕೆ ಕಾರಣರಾಗಿದ್ದಾರೆ. ರೈತರ ಆತ್ಮಹತ್ಯೆಗೆ ಸರ್ಕಾರದ ನೀತಿಗಳು ಕಾರಣ ಎಂಬುದು ಸುಳ್ಳು. ಅವರ ದುರ್ಬಲ ಮನಸ್ಸೇ ರೈತರ ಆತ್ಮಹತ್ಯೆಗೆ …
Read More »